Author: kannadanewsnow57

ಬಳ್ಳಾರಿ: ಎಸ್ ಎಸ್ ಎಲ್ ಸಿ ಮೂರು ಪರೀಕ್ಷೆಯಲ್ಲಿ ಫೇಲ್ ಆದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಮರು ದಾಖಲಾತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಫೇಲ್ ಎಂದು ಕರೆಯಬಾರದು ಎಂಬ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ಎಸ್ ಎಸ್ಎಲ್ ಸಿ ಮೂರು ಪರೀಕ್ಷೆಯನ್ನು ಆಯೋಜಿಸಲಾಗುತ್ತಿದ್ದು, ಪ್ರಸಕ್ತ ಸಾಲಿಗೆ ನಡೆದ ಎಸ್ಎಸ್ಎಲ್ ಸಿ 2 ಪರೀಕ್ಷೆಯಲ್ಲಿ 84 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಒಂದು ವೇಳೆ ಮೂರು ಪರೀಕ್ಷೆಯಲ್ಲಿ ಫೇಲ್ ಆದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಮರು ದಾಖಲಾತಿ ನೀಡಲಾಗುವುದು ಎಂದರು. ಪ್ರಸಕ್ತ ವರ್ಷದಿಂದ ಎಲ್ಲಾ ಶಾಲೆಗಳಲ್ಲಿ ನೀತಿ ವಿಜ್ಞಾನ ವಿಷಯ ಆರಂಭವಾಗಲಿದೆ. ವಾರದಲ್ಲಿ ಎರಡು ತರಗತಿಗಳು ನಡೆಯಲಿದ್ದು, ಈ ವಿಷಯಕ್ಕೆ ಯಾವುದೇ ಪರೀಕ್ಷೆ ಇರುವುದಿಲ್ಲ, ಸರ್ಕಾರಿ ಶಾಲೆಗಳ 50 ಸಾವಿರ ಶಿಕ್ಷಕರಿಗೆ ಅಜೀಮ್ ಪ್ರೇಮ್ ಜೀ ಫೌಂಡೇಶನ್ ನಿಂದ ತರಬೇತಿ ನೀಡಲಾಗುವುದು ಎಂದರು.

Read More

ಬಳ್ಳಾರಿ: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ, ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಪರೀಕ್ಷೆ ಎದುರಿಸಲು ಮೂರು ಬಾರಿ ಅವಕಾಶ ನೀಡಲಾಗಿದೆ. ಇಲ್ಲಿಯೂ ಉತ್ತೀರ್ಣರಾಗದಿದ್ದರೆ ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಪುನಃ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಅಲ್ಲಿಯೂ ಸಹ ಎಲ್ಲಾ ಮಕ್ಕಳಂತೆ ಬಟ್ಟೆ, ಪುಸ್ತಕ, ಶೂ ಹಾಗೂ ಇತರೆ ಸೌಲಭಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.…

Read More

ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 19, 20 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ. ಬೆಂಗಳೂರು ನಗರದ ಜನತೆಗೆ ಅಡತಡೆಯಿಲ್ಲದೆ ನೀರನ್ನು ಸರಬರಾಜು ಮಾಡುವ ಉದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3 ಮೀಟರ್ ವ್ಯಾಸದ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಬೇಕಿರುವುದರಿಂದ ಗುರುವಾರ (ಜೂ.19) ಬೆಳಗ್ಗೆ 6ರಿಂದ 20 ಬೆಳಗ್ಗೆ 6ರವರೆಗೆ ಕಾವೇರಿ ನೀರಿನ ಪೂರೈಕೆ ಇರುವುದಿಲ್ಲ. ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ…

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, RRB ತಂತ್ರಜ್ಞರ ನೇಮಕಾತಿ 2025 ಗಾಗಿ 6374 ಹುದ್ದೆಗಳನ್ನು ಅನುಮೋದಿಸಿದೆ. ಈ ಹುದ್ದೆಗಳಲ್ಲಿ ತಂತ್ರಜ್ಞ ಗ್ರೇಡ್-1 ಮತ್ತು ಗ್ರೇಡ್-3 ನೇಮಕಾತಿ ಸೇರಿವೆ. ಯಾವ ಕ್ಷೇತ್ರಗಳಲ್ಲಿ ನೇಮಕಾತಿಗಳನ್ನು ಮಾಡಲಾಗುತ್ತದೆ? ದೇಶಾದ್ಯಂತ 18 ವಲಯಗಳು ಮತ್ತು ವಿವಿಧ ಉತ್ಪಾದನಾ ಘಟಕಗಳನ್ನು ಈ ನೇಮಕಾತಿಯಲ್ಲಿ ಸೇರಿಸಲಾಗಿದೆ. ಅತಿ ಹೆಚ್ಚು ಹುದ್ದೆಗಳು ದಕ್ಷಿಣ ರೈಲ್ವೆ (SR) ನಲ್ಲಿದ್ದು, ಅಲ್ಲಿ 1215 ಹುದ್ದೆಗಳನ್ನು ಅನುಮೋದಿಸಲಾಗಿದೆ. ಅದೇ ಸಮಯದಲ್ಲಿ, ಕಡಿಮೆ ಸಂಖ್ಯೆಯ ಹುದ್ದೆಗಳು ಪೂರ್ವ ಮಧ್ಯ ರೈಲ್ವೆ (ECR) ನಲ್ಲಿ ಕೇವಲ 31 ಹುದ್ದೆಗಳಾಗಿವೆ. RRB ತಂತ್ರಜ್ಞರ ನೇಮಕಾತಿ 2025 ರ ವಲಯವಾರು ವಿವರಗಳು- ಪೂರ್ವ ರೈಲ್ವೆ (ER): 1,119 ಹುದ್ದೆಗಳು ಪಶ್ಚಿಮ ರೈಲ್ವೆ (WR): 849 ಹುದ್ದೆಗಳು ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF): 404 ಹುದ್ದೆಗಳು ಉತ್ತರ ರೈಲ್ವೆ (NR): 478 ಹುದ್ದೆಗಳು ಉತ್ತರ ಮಧ್ಯ ರೈಲ್ವೆ (NCR): 241 ಹುದ್ದೆಗಳು ಮಧ್ಯ ರೈಲ್ವೆ (CR):…

Read More

ಬೆಂಗಳೂರು : ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು, ರಾಜ್ಯದಲ್ಲಿನ ಕಾರ್ಯಪಡೆಯ ಮೇಲೆ ಕೃತಕ ಬುದ್ಧಿಮತ್ತೆ (AI) ಯ ಪ್ರಭಾವವನ್ನು ನಿರ್ಣಯಿಸಲು ಸಮಗ್ರ ಅಧ್ಯಯನವನ್ನು ಪ್ರಾರಂಭಿಸಿದೆ. 2025ರ ಹೊಸ ಐಟಿ ನೀತಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರವು AI ಕೌಶಲ್ಯದ ಕಾರ್ಯಪಡೆಯ ಸಾಧ್ಯತೆಗಳು ಮತ್ತು ಪ್ರಭಾವಗಳ ಕುರಿತು ಅಧ್ಯಯನವನ್ನು ಪ್ರಾರಂಭಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯು, ರಾಜ್ಯದಲ್ಲಿನ ಕಾರ್ಯಪಡೆಯ ಮೇಲೆ ಕೃತಕ ಬುದ್ಧಿಮತ್ತೆ (AI) ಯ ಪ್ರಭಾವವನ್ನು ನಿರ್ಣಯಿಸಲು ಸಮಗ್ರ ಅಧ್ಯಯನವನ್ನು ಪ್ರಾರಂಭಿಸಿದೆ. ಈ ಉಪಕ್ರಮವು ಮುಂಬರುವ ಐಟಿ ನೀತಿ 2025 ರ ಬಗ್ಗೆ ತಿಳಿಯುವುದು ಮತ್ತು ಸರ್ಕಾರದ ಪ್ರಮುಖ ಕೌಶಲ್ಯ ಉಪಕ್ರಮವಾದ ನಿಪುಣ ಕರ್ನಾಟಕದ ಅಡಿಯಲ್ಲಿ ಕಾರ್ಯತಂತ್ರಗಳನ್ನು ರೂಪಿಸುವ ಗುರಿಯನ್ನು ಹೊಂದಿದೆ. ಇತ್ತೀಚೆಗೆ AI ಮತ್ತು ಬಿಗ್ ಡೇಟಾ…

Read More

ಬೆಂಗಳೂರು : ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಬೆಂಗಳೂರಿನಲ್ಲಿ ನಿಷೇಧದ ನಡುವೆ ಬೈಕ್ ಟ್ಯಾಕ್ಸಿ ಚಲಾಯಿಸಿದ 103 ಸವಾರರಿಗೆ ತಲಾ 5000 ದಂಡ ವಿಧಿಸಲಾಗಿದೆ. ಹೌದು. ‘ಬೈಕ್ ಟ್ಯಾಕ್ಸಿ’ ವಿರುದ್ಧ ಸಾರಿಗೆ ಇಲಾಖೆ ಸಮರ ನಡೆಸುತ್ತಿದ್ದು, ಬೆಂಗಳೂರಲ್ಲಿ ನಿನ್ನೆ ಒಂದೇ ದಿನ 103 ಬೈಕ್ ಟ್ಯಾಕ್ಸಿ ಸೀಜ್ ಮಾಡಲಾಗಿದೆ. 103 ಸವಾರರಿಗೆ ತಲಾ 5000 ದಂಡ ಹಾಕಲಾಗಿದೆ. ನಿನ್ನೆಯಿಂದ ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆಯಿಂದ ಸೀಜ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರ್ ಟಿ ಓ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು, ಹೈಕೋರ್ಟ್ ಇಂದಿನಿಂದ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಿತ್ತು. ಹೀಗಿದ್ದರೂ ಅನಧಿಕೃತವಾಗಿ ನಗರದಲ್ಲಿ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆ ಅನಧಿಕೃತ ಎಂಬುದಾಗಿ ಆದೇಶಿಸಿದೆ. ಕಾನೂನಡಿ ಬೈಕ್…

Read More

ಬೆಂಗಳೂರು : ಗುರುವಾರ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಐಶ್ವರ್ಯಾಗೌಡ ವಿರುದ್ಧ ವಂಚನೆ ಆರೋಪ ಪ್ರಕರಣ ಸಂಬಂಧ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಮಾಜಿ ಸಂಸದ ಡಿ.ಕೆ. ಸುರೇಶ್ ಗೆ ಸಮನ್ಸ್ ಜಾರಿ ಮಾಡಿದೆ.

Read More

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ. ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ.…

Read More

ವಿಜಯಪುರ : ಮುಂದಿನ ತಿಂಗಳಲ್ಲಿ ವಿಜಯಪುರದಲ್ಲಿ ಸಚಿವ ಸಂಪುಟ ಸಭೆ ನಡೆಯುವ ಸಾಧ್ಯತೆ. ಬೆಳಗಾವಿ ಕಂದಾಯ ವಿಭಾಗದ ಅಭಿವೃದ್ಧಿ ಯೋಜನೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಕಲಬುರಗಿ ವಿಭಾಗದ್ದ ಕಲಬುರಗಿಯಲ್ಲಿ, ಮೈಸೂರು ವಿಭಾಗದ ಸಭೆ ಮಹದೇಶ್ವರ ಬೆಟ್ಟದಲ್ಲಿ ನಡೆದಿತ್ತು. ಗುರುವಾರ ನಂದಿಬೆಟ್ಟದಲ್ಲಿ ಬೆಂಗಳೂರು ವಿಭಾಗದ ಯೋಜನೆಗಳಿಗೆ ಸಂಬಂಧಿಸಿದಂತೆ ಸಂಪುಟ ಸಭೆ ನಡೆಯಲಿದೆ. ಮುಂದುವರೆದು, ಮುಂದಿನ ಸಚಿವ ಸಂಪುಟದ ಸಭೆ ವಿಜಯಪುರದಲ್ಲಿ ನಡೆಯುವ ಸಾಧ್ಯತೆ ಇದೆ.

Read More

ಅಹ್ಮದಾಬಾದ್: ಜೂನ್ 12ರಂದು ಸಂಭವಿಸಿದ ಎಐ-171 ವಿಮಾನ ದುರಂತದಲ್ಲಿ ಮೃತಪಟ್ಟವರ 1359 ಮಂದಿಯ ಡಿಎನ್ ಎ ಮಾದರಿಗಳನ್ನು ಯಶಸ್ವಿಯಾಗಿ ಹೊಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನ ಅಪಘಾತದಲ್ಲಿ ಕನಿಷ್ಠ 270 ಜನರು ಸಾವನ್ನಪ್ಪಿದ್ದಾರೆ.ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಯ ಅಧೀಕ್ಷಕ ಡಾ.ರಾಕೇಶ್ ಜೋಶಿ ಮಾತನಾಡಿ, ಈಗಾಗಲೇ 101 ಶವಗಳನ್ನು ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 24 ಕುಟುಂಬಗಳು ತಮ್ಮ ಪ್ರೀತಿಪಾತ್ರರ ಮೃತ ದೇಹಗಳನ್ನು ಸಂಗ್ರಹಿಸುವ ನಿರೀಕ್ಷೆಯಿದೆ, 11 ಕುಟುಂಬಗಳು ಹೆಚ್ಚುವರಿ ಸಂಬಂಧಿಕರೊಂದಿಗೆ ಡಿಎನ್ಎ ಹೊಂದಾಣಿಕೆಯ ದೃಢೀಕರಣಕ್ಕಾಗಿ ಕಾಯುತ್ತಿವೆ. ಹನ್ನೆರಡು ಕುಟುಂಬಗಳು ಇನ್ನೂ ಅಂತಿಮ ಡಿಎನ್ಎ ಫಲಿತಾಂಶಗಳಿಗಾಗಿ ಕಾಯುತ್ತಿವೆ. ಬಾಕಿ ಇರುವ ವರದಿಗಳು ಬಂದ ನಂತರ ಗುರುತಿಸುವಿಕೆ ತ್ವರಿತವಾಗಿ ಮುಕ್ತಾಯಗೊಳ್ಳುತ್ತದೆ ಎಂದು ಅಧಿಕಾರಿಗಳು ನಿರೀಕ್ಷಿಸುತ್ತಾರೆ. https://twitter.com/PTI_News/status/1934865760264098020?ref_src=twsrc%5Egoogle%7Ctwcamp%5Eserp%7Ctwgr%5Etweet ಭಾನುವಾರ ಗುರುತಿಸಲಾದ ಶವಗಳಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಶವವೂ ಸೇರಿದೆ. ಅವರ ಅಂತ್ಯಕ್ರಿಯೆ ಸೋಮವಾರ ರಾಜ್ಕೋಟ್ನಲ್ಲಿ ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ವಿಮಾನದ ಅವಶೇಷಗಳನ್ನು ಶೋಧಿಸಿದ ತನಿಖಾ ತಂಡಗಳು ಎರಡನೇ ಕಪ್ಪು…

Read More