Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಾರದ ರಜೆ ( Weekly Off ) ಮಂಜೂರು ಮಾಡಿ, ಆರೋಗ್ಯ ಇಲಾಖೆ ಆದೇಶಿಸಿದೆ. ಈ ಮೂಲಕ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. https://kannadanewsnow.com/kannada/bigg-news-good-news-for-workers-from-state-govt-monthly-pension-hiked-to-rs-3000/ ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಾದಂತ ಅರುಂಧತಿ ಅವರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳಿಗೆ ವಾರ್ಷಿಕ 10 ದಿನಗಳ ಸಾಂದರ್ಭಿಕ ರಜೆ ಮತ್ತು 10 ದಿನಗಳ ವೈದ್ಯಕೀಯ ರಜೆ ಪಡೆಯಲು ಹಾಗೂ ಗುತ್ತಿಗೆ ಸಿಬ್ಬಂದಿಗಳಿಗೆ 180 ದಿನಗಳ ಮಾತೃತ್ವ ರಜೆ, 15 ದಿನಗಳ ಪಿತೃತ್ವ ರಜೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/good-news-good-news-for-school-children-in-the-state-rs-123-crore-grant-approved-for-distribution-of-shoes-socks/ ದಿನಾಂಕ 24-02-2022 ಮತ್ತು 07-07-2022ರಂದು ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದಂತೆ, ಖಾಯಂ ನೌಕರರಂತೆಯೇ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ವಾರಕ್ಕೊಮ್ಮೆ ಒಂದು ದಿನ ( Weekly Off ) ರಜೆ ಪಡೆಯಬೇಕಾಗಿರುತ್ತದೆ. ಆದ್ದರಿಂದ…
ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶ್ರಮಿಕ ಫಲಾನುಭವಿಗಳಿಗೆ ನೀಡುತ್ತಿರುವ ಮಾಸಿಕ ಪಿಂಚಣಿಯನ್ನು ಎರಡು ಸಾವಿರ ರೂ.ನಿಂದ ಮೂರು ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. https://kannadanewsnow.com/kannada/good-news-good-news-for-school-children-in-the-state-rs-123-crore-grant-approved-for-distribution-of-shoes-socks/ ಶುಕ್ರವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾನ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಾರಿ ಮಾಡಲಾಗಿರುವ ಹಲವು ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಧನ ಸಹಾಯದಲ್ಲಿ ಏರಿಕೆ ಮಾಡಿರುವುದರ ಜೊತೆಗೆ ನೋಂದಣಿ ವಂತಿಗೆ ರಿಯಾಯತಿ, ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ವಿತರಣೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. https://kannadanewsnow.com/kannada/bigg-news-electricity-price-hiked-by-80-paise-by-central-government/ ಇನ್ನು ಫಲಾನುಭವಿಗಳ ನೋಂದಣಿ ವೇಳೆ ಮಂಡಳಿಗೆ ಪಾವತಿಸಬೇಕಿರುವ ವಂತಿಗೆ ಹಣ ಸಂಪೂರ್ಣ ಮನ್ನಾ ಮಾಡುವ ಶ್ರಮ ಸಾಮರ್ಥ್ಯ ಸೌಲಭ್ಯದಡಿ ಮಂಡಳಿಯ ಫಲಾನುಭವಿಗಳು ತರಬೇತಿ ಪಡೆಯದೆಯೇ ಜೇಷ್ಠತೆ ಆಧಾರದಲ್ಲಿ ಟೂಲ್ ಕಿಟ್ ಪಡೆಯಲು ಗೃಹ ಭಾಗ್ಯ ಸೌಲಭ್ಯದಡಿ ಅರ್ಹಹ ಫಲಾನುಭವಿಗಳಿಗೆ ಮನೆ ಕಟ್ಟಲು ನೀಡುವ ಧನ…
ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಗೊಂಡು ಹಲವು ತಿಂಗಳುಗಳೇ ಕಳೆದಿದ್ದರೂ, ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ ಮಾಡಿರಲಿಲ್ಲ. ಈ ಬಗ್ಗೆ ವಿಪಕ್ಷಗಳ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು. ಈ ಬೆನ್ನಲ್ಲೇ ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೂ, ಸಾಕ್ಸ್ ವಿತರಣೆಗಾಗಿ 123 ಕೋಟಿ ಅನುದಾನಕ್ಕೆ ಅನುಮೋದನೆಯನ್ನು ನೀಡಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದಂತ ಸಚಿವ ಜೆ ಸಿ ಮಾಧುಸ್ವಾಮಿಯವರು, ರಸಗೊಬ್ಬರ ದಾಸ್ತಾನಿಗೆ ಬ್ಯಾಂಕ್ ಗ್ಯಾರೆಂಟಿ, ಕೃಷಿ ಇಲಾಖೆಗೆ ಶೂರಿಟಿ ಕೊಡಲು ಅವಕಾಶ ಮಾಡಿಕೊಡಲಾಗಿದೆ ಎಂದರು. ಕಂಪ್ಲಿಯಲ್ಲಿ 100 ಹಾಸಿಗೆ ಆಸ್ಪತ್ರೆಗೆ ಅನುಮತಿ ನೀಡಲಾಗಿದೆ. 20 ಕೋಟಿರೂ.ವೆಚ್ಚದಲ್ಲಿ ಅನುಮತಿಸಲಾಗಿದೆ. ಉದ್ಯೋಗ ನೀತಿ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಈ ಮೂಲಕ ಉದ್ಯೋಗಾವಕಾಶ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದರು. ಕೆಟಗರಿ ವೈಸ್ ಅವಕಾಶ ನೀಡಲು ಅನುಮತಿಸಲಾಗಿದೆ. 50 ಕೋಟಿ ವರೆಗೆ ಬಂಡವಾಳ ಹಾಕಲು ಅವಕಾಶ ನೀಡಲಾಗುತ್ತಿದೆ. ಕನ್ನಡಿಗರಿಗೆ ಉದ್ಯೋಗಾವಕಾಶ ನೀಡಬೇಕು. ಯಾರು ಕಂಪನಿ ಮಾಡ್ತಾರೆ ಅವರು ನೀಡಬೇಕು ಎಂದರು.…
ಬೆಂಗಳೂರು : ಕನ್ನಡಿಗರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆ ಆಧರಿಸಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚುವರಿ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಉದ್ಯೋಗ ನೀತಿ 2022-25 ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ. https://kannadanewsnow.com/kannada/bigg-news-electricity-price-hiked-by-80-paise-by-central-government/ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದಂತ ಸಚಿವ ಜೆ ಸಿ ಮಾಧುಸ್ವಾಮಿಯವರು,. ಈ ಸಭೆಯಲ್ಲಿ ಹೆಚ್ಚುವರಿ ಹೂಡಿಕೆ ಮಾಡುವ ಕಂಪನಿಗಳ ಆಧಾರದ ಮೇಲೆ ಕನ್ನಡಿಗರಿಗೆ ಶೇ. 2.5 ರಿಂದಶೇ. 3 ರಷ್ಟು ಉದ್ಯೋ ನೀಡುವ ನೀತಿ ಇದಾಗಿದೆ. ಸಣ್ಣ, ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆ ಆಧರಿಸಿ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ನೀತಿಯ ಮೂಲಕ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಸಭೆಯಲ್ಲಿ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ( School Children’s ) ಒಂದು…
ನವದೆಹಲಿ : ಹಣದುಬ್ಬರ ಏರಿಕೆಯ ನಡುವೆಯೇ ಜನಸಾಮಾನ್ಯರಿಗೆ ಮತ್ತೊಮ್ಮೆ ಶಾಕ್ ಸಿಗಲಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ. ವಾಸ್ತವವಾಗಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 76 ಮಿಲಿಯನ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಯೋಜಿಸಿದೆ. ಆಮದು ಮಾಡಿಕೊಳ್ಳುವ ಕಲ್ಲಿದ್ದಲಿನ ದುಬಾರಿ ಬೆಲೆಯಿಂದಾಗಿ ದೇಶದಲ್ಲಿ ವಿದ್ಯುತ್ 50 ರಿಂದ 80 ಪೈಸೆಗಳಷ್ಟು ದುಬಾರಿಯಾಗಬಹುದು. ಇನ್ನು ರಾಜ್ಯಗಳು ಸಮುದ್ರ ಬಂದರಿನಿಂದ ದೂರವಿದ್ದಷ್ಟೂ ವಿದ್ಯುತ್ ಬೆಲೆ ಹೆಚ್ಚಾಗಬಹುದು. ನಿಮ್ಮ ವಿದ್ಯುತ್ ಬಿಲ್ ಹೆಚ್ಚಾಗುತ್ತದೆ.! ವರದಿಯ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 76 ಮಿಲಿಯನ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಸರ್ಕಾರ ಯೋಜಿಸಿದೆ. ಈ ಸಮಯದಲ್ಲಿ, ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ವಿದ್ಯುತ್ ಕೇಂದ್ರಗಳಿಗೆ ಪೂರೈಕೆಗಾಗಿ 15 ಮಿಲಿಯನ್ ಟನ್‌ಗಳನ್ನು ಆಮದು ಮಾಡಿಕೊಳ್ಳುತ್ತದೆ. ಅದೇ ಸಮಯದಲ್ಲಿ, ಅತಿದೊಡ್ಡ ವಿದ್ಯುತ್ ಉತ್ಪಾದಕರಾದ NTPC ಲಿಮಿಟೆಡ್ ಮತ್ತು ದಾಮೋದರ್ ವ್ಯಾಲಿ ಕಾರ್ಪೊರೇಷನ್ (DVC) 23 ಮಿಲಿಯನ್ ಟನ್‌ಗಳನ್ನು ಆಮದು ಮಾಡಿಕೊಳ್ಳುತ್ತವೆ. ಹೆಚ್ಚುವರಿಯಾಗಿ, ರಾಜ್ಯ…
ಬೆಂಗಳೂರು : ಮನಸ್ಸು ಮಾಡಿದ್ರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗುತ್ತಿದ್ದರು. ಆದ್ರೆ, ಅವ್ರು ತ್ಯಾಗ ಮಾಡಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, “ರಮೇಶ್ ಕುಮಾರ್ ಅವ್ರ ಹೇಳಿಕೆಯನ್ನ ತಪ್ಪಾಗಿ ಅರ್ಥೈಸಲಾಗಿದೆ. ಗಾಂಧಿ ಕುಟುಂಬದ ಕೊಡುಗೆಯ ಬಗ್ಗೆ ಅವ್ರು ಸ್ಪಷ್ಟಪಡಿಸಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಧಾನಿಯಾಗುತ್ತಿದ್ದರು. ಆದ್ರೆ, ಅವರು ತ್ಯಾಗ ಮಾಡಿದರು ಮತ್ತು ರಮೇಶ್ ಹೇಳಿದ್ದು ಇದನ್ನೇ” ಎಂದರು. ಅಂದ್ಹಾಗೆ, ಕಾಂಗ್ರೆಸ್ ಮುಖಂಡ ಕೆ.ಆರ್.ರಮೇಶ್ ಕುಮಾರ್, “ಪಂಡಿತ್ ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಹೆಸರಿನಲ್ಲಿ ನಾವು 3-4 ತಲೆಮಾರುಗಳಿಗೆ ಸಾಕಾಗುವಷ್ಟು ಸಂಪಾದಿಸಿದ್ದೇವೆ. ಈಗ ಅವರ ಋಣ ತಿರಿಸುವ ಸಮಯ ಬಂದಿದೆ. ಆ ಋಣ ತೀರಿಸಲು ನಾವು ಸಿದ್ಧರಿಲ್ಲದಿದ್ದರೆ, ನಾವು ತಿನ್ನುವ ಆಹಾರವು ಹುಳುವಾಗುತ್ತೆ” ಎಂದಿದ್ದರು. https://twitter.com/ANI/status/1550509292130045953?s=20
ಶಿವಮೊಗ್ಗ : ಸಾರ್ವಜನಿಕರ ಆಶಯಗಳಿಗೆ ಪೂರಕವಾಗಿ ಶಿಕಾರಿಪುರ ತಾಲೂಕನ್ನ ಅಭಿವೃದ್ಧಿಪಡಿಸಿ ರಾಜ್ಯದ ಮಾದರಿ ನಗರಗಳಲ್ಲೊಂದಾಗಿ ರೂಪಿಸಲಾಗಿದೆ ಎಂದು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಅವರು ಇಂದು ಶಿಕಾರಿಪುರ ಸಮಿಪದ ಅಂಜನಾಪುರ ಜಲಾಶಯಕ್ಕೆ ಪರಿವಾರದ ಸದಸ್ಯರೊಂದಿಗೆ ಆಗಮಿಸಿ, ಬಾಗಿನ ಅರ್ಪಿಸಿದ ನಂತರ ಏರ್ಪಡಿಸಲಾಗಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕಾರಿಪುರ ತಾಲೂಕಿನ ಜನರಿಗೆ ಅಗತ್ಯವಾಗಿರುವ ಅದರಲ್ಲೂ ವಿಶೇಷವಾಗಿ ಕೃಷಿ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಸಂಸದ ರಾಘವೇಂದ್ರ ಅವರ ಸಹಕಾರದೊಂದಿಗೆ ಅವಿರತವಾಗಿ ಶ್ರಮಿಸಲಾಗಿದೆ. ತಾಲೂಕಿನ ಎಲ್ಲಾ ಹೋಬಳಿಗಳ ಕೃಷಿ ಭೂಮಿಗೆ ನೀರನ್ನು ಒದಗಿಸಲು ಸುಮಾರು 2000ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗಿದೆ. ಇದಕ್ಕೆ ಪೂರಕವಾಗಿ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಒದಗಿಸಲು ತಾಲೂಕಿನ ಪ್ರತಿ ಹೋಬಳಿ ಕೇಂದ್ರಗಳಲ್ಲಿ ವಿದ್ಯುತ್ ಸ್ಥಾವರಗಳನ್ನು ನಿರ್ಮಿಸಿ ವಿದ್ಯುತ್ ಒದಗಿಸಲಾಗಿದೆ ಎಂದರು. ಅನ್ನದಾತನ ನೆಮ್ಮದಿಯ ಬದುಕಿಗೆ ಹಾಗೂ ತಾಲೂಕಿನ ಜನರ ಜೀವನಾಡಿಯಾಗಿರುವ ಅಂಜನಾಪುರ ಜಲಾಶಯ ಭರ್ತಿಯಾಗಿ ನೀರು ಹರಿಯುತ್ತಿರುವುದು…
ನವದೆಹಲಿ : ಹಣದುಬ್ಬರ ಏರಿಕೆಯ ನಡುವೆಯೇ ಜನಸಾಮಾನ್ಯರಿಗೆ ಮತ್ತೊಮ್ಮೆ ಶಾಕ್ ಸಿಗಲಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ. ವಾಸ್ತವವಾಗಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 76 ಮಿಲಿಯನ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಯೋಜಿಸಿದೆ. ಆಮದು ಮಾಡಿಕೊಳ್ಳುವ ಕಲ್ಲಿದ್ದಲಿನ ದುಬಾರಿ ಬೆಲೆಯಿಂದಾಗಿ ದೇಶದಲ್ಲಿ ವಿದ್ಯುತ್ 50 ರಿಂದ 80 ಪೈಸೆಗಳಷ್ಟು ದುಬಾರಿಯಾಗಬಹುದು. ಇನ್ನು ರಾಜ್ಯಗಳು ಸಮುದ್ರ ಬಂದರಿನಿಂದ ದೂರವಿದ್ದಷ್ಟೂ ವಿದ್ಯುತ್ ಬೆಲೆ ಹೆಚ್ಚಾಗಬಹುದು. ನಿಮ್ಮ ವಿದ್ಯುತ್ ಬಿಲ್ ಹೆಚ್ಚಾಗುತ್ತದೆ.! ವರದಿಯ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 76 ಮಿಲಿಯನ್ ಟನ್ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲು ಸರ್ಕಾರ ಯೋಜಿಸಿದೆ. ಈ ಸಮಯದಲ್ಲಿ, ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್) ವಿದ್ಯುತ್ ಕೇಂದ್ರಗಳಿಗೆ ಪೂರೈಕೆಗಾಗಿ 15 ಮಿಲಿಯನ್ ಟನ್‌ಗಳನ್ನು ಆಮದು ಮಾಡಿಕೊಳ್ಳುತ್ತದೆ. ಅದೇ ಸಮಯದಲ್ಲಿ, ಅತಿದೊಡ್ಡ ವಿದ್ಯುತ್ ಉತ್ಪಾದಕರಾದ NTPC ಲಿಮಿಟೆಡ್ ಮತ್ತು ದಾಮೋದರ್ ವ್ಯಾಲಿ ಕಾರ್ಪೊರೇಷನ್ (DVC) 23 ಮಿಲಿಯನ್ ಟನ್‌ಗಳನ್ನು ಆಮದು ಮಾಡಿಕೊಳ್ಳುತ್ತವೆ. ಹೆಚ್ಚುವರಿಯಾಗಿ, ರಾಜ್ಯ…
ಹಾವೇರಿ: ನ್ಯಾಷನಲ್ ಇ-ಸ್ಕಾಲರ್‍ಶಿಫ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ 2022-23ನೇ ಸಾಲಿನ ಪ್ರೀ-ಮ್ಯಾಟ್ರಿಕ್ ಹಾಗೂ ಪೋಸ್ಟ್ ಮ್ಯಾಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯ ವಿಕಲಚೇತನ ವಿದ್ಯಾರ್ಥಿಗಳು ಆಯಾ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳ ಮೂಲಕ ಪ್ರೀ-ಮ್ಯಾಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ದಿನಾಂಕ 30-09-2022 ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕಾಗಿ ದಿನಾಂಕ 31-10-2022 ರೊಳಗಾಗಿ www.scholarship.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಮ್ಯಾನುವೆಲ್ ದ್ವಿಪ್ರತಿ ಅರ್ಜಿಗಳನ್ನು ಆಯಾ ತಾಲೂಕಿನ ಎಂ.ಆರ್.ಡಬ್ಲ್ಯೂ, ವಿ.ಆರ್. ಡಬ್ಲ್ಯೂ ಹಾಗೂ ಯು.ಆರ್.ಡಬ್ಲ್ಯೂ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್ ಅವರು ತಿಳಿಸಿದ್ದಾರೆ.
ಚಾಮರಾಜನಗರ: ಕಾವೇರಿ ಹಾಗೂ ಕಬಿನಿ ನದಿಯಲ್ಲಿ ಪ್ರವಾಹ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಜಲಪಾತಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ. ಈ ಮೂಲಕ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದೆ. https://kannadanewsnow.com/kannada/former-cm-bs-yediyurappa-is-neither-tired-nor-retired-cm-bommai/ ಈ ಕುರಿತಂತೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಕೇರಳ ರಾಜ್ಯದ ವೈನಾಡು ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ಪ್ರಮಾಣವು ಗಣನೀಯವಾಗಿ ಇಳಿಮುಖವಾಗಿರುವುದರಿಂದ ಕಾವೇರಿ ಹಾಗೂ ಕಬಿನಿ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿರುತ್ತದೆ. ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೆನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/maratha-community-development-corporation-invites-applications-for-loan-facility/ ಈ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲೂಕಿನ ಹೊಗೆನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಲಾಗಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/kasturirangan-report-rejected-cabinet-meeting-to-inform-centre/