Subscribe to Updates
Get the latest creative news from FooBar about art, design and business.
Author: KNN IT TEAM
ರಾಮನಗರ : ಚಾಮುಂಡೇಶ್ವರಿ, ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. https://kannadanewsnow.com/kannada/bill-gates-congratulates-pm-as-india-crosses-200-crore-covid-vaccinations/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನಲ್ಲಿ ಬಹಳ ಜನ ಸಿಎಂ ಆಗುವ ಇಚ್ಛೆ ಹೊಂದಿದ್ದಾರೆ. ಆದರೆ ಭಗವಂತನ ಇಚ್ಛೆ ಬೇರೆ ಇದೆ. ತಾಯಿ ಚಾಮುಂಡೇಶ್ವರಿ, ಜನರ ಆಶೀರ್ವಾದಿಂದ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ. ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್ ನವರಿಗೆ ಸೋನಿಯಾ ಗಾಂಧಿ ಚಿಂತೆ, ಬಿಜೆಪಿಯವರಿಗೆ ಮೋದಿ ಚಿಂತೆ ಆದರೆ ಜೆಡಿಎಸ್ ಗೆ ರೈತರು ಮತ್ತು ಕನ್ನಡ ನಾಡಿನ ಬಗ್ಗೆ ಚಿಂತೆ, ಮುಂದಿನ ಉತ್ಸವಕ್ಕೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಬರಲಿದ್ದಾರೆ. ಸಾಬರು ಹೇಳುವ ಮಾತು ಎಂದೂ ಸುಳ್ಳು ಆಗುವುದಿಲ್ಲ. ಕಾಂಗ್ರೆಸ್ ಪಕ್ಷ ವೈಕ್ತಿ ಉತ್ಸವ ಮಾಡುತ್ತಿದೆ. ಆದರೆ ಕುಮಾರಸ್ವಾಮಿ ಜಲೋತ್ಸವ ಮಾಡಿದರು ಎಂದರು.
Big news: 200 ಕೋಟಿ ಕೋವಿಡ್ ಲಸಿಕೆ ಮೈಲಿಗಲ್ಲು ಸಾಧಿಸಿದ ಭಾರತ: ಪ್ರಧಾನಿ ಮೋದಿಯನ್ನು ಅಭಿನಂದಿಸಿದ ʻಬಿಲ್ ಗೇಟ್ಸ್ʼ
ನವದೆಹಲಿ: ಭಾರತದಲ್ಲಿ 200 ಕೋಟಿ ಲಸಿಕೆಗಳನ್ನು ನೀಡಿದ ಮತ್ತೊಂದು ಮೈಲಿಗಲ್ಲನ್ನು ತಲುಪಿದ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರನ್ನು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್(Bill Gates) ಅಭಿನಂದಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಲ್ ಗೇಟ್ಸ್, ʻ200 ಕೋಟಿ ಲಸಿಕೆಗಳನ್ನು ನೀಡುವ ಮತ್ತೊಂದು ಮೈಲಿಗಲ್ಲನ್ನು ತಲುಪಿದ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಕೋವಿಡ್-19 ನ ಪರಿಣಾಮವನ್ನು ತಗ್ಗಿಸಲು ಭಾರತೀಯ ಲಸಿಕೆ ತಯಾರಕರು ಮತ್ತು ಭಾರತ ಸರ್ಕಾರದೊಂದಿಗೆ ನಿಮ್ಮ ನಿರಂತರ ಪಾಲುದಾರಿಕೆಗಾಗಿ ನಾವು ಕೃತಜ್ಞರಾಗಿರುತ್ತೇವೆ” ಎಂದಿದ್ದಾರೆ. Congratulations @narendramodi for yet another milestone of administering #200crorevaccinations. We are grateful for our continued partnership with Indian vaccine manufacturers and the Indian government for mitigating the impact of COVID19. https://t.co/YeGUPsveL0 — Bill Gates (@BillGates) July 19, 2022 ವಿಶ್ವದ ಅತಿದೊಡ್ಡ ಕೋವಿಡ್-19 ಲಸಿಕೆ ಡ್ರೈವ್ ಅನ್ನು…
ಬೆಂಗಳೂರು : ಸಾರಿಗೆ ಇಲಾಖೆಯು ವಾಹನ ಮಾಲೀಕರಿಗೆ ಬಿಗ್ ಶಾಕ್ ನೀಡಿದ್ದು, ವಾಹನಗಳ ವಾಯು ಮಾಲಿನ್ಯ ತಪಾಸಣೆ ದರ ಹೆಚ್ಚಳ ಮಾಡಲಾಗಿದೆ. ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಹಾಗೂ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಸಾರಿಗೆ ಇಲಾಖೆಯಿಂದ ದಂಡ ವಿಧಿಸಲಾಗುತ್ತಿದೆ. ಹೀಗಾಗಿ ಎಲ್ಲಾ ವಾಹನಗಳ ವಾಯು ಮಾಲಿನ್ ತಪಾಸಣೆಯನ್ನು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಎಲ್ಲಾ ವಾಹನಗಳು ವಾಯು ಮಾಲಿನ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ರಾಜ್ಯದೆಲ್ಲಡೆ ಖಾಸಗಿ ಸಹಭಾಗಿತ್ವದಲ್ಲಿ ತಪಾಸಣಾ ಕೇಂದ್ರಗಳನ್ನು ತೆರೆಯಲಾಗಿದೆ. https://kannadanewsnow.com/kannada/bigg-news-good-news-for-farmers-who-have-suffered-crop-losses-due-to-heavy-rains/ ಸಾರಿಗೆ ಇಲಾಖೆಯು ದ್ವಿಚಕ್ರವಾಹನಗಳ ವಾಯು ಮಾಲಿನ್ಯ ತಪಾಸಣೆ ದರ ಏರಿಕೆ ಮಾಡಿದ್ದು, ದ್ವಿಚಕ್ರ ವಾಹನಗಳ ವಾಯುಮಾಲಿನ್ಯ ತಪಾಸಣೆ ದರವನ್ನು 50 ರೂ.ನಿಂದ 65 ರೂ.ಗೆ ಏರಿಸಲಾಗಿದೆ. ಕಾರ್ (ಪೆಟ್ರೋಲ್) 90 ರೂ. ನಿಂದ 115 ರೂ.ಗೆ ಏರಿಸಲಾಗಿದೆ. ಕಾರ್ (ಡೀಸೆಲ್) 115 ರೂ.ಗಳಿಂದ 160 ರೂ.ಗೆ ಏರಿಕೆ ಮಾಡಲಾಗಿದೆ. https://kannadanewsnow.com/kannada/breaking-news-25-labourers-fall-ill-after-consuming-biryani-in-chamarajanagar-hospitalised/
ಬೆಂಗಳೂರು : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. https://kannadanewsnow.com/kannada/5-4-magnitude-quake-hits-bengkulu-in-indonesia/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿಯಾಗಿದ್ದು, ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ಸಂಪೂರ್ಣವಾಗಿ ನಿಂತ ಬಳಿಕ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರದಿಂದ ಶೀಘ್ರ ಪರಿಹಾರ ಹಣ ನೀಡಲಾಗುವುದು. ನಂತರ ಕೇಂದ್ರದಿಂದ ಬರುವ ಹಣವನ್ನು ರಾಜ್ಯ ಸರ್ಕಾರ ಬಳಕೆ ಮಾಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕೊಲಂಬೊ (ಶ್ರೀಲಂಕಾ): ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ದ್ವೀಪ ರಾಷ್ಟ್ರದಲ್ಲಿ ಇಂದು ಅಧ್ಯಕ್ಷೀಯ ಚುನಾವಣೆ(Presidential election) ನಡೆಯಲಿದೆ. ಕಳೆದ ವಾರ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ಗೋಟಬಯಾ ರಾಜಪಕ್ಸ ದೇಶದಿಂದ ಪಲಾಯನ ಮಾಡಿದ ನಂತ್ರ ರಾಜೀನಾಮೆ ನೀಡಿದ್ದರು. ಹೀಗಾಗಿ, ಇಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಚುನಾವಣೆಗೆ ಮೂವರು ಅಭ್ಯರ್ಥಿಗಳು ಹಣಾಹಣಿ ನಡೆಸುತ್ತಿದ್ದಾರೆ. ಅವರಲ್ಲಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಕೂಡ ಒಬ್ಬರಾಗಿದ್ದಾರೆ. ಇತರ ಇಬ್ಬರು ಅಭ್ಯರ್ಥಿಗಳಾದ ಎಸ್‌ಎಲ್‌ಪಿಪಿ ಸಂಸದ ಡಲ್ಲಾಸ್ ಅಲಹಪೆರುಮ ಮತ್ತು ನ್ಯಾಷನಲ್ ಪೀಪಲ್ಸ್ ಪವರ್ (ಎನ್‌ಪಿಪಿ) ನಾಯಕ ಅನುರ ಕುಮಾರ ಡಿಸಾನಾಯಕೆ ಕಣದಲ್ಲಿದ್ದಾರೆ. ಶ್ರೀಲಂಕಾದ ಪ್ರಮುಖ ವಿರೋಧ ಪಕ್ಷದ ನಾಯಕ ಸಜಿತ್ ಪ್ರೇಮದಾಸ ಅವರು ನಿನ್ನೆ ದ್ವೀಪ ರಾಷ್ಟ್ರದ ಅಧ್ಯಕ್ಷರ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಮತ್ತು ಉನ್ನತ ಹುದ್ದೆಗೆ ಪ್ರತಿಸ್ಪರ್ಧಿ ಅಭ್ಯರ್ಥಿ ಡಲ್ಲಾಸ್ ಅಲಹಪ್ಪೆರುಮಾ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಮುಂಬರುವ ಅಧ್ಯಕ್ಷೀಯ ಚುನಾವಣೆಗೆ ಕಣದಲ್ಲಿರುವ ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ) ಸಂಸದ ಅಲಹಪ್ಪೆರುಮಾ ಅವರನ್ನು ಸಮಗಿ ಜನ ಬಲವೇಗಯ…
ಬಾಲಿ (ಇಂಡೋನೇಷ್ಯಾ): ಇಂಡೋನೇಷ್ಯಾದ ಬೆಂಗ್‌ಕುಲುವಿನಲ್ಲಿ ಮಂಗಳವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಇಂಡೋನೇಷ್ಯಾದ ಬೆಂಗ್‌ಕುಲುವಿನ ನೈಋತ್ಯಕ್ಕೆ 46 ಕಿಮೀ ದೂರದಲ್ಲಿ ಮತ್ತು 57.17 ಕಿಮೀ ಆಳದಲ್ಲಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. ಇಂಡೋನೇಷ್ಯಾದ ಏಪ್ರಿಲ್‌ನಲ್ಲಿ ಎರಡು ಬಾರಿ ಭೂಕಂಪನ ಸಂಭವಿಸಿತ್ತು. ಏಪ್ರಿಲ್ 19 ರಂದು ಇಂಡೋನೇಷ್ಯಾದ ಸುಲವೇಸಿಯಲ್ಲಿ ರಿಚರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿತ್ತು ಮತ್ತು ಏಪ್ರಿಲ್ 5 ರಂದು ಇಂಡೋನೇಷ್ಯಾದ ಪೂರ್ವ ಪ್ರಾಂತ್ಯದ ಉತ್ತರ ಮಾಲುಕುದಲ್ಲಿ 6.0 ತೀವ್ರತೆಯ ಭೂಕಂಪವು ಸಂಭವಿಸಿತ್ತು. https://kannadanewsnow.com/kannada/bigg-news-date-fixed-for-world-famous-mysore-dasara-2022-on-which-day-which-puja-here-are-the-complete-details/ https://kannadanewsnow.com/kannada/presidential-election-congress-files-complaint-with-ec-against-droupadi-murmu-bjp-leaders-alleging-poll-code-violation/
ಚಾಮರಾಜನಗರ : ತಂಗಳು ಬಿರಿಯಾನಿ ಸೇವಿಸಿ 25 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿ ಕುಣಿಗಳ್ಳಿಯಲ್ಲಿ ನಡೆದಿದೆ. https://kannadanewsnow.com/kannada/good-news-good-news-for-teacher-aspirants-teachers-to-be-recruited-every-year-from-now-on/ ಸಂತೋಷ್ ಎಂಬುವರು ಜುಲೈ18 ರಂದು ತಮ್ಮ ಮಗನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಚಿಕನ್ ಬಿರಿಯಾನಿ ಮಾಡಿಸಿದ್ದರು. ಬಿರಿಯಾನಿ ಮಾಡಿಸಿ ಸ್ನೇಹಿತರು, ಹಿತೈಷಿಗಳಿಗೆ ಆತಿಥ್ಯ ನೀಡಿದ್ದರು. ಮರುದಿನ ಜಮೀನಿಗೆ ಕಬ್ಬು ಕಟಾವಿಗೆ ಬಂದಿದ್ದ ಕಾರ್ಮಿಕರಿಗೆ ತಂಗಳು ಬಿರಿಯಾನಿ ನೀಡಿದ್ದರು. ತಂಗಳು ಬಿರಿಯಾನಿ ಸೇವಿಸಿದ ಕಾರ್ಮಿಕರಿಗೆ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಕಾರ್ಮಿಕರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/presidential-election-congress-files-complaint-with-ec-against-droupadi-murmu-bjp-leaders-alleging-poll-code-violation/
ಬೆಂಗಳೂರು : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಪ್ರತಿ ವರ್ಷವೂ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-hoisting-of-national-flag-on-all-schools-madrassas-in-the-state-is-mandatory-state-government/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ ನಿವೃತ್ತಿ, ಬಡ್ತಿ ಸೇರಿ ವಿವಿಧ ಕಾರಣಗಳಿಂದ ಖಾಲಿಯಾಗಿರುವ ಶಿಕ್ಷಕರ ಹುದ್ದೆಗಳಿಗೆ ಇನ್ಮುಂದೆ ಪ್ರತಿ ವರ್ಷವೂ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು.ಪ್ರತಿ ವರ್ಷ ಶಿಕ್ಷಣ ಇಲಾಖೆಯಲ್ಲಿ ನಾಲ್ಕೈದು ಸಾವಿರ ಶಿಕ್ಷಕರು ನಿವೃತ್ತಿಯಾಗುತ್ತಾರೆ. ಖಾಲಿಯಾಗಿರುವ ಹುದ್ದೆಗಳನ್ನು ಆಯಾ ವರ್ಷವೇ ಭರ್ತಿಮಾಡುವ ಕುರಿತಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/kerala-five-arrested-in-connection-with-neet-test-centre-innerwear-removal-case/ ಪ್ರಸ್ತುತ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸಿ ಅವರನ್ನು ಶಾಲೆಗೆ ನಿಯೋಜಿಸಲಾಗುವುದು. ಈ ಪೈಕಿ ಕನಿಷ್ಟ 12 ಸಾವಿರ ಹುದ್ದೆಗಳಾದರೂ ಭರ್ತಿಯಾಗುವ ನಿರೀಕ್ಷೆ ಇದೆ. ನೇಮಕಾತಿ ಪೂರ್ಣಗೊಂಡ ಬಳಿಕ ಖಾಲಿ ಉಳಿಯುವ ಹುದ್ದೆಗಳಿಗೆ ಜನವರಿಯಲ್ಲಿ ಮತ್ತೆ ಸಿಇಟಿ ನಡೆಸಿ ಮತ್ತೊಂದು ನೇಮಕಾತಿ ಪ್ರಕ್ರಿಯೆ ನಡೆಸುತ್ತೇವೆ ಎಂದು ಹೇಳಿದ್ದಾರೆ. https://kannadanewsnow.com/kannada/bigg-news-major-surgery-on-administrative-machinery-by-state-government-govt-orders-transfer-of-12-dysps/
ಬೆಂಗಳೂರು: ಜುಲೈ ಅವಧಿಯಲ್ಲಿ ಕಾನೂನಿನ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು(Droupadi Murmu) ಮತ್ತು ಇತರರ ವಿರುದ್ಧ ಕಾಂಗ್ರೆಸ್ ಮಂಗಳವಾರ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಮತದಾರ ಶಾಸಕರಿಗೆ ಪಂಚತಾರಾ ಹೋಟೆಲ್‌ನಲ್ಲಿ ಐಷಾರಾಮಿ ವಸತಿ ಕಲ್ಪಿಸಲಾಗಿದೆ ಎಂದು ಆರೋಪಿಸಿದ್ದಾರೆ. ಎನ್‌ಡಿಎ ಅಭ್ಯರ್ಥಿ (ಮುರ್ಮು), ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ, ವಿಧಾನಸಭೆಯ ಬಿಜೆಪಿ ಮುಖ್ಯ ಸಚೇತಕ ಸತೀಶ್ ರೆಡ್ಡಿ, ಸಚಿವರು ಮತ್ತು ಇತರರ ವಿರುದ್ಧ ದೂರು ದಾಖಲಾಗಿದೆ. ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸುವ ಕುರಿತು ಶಾಸಕರಿಗೆ ತರಬೇತಿ ನೀಡುವ ನೆಪದಲ್ಲಿ ಬಿಜೆಪಿಯ ಇತರ ಹಿರಿಯ ನಾಯಕರು ಒಟ್ಟುಗೂಡಿ ಎಲ್ಲಾ ಬಿಜೆಪಿ ಶಾಸಕರನ್ನು ಇಲ್ಲಿನ ಪಂಚತಾರಾ ಹೋಟೆಲ್‌ಗೆ ಆಹ್ವಾನಿಸಿ ಅವರಿಗೆ ಐಷಾರಾಮಿ…
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ ಆಗಸ್ಟ್ 11 ರಿಂದ 17 ರವರೆಗೆ ರಾಜ್ಯದ ಎಲ್ಲಾ ಶಾಲಾ, ಕಾಲೇಜು, ಮದರಸಾಗಳ ಮೇಲೆ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. https://kannadanewsnow.com/kannada/bigg-news-250-junior-veterinary-officers-to-be-appointed-in-the-state-soon-prabhu-chavan/ ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಭಾರತ ಸ್ವಾತಂತ್ರ್ಯದ ಅಮೃ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯದ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಮದರಸಾಗಳಲ್ಲಿ ಧ್ವಜಾರೋಹಣದ ಅಭಿಯಾನದ ಜೊತೆಗೆ ರಾಷ್ಟ್ರಭಕ್ತಿ ಮೂಡಿಸುವ ಸ್ವಾತಂತ್ರ್ಯದ ತ್ಯಾಗ, ಬಲಿದಾನ, ಸ್ಮರಣೆಯ ಗೀತೆ, ಗಾಯನ, ಕ್ವಿಚ್, ಪ್ರಬಂಧ ಸ್ಪರ್ಧೆ, ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಸ್ಪರ್ಧೆ ಆಯೋಜಿಸಬೇಕೆಂದು ತಿಳಿಸಲಾಗಿದೆ. https://kannadanewsnow.com/kannada/bigg-news-major-surgery-on-administrative-machinery-by-state-government-govt-orders-transfer-of-12-dysps/ ಸರ್ಕಾರದ ಸೌಲಭ್ಯ ಪಡೆಯುವವರು ಸರ್ಕಾರದ ನಿಯಮ ಪಾಲಿಸೋದು ಕಡ್ಡಾಯವಾಗಿದೆ. ಎಲ್ಲಾ ಮದರಾಸಗಳಲ್ಲಿ ಕಡ್ಡಾಯವಾಗಿ ರಾಷ್ಟ್ರ ಧ್ವಜ ಹಾರಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ. ಸರ್ಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜು, ಮದರಸಾಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಎಲ್ಲಾ ಶಿಕ್ಷಣ ಸಿಬ್ಬಂದಿಗಳು ತಮ್ಮ ಮನೆಯ…