Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ:2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಅಥ್ಲೀಟ್ಗಳ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. “ಪ್ಯಾರಿಸ್ ಒಲಿಂಪಿಕ್ಸ್ ಮುಕ್ತಾಯವಾಗುತ್ತಿದ್ದಂತೆ, ಕ್ರೀಡಾಕೂಟದ ಮೂಲಕ ಇಡೀ ಭಾರತೀಯ ತಂಡದ ಪ್ರಯತ್ನಗಳನ್ನು ನಾನು ಪ್ರಶಂಸಿಸುತ್ತೇನೆ. ಎಲ್ಲಾ ಕ್ರೀಡಾಪಟುಗಳು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಮತ್ತು ಪ್ರತಿಯೊಬ್ಬ ಭಾರತೀಯರೂ ಅವರ ಬಗ್ಗೆ ಹೆಮ್ಮೆ ಪಡುತ್ತಾರೆ. ನಮ್ಮ ಕ್ರೀಡಾ ನಾಯಕರಿಗೆ ಅವರ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಈಕ್ವೆಸ್ಟ್ರಿಯನ್, ಗಾಲ್ಫ್, ಹಾಕಿ, ಜೂಡೋ, ರೋಯಿಂಗ್, ನೌಕಾಯಾನ, ಶೂಟಿಂಗ್, ಈಜು, ಕುಸ್ತಿ, ಟೇಬಲ್ ಟೆನಿಸ್ ಮತ್ತು ಟೆನಿಸ್ ಸೇರಿದಂತೆ 16 ಕ್ರೀಡೆಗಳಲ್ಲಿ ಒಟ್ಟು 117 ಭಾರತೀಯ ಕ್ರೀಡಾಪಟುಗಳು ಭಾಗವಹಿಸಿದ ನಂತರ ಭಾರತವು ಒಂದು ಬೆಳ್ಳಿ ಮತ್ತು ಐದು ಕಂಚಿನ ಪದಕಗಳೊಂದಿಗೆ 71 ನೇ ಸ್ಥಾನದಲ್ಲಿದೆ. ಐತಿಹಾಸಿಕ ಪ್ರದರ್ಶನದ ನಿರೀಕ್ಷೆಗಳು ಹೆಚ್ಚಿದ್ದರೂ, 2021 ರಲ್ಲಿ ಮರು ನಿಗದಿಪಡಿಸಿದ ಟೋಕಿಯೊ ಒಲಿಂಪಿಕ್ಸ್ನಲ್ಲಿ ದೇಶವು ಏಳು ಪದಕಗಳನ್ನು (1 ಚಿನ್ನ,…
ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿಯು ಪ್ಯಾರಾ ಮೆಡಿಕಲ್ ವಿಭಾಗಗಳ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, ಅರ್ಜಿ ವಿಂಡೋ 17 ಆಗಸ್ಟ್ 2024 ರಂದು ತೆರೆಯುತ್ತದೆ. ಭಾರತೀಯ ರೈಲ್ವೆ ಆರೋಗ್ಯ ಕ್ಷೇತ್ರದ ಉದ್ಯೋಗಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನೇಮಕಾತಿ ವಿವರಗಳನ್ನು ಇಲ್ಲಿ ಪರಿಶೀಲಿಸಬಹುದು. ಆರ್ಆರ್ಬಿ ಅರೆವೈದ್ಯಕೀಯ ನೇಮಕಾತಿ 2024 ಭಾರತೀಯ ರೈಲ್ವೆಯ ವಿವಿಧ ಪ್ರದೇಶಗಳಲ್ಲಿ ಪ್ಯಾರಾ ಮೆಡಿಕಲ್ ಸಿಬ್ಬಂದಿಯ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆರ್ಆರ್ಬಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಮಂಡಳಿಯು 05 ಆಗಸ್ಟ್ 2024 ರಂದು ಅರೆವೈದ್ಯಕೀಯ ಸಿಬ್ಬಂದಿ ನೇಮಕಾತಿಗಾಗಿ ಕಿರು ಸೂಚನೆಯನ್ನು ಬಿಡುಗಡೆ ಮಾಡಿತು. ನೋಟಿಸ್ ಪ್ರಕಾರ, ಮಂಡಳಿಯು ಡೆಂಟಲ್ ಹೈಜಿನಿಸ್ಟ್, ಡಯಟೀಷಿಯನ್, ನರ್ಸಿಂಗ್ ಸೂಪರಿಂಟೆಂಡೆಂಟ್ ಮುಂತಾದ ಪ್ಯಾರಾ ಮೆಡಿಕಲ್ ಸಿಬ್ಬಂದಿಯ 1376 ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭಿಸಿದೆ. ಆರ್ಆರ್ಬಿ ಅರೆವೈದ್ಯಕೀಯ ನೇಮಕಾತಿ ಡ್ರೈವ್ನಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 17 ಆಗಸ್ಟ್ 2024 ರಿಂದ ಕೊನೆಯ ದಿನಾಂಕ 16 ಸೆಪ್ಟೆಂಬರ್ 2024 ರವರೆಗೆ (ರಾತ್ರಿ 11:59) ಆನ್ಲೈನ್ನಲ್ಲಿ…
ನೀವು ಚಾಕೊಲೇಟ್ ತಿನ್ನಲು ಬಯಸಿದರೆ ಜಾಗರೂಕರಾಗಿರಿ. ಅಮೆರಿಕಾದ ವಿಜ್ಞಾನಿಗಳು ಸಂಶೋಧನೆಯಲ್ಲಿ ಹಲವಾರು ಚಾಕೊಲೇಟ್ ಉತ್ಪನ್ನಗಳಲ್ಲಿ ವಿಷಕಾರಿ ಭಾರ ಲೋಹಗಳನ್ನು ಕಂಡುಹಿಡಿದಿದ್ದಾರೆ. ಇದು ಆರೋಗ್ಯಕ್ಕೆ ತುಂಬಾ ಹಾನಿಕಾರಕ ಮತ್ತು ಅಪಾಯಕಾರಿ ಎಂದು ಹೇಳಲಾಗುತ್ತದೆ. ವಾಷಿಂಗ್ಟನ್ ವಿಶ್ವವಿದ್ಯಾಲಯ ನಡೆಸಿದ ಅಧ್ಯಯನವು ಅನೇಕ ಚಾಕೊಲೇಟ್ ಉತ್ಪನ್ನಗಳಲ್ಲಿ ವಿಷಕಾರಿ ಭಾರ ಲೋಹಗಳಾದ ಸೀಸ ಮತ್ತು ಕ್ಯಾಡ್ಮಿಯಂ ಅಧಿಕವಾಗಿದೆ ಎಂದು ತೋರಿಸಿದೆ, ಇದು ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಚಾಕೊಲೇಟ್ ನಲ್ಲಿರುವ ಲೋಹಗಳು: ಅಧ್ಯಯನದಲ್ಲಿ, ವಿಜ್ಞಾನಿಗಳು ಕೋಕೋದಿಂದ ತಯಾರಿಸಿದ ಡಾರ್ಕ್ ಚಾಕೊಲೇಟ್ ಸೇರಿದಂತೆ 72 ಉತ್ಪನ್ನಗಳನ್ನು 8 ವರ್ಷಗಳ ಕಾಲ ವಿಶ್ಲೇಷಿಸಿದ್ದಾರೆ. ತರುವಾಯ, ಚಾಕೊಲೇಟ್ನಿಂದ ತಯಾರಿಸಿದ 43% ಉತ್ಪನ್ನಗಳಲ್ಲಿ ಸೀಸವು ಹೆಚ್ಚಾಗಿರುವುದು ಕಂಡುಬಂದಿದೆ. ಕ್ಯಾಡ್ಮಿಯಂ 35% ಉತ್ಪನ್ನಗಳಲ್ಲಿ ಕಂಡುಬಂದಿದೆ. ಅದೇ ಸಮಯದಲ್ಲಿ ವಿಷಕಾರಿ ಲೋಹಗಳು ಸಾವಯವ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಆತಂಕಕ್ಕೆ ಕಾರಣವಾಗಿದೆ. ಚಾಕೊಲೇಟ್ ನಲ್ಲಿರುವ ಸೀಸ ಆರೋಗ್ಯಕ್ಕೆ ಅಪಾಯಕಾರಿ: ಚಾಕೊಲೇಟ್ ಉತ್ಪನ್ನಗಳಲ್ಲಿನ ಈ ಲೋಹಗಳ ಮಾಲಿನ್ಯವು ಮಣ್ಣಿನಲ್ಲಿ…
ವಿಜಯನಗರ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಫೋಟೋವನ್ನು ದೇವರ ಮುಂದಿರಿಸಿ ಪೂಜೆ ಮಾಡಿದ್ದಕ್ಕೆ ಮತ್ತೊಬ್ಬ ಅರ್ಚಕನನ್ನು ಅಮಾನತುಗೊಳಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ನಟ ದರ್ಶನ್ ಫೋಟೋವನ್ನು ದೇವರ ಮುಂದೆ ಇಟ್ಟು ಪೂಜೆ ಮಾಡಿದ್ದ ಅರ್ಚಕರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ಅರ್ಚಕ ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿರುವ ಘಟನೆ ನಡೆದಿಎ. ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದ ಬಸವೇಶ್ವರ ದೇವಸ್ಥಾನದ ಬಸಪ್ಪ ತೋಟಪ್ಪ ಪೂಜಾರ ಅಮಾನತುಗೊಂಡ ಅರ್ಚಕ. ಈತ ಇತ್ತೀಚಿಗೆ ಬಸವೇಶ್ವರ ದೇವರ ಮೇಲೆ ದರ್ಶನ್ ಫೋಟೋ ಇಟ್ಟು ಪೂಜೆ ಮಾಡಿದ್ದ. ಈ ಹಿನ್ನೆಲೆಯಲ್ಲಿ ಬಸಪ್ಪನಿಗೆ ಧಾರ್ಮಿಕ ದತ್ತಿ ಇಲಾಖೆಯಿಂದ ನೋಟಿಸ್ ಜಾರಿ ಮಾಡಿ ಅಮಾನತುಗೊಳಿಸಲಾಗಿದೆ.
ಶಿವಮೊಗ್ಗ : ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು. ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು. ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು.…
BIG NEWS: ರಾಜ್ಯದಲ್ಲಿ ‘ಭಾಗ್ಯಲಕ್ಷ್ಮೀ ಬಾಂಡ್ ಯೋಜನೆ’ ಸ್ಥಗಿತಗೊಳಿಸಿಲ್ಲ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ
ಶಿವಮೊಗ್ಗ: ಭಾಗ್ಯಲಕ್ಷ್ಮಿ ಬಾಂಡ್ ( bhagyalakshmi bond scheme) ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟ ಪಡಿಸಿದ್ದಾರೆ. ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ರಾಜ್ಯದ ಬಹುತೇಕ ಜಲಾಶಯಗಳು 100 ವರ್ಷ, 50 ವರ್ಷ ಪೂರೈಸಿವೆ. ಹೀಗಾಗಿ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆಗಳು ಉದ್ಭವಿಸುವುದು ಸಹಜ. ತುಂಗಭದ್ರಾ ಡ್ಯಾಂ ಗೇಟ್‌ನ ಚೈನ್ ಕಟ್ ಆಗಿರುವುದಕ್ಕೆ ಸರ್ಕಾರದ ನಿರ್ಲಕ್ಷ್ಯ ಎಂದು ಹೇಳಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಎಲ್ಲಾ ಜಲಾಶಯಗಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು. ಭಾಗ್ಯಲಕ್ಷ್ಮೀ ಬಾಂಡ್ ಸ್ಥಗಿತಗೊಂಡಿಲ್ಲ ಭಾಗ್ಯಲಕ್ಷ್ಮಿ ಬಾಂಡ್ ಸ್ಥಗಿತಗೊಳಿಸಿಲ್ಲ. ಇದನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ನಿರಂತರವಾಗಿ ನಡೆಯಲಿದೆ. ಮಗುವಿಗೆ 21 ವರ್ಷ ಮುಗಿದ ಬಳಿಕ ಬಾಂಡ್ ಮೊತ್ತ ಫಲಾನುಭವಿಗಳಿಗೆ ಸೇರುತ್ತದೆ ಎಂದು ಸಚಿವರು ಹೇಳಿದರು.
ಶಿವಮೊಗ್ಗ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದ್ದು ಈಗಾಗಲೇ ಕಳೆದ ಒಂದು ವರ್ಷದ ಅವಧಿಯಲ್ಲಿ 12 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಅಂತೆಯೇ ಸರ್ಕಾರದ ಅನುದಾನದಿಂದ ನಡೆಯುತ್ತಿರುವ ಅನುದಾನಿತ ಶಾಲೆಗಳಲ್ಲಿನ ಕೊರತೆ ಇರುವ 5000 ಶಿಕ್ಷಕರ ನೇಮಕಾತಿಗೂ ಕೂಡ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಮುಂಗಾರು ವಾಡಿಕೆ ಗಿಂತ ಹೆಚ್ಚು ಪ್ರಮಾಣದಲ್ಲಿ ಆಗಿದ್ದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ನೀರು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಚುರುಕಾಗಿದ್ದು ಸಹಜವಾಗಿ ರೈತರಲ್ಲಿ ಹರ್ಷ ಉಂಟು ಮಾಡಿದೆ. ಭದ್ರಾ ಜಲಾಶಯ ಕೂಡ ಸಕಾಲದಲ್ಲಿ ಭರ್ತಿಯಾಗಿದ್ದು ಜಾತಿ, ಮತ, ಭಾಷೆ- ಬಣ್ಣಗಳನ್ನು ಮೀರಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿನ ರೈತರಿಗೆ ಉಪಕಾರಿಯಾಗಿದೆ ಎಂದವರು ನುಡಿದರು. ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಪ್ರಸ್ತುತ ಸಂದರ್ಭದಲ್ಲಿ ಆಡಳಿತಾರೂಢ ಸರ್ಕಾರವು ಕೂಡ ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಯುವನಿಧಿ, ಅನ್ಯಭಾಗ್ಯದಂತಹ ಅನೇಕ ಜನಪರ ಯೋಜನೆಗಳನ್ನು…
ನವದೆಹಲಿ : ಕೋವಿಡ್ -19 ಕಾಯಿಲೆಯಿಂದ ಚೇತರಿಸಿಕೊಂಡ ಜನರ ಮೇಲೆ ಭಾರತ ಮತ್ತು ವಿದೇಶಗಳಲ್ಲಿ ನಡೆಸಿದ ಅಧ್ಯಯನಗಳು ಕೆಲವು ಸಾಮಾನ್ಯ ಸಂಶೋಧನೆಗಳನ್ನು ಬಹಿರಂಗಪಡಿಸಿವೆ. ಆಸ್ಪತ್ರೆಗೆ ದಾಖಲಾದರೂ ಸಹ. ಆಸ್ಪತ್ರೆಗೆ ದಾಖಲಾಗದೆ ಚೇತರಿಸಿಕೊಳ್ಳುತ್ತಿರುವ ಮತ್ತು ಮಿಶ್ರ ವಿಧಾನಗಳ ಮೂಲಕ ಚೇತರಿಸಿಕೊಳ್ಳುತ್ತಿರುವ ರೋಗಿಗಳಲ್ಲಿ ಆಯಾಸವು ಹೆಚ್ಚಾಗಿ ಕಂಡುಬರುತ್ತದೆ. ಕೋವಿಡ್ನಿಂದ ಚೇತರಿಸಿಕೊಂಡ ನಂತರ. ಆಯಾಸವು ಅನೇಕ ಜನರಿಗೆ ಸಮಸ್ಯೆಯಾಗಿದೆ ಎಂದು ವರದಿಗಳು ಸ್ಪಷ್ಟಪಡಿಸಿವೆ. ನಿಯಮಿತವಾಗಿ.. ಉಸಿರಾಟದ ತೊಂದರೆ, ವಾಸನೆ ಮತ್ತು ರುಚಿಯ ನಷ್ಟ, ಮಸುಕಾದ ದೃಷ್ಟಿ, ತಲೆನೋವು, ಕೆಮ್ಮು, ಸೌಮ್ಯ ಜ್ವರ, ಭಯ, ತಲೆತಿರುಗುವಿಕೆ, ಖಿನ್ನತೆ ಮತ್ತು ಸ್ನಾಯು-ಕೀಲು ನೋವುಗಳು ಕೋವಿಡ್ ರೋಗಲಕ್ಷಣಗಳಲ್ಲಿ ಸೇರಿವೆ ಎಂಬುದು ಎಲ್ಲರಿಗೂ ತಿಳಿದಿದೆ. ಕೋವಿಡ್ -19 ನಿಂದ ಚೇತರಿಸಿಕೊಂಡ 45 ಪ್ರತಿಶತದಷ್ಟು ಜನರು ಈ ರೋಗಲಕ್ಷಣಗಳಲ್ಲಿ ಕನಿಷ್ಠ ಒಂದನ್ನು ಪರಿಹರಿಸಲಾಗಿಲ್ಲ ಎಂದು ಕಂಡುಕೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ವರದಿಯ ಪ್ರಕಾರ. ಕೋವಿಡ್ -19 ನಿಂದ ಚೇತರಿಸಿಕೊಂಡ ನಂತರ ಉಸಿರಾಟದ ತೊಂದರೆ, ಸ್ಮರಣೆ, ಏಕಾಗ್ರತೆ,…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರು ಪರದಾಡುವಂತಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಕಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ಓಕಳಿಪುರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೋರೇಷನ್ ಸರ್ಕಲ್, ಟೌನ್ ಹಾಲ್, ಕೆ.ಆರ್.ನಗರ, ಜಯನಗರ, ಶಾಂತಿನಗರ, ತ್ಯಾಗರಾಜನಗರ, ಶ್ರೀನಗರ, ರಾಜಾಜಿನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಹನುಮಂತನಗರ, ಮಾಗಡಿ ರಸ್ತೆ, ವಿಜಯನಗರ, ಕೆಂಗೇರಿ, ಶಿವಾನಂದ ಸರ್ಕಲ್, ಹೆಬ್ಬಾಳ, ಯಲಹಂಕ ಸುತ್ತಾಮುತ್ತಾ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತವಾಗಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಸಾಕ್ಷ್ಯಗಳ ಒಟ್ಟುಗೂಡಿಸುವಿಕೆ, ತಂತ್ರಜ್ಞಾನ ಬಳಸಿ ಕಲೆಹಾಕಿರುವ ಕೊಲೆ ಸಂಬಂಧಿತ ಅಂಶಗಳು, ಕೊಲೆಯಲ್ಲಿ ಆರೋಪಿಗಳ ಪಾತ್ರ, ಅವರ ವಿರುದ್ಧ ಇರುವ ಸಾಕ್ಷ್ಯಗಳು ಸೇರಿದಂತೆ ಎಲ್ಲವನ್ನೂ ವಿಸ್ತರವಾಗಿ ಚಾರ್ಜ್ ಶೀಟ್ ನಲ್ಲಿ ಸೇರಿದಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಎಫ್ ಎಸ್ ಎಲ್ ಗೆ ಕಳುಹಿಸಲಾಗಿರುವ ಕೆಲವು ಸಾಕ್ಷ್ಯಗಳ ವರದಿ ಶೀಘ್ರವೇ ಬರಲಿದ್ದು, ಮುಖ್ಯವಾಗಿ ಪಟ್ಟಣಗೆರೆ ಶೆಡ್ ನಲ್ಲಿ ಸಿಕ್ಕ 2 ಮಾದರಿಗಳು, ಸ್ಕಾರ್ಪಿಯೋ ಕಾರಿನಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್, ಪವಿತ್ರಾಗೌಡ, ನಟ ದರ್ಶನ್ ಮನೆಯ ಸಿಸಿಟಿವಿಯ ವಿಡಿಯೋಗಳು, ಪಟ್ಟಣಗೆರೆ ಶೆಡ್ ನ ಸೆಕ್ಯೂರಿಟಿ ಗಾರ್ಡ್ ಸಿಸಿಟಿವಿ ದೃಶ್ಯವಳಿಗಳು, ಕೊಲೆ ಆರೋಪಿಗಳ ಮೊಬೈಲ್ ಮಾಹಿತಿ ಕುರಿತು ಎಫ್ ಎಸ್ ಎಲ್ ವರದಿ ಬರಲಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಹತ್ಯೆ…