Author: KNN IT TEAM

ದಾವಣಗೆರೆ : ಬಿಜೆಪಿಯ ಹಿರಿಯ ನಾಯಕರ ವಿರುದ್ಧ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿ ಕಾರಿದ್ದು, ನಮ್ಮ ಪಕ್ಷ ಹಿರಿಯ ನಾಯಕರಿಗೆ ತ್ಯಾಗ ಮನೋಭಾವನೆ ಕಡಿಮೆ  ನಮ್ಮ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/india-sets-new-record-by-giving-2-billion-covid-vaccine-doses-in-just-18-months/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ಇನ್ನಾದರೂ ಸ್ವಲ್ಪ ಕೆಲಸ ಮಾಡಿ. ಅಂತಹ ದೊಡ್ಡ ನಾಯಕ ಬಿ.ಎಸ್. ಯಡಿಯೂರಪ್ಪ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಆದರೆ ಹಿರಿಯ ಸಚಿವರಿಗೆ ಏನಾಗಿದೆ? ಎಂದು ಪ್ರಶ್ನಿಸಿದ್ದಾರೆ. ನಮ್ಮ ಪಕ್ಷದ ಹಿರಿಯ ಸಚಿವರು ಕುರ್ಚಿಗೆ ಅಂಟಿಕೊಂಡು ಕುಳಿತಿದ್ದಾರೆ. ಬಿಜೆಪಿ ಸರ್ಕಾರ ಬಂದರೆ ಇವರಷ್ಟೇ ಸಚಿವರಾಗಬೇಕಾ? ಎಂದು ಹಿರಿಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. https://kannadanewsnow.com/kannada/bigg-news-aim-to-bring-down-infant-mortality-rate-in-the-state-to-single-digit-cm-basavaraj-bommai/

Read More

ದೆಹಲಿ: ಕರೋನ ವೈರಸ್ ವಿರುದ್ಧ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ಅನ್ನು ಪ್ರಾರಂಭಿಸಿದ ಒಂದು ವರ್ಷದ ನಂತರ ಭಾರತವು 2 ಬಿಲಿಯನ್ ಲಸಿಕೆ ಡೋಸ್‌ಗಳನ್ನು ನೀಡುವ ಮೂಲಕ ದೊಡ್ಡ ಮೈಲಿಗಲ್ಲನ್ನು ದಾಟಿದೆ. ಭಾರತ 200 ಕೋಟಿ ಕೋವಿಡ್‌ ವ್ಯಾಕ್ಸಿನ್‌ ನೀಡಿ ದಾಖಲೆ ಸೃಷ್ಟಿಸಿದೆ. ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, “ಭಾರತ ಮತ್ತೆ ಇತಿಹಾಸವನ್ನು ಸೃಷ್ಟಿಸುತ್ತದೆ! 200 ಕೋಟಿ ಲಸಿಕೆ ಡೋಸ್‌ಗಳ ವಿಶೇಷ ಅಂಕಿಅಂಶವನ್ನು ದಾಟಿದ್ದಕ್ಕಾಗಿ ಎಲ್ಲಾ ಭಾರತೀಯರಿಗೆ ಅಭಿನಂದನೆಗಳು. ಭಾರತದ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಪ್ರಮಾಣ ಮತ್ತು ವೇಗದಲ್ಲಿ ಸಾಟಿಯಿಲ್ಲದಂತೆ ಮಾಡಲು ಕೊಡುಗೆ ನೀಡಿದವರ ಬಗ್ಗೆ ಹೆಮ್ಮೆಯಿದೆ. ಇದು ಕೋವಿಡ್-19 ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಿದೆ” ಎಂದಿದ್ದಾರೆ. India creates history again! Congrats to all Indians on crossing the special figure of 200 crore vaccine doses. Proud of those who contributed to making India’s vaccination drive unparalleled in…

Read More

ಬೆಂಗಳೂರು : 40% ಬಿಜೆಪಿ ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿ ಮೋದಿಗೆ ಮತ್ತೊಂದು ಪತ್ರ ಬರೆಯಲಾಗಿದೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. https://kannadanewsnow.com/kannada/bigg-news-aim-to-bring-down-infant-mortality-rate-in-the-state-to-single-digit-cm-basavaraj-bommai/ ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,  ರಾಜ್ಯ ಸರ್ಕಾರದ ಭ್ರಷ್ಟರ ವಿರುದ್ಧದ ಪತ್ರಗಳಿಂದಲೇ ಪ್ರಧಾನಿ ಕಚೇರಿಯ ‘ಡ್ರಾಪ್ ಬಾಕ್ಸ್’ ತುಂಬಲಿದೆ. ‘ನಾ ಖಾವುಂಗಾ, ನಾ ಖಾನೆದುಂಗಾ’ ಎನ್ನುತ್ತಿದ್ದ ಪ್ರಧಾನಿಗಳು ಇಷ್ಟೆಲ್ಲ ಪತ್ರಗಳು ನೇರವಾಗಿ ತಮ್ಮ ಕಚೇರಿಗೆ ಬಂದರೂ ‘ನಾ ಬಾತ್ ಕರೂಂಗಾ’ ಎಂಬಂತೆ ಮೌನಕ್ಕೆ ಶರಣಾಗಿದ್ದಾರೆ. ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭ್ರಷ್ಟಾಚಾರಗಳ ಬಗ್ಗೆ ಅವರು ತುಟಿ ಬಿಚ್ಚುತ್ತಿಲ್ಲ ಎಂದು ಲೇವಡಿ ಮಾಡಿದೆ. https://kannadanewsnow.com/kannada/bigg-news-aim-to-bring-down-infant-mortality-rate-in-the-state-to-single-digit-cm-basavaraj-bommai/ ತೋಟಗಾರಿಕಾ ಸಚಿವ ಮುನಿರತ್ನರವರ ಕಮಿಷನ್ ಲೂಟಿಯ ಬಗ್ಗೆ ಪ್ರಧಾನಿಗೆ ಪತ್ರ ತಲುಪಿದೆ, ನಿಮಗೂ ಬರಲಿಲ್ಲವೇ ಸಿಎಂ ಬಸವರಾಜ ಬೊಮ್ಮಾಯಿ ಅವರೇ? ಹನಿ ನೀರಾವರಿ ವಿತರಕರ ಸಂಘ ನಿಮಗೆ ಪತ್ರ ಬರೆದಿದ್ದರೂ ಕ್ರಮ ಕೈಗೊಳ್ಳದ ತಾವು ಭ್ರಷ್ಟಾಚಾರದ ರಕ್ಷಕರಂತೆ ನಿಂತಿದ್ದೀರಿ. ಈ ಆರೋಪಕ್ಕೆ ತನಿಖೆ ನಡೆಸಿ ‘ಪಾರದರ್ಶಕತೆ’…

Read More

ಬೆಂಗಳೂರು :  ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ ಶೇ 2 ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ  ತಿಳಿಸಿದರು. ಅವರು ಇಂದು   ರೇನ್ಬೋ ಚಿಲ್ಡ್ರನ್ ಹಾಸ್ಪಿಟಲ್   ಆಯೋಜಿಸಿರುವ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತ ಸಮ್ಮೇಳನದಲ್ಲಿ ಪಾಲ್ಗೊಂಡು  ಮಾತನಾಡಿದರು. ತಾಯಿ ಮರಣ ಪ್ರಮಾಣದಲ್ಲಿಯೂ   ಇಳಿಕೆಯಾಗಬೇಕು.ರಾಜ್ಯದ  5-6 ಜಿಲ್ಲೆಗಳ ಕಾರಣದಿಂದ  ಈ ಪ್ರಮಾಣ ಇಳಿಕೆಯಾಗುತ್ತಿಲ್ಲ. ಈ ಕಾರಣದಿಂದ ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ  ಅಭಿವೃದ್ಧಿ ಆಕಾಂಕ್ಷಿ  ತಾಲ್ಲೂಕುಗಳನ್ನು  ಗುರುತಿಸಿ  ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆ, ಮಹಿಳಾ ಮತ್ತು ಮಕ್ಕಳ ಆರೋಗ್ಯದ ಮಾನದಂಡಗಳನ್ನು ಇರಿಸಿಕೊಂಡು ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ.  ಈ 5 ಜಿಲ್ಲೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸುವ ಮೂಲಕ ಐ.ಎಂ.ಆರ್ ಇಳಿಕೆ ಮಾಡಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸ್ವಸ್ಥ  ಭವಿಷ್ಯಕ್ಕಾಗಿ ಮಕ್ಕಳ ತಜ್ಞರು ಈ ಕಾರ್ಯದಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿಗಳು  ಕರೆ ನೀಡಿದರು. ಅಪೌಷ್ಟಿಕತೆ ನಿವಾರಣೆಗೆ ವಿಶೇಷ ಒತ್ತು  ಆಯವ್ಯಯದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನವನ್ನು ಹೆಚ್ವಿಸಲಾಗಿದೆ. …

Read More

ಬೆಂಗಳೂರು : ಬೆಂಗಳೂರಿನಲ್ಲಿ ಆ.15ರಂದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು, ಆ.1ರಿಂದ 10ರವರೆಗೆ 75 ಕಿ.ಮೀ. ಪಾದಯಾತ್ರೆ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. https://kannadanewsnow.com/kannada/what-is-african-swine-fever-detected-in-assam-other-northeastern-states/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಲಾಗುತ್ತಿದೆ. ಇಡಿಯವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ಈ ಸಂಬಂಧ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಲಿಸಿದ್ದಾರೆ. ಬೆಂಗಳೂರಿನಲ್ಲಿ ಆ.15ರಂದು ಸ್ವಾತಂತ್ರ್ಯ ನಡಿಗೆ ಹಮ್ಮಿಕೊಂಡಿದ್ದು, ಆ.1ರಿಂದ 10ರವರೆಗೆ 75 ಕಿ.ಮೀ. ಪಾದಯಾತ್ರೆ ಮಾಡಲು ನಿರ್ಧಾರ ಮಾಡಿದ್ದೇವೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಸ್ವಾತಂತ್ರ್ಯ ನಡಿಗೆ ಆರಂಭವಾಗಲಿದ್ದು, ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದವರೆಗೆ ನಡಿಗೆ ಇರಲಿದೆ. ನಾವು ಯಾವುದೇ ಕಾರಣಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಫ್ರೀಡಂ ಪಾರ್ಕ್ ನಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ಜುಲೈ 22 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Read More

ಗುವಾಹಟಿ (ಅಸ್ಸಾಂ): ಅಸ್ಸಾಂನ ಬ್ರುಗಢ್‌ನ ಭೋಗಾಲಿ ಪಥರ್ ಗ್ರಾಮವೊಂದರ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ(African Swine Fever) ಕಾಣಿಸಿಕೊಂಡಿದ್ದು, 1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದೆ. “ನಾವು ಈ ರೋಗ ವರದಿಯಾದ ನಂತ್ರ ,1 ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳನ್ನು ‘ಸೋಂಕಿತ ವಲಯ’ ಎಂದು ಗೊತ್ತುಪಡಿಸಲಾಗಿದ್ದು, ಆ ಪ್ರದೇಶಗಳಲ್ಲಿನ ಎಲ್ಲಾ ಹಂದಿಗಳನ್ನು ಕೊಲ್ಲಲಾಗಿದೆ. ಏಕಕಾಲದಲ್ಲಿ, ನಾವು ಇಡೀ ಪ್ರದೇಶವನ್ನು ಶುಚಿಗೊಳಿಸಿದ್ದೇವೆ” ಎಂದು ಡಾ ಬರುವಾ ಹೇಳಿದ್ದಾರೆ. ಇಲ್ಲಿಯವರೆಗೆ, ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯದಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷವೂ ಈಶಾನ್ಯ ರಾಜ್ಯಗಳು ಆಫ್ರಿಕನ್ ಹಂದಿ ಜ್ವರವನ್ನು ಎದುರಿಸಿದ್ದವು. ಕಳೆದ ವರ್ಷ ಸುಮಾರು 11,000 ಹಂದಿಗಳನ್ನು ಕೊಲ್ಲಲಾಗಿದ್ದು, ಹಂದಿಗಳಿಗೆ ಸುಮಾರು 12 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಕೋರಲಾಗಿದೆ. https://kannadanewsnow.com/kannada/singapore-open-pv-sindhu-wins-her-maiden-super-500-title-of-2022-beats-chinas-wang-zhi-yi-in-final/ https://kannadanewsnow.com/kannada/assam-couples-viral-wedding-contract-one-pizza-a-month-gym-every-day/

Read More

ಕೊಚ್ಚಿ (ಕೇರಳ): ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ 24 ವಾರಗಳ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ಕೇರಳ ಹೈಕೋರ್ಟ್ ಅನುಮತಿ ನೀಡಿದ್ದು, ಕಾರ್ಯವಿಧಾನವನ್ನು ನಡೆಸಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸೂಚಿಸಿದೆ. ನ್ಯಾಯಮೂರ್ತಿ ವಿ ಜಿ ಅರುಣ್, 15 ವರ್ಷದ ಸಂತ್ರಸ್ತೆಯ ಮನವಿಯನ್ನು ಪರಿಗಣಿಸುವಾಗ, “ಮಗು ಹುಟ್ಟುವಾಗಲೇ ಜೀವಂತವಾಗಿದ್ದರೆ, ಮಗುವಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆಯನ್ನು ನೀಡಲಾಗುತ್ತದೆ” ಎಂದು ಆಸ್ಪತ್ರೆ ಖಚಿತಪಡಿಸುತ್ತದೆ. ಅರ್ಜಿದಾರರು ಮಗುವಿನ ಜವಾಬ್ದಾರಿಯನ್ನು ಹೊರಲು ಸಿದ್ಧರಿಲ್ಲದಿದ್ದರೆ, ರಾಜ್ಯ ಮತ್ತು ಅದರ ಏಜೆನ್ಸಿಗಳು ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಳ್ಳುತ್ತವೆ ಮತ್ತು ಮಗುವಿಗೆ ವೈದ್ಯಕೀಯ ಬೆಂಬಲ ಮತ್ತು ಸೌಲಭ್ಯಗಳನ್ನು ನೀಡುತ್ತವೆ ಎಂದು ಹೇಳಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಸಂತ್ರಸ್ತ ಬಾಲಕಿಯ ಗರ್ಭವನ್ನು ಅಂತ್ಯಗೊಳಿಸಲು ನ್ಯಾಯಾಲಯ ಅನುಮತಿ ನೀಡಿದೆ. ಗೊಂದಲದ ಪ್ರಶ್ನೆಯನ್ನು ಎಚ್ಚರಿಕೆಯಿಂದ ಯೋಚಿಸಿದ ನಂತರ, ಜುಲೈ 14 ರಂದು ಹೊರಡಿಸಿದ ಆದೇಶದಲ್ಲಿ ನ್ಯಾಯಾಲಯವು ಹೇಳಿದ ಕಟ್ಟುನಿಟ್ಟಾದ ಕಾನೂನಿನ ಪತ್ರಕ್ಕೆ ಅಂಟಿಕೊಳ್ಳುವ ಬದಲು ಅಪ್ರಾಪ್ತ ಬಾಲಕಿಯ ಪರವಾಗಿ ಒಲವು ತೋರುವುದು ಸೂಕ್ತವೆಂದು ನಾನು ಭಾವಿಸುತ್ತೇನೆ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. https://kannadanewsnow.com/kannada/singapore-open-pv-sindhu-wins-her-maiden-super-500-title-of-2022-beats-chinas-wang-zhi-yi-in-final/ https://kannadanewsnow.com/kannada/assam-couples-viral-wedding-contract-one-pizza-a-month-gym-every-day/

Read More

ಶಿವಮೊಗ್ಗ :  ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿ ಕೈಗಾರಿಕೆ ಇತ್ಯಾದಿ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಸಹಾಯಧನ ನೀಡಲು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.  18 ರಿಂದ 55 ವರ್ಷದೊಳಗಿನ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ವಯಸ್ಸಿನ ದೃಢೀಕರಣಕ್ಕಾಗಿ ಚುನಾವಣಾ ಗುರುತಿನ ಚೀಟಿ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಅಥವಾ ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ಆದಾಯ ಎಸ್‍ಸಿ/ಎಸ್‍ಟಿ ರೂ.2 ಲಕ್ಷ, ವಿಶೇಷ ವರ್ಗ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ರೂ.1.50 ಲಕ್ಷ ಮೀರಬಾರದು. ವಿಧವರೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರಿಗೆ ಆದಾಯ ಮಿತಿ ಇರುವುದಿಲ್ಲ. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಸಾಲ ಮಂಜೂರಾಗಿ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲಾಗುವುದು. https://kannadanewsnow.com/kannada/singapore-open-pv-sindhu-wins-her-maiden-super-500-title-of-2022-beats-chinas-wang-zhi-yi-in-final/  ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಉಚಿತವಾಗಿ ಪಡೆದು,  ಭರ್ತಿ…

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಸಿಂಗಾಪುರ ಓಪನ್ 2022(Singapore Open) ರ ಮಹಿಳಾ ಸಿಂಗಲ್ಸ್ ಫೈನಲ್ ಹಣಾಹಣಿಯಲ್ಲಿ ಚೀನಾದ ವಾಂಗ್ ಝಿ ಯಿ ವಿರುದ್ಧ ಡಬಲ್ ಪದಕ ವಿಜೇತೆ ಪಿವಿ ಸಿಂಧು(PV Sindhu) ಜಯ ಸಾಧಿಸಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದಾರೆ. ಇಂದು ನಡೆದ ಸಿಂಗಾಪುರ ಓಪನ್ ಫೈನಲ್‌ನಲ್ಲಿ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಅವರು ಚೀನಾದ ವಾಂಗ್ ಝಿ ಯಿ ಅವರನ್ನು 21-9, 11-21, 21-15 ಅಂತರದಿಂದ ಸೋಲಿಸಿ ಮೂರನೇ ಪ್ರಶಸ್ತಿಯನ್ನು ಗೆದ್ದರು. ಸಿಂಧು ಸಿಂಗಾಪುರ ಓಪನ್ ಪ್ರಶಸ್ತಿ ಗೆದ್ದ ಎರಡನೇ ಭಾರತೀಯ ಮಹಿಳಾ ಶಟ್ಲರ್ ಮತ್ತು ಮೂರನೇ ಭಾರತೀಯರಾದರು. ಸೈನಾ ನೆಹ್ವಾಲ್ (2010) ಮತ್ತು ಬಿ ಸಾಯಿ ಪ್ರಣೀತ್ (2017) ಈ ಹಿಂದೆ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ ಸಿಂಗಲ್ಸ್ ಸ್ಪರ್ಧೆಗಳಲ್ಲಿ ಪ್ರಶಸ್ತಿ ಎತ್ತಿ ಹಿಡಿದಿದ್ದರು. ಇದು ಈ ವರ್ಷ ಸಿಂಧು ಅವರ ಮೊದಲ ಸೂಪರ್ 500 ಪ್ರಶಸ್ತಿಯಾಗಿದೆ. ಅವರು ಈ ಹಿಂದೆ ಸೈಯದ್ ಮೋದಿ ಇಂಟರ್‌ನ್ಯಾಶನಲ್ ಮತ್ತು ಸ್ವಿಸ್…

Read More

ಬೆಂಗಳೂರು: ಕೆರೂರಿನಲ್ಲಿ ನಾನು ತೆರಳುತ್ತಿದ್ದ ಕಾರಿನ ಮೇಲೆ ಹಣ ಎಸೆದಿದ್ದ ಮಹಿಳೆಗೆ ತನ್ನ ತಪ್ಪಿನ ಅರಿವಾಗಿದೆ. ನನ್ನ ಬಳಿ ಕ್ಷಮೆ ಕೇಳುವ ಅಗತ್ಯ ಇರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೆರೂರಿನಲ್ಲಿ ನಾನು ತೆರಳುತ್ತಿದ್ದ ಕಾರಿನ ಮೇಲೆ ಹಣ ಎಸೆದಿದ್ದ ಸೋದರಿಗೆ ತನ್ನ ತಪ್ಪಿನ ಅರಿವಾಗಿದೆ. ತಮ್ಮ ಕುಟುಂಬದ ಮೇಲಿನ ಹಲ್ಲೆಯಿಂದ ನೊಂದ ಅವರ ಭಾವುಕ ಪ್ರತಿಕ್ರಿಯೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಎಲ್ಲರೂ ಒಂದಾಗಿ ಬಾಳಬೇಕೆಂದು ಮನವಿ ಮಾಡಿ ನನಗೆ ಶುಭ ಹಾರೈಸಿದ ಸೋದರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. https://twitter.com/siddaramaiah/status/1548314684549259267

Read More