Subscribe to Updates
Get the latest creative news from FooBar about art, design and business.
Author: KNN IT TEAM
ಶಿವಮೊಗ್ಗ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು. ಈ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತು 3ಬಿಗೆ ಸೇರಿದವರಾಗಿರಬೇಕು(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತ ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-, ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿರಬೇಕು. 18 ರಿಂದ 55 ವಯೋಮಿತಿಯೊಳಗಿನವರು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್…
ಹಾವೇರಿ ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರ ಭಾಷಣದಲ್ಲೇ ‘ಡಬಲ್ ಎಂಜಿನ್ ಸರ್ಕಾರ’ ಟೀಕಿಸಿದ ‘ಸಾಹಿತಿ ದೊಡ್ಡರಂಗೇಗೌಡ’
ಹಾವೇರಿ: ಇಂದಿನಿಂದ ಹಾವೇರಿಯಲ್ಲಿ ಮೂರು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಅಕ್ಷರ ಜಾತ್ರೆಯೇ ನಡೆಯಲಿದೆ. ಇಂದು ಆರಂಭಗೊಂಡಂತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣದಲ್ಲಿಯೇ ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಸಾಹಿತಿ ದೊಡ್ಡರಂಗೇಗೌಡರು ವಾಗ್ಧಾಳಿ ನಡೆಸಿದರು. ಹಾವೇರಿ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಭಾಷಣದಲ್ಲಿ ಮಾತನಾಡಿದಂತ ಅವರು, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ಮಾನ ದೊರೆತರೂ, ಇತರೇ ಭಾಷೆಗಳಿಗೆ ಹೋಲಿಕೆ ಮಾಡಿದರೇ ಕೇಂದ್ರ ಸರ್ಕಾರದಿಂದ ಸಿಕ್ಕ ಅನುದಾನ ಕಡಿಮೆಯೇ ಆಗಿದೆ ಎಂದು ಹೇಳಿದರು. 2012 ರಿಂದ 2020ರ ಅವಧಿಯಲ್ಲಿ ಸಂಸ್ಕೃತ ಭಾಷೆಗೆ ಕೇಂದ್ರವು ನೀಡಿದ ಅನುದಾನದ ಮೊತ್ತ ರೂ.643 ಕೋಟಿ ಆಗಿದೆ. ಇದೇ ಅವಧಿಯಲ್ಲಿ ಶಾಸ್ತ್ರೀಯ ಭಾಷಾ ಸ್ಥಾನಮಾದನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಕನ್ನಡದ ಅಧ್ಯಯನ, ಸಂಶೋಧನೆಗಳಿಗೆ ಬಿಡುಗಡೆಯಾದ ಹಣ ಕೇವಲ 3 ಕೋಟಿ ರೂ. ತಮಿಳು ಭಾಷೆಗೆ ಈ ಅವಧಿಯಲ್ಲಿ ದೊರೆತ ಹಣ ರೂ.23 ಕೋಟಿ ಎಂದು ಅಂಕಿ ಅಂಶ ಸಹಿತ ಮಾಹಿತಿ ನೀಡಿದರು. ಇನ್ನೂ ತಮಿಳು ಭಾಷೆಗೆ 2012 ರಿಂದ 2021ರ ವರೆಗೆ…
ಕೆಎನ್ಎನ್ಡಿಜಿಟಲ್ ಡೆಸ್ಕ್ : ಹೃದಯ ವಿದ್ರಾವಕ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಅದರಲ್ಲಿ ಹಠಾತ್ ಹೃದಯಾಘಾತದಿಂದ ಒಬ್ಬ ವ್ಯಕ್ತಿಯು ಹೇಗೆ ಸಾಯುತ್ತಾನೆ ಅನ್ನೋದನ್ನ ನೀವು ಲೈವ್ ಆಗಿ ನೋಡಬಹುದು. ದೆಹಲಿ ಎನ್ಸಿಆರ್ನ ಫರಿದಾಬಾದ್’ನರುವ ಮೆಡಿಕಲ್ ಶಾಪ್ನಲ್ಲಿ ಈ ಘಟನೆ ನಡೆದಿದ್ದು, ಅದ್ರಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. 23 ವರ್ಷದ ವ್ಯಕ್ತಿಯೊಬ್ಬರು ಒಆರ್ಎಸ್ ಪಡೆಯಲು ಇಲ್ಲಿನ ಮೆಡಿಕಲ್ ಶಾಪ್’ಗೆ ಹೋಗಿದ್ದು, ಅಲ್ಲೇ ಆತ ಹೃದಯಾಘಾತವಾಗಿದೆ. ಇನ್ನು ಆ ವ್ಯಕ್ತಿ ಕೇವಲ 2-3 ನಿಮಿಷಗಳಲ್ಲಿ ಸಾವನ್ನಪ್ಪಿದ್ದಾನೆ. ಹೃದಯಾಘಾತಕ್ಕೆ ಮೊದಲು, ಯುವಕ ತನ್ನ ಎದೆಯ ಮೇಲೆ ಕೈ ಹಾಕುವುದನ್ನ ಸಹ ಕಾಣಬಹುದು. ಆದ್ರೆ, ಹೃದಯಘಾತಕ್ಕೂ ಮುನ್ನ ಆತ ಸಾಮಾನ್ಯವಾಗಿ ಮೆಡಿಕಲ್ ಸ್ಟೋರ್ ಮುಂದೆ ನಿಂತಿರೋದನ್ನ ನೋಡಬೋದು. ಸಾವಿನ ಅಂತಹ ಲೈವ್ ವೀಡಿಯೊವನ್ನ ನೋಡಿದ ಯಾರಾದರೂ ಒಮ್ಮೆ ಬೆಚ್ಚಿ ಬೀಳುತ್ತಾರೆ. ಸಾವಿನ ಲೈವ್ ವಿಡಿಯೋ ವೈರಲ್.! ಮಾಹಿತಿಯ ಪ್ರಕಾರ, ಈ 23 ವರ್ಷದ ಯುವಕನ ಹೆಸರು ಸಂಜಯ್, ಮೂಲತಃ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಿವಾಸಿ.…
ರಾಯಚೂರು: ರಾಜಕೀಯದಿಂದ ಸ್ವಲ್ಪ ವರ್ಷಗಳ ಕಾಲ ದೂರ ಸರಿದಿದ್ದ ಗಾಲಿ ಜನಾರ್ದನ ರೆಡ್ಡಿ ಇದೀಗ ಹೊಸ ಪಕ್ಷದ ಮೂಲಕ ಮತ್ತೆ ಸಂಚಲನ ಮೂಡಿಸಲಿದ್ದಾರೆ. https://kannadanewsnow.com/kannada/shimoga-more-than-15-children-fall-ill-after-consuming-mid-day-meal-in-sagar-hospitalised/ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿದ್ದು, ರಾಯಚೂರಿನಲ್ಲಿ ಬೃಹತ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ ಮಾಡಿದ್ದಾನೆ. ರಾಯಚೂರಿನ ಸಿಂಧನೂರಿನಲ್ಲಿ ಆಗಮಿಸಿದ ರೆಡ್ಡಿ ಕೆಆರ್ ಪಿಪಿ ಕಾರ್ಯಕರ್ತರ ಜತೆ ಸಭೆ ನಡೆಸಿದ್ದಾರೆ. ಪಿಡಬ್ಲ್ಯೂಡಿ ಕ್ಯಾಂಪಸ್ ನಿಂದ ಬೈಕ್ ರಾಲಿ ಪ್ರಾರಂಭ ಮಾಡಿದ್ದರು. ಇದೇ ವೇಳೆ ಕಾರಿನಲ್ಲಿ ಜನಾರ್ದನ ರೆಡ್ಡಿ ರೋಡ್ ಶೋ ನಡೆಸಿದ್ದು, ಹೊಸ ಪಕ್ಷಕ್ಕೆ ಶುಭ ಕೋರಿದ್ದಾರೆ. ಇನ್ನು ಸಿಂಧನೂರಿನಲ್ಲಿ ಸಮಾವೇಶ ಹಮ್ಮಿಕೊಂಡಿರುವ ಪ್ರಯುಕ್ತ ಸಮಾವೇಶಕ್ಕೆ ಬರುವ ಬೈಕ್ ಗಳಿಗೆ ಪೆಟ್ರೋಲ್ ಉಚಿತ ಎಂದು ಘೋಷಿಸಿದ್ದರು. ಹೀಗಾಗಿ ಉಚಿತ ಪೆಟ್ರೋಲ್ ಪಡೆಯುವ ಸಲುವಾಗಿ ನೂಕನುಗ್ಗಲು ಉಂಟಾಯಿತು.
ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಉತ್ತೇಜನ ನೀಡುವ ಸಲುವಾಗಿ ಗುಲಾಂ ನಬಿ ಆಜಾದ್ ಅವರ ರಾಜೀನಾಮೆಯ ನಂತರ ಪಕ್ಷವನ್ನು ತೊರೆದ ಹಲವು ನಾಯಕರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ರಾಜ್ಯಕ್ಕೆ ಪ್ರವೇಶಿಸುವ ಮರು ಸೇರ್ಪಡೆಯಾಗುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್, ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಮುಜಾಫರ್ ಪರ್ರೆ ಮತ್ತು ಬಲ್ವಾನ್ ಸಿಂಗ್ ಸೇರಿದಂತೆ ಹಲವು ಹಿರಿಯ ನಾಯಕರು ಶುಕ್ರವಾರ ಪಕ್ಷಕ್ಕೆ ಮರಳಿದ್ದಾರೆ. ಕಾಂಗ್ರೆಸ್ ನಿಷ್ಠವಂತ ನಾಯಕರಾಗಿದ್ದ ಚಾಂದ್ ಮತ್ತು ಬಲ್ವಾನ್ ಸಿಂಗ್ ಅವರು ಕಾಂಗ್ರೆಸ್ ತೊರೆದು ಡೆಮಾಕ್ರಟಿಕ್ ಆಜಾದ್ ಪಾರ್ಟಿ (ಡಿಎಪಿ) ಸೇರಿದ್ದರು. ಆದರೆ ಆಜಾದ್ ಕಳೆದ ತಿಂಗಳು ಅವರಲ್ಲಿ ಕೆಲವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಡಿಎಪಿಯಿಂದ ಹೊರಹಾಕಿದ್ದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಪಾಲಿಗೆ ಇದೊಂದು ದೊಡ್ಡ ದಿನ. ನಾಯಕ ರುಪುನಃ ಪಕ್ಷಕ್ಕೆ ಹಿಂತಿರುಗಿದ್ದ ಸಂತಸ ತಂದಿದೆ ಎಂದಿದ್ದಾರೆ.…
ಶಿವಮೊಗ್ಗ : ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ನಡೆಸಿ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಮತ್ತು ಪುನರುಜ್ಜೀವನ ಕುರಿತಾಗಿ ಲೋಕಾಯುಕ್ತ ಸಂಸ್ಥೆ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಲು ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಯಮಿತವಾಗಿ ಈ ಕುರಿತು ವಿಚಾರಣೆಯನ್ನು ನಡೆಸಲಾಗುವುದು. ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 6ಸಾವಿರಕ್ಕೂ ಅಧಿಕ ಕೆರೆಗಳಿದ್ದು, ಇವುಗಳ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೊಂಡು ವರದಿಯನ್ನು ಸಲ್ಲಿಸಬೇಕು. ಇದೇ ರೀತಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸ್ಥಿತಿಗತಿ ಕುರಿತು ವರದಿಯನ್ನು ಪ್ರತ್ಯೇಕವಾಗಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಉದ್ಯೋಗ…
ಪಶ್ಚಿಮ ಬಂಗಾಳ : ಪಂಚಾಯತ್ ಚುನಾವಣೆ ಮುನ್ನವೇ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜತೆ ವಾರಕ್ಕೊಮ್ಮೆ ಚಿಕನ್ ಮತ್ತು ಹಣ್ಣುಗಳನ್ನು ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ. https://kannadanewsnow.com/kannada/viral-video-egyptian-man-sets-guinness-world-record-by-pulling-truck-weighing-15730-kg-with-teeth/ ಶಾಲಾ ಮಕ್ಕಳಲ್ಲಿ ಹೆಚ್ಚಿನ ಪೋಷಣೆ ಒದಗಿಸುವ ಸಲುವಾಗಿ ಜನವರಿಯಿಂದ ಏಪ್ರಿಲ್‌ವರೆಗೆ ನಾಲ್ಕು ತಿಂಗಳ ಅವಧಿಗೆ ಸದ್ಯ ಮಕ್ಕಳಿಗೆ ನೀಡುತ್ತಿರುವ ತರಕಾರಿ ಊಟ ಹಾಗೂ ಮೊಟ್ಟೆಯೊಂದಿಗೆ ಇನ್ಮುಂದೆ ಚಿಕನ್ ಕೂಡ ನೀಡಲಾಗುತ್ತದೆ. https://kannadanewsnow.com/kannada/viral-video-egyptian-man-sets-guinness-world-record-by-pulling-truck-weighing-15730-kg-with-teeth/ ಪಶ್ಚಿಮ ಬಂಗಾಳ ಸರ್ಕಾರ 371 ಕೋಟಿ ರು. ವೆಚ್ಚದಲ್ಲಿ ಮಹತ್ವದ ಯೋಜನೆ ಜಾರಿಗೊಳಿಸಲಾಗಿದೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ರಾಜ್ಯದಲ್ಲಿ ಒಟ್ಟು 1.6 ಕೊಟಿ ವಿದ್ಯಾರ್ಥಿಗಳು ಪ್ರತಿನಿತ್ಯ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಾರೆ. ಆದರೆ ಏಪ್ರಿಲ್‌ನ ನಂತರ ಈ ಯೋಜನೆ ಮುಂದುವರೆಸುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿದುಬಂದಿದೆ. ಒಂದೆಡೆ ಪಂಚಾಯತ್ ಚುನಾವಣೆ ಗಿಮಿಕ್ ಎಂದು ಹಲವಡೆ ಸುದ್ದಿಯೂ ರವಾನೆಯಾಗುತ್ತಿದೆ. https://kannadanewsnow.com/kannada/viral-video-egyptian-man-sets-guinness-world-record-by-pulling-truck-weighing-15730-kg-with-teeth/
ಶಿವಮೊಗ್ಗ : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು, 714490 ಪುರುಷ ಮತದಾರರು ಹಾಗೂ 33 ತೃತೀಯಲಿಂಗ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1 ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760 ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು. ವಿಧಾನಸಭಾ ಕ್ಷೇತ್ರವಾರು ವಿವರ: ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 103534 ಪುರುಷ, 104525 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 208062…
ಶಿವಮೊಗ್ಗ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಅಡಿಯಲ್ಲಿ ಮಾಡಿದಂತ ಊಟವನ್ನು ಸೇವಿಸಿದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೋಟೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಗುರುವಾರ ಮಧ್ಯಾಹ್ನದ ಬಿಸಿಯೂಟವನ್ನು ಮಕ್ಕಳು ಸೇವಿಸಿದ್ದಾರೆ. ಈ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಜ್ವರ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಾಗರದ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ನಿನ್ನೆಯ ಬಳಿಕ ಇಂದು ಕೂಡ ಕೆಲ ಮಕ್ಕಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡ ಕಾರಣ, ಮತ್ತಷ್ಟು ಮಕ್ಕಳು 25 ಕಿಲೋ ಮೀಟರ್ ದೂರದಲ್ಲಿನ ಸಾಗರದ ತಾಲೂಕು ಆಸ್ಪತ್ರೆಗೆ ಕರೆತಂದು ಪೋಷಕರು ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈವರೆಗೆ 15ಕ್ಕೂ ಹೆಚ್ಚು ಮಕ್ಕಳು ಬಿಸಿಯೂಟ ಸೇರಿಸಿದ ಕಾರಣ ಅಸ್ವಸ್ಥಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಈ ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರಿದಂತ ಅಧಿಕಾರಿಗಳು, ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವರದಿ: ಚಾರ್ವಾಕ ರಾಘವೇಂದ್ರ,…
ಬೆಂಗಳೂರು: ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಆಗಿದ್ದು ಹೇಗೆ? ಯಾರ ಕೃಪೆಯಿಂದ ಆತನಿಗೆ ಕುಮಾರಕೃಪ ಸಿಕ್ಕಿದ್ದು? ಬೊಮ್ಮಾಯಿ ಕೃಪೆಯೇ? ಜ್ಞಾನೇಂದ್ರ ಕೃಪೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್( Karnataka Congress ) ಪ್ರಶ್ನಿಸಿದೆ. https://twitter.com/INCKarnataka/status/1611268185260724224 ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಜೊತೆಗೆ ಸಾಲು ಸಾಲು ಬಿಜೆಪಿ ಸಚಿವರು ಆಪ್ತರಾಗಿರುವುದು ಹೇಗೆ? ಸಚಿವರು ಸಿಡಿಗೆ ತಡೆಯಾಜ್ಞೆ ತಂದಿರುವುದಕ್ಕೂ, ಈತನಿಗೆ ಸಚಿವರೊಂದಿಗಿರುವ ಆಪ್ತತೆಗೂ, ಈತನ ದಂಧೆಗೂ ಸಂಬಂಧವಿದೆಯೇ ಬಿಜೆಪಿ? ಸಚಿವ ಸುಧಾಕರ್ ಅವರೇ, ತಮ್ಮ ಸಿಡಿ ತಡೆಯಾಜ್ಞೆಯ ಹಿಂದಿನ ರಹಸ್ಯ ಸ್ಯಾಂಟ್ರೋ ರವಿ ಬಳಿ ಇದೆಯೇ? ಎಂದು ಕೇಳಿದೆ. https://twitter.com/INCKarnataka/status/1611262756648550400 ಸ್ಯಾಂಟ್ರೋ ರವಿ ನನಗೆ ಪರಿಚಯವೇ ಇಲ್ಲ ಎನ್ನುವ ಬಸವರಾಜ ಬೊಮ್ಮಾಯಿ ಅವರೇ, ‘ಸಿಎಂ ನೇರ ಪರಿಚಯ ನನಗೆ’ ಎಂದು ರವಿ ಹೇಳಿದ್ದು ಹೇಗೆ? ನಿಮ್ಮ ಪುತ್ರ ಸ್ಯಾಂಟ್ರೋ ರವಿಗೆ ‘ಸ್ವೀಟ್ ಬ್ರದರ್’ ಆಗಿರುವುದು ಹೇಗೆ? ನಿಮ್ಮ ಸರ್ಕಾರದ ಬಹುತೇಕ ಸಚಿವರಿಗೆ ಆಪ್ತನಾಗಿರುವ ಸ್ಯಾಂಟ್ರೋ ರವಿ ನಿಮಗೂ ಆಪ್ತನಲ್ಲವೇ? ತಾವು ಆತನಿಗೆ…