Author: KNN IT TEAM

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷವೇ ರಾಜ್ಯದ ಯಾದಗಿರಿ ಮತ್ತು ಹಾವೇರಿ ಜಿಲ್ಲೆಗಳ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಎಂಬಿಬಿಎಸ್ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ಆರೋಗ್ಯಯ ಅಯೋಗ ಅನುಮತಿ ನೀಡಿದೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಹಾವೇರಿ ಮತ್ತು ಯಾದಗಿರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮುಂಬರುವ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (NMC) ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ. https://twitter.com/mla_sudhakar/status/1552647131697008640 https://twitter.com/mla_sudhakar/status/1552631990838767616

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್:‌ ಇತ್ತೀಚಿನ ದಿನಗಳಲ್ಲಿ ನಾವು ಸೇವಿಸೋ  ಆಹಾರ ಮತ್ತು ಜೀವನಶೈಲಿ ಹದಗೆಡುತ್ತಿದೆ. ಇದರಿಂದಾಗಿ ಫಿಟ್ ನೆಸ್ ಕಾಪಾಡಿಕೊಳ್ಳುವುದು ತುಂಬಾ ಕಷ್ಟಕರವಾಗಿದೆ. ಕಳಪೆ ಫಿಟ್ ನೆಸ್ ನಿಂದಾಗಿ, ದೈಹಿಕ ನೋವು, ನಿದ್ರೆಯ ಕೊರತೆ, ದುರ್ಬಲ ರೋಗನಿರೋಧಕ ಶಕ್ತಿ ಮತ್ತು ಮಾನಸಿಕ ಸಮಸ್ಯೆಗಳಂತಹ ರೋಗಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. https://kannadanewsnow.com/kannada/encounter-between-terrorists-security-forces-in-jammu-and-kashmirs-baramulla-area/ ನಿಮ್ಮ ದೇಹವು ಫಿಟ್ ಆಗಿದೆಯೇ? ಈ ಸುಲಭ ಪರೀಕ್ಷೆಗಳ ಮೂಲಕ, ನೀವು ನಿಮ್ಮ ಫಿಟ್ ನೆಸ್ ಮಟ್ಟವನ್ನು ಪರಿಶೀಲಿಸಬಹುದು. ಫಿಟ್ ನೆಸ್ ಟೆಸ್ಟ್: ಈ ಸುಲಭ ಪರೀಕ್ಷೆಗಳೊಂದಿಗೆ ನಿಮ್ಮ ಫಿಟ್ ನೆಸ್ ಮಟ್ಟವನ್ನು ತಿಳಿದುಕೊಳ್ಳಿ ನಿಮ್ಮ ಫಿಟ್ನೆಸ್ ಮಟ್ಟವನ್ನು ತಿಳಿಯಲು ನೀವು ಮನೆಯಲ್ಲಿ ಕೆಲವು ಸರಳ ಪರೀಕ್ಷೆಗಳನ್ನು ಮಾಡಬಹುದು. ಈ ಪರೀಕ್ಷೆಗಳಲ್ಲಿನ ವೈಫಲ್ಯವನ್ನು ಕಳಪೆ ಫಿಟ್ ನೆಸ್ ನ ಲಕ್ಷಣವಾಗಿಯೂ ನೋಡಬಹುದು. ಫಿಟ್ ನೆಸ್ ಟೆಸ್ಟ್ – ಮೆಟ್ಟಿಲುಗಳನ್ನು ಹತ್ತುವುದು ಮೆಟ್ಟಿಲುಗಳನ್ನು ಹತ್ತುವುದು ಬಹಳ ಹಗುರವಾದ ವ್ಯಾಯಾಮ ಮತ್ತು ಚಟುವಟಿಕೆಯಾಗಿದೆ. ಇದನ್ನು ಮಾಡುವಾಗ, ನೀವು ಉಸಿರಾಡಬಾರದು. ಆದ್ದರಿಂದ, ನಿಮ್ಮ ಫಿಟ್ನೆಸ್ ಅನ್ನು ತಿಳಿಯಲು,…

Read More

ನವದೆಹಲಿ : ಆಗಸ್ಟ್ 1 ರಿಂದ ನಿಮಗೆ ಸಂಬಂಧಿಸಿದ ಅನೇಕ ನಿಯಮಗಳು ಬದಲಾಗಲಿವೆ. ಈ ನಿಯಮಗಳಲ್ಲಿನ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತವೆ. ಪ್ರತಿ ಬಾರಿಯಂತೆ, ಈ ಬಾರಿಯೂ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆಯ ಜೊತೆಗೆ, ಚೆಕ್ ಮೂಲಕ ಪಾವತಿಸುವ ವ್ಯವಸ್ಥೆಯೂ ಬದಲಾಗಲಿದೆ. ಆಗಸ್ಟ್ 1 ರ ಮೊದಲ ದಿನ, ಪ್ರತಿ ತಿಂಗಳಂತೆ, ಈ ಬಾರಿಯೂ ಕೆಲವು ಬದಲಾವಣೆಗಳು ಸಂಭವಿಸಲಿವೆ. ಅನಿಲದ ಬೆಲೆಯನ್ನು ಹೊರತುಪಡಿಸಿ, ಇದು ಬ್ಯಾಂಕಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕೆಲವು ನವೀಕರಣಗಳನ್ನು ಸಹ ಒಳಗೊಂಡಿದೆ. ನಿಯಮಗಳಲ್ಲಿನ ಬದಲಾವಣೆಗಳು ನಿಮ್ಮ ಮೇಲೆ ನೇರ ಪರಿಣಾಮ ಬೀರುತ್ತವೆ. ಇದಲ್ಲದೆ, ಬ್ಯಾಂಕುಗಳು ಪ್ರತಿ ತಿಂಗಳುಗಳಿಗಿಂತ ಈ ತಿಂಗಳು ಹೆಚ್ಚು ರಜಾದಿನಗಳನ್ನು ಹೊಂದಿರುತ್ತವೆ. ಆಗಸ್ಟ್ 1 ರಿಂದ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳೋಣ… ಬ್ಯಾಂಕ್ ಆಫ್ ಬರೋಡಾ ಚೆಕ್ ಪಾವತಿ ವ್ಯವಸ್ಥೆ ಈ ಆಗಸ್ಟ್ 1 ರಿಂದ, ಬ್ಯಾಂಕ್ ಆಫ್ ಬರೋಡಾ (ಬಿಒಬಿ) ನಲ್ಲಿ ಚೆಕ್ ಮೂಲಕ ಪಾವತಿಯ ನಿಯಮಗಳು ಬದಲಾಗಲಿವೆ. ಆರ್ ಬಿಐ…

Read More

ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/bigg-news-department-of-public-instruction-orders-extension-of-admission-date-for-all-primary-and-secondary-schools-in-the-state/ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಅರ್ಹ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ www.tw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಜಿಲ್ಲಾಡಳಿತ ಭವನ, ಹರಿಹರ ರಸ್ತೆ ಅಥವಾ ದೂ.ಸಂ 08192-26354 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/bigg-news-bjp-leader-praveen-nettarus-murder-case-handed-over-to-nia-cm-bommai/

Read More

ನವದೆಹಲಿ:  ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ (ಜುಲೈ 30, 2022) ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಜಿಲ್ಲೆಯ ಕ್ರಿರಿ ಪ್ರದೇಶದ ವಾನಿಗಮ್ ಬಾಲಾದಲ್ಲಿ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. https://twitter.com/KashmirPolice/status/1553157102033842176?ref_src=twsrc%5Etfw%7Ctwcamp%5Etweetembed%7Ctwterm%5E1553157102033842176%7Ctwgr%5Ec47335e9fca0e34bba9730b77b645887cf5d4d56%7Ctwcon%5Es1_c10&ref_url=https%3A%2F%2Fzeenews.india.com%2Findia%2Fencounter-breaks-out-between-terrorists-security-forces-in-jammu-and-kashmir-s-baramulla-2490998.html

Read More

ಬೆಂಗಳೂರು : ಸುಳ್ಯದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ತಿಳಿಸಿದರು. https://kannadanewsnow.com/kannada/bigg-news-department-of-public-instruction-orders-extension-of-admission-date-for-all-primary-and-secondary-schools-in-the-state/ ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  ಬೆಂಗಳೂರಿನ ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ. ಕೇರಳ ಗಡಿಯಲ್ಲಿ ಎರಡು ರಾಜ್ಯಗಳ ಸಂಪರ್ಕಿಸುವ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ, ಚೆಕ್ ಪೋಸ್ಟ್ ಗಳನ್ನು ಹಾಕಲಾಗುವುದು. ಸೂಕ್ಷ್ಮ ಊರುಗಳಲ್ಲಿ ತಾತ್ಕಾಲಿಕ ಪೋಲಿಸ್ ಕ್ಯಾಂಪ್‍ಗಳು, ಹಲವಾರು ಖಾಲಿ…

Read More

ಬೆಂಗಳೂರು : ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾರ್ಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಪ್ರಸ್ತುತ 2022-23 ನೇ ಸಾಲಿನ ಶೈಕ್ಷಣಿ ವರ್ಷದ ದಾಖಲಾತಿ ಪ್ರಕ್ರಿಯೆ ಅಂತಿಮ ದಿನಾಂಕ ವಿಸ್ತರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. https://kannadanewsnow.com/kannada/bigg-news-har-ghar-tiranga-abhiyan-important-information-for-state-government-employees/ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾರ್ಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಪ್ರಸ್ತುತ 2022-23 ನೇ ಸಾಲಿನ ಶೈಕ್ಷಣಿ ವರ್ಷದ ದಾಖಲಾತಿ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಲು ದಿನಾಂಕ 31-07-2022 ರ ವರೆಗೆ ಅಂತಿಮಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇನ್ನೂ ಕೆಲವು ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಹಾಗೂ ಪ್ರಸ್ತುತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ಹೊಸದಾಗಿ ಶಾಲೆಗಳ ನೋಂದಣಿಗೆ ಕಾಲಾವಕಾಶವನ್ನು ದಿನಾಂಕ 30-07-2022 ರವರೆಗೆ ವಿಸ್ತರಿಸಿ ನಿಗಧಿಪಡಿಸಿರುವುದರಿಂದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಾಲಾ ದಾಖಲಾತಿಯನ್ನು ದಿನಾಂಕ 10-08-2022 ರವರೆಗೆ ವಿಸ್ತರಿಸಲಾಗಿದೆ.  

Read More

ದಕ್ಷಿಣಕನ್ನಡ :  ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಿಂದಾಗಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶನಿವಾರ ಇಂದು ಮಂಗಳೂರು ಉಪ ವಿಭಾಗದಾದ್ಯಂತ ರಜೆ ಘೋಷಣೆ ಮಾಡಲಾಗಿದೆ.‌ https://kannadanewsnow.com/kannada/high-alert-declared-in-chikmagalur-checking-of-tourists-out-of-district-vehicles/ ನಗರ ಪಾಲಿಕೆ, ಮುಲ್ಕಿ, ಮೂಡಬಿದಿರೆ, ಉಳ್ಳಾಲ, ಬಂಟ್ವಾಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಫ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಪುತ್ತೂರು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. https://kannadanewsnow.com/kannada/high-alert-declared-in-chikmagalur-checking-of-tourists-out-of-district-vehicles/

Read More

ಹೊಸಪೇಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 2022-23ನೇ ಸಾಲಿನ ಕಿರುಸಾಲ ಮತ್ತು ಉದ್ಯೋಗಿನಿ (ಮಹಿಳೆಯರಿಗೆ ಸ್ವ-ಉದ್ಯೋಗಕ್ಕಾಗಿ ಬ್ಯಾಂಕ್‍ಗಳ ಮೂಲಕ ಸಾಲ ಪಡೆಯುವ) ಯೋಜನೆಯಡಿಯಲ್ಲಿ ಎಲ್ಲಾ ಜಾತಿಯ ಮಹಿಳಾ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಹೊಸಪೆಟೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bigg-news-har-ghar-tiranga-abhiyan-important-information-for-state-government-employees/ ಉದ್ಯೋಗಿನಿ ಯೋಜನೆಯಲ್ಲಿ ಉದ್ಯೋಗ ಮಾಡುವ ಅರ್ಹ ಫಲಾನುಭವಿಗಳಿಗೆ ಸಾಲ ನೀಡುವ ಯೋಜನೆಯಾಗಿದ್ದು, ಉದ್ಯೋಗಿನಿ ಯೋಜನೆಗೆ-4 ಮತ್ತು ಕಿರುಸಾಲಕ್ಕೆ -1 ಗುರಿಗಳನ್ನು ನಿಗಧಿಪಡಿಸಲಾಗಿದೆ. ಅರ್ಜಿ ಸಲ್ಲಿಸುವ ಫಲಾನುಭವಿಗಳು ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು, ಆಸಕ್ತರು ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನೆ ಕಚೇರಿಯಲ್ಲಿ ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಇದೆ ಕಚೇರಿಗೆ ಆ.12ರೊಳಗಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/high-alert-declared-in-chikmagalur-checking-of-tourists-out-of-district-vehicles/ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹೊಸಪೇಟೆ ಇವರಿಗೆ ಸಂಪರ್ಕಿಸಬಹುದಾಗಿದೆ.

Read More

ಬೆಂಗಳೂರು :  ಆಗಸ್ಟ್ 13 ರಿಂದ 15 ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ. https://kannadanewsnow.com/kannada/high-alert-declared-in-chikmagalur-checking-of-tourists-out-of-district-vehicles/   ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಕುರಿತು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.   ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಇಡೀ ದೇಶಕ್ಕೆ ಮಾದರಿಯಾಗಲು ರಾಜ್ಯ ಸರ್ಕಾರಿ ನೌಕರರಿಗೆ ಇದೊಂದು ಸದಾವಕಾಶ ಎಂದು ಅವರು ಬಣ್ಣಿಸಿದ್ದಾರೆ.   ರಾಷ್ಟ್ರದೆಲ್ಲೆಡೆಯಂತೆ, ರಾಜ್ಯದಲ್ಲಿಯೂ ಆಗಸ್ಟ್ 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಂದರೆ ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಅಭಿಯಾನವನ್ನು ಆಯೋಜಿಸಲಾಗಿದೆ.   ಭಾರತ ಸ್ವಾತ್ರಂತ್ಯ ಅಮೃತ ಮಹೋತ್ಸವದ ಸಂಸ್ಮರಣೆಯಲ್ಲಿ ಈ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ಮೂರು…

Read More