Author: KNN IT TEAM

ಬೆಂಗಳೂರು : ನಾಗರೀಕರು ಚುನಾವಣಾ ಪ್ರಕ್ರಿಯೆಯಲ್ಲಿ ಸುಲಭವಾಗಿ ಭಾಗವಹಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಜಾರಿಗೆ ತಂದಿರುವ ಚುನಾವಣಾ ಸುಧಾರಣೆಗಳನ್ನು ಇಂದು ದೇಶದಾದ್ಯಂತ ಚಾಲನೆ ನೀಡಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಸುಧಾರಣೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯ ಕಾರ್ಯದರ್ಶಿಗಳು, ಚುನಾವಣಾ ಸುಧಾರಣೆಗಳ ಕುರಿತು ರಾಜ್ಯದ ಜನತೆಗೆ ಅರಿವು ಮೂಡಿಸಬೇಕು. ಚುನಾವಣಾ ಸುಧಾರಣೆಗಳನ್ನು ಕಾರ್ಯಗತಗೊಳಿಸಿದರೆ ನಮ್ಮ ರಾಜ್ಯಕ್ಕೆ ಒಳ್ಳೆಯ ಹೆಸರು ಬರುತ್ತದೆ. ಆದ್ದರಿಂದ ಮೊದಲು ಸರ್ಕಾರಿ ನೌಕರರಾದ ನಾವು ಮತದಾರರ ಪಟ್ಟಿಯಲ್ಲಿ ಹೆಸರು ನಮೂದಿಸಬೇಕು ನಂತರ ಜನತೆಗೆ ಪ್ರಚಾರ ಮಾಡಬೇಕು. ಆಧಾರ್ ಜೋಡಣೆಯಾದರೆ ಯಾರೂ ಮೋಸ ಮಾಡಲು ಸಾಧ್ಯವಿಲ್ಲ. ಮತದಾನ ನಮ್ಮ ಕರ್ತವ್ಯವಾಗಿದ್ದು, ಮತದಾನ ಮಾಡಲು ಪ್ರೇರಣೆ ಮಾಡಬೇಕು ಎಂದರು. https://kannadanewsnow.com/kannada/arrangements-have-been-made-to-bring-special-opportunities-and-concessions-to-bhovi-kulakasubi-cm-basavaraj-bommai/ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಮಾತನಾಡಿ, ಚುನಾವಣಾ ಸುಧಾರಣೆಯಲ್ಲಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಯುವ ಸಮುದಾಯಕ್ಕೆ ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ. ಮೊದಲಿನಂತೆ ಜನವರಿ 1ರ ವರೆಗೂ ಹಾಗೂ 18…

Read More

ಬೆಂಗಳೂರು: ಬಿಎಂಟಿಸಿಯಿಂದ ( BMTC ) 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ( Jayadeva Hospital ) ಹೃದಯ ತಪಾಸಣೆಗಾಗಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಮೂಲಕ ಹೃದಯ ರೋಗದಿಂದ ಬಳಲುತ್ತಿದ್ದಂತ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/arrangements-have-been-made-to-bring-special-opportunities-and-concessions-to-bhovi-kulakasubi-cm-basavaraj-bommai/ ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಾಹಿತಿ ನೀಡಿದ್ದು, ಸಂಸ್ಥೆಯು ಅಧಿಕಾರಿಗಳು, ನೌಕರರ ಆರೋಗ್ಯದ ಅನುಕೂಲಕ್ಕಾಗಿ ಪ್ರತಿಷ್ಠಿತ ಆಸ್ಪತ್ರೆಗಳ ಸಹಯೋದಗದಲ್ಲಿ ಆರೋಗ್ಯ ತಪಾಸಣೆ ( Health Checkup ) ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದೆ. https://kannadanewsnow.com/kannada/state-government-issues-guidelines-for-monkeypox-infection-control-adherence-to-these-rules-mandatory/ ನೌಕರರ ಆರೋಗ್ಯದ ಹಿತದೃಷ್ಠಿಯಿಂದ, ಇದೀಗ ಮುಂದುವರೆದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಬಿಎಂಟಿಸಿಯ 45 ವರ್ಷ ಮೇಲ್ಪಟ್ಟ ನೌಕರರು, ಅಧಿಕಾರಿಗಳಿಗೆ ಹೃದಯರೋಗ ತಪಾಸಣಾ ಪರೀಕ್ಷೆಗಳನ್ನು ಮಾಡಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ. https://kannadanewsnow.com/kannada/chakravarthy-sulibele-insults-karnataka-ratna-puneeth-rajkumar/ ಈ ಹಿನ್ನಲೆಯಲ್ಲಿ ಇನ್ಮುಂದೆ ಬಿಎಂಟಿಸಿಯ 45 ವರ್ಷ ಮೇಲ್ಪಟ್ಟ ನೌಕರರಿಗೆ ಹೃದ್ರೋಗ ಸಮಸ್ಯೆ ಉಂಟಾದಲ್ಲಿ, ತೊಂದರೆ ಆದಲ್ಲಿ ಜಯದೇವ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆಲಳ್ಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ( Accident ) ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ , ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಮೃತ ನಾಲ್ವರೂ ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಓಮ್ನಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಯನ್ನು ತೋರಿಸುತಿತ್ತು. ಚನ್ನಗಿರಿಯಿಂದ ಜೋಗ ಜಲಪಾತ ನೋಡಲೆಂದು ಚನ್ನಗಿರಿಯಿಂದ ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

Read More

ಕೊಪ್ಪಳ : ಆಂಜನೇಯ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲಿ ಎನ್ನುವುದಕ್ಕೆ ಐತಿಹಾಸಿಕವಾಗಿ ಸಾವಿರಾರು ವರ್ಷಗಳಿಂದ ಇದು ಕಿಷ್ಕಿಂದೆಯಾಗಿತ್ತು ಎನ್ನುವ ನಂಬಿಕೆಗಿಂತ ಇನ್ನೊಂದು ಪುರಾವೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. https://kannadanewsnow.com/kannada/shimoga-one-killed-7-in-critical-condition-after-bus-car-collision/ ಇಂದು ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಆಂಜನೇಯನ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿವೆ. ಮೂಲತ: ಆಂಜನೇಯ ಹುಟ್ಟಿದ್ದು, ಅಂಜನಾದ್ರಿ ಬೆಟ್ಟದಲ್ಲಿಯೇ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಈ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಬೆಟ್ಟವನ್ನು ಸ್ಥಳವನ್ನು ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದೇವೆ. ಈ ಕುರಿತು ಕರ್ನಾಟಕ, ಆಂಧ್ರಪ್ರದೇಶ ಬೇರೆ ಬೇರೆಯಾಗಿ ಘೋಷಣೆ ಮಾಡಬೇಕಿಲ್ಲ. ಇಡೀ ಭಾರತವಾಸಿಗಳು ಈ ವಿಷಯವನ್ನು ನಂಬಿದ್ದಾರೆ ಹಾಗೂ ಎಲ್ಲರಿಗೂ ವಿಶ್ವಾಸವಿದೆ ಎಂದರು. https://kannadanewsnow.com/kannada/legendary-ntrs-daughter-passes-away/ ಆರಾಧ್ಯ ದೈವ ಆಂಜನೇಯ ಸ್ವಾಮಿಯ ಜನ್ಮಸ್ಥಳದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಬಜೆಟ್‍ನಲ್ಲಿ ಮಾಡಿದ್ದ ಘೋಷಣೆ ಮಾಡಲಾಗಿತ್ತು. ಪ್ರತಿ ವರ್ಷ ಬಹಳಷ್ಟು ಯಾತ್ರಿಕರು ಆಗಮಿಸುತ್ತಾರೆ. ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆಯಾಗಬೇಕು ಎಂಬ ಉದ್ದೇಶವಿದೆ. ಅಂಜನಾದ್ರಿ ಬೆಟ್ಟದ ಕೆಳಗೆ ಹಾಗೂ ಮೇಲೆಯೂ…

Read More

ದಾವಣಗೆರೆ: ಪರಿಸರದ ಕಾನೂನಿನಡಿಯಲ್ಲಿ ಸೂಕ್ತ ತಿದ್ದುಪಡಿ ತರುವ ಮೂಲಕ ಭೋವಿ ಸಮುದಾಯದ ಪಾರಂಪರಿಕ ಕುಲಕಸುಬನ್ನು ನಡೆಸಲು ವಿಶೇಷ ಅವಕಾಶ ಹಾಗೂ ರಿಯಾಯ್ತಿಗಳನ್ನು ತರುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು ತಿಳಿಸಿದರು. https://kannadanewsnow.com/kannada/state-government-issues-guidelines-for-monkeypox-infection-control-adherence-to-these-rules-mandatory/ ಇಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭೋವಿ ಸಮಾಜಕ್ಕೆ ತನ್ನ ಕುಲಕಸುಬನ್ನು ಮಾಡಲು ಹಲವು ಕಾನೂನಾತ್ಮಕ ತೊಂದರೆಗಳಿವೆ. ಪರಿಹಾರಗಳು ತಾತ್ಕಾಲಿಕ ಹಾಗೂ ಸ್ಥಾನಿಕವಾಗಿವೆ. ಕಾನೂನಿನ ನೆಪದಲ್ಲಿ ಅಧಿಕಾರಿಗಳ ಕಿರುಕುಳ ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕಾನೂನನ್ನು ರಚಿಸುವಾಗ ಯಾವುದೇ ಸಮುದಾಯಗಳಿಗೆ ತೊಂದರೆಯಾಗದಂತೆ ಕಾನೂನನ್ನು ರೂಪಿಸಬೇಕು. ಬರುವ ತಿಂಗಳಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಈ ಕಾನೂನಿಗೆ ತಿದ್ದುಪಡಿ ತಂದು ಭೋವಿ ಜನಾಂಗದ ಕುಲಕಸುಬಿಗೆ ವಿಶೇಷ ಅವಕಾಶಗಳನ್ನು ರಿಯಾಯ್ತಿಗಳನ್ನು ನೀಡಲಾಗುವುದು ಎಂದರು. https://kannadanewsnow.com/kannada/legendary-ntrs-daughter-passes-away/ ಸಮತೋಲನದ ಸಮೃದ್ಧಿಯ ರಾಜ್ಯ ನಿರ್ಮಾಣ  ಗುರುಪೀಠವು ಸಮಾಜವನ್ನು ಒಗ್ಗೂಡಿಸಿ ಏಳಿಗೆಯ…

Read More

ನವದೆಹಲಿ: ಭಾರತದ ಮೊಟ್ಟಮೊದಲ 5ಜಿ ತರಂಗಾಂತರಗಳ ಹರಾಜಿನಲ್ಲಿ ಮಾರಾಟಕ್ಕೆ ಇರಿಸಲಾದ ಒಟ್ಟು ಸ್ಪೆಕ್ಟ್ರಂನ ಶೇ.71ರಷ್ಟು ಭಾಗವನ್ನು ಸರ್ಕಾರ ಮಾರಾಟ ಮಾಡಿದ್ದು, 1,50173 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ದೂರಸಂಪರ್ಕ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ಬ್ಲಾಕ್ ನಲ್ಲಿರುವ ಒಟ್ಟು 72.098 ಗಿಗಾಹರ್ಟ್ಸ್ ತರಂಗಾಂತರಗಳ ಪೈಕಿ, ನಾಲ್ಕು ಬಿಡ್ಡರ್ ಗಳಲ್ಲಿ 51.236 ಗಿಗಾಹರ್ಟ್ಸ್ ಅನ್ನು ತೆಗೆದುಕೊಳ್ಳಲಾಗಿದೆ. ಹರಾಜಿನಿಂದ ಒಟ್ಟು 1,50,173 ಕೋಟಿ ರೂ ಸಂಗ್ರಹ ಮಾಡಲಾಗಿದೆ. ಹರಾಜಿನ ಮುಕ್ತಾಯದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್, “ಖರೀದಿಸಿದ ಸ್ಪೆಕ್ಟ್ರಮ್ ದೇಶದ ಎಲ್ಲಾ ವಲಯಗಳನ್ನು ಒಳಗೊಳ್ಳುವಷ್ಟು ಉತ್ತಮವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. 2-3 ವರ್ಷಗಳಲ್ಲಿ, 5ಜಿಗೆ ಉತ್ತಮ ಕವರೇಜ್ ನೀಡುತ್ತದೆ ಅಂತ ಹೇಳಿದ್ದಾರೆ.

Read More

ಬೆಂಗಳೂರು: ವಿಶ್ವದಾದ್ಯಂತ ಕೊರೋನಾ ಬಳಿಕ, ಈಗ ಮಂಕಿಪಾಕ್ಸ್ ಸೋಂಕು ( Monkeypox Case ) ಆರ್ಭಟಿಸುತ್ತಿದೆ. ನೆರೆಯ ಕೇರಳದಲ್ಲಿ ಮಂಕಿಪಾಕ್ಸ್ ಕೇಸ್ ಪತ್ತೆಯಾದ ನಂತ್ರ, ರಾಜ್ಯ ಸರ್ಕಾರದಿಂದ ಕರ್ನಾಟಕದಲ್ಲಿ ಸೋಂಕಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ. https://kannadanewsnow.com/kannada/shimoga-one-killed-7-in-critical-condition-after-bus-car-collision/ ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಮಂಕಿಪಾಕ್ಸ್ ಸರ್ವೇಕ್ಷಣೆಗಾಗಿ ಹೆಚ್ಚಿನ ಮಟ್ಟದ ಪೂರ್ವಸಿದ್ಧತೆಯನ್ನು ಮಾಡಿಕೊಳ್ಳಲು ಈ ಕೆಳಕಂಡ ಮಾರ್ಗಸೂಚಿ ಕ್ರಮಗಳನ್ನು ಕೂಡಲೇ ಕೈಗೊಂಡಿರುವುದನ್ನು ಖಚಿತ ಪಡಿಸಿಕೊಳ್ಳಲು ಸೂಚನೆಯನ್ನು ನೀಡಲಾಗಿದೆ ಎಂದಿದ್ದಾರೆ. https://kannadanewsnow.com/kannada/legendary-ntrs-daughter-passes-away/ ಇನ್ನೂ ಹೆಚ್ಚಿನ ಸರ್ವೇಕ್ಷಣೆಯನ್ನು ಜಿಲ್ಲೆಗಳು ಕೈಗೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿ, ಈ ಕೆಳಕಂಡ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ. ಮಂಕಿಪಾಕ್ಸ್ ಪ್ರತಿಯೊಂದು ಪ್ರಕರಣವನ್ನು ವರದಿಯಾಡುವುದು ತ್ವರಿತ ಪ್ರಕ್ರಿಯಾತಂಡದ ವಿವರವಾದ ತನಿಖೆ, ಮಾದರಿ ಸಂಗ್ರಹ ಮತ್ತು ಐಹೆಚ್ಐಪಿ ಪೋರ್ಟಲ್ ನಲ್ಲಿ ವರದಿ ಮಾಡಿದ ನಂತ್ರ ರಾಜ್ಯಕ್ಕೆ ವರದಿ ಮಾಡತಕ್ಕದ್ದು ಪ್ರಕರಣ ವರದಿ ಮಾಡುವ ಪ್ರಪತ್ರವನ್ನು ಸಂಪೂರ್ಣ ಭರ್ತಿ…

Read More

ದಾವಣಗೆರೆ: ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸೋಮವಾರ ನಗರದಲ್ಲಿ ಆಯೋಜಿಸಲಾಗಿದ್ದ ಸಿದ್ದರಾಮೇಶ್ವರ ರಥಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಜಿಎಂಐಟಿ ಕಾಲೇಜಿನ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಂಕಿಪಾಕ್ಸ್ ಸೋಂಕು ತಡೆಯುವ ಕುರಿತಂತೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಮಂಕಿಪಾಕ್ಸ್ ಕುರಿತಂತೆ ಕೆಲವು ನಿರ್ದೇಶನಗಳನ್ನು ಜಾರಿ ಮಾಡಲು ಹಾಗೂ ಪ್ರಯೋಗಾಲಯ ಸಿದ್ಧತೆ ಕುರಿತಂತೆ ನಾಳೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆಯಲಾಗಿದ್ದು ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಜಿ.ಎಂ ಸಿದ್ದೇಶ್ವರ, ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಸಚಿವ ಡಾ.ಕೆ ಸುಧಾಕರ್, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ…

Read More

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆಲಳ್ಳಿಯಲ್ಲಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ( Accident ) ಸಂಭವಿಸಿದೆ. ಈ ಅಪಘಾತದಲ್ಲಿ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದರೇ, ಮತ್ತೆ ಐವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/good-news-for-failed-ii-pu-students-date-for-payment-of-supplementary-examination-fee-extended/ ಶಿವಮೊಗ್ಗದ ಸಾಗರದ ತಾಳಗುಪ್ಪ ಬಳಿಯ ಅಲಳ್ಳಿ ಶಿರೂರು ಬಳಿಯಲ್ಲಿ ಖಾಸಗಿ ಬಸ್ ಹಾಗೂ ಮಾರುತಿ ಇಕೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಕಾರಿನ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೇ.. ಮತ್ತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. https://kannadanewsnow.com/kannada/legendary-ntrs-daughter-passes-away/ ಅಂದಹಾಗೇ ಕಾರಿನಲ್ಲಿದ್ದವರು ಚೆನ್ನಗಿರಿ ಮೂಲದವರು ಎಂದು ತಿಳಿದು ಬಂದಿದೆ. ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ರೇ, ಕಾರಿನಲ್ಲಿದ್ದಂತ ಇತರೆ 7 ಮಂದಿ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿ, ಮರುಮೌಲ್ಯಮಾಪನ ಮತ್ತು ಮರುಎಣಿಕೆ ಪ್ರಕ್ರಿಯೆಯಲ್ಲಿಯೂ ಅನುತ್ತೀರ್ಣರಾಗಿರುವಂತ ವಿದ್ಯಾರ್ಥಿಗಳು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟೋದಕ್ಕೆ, ದಿನಾಂಕವನ್ನು ವಿಸ್ತರಿಸಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/chakravarthy-sulibele-insults-karnataka-ratna-puneeth-rajkumar/ ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ದಿನಾಂಕ 31-07-2022ರಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ ಮ್ತತು ಮರುಎಣಿಕೆಯ ಫಲಿತಾಂಶವನ್ನು ಪ್ರಕಟಿಸಲಾಗಿತ್ತು ಎಂದಿದ್ದಾರೆ. https://kannadanewsnow.com/kannada/legendary-ntrs-daughter-passes-away/ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮಾತ್ರ ಆಗಸ್ಟ್ 2022ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಈ ಹಿಂದಿನ ದಂಡ ಶುಲ್ಕದೊಂದಿಗೆ ನಿಗಧಿತ ಪರೀಕ್ಷಾ ಶುಲ್ಕವನ್ನು ಪಾವತಿಸಲು ದಿನಾಂಕ 02-08-2022 ರಿಂದ 04-08-2022ರವರೆಗೆ ವಿಸ್ತರಿಸಿರೋದಾಗಿ ತಿಳಿಸಿದ್ದಾರೆ.

Read More