Subscribe to Updates
Get the latest creative news from FooBar about art, design and business.
Author: KNN IT TEAM
ಬೆಳಗಾವಿ : ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ಮತದಾರರ ಸೆಳೆಯಲು ಮೂರು ಪಕ್ಷಗಳು ನಾನ ಕಸರತ್ತು ನಡೆಸುತ್ತಿದ್ದಾರೆ. https://kannadanewsnow.com/kannada/continuing-treatment-for-siddheshwar-sri-devotees-flock-to-jnana-yogaashrama-annadasoha-arrangementsees-flock-to-jnana-yogaashrama-annadasoha-arrangements/ ಇದೀಗ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಅವರ ಜನ್ಮದಿನ. ಈ ಪ್ರಯುಕ್ತ ಮಹಿಳೆಯರಿಗೆ ತಟ್ಟೆ, ಲೋಟ, ಬಟ್ಟಲು ಉಡುಗರೆಯಾಗಿ ನೀಡಿದ್ದಾರೆ.ಜನ್ಮ ದಿನಾಚರಣೆಗೆ ಆಗಮಿಸಿದ ಮಹಿಳೆಯರಿಗೆ ತಟ್ಟೆ, ಲೋಟ, ಬಟ್ಟಲು ಗಿಫ್ಟ್ ನೀಡಿದ್ದು, ಇದನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮುಗಿಬಿದ್ದರು. ಬೆಳಗಾವಿಯ ಗೋಮಟೇಶ್ ವಿದ್ಯಾಪೀಠ ಆವರಣದಲ್ಲಿ ನಿನ್ನೆ ರಾತ್ರಿ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ದುರ್ಯೋಧನ ಐಹೊಳೆ, ಮಹಾಂತೇಶ ದೊಡ್ಡಗೌಡರ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದರು
ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಪ್ರಬಾವಿ ನಾಯಕ ಹೆಸರು ಇದ್ದು, ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. https://kannadanewsnow.com/kannada/pradeep-commits-suicide-by-shooting-himself-in-the-head-fir-against-mla-aravind-limbali/ ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ, ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ, ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ ಸಿಎಂ ಬಸವರಾಜ ಬೊಮ್ಮಾಯಿ ಅವರು CCM ಆಗಿದ್ದಾರೆ -“ಕ್ರಿಮಿನಲ್ಸ್ ಕೇರ್‌ಟೇಕರ್ ಮಿನಿಸ್ಟರ್” ಎಂದು ವಾಗ್ದಾಳಿ ನಡೆಸಿದೆ. https://twitter.com/INCKarnataka/status/1609774418322149379?cxt=HHwWhsDSyb7TiNcsAAAA ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿ ಪ್ರದೀಪ್ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಇಡೀ ಕುಟುಂಬವೇ ರೆಸಾರ್ಟ್ ಗೆ ಹೊಸ ವರ್ಷ ಆಚರಣೆಗೆ ಅಂತಾ ಬಂದಿದ್ದರು. ಸಂಜೆ ಪತ್ನಿ ಮುಂದಿನ ಕಾರಿನಲ್ಲಿ ಹೋಗುತ್ತಿದ್ದರು. ಹಿಂದೆ ಮತ್ತೊಂದು ಕಾರಿನಲ್ಲಿ ಪ್ರದೀಪ್ ಬರುತ್ತಿದ್ದನು. ಈ ವೇಳೆ ಡೆತ್ ನೋಟ್ ಬರೆದಿಟ್ಟು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು…
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ನಿಮ್ಮ ಕುತ್ತಿಗೆಯ ಸುತ್ತಲೂ ಕಪ್ಪಗಿರುವ ಬಗ್ಗೆ ನೀವು ಚಿಂತಿತರಾಗಿದ್ದೀರಾ? ಕುತ್ತಿಗೆಯ ಕಪ್ಪುತನವನ್ನು ತೊಡೆದುಹಾಕಲು ಪ್ರಯತ್ನಿಸುತ್ತೀರಾ ? ನಿಮ್ಮ ಕುತ್ತಿಗೆ ಕಪ್ಪಾಗಲು ಕಾರಣವೇನು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಆರೋಗ್ಯ ಸಮಸ್ಯೆಗಳಿಂದಲೂ ಕುತ್ತಿಗೆಯ ಭಾಗ ಕಪ್ಪು ಬಣ್ಣಕ್ಕೆ ತಿರುಗುವುದಕ್ಕೆ ಕಾರಣವಾಗುತ್ತದೆ ಅದರಲ್ಲೂ ಆ ಗಂಭೀರ ಸಮಸ್ಯೆಗಳೇನು ? ಅನ್ನೋದರ ತಜ್ಙರ ಮಾಹಿತಿ ಇಲ್ಲಿದೆ ಓದಿ https://kannadanewsnow.com/kannada/bigg-news-aadhar-scheme-applications-invited-from-eligible-differently-abled-persons/ ಕುತ್ತಿಗೆಯೂ ಕಪ್ಪಗಿರುವುದಕ್ಕೆ ಕಾರಣವಾದ ಆಂಶಗಳನ್ನು ನೆನಪಿಡುವುದು ಮುಖ್ಯವಾಗಿದೆ ಅದರಲ್ಲೂ ಮೇಕಪ್ ನೊಂದಿಗೆ ಮಲಗುವುದು, ಬೊಜ್ಜು, ಪಿಸಿಒಎಸ್, ಹೈಪೋಥೈರಾಯ್ಡಿಸಮ್, ಅಲರ್ಜಿಗಳು, ಇತ್ಯಾದಿಗಳು ಕುತ್ತಿಗೆಯನ್ನು ಕಪ್ಪು ಬಣ್ಣಕ್ಕೆ ತಿರುಗಿಸಬಹುದು. ಇಲ್ಲದಿದ್ದರೆ, ನಮ್ಮ ದೇಹದಲ್ಲಿ ಶಿಲೀಂಧ್ರ ಸೋಂಕುಗಳು ಇದ್ದಾಗಲೂ, ಅದು ಕುತ್ತಿಗೆಯ ಬಳಿ ಕಪ್ಪು ಬಣ್ಣಕ್ಕೆ ತಿರುಗುತ್ತದೆ ಎಂದೆನ್ನುತ್ತಾರೆ ಕುತ್ತಿಗೆಯ ಕಪ್ಪುತನವನ್ನು ಕಡಿಮೆ ಮಾಡಲು ಅನುಸರಿಸಬೇಕಾದ ಮನೆಮದ್ದುಗಳ ಮಾಹಿತಿ ಇಲ್ಲಿದೆ ಓದಿ 1. ಮೊದಲು ಒಂದು ಬೌಲ್ ಅನ್ನು ತೆಗೆದುಕೊಂಡು ಅದರಲ್ಲಿ ಒಂದು ಟೇಬಲ್ ಸ್ಪೂನ್ ಮೊಸರನ್ನು ಹಾಕಿ. ನಂತರ ಒಂದು ಟೇಬಲ್ ಸ್ಪೂನ್…
ಇಸ್ರೇಲ್ : ಇಂದು ಮುಂಜಾನೆ ಇಸ್ರೇಲ್ ಸೇನೆ ಸಿರಿಯಾದ ರಾಜಧಾನಿಯಲ್ಲಿನ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿಗಳ ದಾಳಿ ನಡೆಸಿದೆ. ಘಟನೆಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ಸಿರಿಯನ್ ಸೈನ್ಯ ತಿಳಿಸಿದೆ. ಕಳೆದ ಏಳು ತಿಂಗಳಲ್ಲಿ ಡಮಾಸ್ಕಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಎರಡನೇ ದಾಳಿ ಇದಾಗಿದೆ. ದಾಳಿಯಿಂದ ಹತ್ತಿರದ ಪ್ರದೇಶದಲ್ಲಿ ಸಾಕಷ್ಟು ಹಾನಿಯಾಗಿದೆ ಎಂದು ಸೈನ್ಯ ತಿಳಿಸಿದೆ. ಲೆಬನಾನ್‌ನ ಹಿಜ್ಬೊಲ್ಲಾ ಸೇರಿದಂತೆ ಟೆಹ್ರಾನ್ ಬೆಂಬಲಿತವಾದ ಉಗ್ರಗಾಮಿ ಗುಂಪುಗಳಿಗೆ ಶಸ್ತ್ರಾಸ್ತ್ರ ಸಾಗಣೆಯನ್ನು ತಡೆಯುವ ಸ್ಪಷ್ಟ ಪ್ರಯತ್ನದಲ್ಲಿ ಸಿರಿಯಾದ ಸರ್ಕಾರಿ ಹಿಡಿತದಲ್ಲಿರುವ ಭಾಗಗಳಲ್ಲಿನ ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಇಸ್ರೇಲ್ ಗುರಿಯಾಗಿಸಿದೆ. ಜೂನ್ 10 ರಂದು, ಡಮಾಸ್ಕಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹೊಡೆದ ಇಸ್ರೇಲಿ ವೈಮಾನಿಕ ದಾಳಿಗಳು ಮೂಲಸೌಕರ್ಯಗಳ ಮೇಲೆ ಗಮನಾರ್ಹ ಹಾನಿಯನ್ನುಂಟು ಮಾಡಿತ್ತು. ದುರಸ್ಥಿ ಕಾರ್ಯ ನಡೆಸಿ ಎರಡು ವಾರಗಳ ಹಿಂದೆ ಮತ್ತೆ ನಿಲ್ದಾಣವನ್ನು ಓಪನ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ನಲ್ಲಿ, ಇಸ್ರೇಲಿ ವೈಮಾನಿಕ ದಾಳಿಗಳು ಸಿರಿಯಾದ ಅತಿದೊಡ್ಡ ವಾಣಿಜ್ಯ…
ಕೊಪ್ಪಳ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2022-23ನೇ ಸಾಲಿಗೆ ಆಧಾರ ಯೋಜನೆಗೆ ಅರ್ಹ ವಿಕಲಚೇತನರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛೀಸುವ ಆಸಕ್ತರು (Suvidha website URL:https://suvidha.karnataka.gov.in/) ಪೋರ್ಟ್ಲ್‌ನಲ್ಲಿ 2023ರ ಜನವರಿ 15 ರೊಳಗಾಗಿ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಪ್ಪಳ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ತಾಲೂಕಿನ ಎಂ.ಆರ್.ಡಬ್ಲೂಗಳು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:08539-200460, ಕೊಪ್ಪಳ ಎಂ.ಆರ್.ಡಬ್ಲೂ ಜಯಶ್ರೀ ಮೊಸಂ: 9980126391, ಯಲಬುರ್ಗಾ ಎಂ.ಆರ್.ಡಬ್ಲೂ ಬಸನಗೌಡ ಮೊ.ಸಂ: 9964803047, ಕುಷ್ಟಗಿ ಎಂ.ಆರ್.ಡಬ್ಲೂ ಚಂದ್ರಶೇಕರ ಮೊ.ಸಂ: 9916308585, ಗಂಗಾವತಿ ಎಂ.ಆರ್.ಡಬ್ಲೂ ಮಂಜುಳಾ ಮೊ.ಸಂ: 7975398202, ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು…
ನವದೆಹಲಿ: ದೆಹಲಿಯಲ್ಲಿ ಭಾನುವಾರ 20 ವರ್ಷದ ಯುವತಿಯೊಬ್ಬಳ ಸ್ಕೂಟಿ ಕಾರಿಗೆ ಡಿಕ್ಕಿ ಹೊಡೆದು, ಆಕೆಯ ಬಟ್ಟೆ ಕಾರಿಗೆ ಸಿಲುಕಿದ ಪರಿಣಾಮ ಸುಮಾರು 12 ಕಿಮೀ ವರೆಗೆ ಎಳದೊಯ್ದಿದ್ದು, ಆಕೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ(Lieutenant Governor VK Saxena) ಅವರು, ʻಈ ದುರಂತದಿಂದ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆʼ ಎಂದಿದ್ದಾರೆ. ʻಭಾನುವಾರ ಬೆಳಿಗ್ಗೆ ಕಂಝಾವ್ಲಾ-ಸುಲ್ತಾನ್‌ಪುರಿಯಲ್ಲಿ ನಡೆದ ಅಮಾನವೀಯ ಘಟನೆಯಿಂದ ನಾನು ನಾಚಿಕೆಯಿಂದ ತಲೆ ತಗ್ಗಿಸುವಂತಾಗಿದೆ. ಈ ಘಟನೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ದೆಹಲಿಯ ಪೊಲೀಸ್ ಆಯುಕ್ತರು ಹೆಚ್ಚನ ನಿಗಾ ವಹಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ. ಎಲ್ಲಾ ಅಂಶಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆʼ ಎಂದು ಗವರ್ನರ್ ಟ್ವೀಟ್ ಮಾಡಿದ್ದಾರೆ. My head hangs in shame over the inhuman crime in Kanjhawla-Sultanpuri today morning and I am shocked at the monstrous insensitivity of the perpetrators. Have been…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾನುವಾರ ರಾತ್ರಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಗ್ರೆನೇಡ್ ದಾಳಿಯಲ್ಲಿ ಬಾಲಕನೋರ್ವ ಗಾಯಗೊಂಡಿದ್ದಾನೆ. ಶ್ರೀನಗರದ ಎಂ.ಕೆ.ಚೌಕ್‌ನ ಜನನಿಬಿಡ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನದ ಮೇಲೆ ಗ್ರೆನೇಡ್ ಎಸೆಯುವ ಯತ್ನ ನಡೆದಿದೆ. ಅದು ಗುರಿ ತಪ್ಪಿ ಸ್ಥಳೀಯ ಬಾಲಕನೊಬ್ಬನಿಗೆ ಸಣ್ಣಪುಟ್ಟ ಗಾಯ ಉಂಟು ಮಾಡಿದೆ. ಅಪರಾಧಿಯನ್ನು ಹಿಡಿಯಲು ಆ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಶ್ರೀನಗರ ಪೊಲೀಸರು ತಿಳಿಸಿದ್ದಾರೆ. ಭಾನುವಾರ (ನಿನ್ನೆ) ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ನಡೆದ ಶಂಕಿತ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ರಾಜೌರಿ ಪಟ್ಟಣದಿಂದ ಸುಮಾರು ಎಂಟು ಕಿಲೋಮೀಟರ್ ದೂರದಲ್ಲಿರುವ ಡ್ಯಾಂಗ್ರಿ ಗ್ರಾಮದಲ್ಲಿ ನಾಗರಿಕರ ಮೇಲೆ ದಾಳಿ ನಡೆದಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ. ಇಬ್ಬರು ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದು, ಗಾಯಗೊಂಡವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ…
BIGG NEWS: ಸಿದ್ದೇಶ್ವರ ಶ್ರೀಗಳಿಗೆ ಮುಂದುವರೆದ ಚಿಕಿತ್ಸೆ; ಜ್ಞಾನಯೋಗಾಶ್ರಮಕ್ಕೆ ಭಕ್ತರ ದಂಡು, ಅನ್ನದಾಸೋಹ ವ್ಯವಸ್ಥೆ
ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸದ್ಯ ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯ ಡಾ.ಎಸ್.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/mp-b-y-raghavendras-photographer-drowns-in-lake-dies/ ಇನ್ನು ಜ್ಞಾನಯೋಗಾಶ್ರಮಕ್ಕೆ ಎಂ.ಬಿ.ಪಾಟೀಲ, ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ನಿಜಗುಣಾನಂದ ಸ್ವಾಮೀಜಿ, ಸಿಂದನೂರಿನ ಮಾಜಿ ಶಾಸಕ ಹಂಪನ ಗೌಡ ಮತ್ತು ಬಾದರ್ಲಿ ಶ್ರೀಗಳು ದರ್ಶನಕ್ಕೆ ತೆರಳಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಇತ್ತ, ಆಶ್ರಮದ ಸುತ್ತಮುತ್ತ ಪೊಲೀಸ್ ಇಲಾಖೆ ವಿಶೇಷ ಭದ್ರತೆ ಕೈಗೊಂಡಿದೆ. ಗದಗ, ಬಾಗಲಕೋಟೆ ಜಿಲ್ಲೆಯಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಡಿಎಸ್ಪಿ-5, ಸಿಪಿಐ-20, ಪಿಎಸ್ಐ-50, ಎಎಸ್ಐ -100, ಸಿಎಚ್ಸಿ-ಸಿಪಿಸಿ 1,000 ಸಿಬ್ಬಂದಿ ಇದ್ದಾರೆ. ಇನ್ನು ಜ್ಞಾನಯೋಗಾಶ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರುಯ ಆಗಮಿಸುತ್ತಾರೆ. https://kannadanewsnow.com/kannada/mp-b-y-raghavendras-photographer-drowns-in-lake-dies/ ಮುಂಜಾನೆಯಿಂದಲೇ ಆಶ್ರಮದತ್ತ ಭಕ್ತರು ಆಗಮಿಸುತ್ತಿದ್ದಾರೆ. ಮಲ್ಲಿಕಾರ್ಜುನ್ ಶಿವಯೋಗಿಗಳ ಗದ್ದುಗೆ ಬಳಿ ಭಕ್ತರು ಸ್ವಾಮೀಜಿಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಶ್ರೀಗಳ ದರ್ಶನಕ್ಕೆ ಅವಕಾಶ ನೀಡುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಮಠದಲ್ಲಿ…
ನವದೆಹಲಿ: 500 ಮತ್ತು 1,000 ರೂ.ಗಳ ನೋಟುಗಳನ್ನು ನಿಷೇಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನ ಐವರು ನ್ಯಾಯಾಧೀಶರ ಪೀಠವು ಇಂದು ಮಹತ್ವದ ತೀರ್ಪನ್ನು ಪ್ರಕಟಿಸಿದೆ. https://kannadanewsnow.com/kannada/severe-cold-and-wind-in-lucknow-school-timings-change-from-10-am-to-2-pm/ ಇಂದು ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಸಿಂಧುತ್ವವವನ್ನು ಎತ್ತಿಹಿಡಿದಿದೆ. ಇಂತಹ ವಿಚಾರದಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ. ಇದು ಆರ್. ಬಿಐ ಮತ್ತು ಸರ್ಕಾರದ ನಡುವಿನ ಚರ್ಚೆಯಾಗಿದೆ.ಇಂತಹ ನಿರ್ಧಾರವನ್ನು ಸಂಸತ್ ತೆಗೆದುಕೊಳ್ಳಲಿದೆ ಎಂದು ಸುಪ್ರೀಂಕೋರ್ಟ್ 2016 ರಲ್ಲಿ ನೋಟು ಅಮಾನ್ಯೀಕರಣದ ಬಗ್ಗೆ ಕೇಂದ್ರದ ಅಧಿಸೂಚನೆಯ ವಿರುದ್ಧ ನ್ಯಾಯಾಲಯದಲ್ಲಿ 50 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಡಿಸೆಂಬರ್ 7 ರಂದು, ನ್ಯಾಯಪೀಠವು ಸರ್ಕಾರ ಮತ್ತು ಅರ್ಜಿದಾರರ ವಾದಗಳನ್ನು ಆಲಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ನೋಟು ಅಮಾನನೀಕರಣ ನಿರ್ಧಾರವು ನಿರಂಕುಶ, ಅಸಾಂವಿಧಾನಿಕ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಯಡಿ ಸೂಚಿಸಲಾದ ಅಧಿಕಾರಗಳ ದುರುಪಯೋಗವಾಗಿದೆ ಎಂದು ಅರ್ಜಿಗಳು ವಾದಿಸಿದವು. https://twitter.com/ANI/status/1609784984168181768?ref_src=twsrc%5Egoogle%7Ctwcamp%5Eserp%7Ctwgr%5Etweet
ನವದೆಹಲಿ: 1,000 ಮತ್ತು 500 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸರ್ಕಾರದ 2016 ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದ್ದು, ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದೆ. https://twitter.com/ani_digital/status/1609782656681803776