Subscribe to Updates
Get the latest creative news from FooBar about art, design and business.
Author: KNN IT TEAM
ಭಯಾನಕ Video: ಮ್ಯಾನ್‌ಹೋಲ್‌ಗೆ ಅಡ್ಡಲಾಗಿ ಬಿದ್ದಿದ್ದ ಬ್ಯಾರಿಕೇಡ್ ಸರಿಪಡಿಸುತ್ತಿದ್ದಾಗ ಕಾರು ಹರಿದು ವ್ಯಕ್ತಿ ಸಾವು…
ಹೈದರಾಬಾದ್: ಇಲ್ಲಿನ ಚಾದರ್‌ಘಾಟ್‌ನಲ್ಲಿ ತೆರೆದ ಮ್ಯಾನ್‌ಹೋಲ್‌ಗೆ ಅಡ್ಡಲಾಗಿ ಬಿದ್ದಿದ್ದ ಬ್ಯಾರಿಕೇಡ್ ಅನ್ನು ಮರುನಿರ್ಮಿಸಲು ಮುಂದಾದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಜಾಹೇದ್ ಎಂದು ಗುರುತಿಸಲಾಗಿದ್ದು, ಇವರು ಮಲಕಪೇಟೆಯ ಸೊಹೈಲ್ ಹೋಟೆಲ್ ಉದ್ಯೋಗಿಯಾಗಿದ್ದಾರೆ. ಮಂಗಳವಾರ ರಾತ್ರಿ ಜಾಹೇದ್ ಚಾದರ್‌ಘಾಟ್ ರಸ್ತೆಯಲ್ಲಿ ಅಪಾಯಕಾರಿ ಮ್ಯಾನ್‌ಹೋಲ್‌ನ ಮುಂದೆ ಹಾಕಲಾಗಿದ್ದ ಎಚ್ಚರಿಕೆಯ ಬ್ಯಾರಿಕೇಡ್ ಅನ್ನು ಮರುನಿರ್ಮಿಸಲು ಪ್ರಯತ್ನಿಸುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ತಕ್ಷಣವೇ ಅವರನ್ನು ಉಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. A man was run over by a speeding car in Hyderabad, while he was trying to warn others about a dangerous open manhole. He was trying to re-erect a barricade around it when the car hit…
ಶಿರಸಿ : ರಾಜ್ಯ ಸರ್ಕಾರವು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. https://kannadanewsnow.com/kannada/karnataka-weather-report-orange-alert-sounded-in-several-districts-after-heavy-rains-for-2-more-days-in-the-state/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-learning-financial-investment-at-graduation-level-higher-education-minister-dr-c-n-ashwathnarayan/ ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ. https://kannadanewsnow.com/kannada/bigg-news-comprehensive-development-of-anjanadri-hill-blueprint-ready-within-15-days-tourism-minister-anand-singh/
Karnataka Weather Report : ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಆರೆಂಜ್ ಅಲರ್ಟ್’ ಘೋಷಣೆ
ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/bigg-news-learning-financial-investment-at-graduation-level-higher-education-minister-dr-c-n-ashwathnarayan/ ಇಂದು ಮತ್ತು ನಾಳೆ ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. https://kannadanewsnow.com/kannada/firefighting-helicopter-crashes-off-greek-island-of-samos-2-dead/ ಕರ್ನಾಟಕದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಈ ನಡುವೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನದಿಗಳು ತುಂಬಿ ಹರಿಯುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಣೆಕಟ್ಟುಗಳಿಗೆ ನೀರು ಹರಿದು ಹೋಗುತ್ತಿದೆ.
ಬೆಂಗಳೂರು : ಎರಡನೇ ವರ್ಷದ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಹಣಕಾಸು ಶಿಕ್ಷಣ (ಫೈನಾನ್ಶಿಯಲ್ ಎಜುಕೇಶನ್) ಮತ್ತು ಹೂಡಿಕೆ ಜಾಗೃತಿ (ಇನ್ವೆಸ್ಟ್‌ಮೆಂಟ್ ಅವೇರ್ನೆಸ್) ಎರಡನ್ನೂ ಕಲಿಸುವ ಸದುದ್ದೇಶವಿರುವ ಒಡಂಬಡಿಕೆಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್‌ನ ಅಂಗಸಂಸ್ಥೆಯಾದ ಎನ್‌ಎಸ್‌ಇ ಅಕಾಡೆಮಿ ಲಿಮಿಟೆಡ್ (ಎನ್‌ಎಎಲ್) ಒಡಂಬಡಿಕೆ ಮಾಡಿಕೊಂಡವು. https://kannadanewsnow.com/kannada/firefighting-helicopter-crashes-off-greek-island-of-samos-2-dead/ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಎರಡೂ ಸಂಸ್ಥೆಗಳು ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡವು. ಇದೇ ಸಂದರ್ಭದಲ್ಲಿ ಎನ್‌ಎಸ್‌ಇ ಅಕಾಡೆಮಿಯು ರಾಜ್ಯದ 20 ವಿಶ್ವವಿದ್ಯಾಲಯಗಳೊಂದಿಗೂ ಒಪ್ಪಂದವನ್ನು ಮಾಡಿಕೊಂಡಿತು. ಇಷ್ಟೂ ವಿ.ವಿ.ಗಳ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಗಳು ಹಾಜರಿದ್ದು, ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು. https://kannadanewsnow.com/kannada/bigg-news-comprehensive-development-of-anjanadri-hill-blueprint-ready-within-15-days-tourism-minister-anand-singh/ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, `ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಬೇಕಾಗಿರುವ ನಮ್ಮ ವಿದ್ಯಾರ್ಥಿಗಳಿಗೆ ಹಣಕಾಸು ಶಿಕ್ಷಣ ಮತ್ತು ಹೂಡಿಕೆ ಜಾಗೃತಿ ಎರಡನ್ನೂ ಕಲಿಕೆಯ ಭಾಗವನ್ನಾಗಿ ಮಾಡುವುದು ಅತ್ಯಗತ್ಯವಾಗಿದೆ. ಇದರಿಂದ ರಾಜ್ಯದ 5 ಲಕ್ಷ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ…
ಅಥೆನ್ಸ್ (ಗ್ರೀಸ್): ಗ್ರೀಕ್ ದ್ವೀಪ ಸಮೋಸ್‌ನಲ್ಲಿ ಕಾಡ್ಗಿಚ್ಚಿನೊಂದಿಗೆ ಹೋರಾಡುತ್ತಿದ್ದ ಹೆಲಿಕಾಪ್ಟರ್ ಬುಧವಾರ ಪತನಗೊಂಡಿದ್ದು ಅದರಲ್ಲಿದ್ದ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಅಲ್ ಅರೇಬಿಯಾ ವರದಿ ಮಾಡಿದೆ. ಹೆಲಿಕಾಪ್ಟರ್ ಸೋವಿಯತ್ ಯುಗದ Mi-8 ಆಗಿದ್ದು, ಉಕ್ರೇನ್‌ನಿಂದ ಅಗ್ನಿಶಾಮಕ ಕಾರ್ಯಾಚರಣೆಗಾಗಿ ಗುತ್ತಿಗೆ ನೀಡಲಾಗಿತ್ತು. ನಿನ್ನೆ ಸಂಜೆ 4:39 ಕ್ಕೆ ಸಮೋಸ್‌ನಿಂದ ಟೇಕ್ ಆಫ್ ಆಗಿದ್ದ ಹೆಲಿಕಾಪ್ಟರ್ ಸಂಜೆ 5:55ರ ಸುಮಾರಿಗೆ ಸಮುದ್ರದಲ್ಲಿ ಪತನಗೊಂದಿದೆ ಎಂದು ಮೂಲಗಳು ತಿಳಿಸಿವೆ. ತನಿಖಾ ಅಧಿಕಾರಿಗಳ ಪ್ರಕಾರ, ರೊಮೇನಿಯನ್ ಪ್ರಜೆ ಮತ್ತು ಗ್ರೀಕ್ ಅಧಿಕಾರಿಯೊಬ್ಬರು ಮೃತಪಟ್ಟರೆ, ಇಬ್ಬರು ಮೊಲ್ಡೊವನ್ ಪ್ರಜೆಗಳು ದುರಂತ ಅಪಘಾತದಲ್ಲಿ ಬದುಕುಳಿದಿದ್ದಾರೆ. ಒಂಬತ್ತು ಹಡಗುಗಳು, ಕೋಸ್ಟ್ ಗಾರ್ಡ್‌ನ ಐದು, ಸೇನೆಯ ಎರಡು ಮತ್ತು ಎರಡು ಖಾಸಗಿ, ಹೆಲಿಕಾಪ್ಟರ್‌ಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ದ್ವೀಪದ 27 ಅಗ್ನಿಶಾಮಕ ದಳದವರು ನಾಲ್ಕು ವಿಮಾನಗಳು ಮತ್ತು ಹೆಲಿಕಾಪ್ಟರ್‌ನೊಂದಿಗೆ ಟರ್ಕಿಯ ಕರಾವಳಿಯ ಸಮೀಪವಿರುವ ಸಮೋಸ್‌ನ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹರಸಾಹಸ…
ಹೊಸಪೇಟೆ : ಅಂಜನೇಯ ಜನ್ಮಸ್ಥಳ ಅಂಜನಾದ್ರಿಯ ಬೆಟ್ಟದ ಸಮಗ್ರ ಅಭಿವೃದ್ಧಿಗೆ ನಮ್ಮ ಸರಕಾರ ವಿಶೇಷ ಮುತುವರ್ಜಿ ವಹಿಸಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಣಿತ ವಾಸ್ತುಶಿಲ್ಪತಜ್ಞರಿಂದ 15 ದಿನದೊಳಗೆ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಪ್ರವಾಸೋದ್ಯಮ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಆನಂದಸಿಂಗ್ ಅವರು ಹೇಳಿದರು. https://kannadanewsnow.com/kannada/on-camera-up-women-throw-mud-at-mla-the-reason-is/ ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಣಿತ ವಾಸ್ತುಶಿಲ್ಪ ತಜ್ಞರ ಏಜೆನ್ಸಿಯನ್ನು ಆಹ್ವಾನಿಸಿ ಅವರಿಂದ ನೀಲನಕ್ಷೆ ಸಿದ್ದಪಡಿಸಲಾಗುವುದು ಎಂದು ಹೇಳಿದ ಸಚಿವ ಸಿಂಗ್ ಅವರು ಶೌಚಾಲಯ,ಸ್ನಾನಗೃಹ,ಪಾರ್ಕಿಂಗ್, ಪ್ರವಾಸಿಗರ ಕೊಠಡಿ, ವಾಣಿಜ್ಯ ಮಳಿಗೆಗಳು ಸೇರಿದಂತೆ ಇನ್ನೀತರ ಸೌಕರ್ಯಗಳನ್ನು ಒಳಗೊಂಡ ನೀಲನಕ್ಷೆಯನ್ನು ಸಿದ್ದಪಡಿಸಲಾಗುವುದು ಮತ್ತು ಮೊದಲ ಹಂತದಲ್ಲಿ ಇವುಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. https://kannadanewsnow.com/kannada/bigg-news-strict-action-will-be-taken-against-those-creating-shortage-of-artificial-fertilisers-agriculture-minister-b-c-patil/ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ 100 ಕೋಟಿ ರೂ.ಗಳು ಮೀಸಲಿಟ್ಟಿದ್ದು, ಆ ಹಣವನ್ನು ಹಂತಹಂತವಾಗಿ ಹಣಕಾಸು ಇಲಾಖೆ ಒದಗಿಸಲಿದೆ;ಇನ್ನೂ ಹಣ ಅವಶ್ಯವಿದ್ದಲ್ಲಿ ಸರಕಾರ…
ಗೋರಖ್‌ಪುರ (ಉತ್ತರ ಪ್ರದೇಶ): ಎಲ್ಲಡೆ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ ಮಹಿಳೆಯರ ಗುಂಪೊಂದು ಸ್ಥಳೀಯ ಶಾಸಕ ಮತ್ತು ನಗರಪಾಲಿಕೆ ಅಧ್ಯಕ್ಷರನ್ನು ಮಣ್ಣಿನ ಕೆಸರು ಎರಚಿ ಮಳೆ ದೇವರು ಇಂದ್ರನನ್ನು ಮೆಚ್ಚಿಸುವ ಮೂಲಕ ಧಾರ್ಮಿಕ ವಿಧಿವಿಧಾನ ನಡೆಸಿದೆ. ತಲೆಗೆ ಮಡೆ ಸ್ನಾನ ಮಾಡಿದರೆ, ಮಳೆ ಬರಿಸುವ ಮಳೆ ದೇವರಿಗೆ ಹಿತವಾಗುತ್ತದೆ ಎಂಬುದು ಈ ಪ್ರದೇಶದ ಪ್ರಾಚೀನ ನಂಬಿಕೆ. ಮಹಾರಾಜ್‌ಗಂಜ್‌ನ ಪಿಪರ್ಡೆಯುರಾ ಪ್ರದೇಶದ ಮಹಿಳೆಯರು ಬಿಜೆಪಿ ಶಾಸಕ ಜಯಮಂಗಲ್ ಕನೋಜಿಯಾ ಮತ್ತು ನಗರಪಾಲಿಕೆಯ ಅಧ್ಯಕ್ಷ ಕೃಷ್ಣ ಗೋಪಾಲ್ ಜೈಸ್ವಾಲ್‌ಗೆ ಮಡೆ ಸ್ನಾನ ಮಾಡಿಸುವ ವಿಡಿಯೋ ಇದೀಗ ಆಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. #WATCH | Women in Pipardeura area of Maharajganj in Uttar Pradesh throw mud at MLA believing this will bring a good spell of rainfall for the season pic.twitter.com/BMFLHDgYxb — ANI UP/Uttarakhand (@ANINewsUP) July…
ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಡೆಸಿದ್ದ 2022 ನೇ ಸಾಲಿನ ಕೆ-ಸಿಇಟಿ ಫಲಿತಾಂಶ ಜುಲೈ 17 ಕ್ಕೆ ಪ್ರಕಟವಾಗುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ. https://kannadanewsnow.com/kannada/bigg-news-strict-action-will-be-taken-against-those-creating-shortage-of-artificial-fertilisers-agriculture-minister-b-c-patil/ ಜು. 17 ರೊಳಗೆ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಬಿಎಸ್ ಇ, ಐಸಿಎಸ್ ಇ 12 ನೇ ತರಗತಿ ಫಲಿತಾಂಶವೂ ಪ್ರಕಟವಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ರಾಜ್ಯದ ಫಲಿತಾಂಶ ಮಾತ್ರ ಪ್ರಕಟವಾಗಿದ್ದು, ಕೇಂದ್ರೀಯ ಪಠ್ಯಕ್ರಮದ ಮಂಡಳಿಗಳು ಇನ್ನೂ ಫಲಿತಾಂಶ ಪ್ರಕಟಿಸಿಲ್ಲ. ಹೀಗಾಗಿ ಕೆ-ಸಿಇಟಿ ಫಲಿತಾಂಶ ವಿಳಂಬವಾಗಲಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/bigg-news-1500-model-government-schools-to-be-developed-soon-education-minister-b-c-nagesh/ ಇನ್ನು ರ್ಯಾಂಕ್ ಪಟ್ಟಿ ತಯಾರಿಸಲು ಕೆ-ಸಿಇಟಿ ಫಲಿತಾಂಶದ ಜೊತೆಗೆ ದ್ವಿತೀಯ ಪಿಯುಸಿಯ ಪಿಸಿಎಂ ವಿಷಯಗಳಿಂದ ಶೇ. 50 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. https://kannadanewsnow.com/kannada/bigg-news-rs-500-crore-allocated-for-flood-damage-in-the-state-cm-bommai-announces-temporary-relief/
ಹಾವೇರಿ : ಗೊಬ್ಬರ ಮಾರಾಟಗಾರರು ಅಧಿಕ ಲಾಭದ ದೃಷ್ಟಿಯಿಂದ ರೈತರಿಗೆ ಲಿಂಕ್ ಆಧಾರದಲ್ಲಿ ಯೂರಿಯಾ ಗೊಬ್ಬರದ ಜೊತೆ ಜಿಂಕ್ ಸೇರಿ ಯಾವುದೇ ಇತರ ಗೊಬ್ಬರವನ್ನು ಲಿಂಕ್ ಮಾಡಿ ವಿತರಿಸುವಂತಿಲ್ಲ. ವಿತರಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. https://kannadanewsnow.com/kannada/bigg-news-1500-model-government-schools-to-be-developed-soon-education-minister-b-c-nagesh/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೆ ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರದ ಅಭಾವ ಉಂಟಾಗಿಲ್ಲ. ಇನ್ನೂ ಮೂರು ದಿನಗಳಲ್ಲಿ ಜಿಲ್ಲೆಗೆ ಮದ್ರಾಸ್ ಫರ್ಟಿಲೈಜರ್ ಲಿಮಿಟೆಡ್ ನಿಂದ 700ಟನ್,ನ್ಯಾಷನಲ್ ಫರ್ಟಿಲೈಜರ್ ನಿಂದ 1,900 ಟನ್, ಇಫ್ಕೋದಿಂದ 1,300ಟನ್, ಸ್ಪಿಕ್‍ನಿಂದ 1,250ಟನ್ ಸೇರಿದಂತೆ ಇತರ ಮೂಲಗಳಿಂದ ಜುಲೈ 14ರಂದು ಒಟ್ಟು 7,550 ಟನ್ ಯೂರಿಯಾ ಗೊಬ್ಬರ ಜಿಲ್ಲೆಗೆ ಸರಬರಾಜು ಆಗಲಿದೆ. ಅರ್ಧ ಲೀಟರ್ ದ್ರವರೂಪದ ಪರಿಸರ ಸ್ನೇಹಿ “ನ್ಯಾನೋ ಯೂರಿಯಾ” ಒಂದು ಚೀಲ ಯೂರಿಯಾ ಗೊಬ್ಬರಕ್ಕೆ ಸಮ. ರೈತರಿಗೆ ಅದು ಕೇವಲ 250 ರೂಪಾಯಿಗಳಿಗೆ ದೊರೆಯುತ್ತದೆ. ರೈತರು ಯೂರಿಯಾ ಬಳಕೆ ಕಡಿಮೆ ಮಾಡಿ ಭೂಮಿಯ ಫಲವತ್ತತೆಯನ್ನು ಉಳಿಸಬೇಕು ಎಂದರು. https://kannadanewsnow.com/kannada/good-news-lpg-launches-tatkal-service-now-the-gas-cylinder-will-come-home-in-just-2-hours-indian-oil-tatkal-service/
ಶಿರಸಿ : ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾಡುವ ಕಾರ್ಯ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. https://kannadanewsnow.com/kannada/good-news-lpg-launches-tatkal-service-now-the-gas-cylinder-will-come-home-in-just-2-hours-indian-oil-tatkal-service/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ 1,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿಸುವ ಕೆಲಸವನ್ನು ಶೀಘ್ರವೇ ಮಾಡಲಾಗುವುದು. ಮಾದರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ಕಲಿಸಲಾಗುವುದು. ಪ್ರತಿ ತರಗತಿಗೆ ಒಬ್ಬ ಶಿಕ್ಷಕರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. https://kannadanewsnow.com/kannada/bigg-news-rs-500-crore-allocated-for-flood-damage-in-the-state-cm-bommai-announces-temporary-relief/ ಪಠ್ಯಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಪಠ್ಯಪರಿಷ್ಕರಣೆ ಹಿಂದೆಯೂ ಆಗಿತ್ತು. ಆದರೆ ನಾವು ಚರ್ಚೆ ನಡೆಸುತ್ತಿದ್ದೇವು. ಈಗಿನ ವಿರೋಧ ಪಕ್ಷಗಳಂತೆ ಬೀದಿಯಲ್ಲಿ ಕೂಗುತ್ತಿರಲಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯಪುಸ್ತಕ ಬದಲಾವಣೆ ಮಾಡಲಾಗಿತ್ತು. ಆದರೆ ಈಗ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯಗೊಳಿಸುತ್ತಿರುವುದು ದುರಾದೃಷ್ಟ ಎಂದು ಹೇಳಿದ್ದಾರೆ. https://kannadanewsnow.com/kannada/breaking-news-ex-corporate-husband-ayub-khan-dies-after-being-stabbed-to-death/