Author: KNN IT TEAM

ಟರ್ಕಿ: ವೈಮಾನಿಕ ದಾಳಿಯಲ್ಲಿ ಉತ್ತರ ಇರಾಕ್ ನಲ್ಲಿ ಎಂಟು ಪ್ರವಾಸಿಗರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಇರಾಕ್ ಕುರ್ದಿಶ್ ಅಧಿಕಾರಿಗಳು ತಿಳಿಸಿದ್ದಾರೆ. ಝಖೋ ಜಿಲ್ಲೆಯ ಬಾರಾಖ್ನ ರೆಸಾರ್ಟ್ ಪ್ರದೇಶದಲ್ಲಿ ಕನಿಷ್ಠ ನಾಲ್ಕು ಕ್ಷಿಪಣಿಗಳು ದಾಳಿ ನಡೆಸಿವೆ ಎಂದು ಜಿಲ್ಲಾ ಮೇಯರ್ ಮುಶೀರ್ ಮೊಹಮ್ಮದ್ ತಿಳಿಸಿದ್ದಾರೆ. ಮೃತರೆಲ್ಲರೂ ಇರಾಕಿ ಪ್ರಜೆಗಳಾಗಿದ್ದಾರೆ ಎಂದು ಹೇಳಲಾಗಿದೆ. ಆದರೆ ಹಿನ್ನೆಲೆಯಲ್ಲಿ ಸ್ಫೋಟದ ಶಬ್ಧ ಕೇಳಿಬಂದಿವೆ.ಹವಾಮಾನವು ತಂಪಾಗಿರುವುದರಿಂದ ಬೇಸಿಗೆಯ ಉತ್ತುಂಗದ ತಿಂಗಳುಗಳಲ್ಲಿ ನೂರಾರು ಇರಾಕಿ ಪ್ರವಾಸಿಗರು ದಕ್ಷಿಣದಿಂದ ಕುರ್ದಿಶ್ ಪ್ರದೇಶಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ. ಝಖೋದಲ್ಲಿನ ಪ್ರವಾಸಿ ತಾಣವು ಟರ್ಕಿ ಸ್ಥಾಪಿಸಿದ ಮಿಲಿಟರಿ ನೆಲೆಗಳ ಸಮೀಪದಲ್ಲಿದೆ.ಪ್ರಧಾನಮಂತ್ರಿ ಮುಸ್ತಫಾ ಅಲ್-ಕಧಿಮಿ ಅವರು ವಿದೇಶಾಂಗ ಸಚಿವ ಫುವಾದ್ ಹುಸೇನ್ ನೇತೃತ್ವದ ನಿಯೋಗವನ್ನು ಈ ಪ್ರದೇಶಕ್ಕೆ ಕಳುಹಿಸಿದರು. ಟರ್ಕಿಯು ಉತ್ತರ ಇರಾಕ್ ಮೇಲೆ ನಿಯಮಿತವಾಗಿ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ನಿಷೇಧಿತ ಕುರ್ದಿಸ್ತಾನ್ ವರ್ಕರ್ಸ್ ಪಾರ್ಟಿ ಅಥವಾ ಪಿಕೆಕೆಯ ಅಂಶಗಳನ್ನು ಗುರಿಯಾಗಿಸಿಕೊಂಡು ತನ್ನ ಆಕ್ರಮಣಗಳನ್ನು ಬೆಂಬಲಿಸಲು ಕಮಾಂಡೋಗಳನ್ನು ಕಳುಹಿಸಲಾಗಿದೆ.

Read More

ಬೆಂಗಳೂರು : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. https://kannadanewsnow.com/kannada/tripura-cm-manik-saha-tests-positive-for-covid-19/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿಯಾಗಿದ್ದು, ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ಸಂಪೂರ್ಣವಾಗಿ ನಿಂತ ಬಳಿಕ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರದಿಂದ ಶೀಘ್ರ ಪರಿಹಾರ ಹಣ ನೀಡಲಾಗುವುದು. ನಂತರ ಕೇಂದ್ರದಿಂದ ಬರುವ ಹಣವನ್ನು ರಾಜ್ಯ ಸರ್ಕಾರ ಬಳಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-construction-of-park-near-kabini-dam-to-begin-this-year-cm-bommai/

Read More

ಅಗರ್ತಲಾ (ತ್ರಿಪುರ) : ತ್ರಿಪುರಾ ಮುಖ್ಯಮಂತ್ರಿ ಡಾ ಮಾಣಿಕ್ ಸಹಾ(Tripura CM Manik Saha)  ಅವರಿಗೆ ಬುಧವಾರ ಕೋವಿಡ್‌ ಪಾಸಿಟಿವ್‌ ಬಂದಿದ್ದು, ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಣಿಕ್ ಸಹಾ, “ನಾನು ಇಂದು ಕೋವಿಡ್ -19 ಟೆಸ್ಟ್‌ ಮಾಡಿಸಿದ್ದೇನೆ. ಅದರಲ್ಲಿ ಪಾಸಿಟಿವ್‌ ಬಂದಿದೆ. ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಯಾವುದೇ ರೋಗಲಕ್ಷಣಗಳಿಲ್ಲದೆ ಉತ್ತಮವಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರಿಗೂ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಮ್ರವಾಗಿ ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ. I’ve been tested Covid-19 positive today. I am absolutely fit & fine with no symptoms. I humbly request all those who’ve come in contact with me to take necessary precautions. pic.twitter.com/RcKDcLSiNx — Prof.(Dr.) Manik Saha (@DrManikSaha2) July 20, 2022…

Read More

ಬಳ್ಳಾರಿ : ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿನ ವಿವಿಧ ಯೋಜನೆಗಳಡಿ ಪರಿಶಿಷ್ಟ ಪಂಗಡದವರು ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯ ಜನಾಂಗದ ಅರ್ಹ ಫಲಾಪೇಕ್ಷಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bigg-news-construction-of-park-near-kabini-dam-to-begin-this-year-cm-bommai/ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆ.20 ಆಗಿರುತ್ತದೆ. *ಯೋಜನೆಗಳು: ನೇರಸಾಲ ಯೋಜನೆ-ಘಟಕವೆಚ್ಚ ರೂ.1ಲಕ್ಷ ಇದರಲ್ಲಿ ಶೇ.50ರಷ್ಟು ನಿಗಮದಿಂದ ಸಾಲ ಮತ್ತು ಶೇ.50 ಸಹಾಯಧನ ನೀಡಲಾಗುವುದು. *ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-ಇ.ವಿ. ಮತ್ತು ಇತರೆ ದ್ವಿಚಕ್ರ ವಾಹನ ಖರೀದಿ (ಇ-ಕಾಮರ್ಸ್‍ನಡಿಯಲ್ಲಿ ಕಂಪನಿಗಳಿಂದ ಗ್ರಾಹಕರಿಗೆ ಸರಕು ತಲುಪಿಸಲು) ಗರಿಷ್ಟ ರೂ.50ಸಾವಿರ ಸಹಾಯಧನ, ಉಳಿದ ಮೊತ್ತ ಬ್ಯಾಂಕ್ ಸಾಲ, ಐ.ಎಸ್.ಬಿ ಹಾಗೂ ಇತರೆ ಚಟುವಟಿಕೆಗಳಿಗಾಗಿ ಸಹಾಯಧನ: ಗರಿಷ್ಟ ರೂ.2 ಲಕ್ಷ, ಉಳಿದ ಮೊತ್ತ ಬ್ಯಾಂಕ್‍ನಿಂದ ಸಾಲ, ಸರಕು ಸಾಗಾಣಿಕೆ ವಾಹನ: ಗರಿಷ್ಟ ರೂ.3.50ಲಕ್ಷ, ಉಳಿದ ಮೊತ್ತ…

Read More

ಮೈಸೂರು : ಕಬಿನಿ ಅಣೆಕಟ್ಟು ಬಳಿ ಯೋಜಿಸಲಾಗಿರುವ ಉದ್ಯಾನವನ ನಿರ್ಮಾಣ ಈ ವರ್ಷ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. https://kannadanewsnow.com/kannada/president-election-2022-india-to-get-its-15th-prez-today-counting-to-start-at-11-am/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಬೇಕೇ ಅಥವಾ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಬೇಕೇ ಎಂಬ ಬಗ್ಗೆ ಸ್ವಲ್ಪ ಗೊಂದಲವಿದೆ ಎಂದು ಅವರು ಹೇಳಿದರು. ಈ ಗೊಂದಲವನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಮತ್ತು ಈ ವರ್ಷವೇ ಕಾಮಗಾರಿಗಳು ಪ್ರಾರಂಭವಾಗಲಿವೆ ಎಂದು ಅವರು ಹೇಳಿದರು. ಹಿಂದುಳಿದ ಜಿಲ್ಲೆಯಾದ ಎಚ್.ಡಿ.ಕೋಟೆ ತಾಲ್ಲೂಕಿಗೆ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಮತ್ತು ಹೆಚ್ಚಿನ ಕಾರ್ಯಕ್ರಮಗಳನ್ನು ಪರಿಚಯಿಸಲಾಗುವುದು ಎಂದು ಅವರು ಹೇಳಿದರು.

Read More

ದೆಹಲಿ: ಭಾರತದ ಮುಂದಿನ ಅಂದ್ರೆ, 15 ನೇ ರಾಷ್ಟ್ರಪತಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎಂದು ಇಂದು ಖಚಿತವಾಗಲಿದೆ. ರಾಷ್ಟ್ರಪತಿ ರಾಮನಥ್‌ ಕೋವಿಂದ್‌ ಅವರ ಅಧಿಕಾರಾವಧಿ ಜು. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹೊಸ ರಾಷ್ಟ್ರಪತಿ ಆಯ್ಕೆಗೆ ಜು. 18ರಂದು ಮತದಾನ ನಡೆದಿತ್ತು. ಇಂದು ಅದರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎನ್‌ಡಿಎ ಅಭ್ಯರ್ಥಿಗೆ ಸ್ಪರ್ಧೆಯಲ್ಲಿ ಸ್ಪಷ್ಟವಾದ ಬಲವಿದೆ ಎನ್ನಲಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷದ ಯಶವಂತ್ ಸಿನ್ಹಾ ಅವರು ಸ್ಪರ್ಧೆಯಲ್ಲಿ ಪರಸ್ಪರ ಸ್ಪರ್ಧಿಸಿದ್ದಾರೆ. ಮುರ್ಮು ಪರವಾಗಿ ಮತಗಳು ಸ್ಪಷ್ಟವಾಗಿ ಬಿದ್ದಿವೆ ಎನ್ನಲಾಗಿದೆ. ಬುಡಕಟ್ಟು ಜನಾಂಗದ ನಾಯಕಿ ಹಾಗೂ ಜಾರ್ಖಂಡ್​​​ನ ಮಾಜಿ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ ರಾಷ್ಟ್ರಪತಿ ಹುದ್ದೆ ಅಲಂಕರಿಸುವ ಎರಡನೇ ಮಹಿಳೆ ಮತ್ತು ಬುಡಕಟ್ಟು ಜನಾಂಗದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ಎಂದು ಹೇಳುವಂತಹ ಒಂದು ಮಾಹಿತಿಯಲ್ಲಿ ನೀವೇನಾದರೂ ತಾಮ್ರದ ಚೊಂಬು ನೀರನ್ನು ಹಾಕಿ ಒಂದು ಜಾಗದಲ್ಲಿ ಇಟ್ಟರೆ ನಿಮ್ಮ ಮನೆಯಲ್ಲಿ ಇರುವಂತಹ ಎಲ್ಲ ರೀತಿಯ ಹಣಕಾಸಿನ ಸಮಸ್ಯೆಗಳು ಪರಿಹಾರವಾಗುತ್ತವೆ ಎನ್ನುವ ಮಾಹಿತಿಯನ್ನು ನಾನು ನಿಮಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆ ಹೌದು ಸಾಮಾನ್ಯವಾಗಿ ಎಲ್ಲರಿಗೂ ಒಂದು ದೊಡ್ಡ ಸಮಸ್ಯೆಯೆಂದರೆ ಹಣಕಾಸಿನ ಸಮಸ್ಯೆ ಇದು ಎಲ್ಲರ ಮನೆಯಲ್ಲಿ ಕೂಡ ಸಾಮಾನ್ಯವಾಗಿರುತ್ತದೆ ಮನೆಯಲ್ಲಿ ಇದು ವಿಪರೀತವಾಗಿರುತ್ತದೆ. ಇವರು ಪ್ರತಿನಿತ್ಯ ಎಷ್ಟೇ ಕೆಲಸ ಮಾಡಿದರೂ ಕೂಡ ಇವರ ಕೈಯಲ್ಲಿ ಹಣ ಎನ್ನುವುದು ನಿಲ್ಲುವುದಿಲ್ಲ ಅಂದರೆ ಲಕ್ಷ್ಮಿ ಎನ್ನುವುದು ಇವರಿಗೆ ಮನೆಯಲ್ಲಿ ಸ್ಥಿರವಾಗಿರುವುದಿಲ್ಲ ಎಷ್ಟು ಸಂಪಾದನೆ ಮಾಡಿದರು ಕೂಡ ಖರ್ಚು ಅಷ್ಟೇ ಇರುತ್ತದೆ ಹಾಗಾಗಿ ಇವರ ಮನೆಯಲ್ಲಿ ಎಷ್ಟು ದುಡಿದರೂ ಕೈಯಲ್ಲಿ ದುಡ್ಡು ಉಳಿಯುವುದಿಲ್ಲ ಅಂಥವರು ಈ ಒಂದು ಕೆಲಸವನ್ನು ಅಂದರೆ ಡಾಂಬರು ಚೆಂದವನ್ನು ಒಂದು…

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ(National Herald case)ಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಇಂದು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲಿದ್ದಾರೆ. ಸೋನಿಯಾ ಗಾಂಧಿ ಅವರನ್ನು ಬೆಂಬಲಿಸಿ ಇಂದು ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಏತನ್ಮಧ್ಯೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಪಕ್ಷದ ಇತರ ಹಿರಿಯ ನಾಯಕರು ಮತ್ತು ಸಂಸದರು ಈಗಾಗಲೇ ದೆಹಲಿಯಲ್ಲಿದ್ದಾರೆ. ಅವರು ನಿನ್ನೆ ಸಂಜೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸಭೆ ನಡೆಸಿದರು. ಸಂಸತ್ತಿನ ಉಭಯ ಸದನಗಳನ್ನು ಗುರುವಾರ ಮುಂದೂಡಲಾಗುವುದು ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಪಿಎಲ್ ಪುನಿಯಾ ಹೇಳಿದ್ದರು. ಪ್ರತಿಭಟನೆ ವೇಳೆ  ಎಲ್ಲಾ ಕಾಂಗ್ರೆಸ್ ಸಂಸದರು ಗುರುದ್ವಾರ ರಾಕಬ್‌ಗಂಜ್ ಬಳಿಯ ಪಂತ್ ಮಾರ್ಗ್‌ನಲ್ಲಿ ಒಟ್ಟುಗೂಡುತ್ತಾರೆ ಮತ್ತು ಅಲ್ಲಿಂದ ಒಟ್ಟಿಗೆ ಕಾಂಗ್ರೆಸ್ ಪ್ರಧಾನ ಕಚೇರಿಗೆ ತಲುಪುತ್ತಾರೆ. ಇನ್ನುಳಿದ ಕಾಂಗ್ರೆಸ್ ನಾಯಕರು ಮತ್ತು ಎಐಸಿಸಿ ಸದಸ್ಯರು ಸೋನಿಯಾ ಗಾಂಧಿ ಅವರನ್ನು…

Read More

ಉಡುಪಿ: ಟೋಲ್ ಬಳಿಯ ರಸ್ತೆಯಲ್ಲಿಯೇ ಮಲಗಿದ್ದಂತ ಧನವನ್ನು ಓಡಿಸಲು ಹೋಗಿದ್ದಂತ ಟೋಲ್ ಸಿಬ್ಬಂದಿಯನ್ನು ರಕ್ಷಿಸಲು ಹೋಗಿ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಗೆ ಡಿಕ್ಕಿಯಾದ ಪರಿಣಾಮ, ಆ್ಯಂಬುಲೆನ್ಸ್ ನಲ್ಲಿದ್ದಂತ ರೋಗಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಹೊನ್ನಾವರದಿಂದ ಕುಂದಾಪುರಕ್ಕೆ ಆ್ಯಂಬುಲೆನ್ಸ್ ನಲ್ಲಿ ರೋಗಿಯಾಗಿದ್ದಂತ ಲೋಕೇಶ ಮಾಧವ ನಾಯ್ಕ್ ಎಂಬುವರನ್ನು ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆ್ಯಂಬುಲೆನ್ಸ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಬೈದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿಯಲ್ಲಿ ಬಂದಾಗ, ಟೋಲ್ ಸಿಬ್ಬಂದಿಗಳು ಆ್ಯಂಬುಲೆನ್ಸ್ ಬಂದಿದ್ದನ್ನು ಗಮನಿಸಿ ರಸ್ತೆಗೆ ಅಡ್ಡವಾಗಿಟ್ಟಿದ್ದಂತ ಬ್ಯಾರಿಗೇಡ್ ತೆಗೆದಿದ್ದಾರೆ. ಮತ್ತೊಬ್ಬ ಸಿಬ್ಬಂದಿ ಅದೇ ರಸ್ತೆಯಲ್ಲಿ ಮಲಗಿದ್ದಂತ ಧನವನ್ನು ಓಡಿಸಿದ್ದಾರೆ. ಟೋಲ್ ಸಿಬ್ಬಂದಿ ಬ್ಯಾರಿಗೇಡ್, ಧನ ಓಡಿಸುತ್ತಿದ್ದನ್ನು ಕಂಡಂತ ಆ್ಯಂಬುಲೆನ್ಸ್ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ಟೋಲ್ ಗೆ ಡಿಕ್ಕಿ ಹೊಡೆದಿದ್ದಾನೆ. ಈ ಪರಿಣಾಮವಾಗಿ ಆ್ಯಂಬುಲೆನ್ಸ್ ಡೋರ್ ಓಪನ್ ಆಗಿ ರೋಗಿ ಲೋಕೇಶ್ ಮಾಧವ ನಾಯ್ಕ್ ಸ್ಟ್ರೆಚರ್ ನಿಂದ ಕೆಳಗೆ ಬಿದ್ದರೇ, ಅದರಲ್ಲಿದ್ದಂತ ಲೋಕೇಶ್ ಪತ್ನಿ ಜ್ಯೋತಿ, ಸಂಬಂಧಿಕರಾದಂತ ಗಜಾನನ ನಾಯಕ್…

Read More