Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು : ಶಿಕಾರಿಪುರ ಕ್ಷೇತ್ರವನ್ನು ತಾನು ಖಾಲಿ ಮಾಡುತ್ತಿದ್ದೇನೆ. ಈ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರ ( BY Vijayendra ) ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ ( Karnataka Assembly Election 2022 ) ಸ್ಪರ್ಧಿಸಲಿದ್ದಾರೆ. ಅವನನ್ನು ತನ್ನ ಗೆಲ್ಲಿಸುವಂತೆ ಗೆಲ್ಲಿಸಿ ಎಂಬುದಾಗಿ ಕ್ಷೇತ್ರದ ಜನತೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ( Farmer CM BS Yediyurappa ) ಮನವಿ ಮಾಡಿದ್ದರು. ಆದ್ರೇ.. ಇದೀಗ ಆ ಮಾತನ್ನೇ ಉಲ್ಟಾ ಹೊಡೆದಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ನಿನ್ನೆ ತಾನು ಮುಂಬರುವ ವಿಧಾನಸಭಾ ಚುನಾವಣೆಗೆ ಕ್ಷೇತ್ರ ಖಾಲಿ ಮಾಡುತ್ತಿದ್ದೇನೆ. ಪುತ್ರ ಶಿಕಾರಿಪುರದಿಂದ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಿದ್ದಂತ ಹೇಳಿಕೆ, ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಈ ಸಂಬಂಧ ಯಡಿಯೂರಪ್ಪ ಅವರನ್ನು ಸಾಲು ಸಾಲು ನಾಯಕರೇ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕ್ಷೇತ್ರದ ಜನತೆಯ ಒತ್ತಾಯಕ್ಕಾಗಿ ಹಾಗೆ ಹೇಳಿದ್ದೇನೆ. ಇದರಿಂದ ಸಾಕಷ್ಟು ಗೊಂದಲ ಉಂಟಾಗಿದೆ. ಆ…
ಯುಜೀನ್: ಯುಜೀನ್‌ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ಫೈನಲ್‌ನಲ್ಲಿ ಬೆಳ್ಳಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೀರಜ್ ಚೋಪ್ರಾ 88.13 ಮೀಟರ್ ದೂರ ಕ್ರಮಿಸಿ ಬೆಳ್ಳಿ ಪದಕ ಪಡೆದು ಇತಿಹಾಸ ನಿರ್ಮಿಸಿದ್ದಾರೆ. ಲೆಜೆಂಡರಿ ಲಾಂಗ್ ಜಂಪರ್ ಅಂಜು ಬೂಬಿ ಜಾರ್ಜ್ ಅವರು ಪ್ಯಾರಿಸ್‌ನಲ್ಲಿ 2003 ರ ಆವೃತ್ತಿಯಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯರಾಗಿದ್ದರು. https://twitter.com/PCMohanMP/status/1551044853521580032 ಜಾವೆಲಿನ್ ಥ್ರೋ ಫೈನಲ್‌ನ ಮೊದಲ ಪ್ರಯತ್ನದಲ್ಲಿ ಪೌಲ್ ಮಾಡಿದರು. ಇನ್ನು ನೀರಜ್ ಚೋಪ್ರಾ ತಮ್ಮ ಪಾಲಿನ ಎರಡನೇ ಪ್ರಯತ್ನದಲ್ಲಿ 82.39 ಮೀಟರ್ ದೂರ ಜಾವೆಲಿನ್ ಎಸೆದರು. ಮೂರನೇ ಸುತ್ತಿನಲ್ಲಿ ನೀರಜ್ ಚೋಪ್ರಾ 86.37 ಮೀಟರ್ ದೂರ ಜಾವೆಲಿನ್ ಎಸೆದರು. ಈ ಮೂಲಕ ಮೂರನೇ ಸುತ್ತಿನ ಅಂತ್ಯದ ವೇಳೆಗೆ ನೀರಜ್ ಚೋಪ್ರಾ 4ನೇ ಸ್ಥಾನ ಪಡೆದರು. ಆದರೆ ನಾಲ್ಕನೇ ಸುತ್ತಿನಲ್ಲಿ…
ಭೋಪಾಲ್ (ಮಧ್ಯಪ್ರದೇಶ) : ಭೋಪಾಲ್‌ನ ಖೋಫಿಜಾ ಪ್ರದೇಶದ ಸರ್ಕಾರಿ ಶಾಲೆಯ ಶೌಚಾಲಯದೊಳಗೆ ಎಂಟೂವರೆ ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ನಡೆದಿದೆ. ಆರೋಪಿಯನ್ನು ಶಾಲೆಯ ಕಾವಲುಗಾರ ಲಕ್ಷ್ಮೀನಾರಾಯಣ ಧನಕ್ ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಊಟದ ಸಮಯದಲ್ಲಿ ಬಾಲಕಿ ಶೌಚಾಲಯಕ್ಕೆ ಹೋಗಿದ್ದಾಳೆ. ಈ ವೇಳೆ ಶಾಲೆಯಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮೀನಾರಾಯಣ ಧನಕ್ ಸಮಯ ನೋಡಿಕೊಂಡು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತ್ರ, ಬಾಲಕಿ ಅಳುತ್ತಿರುವುದನ್ನು ಕಂಡ ಇತರ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಬಾಲಕಿ ಹಳದಿ ಅಂಗಿ ಧರಿಸಿರುವ ವ್ಯಕ್ತಿ ಈ ಕೃತ್ಯವೆಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾಳೆ. ಈ ಹಿನ್ನೆಲೆಯಲ್ಲಿ ಶಾಲೆಯ ಸಿಬ್ಬಂದಿ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಶಾಲಾ ಸಿಬ್ಬಂದಿಯನ್ನು ವಿಚಾರಿಸಿದಾಗ ಲಕ್ಷ್ಮೀನಾರಾಯಣ ಎಂಬಾತನೇ ಹಳದಿ ಅಂಗಿ ಧರಿಸಿರುವುದು ಪೊಲೀಸರಿಗೆ ತಿಳಿದು ಬಂದಿದೆ. ವಿಚಾರಣೆ ವೇಳೆ ಪೊಲೀಸರಿಗೆ ಆರೋಪಿಯ ಬಗ್ಗೆ ತಿಳಿದು ಬಂದಿದ್ದು, ಬಳಿಕ ಬಂಧಿಸಿದ್ದಾರೆ.…
ಹುಬ್ಬಳ್ಳಿ : ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. https://kannadanewsnow.com/kannada/bigg-news-bbmp-orders-ban-on-name-plate-on-vehicles/ ಸ್ಟಾರ್ಕಲ್ ಫ್ಯಾಕ್ಟರಿಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ನಿನ್ನೆ ಒಬ್ಬರು ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹುಬ್ಬಳ್ಳಿಯ ಕಿಮ್ಸ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ. ಗದಗ ಮೂಲದ ವಿಜಯಲಕ್ಷ್ಮಿ (34) ನಿನ್ನೆ ಸಾವಿಗೀಡಾಗಿದ್ದರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಮಾಳೇಶ್ (27), ಗೌರವ್ವ (45) ಮೃತಪಟ್ಟಿದ್ದಾರೆ. ಒಟ್ಟು ಎಂಟು ಕಾರ್ಮಿಕರು ಘಟನೆಯಲ್ಲಿ ಗಾಯಗೊಂಡಿದ್ದರು. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿತ್ತು. ಆ ಮೂವರು ಸಾವಿಗೀಡಾಗಿದ್ದಾರೆ. ಇನ್ನುಳಿದ ಐವರಿಗೆ ಕಿಮ್ಸನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. https://kannadanewsnow.com/kannada/great-accomplishment-pm-modi-lauds-neeraj-chopra-for-world-athletics-championships-silver/
ಬೆಂಗಳೂರು: ವಾಹನಗಳ ಮೇಲೆ ಬಿಬಿಎಂಪಿ ( BBMP ) ಎಂದು ನಾಮಫಲಕ ( Name Board ) ಅಳವಡಿಸುವುದನ್ನು ನಿಷೇಧಿಸಿ, ಬಿಬಿಎಂಪಿ ಆದೇಶಿಸಿದೆ. ಈ ಮೂಲಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ನೌಕರರು ತಮ್ಮ ವಾಹನಗಳ ಮೇಲೆ ಅಳವಡಿಸುತ್ತಿದ್ದಂತ ನಾಮಫಲಕ ನಿಷೇಧಿಸಿ ಆದೇಶಿಸಿದೆ. ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಘನತ್ಯಾಜ್ಯ ವಿಭಾಗ ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತರು ರವರು ಸುತ್ತೋಲೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ, ಸಾಗಾಣೆ ಮತ್ತು ವಿಲೇವಾರಿಯಲ್ಲಿ ಗುತ್ತಿಗೆದಾರರ ಕಾರ್ಯನಿರ್ವಹಿಸುತ್ತಿರುವ ವಾಹನಗಳ ಮೇಲೆ ಗುತ್ತಿಗೆದಾರರು ‘ಪಾಲಿಕೆಯ ಮೂಲಕ ಸೇವೆಯಲ್ಲಿ/ ಬಿಬಿಎಂಪಿ/ಬಿಬಿಎಂಪಿ ಸೇವೆಯಲ್ಲಿ/ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ’ ಎಂದು ನಮೂದಿಸಿಕೊಂಡು/ ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ ಎಂದಿದ್ದಾರೆ. ಮುಂದುವರಿದು, ಪಾಲಿಕೆ ವತಿಯಿಂದ ಕಾರ್ಯನಿರ್ವಹಿಸುವ ಕಾಮಗಾರಿಗಳಿಗೆ ಅವಶ್ಯವಿರುವ ನಿರ್ಮಾಣ ಸಾಮಗ್ರಿಗಳ ಸಾಗಾಣೆ ಮಾಡುವ ವಾಹನಗಳ ಮೇಲೆ ಪಾಲಿಕೆಯ ಸೇವೆಯಲ್ಲಿ ಎಂದು ನಮೂದಿಸಿಕೊಂಡು/ನಾಮಫಲಕಗಳನ್ನು ಅನಧಿಕೃತವಾಗಿ ಹಾಕಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಗಮನಿಸಲಾಗಿರುತ್ತದೆ…
ಕ್ಯಾಲಿಫೋರ್ನಿಯಾ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಸಂಭವಿಸಿದ ಪರಿಣಾಮ ಅಲ್ಲಿನ ಗವರ್ನರ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಯೊಸೆಮೈಟ್ ರಾಷ್ಟ್ರೀಯ ಉದ್ಯಾನವನದ ಬಳಿ ವೇಗವಾಗಿ ಹರಡುತ್ತಿರುವ ಬೆಂಕಿಯನ್ನು ನಂದಿಸಲು 400 ಕ್ಕೂ ಹೆಚ್ಚು ಅಗ್ನಿಶಾಮಕ ದಳದವರು ಹರಸಾಹಸ ಪಡುತ್ತಿದ್ದಾರೆ. ಶನಿವಾರ ಬೆಂಕಿಯು ವೇಗವಾಗಿ ಎಲ್ಲೆಡೆ ಆವರಿಸಿದೆ. ಹೀಗಾಗಿ, ಅಲ್ಲಿಂದ ಸಾವಿರಾರು ಜನರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಇನ್ನೂ, 2,000 ಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಅನ್ನು ಸ್ಥಗಿತಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕ್ಯಾಲಿಫೋರ್ನಿಯಾದಲ್ಲಿ ಎದುರಾಗಿರುವ ಅತಿದೊಡ್ಡ ಕಾಡ್ಗಿಚ್ಚು ಇದಾಗಿದೆ. TERRIFYING: These huge flames and clouds of smoke are from the Oak Fire, currently raging in Mariposa County. The wildfire has exploded to 1,600 acres and has reached the Sierra National Forest. Find more details and the list of evacuation orders here: https://t.co/94kRo7HBCB pic.twitter.com/Dar3ieCKkW — ABC30 Fresno…
ನವದೆಹಲಿ : ಇಂದು ಈಶಾನ್ಯ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ಬಿಶಾಮಕ ಸಿಬ್ಬಂದಿ ದೌಡಾಹಿಸಿದ್ದು, ಕಾರ್ಯಾಚರಣೆ ಕೈಗೊಂಡಿದ್ದಾರೆ. ಮುಂಜಾನೆ 5 ಗಂಟೆ ಸುಮಾರಿಗೆ ಘಟನೆ ವರದಿಯಾಗಿದ್ದು, ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ. ಇದುವರಗೆ ನಾಲ್ವರನ್ನು ರಕ್ಷಿಸಲಾಗಿದ್ದು, ಕಟ್ಟಡದ ಕೆಳಗೆ ಸಿಲುಕಿರುವವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಇಲಾಖೆ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ. https://kannadanewsnow.com/kannada/bigg-news-siddaramaiah-invited-to-contest-from-bagepalli-constituency/ ದೆಹಲಿಯಲ್ಲಿ ಪದೇ ಪದೇ ಇಂತಹ ಘಟನೆಗಳು ವರದಿಯಾಗುತ್ತಿವೆ. ಕಳೆದ ಜುಲೈ 15 ರಂದು ದೆಹಲಿಯ ಅಲಿಪುರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಡೌನ್‌ನ ಗೋಡೆ ಕುಸಿದು ಐವರು ಸಾವನ್ನಪ್ಪಿ, ಒಂಬತ್ತು ಮಂದಿ ಗಾಯಗೊಂಡಿದ್ದರು. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಗೋಡೆ ಕುಸಿತದ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದು, ಜೂನಿಯರ್ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಅನ್ನು ಅಮಾನತುಗೊಳಿಸಿದೆ ಎನ್ನಲಾಗುತ್ತಿದೆ. ಪೌರಾಯುಕ್ತರ ಆದೇಶದ ಮೇರೆಗೆ ತನಿಖೆಗೆ ಆದೇಶಿಸಲಾಗಿದ್ದು, ಬಾಕೋಲಿ ಗ್ರಾಮದಲ್ಲಿ ನಡೆದ ಅಹಿತಕರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ…
ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿಯವರು ಅಭಿನಂದಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಮೋದಿಯವರು, ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಿಂದ ಉತ್ತಮ ಸಾಧನೆಯಾಗಿದೆ. ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದಿದ್ದಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳು. ಇದು ಭಾರತೀಯ ಕ್ರೀಡೆಗಳಿಗೆ ವಿಶೇಷ ಕ್ಷಣವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. https://twitter.com/narendramodi/status/1551051269397446657 ನೀರಜ್ಗೆ ಪ್ರಬಲ ಸ್ಪರ್ಧೆ ನೀಡಿದ ಆ್ಯಂಡರ್ಸನ್ ಪೀಟರ್ ಮೂರು ಬಾರಿ 90 ಮೀಟರ್ ಗಿಂತ ಹೆಚ್ಚು ಎಸೆದು ಬಂಗಾರದ ಪದಕ ಪಡೆದರು. ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ 88.13 ಮೀಟರ್ ದೂರ ಕ್ರಮಿಸಿ ಬೆಳ್ಳಿ ಪದಕ ಪಡೆದರು. ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ಕಂಚಿನ ಪದಕ ಗೆದ್ದರು.
ಚಿಕ್ಕಬಳ್ಳಾಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಆಹ್ವಾನ ನೀಡಲಾಗಿದೆ. https://kannadanewsnow.com/kannada/odia-actor-wife-co-actor-fight-on-bhubaneswar-street-video-goes-viral/ ಸುದ್ದಿಗಾರರೊಂದಿಗೆ ಮಾತನಾಡಿದ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ. https://kannadanewsnow.com/kannada/bigg-breaking-news-covid-19-cases-rise-again-in-india-20279-cases-detected-in-24-hours/ ಸಿದ್ದರಾಮಯ್ಯ ಅವರು ಬಾಗೇಪಲ್ಲಿ ಕ್ಷೇತ್ರದಿಂದಲೇ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ.ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೆ ಬಾಗೇಪಲ್ಲಿ ಕ್ಷೇತ್ರ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ. https://kannadanewsnow.com/kannada/bigg-news-good-news-for-borrowers-applications-invited-for-subsidy-loan-facility-under-various-schemes/
ಭುವನೇಶ್ವರ(ಒಡಿಶಾ): ಒಡಿಯಾ ನಟ ಬಾಬುಸನ್ ಮೊಹಾಂತಿ, ಅವರ ಪತ್ನಿ ತೃಪ್ತಿ ಮತ್ತು ನಟಿ ಪ್ರಕೃತಿ ಮಿಶ್ರಾ ಶನಿವಾರ ಬೆಳಿಗ್ಗೆ ಜನನಿಬಿಡ ಭುವನೇಶ್ವರ ಬೀದಿಯಲ್ಲಿ ಜಗಳವಾಡಿದ್ದು, ಇದೀಗ ಘಟನೆಯ ವೀಡಿಯೊ ಈಗ ವೈರಲ್ ಆಗಿದೆ. ಏನಿದು ಘಟನೆ? ಬಾಬುಶಾನ್ ನಟಿ ಪ್ರಕೃತಿ ಮಿಶ್ರಾ ಅವರೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ತೃಪ್ತಿ ಸತಪತಿ ಆರೋಪಿಸಿದ್ದು, ನಿನ್ನೆ ಇವರಿಬ್ಬರನ್ನೂ ಕಾರಿನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದು ಥಳಿಸಿದ್ದಾರೆ. ಈ ವೇಳೆ ಪ್ರಕೃತಿಯು ತೃಪ್ತಿಯ ಕೂದಲನ್ನು ಹಿಡಿದು ಎಳೆದಿದ್ದಾಳೆ. ನಂತ್ರ, ಇಲ್ಲಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಪ್ರಕೃತಿ ಅಲ್ಲಿಂದ ಕಾಲ್ಕಿತ್ತು ಅಲ್ಲೇ ಇದ್ದ ಆಟೋ ಹತ್ತಿದ್ದಾಳೆ. ಆದ್ರೂ, ಅವಳನ್ನೇ ಹಿಂಬಾಲಿಸಿದ ತೃಪ್ತಿ ಪ್ರಕೃತಿನ್ನು ಆಟೋ ರಿಕ್ಷಾವನ್ನು ಹತ್ತದಂತೆ ತಡೆದು ʻತನ್ನ ಕುಟುಂಬವನ್ನು ಹಾಳುಮಾಡಿದ್ದಾಳೆʼ ತೃಪ್ತಿ ನಡು ರಸ್ತೆಯಲ್ಲೇ ಕಿರುಚಾಡಿದ್ದಾಳೆ. Whatever the cause, the victim is being beaten by a lady while screaming for aid. These unshameful bystanders are happily recording…