Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ರಾಜ್ಯದಲ್ಲಿ ಕಾಡಾನೆ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಇದೇ ಮೊದಲ ಬಾರಿಗೆ ಆನೆ ಕಾರ್ಯಪಡೆ ರಚಿಸಲಾಗಿದ್ದು, ಇಂದು ಚಾಲನೆ ನೀಡಲಾಗುತ್ತಿದೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಇಂದು ರಾಜ್ಯದ ಮೊದಲ ಆನೆ ಕಾರ್ಯಪಡೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಪಡೆ ರಚನೆಗೆ 2024-25ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ 10 ಕೋಟಿ ರು. ಅನುದಾನ ನೀಡಲಾಗಿದೆ. ಕಾರ್ಯಪಡೆಯು ಕಾಡಾನೆ ಹಾವಳಿ ಇರುವಲ್ಲಿ ಗಸ್ತು ತಿರುಗಲಿದ್ದು, ಜನ ವಸತಿ ಮತ್ತು ಕೃಷಿ ಪ್ರದೇಶಗಳಲ್ಲಿ ಆನೆಗಳ ಚಲನವಲನಗಳನ್ನು ಗುರುತಿಸಿ ಕೂಡಲೇ ಅವುಗಳನ್ನು ಅರಣ್ಯಕ್ಕೆ ಹಿಮ್ಮೆಟ್ಟಿಸುವ ಕೆಲಸ ಮಾಡಲಿದೆ.
ಬೆಂಗಳೂರು : 2024-25 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಿರುವ ಬಗ್ಗೆ ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ಆನ್-ಲೈನ್ ಮುಖಾಂತರ ನಿರ್ವಹಿಸುವ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ತರಗತಿ ಕೋಣೆಯಲ್ಲಿ ವಿಷಯ ಪಾಂಡಿತ್ಯದ ಜೊತೆಗೆ ಪೂರಕ ಪರಿಕರಗಳೊಂದಿಗೆ ಬೋಧನಾ ಚಟುವಟಿಕೆಗಳನ್ನು ಸಾದರಪಡಿಸಿ ಮಕ್ಕಳಲ್ಲಿ ಶಾಶ್ವತ ಮತ್ತು ಸಂತಸದಾಯಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕರನ್ನು, ಉಪನ್ಯಾಸಕರನ್ನು, ಮುಖ್ಯ ಶಿಕ್ಷಕರನ್ನು ಹಾಗೂ ಪ್ರಾಂಶುಪಾಲರನ್ನು ಗುರ್ತಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತಿ ವರ್ಷ ಸೆಪ್ಟೆಂಬರ್-05 ರಂದು ಕ್ರಮವಾಗಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರದಾನ ಮಾಡುವುದರ ಮೂಲಕ ಗೌರವಿಸುತ್ತಿವೆ. ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಅಹರ್ನಿಶಿ ತೊಡಗಿಸಿ ಕೊಳ್ಳುವ ಹಲವು ಅತ್ಯುತ್ತಮ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಮುಖ್ಯ ಶಿಕ್ಷಕರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲೆ ಮರೆಯ ಕಾಯಿಯಂತೆ ಇದ್ದು, ಅಂತಹ ತೆರೆಮರೆಯ ಸಾಧಕರನ್ನು ಸ್ವಯಂಪ್ರೇರಿತವಾಗಿ ಗುರುತಿಸಿ ಸದರಿ…
ನವದೆಹಲಿ : 10 ನೇ ತರಗತಿ ಉತ್ತೀರ್ಣರಾದವರಿಗೆ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, (ಇಂಡಿಯಾ ಪೋಸ್ಟ್ ಜಿಡಿಎಸ್ ಖಾಲಿ) ಇದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ 44,228 ಹುದ್ದೆಗಳಿಗೆ ಬಂಪರ್ ನೇಮಕಾತಿ (ಪೋಸ್ಟ್ ಆಫೀಸ್ ಜಿಡಿಎಸ್ ಖಾಲಿ ಹುದ್ದೆ) ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 5 ರ ಇಂದು ಕೊನೆಯ ದಿನವಾಗಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 44000 ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಇದರ ಅಡಿಯಲ್ಲಿ, ಉತ್ತರ ಪ್ರದೇಶ, ಉತ್ತರಾಖಂಡ, ಬಿಹಾರ, ಛತ್ತೀಸ್ಗಢ, ದೆಹಲಿ, ರಾಜಸ್ಥಾನ ಸೇರಿದಂತೆ ಇತರ ರಾಜ್ಯಗಳಲ್ಲಿ ಖಾಲಿ ಇರುವ ಜಿಡಿಎಸ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು indiapostgdsonline.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು (ಪೋಸ್ಟ್ ಆಫೀಸ್ ಜಿಡಿಎಸ್ ಖಾಲಿ ಹುದ್ದೆ 2024 ಅಧಿಸೂಚನೆ). ಇಲ್ಲಿ ಅಪ್ಲಿಕೇಶನ್ ಗಾಗಿ ಲಿಂಕ್ ಅನ್ನು ಸಕ್ರಿಯಗೊಳಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್…
BIG NEWS : `ಪಶ್ಚಿಮ ಘಟ್ಟ’ದಲ್ಲಿ ಇಂದಿನಿಂದಲೇ `ಅಕ್ರಮ ರೆಸಾರ್ಟ್’, `ಹೋಂ ಸ್ಟೇ’ ಸೇರಿ ಎಲ್ಲ ಅರಣ್ಯ ಒತ್ತುವರಿ ತೆರವು
ಬೆಂಗಳೂರು: ಪಶ್ಚಿಮಘಟ್ಟ ಪ್ರದೇಶದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಮತ್ತು ಇಲ್ಲಿನ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವು ಮಾಡಲು ‘ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಪಡೆ’ ರಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ. ಈ ಸಂಬಂಧ ಮಾಧ್ಯ ಹೇಳಿಕೆ ನೀಡಿರುವ ಅವರು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಕಾರ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಈ ಕಾರ್ಯಪಡೆ ರಚಿಸಲಾಗಿದ್ದು, ಆಗಸ್ಟ್ 5 ರ ಇಂದಿನಿಂದಲೇ ಪಶ್ಚಿಘಟ್ಟದಲ್ಲಿನ ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಶ್ಚಿಮಘಟ್ಟದಲ್ಲಿನ ಅರಣ್ಯದಲ್ಲಿ 2015ರ ನಂತರ ಆಗಿರುವ ಒತ್ತುವರಿಗೆ ಸಂಬಂಧಿಸಿದಂತೆ 64ಎ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಪ್ರಕರಣಗಳಲ್ಲಿ ಇಂದಿನಿಂದಲೇ ತೆರವು ಕಾರ್ಯಾಚರಣೆ ಮಾಡಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಎಸಿಎಫ್, ಡಿಸಿಎಫ್, ಸಿಎಫ್, ಸಿಸಿಎಫ್, ಎ.ಪಿ.ಸಿಸಿಎಫ್ ಗಳಿಗೂ ಅರಣ್ಯ ಒತ್ತುವರಿ ಪ್ರಕರಣಗಳ ವಿಚಾರಣೆ ನಡೆಸಿ 64ಎ ಅಡಿಯಲ್ಲಿ ಆದೇಶ ನೀಡಲು ಅವಕಾಶವಿದ್ದು, ಬಾಕಿ ಇರುವ…
ಬೆಂಗಳೂರು : ಬಿಎಂಟಿಸಿ ಬಸ್ ಗಳಿಂದ ಆಗುವ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸಲಾಗಿದೆ. ಬಿಎಂಟಿಸಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ನೀಡುವ ಮಧ್ಯಂತರ ಪರಿಹಾರ ಮೊತ್ತವನ್ನು 25 ಸಾವಿರ ರೂ.ನಿಂದ 50 ಸಾವಿರ ರೂ.ಗೆ ಹೆಚ್ಚಿಸಿ ನಿಗಮ ಆದೇಶಿಸಿದೆ. ಬಿಎಂಟಿಸಿ ಬಸ್ ಗಳಿಂದ ಉಂಟಾಗುವ ಅಪಘಾತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಲಳ್ಳುವವರಿಗೆ ಕೂಡಲೇ ಆರ್ಥಿಕ ನೆರವು ನೀಡಲು ಹಾಗೂ ಮರಣೋತ್ತರ ಕ್ರಿಯಾದಿಗಳಿಗೆ ಅನುಕೂಲವಾಗಲು ನಿಗಮದಿಂದ ಮಧ್ಯಂತರ ಪರಿಹಾರವಾಗಿ ಮೊದಲ ಕಂತಿನಲ್ಲಿ 50 ಸಾವಿರ ರೂ. ಪಾವತಿಸಲಾಗುವುದು ಎಂದು ನಿಗಮ ತಿಳಿಸಿದೆ. ದಾಖಲೆಗಳ ಪರಿಶೀಲನೆ ಕಾರ್ಯ ಮುಗಿದ ಬಳಿಕ 2 ನೇ ಕಂತಿನಲ್ಲಿ ಮತ್ತೆ 50 ಸಾವಿರ ರೂ. ಸೇರಿ ಮೃತರ ಕುಟುಂಬಗಳಿಗೆ ಒಟ್ಟು 1 ಲಕ್ಷ ರೂ. ಪಾವತಿಸಲು ಸೂಚಿಸಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರು : ಶಿಕ್ಷಕ, ಉಪನ್ಯಾಸಕ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್, ಖಾಸಗಿ ಅನುದಾನಿತ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ. ಷರತ್ತುಗಳು: ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು…
ಬೆಂಗಳೂರು : ರಾಜ್ಯ ಸರ್ಕಾರವು ಸಾಧಕ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಲಂಪಿಕ್ಸ್, ಪ್ಯಾರಾ ಒಲಿಂಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ 12 ಮಂದಿ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪತ್ರ ವಿತರಿಸಿ ಮಾತನಾಡಿದರು. ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲು ಬದ್ಧವಾಗಿದೆ. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ 2016-17ರ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಒಲಂಪಿಕ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಲಾಗಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ, ಒಲಂಪಿಕ್ಸ್, ಏಶ್ಯಾಡ್ ಮತ್ತು ಕಾಮನ್‌ವೆಲ್ತ್‌ನಂತಹ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡುವ ಕ್ರೀಡಾಳುಗಳಿಗೆ ಸರ್ಕಾರಿ ನೌಕರಿ ಒದಗಿಸುವುದಾಗಿ ಘೋಷಣೆ ಮಾಡಿದ್ದೆ. ಸರ್ಕಾರ ಬದಲಾದ ಬಳಿಕ ಇದು…
ಬೆಂಗಳೂರು : ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ವಿಶ್ವ ಕುಂದಾಪ್ರ ಕನ್ನಡ ದಿನಕ್ಕೆ ಸಿಎಂ ಸಿದ್ದರಾಮಯ್ಯ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರುನಾಡಿನ ಕರಾವಳಿ ತೀರದ ಕುಂದಾಪುರ ವಿಭಿನ್ನ ಭಾಷೆ ಮತ್ತು ವೈಶಿಷ್ಟ್ಯಪೂರ್ಣ ಬದುಕಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಇಲ್ಲಿನ ಭಾಷೆ, ಸಂಸ್ಕೃತಿ ಮತ್ತು ಬದುಕಿನ ಶೈಲಿಯನ್ನು ಸಂಭ್ರಮಿಸುವ ಉದ್ದೇಶದಿಂದ ಪ್ರತಿ ವರ್ಷ ಅಸಾಡಿ ಅಮವಾಸ್ಯೆಯಂದು ವಿಶ್ವ ಕುಂದಾಪ್ರ ಕನ್ನಡ ದಿನವಾಗಿ ಆಚರಿಸಲಾಗುತ್ತದೆ. ತಮ್ಮೆಲ್ಲರಿಗೂ ವಿಶ್ವ ಕುಂದಾಪ್ರ ಕನ್ನಡ ದಿನದ ಶುಭಾಶಯಗಳು. ಇದು ಭಾಷಿ ಅಲ್ಲ ಬದ್ಕ್ ಎಂದು ಹೇಳಿದ್ದಾರೆ. https://twitter.com/siddaramaiah/status/1820006847983616089?ref_src=twsrc%5Etfw%7Ctwcamp%5Etweetembed%7Ctwterm%5E1820006847983616089%7Ctwgr%5E90aeb72a1797f820a9a43cfbb98e93e446c62b74%7Ctwcon%5Es1_&ref_url=https%3A%2F%2Fkannadadunia.com%2Flive-news%2Fits-not-bashi-badk-cm-siddaramaiah-wishes-world-kundapura-kannada-day%2F
ನವದೆಹಲಿ : ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿನೀಡಿದ್ದು, ರೈಲ್ವೆಯಲ್ಲಿ 12 ನೇ ತರಗತಿ ಉತ್ತೀರ್ಣರಾದವರಿಗೆ 10,884 ಹುದ್ದೆಗಳು ಖಾಲಿ ಇವೆ. ಇದಕ್ಕಾಗಿ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನೋಟಿಸ್ ಓದಿ ಸೂಚನೆಗಳನ್ನು ಪಾಲಿಸಬೇಕು. ಹುದ್ದೆಗಳ ಸಂಪೂರ್ಣ ವಿವರ ಅಕೌಂಟ್ಸ್ ಕ್ಲರ್ಕ್ ಟೈಪಿಸ್ಟ್: 361 ಹುದ್ದೆಗಳು ಕಮರ್ಷಿಯಲ್ ಟಿಕೆಟ್ ಕ್ಲರ್ಕ್: 1985 ಹುದ್ದೆಗಳು, ಜೂನಿಯರ್ ಕ್ಲರ್ಕ್ ಟೈಪಿಸ್ಟ್: 990 ಹುದ್ದೆಗಳು ಟ್ರೈನ್ ಕ್ಲರ್ಕ್: ಒಟ್ಟು 68 ಹುದ್ದೆಗಳು. ಫ್ರೈಟ್ ಟ್ರೈನ್ ಮ್ಯಾನೇಜರ್: ಒಟ್ಟು 2684 ಹುದ್ದೆಗಳು ಸ್ಟೇಷನ್ ಮಾಸ್ಟರ್: ಒಟ್ಟು 963 ಹುದ್ದೆಗಳು, ಸೀನಿಯರ್ ಕ್ಲರ್ಕ್ ಟೈಪಿಸ್ಟ್: ಒಟ್ಟು 725 ಹುದ್ದೆಗಳು, ಚೀಫ್ ಕಮರ್ಷಿಯಲ್ ಟಿಕೆಟ್ ಸೂಪರ್ವೈಸರ್: 1737 ಹುದ್ದೆಗಳು, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಟೈಪಿಸ್ಟ್: ಒಟ್ಟು 1371 ಹುದ್ದೆಗಳು ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 12 ನೇ ತರಗತಿ, ಪದವಿ ಇತ್ಯಾದಿ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ :…
ಪ್ಯಾರಿಸ್: ಪುರುಷರ ಮತ್ತು ಮಹಿಳೆಯರ ಸ್ಪರ್ಧೆಗಳಲ್ಲಿ ಒಲಿಂಪಿಕ್ ಪದಕ ಗೆದ್ದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಬ್ರಿಟನ್ನ ಕಾಕ್ಸ್ವೈನ್ ಹೆನ್ರಿ ಫೀಲ್ಡ್ಮ್ಯಾನ್ ತಮ್ಮ ಜೀವನದ ಗೌರವವನ್ನು ಪ್ರತಿಬಿಂಬಿಸಿದರು. ಮೂರು ವರ್ಷಗಳ ಹಿಂದೆ ಟೋಕಿಯೊದಲ್ಲಿ ಪುರುಷರ ಎಂಟನೇ ತಂಡ ಕಂಚಿನ ಪದಕ ಗೆದ್ದಾಗ ಫೀಲ್ಡ್ ಮ್ಯಾನ್ ಕಾಕ್ಸ್ ಆಗಿದ್ದರು ಮತ್ತು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ತಂಡದೊಂದಿಗೆ ಅದೇ ಸಾಧನೆಯನ್ನು ಪುನರಾವರ್ತಿಸಿದರು. “ಅವರು 2017 ರಲ್ಲಿ ಮಾತ್ರ ನಿಯಮವನ್ನು ಬದಲಾಯಿಸಿದರು. ಯಾರೋ ಅದನ್ನು ಮಾಡಲು ಹೊರಟಿದ್ದರು ಮತ್ತು ಅದು ನಾನು” ಎಂದು ಹ್ಯಾಮರ್ಸ್ಮಿತ್ನ 35 ವರ್ಷದ ಆಟಗಾರ ಸ್ವಲ್ಪ ವಾಸ್ತವಿಕವಾಗಿ ಹೇಳಿದರು. ವಿಶ್ವ ಚಾಂಪಿಯನ್ ರೊಮೇನಿಯಾ ಚಿನ್ನದ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಬ್ರಿಟನ್ನ ಎಂಟನೇ ಸ್ಥಾನವು ಕೆನಡಾವನ್ನು ಕೇವಲ 0.67 ಸೆಕೆಂಡುಗಳಲ್ಲಿ ಸೋಲಿಸಿತು. ಕ್ರೀಡೆಯಲ್ಲಿ ಮುಂದುವರಿಯಬೇಕೆ ಎಂದು ಈಗ ನಿರ್ಧರಿಸಲಿರುವ ಫೀಲ್ಡ್ಮ್ಯಾನ್, “ಕಳೆದ ಕ್ರೀಡಾಕೂಟದಲ್ಲಿ ನಾವು ಟೋಕಿಯೊವರೆಗಿನ ಋತುವಿನಲ್ಲಿ ಎಲ್ಲವನ್ನೂ ಗೆದ್ದಿದ್ದೇವೆ ಮತ್ತು ನಂತರ ಕಂಚಿನೊಂದಿಗೆ ಹೊರಬಂದಿದ್ದೇವೆ, ಇದು ಸ್ವಲ್ಪ ನಿರಾಶೆಯಾಗಿದೆ”…