Subscribe to Updates
Get the latest creative news from FooBar about art, design and business.
Author: KNN IT TEAM
ಅಹಮದಾಬಾದ್: ನಗರದ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಇಂದು ಅನಾರೋಗ್ಯದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ನಿಧನರಾಗಿದ್ದರು. https://kannadanewsnow.com/kannada/prime-minister-narendra-modis-mother-heeraben-immersed-in-panchabhutas/ ಅವರ ಅಂತ್ಯಕ್ರಿಯೆಯನ್ನು ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಪ್ರಧಾನಿ ಮೋದಿ ತಾಯಿಯ ಪಾರ್ಥೀವ ಶರೀರದ ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಈ ಮೂಲಕ ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಇದೀಗ ತಾಯಿ ಹೀರಾಬೆನ್ ಅಂತ್ಯಕ್ರಿಯೆ ಬಳಿಕ ಪ್ರಧಾನಿ ಮೋದಿ ಅವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಯಥಾಸ್ಥಿತಿ ತಮ್ಮ ಕರ್ತವ್ಯ ಮೋದಿ ಅವರು ಮುಂದುವರಿಸಲಿದ್ದಾರೆ. ನಿಗದಿಯಂತೆ ದಿನವಿಡೀ ಬಂಗಾಳದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ಹೊತ್ತಿನಲ್ಲಿ ಗುಜರಾತ್ ರಾಜಭವನಕ್ಕೆ ಹೋಗಲಿದ್ದಾರೆ. ಪಶ್ಚಿಮಬಂಗಾಳದ 7800 ಕೋಟಿ ವೆಚ್ಚದ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಬೆಳಗಾವಿ: ಇದುವರೆಗೆ ರಾಜ್ಯದ ಮಹಿಳಾ ನೌಕರರಿಗೆ ಮಾತ್ರವೇ ಶಿಶುಪಾಲನಾ ರಜೆ ನೀಡಲಾಗುತ್ತಿತ್ತು. ಇಂತಹ ರಜೆಯನ್ನು ಪತ್ನಿಯನ್ನು ಕಳೆದುಕೊಂಡ ಪತಿಗೂ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಗುರುವಾರದಂದು ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ನಾಸೀರ್ ಅಹ್ಮದ್, ಬಿಜೆಪಿಯ ಎಸ್ ವಿ ಸಂಕನೂರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೇವಲ ಸರ್ಕಾರಿ ಮಹಿಳಾ ನೌಕರರಿಗೆ 6 ತಿಂಗಳವರೆಗೆ ಶಿಶುಪಾಲನಾ ರಜೆಯನ್ನು ನೀಡಲಾಗುತ್ತಿದೆ. ಈ ರಜೆಯನ್ನು ಪತ್ನಿ ನಿಧನ ಹೊಂದಿದ ಪುರುಷ ಸರ್ಕಾರಿ ಅಧಿಕಾರಿ, ನೌಕರರಿಗೆ ಅನ್ವಯಿಸುವುದಿಲ್ಲ ಎಂದರು. ಪತ್ನಿಯನ್ನು ಕಳೆದುಕೊಂಡ ಪತಿಯ ದುಖವು ನಮಗೆ ಅರ್ಥವಾಗಿದೆ. ಹೀಗಾಗಿ ವಿಧುರರಿಗೂ ಶಿಶುಪಾಲನಾ ರಜೆಯನ್ನು ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಭರವಸೆ ನೀಡಿದರು. https://kannadanewsnow.com/kannada/pm-narendra-modis-mother-heeraben-passes-away-cm-bommai-and-other-dignitaries-condole-her-death/ https://kannadanewsnow.com/kannada/rishabh-pant-accident/ https://kannadanewsnow.com/kannada/congress-krishna-janandolana-rally-in-vijayapura-today-thousands-of-people-are-likely-to-gather/
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಹಲವು ರೀತಿಯಲ್ಲಿ ಸರ್ಕಸ್ ಮಾಡುತ್ತಲೇ ಇರುತ್ತಾರೆ ಅದರಲ್ಲೂ ಕೆಲವೊಂದು ವಿಡಿಯೋಗಳು ಸೋಷಿಯಲ್ ಮಿಡಿಯಾಗಳಲ್ಲಿ ವೈರಲ್ ಆಗುತ್ತಲೇ ಇರುತ್ತದೆ. https://kannadanewsnow.com/kannada/congress-krishna-janandolana-rally-in-vijayapura-today-thousands-of-people-are-likely-to-gather/ ಇದೀಗ ಇಂತದ್ದೇ ವಿಡಿಯೋ ವೈರಲ್ ಆಗಿದ್ದು, ಹಾಡಹಗಲೇ ಯುವಕನೊಬ್ಬ ಅಸಭ್ಯ ರೀತಿಯಲ್ಲಿ ಬೈಕ್ ಟ್ಯಾಂಕ್ ಮೇಲೆ ಕೂರಿಸಿ ವಿಚಿತ್ರವಾಗಿ ಪ್ರೀತಿ ನಿವೇದನೆ ಮಾಡುವುದಕ್ಕೆ ಮುಂದಾಗ ವಿಚಿತ್ರವಾದ ವಿಡಿಯೋವೊಂದನ್ನು ಕಾರಿನಲ್ಲಿ ಹಾದುಹೋಗುವ ಜನರು ಚಿತ್ರೀಕರಿಸಿದ್ದಾರೆ..ಆಂದ್ರಪ್ರದೇಶದ ವಿಶಾಖಪಟ್ಟಣಂನ ಪ್ರಧಾನ ಮಂತ್ರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಈ ಘಟನೆ ನಡೆದ ಎರಡೇ ಗಂಟೆಗಳಲ್ಲಿ ಸ್ಟೀಲ್ ಪ್ಲಾಂಟ್ ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವಕ ಮತ್ತು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಅವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. https://kannadanewsnow.com/kannada/congress-krishna-janandolana-rally-in-vijayapura-today-thousands-of-people-are-likely-to-gather/ ನಂತರ ಅವರ ಹೆತ್ತವರನ್ನು ಕರೆದು ಸಲಹೆ ನೀಡಲಾಯಿತು. ಇಬ್ಬರನ್ನು ಗಾಜುವಾಕಾ ಬಳಿಯ ವೆಂಪಲಿನಗರ ಮತ್ತು ಸಮತಾನಗರದ ನಿವಾಸಿಗಳು ಎಂದು ಪೊಲೀಸರು ಗುರುತಿಸಿದ್ದಾರೆ. ವಿಶಾಖಪಟ್ಟಣಂ ಪೊಲೀಸ್ ಆಯುಕ್ತ…
ವಿಜಯಪುರ: ಇಂದು ವಿಜಯಪುರದಲ್ಲಿ ಕಾಂಗ್ರೆಸ್ ಕೃಷ್ಣ ಜನಾಂದೋಲನ ಸಮಾವೇಶವನ್ನು ಆಯೋಜಿಸಿದೆ. ದರಬಾರ್ ಹೈಸ್ಕೂಲ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶ ಆರಂಭಗೊಳ್ಳಲಿದೆ. https://kannadanewsnow.com/kannada/bmtc-commuters-shocked-from-new-year-monthly-pass-day-pass-day-ticket-price-hiked/ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಈ ಸಮಾವೇಶವನ್ನು ಆಯೋಜಿಸಲಾಗಿದೆ. ಕೃಷ್ಣಾ ನೀರಾವರಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಸರ್ಕಾರದ ವಿಳಂಬವನ್ನು ಪ್ರಶ್ನಿಸಲಾಗುತ್ತದೆ.ಕಾಂಗ್ರೆಸ್ ನಾಯಕರು ಬಿಜೆಪಿ ಸರ್ಕಾರದ ವೈಫಲ್ಯದ ಕುರಿತು ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ ಕೆ ಹರಿಪ್ರಸಾದ್, ಡಾ. ಜಿ ಪರಮೇಶ್ವರ, ಕೆಪಿಸಿಸಿ ಪ್ರಚಾರ ಸಮೀತಿ ಆಧ್ಯಕ್ಷ ಎಂ ಬಿ ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಚ್ ಕೆ ಪಾಟೀಲ ಹಾಗೂ ಹಾಲಿ ಮಾಜಿ ಶಾಸಕರು ಸೇರಿದಂತೆ ಅನೇಕರು ಭಾಗಿಯಾಲಿದ್ದಾರೆ.
ಅಹಮದಾಬಾದ್: ನಗರದ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಇಂದು ಅನಾರೋಗ್ಯದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಪ್ರಧಾನಿ ಮೋದಿ ತಾಯಿಯ ಪಾರ್ಥೀವ ಶರೀರದ ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಈ ಮೂಲಕ ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಅಹಮದಾಬಾದ್ ನಲ್ಲಿನ ಯು ಎಸ್ ಮೆಹ್ತಾ ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರನ್ನು ಮೋದಿ ಭೇಟಿಯಾಗಿಯೂ ಆರೋಗ್ಯ ವಿಚಾರಿಸಿದ್ದರು. ಇಂದು ಅವರನ್ನು ಡಿಸ್ಚಾರ್ಜ್ ಕೂಡ ಮಾಡಲಾಗುತ್ತದೆ ಎನ್ನಲಾಗಿತ್ತು. ಆದ್ರೇ ದಿಢೀರ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು. ಇಂತಹ ಅವರ ಪಾರ್ಥೀವ ಶರೀರವನ್ನು ಅಹಮದಾಬಾದ್ ಆಸ್ಪತ್ರಯಿಂದ ಪುತ್ರನ ಮನೆಗೆ ಕೊಂಡೊಯ್ಯಲಾಗಿತ್ತು. ಸೀಮಿತ ಕುಟುಂಬಸ್ಥರ ಅಂತಿಮ ದರ್ಶನದ ಬಳಿಕ, ಗಾಂಧಿನಗರದ ಸೆಕ್ಟರ್ 30ರಲ್ಲಿನ ರುದ್ರಭೂಮಿಗೆ ಕೊಂಡೊಯ್ಯಲಾಗಿತ್ತು. ಅಂತಿಮ ವಿಧಿ ವಿಧಾನವನ್ನು ಹೀರಾಬೆನ್ ಪುತ್ರರಾಗಿರುವಂತ ಪ್ರಧಾನಿ ನರೇಂದ್ರ ಮೋದಿಯವರು ನೆರವೇರಿಸಿದರು.…
ಬೆಂಗಳೂರು : ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಮಾನ್ಯ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್ ಮತ್ತು ವಕ್ಪ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಅವರ ಸೂಚನೆಯ ಮೇರೆಗೆ ಜನವರಿ 31, 2023 ರ ವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯದಿಂದ ಪ್ರಪ್ರಥಮ ಬಾರಿಗೆ ಚಾರ್‌ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರದಂತೆ ಸರಕಾರದ ಸಹಾಯಧನವನ್ನ ನೀಡಲಾಗುತ್ತದೆ. ಇದಕ್ಕೆ ಡಿಸೆಂಬರ್ 1 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ಚಾರ್‌ಧಾಮ್ ಯಾತ್ರೆಯನ್ನು ಕೈಗೊಳ್ಳುವ ಸಂಧರ್ಭದಲ್ಲಿ ಜನಸಂಧಣಿ ಹೆಚ್ಚಾಗಿದ್ದರಿಂದ ಹಾಗೂ ತಾಂತ್ರಿಕ ಕಾರಣಗಳಿಂದ ಯಾತ್ರಾರ್ಥಿಗಳು ಅಗತ್ಯ ದಾಖಲೆಗಳನ್ನು ಪಡೆದುಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ. ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳನ್ನ ಪಡೆದುಕೊಳ್ಳುವುದಕ್ಕೆ ಅವಕಾಶ ನೀಡುವಂತೆ ಬೆಳಗಾವಿಯ ಅಧಿವೇಶನದಲ್ಲಿ ಹಲವಾರು ಶಾಸಕರು ಮಾನ್ಯ ಸಚಿವರಿಗೆ ಮನವಿ ಮಾಡಿದ್ದರು. ಹೆಚ್ಚಿನ ಜನರು ಅರ್ಜಿ ಸಲ್ಲಿಸಲಿ ಎನ್ನುವ ಉದ್ದೇಶದಿಂದ, ಹಾಗೂ ಅಗತ್ಯ ದಾಖಲೆಗಳನ್ನ ಕ್ರೋಢೀಕರಿಸಲು ಅವಕಾಶ…
ದಾವಣಗೆರೆ : ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗುತ್ತಿದ್ದಂತೆ ಇದೀಗ ರಾಜ್ಯದ ದಾವಣಗೆರೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಹೆಚ್ಚಿದ ಆತಂಕ ಸೃಷ್ಟಿಯಾಗಿದೆ. https://kannadanewsnow.com/kannada/no-change-in-union-home-minister-amit-shahs-programme-minister-k-gopalaiah/ ಕರ್ನಾಟದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್ ಅಲರ್ಟ್ ನಡುವೆಯೂ ಮತ್ತೊಂದು ಆತಂಕ ಶುರುವಾಗಿದೆ. ಕಳೆದ ನವೆಂಬರ್ ನಲ್ಲಿ ಒಂದು ಪಾಸಿಟಿವ್ ಪ್ರಕರಣ ದಾವಣಗೆರೆಯ ಜಿಲ್ಲೆಯಲ್ಲಿ ದಾಖಲಾಗಿತ್ತು. ಈ ಬೆನ್ನಲ್ಲೆ ಇದೀಗ ಜಗಳೂರಿನಲ್ಲಿ 74 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು. ಕೋವಿಡ್ ನಿಯಮದಂತೆ ಜಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/no-change-in-union-home-minister-amit-shahs-programme-minister-k-gopalaiah/ ಕೋವಿಡ್ ಸೋಂಕಿಗೆ ಒಳಪಟ್ಟ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 7 ಮಂದಿ ಹಾಗೂ ದ್ವಿತೀಯ ಸಂಪರ್ಕಕ್ಕೆ ಮೂರು ಜನ ಬಂದಿದ್ದು ಕಫದ ಮಾದರಿ ಸಂಗ್ರಹಿಸಲಾಗಿದೆ. ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ ರಾಘವನ್ ಮಾಹಿತಿ ನೀಡಿದ್ದಾರೆ. ಸೋಂಕಿತನ ಪತ್ನಿ ಮಾತ್ರ ಇದೇ ತಿಂಗಳು ತುಮಕೂರಿಗೆ ಹೋಗಿ ಬಂದಿರುವ ಮಾಹಿತಿ ಇದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹಾಗೂ ದ್ವಿತೀಯ…
ಮಂಡ್ಯ: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯಕ್ಕೆ ಆಗಮಿಸಿದ್ದಾರೆ. ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು, ನಾಳಿನ ಅವರ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗುತ್ತದೆ ಎನ್ನಲಾಗಿತ್ತು. ಆದ್ರೇ ಆ ರೀತಿಯ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ಮಾಹಿತಿ ನೀಡಿರುವಂತ ಅವರು, ಕೇಂದ್ರ ಗೃಹ ಸಚಿವರ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ. ನಿಗದಿಯಂತೆ ಮಂಡ್ಯ, ಬೆಂಗಳೂರಿನಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದರು. ಮಂಡ್ಯದ ಎಲ್ಲಾ ಕಾರ್ಯಕ್ರಮಗಳು ನಿಗದಿಯಂತೆ ನಡೆಯಲಿವೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಕಾರ್ಯಕ್ರಮದ ಬಳಿಕ, ಜನಸಂಕಲ್ಪ ಸಮಾವೇಶದಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳುವುದಾಗಿ ತಿಳಿಸಿದರು. https://kannadanewsnow.com/kannada/good-news-for-sugarcane-growers-for-new-year-govt-orders-transfer-of-profits-from-sale-of-molassin-to-farmers/ https://kannadanewsnow.com/kannada/two-labourers-killed-as-compound-wall-collapses-in-bengaluru/ https://kannadanewsnow.com/kannada/pm-narendra-modis-mother-heeraben-passes-away-cm-bommai-and-other-dignitaries-condole-her-death/
ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿ ಶಾಕ್ ನೀಡಿದೆ. ಇಂಧನ ಬೆಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ಹೆಚ್ಚಿಸಿದ್ದಾರೆ. https://kannadanewsnow.com/kannada/bengaluru-police-on-high-alert-for-new-years-eve-adherence-to-these-rules-mandatory/ ಹೊಸ ವರ್ಷದ ಮೊದಲ ವಾರದಿಂದಲೇ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ಎದುರಾಗಲಿದೆ.ಬಿಎಂಟಿಸಿ ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ. ವಜ್ರ ಪ್ರಸ್ತುತ ಮಾಸಿಕ ದರ 1428+ ಜಿಎಸ್ಟಿ 72 ಒಟ್ಟು 1500 ರೂಪಾಯಿಗಳಿತ್ತು, ಸದ್ಯ ಪರಿಷ್ಕೃತ ವಜ್ರ ಮಾಸಿಕ ಪಾಸಿನ ದರ 1714.29 ಪೈಸೆ + ಜಿಎಸ್ಟಿ 85.71= ಒಟ್ಟು 1800 ರೂಪಾಯಿಯಾಗಿದೆ.ವಜ್ರ ವೋಲ್ವೋ ಪ್ರಸ್ತುತ ದೈನಿಕ ಪಾಸಿನ ದರ 95+ ಜಿಎಸ್ಟಿ 5 = 100 ರೂಪಾಯಿ ಇತ್ತು, ಪರಿಷ್ಕೃತ ದರ 114.29+ 5.21= 120 ರೂಪಾಯಿಗೆ ಹೆಚ್ಚಳವಾಗಿದೆ.
ನವದೆಹಲಿ: ಜನವರಿ.1ರ ಹೊಸ ವರ್ಷದಿಂದ ನೀವು ಖರೀದಿಸುವಂತ ವಿವಿಧ ವಿಮೆ ಸೌಲಭ್ಯಗಳಿಗೆ ಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಭಾರತೀಯ ವಿಮಾ ಅಭಿವೃದ್ಧಿ ಮತ್ತು ನಿಯಂತ್ರಮ ಪ್ರಾಧಿಕಾರವು ಮಾಹಿತಿ ನೀಡಲಾಗಿದೆ. ಹೊಸ ವರ್ಷದಿಂದ ಖರೀದಿಸುವಂತ ಆರೋಗ್ಯ, ವಾಹನ, ಪ್ರವಾಸ, ಗೃಹ ಸೇರಿದಂತೆ ಇತರೆ ವಿಮೆಗಳಿಗೆ ಕೆವೈಸಿ ಕಡ್ಡಾಯಗೊಳಿಸಿರೋದಾಗಿ ಹೇಳಿದೆ. ಪ್ರಸ್ತುತ ಜೀವವಿಮೆ ಖರೀದಿಸುವವರಿಗೆ ಮಾತ್ರ ಕೆವೈಸಿ ಕಡ್ಡಾಯವಾಗಿತ್ತು. ಈಗ ಈ ನಿಯಮವನ್ನು ಇತರೆ ವಿಮೆಗಳಿಗೂ ಕಡ್ಡಾಯ ಮಾಡಲಾಗಿದೆ. ಇನ್ನೂ ಒಂದು ಲಕ್ಷ ರೂಪಾಯಿಗಿಂತ ಹೆಚ್ಚಿನ ವಿಮಾ ಕ್ಲೇಮುಗಳಿಗೆ ಗ್ರಾಹಕರು ಪ್ಯಾನ್ ಮತ್ತು ಆಧಾರ್ ಸಂಖ್ಯೆ ನೀಡಬೇಕಿತ್ತು. ಈಗ ಪಾಲಿಸಿ ಖರೀದಿ ವೇಳೆಯಲ್ಲಿಯೇ ಕೆವೈಸಿ ಸಲ್ಲಿಸಬೇಕಾಗಿದೆ. https://kannadanewsnow.com/kannada/pm-narendra-modis-mother-heeraben-passes-away-cm-bommai-and-other-dignitaries-condole-her-death/ https://kannadanewsnow.com/kannada/bengaluru-ranks-3rd-in-road-accident-deaths-in-the-country/ https://kannadanewsnow.com/kannada/good-news-for-sugarcane-growers-for-new-year-govt-orders-transfer-of-profits-from-sale-of-molassin-to-farmers/