Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದ್ದು, ಎರಡು ವರ್ಷಗಳ ಬಳಿಕ ಈ ಬಾರಿ ಹೊಸ ವರ್ಷಾಚರಣೆಗೆ ಅದ್ಧೂರಿ ಸಿದ್ಧತೆ ಮಾಡಲಾಗಿದೆ.2023 ರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಜನರು ಸಿದ್ದರಾಗಿದ್ದರು. ಆದರೆ ಕೊರೊನಾ ಎಂಬ ಮಹಾಮಾರಿ ಮತ್ತೆ ಜನರನ್ನು ಕಾಡತೊಡಗಿದೆ. ಕೊರೊನಾ ಹಿನ್ನೆಲೆ ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಹೊಸ ರೂಲ್ಸ್ ಜಾರಿ ಮಾಡಲಾಗಿದ್ದು, ಕಡ್ಡಾಯವಾಗಿ ಜನರು ಇದನ್ನು ಪಾಲಿಸಲೇಬೇಕಾಗಿದೆ. ಬಿಬಿಎಂಪಿ ರೂಲ್ಸ್ ನಗರದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಬಿಬಿಎಂಪಿ ರೂಲ್ಸ್ ಜಾರಿ ಮಾಡಿದೆ. ಪಿಜಿ, ಹೋಟೆಲ್ , ಬೇಕರಿ ಸೇರಿ ವಾಣಿಜ್ಯ ಚಟುವಟಿಕೆಗೆ ನೋಟಿಸ್ ಜಾರಿ ಮಾಡಿದೆ. ನಿಯ ಪಾಲಿಸುವಂತೆ ಬಿಬಿಎಂಪಿ ಅಧಿಖಾರಿಗಳು ನೋಟಿಸ್ ನೀಡಿದ್ದಾರೆ. ಮಧ್ಯರಾತ್ರಿ ಒಂದು ಗಂಟೆ ವರೆಗೆ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗಿದೆ. ಹೀಗಾಗಿ ವಾಣಿಜ್ಯ ಚಟುವಟಿಕೆ ಸ್ಥಗಿತಗೊಳಿಸುವಂತೆ ಬಿಬಿಎಂಪಿ ನೋಟಿಸ್ ನೀಡಿದೆ. ವಸತಿ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆ ಸ್ಥಗಿತಗೊಳಿಸಲು ನೋಟಿಸ್ ನೀಡಲಾಗಿದೆ. 40 ಅಡಿಗಿಂತ ಕಡಿಮೆ ವಿಸ್ತೀರ್ಣದಲ್ಲಿ ರಸ್ತೆಗಳಲ್ಲಿ ಚಟುವಟಿಕೆಗೆ ನಿಬಂಧ ಹೇರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ…
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರ ತಾಯಿ ಹೀರಾಬಾ ಅವರು ಶುಕ್ರವಾರ ಬೆಳಿಗ್ಗೆ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾದರು. ಮುಂಜಾನೆ 3.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು. ಹೀಗೆ ನಿಧನರಾಗೋ ಒಂದು ದಿನದ ಮೊದಲು ಮೋದಿ ಅವರು ತಮ್ಮ ತಾಯಿಯನ್ನು ಭೇಟಿಯಾಗಿದ್ದರು. ಈ ವೇಳೆ ಅವರು ಹೇಳಿದಂತ ಮಾತನ್ನು ಪುತ್ರರಾಗಿ ನರೇಂದ್ರ ಮೋದಿ ನೆನಪು ಮಾಡಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಪ್ರಧಾನಿ ಮೋದಿಯವರ ತಾಯಿ ಹೀರಾ ಬೇನ್ ಅವರು ಅಹ್ಮದಾಬಾದ್ನ ಯು.ಎನ್.ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್ ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವಂತ ವಿಷಯ ತಿಳಿದಂತ ಪ್ರಧಾನಿ ಮೋದಿಯವರು ದೆಹಲಿಯಿಂದ ನೇರವಾಗಿ ಅಹ್ಮದಾಬಾದ್ ನ ಯು ಎಸ್ ಮೆಹ್ತಾ ಆಸ್ಪತ್ರೆಗೆ ತೆರಳಿ ತಮ್ಮ ತಾಯಿಯ ಆರೋಗ್ಯ ವಿಚಾರಿಸಿದ್ದರು. ಆದ್ರೇ ಇಂದು ಅವರು ನಿಧನರಾಗಿದ್ದಾರೆ. ಅವರ ನಿಧನ ಕುರಿತಂತೆ…
ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುತ್ತಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 05-11-2023 ರ ಬೆಳಿಗ್ಗೆ 11.00 ರಿಂದ 22-01-2023 ರಾತ್ರಿ 11.59ರ ವರೆಗೆ ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ,ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವ…
ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ ಡಿ.19 ರಿಂದ ಡಿ.29 ರವರೆಗೆ ಜರುಗಿದ ಚಳಿಗಾಲದ ಅಧಿವೇಶನಕ್ಕೆ ತಾತ್ಕಾಲಿಕ ತೆರೆ ಬಿದ್ದಿದೆ. ವಿಧಾನ ಪರಿಷತ್ತಿನ ಕಾರ್ಯಕಲಾಪವನ್ನು ಸಭಾಪತಿ ಬಸವರಾಜ ಎಸ್ ಹೊರಟ್ಟಿ ಅನಿರ್ಧಿಷ್ಟಾವಧಿಗೆ ಮುಂದೂಡಿದ್ದಾರೆ. ಅಧಿವೇಶನವನ್ನು ಡಿ.30 ವರೆಗೆ ಕರೆಯಲಾಗಿತ್ತು. ಆದರೆ ಒಂದು ದಿನದ ಅಧಿವೇಶನವನ್ನು ಮೊಟಕುಗೊಳಿಸಿ 9 ದಿನಗಳ ಕಾಲ ಅಧಿವೇಶನ ಜರುಗಿತು. ವಿಧಾನ ಪರಿಷತ್ತಿನಲ್ಲಿ 9 ದಿನಗಳಲ್ಲಿ 45 ಗಂಟೆಗಳ ಕಾಲ ಚರ್ಚೆ ನಡೆಸಲಾಯಿತು. ವಿಧಾನ ಸಭೆಯಿಂದ ಅಂಗೀಕೃತವಾದ 6, ತಿದ್ದುಪಡಿಯೊಂದಿಗೆ ಅಂಗೀಕೃತವಾದ 01 ಹಾಗೂ ವಿಧಾನ ಪರಿಷತ್ತಿನಲ್ಲಿ ಮಂಡಿಸಿದ 02 ವಿಧೇಯಕಗಳನ್ನು ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು. ಈ ಬಾರಿಯ ವಿಧಾನ ಪರಿಷತ್ ಕಲಾಪ ಹಲವು ವೈಶಿಷ್ಟ್ಯಗಳಿಗೆ ಸಾಕ್ಷಿಯಾಯಿತು. ಪರಿಷತ್ ಕಲಾಪದಲ್ಲಿ ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ಧೋರಣೆ ಖಂಡಿಸಿ ಓಕ್ಕೊರಲಿನಿಂದ ಖಂಡನಾ ನಿರ್ಯಣ ಕೈಗೊಳ್ಳಲಾಯಿತು. ರಾಜ್ಯ ಗಡಿ ವಿಚಾರವಾಗಿ ಸರ್ವ ಪಕ್ಷಗಳು ಒಂದಾಗಿದ್ದು ರಾಷ್ಟ್ರ ಮಟ್ಟದಲ್ಲಿ ಸೊಜಿಗವಾಗಿ ಕಂಡುಬಂದಿತು. ರಾಷ್ಟ್ರ ಮಟ್ಟದ ಮುಖ್ಯ ಸುದ್ದಿವಾಹಿನಿಗಳು ಈ ಸಂಗತಿಯನ್ನು ಬಿತ್ತರಿಸಿದವು. ಡಿ.19…
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಗೆ ಸಕಲ ಸಿದ್ಧತೆಗಳು ನಡೆದಿವೆ. ಜನತೆಯು ನೂತನ ವರ್ಷದ ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಈ ವೇಳೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಬಸ್ ಹಾಗೂ ನಮ್ಮ ಮೆಟ್ರೋ ಸಂಚಾರ ಸೇವೆಯನ್ನು ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಬಿಎಂಟಿಸಿಯು, ಹೊಸ ವರ್ಷಾಚರಣೆಯ ಪ್ರಯುಕ್ತ ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಬಸ್ ಸೇವೆ ನೀಡಲಾಗುತ್ತಿದೆ. ಬಿಎಂಟಿಸಿ ಬಸ್ ಸೇವೆಯು ಪ್ರಮುಖ ಮಾರ್ಗಗಳಲ್ಲಿ ಮಾತ್ರ ಪ್ರಯಾಣಿಕರಿಗೆ ಲಭ್ಯವಿದೆ. ಒಟ್ಟು 50 ಅನುಸೂಚಿಗಳಲ್ಲಿ ಬಸ್ ಗಳು ಸಂಚರಿಸಲಿವೆ ಎಂದು ತಿಳಿಸಿದೆ. ಇನ್ನೂ ಬೆಂಗಳೂರು ಜನತೆಯ ಹೊಸ ವರ್ಷಾಚರಣೆಯ ಪ್ರಯುಕ್ತ ನಮ್ಮ ಮೆಟ್ರೋ ಸಂಚಾರವನ್ನು ಕೂಡ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿಎಲ್ ( BMRCL ) ಮಾಹಿತಿ ನೀಡಿದ್ದು, ಹೊಸ ವರ್ಷದ ಆಚರಣೆಯ ( New Year Celebration 2023 ) ಸಂದರ್ಭದಲ್ಲಿ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ರೈಲುಗಳ ಸೇವೆಯನ್ನು ದಿನಾಂಕ…
ಮಂಡ್ಯ: ಕೇಂದ್ರ ಗೃಹ ಸಚಿವ ಅಮಿತ್ ಶಾ ( Union Home Minister Amith Shash ) ಅವರು ಇಂದು ಮತ್ತು ನಾಳೆ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲದೇ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ಗುರಿಯೊಂದಿಗೆ, ಇಂದು ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿದ ಮಂಡ್ಯದಿಂದ ತಮ್ಮ ಪ್ರವಾಸ ಪ್ರಾರಂಭಿಸಲಿದ್ದಾರೆ. ಇಂದು ಮಂಡ್ಯದಲ್ಲಿ ಮೆಗಾ ಡೈರಿ ಉದ್ಘಾಟಿಸಿದ ಬಳಿಕ, ಅಮಿತ್ ಶಾ ಅವರು, ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು, ಮಂಡ್ಯ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಷ್ಟೇ ಅಲ್ಲದೇ ಇದಕ್ಕೂ ಮುನ್ನಾ ನಡೆಯುವಂತ Rallyಯಲ್ಲಿಯೂ ಅವರು ಭಾಗಿಯಾಗಲಿದ್ದಾರೆ. ಈ ವೇಳೆ ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. https://kannadanewsnow.com/kannada/pm-modi-mother-heeraben-modi-passed-away/ https://kannadanewsnow.com/kannada/pele-brazils-three-time-world-cup-winning-legend-dies-at-82-after-battling-prolonged-illness/
ನವದೆಹಲಿ : ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಜನ ಸಾಮಾನ್ಯರಿಗೆ ನೆಮ್ಮದಿ ತರುವ ನಿರ್ಧಾರ ಕೈಗೊಳ್ಳಲಾಗಿದೆ. ಬೇಳೆಕಾಳುಗಳು, ಖಾದ್ಯ ತೈಲ, ಸಿರಿಧಾನ್ಯಗಳು ಇತ್ಯಾದಿಗಳ ಬಗ್ಗೆ ಪ್ರಮುಖ ಘೋಷಣೆ ಮಾಡಿದೆ. ಅದ್ರಂತೆ, ಕೇಂದ್ರ ಸರ್ಕಾರ ಕಾಂಡಿ ಬೇಳೆಕಾಳು ಮತ್ತು ಕಡಲೆಗಳ ಉಚಿತ ಆಮದನ್ನ ವಿಸ್ತರಿಸುತ್ತಿದೆ ಎಂದು ತಿಳಿದುಬಂದಿದೆ. ಉಚಿತ ಆಮದು ಇನ್ನೂ ಒಂದು ವರ್ಷ ಅಂದರೆ 31 ಮಾರ್ಚ್ 2024 ರವರೆಗೆ ಮುಂದುವರಿಯುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2022-23ರ ಆರ್ಥಿಕ ವರ್ಷದಲ್ಲಿ ಭಾರತವು ಏಪ್ರಿಲ್ನಿಂದ ಅಕ್ಟೋಬರ್’ವರೆಗೆ 200 ಮಿಲಿಯನ್ ಡಾಲರ್ ಮೌಲ್ಯದ ರಾಗಿ ಮತ್ತು 194 ಮಿಲಿಯನ್ ಡಾಲರ್ ಮೌಲ್ಯದ ಬೇಳೆಕಾಳುಗಳನ್ನ ಆಮದು ಮಾಡಿಕೊಂಡಿದೆ. ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) ತನ್ನ ಇತ್ತೀಚಿನ ಅಧಿಸೂಚನೆಯಲ್ಲಿ ಬೇಳೆಕಾಳುಗಳು ಮತ್ತು ಕಡಲೆಗಳ ಉಚಿತ ಆಮದು ನೀತಿಯು ಮಾರ್ಚ್ 31, 2021 ರವರೆಗೆ ಮುಂದುವರಿಯುತ್ತದೆ ಎಂದು ಪ್ರಕಟಿಸಿದೆ. ಮತ್ತೊಂದು ಪ್ರತ್ಯೇಕ ಅಧಿಸೂಚನೆಯಲ್ಲಿ, ಸಂಸ್ಕರಿಸಿದ ಬ್ಲೀಚ್ಡ್ ಡಿಯೋಡರೈಸ್ಡ್ ತಾಳೆ ಎಣ್ಣೆ ಮತ್ತು ಪಾಮೋಲಿನ್’ಗಳ ಉಚಿತ ಆಮದುಗಳನ್ನ…
ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ( Prime Minister Narendra Modi ) ತಾಯಿ ಹೀರಾ ಬೇನ್ ಮೋದಿ ( Heeraben Modi )ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ. https://twitter.com/ANI/status/1608624053425958913 ಅಂದಹಾಗೇ ಅಹ್ಮದಾಬಾದ್ ನ ಆಸ್ಪತ್ರೆಗೆ ಅನಾರೋಗ್ಯದಿಂದಾಗಿ ಎರಡು ದಿನಗಳ ಹಿಂದೆ ಪ್ರಧಾನಿ ಮೋದಿಯವರ ತಾಯಿ ಹೀರಾಬೇನ್ ದಾಖಲಾಗಿದ್ದರು. ತಮ್ಮ ತಾಯಿಯ ಆರೋಗ್ಯವನ್ನು ಮೋದಿಯವರು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದ್ದರು. ಅವರ ಆರೋಗ್ಯ ಸುಧಾರಿಸುತ್ತಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿಯೂ ವೈದ್ಯರು ಹೇಳಿದ್ದರು. ಈ ಬೆನ್ನಲ್ಲೆ ಇದೀಗ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ. https://twitter.com/ANI/status/1608624053425958913
ನವದೆಹಲಿ : ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಕೇಂದ್ರೀಯ ಮೀಸಲು ಪೊಲೀಸ್ ಪಡೆ 1458 ಸಹಾಯಕ ಸಬ್-ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸ್ಟೇಬಲ್ (ಸಚಿವಾಲಯ) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಇದರಲ್ಲಿ 143 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು 1315 ಹೆಡ್ ಕಾನ್ಸ್ಟೆಬಲ್ ಹುದ್ದೆಗಳಿವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. ಇನ್ನು ಪುರುಷರಿಗೆ 165 ಸೆಂ.ಮೀ ಎತ್ತರ ಮತ್ತು ಮಹಿಳೆಯರಿಗೆ 155 ಸೆಂ.ಮೀ ಎತ್ತರ ಇರಬೇಕು. ಅಭ್ಯರ್ಥಿಗಳ ವಯಸ್ಸು ಜನವರಿ 25, 2023 ರಂತೆ 18 ರಿಂದ 25 ವರ್ಷಗಳ ನಡುವೆ ಇರಬೇಕು. ಅರ್ಹ ಅಭ್ಯರ್ಥಿಗಳು ಜನವರಿ 25, 2023 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅಪ್ಲಿಕೇಶನ್ಗಳು ಜನವರಿ 4, 2023 ರಿಂದ ಪ್ರಾರಂಭವಾಗುತ್ತವೆ. ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ 100 ರೂಪಾಯಿ…