Subscribe to Updates
Get the latest creative news from FooBar about art, design and business.
Author: KNN IT TEAM
ಗುಜರಾತ್: ಬೊಟಾಡ್ನಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 21ಕ್ಕೆ ಏರಿದೆ.40 ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾವನಗರದ ಸರ್ ತಖ್ತ್ಸಿನ್ಹಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲರೂ ಬೊಟಾಡ್ ಜಿಲ್ಲೆಯ ಬರ್ವಾಲಾ ತಾಲ್ಲೂಕಿನ ರೋಜಿದ್ ಗ್ರಾಮ ಮತ್ತು ಸುತ್ತಮುತ್ತಲಿನ ಇತರ ಕೆಲವು ಗ್ರಾಮಗಳಿಗೆ ಸೇರಿದವರು ಎಂದು ತಿಳಿದುಬಂದಿದೆ.ಭಾನುವಾರ ರಾತ್ರಿ ಬೂಟ್ಲೆಗ್ಗರ್ನಿಂದ ಖರೀದಿಸಿದ ನಕಲಿ ಮದ್ಯ ಕುಡಿದು ಕನಿಷ್ಠ 15 ಜನರು ಅಸ್ವಸ್ಥರಾಗಿದ್ದರು. ಭಾನುವಾರ ರಾತ್ರಿ ರೋಜಿದ್ ಗ್ರಾಮದಲ್ಲಿ ಹೂಚ್ ಸೇವಿಸಿದ ಕೆಲವೇ ಗಂಟೆಗಳಲ್ಲಿ ತನ್ನ ಪತಿಯ ಸ್ಥಿತಿ ಹದಗೆಡಲು ಪ್ರಾರಂಭಿಸಿತು ಎಂದು ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯ ಪತ್ನಿ ಹೇಳಿದ್ದಾರೆ.ಈ ಘಟನೆಯ ಬಗ್ಗೆ ತನಿಖೆ ನಡೆಸಲು ಮತ್ತು ನಕಲಿ ಮದ್ಯವನ್ನು ಮಾರಾಟ ಮಾಡಿದ ದರೋಡೆಕೋರರನ್ನು ಬಂಧಿಸಲು ಉಪ ಪೊಲೀಸ್ ಅಧೀಕ್ಷಕ ಶ್ರೇಣಿಯ ಅಧಿಕಾರಿಯ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ ಎಂದು ಐಜಿಪಿ ಅಶೋಕ್ ಕುಮಾರ್ ಯಾದವ್ ತಿಳಿಸಿದ್ದಾರೆ. ಅಕ್ರಮ ಮದ್ಯ ಮಾರಾಟದಲ್ಲಿ ಭಾಗಿಯಾದ ಆರೋಪ ಹೊತ್ತಿರುವ…
ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಸ್ಟಂಟ್ ಮಾಡಲು ಹೋಗಿ ಕಾರೊಂದು ಡಿವೈಡರ್ ಮೇಲಿಂದ ಜಿಗಿದು ರೈಲಿಂಗ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಚಾಲಕ ಸುರಕ್ಷಿತವಾಗಿದ್ದ, ಕಾರಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. https://twitter.com/ANI/status/1551714840758177797 ಚಾಲಕನನ್ನು ಅಮೃತಸರ ನಿವಾಸಿ ಎಂದು ಗುರುತಿಸಲಾಗಿದ್ದು, ಈತ ವಾಹನ ಚಲಾಯಿಸುವಾಗ ಕೆಲವು ಸಾಹಸ ಮಾಡಲು ಪ್ರಯತ್ನಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು. ಸೋಲನ್‌ನ ಎನ್ಹೆಚ್-5 ನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಅಮೃತಸರದ ನಿವಾಸಿಯೊಬ್ಬರು ದುಡುಕಿನ ಚಾಲನೆಯಲ್ಲಿ ಸಾಹಸ ಪ್ರದರ್ಶಿಸಲು ಪ್ರಯತ್ನಿಸಿದ್ದರು. ಘಟನೆಯಲ್ಲಿ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸುರಕ್ಷಿತವಾಗಿದ್ದಾರೆ. ಘಟನೆ ಕುರಿತಂತೆ ಧರಂಪುರದಲ್ಲಿ ಪೊಲೀಸ್ ಠಾಣೆಯಲ್ಲಿ ಐಪಿಸಿ 279 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸೋಲನ್ ಪೊಲೀಸರು ತಿಳಿಸಿದ್ದಾರೆ.
ಉತ್ತರಪ್ರದೇಶ : ಉತ್ತರಪ್ರದೇಶದ ಸುಲ್ತಾನ್‌ಪುರ ನಗರದ ಬಳಿ ಬೆಳ್ಳಂಬೆಳ್ಳಗೆ ಟ್ರಕ್- ಪೊಲೀಸ್ ವಾಹನ ಡಿಕ್ಕಿ ಹೊಡೆದು, ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/india-covid-updates-14830-new-cases-detected-in-24-hours/ ಭೀಕರ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್ಸಟೇಬಲ್‌ಗಳಾದ ಮೊಯಿನ್ ಖಾನ್, ಅರುಣ್ ಸಿಂಗ್ ಸಾವು ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತಕ್ಕೆ ವೇಗವಾಗಿ ವಾಹನ ಚಾಲನೆ ಕಾರಣವಾಗಿರುವ ಶಂಕೆ ಎಂದು ತಿಳಿದುಬಂದಿದೆ. https://kannadanewsnow.com/kannada/india-covid-updates-14830-new-cases-detected-in-24-hours/
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 14,830 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 14,830 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 36 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 526110 ಕ್ಕೆ ಏರಿಕೆಯಾಗಿದೆ. #COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 14,830 ಹೊಸ ಪ್ರಕರಣಗಳು, 18,159 ಚೇತರಿಕೆಗಳು ಮತ್ತು 36 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 1,47,512 ದೈನಂದಿನ ಪಾಸಿಟಿವಿಟಿ ದರ 3.48% https://twitter.com/ANI/status/1551773831068405760
ದೆಹಲಿ: ಪ್ರತಿಪಕ್ಷಗಳಿಗೆ ದೇಶದ ಹಿತಾಸಕ್ತಿಗಿಂತ ತಮ್ಮ ರಾಜಕೀಯ ಹಿತಾಸಕ್ತಿಯೇ ಹೆಚ್ಚು ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷಗಳು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಹರ್ಮೋಹನ್ ಅವರ 10 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಿರೋಧ ಪಕ್ಷಗಳು ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ನಿರ್ಧಾರಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಅದನ್ನು ನಮ್ಮ ಸರ್ಕಾರವು ಅನುಷ್ಠಾನ ಮಾಡುತ್ತಿದೆ. ಇದಕ್ಕೂ ಪ್ರತಿಪಕ್ಷಗಳು ಅನೇಕ ಬಾರಿ ಅಡೆತಡೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಮಾಜ ಮತ್ತು ದೇಶದ ಹಿತಾಸಕ್ತಿಗಳಿಗಿಂತ ಸಿದ್ಧಾಂತ ಅಥವಾ ರಾಜಕೀಯ ಹಿತಾಸಕ್ತಿಗಳನ್ನು ಮೇಲಕ್ಕೆ ಇಡುವ ಪ್ರವೃತ್ತಿ ಕಂಡುಬರುತ್ತಿದೆ ಎಂದು ಪ್ರಧಾನಿ ಹೇಳಿದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮಾತುಗಳನ್ನು ನೆನಪಿಸಿಕೊಂಡ ಮೋದಿ, ಪಕ್ಷ ರಾಜಕಾರಣಕ್ಕಿಂತ ರಾಷ್ಟ್ರದ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಪ್ರಜಾಪ್ರಭುತ್ವದಿಂದಾಗಿ ಪಕ್ಷಗಳು ಅಸ್ತಿತ್ವದಲ್ಲಿವೆ ಮತ್ತು ದೇಶದಿಂದಾಗಿ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ. ನಮ್ಮ ದೇಶದ ಬಹುತೇಕ ಪಕ್ಷಗಳು, ವಿಶೇಷವಾಗಿ ಎಲ್ಲಾ…
ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ನಾಳೆಯಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/bigg-news-mandya-district-administration-temporarily-postpones-baby-hill-trial-blast-after-giving-in-to-farmers-protest/ ಕರ್ನಾಟಕದ ಕರಾವಳಿ, ಮಲೆನಾಡು, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ನಾಳೆಯಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಕೆ ಮಾಹಿತಿ ನೀಡಿದೆ. https://kannadanewsnow.com/kannada/bigg-news-id-card-mandatory-for-officers-staff-at-sub-registrar-offices-in-the-state/ ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಕಲಬುರ್ಗಿ, ಬೀದರ್, ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ದಾವಣಗೆರೆ, ಮೈಸೂರು ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ.
ಮಂಡ್ಯ : ಕೆಆರ್ ಎಸ್ ಡ್ಯಾಂನ ಬೇಬಿ ಬೆಟ್ಟದಲ್ಲಿ ನಡೆಯುವ ಕಲ್ಲು ಗಣಿಗಾರಿಕೆಯಿಂದಾಗಿ ಅಪಾಯ ಇದೆಯೋ ಇಲ್ಲವೋ ತಿಳಿದುಕೊಳ್ಳಲು ಟ್ರಯಲ್ ಬ್ಲಾಸ್ಟ್ ಒಂದೇ ದಿನಕ್ಕೆ ಅಂತ್ಯಕಂಡಿದೆ. ತೀವ್ರ ವಿರೋಧದ ನಡುವೆಯೂ ಪರೀಕ್ಷಾರ್ಥ ಸ್ಪೋಟ ನಡೆಸಲು ಮುಂದಾಗಿದ್ದ ಜಿಲ್ಲಾಡಳಿತ ಕಡೆಗೂ ರೈತರ ಒತ್ತಡಕ್ಕೆ ಮಣಿದು ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಪ್ರಕ್ರಿಯೆ ಮುಂದೂಡಿದೆ. https://kannadanewsnow.com/kannada/bigg-news-heres-some-good-news-for-the-backward-classes-youth-who-want-to-join-the-army/ ಏಳು ದಿನಗಳ ಕಾಲ ಬೇಬಿ ಬೆಟ್ಟದ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಬೇಬಿ ಬೆಟ್ಟದ ಬಳಿ ಕರ್ನಾಟಕ ರಾಜ್ಯ ರೈತ ಸಂಘದವರು ಪ್ರತಿಭಟನೆ ನಡೆಸಿದ್ದರು. ಬಳಿಕ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಮುಖಂಡರು.ಇದೀಗ ತಾತ್ಕಾಲಿಕವಾಗಿ ಟ್ರಯಲ್ ಮುಂದೂಡಿರುವುದಾಗಿ ಮಂಡ್ಯ ಡಿಸಿ ಅಶ್ವಥಿ ರೈತರಿಗೆ ದೂರವಾಣಿ ಮುಖಾಂತರ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/bigg-news-id-card-mandatory-for-officers-staff-at-sub-registrar-offices-in-the-state/ ನಿಮ್ಮ ಪರವಾಗಿ ಅಧಿಕಾರಿಯೊಬ್ಬರನ್ನು ಕಳುಹಿಸಿ ಹೇಳುವಂತೆ ರೈತರು ಹೇಳಿದ್ದಾರೆ. ಡಿಸಿ ಅಧಿಕಾರಿಯನ್ನು ಕಳುಹಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರತಿಭಟನೆಯನ್ನು ಕೈ ಬಿಡಲು ರೈತರು ಮುಂದಾಗಿದ್ದಾರೆ. https://kannadanewsnow.com/kannada/bigg-news-distribution-of-groundnut-chikki-instead-of-banana-to-kalyana-karnataka-school-students/
ಧಾರವಾಡ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ, ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಯುವಕರಿಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. https://kannadanewsnow.com/kannada/bigg-news-id-card-mandatory-for-officers-staff-at-sub-registrar-offices-in-the-state/ ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ https://bcwd.karnataka.gov.in ನಲ್ಲಿ ಪಡೆದು ಜುಲೈ 30 ರಂದು ರೊಳಗಾಗಿ ಕಚೇರಿಗೆ ಸಲ್ಲಿಸಬಹುದು. https://kannadanewsnow.com/kannada/sonia-gandhis-2nd-enforcement-directorate-questioning-today/ ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲೆ 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ 08382-226589, ಕೇಂದ್ರ ಕಚೇರಿ 8050770004 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bigg-news-will-not-take-hasty-decision-on-kasturirangan-report-cm-basavaraj-bommai/
ಬೆಂಗಳೂರು : ರಾಜ್ಯದ ಉಪ ನೋಂದಣಾಧಿಕಾರಿ ಕಚೇರಿಗಳ ನೌಕರರಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸೋಮವಾರ ಹೇಳಿದ್ದಾರೆ. https://kannadanewsnow.com/kannada/sonia-gandhis-2nd-enforcement-directorate-questioning-today/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ಉದ್ಯೋಗಿಗಳಿಗೆ ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಿ ನೋಂದಣಿ ಮಹಾನಿರೀಕ್ಷಕರು ಮತ್ತು ಮುದ್ರಾಂಕ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ” ಎಂದು ತಿಳಿಸಿದ್ದಾರೆ. https://kannadanewsnow.com/kannada/4-congress-mps-suspended-from-lok-sabha-for-entire-session-after-protests/ ‘ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿನ ನ್ಯೂನತೆಗಳ ಬಗ್ಗೆ ಲೋಕಾಯುಕ್ತ ಪೊಲೀಸರು ವರದಿ ಸಲ್ಲಿಸಿದ್ದಾರೆ. ಅನಧಿಕೃತ ವ್ಯಕ್ತಿಗಳನ್ನು ಕಚೇರಿಗಳಿಂದ ಹೊರಗಿಡಲು ಗುರುತಿನ ಚೀಟಿಗಳನ್ನು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ನಗದು ಘೋಷಣೆ ಮತ್ತು ಕಚೇರಿಯಿಂದ ಹೊರಬರುವಾಗ ಅಧಿಕಾರಿಗಳು ಮತ್ತು ಸಿಬ್ಬಂದಿಯ ಚಲನವಲನಗಳನ್ನು ದಾಖಲಿಸುವ ಬಗ್ಗೆ ನಿರ್ದೇಶನಗಳನ್ನು ನೀಡಲಾಗಿದೆ” ಎಂದು ಅಶೋಕ ಹೇಳಿದರು. https://kannadanewsnow.com/kannada/crematorium-submerged-70-year-old-madhya-pradesh-woman-cremated-on-road/
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ(Sonia Gandhi) ಅವರು ಇಂದು ಎರಡನೇ ಸುತ್ತಿನ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುವ ನಿರೀಕ್ಷೆಯಿದೆ. ಜುಲೈ 21 ರಂದು ಮೊದಲ ಬಾರಿಗೆ ವಿಚಾರಣೆಗಾಗಿ ಹಾಜರಾಗಿದ್ದ ಸೋನಿಯಾ ಗಾಂಧಿಗೆ ಇಡಿ ಅಧಿಕಾರಿಗಳು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಈ ವೇಳೆ ಸೋನಿಯಾ ಅವರಿಗೆ ಒಟ್ಟು 28 ಪ್ರಶ್ನೆಗಳನ್ನು ಕೇಳಿದ್ದರು. ಕೋವಿಡ್ ಹಿನ್ನೆಲೆ, ಇಂದು ನಡೆಸಲಾಗುವ ವಿಚಾರಣೆಯ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುವುದು. ಸೋನಿಯಾ ಹಾಗೂ ತನಿಖಾಧಿಕಾರಿಗಳ ನಡುವೆ ದೈಹಿಕ ಅಂತರವನ್ನು ಇರಿಸಲಾಗುವುದು ಎಂದು ಅಧಿಕಾರಿಗಳು ತಿಳಿದ್ದಾರೆ. ಸೋನಿಯಾ ಗಾಂಧಿ ಅವರ ಮಕ್ಕಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರು ಕಳೆದ ವಾರದಂತೆ ಮತ್ತೆ ಇಡಿ ಕಚೇರಿಗೆ ಅವರೊಂದಿಗೆ ಬರುವ ನಿರೀಕ್ಷೆಯಿದೆ. ಈ ವೇಳೆ ದೆಹಲಿ ಪೊಲೀಸರು ಸಿಆರ್‌ಪಿಎಫ್ ಮತ್ತು ಆರ್‌ಎಎಫ್ ಸಿಬ್ಬಂದಿ ಸೇರಿದಂತೆ ಬೃಹತ್ ಪಡೆಗಳನ್ನು ನಿಯೋಜಿಸುವ ನಿರೀಕ್ಷೆಯಿದೆ.…