Author: KNN IT TEAM

ಬೆಂಗಳೂರು: ಬಸವೇಶ್ವರರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳನ್ನು ವಿಧಾನಸೌಧದ ಎದುರು ಪ್ರತಿಷ್ಠಾಪಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆದಿದೆ. https://kannadanewsnow.com/kannada/good-news-for-ministerial-aspirants-cm-bommai-announces-soon-expansion-of-state-cabinet/ ಸಿಎಂ ಬಸವರಾಜ ಬೊಮ್ಮಾಯಿ ಅವರ ಸೂಚನೆಯಂತೆ ಕಂದಾಯ ಸಚಿವ ಆರ್. ಅಶೋಕ್ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ ಅವರು ಶನಿವಾರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀಲನಕ್ಷೆ ಪರಿಶೀಲಿಸಿ, ಸ್ಥಳಕ್ಕೆ ಜಂಟಿಯಾಗಿ ಭೇಟಿ ನೀಡಿ ತಪಾಸಣೆ ನಡೆಸಿದರು. https://kannadanewsnow.com/kannada/good-news-for-ministerial-aspirants-cm-bommai-announces-soon-expansion-of-state-cabinet/ ಬಸವಣ್ಣನವರ ಮತ್ತು ಕೆಂಪೇಗೌಡರ ಪ್ರತಿಮೆಗಳ ಮಾದರಿಯನ್ನು ಸಿದ್ಧಪಡಿಸಿ ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಸ್ಥಳ ನಿಗದಿಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿತ್ತು. ಅದರಂತೆ ಅವರು ಇಂದು ಸಿದ್ಧಪಡಿಸಿಕೊಂಡು ತಂದಿರುವ ನೀಲನಕ್ಷೆ ಮತ್ತು ಪ್ರತಿಮೆಗಳ ಮಾದರಿಗಳನ್ನು ಉಭಯ ಸಚಿವರೂ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

Read More

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜ.08 ರಂದು ಬ್ಯಾಂಕ್-1 ರ ಬ್ರೇಕರ್‍ಗಳ ಸ್ಥಳಾಂತರ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-17, ಎಂಸಿಎಫ್-18 & ಎಂಸಿಎಫ್-20 ಮಾರ್ಗಗಳ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತ್ರಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್, ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‍ಆರ್‍ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ 2022-23 ನೇ ಸಾಲಿನ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ, ಐಐಎಮ್, ಐಐಟಿ, ಐಐಎಸ್‍ಸಿ, ಐಐಐಟಿ ಗಳು, ಎನ್‍ಐಟಿ ಗಳು, ಐಐಎಸ್‍ಇಆರ್ ಗಳು,…

Read More

ಕೆಎನ್ಎನ್ಡಿಜಿಟಲ್ ಡೆಸ್ಕ್ : ರಾಷ್ಟ್ರೀಯ ಕೌಶಲ್ಯ ಭಾರತ ಮಿಷನ್ ಮೂಲಕ ಭಾರತೀಯ ಯುವಕರಿಗೆ ವೃತ್ತಿ ಮತ್ತು ಉದ್ಯೋಗಾವಕಾಶಗಳನ್ನ ಉತ್ತೇಜಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಉಪಕ್ರಮದ ಅಡಿಯಲ್ಲಿ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ (MSDE) ಜನವರಿ 9, 2023ರಂದು ಭಾರತದ 28 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 242 ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ಶಿಪ್ ಮೇಳವನ್ನ (PMNAM) ಆಯೋಜಿಸಿದೆ. ವಿವಿಧ ವಲಯಗಳಿಂದ ಸುಮಾರು ಒಂದು ಸಾವಿರ ಕಂಪನಿಗಳು ಈ ಅಪ್ರೆಂಟಿಸ್ಶಿಪ್ ಮೇಳದಲ್ಲಿ ಭಾಗವಹಿಸುತ್ತಿವೆ. ಈ ಕಂಪನಿಗಳು ಸ್ಥಳೀಯ ಯುವಕರಿಗೆ ಅಪ್ರೆಂಟಿಸ್ಶಿಪ್ ತರಬೇತಿ ಮತ್ತು ನುರಿತ ಅರ್ಜಿದಾರರಿಗೆ ಸ್ಥಳದಲ್ಲೇ ಉದ್ಯೋಗಗಳ ಮೂಲಕ ವೃತ್ತಿಜೀವನದಲ್ಲಿ ಸರಿಯಾದ ದಿಕ್ಕನ್ನ ಪಡೆಯುವ ಅವಕಾಶವನ್ನ ನೀಡುತ್ತವೆ. ಇದು ಯುವಕರಿಗೆ ಜೀವನೋಪಾಯದ ಜೊತೆಗೆ ಹೊಸ ಕೌಶಲ್ಯಗಳನ್ನ ಕಲಿಯುವ ಅವಕಾಶವನ್ನ ನೀಡುತ್ತದೆ. ಅಪ್ರೆಂಟಿಸ್ಶಿಪ್ ಮೇಳ: ಐದನೇ ತೇರ್ಗಡೆಯಿಂದ ಪದವಿವರೆಗೆ ಅರ್ಜಿ ಸಲ್ಲಿಸಿ.! 5 ರಿಂದ 12ನೇ ತರಗತಿಗಳಲ್ಲಿ ಉತ್ತೀರ್ಣರಾದ ಮತ್ತು ಕೌಶಲ್ಯ ತರಬೇತಿ ಪ್ರಮಾಣಪತ್ರಗಳನ್ನು ಹೊಂದಿರುವ ಅಥವಾ ಐಟಿಐ…

Read More

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸಭೆ ಆಗ ವಿಸ್ತರಣೆ ಆಗಲಿದೆ, ಈಗ ವಿಸ್ತರಣೆ ಆಗಲಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದ್ರೇ ಇನ್ನೂ ವಿಸ್ತರಣೆ ಆಗಿಲ್ಲ. ಇದೀಗ ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕೇಂದ್ರದ ನಾಯಕರೊಂದಿಗೆ ಚರ್ಚಿಸಲಾಗಿದೆ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ, ಸಂಪುಟ ವಿಸ್ತರಣೆಯ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು. ಮತ್ತೊಂದೆಡೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, 2-3 ದಿನಗಳಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ ಎಂದರು. https://kannadanewsnow.com/kannada/the-senior-manager-of-the-krimarakrupa-guest-house-who-was-giving-a-room-to-santro-ravi-passed-the-gate/ https://kannadanewsnow.com/kannada/smks-political-retirement-ct-ravi/ https://kannadanewsnow.com/kannada/karnataka-tableau-refuses-to-host-republic-day-parade-do-you-know-what-union-minister-pralhad-joshi-had-to-say-on-this/

Read More

ಶಿವಮೊಗ್ಗ: ಸ್ಯಾಂಟ್ರೋ ರವಿ ವಿರುದ್ಧ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸ್ಯಾಂಟ್ರೋ ರವಿ ಕೇಸ್ ಗಳ ಬಗ್ಗೆ ತನಿಖೆ ಕೈಗೊಳ್ಳಲಾಗುತ್ತದೆ. ಈ ಹಿಂದೆ ಸ್ಯಾಂಟ್ರೋ ರವಿ ವಿರುದ್ಧ ಗೂಂಡಾ ಕೇಸ್ ದಾಖಲಾಗಿದೆ ಎಂದರು. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಳಿ ಸ್ಯಾಂಟ್ರೋ ರವಿ ಬಗ್ಗೆ ಸಾಕಷ್ಟು ಮಾಹಿತಿ ಇದೆ. ಅವರ ಬಳಿ ಇರುವ ದಾಖಲೆಗಳನ್ನು ಪೊಲೀಸರಿಗೆ ನೀಡಿದರೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಸ್ಯಾಂಟ್ರೋ ರವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮೈಸೂರು ಕಮೀಷನರ್ ಗೆ ಸೂಚಿಸಲಾಗಿದೆ. ಅವರು ಈ ಬಗ್ಗೆ ಕ್ರಮವಹಿಸಲಿದ್ದಾರೆ ಎಂಬುದಾಗಿ ತಿಳಿಸಿದರು. ಮತ್ತೊಂದೆಡೆ ಸ್ಯಾಂಟ್ರೋ ರವಿಗೆ ಕುಮಾರಕೃಪಾ ಗೆಸ್ಟ್ ಹೌಸ್ ನೀಡಿದಂತ ಆರೋಪದಲ್ಲಿ ಸೀನಿಯರ್ ಮ್ಯಾನೇಜರ್ ಹೆಚ್ ಎಸ್ ದೇವರಾಜ್ ಅವರನ್ನು ವರ್ಗಾವಣೆಗೊಳಿಸಿ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಆದೇಶಿಸಿದೆ. https://kannadanewsnow.com/kannada/the-senior-manager-of-the-krimarakrupa-guest-house-who-was-giving-a-room-to-santro-ravi-passed-the-gate/ https://kannadanewsnow.com/kannada/smks-political-retirement-ct-ravi/

Read More

ಕಾಸರಗೋಡು (ಕೇರಳ): ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿದ ಬಳಿಕ ಯುವತಿ ಸಾವನ್ನಪ್ಪಿರುವ ಘಟನೆ ಕೇರಳದ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ಅಂಜು ಶ್ರೀಪಾರ್ವತಿ (20) ಎಂದು ಗುರುತಿಸಲಾಗಿದೆ. ಈಕೆ ಡಿ.31 ರಂದು ಕಾಸರಗೋಡಿನ ರೊಮ್ಯಾನ್ಸಿಯಾ ಎಂಬ ರೆಸ್ಟೊರೆಂಟ್‌ನಿಂದ ಆನ್‌ಲೈನ್‌ನಲ್ಲಿ’ಕುಜಿಮಂತಿ’ ಎಂಬೆಸರಿನ ಬಿರಿಯಾನಿ ಖಾದ್ಯವಾದ ಆರ್ಡರ್ ಮಾಡಿದ್ದರು. ಇದಾದ ನಂತರ ಯುವತಿ ಆರೋಗ್ಯದಲ್ಲಿ ಕೊಂಚ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಆಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಿಸದೆ ಯುವತಿ ಶನಿವಾರ ಬೆಳಗ್ಗೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದದಿದೆ. ಘಟನೆ ಸಂಬಂಧ  ಯುವತಿಯ ಪೋಷಕರು ದೂರು ನೀಡಿದ್ದು, ಪೊಲೀಸರು ಪ್ರಕರಣ ತನಿಖೆ  ಕೈಗೊಂಡಿದ್ದು, ವಿಧಿವಿಜ್ಞಾನ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ. ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು…

Read More

ಮೈಸೂರು: ಗಣರಾಜೋತ್ಸವ ಪರೇಡ್‍ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. https://kannadanewsnow.com/kannada/karnataka-tableau-refuses-to-host-republic-day-parade-do-you-know-what-union-minister-pralhad-joshi-had-to-say-on-this/ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಅಂತ ಕೇಳುತ್ತೇವೆ. ಈ ವರ್ಷವೂ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗಲಿದೆ ಎಂದರು. ಕಳೆದ 13 ವರ್ಷಗಳಿಂದ ಸತತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಮನ್ನಣೆ ನೀಡಿಲ್ಲ. ಈಗ 13 ವರ್ಷಗಳ ಬಳಿಕ ಕರ್ನಾಟಕ ಅವಕಾಶ ಕಳೆದುಕೊಂಡಿದ್ದು, ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಪ್ರತಿಬಾರಿ ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತ್ತು. ಹಲವು ಬಾರಿ ರಾಜ್ಯ ತಂಡ ಪ್ರಶಸ್ತಿಯನ್ನೂ ಗೆದ್ದಿತ್ತು. ಆದ್ರೀಗ ರಾಜ್ಯವನ್ನು ಕಡೆಗಣಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ

Read More

ಮಂಡ್ಯ : ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ರಾಜಕೀಯ ನಿವೃತ್ತಿ ನಂತರವೂ ಬಿಜೆಪಿ ಪಕ್ಷಕ್ಕೆ ಅವರ ಆಶೀರ್ವಾದ ಇರುತ್ತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಮದ್ದೂರು ಪಟ್ಟಣದ ಮಳವಳ್ಳಿ ರಸ್ತೆಯ ಬಿಜೆಪಿ ಕಛೇರಿಗೆ ಶುಕ್ರವಾರ ರಾತ್ರಿ ಭೇಟಿ ನೀಡಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಸ್.ಪಿ.ಸ್ವಾಮಿ ಹಾಗೂ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ವಯಸ್ಸು ಮತ್ತು ಆರೋಗ್ಯದ ಕಾರಣದಿಂದಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆದಿದ್ದಾರೆ. ರಾಷ್ಟ್ರ ಹಿತದ ರಾಜಕಾರಣವನ್ನು ಬಿಟ್ಟು ಅವರು ರಾಜಕಾರಣ ಮಾಡುವುದಿಲ್ಲ ಆಗಾಗಿ ರಾಷ್ಟ್ರದ ಹಿತವನ್ನು ಕಾಯುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ ಅವರ ಆಶೀರ್ವಾದ, ಬೆಂಬಲ ಸದಾ ಕಾಲ ಇರುತ್ತದೆ ಎಂದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರದ ಕೆಲ ಸಚಿವರ ಹಣೆಬರಹವನ್ನು ಬಿಡುಗಡೆ ಮಾಡುತ್ತೇನೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಮುಂದಿನ ದಿನಗಳಲ್ಲಿ ಯಾಕೇ ?…

Read More

ಚಿತ್ರದುರ್ಗ: ಕರ್ನಾಟಕ ಸ್ತಬ್ಧ ಚಿತ್ರವನ್ನು ಈ ಬಾರಿ ಗಣರಾಜ್ಯೋತ್ಸವ ಪರೇಡ್ ನಿಂದ ನಿರಾಕರಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಏನು ಹೇಳಿದರು ಅಂತ ಮುಂದೆ ಓದಿ. ಇಂದು ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಣರಾಜ್ಯೋತ್ಸವ ಪರೇಡ್ ಗೆ ಸ್ತಬ್ಧ ಚಿತ್ರ ಆಯ್ಕೆಗಾಗಿ ಒಂದು ನಿಯಮವಿದೆ. 13 ರಾಜ್ಯಗಳ ಸ್ತಬ್ದಚಿತ್ರವನ್ನು ಪ್ರತಿಬಾರಿ ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆ ಮಾಡಲಾಗುತ್ತದೆ ಎಂದರು. 36 ಸ್ತಬ್ಧ ಚಿತ್ರಗಳ ಪೈಕಿ 12 ಸ್ತಬ್ದ ಚಿತ್ರಗಳನ್ನು ಮಾತ್ರವೇ ಪ್ರತಿ ಬಾರಿ ಆಯ್ಕೆ ಮಾಡಲಾಗುತ್ತದೆ. ಇದನ್ನು ತಜ್ಞರ ಸಮಿತಿಯಿಂದ ಆಯ್ಕೆ ನಡೆಯುತ್ತದೆ. ನಾನು ಕೂಡ ರಾಜ್ಯದ ಸ್ತಬ್ದ ಚಿತ್ರಕ್ಕೆ ಅವಕಾಶ ಕಲ್ಪಿಸೋ ಪ್ರಯತ್ನ ನಡೆಸೋದಾಗಿ ತಿಳಿಸಿದರು. https://kannadanewsnow.com/kannada/h-s-devaraj-assistant-manager-of-kumarakrupa-guest-house-has-been-transferred-by-the-state-government/ https://kannadanewsnow.com/kannada/pagal-lover-who-used-to-be-harassed-by-preetse-preetse-young-woman-commits-suicide/

Read More

ಮುಂಬೈ :  ದೆಹಲಿಯಿಂದ ಜಾರ್ಖಾಂಡಿಗೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಭಾರತೀಯ ಕ್ರಿಕೆಟರ್ ರಿಷಬ್ ಪಂತ್ ನಿನ್ನೆ (ಜನವರಿ.06) ರಂದು ಮಧ್ಯಾಹ್ನ ಡಾ ಪರ್ದಿಲ್‌ವಾಲಾ ಮತ್ತು ತಂಡದಿಂದ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕ್ರಿಕೆಟರ್ ರಿಷಬ್ ಪಂತ್ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 3 ರಿಂದ 4 ದಿನಗಳ ಕಾಲ ಪಂತ್ ಅವರನ್ನು ನಿಗಾ ಇಡಲು ನಿರ್ಧರಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೊಣಕಾಲಿನ ಅಸ್ಥಿರಜ್ಜು ಗಾಯಕ್ಕೆ ಆರಂಭಿಕ ಚಿಕಿತ್ಸೆಯ ನಂತರ  ರಿಷಬ್ ಪಂತ್ ಅವರನ್ನು ಡೆಹ್ರಾಡೂನ್‌ನಿಂದ ಮುಂಬೈಗೆ ಏರ್ ಲಿಫ್ಟ್ ಮಾಡಲಾಗಿತ್ತು. ಆಟಗಾರ ತನ್ನ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. https://kannadanewsnow.com/kannada/h-s-devaraj-assistant-manager-of-kumarakrupa-guest-house-has-been-transferred-by-the-state-government/ https://kannadanewsnow.com/kannada/pagal-lover-who-used-to-be-harassed-by-preetse-preetse-young-woman-commits-suicide/ https://kannadanewsnow.com/kannada/gunfire-sounded-in-kalaburagi-firing-near-check-post-in-broad-daylight-over-old-enmity/

Read More