Author: KNN IT TEAM

ಚಿತ್ರದುರ್ಗ : ಮೇದಾರ ಕುಲಗುರುಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಚಿತ್ರದುರ್ಗದ ಮೇದಾರ ಕೇತೇಶ್ವರ ಗುರುಪೀಠದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ಮೇದಾರ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮೇದಾರ ಸಮುದಾಯದ ವೃತ್ತಿಗೆ ಬೆಂಬಲ ನೀಡುವ ದೃಷ್ಟಿಯಿಂದ ಮೇದಾರ ಕುಲಗುರುಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲಿದೆ. ಸಮುದಾಯ ನಿಗದಿಪಡಿಸಿದ ದಿನದಂದು ಮೇದಾರ ಕೇತೇಶ್ವರ ಜಯಂತಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಮೇದಾರ ವೃತ್ತಿಪರತೆ ತರಲು ಆಧುನಿಕ ತಂತ್ರಜ್ಞಾನ ಅಳವಡಿಸಿ, ಎಲ್ಲರಿಗೂ ತರಬೇತಿ ನೀಡಲಾಗುವುದು. ಹೊಸಹೊಸ ವಸ್ತುಗಳ ತಯಾರಿಕಾ ಕೇಂದ್ರಗಳನ್ನು ತೆರೆದು ಅಲ್ಲಿನ ಉತ್ಪನ್ನಗಳನ್ನು ಸ್ಥಳೀಯ ಮಾರುಕಟ್ಟೆಗೆ ಡಿಜಿಟಲ್ ಮಾರುಕಟ್ಟೆ ವೇದಿಕೆಗಳ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಜೋಡಿಸಲಿದ್ದೇವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/we-do-business-in-22-states-not-all-are-with-bjp-gautam-adani/

Read More

ಮೈಸೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಸ್ಯಾಂಟ್ರೋ ರವಿ, ಪ್ರಕರಣ ದಾಖಲಾಗಿ ಒಂದು ವಾರವೇ ಕಳೆಯುತ್ತಾ ಬಂದರೂ ಇದುವರೆಗೆ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ಪೊಲೀಸರು ಆತನ ಪತ್ತೆಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಕೆ ಎಸ್ ಮಂಜುನಾಥ್ ಆಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ವಂಚನೆ, ವರದಕ್ಷಿಣೆ ಕಿರುಕುಳ, ಅತ್ಯಾಚಾರ ಹಾಗೂ ಜಾತಿನಿಂದನೆಯಡಿ ಜನವರಿ 2ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಡಿಸಿಪಿ ಮುತ್ತುರಾಜ್ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ಕೂಡ ಪೊಲೀಸ್ ಇಲಾಖೆ ರಚಿಸಿತ್ತು. ಎನ್ ಆರ್ ಉಪ ವಿಭಾಗದ ಎಸಿಪಿ ಶಿವಶಂಕರ್ ನೇತೃತ್ವದಲ್ಲಿ ಸ್ಯಾಂಟ್ರೋ ರವಿ ಪತ್ತೆಗಾಗಿ ಹುಡುಕಾಟ ಆರಂಭಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಾಗಿ 6 ದಿನ ಕಳೆದರೂ ಬೆಂಗಳೂರು, ಮೈಸೂರಿನಲ್ಲಿ ಎಲ್ಲಿಯೇ ಹುಡುಕಿದರೇ ಸ್ಯಾಂಟ್ರೋ ರವಿ ಪತ್ತೆಯಾಗಿಲ್ಲ ಎನ್ನಲಾಗಿದೆ. ಹೀಗಾಗಿ ಪೊಲೀಸರ ಪತ್ತೆ ಕಾರ್ಯ ಮುಂದುವರೆದಿದೆ. ಮತ್ತೊಂದೆಡೆ ಸ್ಯಾಂಟ್ರೋ ರವಿ ಕುರಿತಂತೆ ದಿನಕ್ಕೊಂದು ಪ್ರಕರಣಗಳು, ಡೀಲ್ ರಾಜನ ಡೀಲ್ ಗಳು ಹೊರ ಬರುತ್ತಿವೆ. ಕುಮಾರಕೃಪಾ ಗೆಸ್ಟ್ ಹೌಸ್…

Read More

ನವದೆಹಲಿ: ಬ್ಯಾಂಕ್ ಸಾಲ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಮೋದಿ ಸರಕಾರ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಮಾಡಿಕೊಡುತ್ತಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಉದ್ಯಮಿ ಗೌತಮ್ ಅದಾನಿ ಶನಿವಾರ ಪ್ರತ್ಯುತ್ತರ ನೀಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅದಾನಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ನಿಕಟ ಸಂಪರ್ಕದಿಂದ ತಮ್ಮ ಅದೃಷ್ಟವನ್ನು ಉತ್ತೇಜಿಸಲಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದ್ರೆ, ವಿಪಕ್ಷಗಳ ಆಡಳಿತವಿರುವ ರಾಜ್ಯಗಳೊಂದಿಗೆ ಕೆಲಸ ಮಾಡುವುದರಿಂದ ಇದನ್ನು ನಿರಾಕರಿಸಲಾಗಿದೆ. ನಾವು ಪ್ರತಿ ರಾಜ್ಯದಲ್ಲೂ ಗರಿಷ್ಠ ಹೂಡಿಕೆ ಮಾಡಲು ಬಯಸುತ್ತೇವೆ. ಇಂದು 22 ರಾಜ್ಯಗಳಲ್ಲಿ ಅದಾನಿ ಗ್ರೂಪ್ ಕಾರ್ಯನಿರ್ವಹಿಸುತ್ತಿರುವುದು ನಿಜಕ್ಕೂ ಸಂತಸ ತಂದಿದೆ ಮತ್ತು ಈ ಎಲ್ಲಾ ರಾಜ್ಯಗಳು ಬಿಜೆಪಿ ಆಳ್ವಿಕೆಯಲ್ಲಿಲ್ಲ. ನಮಗೆ ಯಾವುದೇ ಸಮಸ್ಯೆ ಇಲ್ಲ ಎಂದು ನಾನು ಹೇಳಬಲ್ಲೆ. ನಾವು ಕೇರಳ, ಮಮತಾ ದೀದಿಯವರ ಪಶ್ಚಿಮ ಬಂಗಾಳದಲ್ಲಿ, ನವೀನ್ ಪಟ್ನಾಯಕ್ ಜಿ ಅವರ ಒಡಿಶಾದಲ್ಲಿ, ಜಗನ್ಮೋಹನ್ ರೆಡ್ಡಿ ಅವರ ರಾಜ್ಯ ಆಂಧ್ರದಲ್ಲಿ, ಕೆಸಿಆರ್ ಅವರ ತೆಲಂಗಾಣ ರಾಜ್ಯದಲ್ಲೂ ಸಹ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.…

Read More

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ರಾಷ್ಟ್ರೀಯ  ಅವಿಷ್ಕಾರ್ ಅಭಿಯಾನ ಕಾರ್ಯಕ್ರಮದಡಿ ರಸಪ್ರಶ್ನೆ ಆಯೋಜಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ಮಕ್ಕಳಲ್ಲಿ ಗಣಿತ, ವಿಜ್ಞಾನ, ತಂತ್ರಜ್ಞಾನ, ಸಾಮಾನ್ಯ ಜ್ಞಾನ, ಭಾಷೆ, ದೇಶದ ಪರಂಪರೆ ಮತ್ತು ವಿವಿಧ ವಿಷಯಗಳಲ್ಲಿ ಅರಿವಿನ ಮಟ್ಟವನ್ನು ಹೆಚ್ಚಿಸಲು ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಕಾರ್ಯ ಕ್ರಮವು ಪೂರಕವಾಗಿದೆ ಎಂದು ತಿಳಿಸಿದ್ದಾರೆ. ಜನವರಿ 10 ರಿಂದ ಫೆಬ್ರವರಿ 24 ರವರೆಗೆ ಸ್ಪರ್ಧೆಗಳನ್ನು ವಿವಿಧ ಹಂತಗಳಲ್ಲಿ ನಡೆಸಲು ಸೂಚನೆ ನೀಡಲಾಗಿದೆ. ತಾಲೂಕು, ವಿಭಾಗ ಮತ್ತು ರಾಜ್ಯ ಮಟ್ಟದಲ್ಲಿ ಸ್ಪರ್ಧೆಯನ್ನು 5 ರಿಂದ 7 (ಜೂನಿಯರ್ ವಿಭಾಗ) 8ರಿಂದ 10 ನೇ ತರಗತಿ (ಸೀನಿಯರ್ ವಿಭಾಗ) ಮಕ್ಕಳಿಗೆ 2 ಹಂತದಲ್ಲಿ ಆಯೋಜಿಸುವಂತೆ ಸೂಚಿಸಿದ್ದಾರೆ.  

Read More

ಉಡುಪಿ: ಇಂದಿಗೆ ಕಾಂತಾರ ಸಿನಿಮಾ 100ನೇ ದಿನಕ್ಕೆ ಕಾಲಿಟ್ಟು, ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇಂತಹ ಕಾಂತಾರ ಚಿತ್ರದಲ್ಲಿ ತನ್ನ ಜಮೀನನ್ನು ನಾನು ನ್ಯಾಯಾಲಯಕ್ಕೆ ಹೋಗಿ ಪಡೆಯುತ್ತೇನೆ ಎಂದಾಗ, ನೀನು ನ್ಯಾಯಾಲಯಕ್ಕೆ ಹೋಗುತ್ತೀಯಾ? ನ್ಯಾಯವನ್ನು ನಾನು ಇಲ್ಲಿಯೇ ಮಾಡುತ್ತೇನೆ ಎಂಬುದಾಗಿ ಹೇಳುವ ಡೈಲಾಗ್ ಇದೆ. ಅದೇ ಮಾದರಿಯಲ್ಲಿಯೇ ದೈವ ಉತ್ಸವಕ್ಕೆ ತಡೆ ತಂದ ಮರುದಿನವೇ ವ್ಯಕ್ತಿಯೊಬ್ಬ ಉಡುಪಿಯ ಪಡುಬಿದ್ರಿಯಲ್ಲಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಹೌದು ದೇವಸ್ಥಾನದ ನೇಮೋತ್ಸವಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಂತ ವ್ಯಕ್ತಿಯೊಬ್ಬ ದೇವಸ್ಥಾನದ ಮುಂದೆಯೇ ಕುಸಿದು ಬಿದ್ದು ಮೃತಪಟ್ಟಿರೋ ಘಟನೆ, ಉಡುಪಿ ಜಿಲ್ಲೆಯ ಪಡುಹಿತ್ಲು ಜಾರಂದಾಯ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನದ ಮುಂದೆ ಕುಸಿದು ಬಿದ್ದು ಮೃತಪಟ್ಟ ವ್ಯಕ್ತಿಯನ್ನು ಜಾರಂದಾಯ ಗ್ರಾಮದ ಜಯ ಪೂಜಾರಿ ಎನ್ನಲಾಗಿದೆ. ಈತ ಸುಮಾರು 500 ವರ್ಷಗಳ ಐತಿಹ್ಯವಿರುವ ಪಡುಹಿತ್ಲು ಜಾರಂದಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ನಡೆಯುವ ನೇಮಕ್ಕೆ ಡಿಸೆಂಬರ್ 23ರಂದು ತಡೆಯಾಜ್ಞೆ ತಂದಿದ್ದರು. ಈ ಬಳಿಕ ಡಿ.24ರಂದು ದೇವಸ್ಥಾನದ ಮುಂದೆಯೇ ಕುಸಿದು ಬಿದ್ದು ಮೃತಪಟ್ಟಿರೋದಾಗಿ ತಿಳಿದು ಬಂದಿದೆ.…

Read More

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಬಿಎಂಆರ್ ಸಿಎಲ್ ಇನ್ಮುಂದೆ ವಾಟ್ಸಾಪ್, ಕ್ಯೂ ಆರ್ ಕೋಡ್ ಮೂಲಕ ಒಂದು ಬಾರಿಗೆ 6 ಟಿಕೆಟ್ ಖರೀದಿಸೋದಕ್ಕೆ ಅವಕಾಶ ನೀಡಿದೆ. ಈ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ನಮ್ಮ ಮೆಟ್ರೋ ಕಳೆದ ನವೆಂಬರ್ 1ರಿಂದ ಪರಿಚಯಿಸಿದಂತ ಈ ಯೋಜನೆ ಜಾರಿಗೊಳಿಸಿದೆ. ಈಗ ಸದ್ಯಕ್ಕೆ ಒಬ್ಬರಿಗೆ ಒಂದು ಟಿಕೆಟ್ ಖರೀದಿಗೆ ಅವಕಾಶ ನೀಡಿರುವಂತ ಬಿಎಂಆರ್ ಸಿಎಲ್, ಇನ್ನೊಂದು ತಿಂಗಳಿನಲ್ಲಿ ಒಂದೇ ಬಾರಿಗೆ ಆರು ಜನರಿಗೆ ಟಿಕೆಟ್ ಖರೀದಿಸಲು ಸಾಧ್ಯವಾಗುವಂತೆ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಬಳಿಕ 10 ಟಿಕೆಟ್ ಖರೀದಿಗೂ ಅವಕಾಶ ನೀಡುವಂತ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಹಿರಿಯ ಮೆಟ್ರೋ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂದಹಾಗೇ ನವೆಂಬರ್ 1ರಿಂದ ಜಾರಿಗೊಳಿಸಿದಂತ ಕ್ಯೂ ಆರ್ ಕೋಟ್ ಮೂಲಕ ಟಿಕೆಟ್ ಖರೀದಿಯ ವ್ಯವಸ್ಥೆಯಡಿ 2.1 ಲಕ್ಷ ಟಿಕೆಟ್ ಈವರೆಗೆ ಮಾರಾಟವಾಗಿವೆ. ಕಳೆದ ಡಿಸೆಂಬರ್ 6ರವರೆಗೆ ಕ್ಯೂ ಆರ್ ಕೋಟ್ ಸ್ಕ್ಯಾನ್ ಮೂಲಕ ಬರೋಬ್ಬರಿ 7,45,299…

Read More

ಶಿವಮೊಗ್ಗ : 2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ ಆಧಾರಿತ ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.50 ರಂತೆ ಸಹಾಯಧನ ನೀಡಲು ಅರ್ಹ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕು-08182-270415/9448036611, ಭದ್ರಾವತಿ ತಾಲ್ಲೂಕು -08282-268239/ 9900046087, ಶಿಕಾರಿಪುರ ತಾಲ್ಲೂಕು-08187-223544 /9663634388, ಸೊರಬ ತಾಲ್ಲೂಕು-08184-272112/9108280642, ಸಾಗರ ತಾಲ್ಲೂಕು-08183-226193/7892782514, ತೀರ್ಥಹಳ್ಳಿ ತಾಲ್ಲೂಕು-08181-228151/9900046084, ಹೊಸನಗರ ತಾಲ್ಲೂಕು-08185-221364/9591695327 ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು  ಸಂಪರ್ಕಿಸಬಹುದಾಗಿದೆ.

Read More

ಮಡಿಕೇರಿ : ರಾಜ್ಯದಲ್ಲಿ ವಸತಿ ಶಾಲೆಗಳ ಶಿಕ್ಷಣದ ಗುಣಮಟ್ಟ ಮತ್ತು ಫಲಿತಾಂಶ ಉತ್ತಮವಾಗಿದ್ದು, ಬೇಡಿಕೆಯೂ ಸಹ ಹೆಚ್ಚಿದೆ. ಈ ಹಿನ್ನೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ 6 ನೇ ತರಗತಿಗೆ 50 ರಿಂದ 100 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ‘ಓಬವ್ವ ಆತ್ಮ ರಕ್ಷಣೆ ಕಲೆ’ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಂಬೇಡ್ಕರ್, ಮೊರಾರ್ಜಿ ದೇಸಾಯಿ, ಏಕಲವ್ಯ, ಕಿತ್ತೂರು ರಾಣಿ ಚೆನ್ನಮ್ಮ, ನಾರಾಯಣ ಗುರು ಹೀಗೆ ಒಟ್ಟು 830 ವಸತಿ ಶಾಲೆಗಳಿದ್ದು, 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಫಲಿತಾಂಶ…

Read More

ಚಿತ್ರದುರ್ಗ: ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿರುವಂತ ಕಾಂಗ್ರೆಸ್ ಪಕ್ಷವು, ಇಂದು ಚಿತ್ರದುರ್ಗದಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಸಲಿದೆ. ಚಿತ್ರದುರ್ಗದಲ್ಲಿ ಕಾಂಗ್ರೆಸ್ ನಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಬೃಹತ್ ಐಕ್ಯತಾ ಸಮಾವೇಶ ಆಯೋಗಿಸಲಾಗಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕೆ ವಿಶಾಲ ವೇದಿಕೆಯನ್ನು ನಿರ್ಮಿಸಲಾಗಿದೆ. ನೂರಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಇಂದಿನ ಬೃಹತ್ ಐಕ್ಯತಾ ಸಮಾವೇಶದಲ್ಲಿ ಕೂರಲು ವ್ಯವಸ್ಥೆ ಮಾಡಲಾಗಿದೆ. ಅಂದಹಾಗೇ ದಲಿತ ಸಮುದಾಯದ ಮತಗಳ ಮೇಲೆ ಕಣ್ಣಿಟ್ಟಿರುವಂತ ಕಾಂಗ್ರೆಸ್, ಇಂದು ಎಸ್ಸಿ, ಎಸ್ಟಿ ಸಮಾವೇಶ ಮಾಡುತ್ತಿದೆ. ಮಧ್ಯ ಕರ್ನಾಟಕದ ಭಾಗದಲ್ಲೇ ದಲಿತರ ಪ್ರಾಬಲ್ಯದ ಮತಗಳು ಹೆಚ್ಚಿರೋ ಕಾರಣ, ಚಿತ್ರದುರ್ಗದಲ್ಲಿ ಇಂದು ಸಮಾವೇಶ ಮಾಡುತ್ತಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/do-you-know-what-the-first-sunrise-of-the-new-year-was-like-watch-the-video-here/ https://kannadanewsnow.com/kannada/congress-gears-up-for-karnataka-assembly-elections-appoints-observers-for-28-lok-sabha-constituencies/ https://kannadanewsnow.com/kannada/bigg-news-annabhagya-yojana-antyodaya-heres-the-key-information-for-bpl-ration-card-holders/

Read More

ಬಳ್ಳಾರಿ : ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ್ ಯೋಜನೆಯಡಿ ನೊಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕರಾದ ಕೆ.ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು https://pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್‍ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬಹುದು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್‍ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ. ಆದಕಾರಣ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಇ-ಕೆವೈಸಿ ಮಾಡಸದಿರುವ ರೈತರಿಗೆ ಮುಂದಿನ 13ನೇ ಕಂತಿನ ಅನುದಾನ ವರ್ಗಾವಣೆಯಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೆÉೀರಿ…

Read More