Subscribe to Updates
Get the latest creative news from FooBar about art, design and business.
Author: KNN IT TEAM
ಕೋಲ್ಕತ್ತಾ: ಇಂದು ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಉದ್ಘಾಟನೆ ಸಮಾರಂಭದಲ್ಲಿ ದೊಡ್ಡ ಹೈ ಡ್ರಾಮಾ ನಡೆಯಿತು. ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದೆಇಂದ ರೈಲಿನ ಚಾಲನೆ ನೀಡಿದ ಬಳಿಕ ಸಿಎಂ ಮಮತಾ ಬ್ಯಾನರ್ಜಿಯವರು ವೇದಿಕೆಗೆ ಬರಲು ನಿರಾಕರಿಸಿದರು. ಬಂಗಾಳದ ಹೌರಾ ನಿಲ್ದಾಣದಲ್ಲಿ ಆಹ್ವಾನಿತ ಜನಸಮೂಹ ಒಂದು ವಿಭಾಗದಲ್ಲಿ ಗುಂಪಿನ ಜನರು ಜೈ ಶ್ರೀರಾಮ್ ಎಂದು ಜೋರಾಗಿ ಘೋಷಣೆಗಳನ್ನು ಕೂಗುತ್ತಿದ್ದರು. ಇದರಿಂದ ಕೋಪಗೊಂಡ ಮಮತಾ ಬ್ಯಾನರ್ಜಿಯವರು ವೇದಿಕೆ ಮೇಲೇರಲು ನಿರಾಕರಿಸಿದರು. https://twitter.com/ANI/status/1608725951860609026 ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್ ಮತ್ತು ರಾಜ್ಯಪಾಲ ಸಿವಿ ಆನಂದ ಬೋಸ್ ಸಿಎಂ ಮಮತಾ ಅವರನ್ನು ಸಮಾಧಾನಪಡಿಸಲು ಪಡಿಸಲು ಯತ್ನಿಸಿದರು. ಆದರೆ ಮುಖ್ಯಮಂತ್ರಿಗಳು ಪ್ರೇಕ್ಷಕರೊಂದಿಗೆ ಕುರ್ಚಿಯ ಮೇಲೆ ಕುಳಿತುಕೊಂಡಿದ್ದರು ಎನ್ನಲಾಗುತ್ತಿದೆ. ಇದೇ ವೇಳೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಿಎಂ ಮಮತಾ , ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸೂಚಿಸಿದರು. ಇಂದು ನಿಮಗೆ ದುಃಖದ ದಿನ ಮತ್ತು ದೊಡ್ಡ ನಷ್ಟ, ನಾನು…
ಮಂಡ್ಯ : ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಷ್ಟಾಚಾರದಿಂದ ಕೂಡಿದ ಪಾರ್ಟಿ ಹಾಗೂ ಕುಟುಂಬ ರಾಜಕಾರಣ ಮಾಡುವ ಪಾರ್ಟಿ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಗುಡುಗಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಭಾಷಣ ಮಾಡಿದ್ದಾರೆ. ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಡಬನ್ ಎಂಜಿನ್ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. 2018 ರಲ್ಲಿ ಮಂಡ್ಯದಿಂದಲೇ ನಾವು ಪ್ರಚಾರ ಮಾಡಿದ್ವಿ. . 2019 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂತು. ಈ ಎರಡು ಪಕ್ಷದಲ್ಲಿ ಹಲವರು ಕ್ರಿಮಿನಲ್ ಗಳಿದ್ದಾರೆ. ಎರಡು ಪಕ್ಷಗಳು ಭ್ರಷ್ಟಾಚಾರದಿಂದ ತುಂಬಿ ಹೋಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿಗೆ ಎಟಿಮ್ ಆಗುತ್ತದೆ.. ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ರಾಮನಾಥ್ ಕೋವಿಂದ್, ಹಾಗೂ ದ್ರೌಪದಿ ಮುರ್ಮು , ಇಬ್ಬರು ದಲಿತರನ್ನು…
ಮಂಡ್ಯ : ಮುಂದಿನ ವರ್ಷವೂ ‘ಗರೀಬ್ ಕಲ್ಯಾಣ ಯೋಜನೆ’ ವಿಸ್ತರಣೆಯಾಗಲಿದೆ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಸಮಾವೇಶಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಮುಂದಿನ ವರ್ಷ 2023 ರಲ್ಲೂ ಕೂಡ ಪ್ರಧಾನಮಂತ್ರಿ ‘ಗರೀಬ್ ಕಲ್ಯಾಣ ಯೋಜನೆ’ ವಿಸ್ತರಣೆಯಾಗಲಿದೆ, ಮೋದಿ ಸರ್ಕಾರ ಇಂತಹ ಹಲವು ಜನಪರ ಕಾರ್ಯಕ್ರಮಗಳನ್ನ ತರಲಿದೆ ಎಂದು ಹೇಳಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿ ಅಲೆ ಅಪ್ಪಳಿಸಲಿದೆ 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.ಕರ್ನಾಟಕದಲ್ಲಿ ಎಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಜೆಡಿಎಸ್ ನಿಂದ ಜನರು ಬೇಸತ್ತಿದ್ದಾರೆ. ಮಂಡ್ಯ ಜಿಲ್ಲೆಯ ನೀರಾವರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಿದ್ದೇವೆ, ಈ ಭಾಗದ ನೀರಾವರಿ ಯೋಜನೆಗೆ ಚಾಲನೆ ನೀಡಲಿದ್ದೇವೆ, ಈ ಭಾಗದ ಕಬ್ಬು ಬೆಳೆಗಾರಿಗೆ ಆತ್ಮವಿಶ್ವಾಸ ತುಂಬಲಿದ್ದೇವೆ ಎಂದು ಹೇಳಿದರು. ಈ ಬಾರಿ…
ಮಂಡ್ಯ : ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸುನಾಮಿ ಅಲೆ ಅಪ್ಪಳಿಸಲಿದೆ 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಮಂಡ್ಯದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಸಮಾವೇಶಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಆಗಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಎಲ್ಲೆಡೆ ಬಿಜೆಪಿ ಗಾಳಿ ಬೀಸುತ್ತಿದೆ. 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಜೆಡಿಎಸ್ ನಿಂದ ಜನರು ಬೇಸತ್ತಿದ್ದಾರೆ. ಮಂಡ್ಯ ಜಿಲ್ಲೆಯ ನೀರಾವರಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಿದ್ದೇವೆ, ಈ ಭಾಗದ ನೀರಾವರಿ ಯೋಜನೆಗೆ ಚಾಲನೆ ನೀಡಲಿದ್ದೇವೆ, ಈ ಭಾಗದ ಕಬ್ಬು ಬೆಳೆಗಾರಿಗೆ ಆತ್ಮವಿಶ್ವಾಸ ತುಂಬಲಿದ್ದೇವೆ ಎಂದು ಹೇಳಿದರು. ಈ ಬಾರಿ ಮಂಡ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ. ಹಿಂದಿನ ಸರ್ಕಾರಗಳು ಕಾರ್ಖಾನೆಗಳನ್ನು ಪುನಾರಂಭಿಸುವದಕ್ಕೆ ಹೋಗಿರಲಿಲ್ಲ, ಆದರೆ ನಮ್ಮ ಸರ್ಕಾರ ಹಲವು ಕಾರ್ಖಾನೆಗಳನ್ನು ಪುನರ್ ಆರಂಭಿಸಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. https://kannadanewsnow.com/kannada/new-years-day-shocks-tourists-restrictions-on-nandi-hills-security-tightened/ https://kannadanewsnow.com/kannada/heres-some-good-news-for-puc-pass-outs-applications-invited-for-1458-posts-crpf-recruitment-2023/
ಚಿಕ್ಕಮಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕವಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಲು ಹಿಂದುಳಿದ ವರ್ಗಗಳ ಆಯುಕ್ತರು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ ಹಾಗೂ ಸರ್ಕಾರಿ ವಿದ್ಯಾರ್ಥಿವೇತನಕ್ಕೆ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ…
ಬೆಂಗಳೂರು: ಇನ್ನೇನು ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. ಕಳೆದ ಎರಡು ವರ್ಷಗಳ ನಂತರ ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. https://kannadanewsnow.com/kannada/mega-dairy-inaugurated-at-gejjalagere-in-mandya-here-are-the-complete-highlights-of-home-minister-amit-shahs-speech/ ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕೂಡ ಫುಲ್ ಅಲರ್ಟ್ ಆಗಿದೆ. ಇದೀಗ ಹೊಸ ವರ್ಷಕ್ಕೆ ಹೊರಗೆ ಹೋಗುವುದಕ್ಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಅದರಲ್ಲೂ ಹೆಚ್ಚಾಗಿ ಬೆಟ್ಟದ ಕಡೆ ಹೋಗಿ ಸಮಯ ಕಳೆಯುವುದಕ್ಕೆ ನೋಡುತ್ತಾರೆ. ಆದರೆ ಹೊಸ ವರ್ಷಾಚರಣೆಗೆ ನಂದಿಬೆಟ್ಟದಲ್ಲಿ ನಿರ್ಬಂಧ ಹೇರಲಾಗಿದೆ.ಡಿ.31ಸಂಜೆ 6 ಗಂಟೆಯಿಂದ ಜ.1 ಬೆಳಿಗ್ಗೆ 6 ಗಂಟೆವರೆಗೂ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕರ ಪ್ರವೇಶ ಹಾಗೂ ಸಂಭ್ರಮಾಚರಣೆಗೆ ನಿರ್ಬಂಧ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/mega-dairy-inaugurated-at-gejjalagere-in-mandya-here-are-the-complete-highlights-of-home-minister-amit-shahs-speech/ ಡ್ರಿಂಕ್ ಆಂಡ್ ಡ್ರೈವ್ ಅಪಘಾತ ಹಾಗೂ ಕೊರೊನಾ ಹರಡದಂತೆ ತಡೆಯಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಂದಿಗಿರಿಧಾಮದ ಮೇಲೆ ಡಿ.31ರಂದು ರೂಮ್ ಬುಕಿಂಗ್ ಸಹ ರದ್ದುಗೊಳಿಸಲಾಗಿದೆ. ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/mega-dairy-inaugurated-at-gejjalagere-in-mandya-here-are-the-complete-highlights-of-home-minister-amit-shahs-speech/ ಬೆಂಗಳೂರಿನಿಂದ ಅನತಿ ದೂರದಲ್ಲಿರುವ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ. https://kannadanewsnow.com/kannada/heres-some-good-news-for-puc-pass-outs-applications-invited-for-1458-posts-crpf-recruitment-2023/ ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು (ಲುಂಪಿ ಸ್ಕಿನ್ ಡಿಸೀಸ್) ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಜಿಲ್ಲೆಯಲ್ಲಿ 289 ಗ್ರಾಮಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಂಡು ಬಂದಿರುತ್ತದೆ. ಈವರೆಗೆ 3,414 ಜಾನುವಾರುಗಳು ರೋಗಕ್ಕೆ ತುತ್ತಾಗಿದ್ದು, 64 ಜಾನುವಾರುಗಳು ಮರಣ ಹೊಂದಿರುತ್ತದೆ. https://kannadanewsnow.com/kannada/heres-some-good-news-for-puc-pass-outs-applications-invited-for-1458-posts-crpf-recruitment-2023/ ಜಾನುವಾರುಗಳನ್ನು ಒಂದೆಡೆಯಿಂದ ಇನ್ನೊಂದೆಡೆ ಸಾಗಾಣಿಕೆ ಮಾಡುವುದರಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ರೋಗದ ನಿಯಂತ್ರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶಿಸಿದ್ದಾರೆ. https://kannadanewsnow.com/kannada/heres-some-good-news-for-puc-pass-outs-applications-invited-for-1458-posts-crpf-recruitment-2023/
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ ಮತ್ತು ದೇಹಕ್ಕೆ ಸರಿಯಾದ ವ್ಯಾಯಾಮದ ಕೊರತೆಯಿಂದಾಗಿ ಮಧುಮೇಹ ರೋಗಿಗಳು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗುತ್ತಿದ್ದಾರೆ. ಎಷ್ಟೇ ದೊಡ್ಡದಿರಲಿ ಅಥವಾ ಸಣ್ಣದಿರಲಿ, ಎಲ್ಲರೂ ಆಸ್ಪತ್ರೆಗಳಿಗೆ ಹೋಗುತ್ತಿದ್ದಾರೆ. ಒಮ್ಮೆ ಸಾಂಕ್ರಾಮಿಕ ರೋಗ ಪತ್ತೆಯಾದ ನಂತರ, ನೀವು ನಿಮ್ಮ ಜೀವನದುದ್ದಕ್ಕೂ ಔಷಧಿಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಅಜಾಗರೂಕತೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಮತ್ತು ದೇಹದಲ್ಲಿ ನಿಧಾನವಾಗಿ ಹದಗೆಡಲು ಕಾರಣವಾಗಬಹುದು. ಇದನ್ನು ತಪ್ಪಿಸಲು ಅನೇಕ ಜನರು ವಿವಿಧ ಪ್ರಯತ್ನಗಳನ್ನು ಮಾಡುತ್ತಾರೆ. ನಿಮ್ಮ ಆಹಾರ ಪದ್ಧತಿಯನ್ನು ಬದಲಾಯಿಸುವುದು. ದೈನಂದಿನ ವ್ಯಾಯಾಮಗಳಲ್ಲಿ ತೊಡಗಬೇಕೆಂದು ತಜ್ಞರು ಹೇಳುತ್ತಾರೆ. ವಿವರಗಳನ್ನು ನೋಡೋಣ.. https://kannadanewsnow.com/kannada/heres-some-good-news-for-puc-pass-outs-applications-invited-for-1458-posts-crpf-recruitment-2023/ ಅಧಿಕ ನಾರಿನಂಶವಿದೆ ಮಧುಮೇಹದಿಂದ ಬಳಲುತ್ತಿರುವ ಜನರು ಕಡಿಮೆ ಕಾರ್ಬೋಹೈಡ್ರೇಟ್ ಗಳನ್ನು ಸೇವಿಸಬೇಕು. ನಾರಿನಂಶವನ್ನು ಅತಿಯಾಗಿ ತೆಗೆದುಕೊಳ್ಳಬೇಕು. ಈ ಸಿರಿಧಾನ್ಯಗಳು ನಾರಿನಂಶದಿಂದ ಸಮೃದ್ಧವಾಗಿವೆ. ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಈಗ ನಾವು ಸಕ್ಕರೆಯನ್ನು ನಿಯಂತ್ರಣದಲ್ಲಿಡಲು ಮುಖ್ಯವಾಗಿ ಬಳಸುವ ಹಲವಾರು ಧಾನ್ಯಗಳ…
ನವದೆಹಲಿ: ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (Steno) ಮತ್ತು ಹೆಡ್ ಕಾನ್ಸ್ಟೇಬಲ್ (Ministerial) ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಎಲ್ಲಾ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು crpf.gov.in. ಒಟ್ಟು 1458 ಹುದ್ದೆಗಳನ್ನು ಸಿಆರ್ಪಿಎಫ್ ನೇಮಕಾತಿ 2023 ರ ಮೂಲಕ ಬಿಡುಗಡೆ ಮಾಡಲಾಗಿದೆ ಮತ್ತು 12 ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಸಿಆರ್ಪಿಎಫ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ತಮ್ಮ ಫಾರ್ಮ್ಗಳನ್ನು ಸಲ್ಲಿಸಬೇಕು, crpfindia.com. ಆನ್ಲೈನ್ ಅರ್ಜಿ ಪ್ರಕ್ರಿಯೆ ಜನವರಿ 4, 2023 ರಿಂದ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 25 ಆಗಿರುತ್ತದೆ. ಸಿಆರ್ಪಿಎಫ್ನಲ್ಲಿ 1315 ಹೆಡ್ ಕಾನ್ಸ್ಟೇಬಲ್ ಮತ್ತು 143 ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋ) ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲಾಗುವುದು. ವಯಸ್ಸು: ಅಭ್ಯರ್ಥಿಗಳ ವಯಸ್ಸು 18 ರಿಂದ 25…
ಕಾಬೂಲ್ : 2023ರ ಮಾರ್ಚ್ ಅಂತ್ಯದ ವೇಳೆಗೆ ಸುಮಾರು 20 ಮಿಲಿಯನ್ ಜನರು ತೀವ್ರ ಹಸಿವನ್ನು ಎದುರಿಸುವ ಅಪಾಯದಲ್ಲಿರುವುದರಿಂದ ಮುಂಬರುವ ವರ್ಷದಲ್ಲಿ ಅಫ್ಘಾನಿಸ್ತಾನದ ಆರ್ಥಿಕ ಮತ್ತು ಮಾನವೀಯ ಪರಿಸ್ಥಿತಿಯನ್ನು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಕಚೇರಿ (ಒಸಿಎಚ್ಎ) ತನ್ನ ವರದಿಯಲ್ಲಿ ತಿಳಿಸಿದೆ ಎಂದು ಟೋಲೋ ನ್ಯೂಸ್ ವರದಿ ಮಾಡಿದೆ. ನಾಲ್ಕು ಮಿಲಿಯನ್ ಮಕ್ಕಳು ಮತ್ತು ಮಹಿಳೆಯರು ತೀವ್ರ ಅಪೌಷ್ಟಿಕತೆಯನ್ನು ಅನುಭವಿಸುತ್ತಾರೆ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದ್ದು, ಇದೇ ವೇಳೆ ಅಪೌಷ್ಟಿಕತೆಯ ಪ್ರಮಾಣವು ಅತ್ಯಧಿಕವಾಗಿ ಮುಂದುವರಿಯುತ್ತದೆಯಂತೆ. “ಹದಗೆಡುತ್ತಿರುವ ಆರ್ಥಿಕತೆಯು ಆದಾಯದಲ್ಲಿ ತೀವ್ರ ಕುಸಿತ, ಹೆಚ್ಚುತ್ತಿರುವ ಸಾಲ ಮತ್ತು ಹೆಚ್ಚಿನ ನಿರುದ್ಯೋಗಕ್ಕೆ ಕಾರಣವಾಗಿದೆ. ಸರಕುಗಳ ಬೆಲೆಗಳಲ್ಲಿನ ತೀವ್ರ ಏರಿಕೆಯಿಂದಾಗಿ, ಜನರು ಈಗ ತಮ್ಮ ಆದಾಯದ ಶೇಕಡಾ 71 ರಷ್ಟನ್ನು ಆಹಾರಕ್ಕಾಗಿ ಖರ್ಚು ಮಾಡುತ್ತಾರೆ” ಎಂದು ವರದಿಯನ್ನು ಉಲ್ಲೇಖಿಸಿ ಟೋಲೋ ನ್ಯೂಸ್ ವರದಿ ಮಾಡಿದೆ. ಇದಲ್ಲದೆ, ವ ಚಳಿಗಾಲದಿಂದಾಗಿ, ಅಫ್ಘಾನಿಸ್ತಾನದ ನಿವಾಸಿಗಳು ತಮ್ಮ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಮತ್ತೆ ಮತ್ತೆ ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ.