Subscribe to Updates
Get the latest creative news from FooBar about art, design and business.
Author: KNN IT TEAM
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಒಣದ್ರಾಕ್ಷಿ ದೇಹಕ್ಕೆ ತುಂಬಾ ಪ್ರಯೋಜನಕಾರಿ. ಆಹಾರದಲ್ಲಿ ಒಣದ್ರಾಕ್ಷಿಗಳನ್ನು ಸೇರಿಸಿಕೊಳ್ಳಬೇಕು. ಆದರೆ ಖದೀರಿ ಮಾಡಲು ಹೋದಾಗ ಅನೇಕ ಬಗೆಯ ಒಣದ್ರಾಕ್ಷಿಗಳು ಸಿಗುತ್ತವೆ. ಇದರಲ್ಲಿ ಆರೋಗ್ಯಕ್ಕೆ ಉತ್ತಮವಾದ ದ್ರಾಕ್ಷಿಯನ್ನು ಆಯ್ಕೆ ಮಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. https://kannadanewsnow.com/kannada/bigg-news-tragic-tragedy-in-belagavi-lover-commits-suicide-after-killing-his-girlfriend-for-not-agreeing-to-marriage/ ಮಾರುಕಟ್ಟೆಯಲ್ಲಿ ಹಲವು ಬಗೆಯ ಒಣದ್ರಾಕ್ಷಿಗಳಿವೆ. ಕಪ್ಪು,ಕೆಂಪು ಮತ್ತು ಹಳದಿ ಒಣದ್ರಾಕ್ಷಿಗಳನ್ನು ನೀವು ಸುಲಭವಾಗಿ ಕಾಣಬಹುದು. ಈ ಎಲ್ಲಾ ಒಣದ್ರಾಕ್ಷಿಗಳು ಆರೋಗ್ಯಕ್ಕೆ ಒಳ್ಳೆಯದು. ಆದರೆ ಇಂದು ನಾವು ನಿಮಗೆ ಹೆಚ್ಚು ಪ್ರಯೋಜನಕಾರಿ ಒಣದ್ರಾಕ್ಷಿಗಳನ್ನು ಹೇಳುತ್ತಿದ್ದೇವೆ. ಒಣದ್ರಾಕ್ಷಿವೆ ಅನೇಕ ಅಂಶಗಳು ಒಣದ್ರಾಕ್ಷಿಗಳನ್ನು ಡೈಫ್ರೂಟ್‌ಗಳಲ್ಲಿ ಸೇರಿಸಲಾಗಿದೆ. ಇದು ತುಂಬಾ ಅಗ್ಗ ಮತ್ತು ರುಚಿಕರವಾಗಿದೆ. ಒಣದ್ರಾಕ್ಷಿ ಪೋಷಕಾಂಶಗಳ ಉಗ್ರಾಣವಾಗಿದೆ. ಇದರಲ್ಲಿ ಪ್ರೋಟೀನ್, ಕಬ್ಬಿಣ ಮತ್ತು ಫೈಬರ್ ಸಮೃದ್ಧವಾಗಿದೆ. ಇವುಗಳಲ್ಲಿ ವಿಟಮಿನ್ ಬಿ6, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ತಾಮ್ರದಂತಹ ಅನೇಕ ಅಂಶಗಳಿವೆ. ಇದು ಆಂಟಿಆಕ್ಸಿಡೆಂಟ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಸಹ ಹೊಂದಿದೆ. ಅವು ವಿಟಮಿನ್ ಇ ಮತ್ತು ಆರೋಗ್ಯಕರ ಕೊಬ್ಬಿನ ಮೂಲವಾಗಿದೆ. https://kannadanewsnow.com/kannada/lectureal-suceide-in-udupi-not-reason/ ಯಾವ ಒಣದ್ರಾಕ್ಷಿ ಆರೋಗ್ಯಕ್ಕೆ ಉತ್ತಮ?…
ಬೆಂಗಳೂರು: ‘ಯಡಿಯೂರಪ್ಪನವರು ( BS Yediyurappa ) ನಿನ್ನೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿರೋಧ ಪಕ್ಷವಾಗಿ ಕಾಂಗ್ರೆಸ್ ( Congress ) ಯಡಿಯೂರಪ್ಪನವರ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರಗಳನ್ನು ವಿಧಾನ ಮಂಡಳದ ಒಳಗೆ ಹಾಗೂ ಹೋರಗೆ ಟೀಕಿಸಿದೆ. ಆದರೆ ಯಡಿಯೂರಪ್ಪನವರು ಹಿರಿಯ ರಾಜಕಾರಣಿಯಾಗಿದ್ದು, ಅವರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಇದುವರೆಗೂ ಅವರನ್ನು ಯಾವ ಕಾರಣಕ್ಕೆ ಕೆಳಗಿಳಿಸಲಾಯಿತು ಎಂಬುದರ ಬಗ್ಗೆ ಬಿಜೆಪಿ ಸೂಕ್ತ ಕಾರಣ ನೀಡಿಲ್ಲ ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ( KPCC communication department vice-president Ramesh Babu ) ಹೇಳಿದ್ದಾರೆ. https://kannadanewsnow.com/kannada/ex-mlc-ramesh-babu-hurls-explosive-bomb-at-minister-ashwathnarayan-demands-judicial-probe/ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೇರಳದಲ್ಲಿ 85 ವರ್ಷದ ಹಿರಿಯರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಕಟಿಸಿದ್ದ ಬಿಜೆಪಿ ಯಡಿಯೂರಪ್ಪನವರಗೆ 75 ವರ್ಷವಾಯಿತು ಎಂಬ ವಿಚಾರವಾಗಿ ಹುದ್ದೆಯಿಂದ ಕೆಳಗಿಳಿಸಯಾಯಿತೇ? ಬಿಜೆಪಿ ನಾಯಕರೇ ಹೇಳುವಂತೆ ಅಪ್ಪ ಮಕ್ಕಳನ್ನು ಹೊರಗಿಟ್ಟು ಪಕ್ಷವನ್ನು ಕಟ್ಟಬೇಕು…
ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ, ಪ್ರಸ್ತುತ ನ್ಯಾಯಾಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಪಟ್ಟಿ ಮಾಡುವಾಗ, ದೇಶದ ಹಲವಾರು ಮಾಧ್ಯಮ ಸಂಸ್ಥೆಗಳು “ಕಾಂಗರೂ ನ್ಯಾಯಾಲಯಗಳನ್ನು ನಡೆಸುತ್ತಿವೆ… ಸಮಸ್ಯೆಗಳ ಬಗ್ಗೆ ಅನುಭವಿ ನ್ಯಾಯಾಧೀಶರಿಗೂ ಸಹ ನಿರ್ಧರಿಸಲು ಕಷ್ಟವಾಗುತ್ತದೆ” ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಯಾಧೀಶರ ವಿರುದ್ಧ ಮಾಧ್ಯಮಗಳಲ್ಲಿ, ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ “ಸಂಘಟಿತ ಅಭಿಯಾನಗಳು” ಮತ್ತು ನ್ಯಾಯಾಲಯಗಳ ಮುಂದಿರುವ ಪ್ರಕರಣಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ “ತಪ್ಪು ತಿಳುವಳಿಕೆ ಮತ್ತು ಕಾರ್ಯಸೂಚಿ ಚಾಲಿತ ಚರ್ಚೆಗಳು” ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಶನಿವಾರ ಕಳವಳ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ಸತ್ಯ ಬ್ರಾಟಾ ಸಿನ್ಹಾ ಅವರ ಸ್ಮರಣಾರ್ಥ ಸ್ಥಾಪಿಸಲಾದ ಉದ್ಘಾಟನಾ ಉಪನ್ಯಾಸವನ್ನು ನೀಡಿದ ಸಿಜೆಐ ರಮಣ, ದೇಶದ ಹಲವಾರು ಮಾಧ್ಯಮ ಸಂಸ್ಥೆಗಳು “ಕಾಂಗರೂ ನ್ಯಾಯಾಲಯಗಳನ್ನು ನಡೆಸುತ್ತಿವೆ… ಸಮಸ್ಯೆಗಳ ಬಗ್ಗೆ ಅನುಭವಿ ನ್ಯಾಯಾಧೀಶರಿಗೂ ಸಹ ನಿರ್ಧರಿಸಲು ಕಷ್ಟವಾಗುತ್ತದೆ ಅಂತ ಹೇಳಿದ್ದಾರೆ.
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಹೃದ್ರೋಗಗಳ ಅಪಾಯವು ತುಂಬಾ ಹೆಚ್ಚಾಗಿದೆ, ಇದರಲ್ಲಿ ಹೃದಯಾಘಾತ, ಹೃದಯ ಸ್ತಂಭನದಂತಹ ಪರಿಸ್ಥಿತಿಗಳು ಮಾರಣಾಂತಿಕವಾಗಬಹುದು. ಡಬ್ಲ್ಯುಎಚ್ಒ ಪ್ರಕಾರ, ವಿವಿಧ ಹೃದ್ರೋಗಗಳು ಪ್ರತಿ ವರ್ಷ ಸುಮಾರು 17.9 ಮಿಲಿಯನ್ ಸಾವುಗಳಿಗೆ ಕಾರಣವಾಗಿವೆ. https://kannadanewsnow.com/kannada/ex-mlc-ramesh-babu-hurls-explosive-bomb-at-minister-ashwathnarayan-demands-judicial-probe/ ಆದರೆ ಸಂಶೋಧನೆಯ ಪ್ರಕಾರ, ಪ್ರತಿದಿನ ಕೇವಲ 21 ನಿಮಿಷಗಳ ಕಾಲ ನಡೆಯುವ ಮೂಲಕ ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡಬಹುದು. ವಾಕಿಂಗ್ ನ ಪ್ರಯೋಜನಗಳು ಮತ್ತು ಹೃದ್ರೋಗಗಳ ಅಪಾಯದ ನಡುವಿನ ಸಂಬಂಧದ ಬಗ್ಗೆ ಈ ಸಂಶೋಧನೆಯು ಏನು ಹೇಳುತ್ತದೆ ಎಂಬುದನ್ನು ನಾವು ತಿಳಿದುಕೊಳ್ಳೋಣ (ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ನಡಿಗೆ). ಪ್ರತಿದಿನ 21 ನಿಮಿಷಗಳ ಕಾಲ ನಡಿಗೆಯ ಮೂಲಕ ಹೃದ್ರೋಗ ಅಪಾಯ ತಪ್ಪಿಸಬಹುದು ಹಾರ್ವರ್ಡ್ ಮೆಡಿಕಲ್ ಸ್ಕೂಲ್ ಇತ್ತೀಚೆಗೆ ಒಂದು ಅಧ್ಯಯನವನ್ನು ನಡೆಸಿದೆ, ಅದು ಪ್ರತಿದಿನ 21 ನಿಮಿಷಗಳ ಕಾಲ ನಡೆಯುವ ಮೂಲಕ ಹೃದ್ರೋಗಗಳ ಅಪಾಯ ಸುಮಾರು 30 ಪ್ರತಿಶತದಷ್ಟು ಕಡಿಮೆ ಮಾಡಬಹುದು. ಈ ಮೊತ್ತವು ವಾರದಲ್ಲಿ ಎರಡೂವರೆ ಗಂಟೆಗಳ ಕಾಲ ನಡೆದಾಡುವುದಕ್ಕೆ…
ಬೆಂಗಳೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ( Karnataka State Open University – KSOU ) ಸುಮಾರು 85 ಕೋಟಿ ರೂ.ನಷ್ಟು ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ( Minister Ashwathnarayana ) ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿದೆ. ಅಲ್ಲದೆ ಕರ್ನಾಟಕ ಮುಕ್ತ ವಿವಿ ವತಿಯಿಂದ ಮಾಡಲಾದ ವಿವಿದ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದೆಲ್ಲದರ ವಿರುದ್ಧ ನ್ಯಾಯಾಂಗ ತನಿಖೆ ಆಗಬೇಕು’ ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ( Ramesh Babu ) ಆಗ್ರಹಿಸಿದರು. ಇಂದು ಅವರು ಪಕ್ಷದ ಕಚೇರಿಯಲ್ಲಿ ಶನಿವಾರ ಮಾಧ್ಯಮಗೋಷ್ಠಿ ನಡೆಸಿ, ‘ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು 1992ರ ಕಾಯಿದೆ ಅಡಿಯಲ್ಲಿ ರಚನೆಯಾಗಿದ್ದು, ಕಲಂ 4ರ ಅಡಿಯಲ್ಲಿ ತನ್ನ ಧೈಯೋದ್ದೇಶಗಳ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು. ಈ ವಿಶ್ವ ವಿದ್ಯಾಲಯಕ್ಕೆ ಮಾನ್ಯ ರಾಜ್ಯಪಾಲರು ಕುಲಾಧಿಪತಿಗಳಾಗಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಡಾ||…
ಉಡುಪಿ: ಕುಂದಾಪುರದಲ್ಲಿ ಖಾಸಗಿ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಗೌಡ ನೇಣಿಕೆ ಶರಣಾದ ಉಪನ್ಯಾಸಕ. https://kannadanewsnow.com/kannada/if-you-have-a-bad-habit-of-using-mobile-phones-in-the-toilet-then-this-problem-will-not-be-avoided-heres-the-information-of-experts-on-this/ ಕುಂದಾಪುರ ಅಂಕದಟ್ಟೆ ಬಾಡಿಗೆ ಮನೆಯಲ್ಲಿ ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಎರಡು ತಿಂಗಳ ಹಿಂದೆ ಆನಂದ್ ಅವರ ಮದುವೆ ನಡೆದಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಅತ್ಯಾಚಾರ ಮತ್ತು ಮಗುವಿನ ಜನನದ ನಂತ್ರ ಅಪ್ರಾಪ್ತ ವಯಸ್ಕಳನ್ನ ಮದುವೆಯಾಗುವ ಆಧಾರದ ಮೇಲೆ ಅಪರಾಧದ ಗಂಭೀರತೆ ಕಡಿಮೆಯಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಂತಹ ಸಂದರ್ಭದಲ್ಲಿ, ಅಪ್ರಾಪ್ತ ವಯಸ್ಕಳ ಸಮ್ಮತಿಯು ಅರ್ಥಪೂರ್ಣವಾಗಿರುವುದಿಲ್ಲ, ಹಾಗಾಗಿ ಕಾನೂನಿನ ಅಡಿಯಲ್ಲಿ ಯಾವುದೇ ಪ್ರಾಮುಖ್ಯತೆ ಹೊಂದಿರೋದಿಲ್ಲ. ಆರೋಪಿಗಳ ಜಾಮೀನು ಅರ್ಜಿಯನ್ನ ತಿರಸ್ಕರಿಸುವಾಗ ನ್ಯಾಯಾಲಯವು ಈ ಅಭಿಪ್ರಾಯವನ್ನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಅನೂಪ್ ಕುಮಾರ್ ಮೆಂಡಿರಟ್ಟಾ ಅವ್ರು ತಮ್ಮ ತೀರ್ಪಿನಲ್ಲಿ, “ಅಪ್ರಾಪ್ತ ವಯಸ್ಕರು ಲೈಂಗಿಕ ಸಂಬಂಧದ ಆಮಿಷಕ್ಕೆ ಒಳಗಾದ ನಂತ್ರ ಅವರ ಒಪ್ಪಿಗೆಯ ಹಕ್ಕನ್ನ ನಿಯಮಿತವಾಗಿ ಪರಿಗಣಿಸಲಾಗುವುದಿಲ್ಲ ಎಂದು ಹೇಳಿದರು. ಯಾಕಂದ್ರೆ, ಅತ್ಯಾಚಾರದ ಬಲಿಪಶುವಿನ ವಿರುದ್ಧದ ಅಪರಾಧ ಮಾತ್ರವಲ್ಲ, ಸಮಾಜದ ವಿರುದ್ಧವೂ ಆಗಿದೆ ಎಂದರು. ಸೆಕ್ಷನ್ 363, 366 ಮತ್ತು 376 ರ ಅಡಿಯಲ್ಲಿ ದಾಖಲಾದ ಎಫ್ಐಆರ್ನಲ್ಲಿ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸುವಾಗ ನ್ಯಾಯಾಲಯವು ಈ ಅಭಿಪ್ರಾಯವನ್ನ ವ್ಯಕ್ತಪಡಿಸಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ಎಫ್ಐಆರ್ ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳನ್ನು…
ಮುಂಬೈ: ತಂತ್ರಜ್ಞಾನ ಎಷ್ಟೇ ಮುಂದೆವರೆದರೂ ಇನ್ನೂ ಕೆಲವೊಂದು ರಾಜ್ಯಗಳಲ್ಲಿನ ಹಳ್ಳಿಗಳು ಮೂಲಭೂತ ಸೌಕರ್ಯದ ಕೊರತೆಯಿಂದ ವಂಚಿತವಾಗಿವೆ. ಅದಕ್ಕೆ ಈ ಘಟನೆಯೇ ಉತ್ತಮ ಉದಾಹರಣೆಯಾಗಿದೆ. ಮಹಾರಾಷ್ಟ್ರದ ಗ್ರಾಮಸ್ಥರ ಗುಂಪೊಂದು ಅಪಘಾತದಲ್ಲಿ ಗಾಯಗೊಂಡ ಮಹಿಳೆಯನ್ನು ಬಟ್ಟೆಯ ಸ್ಟ್ರೆಚರ್ನಲ್ಲಿ ಕಿಲೋಮೀಟರ್ ಗಟ್ಟಲೇ ನದಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಿದ್ದಾರೆ. ರಸ್ತೆಗಳು ಮತ್ತು ಆಸ್ಪತ್ರೆಗಳಂತಹ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಬುಡಕಟ್ಟು ಪ್ರಾಬಲ್ಯವಿರುವ ಪಾಲ್ಘರ್‌ನ ಹಳ್ಳಿಯಲ್ಲಿ ಈ ಘಟನೆ ವರದಿಯಾಗಿದೆ. https://twitter.com/sunilcredible/status/1550702693030563841 ಲಕ್ಷ್ಮಿ ಘಟಾಲ್ (40) ಎಂಬ ಮಹಿಳೆ ಅಪಘಾತದಲ್ಲಿ ಗಾಯಗೊಂಡಿದ್ದರು. ಇವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಆಸ್ಪತ್ರೆಗೆ ಸೇರಿಸಬೇಕಿತ್ತು. ಮಹಿಳೆ ನಡೆದಾಡಲೂಸಾಧ್ಯವಾಗದ ಕಾರಣ ಅಲ್ಲಿನ ಗ್ರಾಮಸ್ಥರು ತಾತ್ಕಾಲಿಕ ಬಟ್ಟೆಯ ಸ್ಟ್ರೆಚರ್ನಲ್ಲಿ ಗ್ರಾಮಸ್ಥರು ಬಲವಾದ ನದಿಯ ಪ್ರವಾಹ ಮತ್ತು ಪರ್ವತದ ಜಾರು ಹಾದಿಯನ್ನು ದಾಟಿ ಮೂರು ಕಿಲೋಮೀಟರ್‌ಗಳಷ್ಟು ಹತ್ತುವಿಕೆಗೆ ನಡೆದು ಮುಖ್ಯ ರಸ್ತೆಗೆ ಅವಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎನ್ನಲಾಗುತ್ತಿದೆ. ಘಟನೆಯ ವಿಡಿಯೋವನ್ನು ವ್ಯಕ್ತಿಯೋರ್ವರು ಟ್ವಿಟರ್ನಲ್ಲಿ ಶೇರ್ ಮಾಡಿದ್ದಾರೆ. https://kannadanewsnow.com/kannada/why-do-japanese-people-live-longer-the-explosive-secret-of-the-5-main-causes-has-been-revealed/
ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ( Congress Party ) ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ತಮ್ಮ ಸಮುದಾಯಗಳನ್ನು ಸಂಘಟನೆ ಮಾಡಿ, ಪಕ್ಷವನ್ನು ಅಧಿಕಾರಕ್ಕೆ ತನ್ನಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ( KPCC President DK Shivakumar ) ಅವರು ತಿಳಿಸಿದ್ದಾರೆ. https://kannadanewsnow.com/kannada/actor-arjun-sarjas-mother-lakshmi-devi-passes-away/ ಸದಾಶಿವನಗರ ನಿವಾಸದ ಬಳಿ ಶನಿವಾರ ಮಾಧ್ಯಮಗಳು ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ’ ಎಂದರು. https://kannadanewsnow.com/kannada/mla-zameer-ahmed-khan-gives-a-taqkar-to-dk-shivakumar-who-asked-him-to-work-with-his-mouth-shut-do-you-know-what/ ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ…
ಬೆಳಗಾವಿ: ಸಿದ್ದರಾಮಯ್ಯ ( Siddaramaiah ) ಅವರು ಮತ್ತೊಮ್ಮೆ ಸಿಎಂ ಆಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ, ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ( MLA Zameer Ahmad Khan ) ಹೇಳುವ ಮೂಲಕ, ಬಾಯಿಮುಚ್ಚಿಕೊಂಡು ಕೆಲಸ ಮಾಡ್ಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( DK Shivakumr ) ಹೇಳಿಕೆಗೆ ಟಕ್ಕರ್ ಕೊಟ್ಟಿದ್ದಾರೆ. https://kannadanewsnow.com/kannada/us-reports-first-cases-of-monkeypox-in-children-as-two-detected-with-viral-disease/ ಇಂದು ಬೆಳಗಾವಿ ಜಿಲ್ಲೆಯಲ್ಲಿ ಆಗಸ್ಟ್ 3ರಂದು ನಡೆಯಲಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ 75ನೇ ಜನ್ಮದಿನದ ಅಮೃತಮಹೋತ್ಸವ ಸಂಬಂಧದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕನ್ನು ಸಂವಿಧಾನ ಕಲ್ಪಿಸಿದೆ. ಆದರೆ, ನಮಗೆ ಎಲ್ಲಕ್ಕಿಂತ ಮೊದಲು ಪಕ್ಷ ಮುಖ್ಯ. ನಾವೆಲ್ಲರೂ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಾಗಿ ನಾಡಿನ ಜನರ ಸೇವೆ ಮಾಡುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/actor-arjun-sarjas-mother-lakshmi-devi-passes-away/…