Subscribe to Updates
Get the latest creative news from FooBar about art, design and business.
Author: KNN IT TEAM
ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಉಪರಾಷ್ಟ್ರಪತಿ ಚುನಾವಣೆ ( Vice President Election 2022 ) ಕೂಡ ಘೋಷಣೆಯಾಗಿತ್ತು. ಈ ಸ್ಥಾನಕ್ಕೆ ಕರ್ನಾಟದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ( Farmer CM Jagadeesh Shetter ) ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಈ ಮೂಲಕ ಉಪ ರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಏರಲಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೇ ಅವರಿಗೆ ಅದೃಷ್ಟ ಒಲಿಯುತ್ತಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ನಡುವೆ ಇಂದು ದೆಹಲಿಯಲ್ಲಿ ಬಿಜೆಪಿಯ ಸಂಸದೀಯ ಮಂಡಳಿ ಸಭೆಯನ್ನು ಸಂಜೆ 6 ಗಂಟೆಗೆ ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ದೃಷ್ಠಿಯಿಂದ ಉಪ ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಕರ್ನಾಟಕದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸೋ ಚರ್ಚೆ ಬಿಜೆಪಿ ಪಾಳಯದಲ್ಲಿ ನಡೆದಿದೆ ಎನ್ನಲಾಗಿದೆ. https://kannadanewsnow.com/kannada/heres-an-opportunity-for-your-nivesha-buying-desire-sites-are-available-here-at-lower-rates/ ರಾಜ್ಯದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹೆಸರು ಉಪ ರಾಷ್ಟ್ರಪತಿ ಅಭ್ಯರ್ಥಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.…
ನವದೆಹಲಿ : ಉಪರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರು ಮುನ್ನೆಗೆ ಬರ್ತಿದ್ದು, ಶೆಟ್ಟರ್‌ಗೆ ಅದೃಷ್ಟ ಒಲಿಯುತ್ತಾ? ಅನ್ನೋ ಚರ್ಚೆ ಶುರುವಾಗಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಆಗಸ್ಟ್ 6ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಅದ್ರಂತೆ, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವ್ರ ಉತ್ತರಾಧಿಕಾರಿಯನ್ನ ನಿರ್ಧರಿಸುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ಕಣಕ್ಕಿಳಿಸುವ ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆಯಾಗ್ತಿದೆ. ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈ ಚರ್ಚೆ ನಡೆಯುತ್ತಿದ್ದು, ಇಂದು ಸಂಜೆ 6 ಗಂಟೆಗೆ ನಡೆಯುವ ಸಂಸದೀಯ ಮಂಡಳಿ ಸಭೆಯ ನಂತ್ರ ಅಭ್ಯರ್ಥಿಯ ಹೆಸರು ಪ್ರಕಟಿಸಲಿದೆ. ಇನ್ನು ಈ ಉಪರಾಷ್ಟ್ರಪತಿ ಅಭ್ಯರ್ಥಿಯ ರೇಸ್‌ನಲ್ಲಿ ಜಗದೀಶ್ ಶೆಟ್ಟರ್ ಸೇರಿ ಮುಖ್ತಾರ್ ಅಬ್ಬಾಸ್ ನಖ್ವಿ, ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಹೆಸರಿವೆ.
ಕೆಎನ್‌ಎನ್ ಡಿಜಿಟಲ್ ಡೆಸ್ಕ್ : ಪುಟ್ಟ ಹುಡುಗಿಯೊಬ್ಬಳು ಸೇನಾ ಸಿಬ್ಬಂದಿಯ ಪಾದಗಳನ್ನು ಸ್ಪರ್ಶಿಸುವ ʻಹೃದಯಸ್ಪರ್ಶಿʼ ವೀಡಿಯೊವನ್ನು ಟ್ವಿಟರ್ ಬಳಕೆದಾರ ಪಿಸಿ ಮೋಹನ್ ಹಂಚಿಕೊಂಡಿದ್ದು, ಇದೀಗ ಭಾರೀ ವೈರಲ್ ಆಗುತ್ತಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ ಪುಟ್ಟ ಹುಡುಗಿಯೊಬ್ಬಳು ಮೆಟ್ರೋ ನಿಲ್ದಾಣದಲ್ಲಿ ನಿಂತಿರುವ ಕೆಲವು ಸೇನಾ ಸಿಬ್ಬಂದಿಯ ಬಳಿಗೆ ನಡೆದುಕೊಂಡು ಹೋಗುವುದನ್ನು ತೋರಿಸುತ್ತದೆ. ಸೈನ್ಯದ ಸಿಬ್ಬಂದಿಯೊಬ್ಬರು ಪುಟ್ಟ ಹುಡುಗಿಯ ಕೆನ್ನೆಗಳನ್ನು ಎಳೆದು ಮುದ್ದಾಡಿದರು. ಮತ್ತು ಅದಕ್ಕೆ ಪ್ರತಿಯಾಗಿ, ಅವಳು ಅವನ ಪಾದಗಳನ್ನು ಮುಟ್ಟಿದಳು. ಈ ‘ಪುಟ್ಟ ಬಾಲಕಿ’ಯ ನಡೆ ಕಂಡು ನೆರೆದಿದ್ದವರೇ ಭಾವುಕರಾಗಿದ್ದಾರೆ,ಕಣ್ಣುಗಳು ಇದ್ದಕ್ಕಿದಂತೆ ಒದ್ದೆಯಾಗಿದ್ದು. ಯಾಕೆ ಅಂತ ಯೋಚಿಸ್ತಿದ್ದೀರಾ.. ಈ ವಿಡಿಯೋವನ್ನು ಮಿಸ್ ಮಾಡ್ದೇ ನೋಡಿ… https://twitter.com/PCMohanMP/status/1547926565480464385?s=20&t=Wy-sdgnU11SV8z53858nVg ಈ ವಿಡಿಯೋವನ್ನು ಹಂಚಿಕೊಂಡಿರುವ ಪಿಸಿ ಮೋಹನ್, “ದೇಶಭಕ್ತಿ ಯುವ ಮನಸ್ಸುಗಳನ್ನು ಬೆಳೆಸುವುದು ಈ ಮಹಾನ್ ರಾಷ್ಟ್ರಕ್ಕೆ ಪ್ರತಿಯೊಬ್ಬ ಪೋಷಕರ ಕರ್ತವ್ಯವಾಗಿದೆ” ಎಂದು ಶೀರ್ಷಿಕೆ ನೀಡಿದ್ದಾರೆ ಈ ವಿಡಿಯೋ ಶೇರ್ ಆದ ಕೂಡಲೇ 9 ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದೆ. ನೆಟ್ಟಿಗರು ಕಾಮೆಂಟ್ ವಿಭಾಗದಲ್ಲಿ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಸಮೀಪದಲ್ಲಿ ಹೊಸದಾಗಿ ಲೇಔಟ್ ( Layout ) ನಿರ್ಮಾಣ ಮಾಡಲಾಗುತ್ತಿದೆ. ಗ್ರಾಮೀಣ ಜನತೆ, ನಗರ ವಾಸಿಗಳ ನಿವೇಶ ಕೊಳ್ಳುವಂತ ಕನಸು ಈಡೇರಿಸುವ ನಿಟ್ಟಿನಲ್ಲಿ, ಕಡಿಮೆ ದರದಲ್ಲಿ ಸೈಟ್ ಗಳು ಲಭ್ಯವಾಗಲಿವೆ. ಹಾಗಿದ್ದರೇ.. ಮಲೆನಾಡಿನಲ್ಲಿ ನಿವೇಶನ ಖರೀದಿಸಬೇಕು ಎನ್ನುವ ಯೋಜನೆಯಲ್ಲಿದ್ದವರು ತಡಮಾಡದೇ.. 9809386666, 7996796336 ಈ ಸಂಖ್ಯೆಗಳಿಗೆ ಕರೆ ಮಾಡಿ.. ಹೌದು.. ಸಾಗರದ ತಾಲೂಕಿನಿಂದ ತ್ಯಾಗರ್ತಿಗೆ ಹೋಗುವಂತ ರಾಜ್ಯ ಹೆದ್ದಾರಿಯ ಸಮೀಪವೇ ಸುರಭಿ ಎಸ್ ಆರ್ ರೆಸಿಡೆನ್ಸಿಯಲ್ ( Surabhi S R Residential ) ಎನ್ನುವಂತ ಲೇಔಟ್ ಒಂದನ್ನು ಮಲ್ನಾಡ್ ಡೆವೆಲಪರ್ಸ್ ನಿಂದ ( Malnad Developers ) ನಿರ್ಮಾಣ ಮಾಡಲಾಗುತ್ತಿದೆ. 9 ಎಕರೆ 20 ಗುಂಟೆ ಜಾಗದಲ್ಲಿ, ನಿರ್ಮಿಸುತ್ತಿರುವಂತ ಲೇಔಟ್, ತ್ಯಾಗರ್ತಿ ಬಸ್ ನಿಲ್ದಾಣದಿಂದ ( Tyagarthi Bus Stop ) ಕೆಲವೇ ದೂರದಲ್ಲಿದೆ. ಮೂಲ ಸೌಕರ್ಯದ ವಿಚಾರದಲ್ಲಿ ಯಾವುದೇ ಕಾಂಪ್ರಮೈಸ್ ಮಾಡಿಕೊಳ್ಳದಂತ ಮಲ್ನಾಡ್ ಡೆವೆಲಪರ್ಸ್, ಕುಡಿಯುವ ನೀರಿನ ( Drinking Water )…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ “ರೇವರಿ ಸಂಸ್ಕೃತಿ” ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದು, ಉಚಿತ ಕೊಡುಗೆಗಳನ್ನ ನೀಡುವ ಮೂಲಕ ಮತ ಕೋರುವುದು ದೇಶದ ಅಭಿವೃದ್ಧಿಗೆ “ತುಂಬಾ ಅಪಾಯಕಾರಿ” ಎಂದು ಹೇಳಿದರು. ಅಂದ್ಹಾಗೆ, ‘ರೇವರಿ’ ಅಂದ್ರೆ ಉತ್ತರ ಭಾರತದಲ್ಲಿ ಸಿಗುವ ಜನಪ್ರಿಯ ಸಿಹಿತಿಂಡಿ ಹೆಸರು. ಇಲ್ಲಿ 296 ಕಿ.ಮೀ ಉದ್ದದ ಬುಂದೇಲ್ಖಂಡ್ ಎಕ್ಸ್ ಪ್ರೆಸ್ ವೇಯನ್ನು ಉದ್ಘಾಟಿಸಿದ ನಂತ್ರ ಸಭಿಕರನ್ನುದ್ದೇಶಿಸಿ ಮಾತನಾಡಿದ ಮೋದಿ, ಸಂಪರ್ಕದ ಕೊರತೆಯಿಂದಾಗಿ ಉತ್ತರ ಪ್ರದೇಶದ ಹಿಂದಿನ ವಿತರಣೆಗಳನ್ನ ತರಾಟೆಗೆ ತೆಗೆದುಕೊಂಡರು ಮತ್ತು “ಡಬಲ್ ಎಂಜಿನ್” ಸರ್ಕಾರವು ಈಗ ವೇಗವಾಗಿ ಸುಧಾರಿಸುವ ಸಂಪರ್ಕದೊಂದಿಗೆ ರಾಜ್ಯದ ಪ್ರಮುಖ ಪರಿವರ್ತನೆಯನ್ನ ಖಚಿತಪಡಿಸುತ್ತಿದೆ ಎಂದು ಹೇಳಿದರು. ಬುಂದೇಲ್ ಖಂಡ್ ಎಕ್ಸ್ ಪ್ರೆಸ್ ವೇ ಮೂಲಕ ಚಿತ್ರಕೂಟದಿಂದ ದೆಹಲಿಗೆ ಹೋಗುವ ದೂರವನ್ನು ಮೂರ್ನಾಲ್ಕು ಗಂಟೆಗಳಷ್ಟು ಕಡಿಮೆ ಮಾಡಲಾಗಿದೆ, ಆದರೆ ಅದರ ಪ್ರಯೋಜನವು ಅದಕ್ಕಿಂತ ಹೆಚ್ಚಾಗಿದೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವ್ರ ನಾಯಕತ್ವದಲ್ಲಿ, ಉತ್ತರ ಪ್ರದೇಶವು ಉತ್ತಮ ಕಾನೂನು…
ಬೆಂಗಳೂರು: ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಕೂಡ ಅವಶ್ಯ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಿಕೊಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ, 2025 ರ ವೇಳೆಗೆ ಕರ್ನಾಟಕವನ್ನು ಮಲೇರಿಯಾ ಮುಕ್ತ ಮಾಡುವ ವಿಷಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಸಚಿವರು, ಮಲೇರಿಯಾಗೆ ಹಿಂದೆ ಸರಿಯಾದ ತಪಾಸಣಾ ವ್ಯವಸ್ಥೆಯೇ ಇರಲಿಲ್ಲ. ಇದರಿಂದಾಗಿ ಸಾವುಗಳು ಸಂಭವಿಸುತ್ತಿತ್ತು. 80, 90 ರ ದಶಕದಲ್ಲಿ ಯಾವುದೇ ಜ್ವರ ಬಂದರೂ ಮೊದಲು ಮಲೇರಿಯಾ ತಪಾಸಣೆ ಮಾಡಲು ಆರಂಭವಾಯಿತು. ಈ ರೀತಿ ಸರ್ಕಾರ ತಪಾಸಣೆ ಹಾಗೂ ಅರಿವು ಕಾರ್ಯಕ್ರಮಗಳ ಮೂಲಕ ಕ್ರಮ ವಹಿಸುತ್ತಿದೆ. ಯಾವುದೇ ರೋಗದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಹೆಚ್ಚು ಅಗತ್ಯ ಎಂದರು. https://kannadanewsnow.com/kannada/people-will-decide-on-the-propriety-of-siddaramaiahs-birthday-celebrations-in-flood-crisis-minister-sudhakar/ ಮಲೇರಿಯಾ, ಡೆಂಘೀ ಮೊದಲಾದ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗುತ್ತದೆ. ರಾಜ್ಯದ…
ಬೆಂಗಳೂರು : ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿ ಜನರು ಸಂಕಷ್ಟದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿರುವುದರ ಔಚಿತ್ಯವನ್ನು ರಾಜ್ಯದ ಜನತೆ ತೀರ್ಮಾನಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಇದಕ್ಕೆ ತದ್ವಿರುದ್ಧವಾಗಿ ದೇಶಕ್ಕಿಂತ ಪಕ್ಷ, ಈ ಕುಟುಂಬ ಮುಖ್ಯ ಎಂಬ ಚಿಂತನೆ ಹೊಂದಿರುವ ಪಕ್ಷ ಅವರದ್ದು. ನಾವು “ಸ್ವಾತಂತ್ರ್ಯದ ಅಮೃತ ಮಹೋತ್ಸವ” ಆಚರಿಸಿದರೆ, ಅವರು ಅವರದ್ದೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಾರ. ನಮ್ಮ ಪಕ್ಷದಲ್ಲಿ ವ್ಯಕ್ತಿಪೂಜೆ, ಪಲ್ಲಕ್ಕಿ ಪೂಜೆಗೆ ಅವಕಾಶ ಇಲ್ಲ. ಕಾಂಗ್ರೆಸ್‌ನಲ್ಲಿ ಅದೇ ಮುಖ್ಯ ಲಸಿಕಾಕರಣ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಶನಿವಾರ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದರು. https://kannadanewsnow.com/kannada/first-namma-clinic-to-be-opened-in-bengaluru-on-july-28-says-minister-dr-k-sudhakar/ ಅತಿಯಾದ ಮಳೆಯಿಂದ ಅನೇಕ ಜಿಲ್ಲೆಗಳ ಜನರು ಸಂತ್ರಸ್ಥರಾಗಿ ಪರದಾಡುತ್ತಿರುವಾಗ ಜನ್ಮದಿನಾಚರಣೆ ಆಚರಿಸಿಕೊಳ್ಳುವುದು ಸರಿಯೇ? ತಪ್ಪೇ ಎಂಬುದನನ್ನು ಅವರ ವಿವೇಚನೆಗೆ ಬಿಡುತ್ತೇನೆ. ಆ…
ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ( Covid19 Control ) ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು. ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ʼನಮ್ಮ ಕ್ಲಿನಿಕ್ʼ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್‌ಗಳು ಆರಂಭವಾಗಲಿವೆ. ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಜುಲೈ 28ಕ್ಕೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಮೊದಲ ಕ್ಲಿನಿಕ್ ಆರಂಭಿಸಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. https://kannadanewsnow.com/kannada/good-news-for-prisoners-state-government-gives-green-signal-for-release-of-84-prisoners-on-grounds-of-good-conduct/ ಬೆಂಗಳೂರಿನಲ್ಲಿ ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಶೇ.100 ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಅನ್ನು ಕೂಡ ಮುಂದಿನ 75 ದಿನಗಳಲ್ಲಿ ರಾಜ್ಯದ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ…
ಕೆಎನ್‌ಎನ್‌ಡಿಜಿಟಲ್ ಡೆಸ್ಕ್ : ಗುಜರಾತ್ʼನಲ್ಲಿ ಶನಿವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಆತಂಕದಿಂದ ಜನರು ಮನೆಯಿಂದ ಹೊರ ಓಡಿ ಬಂದಿದ್ದಾರೆ. ಇನ್ನು ಈ ಭೂಕಂಪದ ತೀವ್ರತೆಯನ್ನ ರಿಕ್ಟರ್ ಮಾಪಕದಲ್ಲಿ 3.2 ಎಂದು ಅಳೆಯಲಾಗಿದೆ. ಅಂದ್ಹಾಗೆ, ಸರ್ದಾರ್ ಸರೋವರ್ ನರ್ಮದಾ ಅಣೆಕಟ್ಟಿನಿಂದ 30 ಕಿ.ಮೀ ದೂರದಲ್ಲಿರುವ ದಾಡಿಯಾಪಾಡ್ ಬಳಿ ಭೂಕಂಪದ ಕೇಂದ್ರಬಿಂದುವಾಗಿತ್ತು. ಪ್ರಸ್ತುತ, ಭೂಕಂಪದಿಂದ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ( Covid19 Control ) ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದ್ದಾರೆ. https://kannadanewsnow.com/kannada/good-news-for-prisoners-state-government-gives-green-signal-for-release-of-84-prisoners-on-grounds-of-good-conduct/ ಬೆಂಗಳೂರಿನಲ್ಲಿ ಲಸಿಕಾಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಶೇ.100 ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಅನ್ನು ಕೂಡ ಮುಂದಿನ 75 ದಿನಗಳಲ್ಲಿ ರಾಜ್ಯದ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಕೊಡಬೇಕು ಅನ್ನುವ ಗುರಿ ಇದೆ. ಈ ಗುರಿ ತಲುಪಲು ಪೂರಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ. ರಾಜ್ಯದ ವಿವಿಧೆಡೆ ಏಳೂವರೆ ಸಾವಿರ ಸರ್ಕಾರಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನರು ಇದರ ಸಂಪೂರ್ಣ ಲಾಭ ಪಡೆಯಬೇಕು ಎಂದು ಕೋರಿದರು. ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಡೀ…