Author: kannadanewsnow57

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಶತಮಾನೋತ್ಸವನ್ನು ಆಯೋಜಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯಿಂದ ಹೊರಡಿಸಿರುವ ಉಲ್ಲೇಖ (1) ರ ಆದೇಶದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆದರ್ಶ ಹಾಗೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗಿಯಾಗಿ ತ್ಯಾಗ-ಬಲಿದಾನಗಳನ್ನು ನೀಡಿದ ನಾಯಕರ ಬಗ್ಗೆ ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಮತ್ತು ಗಾಂಧೀಜಿಯವರ ಮೌಲ್ಯಗಳನ್ನು ಆದರ್ಶಗಳ ಸಾರ್ವಕಾಲಿಕ ಪ್ರಸ್ತುತತೆಯನ್ನು ಇಂದಿನ ಪೀಳಿಗೆಗೆ ತಿಳಿಸುವ ಸಲುವಾಗಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಲಾಗಿರುತ್ತದೆ. ಸದರಿ ಆದೇಶದ ಪ್ರತಿಯನ್ನು ಈ ಸುತ್ತೊಲೆಯೊಂದಿಗೆ ಲಗತ್ತಿಸಲಾಗಿದ್ದು, ಈ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ/ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಸದರಿ ಆದೇಶದಲ್ಲಿ ಸೂಚಿಸಿರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ.

Read More

ಬೆಂಗಳೂರು : ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ತಮ್ಮ ಒಡೆತನದ ಕಂಪನಿಯ ಉದ್ಯೋಗಿಗಳ ಪಿಎಫ್ ಹಣವನ್ನು ಪಾವತಿಸದೇ ವಂಚಿಸಿರುವ ಹಿನ್ನೆಲೆ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್‌ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ರಾಬಿನ್ ಉತ್ತಪ್ಪ ಅವರು ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಹೆಸರಿನ ಖಾಸಗಿ ಕಂಪನಿಯನ್ನು ನಡೆಸುತ್ತಿದ್ದು, ಈ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳ ಸಂಬಳದ ಪಿಎಫ್ ಹಣವನ್ನು ನೀಡಿಲ್ಲ. ಸುಮಾರು 23 ಲಕ್ಷ ರೂ.ಗಳಿಗೂ ಹೆಚ್ಚು ಹಣವನ್ನು ರಾಬಿನ್ ಉತ್ತಪ್ಪ ವಂಚಿಸಿದ್ದಾರೆ ಎಂದು ಉದ್ಯೋಗಿಗಳು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಈಗ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ ಎನ್ನಲಾಗಿದೆ. ಪಿಎಫ್ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ರೆಡ್ಡಿ ಅವರು ಡಿಸೆಂಬರ್ 4 ರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದು ವಾರೆಂಟ್ ಜಾರಿ ಮಾಡಿ ಪೊಲೀಸರಿಗೆ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Read More

ನವದೆಹಲಿ : ಕ್ರೆಡಿಟ್ ಕಾರ್ಡ್‌ಗಳ ಮೇಲಿನ ಬಡ್ಡಿದರವನ್ನು ಶೇಕಡಾ 30 ರ ಮಿತಿಯನ್ನು ನಿಗದಿಪಡಿಸಿದ್ದ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗದ (ಎನ್‌ಸಿಡಿಆರ್‌ಸಿ) ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಎಚ್‌ಎಸ್‌ಬಿಸಿ ಮತ್ತು ಇತರರ ನೇತೃತ್ವದ ಬ್ಯಾಂಕ್‌ಗಳ ಮೇಲ್ಮನವಿಗಳ ಮೇಲೆ ಕಾರ್ಯನಿರ್ವಹಿಸುತ್ತದೆ, ಎನ್‌ಸಿಡಿಆರ್‌ಸಿಯ 2008 ರ ನಿರ್ಧಾರವನ್ನು ರದ್ದುಗೊಳಿಸಿತು. ಈ ಆದೇಶವನ್ನು ಅಮಾನತುಗೊಳಿಸದಿದ್ದಲ್ಲಿ ತಮಗೆ ಪೂರ್ವಾಗ್ರಹ ಪಡಿಸಿದಂತಾಗುತ್ತದೆ ಎಂದು ಬ್ಯಾಂಕ್ ಗಳು ವಾದಿಸಿದ ಹಿನ್ನೆಲೆಯಲ್ಲಿ 2009ರಲ್ಲಿ ಗ್ರಾಹಕ ಆಯೋಗದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಕ್ರೆಡಿಟ್ ಕಾರ್ಡ್ ಬಡ್ಡಿಯ ಮೇಲೆ NCDRC ನಿರ್ಧಾರವೇನು? ಬ್ಯಾಂಕ್‌ಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸುವ ಇಂತಹ ಆದೇಶಗಳನ್ನು ಜಾರಿಗೊಳಿಸಲು ಎನ್‌ಸಿಡಿಆರ್‌ಸಿಗೆ ಅಧಿಕಾರವಿಲ್ಲ ಎಂದು ಬ್ಯಾಂಕ್‌ಗಳು ಹೇಳಿಕೊಂಡಿವೆ. ಬ್ಯಾಂಕ್‌ಗಳು ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರ ಚೌಕಾಶಿ ಸ್ಥಿತಿಯನ್ನು ಪರಿಗಣಿಸುವಾಗ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಸ್ವೀಕರಿಸದ ಹೊರತು ಕ್ರೆಡಿಟ್ ಕಾರ್ಡ್ ಹೊಂದಿರುವವರಿಗೆ ಚೌಕಾಸಿ ಮಾಡುವ ಶಕ್ತಿ…

Read More

ಇಂದು ಬೆಳ್ಳಂಬೆಳಗ್ಗೆ ನೇಪಾಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ. ಇಂದು ಶನಿವಾರ ಬೆಳಗ್ಗೆ ಮತ್ತೊಮ್ಮೆ ಭೂಮಿ ಕಂಪಿಸಿದೆ. ಇಂದು ಭಾರತದ ಪಕ್ಕದಲ್ಲಿರುವ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪ್ರಬಲ ಭೂಕಂಪನ ಸಂಭವಿಸಿದೆ. ಭೀಕರ ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಬಂದರು. ಈ ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.8 ಎಂದು ಅಳೆಯಲಾಗಿದೆ. ನೇಪಾಳದಲ್ಲಿ ಭೂಕಂಪ ಸಂಭವಿಸಿರುವುದನ್ನು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮತ್ತು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಖಚಿತಪಡಿಸಿವೆ. ಅಲ್ಲದೆ ಈ ಭೂಕಂಪದ ಕೇಂದ್ರಬಿಂದು ಜುಮ್ಲಾ ಜಿಲ್ಲೆಯಲ್ಲಿ ಭೂಮಿಯಡಿಯಲ್ಲಿ 10 ಕಿಲೋಮೀಟರ್ ಆಳದಲ್ಲಿದೆ ಎಂದು ಮಾಹಿತಿ ನೀಡಿದರು. ಭೂಕಂಪದಿಂದ ಯಾವುದೇ ಆಸ್ತಿಪಾಸ್ತಿ ಹಾನಿಯಾಗದಿದ್ದರೂ, ಭೂಕಂಪನದ ಕಂಪನದಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಏಕೆಂದರೆ ಈ ಮೊದಲು ಅಂದರೆ 2023ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭೂಕಂಪ 70ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿತ್ತು.…

Read More

ನವದೆಹಲಿ : ಮಹಿಳೆಯರ ಆಸ್ತಿ ಹಕ್ಕಿನ ಕುರಿತು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತನ್ನ ಗಂಡನ ಮರಣದ ನಂತರ ಮರುಮದುವೆಯಾದ ಹೆಂಡತಿಯು ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಮೃತ ಗಂಡನ ಆಸ್ತಿಯಲ್ಲಿ ಪಾಲು ಪಡೆಯಲು ಅರ್ಹಳಾಗಿದ್ದಾಳೆ ಎಂದು ಹೇಳಿದೆ. ತಮಿಳುನಾಡಿನ ಸೇಲಂನ ಸೇವಿ ಗೌಂಡರ್ ನಿಧನದ ನಂತರ ಅವರ ವಾರಸುದಾರರಾದ ಚಿನ್ನಯ್ಯನ್ ಮತ್ತು ಅವರ ಸಹೋದರರು ಆಸ್ತಿಯನ್ನು ಪಿತ್ರಾರ್ಜಿತವಾಗಿ ಪಡೆದರು. ಆದರೆ ಚಿನ್ನಯ್ಯನ ಸಾವಿನ ನಂತರ ಅವರ ಪತ್ನಿ ಮಲ್ಲಿಕಾ ಎರಡನೇ ಮದುವೆಯಾಗಿದ್ದರು. ತನ್ನ ಪತಿಯ ಆಸ್ತಿಯಲ್ಲಿ ಪಾಲು ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸೇಲಂ ಸಿವಿಲ್ ಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಆಕೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಪತಿಯನ್ನು ಕಳೆದುಕೊಂಡ ಮಹಿಳೆಗೆ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಹಿಂದೂ ವಿವಾಹ ಕಾಯ್ದೆ ಹೇಳುವುದಿಲ್ಲ ಎಂದು ಹೇಳಿದ ನ್ಯಾಯಮೂರ್ತಿ ಕುಮಾರಪ್ಪನ್, ಮರುಮದುವೆಯಾದ ಮಹಿಳೆಗೆ ಆಸ್ತಿಯಲ್ಲಿ ಹಕ್ಕಿಲ್ಲ ಎಂಬ ಸೆಕ್ಷನ್ ಅನ್ನು 2005 ರಲ್ಲಿ ರದ್ದುಪಡಿಸಿ ಆಕೆಗೆ ಹಕ್ಕು ಇದೆ ಎಂದು ತೀರ್ಪು ನೀಡಿದರು.…

Read More

ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಡಿಸೆಂಬರ್ 31 ರವರೆಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್‌ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ಇರುತ್ತದೆ. ಯಶಸ್ಸಿನಿ ಯೋಜನೆಯು ವಿಮಾ ಯೋಜನೆಯಾಗಿರುವುದಿಲ್ಲ. ಬದಲಾಗಿ ಇದೊಂದು ಸ್ವಯಂ ನಿಧಿ ಸಹಕಾರ ಸಂಘಗಳ…

Read More

ಬೆಂಗಳೂರು: ರಾಜ್ಯದ 46,755 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ 1,65,618 ಕಾರ್ಯನಿರತ ಶಿಕ್ಷಕರ ಹುದ್ದೆಗಳಿವೆ. ಇವುಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್‌‍.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಕೆ. ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ ಒಟ್ಟು 46,755 ಶಾಲೆಗಳಿದ್ದು, 1,65,618 ಶಿಕ್ಷಕರ ಕಾರ್ಯನಿರತ ಹುದ್ದೆಗಳಿವೆ. ಪ್ರಾಥಮಿಕ ಶಿಕ್ಷಣದಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 2024ರ ಅಕ್ಟೋಬರ್ 28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹೊರಡಿಸಬಾರದು ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಹಿಂದಿನ ಸರ್ಕಾರ ಕೇವಲ 4500 ಶಿಕ್ಷಕರನ್ನು ನೇಮಕ ಮಾಡಿದ್ದು, ನಮ್ಮ ಸರ್ಕಾರದಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ರಾಜ್ಯಾದ್ಯಂತ 91,061 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಹೌದು, ಮಾನದಂಡ ಉಲ್ಲಂಘಿಸಿ ಪಡೆದ 91,061 ಬಿಪಿಎಲ್ ಕಾರ್ಡ್ ಗಳು ರದ್ದಾಗಿವೆ. ಆದಾಯ ತೆರಿಗೆ ಪಾವತಿದಾರರು, ವಾರ್ಷಿಕ 1.20 ಲಕ್ಷ ರೂ.ಗಿಂತ ಹೆಚ್ಚಿರುವವರುಉ, ಸರ್ಕಾರಿ ನೌಕರರು, ಮೃತ ಫಲಾನುಭವಿಗಳು ಹಾಗೂ 6 ತಿಂಗಳಿನಿಂದ ಪಡಿತರ ಪಡೆಯದ ಕಾರ್ಡ್ ಗಳನ್ನು ಗುರುತಿಸಿ ಆಹಾರ ಇಲಾಖೆ 2023-24ರಲ್ಲಿ 74,342 ಹಾಗೂ 2024 ರಲ್ಲಿ 16,719 ಕಾರ್ಡ್ ಗಳನ್ನು ರದ್ದುಮಾಡಿದೆ. ರಾಜ್ಯದಲ್ಲಿ ಹ್ಯೂಮನ್ ರಿಸೋರ್ಸ್ ಮ್ಯಾನೇಜ್ ಮೆಂಟ್ ಸಿಸ್ಟಂ ಮಾಹಿತಿ ಆಧರಿಸಿ 5 ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಪಡೆದಿದ್ದ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರ ಪತ್ತೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431…

Read More

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ (ಪುಡ್‌ಕಾರ್ಟ್ ಉದ್ದೇಶಕ್ಕಾಗಿ ಮಾತ್ರ) ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿ.29 ರೊಳಗಾಗಿ ಸೇವಾ-ಸಿಂಧು ಪೋರ್ಟಲ್‌ನ https://sevasindhu.karnataka.gov.in ಲಿಂಕ್ ಮೂಲಕ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಿದವರು ಉದ್ದೇಶ ಬದಲಾವಣೆ ಮಾಡಲು ಇಚ್ಚಿಸಿದ್ದಲ್ಲಿ https://swdcorp.karnataka.gov.in/ADCLPortal ನಲ್ಲಿ ನೇರ ಸಾಲ ಯೋಜನೆಯಡಿ ಕುರಿಸಾಕಾಣಿಕೆ ಉದ್ದೇಶಕ್ಕೆ ಹಾಗೂ ಸ್ವಾವಲಂಭಿ ಸಾರಥಿ ಯೋಜನೆಯಡಿ ಪುಡ್‌ಕಾರ್ಟ್ ಉದ್ದೇಶಕ್ಕೆ ಎಂದು ಬದಲಾವಣೆ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ಪ್ರದೇಶದ ಆದರ್ಶ ಕಾಲೋನಿಯ ಸೆಂಟ್ ಜೋಸೆಫ್ ಬಾಲಕರ ಶಾಲೆಯ ಎದುರುಗಡೆಯ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಬಳ್ಳಾರಿ ಜಿಲ್ಲಾ ಕಚೇರಿಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭತ್ತ ಕಟಾವು ಮಾಡಲು ಪ್ರತಿ ಗಂಟೆಗೆ ಯಂತ್ರಕ್ಕೆ 2600 ರೂ. ಗರಿಷ್ಠ ದರ ನಿಗದಿ ಮಾಡಲಾಗಿದೆ ಎಂದು ಕೃಷಿ ಇಲಾಖೆ ತಿಳಿಸಿದೆ. ಭತ್ತ ಕಟಾವು ಯಂತ್ರದ ಮಾಲೀಕರು ಈ ದರ ಮೀರದಂತೆ ಭತ್ತ ಕಟಾವು ಕೈಗೊಳ್ಳಬೇಕು. ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದರೆ ವಿಪತ್ತು ನಿರ್ವಹಣಾ ಕಾಯ್ದೆಯನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಭತ್ತ ಕಟಾವು ಯಂತ್ರದ ಮಾಲೀಕರು ರೈತರಿಂದ ಹೆಚ್ಚಿನ ದರ ಪಡೆದಲ್ಲಿ ರೈತರು ಕಂದಾಯ ಅಥವಾ ಕೃಷಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

Read More