Subscribe to Updates
Get the latest creative news from FooBar about art, design and business.
Author: KNN IT TEAM
ರಾಮನಗರ: ಕೆರೆಯಲ್ಲಿ ಮುಳುಗಿ ಸಂಸದ ಬಿ. ವೈ ರಾಘವೇಂದ್ರ ಅವರ ಫೋಟೋಗ್ರಾಫರ್ ಪ್ರಸನ್ನ ಭಟ್ ಸಾವನ್ನಪ್ಪಿದ ಘಟನೆ ನಡೆದಿದೆ. ಅವರ ಅಗಲಿಕೆಗೆ ಸಂಸದರು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/vaikuntha-ekadashi-2023-shubh-muhurat-puja-vidhi-mantras-and-significance/ ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಪಾಲ್ಗೊಳ್ಳುತ್ತಿದ್ದ ಸ್ನೇಹಜೀವಿ ಹಾಗೂ ನನ್ನ ಫೋಟೋಗ್ರಾಫರ್ ಆಗಿದ್ದ ಪ್ರಸನ್ನ ಭಟ್ ಅವರ ಅಕಾಲಿಕ ನಿಧನದ ಸುದ್ದಿಯಿಂದ ದುಃಖಿತನಾಗಿದ್ದೇನೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. https://kannadanewsnow.com/kannada/vaikuntha-ekadashi-2023-shubh-muhurat-puja-vidhi-mantras-and-significance/ ಶಿವಮೊಗ್ಗ ಜಿಲ್ಲೆ ಹೊಸನಗರ ನಿವಾಸಿಯಾಗಿರುವ ಪ್ರಸನ್ನ ಭಟ್ ಕನಕಪುರ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಸಂಜೆ ಈಜಲು ಹೋಗಿದ್ದ ಸಂದರ್ಭದಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಸನ್ನ ಭಟ್ ಆರು ಜನರ ತಂಡ ಕನಕಪುರದ ಸ್ನೇಹಿತನ ಮನೆಗೆ ಬಂದಿದ್ದರು. ಅಂತೆಯೇ ಸಂಜೆ ಈಜಾಡಲು ಎಂದು ಮಾವತ್ತೂರು ಕೆರೆ ತೆರಳಿದ್ದರು. ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.…
ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಹೊಸ ವರ್ಷದ ದಿನ ಘೋರ ದುರಂತವೊಂದು ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿ ಘಟನೆ ನಡೆದಿದೆ. https://kannadanewsnow.com/kannada/severe-cold-and-wind-in-lucknow-school-timings-change-from-10-am-to-2-pm/ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಿನ್ನೆ ಸಂಜೆ ಮೂವರು ಯುವಕರು ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಾಣೇಬೆನ್ನೂರ ನಗರ ನಿವಾಸಿಗಳಾದ ನವೀನ ಕೂರಗುಂದ( 20), ವಿಕಾಶ ಪಾಟೀಲ್ (20), ಪ್ರಮೋದ (25) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಆಗಮಿಸಿದ್ದು, ತುಂಗಭದ್ರಾ ನದಿಯಲ್ಲಿ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,
ಲಕ್ನೋ: ಉತ್ತರ ಪ್ರದೇಶದ ತೀವ್ರ ಶೀತದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಕ್ನೋದ ಎಲ್ಲಾ ಶಾಲೆಗಳು ಸೋಮವಾರದಿಂದ ಜನವರಿ 10 ರವರೆಗೆ 1 ರಿಂದ 8 ನೇ ತರಗತಿಯವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸುತ್ತವೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದೆ. https://kannadanewsnow.com/kannada/vaikuntha-ekadashi-2023-shubh-muhurat-puja-vidhi-mantras-and-significance/ ತೀವ್ರ ಶೀತಗಾಳಿ ಮತ್ತು ಅತಿಯಾದ ಮಂಜಿನ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಮಾನ್ಯತೆ ಪಡೆದ ಶಾಲೆಗಳ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಜನವರಿ 4 ರವರೆಗೆ ರಜೆಯನ್ನು ವಿಸ್ತರಿಸಿ ಭಾನುವಾರವೂ ಸೀತಾಪುರ ಜಿಲ್ಲಾಧಿಕಾರಿ (ಡಿಎಂ) ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಡಿಎಂ ಅನುಜ್ ಸಿಂಗ್ ಹೇಳಿದ್ದಾರೆ. ಈ ಆದೇಶವನ್ನು ತಕ್ಷಣವೇ ವಾಟ್ಸಾಪ್ ಮೂಲಕ ಸೀತಾಪುರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಲಭ್ಯವಾಗುವಂತೆ ಮಾಡಲಾಗಿದ್ದು, ಪೋಷಕರಿಗೆ ಸಮಯಕ್ಕೆ ಮಾಹಿತಿ ನೀಡಬಹುದಾಗಿದೆ. https://kannadanewsnow.com/kannada/vaikuntha-ekadashi-2023-shubh-muhurat-puja-vidhi-mantras-and-significance/ ಚಳಿಯ ಹಿನ್ನೆಲೆಯಲ್ಲಿ ಜನವರಿ 2 ಮತ್ತು ಜನವರಿ 3 ರಂದು ಎರಡು ದಿನಗಳ ಕಾಲ ಎಲ್‌ಕೆಜಿಯಿಂದ 8 ನೇ…
ಕೆಎನ್ಎನ್ ಡಿಜಿಟಲ್ ಡೆಸ್ಕ್ : ವೈಕುಂಠ ಏಕಾದಶಿ(Vaikuntha Ekadashi) ಅಥವಾ ಮುಕ್ಕೋಟಿ ಏಕಾದಶಿ ಧನುರ್ ಸೌರ ಮಾಸದಲ್ಲಿ ಬರುತ್ತದೆ. ಕೇರಳದ ಜನರು ವೈಕುಂಠ ಏಕಾದಶಿಯನ್ನು ಮಲಯಾಳಂ ಕ್ಯಾಲೆಂಡರ್‌ನಲ್ಲಿ ಸ್ವರ್ಗ ವತಿಲ್ ಏಕಾದಶಿ(Swarga Vathil Ekadashi) ಎಂದೂ ಆಚರಿಸುತ್ತಾರೆ. ವೈಕುಂಠ ಏಕಾದಶಿಯನ್ನು ಸೌರಮಾನದ ಕ್ಯಾಲೆಂಡರ್‌ಗೆ ಅನುಗುಣವಾಗಿ ಆಚರಿಸಲಾಗುತ್ತದೆ. ಏಕೆಂದರೆ, ಹಿಂದೂ ಚಂದ್ರನ ಕ್ಯಾಲೆಂಡರ್ ಅದನ್ನು ಮಾರ್ಗಶೀರ್ಷ ಅಥವಾ ಪೌಷ ಮಾಸದಲ್ಲಿ ಇರಿಸಬಹುದು. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದಲ್ಲಿ ಶೂನ್ಯ, ಒಂದು ಅಥವಾ ಎರಡು ವೈಕುಂಠ ಏಕಾದಶಿಗಳು ಇರಬಹುದು. ಶುಭ ಮುಹೂರ್ತ ಇಂದು (ಜನವರಿ 2, 2023 ರಂದು) ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿದೆ. ಏಕಾದಶಿ ತಿಥಿಯು ಜನವರಿ 1 ರಂದು 07:11 ಕ್ಕೆ ಪ್ರಾರಂಭವಾಗಿದ್ದು, ಜನವರಿ 2, 2023 ರಂದು ರಾತ್ರಿ 08:23 ಕ್ಕೆ ಕೊನೆಗೊಳ್ಳುತ್ತದೆ. ಮರುದಿನ ಸೂರ್ಯೋದಯದ ನಂತರ ಏಕಾದಶಿ ಪಾರಣವನ್ನು ಮಾಡಲಾಗುತ್ತದೆ. ಪಾರಣ ಎಂದರೆ ಉಪವಾಸ ಮುರಿಯುವುದು ಎಂದರ್ಥ. ಜನವರಿ 3 ರಂದು ಪಾರಣ ಸಮಯವು 07:14 AM ರಿಂದ 09:19…
ಜಮ್ಮು&ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಅಪ್ಪರ್ ಡ್ಯಾಂಗ್ರಿ ಗ್ರಾಮದಲ್ಲಿ ಶಂಕಿತ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿಮಗುವೊಂದು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ವಿವರಗಳ ಪ್ರಕಾರ, ಭಾನುವಾರದಂದು ಭಯೋತ್ಪಾದಕರ ಗುಂಡಿಗೆ ಬಲಿಯಾದ ನಾಗರಿಕರ ಮನೆಯ ಸಮೀಪದಿಂದ ಡ್ಯಾಂಗ್ರಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದೆ. ಇದರ ಜೊತೆಗೆ ಶಂಕಿತ ಐಇಡಿ ಪತ್ತೆಯಾಗಿದೆ ಎಂದು ಭದ್ರತಾ ಪಡೆ ತಿಳಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ನಿನ್ನೆ, ಶಂಕಿತ ಭಯೋತ್ಪಾದಕರು ನಿರ್ದಿಷ್ಟ ಸಮುದಾಯದ ಮೂರು ಮನೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ANI/status/1609768299520483330 ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ, ಇಬ್ಬರು ಶಂಕಿತ ಭಯೋತ್ಪಾದಕರು ಗ್ರಾಮದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಕಾಣಿಸಿಕೊಂಡಿದ್ದರು. ಮೂರು ಮನೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/former-cm-siddaramaiah-will-inquire-about-siddeshwar-shris-health-today/ https://kannadanewsnow.com/kannada/breaking-news-siddeshwara-swamiji-of-jnana-yogaashrama-is-in-good-health-doctor-sb-patil/
ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಸದ್ಯ ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯ ಡಾ.ಎಸ್.ಬಿ.ಪಾಟೀಲ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/former-cm-siddaramaiah-will-inquire-about-siddeshwar-shris-health-today/ ಇಂದು ಜ್ಞಾನಯೋಗಾಶ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೈದ್ಯ ಡಾ.ಎಸ್. ಬಿ. ಪಾಟೀಲ್, ಶ್ರೀಗಳು ಆರೋಗ್ಯವಾಗಿದ್ದಾರೆ. ಅವರು ಮಾತನಾಡುತ್ತಿದ್ದಾರೆ. ಭಕ್ತರು ಆತಂಕಪಡುವ ಅಗತ್ಯವಿಲ್ಲ. ಶ್ರೀಗಳ ಪಲ್ಸ್ ರೇಟ್, ಬಿಪಿ ಎಲ್ಲವೂ ನಾರ್ಮಲ್ ಇದೆ. ಶ್ರೀಗಳು ಆಹಾರ ಸೇವಿಸುತ್ತಿಲ್ಲ. ಗಂಜಿ, ನೀರು ಸೇವನೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಆಶ್ರಮದ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆ ಬಳಿ ಸೇರಿದ ಅಪಾರ ಸಂಖ್ಯೆಯ ಭಕ್ತರು ಶ್ರೀಗಳು ಗುಣಮುಖರಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ. ಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದ್ದು, ಗೇಟ್ ಮುಂಭಾಗದಲ್ಲಿ ಭಾರಿ ಸಂಖ್ಯೆಯ ಭಕ್ತರು ನೆರೆದಿದ್ದಾರೆ. ಶ್ರೀಗಳ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಭಕ್ತರು ಪಟ್ಟು ಹಿಡಿದಿದ್ದಾರೆ. ಇನ್ನು ಈಗಾಗಲೇ ಸಿಎಂ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಹೀಗಿರುವಾಗ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ…
ಬೆಂಗಳೂರು : ಖ್ಯಾತ ಪ್ರವಚನಕಾರರು, ನಡೆದಾಡುವ ದೇವರಂದೆ ಇಡೀ ವಿಶ್ವದಾದ್ಯಂತ ಪ್ರಖ್ಯಾತಿಗೆ ಕಾರಣರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ತಿಳಿದುಬಂದಿದೆ. https://kannadanewsnow.com/kannada/g20-presidency-very-big-deal-says-eam-s-jaishankar-to-critics/ ಇಂದು ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಲು ಮಾಜಿ ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನ ಮೂಲಕ ತೆರಳಲಿದ್ದಾರೆ. ಸಿದ್ದೇಶ್ವರ ಶ್ರೀಗಳ ಆಶ್ರಮಕ್ಕೆ ತೆರಳಿ ಆರೋಗ್ಯ ವಿಚಾರಿಸಲಿದ್ದಾರೆ. ಅವರಿಗೆ ಆರೋಗ್ಯದ ಬಗ್ಗೆ ಧೈರ್ಯ ತುಂಬಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ಒಂದು ವಾರಕ್ಕಿಂತಲೂ ಹೆಚ್ಚು ದಿನದಿಂದ ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿರುವ ಸ್ವಾಮೀಜಿಗಳ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು, ಜನಪ್ರತಿನಿಧಿಗಳು, ಸಚಿವರು, ಶಾಸಕರುಗಳು ಆಶ್ರಮಕ್ಕೆ ಭೇಟಿ ನೀಡುತ್ತಿದ್ದಾರೆ. ಶ್ರೀಗಳ ಅನಾರೋಗ್ಯ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ಬಿಎಲ್ಡಿಇ ಸಂಸ್ಥೆಯ ಬಿ. ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಹಾಗೂ ಹಾಸ್ಪಿಟಲ್ ವೈದ್ಯರ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದೆ. ಯುರೋಲಾಜಿಸ್ಟ್ ಡಾ. ಎಸ್.ಬಿ. ಪಾಟೀಲ್, ಬಿ.ಎಂ ಪಾಟೀಲ್ ಮೆಡಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ. ಅರವಿಂದ ಪಾಟೀಲ್, ಡಾ. ಮಲ್ಲಣ್ಣ ಮೂಲಿಮನಿ…
ಉತ್ತರ ಪ್ರದೇಶ: ಮಂತ್ರವಾದಿಯೊಬ್ಬ ದೆವ್ವ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಇದೀಗ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಕಳೆದ ಮೂರು ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಆಕೆಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ. ಡಿ.24ರಂದು ಬಾಲಕಿಯ ತಂದೆ ಮನೆಯಲ್ಲಿ ಇಲ್ಲದಿದ್ದಾಗ ಮಂತ್ರವಾದಿ ಅಶೋಕ್ ಕುಮಾರ್ (45) ಅವರ ಮನೆಗೆ ಬಂದು ದೆವ್ವ, ದುಷ್ಟಶಕ್ತಿಗಳನ್ನು ಹೋಗಲಾಡಿಸಲು ತನ್ನೊಂದಿಗೆ ಕಳುಹಿಸುವಂತೆ ಆಕೆಯ ತಾಯಿಗೆ ಮನವರಿಕೆ ಮಾಡಿಕೊಟ್ಟಿದ್ದ. ಇದಾದ ಬಳಿಕ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಮಂತ್ರವಾದಿ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ತಿಳಿದ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ. https://kannadanewsnow.com/kannada/most-foreigners-in-canada-banned-from-buying-houses-for-2-years/ https://kannadanewsnow.com/kannada/twitter-bans-over-48000-accounts-over-child-abuse-nudity-terrorism-related-policy-violations-in-india/ https://kannadanewsnow.com/kannada/most-foreigners-in-canada-banned-from-buying-houses-for-2-years/ https://kannadanewsnow.com/kannada/twitter-bans-over-48000-accounts-over-child-abuse-nudity-terrorism-related-policy-violations-in-india/
ಬೆಂಗಳೂರು: ಇಂದು ಕೊರೊನಾ ನಡುವೆಯೇ ವೈಕುಂಠ ಏಕಾದಶಿ ಸಂಭ್ರಮ ಸಡಗರದಿಂದ ನಡೆಯುತ್ತಿದೆ. https://kannadanewsnow.com/kannada/a-calf-was-raped-in-raichur-young-man-arrested/ ಬೆಳಗ್ಗೆಯಿಂದಲೇ ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ಸಾಗರವೇ ಹರಿದು ಬರುತ್ತಿದೆ. ಇದೀಗ ವೈಕುಂಠ ಏಕಾದಶಿ ಹಿನ್ನೆಲೆ ದೇವಸ್ಥಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಇನ್ನು ವಿಜಯಪುರ ಜ್ಞಾನಯೋಗಾಶ್ರಮ ಸಿದ್ದೇಶ್ವರ ಸ್ವಾಮೀಜಿ ಆರೋಗ್ಯದ ಕುರಿತು ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಅವರ ಪಲ್ಸ್ ರೇಟ್ , ಆಕ್ಸಿಜನ್ ಪ್ರಮಾಣ ಎಲ್ಲವೂ ನಾರ್ಮಲ್ ಇದೆ ಎಂದು ಹೇಳಿದ್ದಾರೆ. ಈಗಾಗಲೇ ಸಿದ್ದೇಶ್ವರ ಸ್ವಾಮೀಜಿ ನೋಡಲು ಭಕ್ತರು ಜ್ಞಾನಯೋಗಾಶ್ರಮ ಬಳಿ ಬರುತ್ತಿದ್ದಾರೆ. ಸಿದ್ದೇಶ್ವರ ಸ್ವಾಮೀಜಿ ಆರೋಗ್ಯಲ್ಲಿ ಸ್ಥಿರವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಹೆಲ್ತ್ ಬುಲಿಟಿನ್ ರಿಲೀಸ್ ಮಾಡಲಿದ್ದಾರೆ.
ಕೆಎನ್ಎನ ಡಿಜಿಟಲ್ ಡೆಸ್ಕ್ : ಭಾರತದ ಜಿ 20 ಅಧ್ಯಕ್ಷ(G20Presidency) ಸ್ಥಾನ ಬಹಳ ದೊಡ್ಡ ಜವಾಬ್ದಾರಿಯಾಗಿದೆ ಎಂದು ಹೇಳುವ ಮೂಲಕ ಟೀಕಾಕಾರರಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (EAM S Jaishankar )ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಜಾಗತಿಕ ಪೂರೈಕೆ ಸರಪಳಿಗಳು ಮತ್ತು ಬಲವಾದ ರಾಜಕೀಯದ ಮೇಲೆ ಹೆಚ್ಚಿನ ಆರ್ಥಿಕ ಒತ್ತಡವಿರುವ ಸಮಯದಲ್ಲಿ ಪ್ರಬಲ ಗುಂಪಿನ ಸಭೆಗಳನ್ನು ಆಯೋಜಿಸುವ ಜವಾಬ್ದಾರಿಯನ್ನು ದೇಶವು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ. ಭಾರತ ಡಿಸೆಂಬರ್ 1 ರಂದು ಔಪಚಾರಿಕವಾಗಿ ಜಿ 20 (G20) ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದೆ. ಮುಂದಿನ ಜಿ 20 ನಾಯಕರ ಶೃಂಗಸಭೆಯು ಸೆಪ್ಟೆಂಬರ್ 9 ಮತ್ತು 10 ರಂದು ನವದೆಹಲಿಯಲ್ಲಿ ನಡೆಯಲಿದೆ. ಭಾನುವಾರ ಇಲ್ಲಿ ಆಸ್ಟ್ರಿಯಾದ ರಾಜಧಾನಿಯಲ್ಲಿ ಭಾರತೀಯ ಡಯಾಸ್ಪೊರಾ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್, ಭಾರತವು ತನ್ನ ಅಧ್ಯಕ್ಷ ಸ್ಥಾನವನ್ನು ಅಂತಾರಾಷ್ಟ್ರೀಯ ಸಮುದಾಯದ ಪ್ರಯೋಜನಕ್ಕಾಗಿ ಬಳಸಲು ಉದ್ದೇಶಿಸಿದೆ ಎಂದು ಹೇಳಿದರು. ಜಿ20 ಅಧ್ಯಕ್ಷ ಸ್ಥಾನವನ್ನು ಪಡೆಯುವುದು ದೊಡ್ಡ ವಿಷಯವೇಲ್ಲ ಎಮದು ನನಗೆ ಕೆಲಮೊಮ್ಮೆ…