Author: KNN IT TEAM

ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿಂದೆ ಪಿಎಫ್ ಐ ಮತ್ತು ಎಸ್ ಡಿಪಿಐ ಸಂಘಟನೆ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾಜ್ ಜೋಶಿ ಆರೋಪಿಸಿದ್ದಾರೆ. https://kannadanewsnow.com/kannada/viral-video-shows-teacher-entering-flooded-school-students-hold-chairs/ ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದ ಕಾರ್ಯಕರ್ತನ ಹತ್ಯೆಯ ಹಿಂದೆ PFI ಮತ್ತು SDPI ಸಂಘಟನೆ ಕೈವಾಡವಿದೆ ಮತ್ತು ಈ ಸಂಘಟನೆಗಳಿಗೆ ಕೇರಳದಲ್ಲಿ ಅಲ್ಲಿನ ಸರಕಾರ ರಕ್ಷಣೆ ನೀಡುತ್ತಿದೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ತಪ್ಪಿತಸ್ಥರನ್ನು ಬಿಡುವ ಮಾತಿಲ್ಲ, ಅಂತವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ. https://twitter.com/JoshiPralhad/status/1552183706013822976 https://kannadanewsnow.com/kannada/good-news-good-news-for-scheduled-caste-students-applications-invited-for-incentives/

Read More

ಕೇರಳ : ಎರಡು ಅಂತಸ್ತಿನ ಮನೆ ಕುಸಿದು 13 ವರ್ಷದ ಬಾಲಕ ಸಾವನ್ನಪ್ಪಿದ್ದು, ಆತನ ಅಜ್ಜ ಗಾಯಗೊಂಡಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯ ಪೆರುಂಬವೂರಿನಲ್ಲಿ ನಡೆದಿದೆ. https://kannadanewsnow.com/kannada/adhir-chowdhury-refers-to-droupadi-murmu-as-rashtrapatni-bjp-demands-apology/ ಪೆರುಂಬವೂರಿನಲ್ಲಿ ಮುಂಜಾನೆ ಘಟನೆ ನಡೆದಿದ್ದು, ಏಕಾಏಕಿ ಮನೆ ಕುಸಿದಾಗ ಬಾಲಕ ಮತ್ತು ಅವನ ಅಜ್ಜ ಮೇಲಿನ ಮಹಡಿಯಲ್ಲಿದ್ದರು. ಪರಿಣಾಮ ಇಬ್ಬರಿಗೂ ತೀವ್ರ ಗಾಯಗೊಂಡಿದ್ದರು. ಘಟನೆಯಲ್ಲಿ ಬಾಲಕ ಸಾವನ್ನಪ್ಪಿದ್ದು, ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುರುಪ್ಪಂಪಾಡಿ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ. ಈ ವೇಳೆ ಮನೆಯಲ್ಲಿ 6-7 ಜನರಿದ್ದರು, ಆದರೆ ಯಾರಿಗೂ ಗಾಯಗಳಾಗಿಲ್ಲ. ಮನೆ ಕುಸಿತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆಸ್ಥಳೀಯ ಅಧಿಕಾರಿಗಳು ಮತ್ತು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. https://kannadanewsnow.com/kannada/bigg-beaking-news-cm-bommai-announces-steps-to-upgrade-6-engineering-colleges-in-the-state-to-iit-level/

Read More

ಲಕ್ನೋ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮಥುರಾದಲ್ಲಿ ಶಾಲೆಯೊಂದು ಬುಧವಾರ ಸುರಿದ ಮಳೆಗೆ ಜಲಾವೃತವಾಗಿದೆ. ಹೀಗಾಗಿ, ಶಾಲೆಯ ಗೇಟ್‌ನಿಂದ ಕೊಠಡಿಗೆ ಹೋಗಲು ವಿದ್ಯಾರ್ಥಿಗಳು ಪ್ಲಾಸ್ಟಿಕ್ ಕುರ್ಚಿಗಳನ್ನು ಸಾಲಾಗಿ ಜೋಡಿಸಿದ್ದಾರೆ. ಇದರ ಮೇಲೆ ಶಿಕ್ಷಕಿಯೊಬ್ಬರು ಹಾದುಹೋಗುವ ದೃಶ್ಯ ಎಲ್ಲೆಡೆ ವೈರಲ್‌ ಆದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಬಲ್ದೇವ್ ಪ್ರದೇಶದ ಗ್ರಾಮ ಪಂಚಾಯತ್ ದಘೇಟಾದ ಪ್ರಾಥಮಿಕ ಶಾಲಾ ಆವರಣ ಮಳೆ ನೀರಿನಿಂದ ಜಲಾವೃತವಾಗಿದೆ. ಹೀಗಾಗಿ ಇಲ್ಲಿನ ಗೇಟ್‌ನಿಂದ ಶಾಲಾ ಕೊಠಡಿಗೆ ಹೋಗಲು ನೀರಿನಲ್ಲೇ ಹಾದು ಹೋಗಬೇಕು. ಹೀಗಾಗಿ, ಅಲ್ಲಿನ ವಿದ್ಯಾರ್ಥಿಗಳು ತಮ್ಮ ಶಿಕ್ಷಕಿಗಾಗಿ ಪ್ಲಾಸ್ಟಿಕ್ ಕುರ್ಚಿಗಳನ್ನು ಸಾಲಾಗಿ ಜೋಡಿಸುವ ಮೂಲಕ ಗೇಟ್‌ನಿಂದ ಶಾಲಾ ಕೊಠಡಿಗೆ ತೆರಳಲ್ಲು ಸಹಾಯ ಮಾಡಿದ್ದಾರೆ. ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ವಿಡಿಯೋದಲ್ಲಿ, ವಿದ್ಯಾರ್ಥಿಗಳು ಸಾಲಾಗಿ ಜೋಡಿಸಿರುವ ಕುರ್ಚಿಗಳ ಮೇಲೇರಿ ಶಿಕ್ಷಕಿಯೊಬ್ಬರು ಹಾದು ಹೋಗುತ್ತಿರುವುದನ್ನು ನೋಡಬಹುದು. https://kannadanewsnow.com/kannada/breaking-news-21-suspects-arrested-so-far-in-bjp-leader-praveen-nettars-murder-case/ https://kannadanewsnow.com/kannada/viral-video-where-a-teacher-from-up-was-giving-a-massage-to-a-student-watch/ https://kannadanewsnow.com/kannada/viral-video-specially-abled-zomato-agent-delivers-food-in-wheelchair-wins-hearts-online-watch/

Read More

ದಾವಣಗೆರೆ  : 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ನಲ್ಲಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಸಲು ಅಕ್ಟೋಬರ್.31 ಕೊನೆಯ ದಿನಾಂಕ ವಾಗಿರುತ್ತದೆ. https://kannadanewsnow.com/kannada/praveens-wife-demands-hanging-of-killers-who-killed-her-husband/ ದ್ವಿತೀಯ ಪಿ.ಯು.ಸಿ, ಡಿಪ್ಲೊಮಾ, ಪಾಲಿಟೆಕ್ನಿಕ್/ಪದವಿ/ಸ್ನಾತಕೋತ್ತರ/ಬಿ.ಇ ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್‍ಗಳ ದೃಢೀಕೃತ ಪ್ರತಿ ಹಾಗೂ ಆನ್‍ಲೈನ್ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 37, ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bigg-news-will-bring-yogi-model-government-to-karnataka-if-need-arises-cm-basavaraj-bommai/

Read More

ಪುತ್ತೂರು :  ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆ ಅವರ ಕುಟುಂಬದಲ್ಲಿಇಂದು ನೀರವ ಮೌನವೇ ಆವರಿಸಿಕೊಂಡಿದೆ ಈ ಸಂದರ್ಭದಲ್ಲಿ ಪ್ರವೀಣ್‌ ಪತ್ನಿ ನೂತನ ಮಾತನಾಡಿ ತನ್ನ ದುಃಖವನ್ನು ಮಾಧ್ಯಮಗಳೊಂದಿಗೆ  ಹಂಚಿಕೊಂಡಿದ್ದಾರೆ.  https://kannadanewsnow.com/kannada/rain-in-karnataka-depression-heavy-rains-to-continue-for-four-more-days-in-several-districts-of-the-state/ ಮತ್ತೆ ಯಾರಿಗೂ ಇಂತಹ ಪರಿಸ್ಥಿತಿ ಬರಬಾರದು.ʻ ತನ್ನ ಗಂಡನ ಕೊಲೆಗೈದವರನ್ನು ಕೂಡಲೇ ಗಲ್ಲಿಗೇರಿಸಿ ʼ ಕಣ್ಣೀರಿಡುತ್ತಾ ದುಃಖ ಹಂಚಿಕೊಂಡಿದ್ದಾರೆ.  ಬೆಳ್ಳಾರೆಯಲ್ಲಿ ಈಗ ಒಬ್ಬೊಬ್ಬರೆ ಓಡಾಡೋದಕ್ಕೆ ಭಯ ಶುರುವಾಗಿದೆ. https://kannadanewsnow.com/kannada/rain-in-karnataka-depression-heavy-rains-to-continue-for-four-more-days-in-several-districts-of-the-state/ ರಾಜ್ಯದಲ್ಲೂ, ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ.  ಆರೋಪಿಗಳಿಗೆ ಯಾವುದೇ ಜಾಮೀನು ನೀಡಬಾರದು . ಅವರು ಮತ್ತೆ ಮತ್ತೆ ಈ ರೀತಿಯ ಕೃತ್ಯವೆಸಗುತ್ತಾರೆ.  ಪ್ರವೀಣ್‌ ಮನೆಗೆ ಮಾಡೋದಕ್ಕಿಂತ ಹೆಚ್ಚಾಗಿ ಸಮಾಜಕ್ಕೆ ಹೆಚ್ಚು ದುಡಿದಿದ್ದಾರೆ. ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು. ಕೊಲೆ ಯಾರೇ ಮಾಡಿದ್ದರೂ ಅವರಿಗೆ ಕೂಡಲೇ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ

Read More

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/money-recovered-from-my-place-belongs-to-partha-chatterjee-arpita-tells-ed/ ಬಂಗಾಳಕೊಲ್ಲಿ ಹಾಗೂ ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಮತರ, ತುಮಕೂರು, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ಬೀದರ್ ಜಿಲ್ಲೆಗಳು ಮತ್ತು ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. https://kannadanewsnow.com/kannada/bigg-news-will-bring-yogi-model-government-to-karnataka-if-need-arises-cm-basavaraj-bommai/ ಇನ್ನು ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ.  ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ.…

Read More

ಪಶ್ಚಿಮಬಂಗಾಳ: ಬಂಧಿತ ಬಂಗಾಳ ಸಚಿವ ಪಾರ್ಥ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಗುರುವಾರ ಜಾರಿ ನಿರ್ದೇಶನಾಲಯಕ್ಕೆ (ಇಡಿ) ತಮ್ಮ ಎರಡನೇ ಫ್ಲಾಟ್‌ನಿಂದ ವಶಪಡಿಸಿಕೊಂಡ ಹಣ ಚಟರ್ಜಿಗೆ ಸೇರಿದ್ದು ಎಂದು ಹೇಳಿದ್ದಾರೆ. https://kannadanewsnow.com/kannada/bigg-news-cm-bommai-reveals-why-janotsavam-programme-was-cancelled/ ಆಕೆಯ ಮೊದಲ ಫ್ಲಾಟ್‌ನಿಂದ 21 ಕೋಟಿ ರೂ.ಗಳನ್ನು ವಶಪಡಿಸಿಕೊಂಡ ಬಳಿಕ ತನಿಖಾ ಸಂಸ್ಥೆ ಆಕೆಯ ಎರಡನೇ ಅಪಾರ್ಟ್‌ಮೆಂಟ್‌ನಿಂದ 28 ಕೋಟಿ ರೂ. ನಗದು ಮತ್ತು 5 ಕೆಜಿಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಂಡಿತ್ತು. ಇನ್ನು ಪತ್ತೆಯಾದ ಹಣವನ್ನು ಎಣಿಸಲು 10 ಗಂಟೆ ತೆಗೆದುಕೊಂಡ ಅಧಿಕಾರಿಗಳು, ಶೌಚಾಲಯದಿಂದ ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ ಇಡಿ ತನಿಖೆಯಲ್ಲಿ ಅರ್ಪಿತಾ ಮುಖರ್ಜಿ ಸತ್ಯ ಹೊರ ಹಾಕಿದ್ದು, ವಸೂಲಿ ಮಾಡಿದ ಮೊತ್ತವು ಪಾರ್ಥ ಚಟರ್ಜಿ ಅವರಿಗೆ ಸೇರಿದ್ದು, ಅವರ ಹಣವನ್ನು ಇಡಲು ನನ್ನ ಫ್ಲಾಟ್ ಅನ್ನು ಬಳಸಿಕೊಂಡಿದ್ದಾರೆ. ಆ ಫ್ಲಾಟ್‌ನಲ್ಲಿ ದೊಡ್ಡ ಮೊತ್ತವಿದೆ ಎಂದು ತನಗೆ ತಿಳಿದಿರಲಿಲ್ಲ. ಚಟರ್ಜಿ ಅವರು ಫ್ಲಾಟ್‌ಗೆ ಆಗಾಗ ಭೇಟಿ ನೀಡುತ್ತಿದ್ದರು. ಈ ಬಗ್ಗೆ ಅವರಿಗೆ…

Read More

ಬೆಂಗಳೂರು: ಪ್ರವೀಣ್​ ನೆಟ್ಟಾರು ಹತ್ಯೆ ಹಿನ್ನೆಲೆ ಜನೋತ್ಸವ ಸಮಾವೇಶ ಕಾರ್ಯಕ್ರಮವನ್ನು ಎಲ್ಲರ ಜೊತೆ ಚರ್ಚಿಸಿ ರದ್ದುಗೊಳಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿಅಗತ್ಯ ಬಿದ್ದರೆ ಕರ್ನಾಟಕಕ್ಕೆ ಯೋಗಿ ಆದಿತ್ಯನಾಥ್​ ಮಾದರಿಯ ಸರ್ಕಾರ ತರುತ್ತೇವೆ. ಕೋಮುಭಾವನೆ ಕದಡುವ ಶಕ್ತಿಗಳನ್ನು ಸೆದೆಬಡೆಯುತ್ತೇವೆ. ಬಾಯಿ ಮಾತಿನಲ್ಲಿ ಅಲ್ಲ. ಕಠಿಣ ಕ್ರಮ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕ್ರಮ ಕೈಗೊಂಡಿದ್ದೇವೆ. ಉಗ್ರ ಸಂಗಟನೆಗಳ ಜೊತೆ ಸಂಪರ್ಕದಲ್ಲಿರುವವ ವಿರುದ್ಧ ಕ್ರಮಕೈಗೊಳ್ಳಲಾಗಿದೆ.ಅಂತಹವನ್ನು ತಿಹಾರ್ ಜೈಲಿಗೆ ಕಳಿಸಲಾಗಿದೆ ಎಂದರು. https://kannadanewsnow.com/kannada/bigg-news-do-you-know-what-cm-bommai-had-to-say-about-banning-pfi-in-the-state/ ಸರ್ಕಾರ ನಡೆಸಲು ಅವಕಾಶ ಕೊಟ್ಟ ವರಿಷ್ಠರಿಗೆ ಧನ್ಯವಾದ ಹೇಳಿದರು. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ನಿಯಂತ್ರಣಕ್ಕೆ ಬಂದ ಮೇಲೆ ನಾನು ಅಧಿಕಾರ ವಹಿಸಿಕೊಂಡೆ. ಯಡಿಯೂರಪ್ಪ ಸಮರ್ಥವಾಗಿ ಕೋವಿಡ್ ನಿರ್ವಹಿಸಿದ್ದರು. https://kannadanewsnow.com/kannada/adhir-chowdhury-refers-to-droupadi-murmu-as-rashtrapatni-bjp-demands-apology/ 8.5 ಲಕ್ಷ ಕಳೆದ ವರ್ಷ ರೈತ ವಿದ್ಯಾರ್ಥಿಗಳು ವಿದ್ಯಾನಿಧಿ ಪಡೆದುಕೊಂಡಿದ್ದರು. 9.98 ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ತಲುಪಿದೆ. ರೈತ ಮಕ್ಕಳಿಗೆ ಇದರಿಂದ ಭರವಸೆ ಮೂಡಿದೆ. ಸಂಧ್ಯಾ ಸುರಕ್ಷಾ ಮಾಸಾಶನ ಎಲ್ಲ ಹೆಚ್ಚು ಮಾಡಿ…

Read More

ದೆಹಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ಅವಹೇಳನೆ ಮಾಡಿದೆ ಎಂದು ಆರೋಪಿಸಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದ್ದಾರೆ. https://kannadanewsnow.com/kannada/bigg-beaking-news-cm-bommai-announces-steps-to-upgrade-6-engineering-colleges-in-the-state-to-iit-level/?utm_medium=push ಮುರ್ಮು ಅವರನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧುರಿ ಅವರು ‘ರಾಷ್ಟ್ರಪತ್ನಿ” ಎಂದು ಸಂಬೋಧಿಸುವ ಮೂಲಕ ಅವರನ್ನು ಅವಮಾನಿಸಿದ್ದಾರೆ ಎಂದು ಇರಾನಿ ಆರೋಪಿಸಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ಸಂಸತ್ ಆವರಣದಲ್ಲಿ ಮತ್ತೊಂದು ಪ್ರತಿಭಟನೆ ನಡೆದಿದೆ. ಫಲಕಗಳನ್ನು ಹಿಡಿದ ಬಿಜೆಪಿ ಸಂಸದರು, ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೌಧುರಿ ಅವರ ಹೇಳಿಕೆ ‘ಸೆಕ್ಸಿಸ್ಟ್ ಅವಮಾನ’ ಎಂದು ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಕಿಡಿಕಾರಿದ್ದಾರೆ.ತಾವು ಬಾಯ್ತಪ್ಪಿ ಆ ರೀತಿ ಹೇಳಿರುವುದಾಗಿ ತಿಳಿಸಿರುವ ಅಧೀರ್ ರಂಜನ್ ಚೌಧುರಿ ಅವರು ಕ್ಷಮೆ ಯಾಚಿಸಿದ್ದಾರೆ. ಬಿಜೆಪಿಯವರು ಚಿಕ್ಕ ಸಂಗತಿಯನ್ನು ದೊಡ್ಡ ಬೆಟ್ಟದಂತೆ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. https://kannadanewsnow.com/kannada/bigg-beaking-news-cm-bommai-announces-steps-to-upgrade-6-engineering-colleges-in-the-state-to-iit-level/?utm_medium=push ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಚೌಧುರಿ ಅವರು ಈಗಾಗಲೇ ತಮ್ಮ ಹೇಳಿಕೆಗೆ ಕ್ಷಮೆ…

Read More

ಬೆಂಗಳೂರು : ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಟ್ಟಕ್ಕೆ ಉನ್ನತೀಕರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರ ನಡೆಸಲು ಅವಕಾಶ ಕೊಟ್ಟ ವರಿಷ್ಠರಿಗೆ ಧನ್ಯವಾದ ಹೇಳಿದರು. ಕೋವಿಡ್ ಹಿನ್ನೆಲೆಯಲ್ಲಿ ಸ್ವಲ್ಪ ನಿಯಂತ್ರಣಕ್ಕೆ ಬಂದ ಮೇಲೆ ನಾನು ಅಧಿಕಾರ ವಹಿಸಿಕೊಂಡೆ. ಯಡಿಯೂರಪ್ಪ ಸಮರ್ಥವಾಗಿ ಕೋವಿಡ್ ನಿರ್ವಹಿಸಿದ್ದರು ಎಂದರು. 8.5 ಲಕ್ಷ ಕಳೆದ ವರ್ಷ ರೈತ ವಿದ್ಯಾರ್ಥಿಗಳು ವಿದ್ಯಾನಿಧಿ ಪಡೆದುಕೊಂಡಿದ್ದರು. 9.98 ವಿದ್ಯಾರ್ಥಿಗಳಿಗೆ ರೈತ ವಿದ್ಯಾನಿಧಿ ತಲುಪಿದೆ. ರೈತ ಮಕ್ಕಳಿಗೆ ಇದರಿಂದ ಭರವಸೆ ಮೂಡಿದೆ. ಸಂಧ್ಯಾ ಸುರಕ್ಷಾ ಮಾಸಾಶನ ಎಲ್ಲ ಹೆಚ್ಚು ಮಾಡಿ ಆರ್ಥಿಕ ಆಸರೆ ನೀಡಲಾಗಿದೆ. ಬಡವರಿಗೆ ವಯಸ್ಸಾದವರಿಗೆ ಅಂಗವಿಕಲರಿಗೆ ಕೊಟ್ಟಿದ್ದೇವೆ. ಇತ್ತೀಚೆಗೆ ಎಸ್ಸಿ.ಎಸ್ಟಿ ಸಮುದಾಯಕ್ಕೆ ಯೋಜನಗೆಳನ್ನು ಹೆಚ್ಚಳ ಮಾಡಿದ್ದೇವೆ. 25 ಲಕ್ಷಕ್ಕೂ ಹೆಚ್ಚಿನ ಕುಟುಂಬಗಳಿಗೆ ಪುಕ್ಕಟೆ ವಿದ್ಯುತ್ ನೀಡುವ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ. https://twitter.com/CMofKarnataka/status/1552538592651620352

Read More