Author: KNN IT TEAM

ರಾಮನಗರ :- ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅಥವಾ ರಾಷ್ಟ್ರಪತಿ ಮುರ್ಮು ಅವರು ಈ ಹೆದ್ದಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದರು. ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯ ವೈಮಾನಿಕ ಸಮೀಕ್ಷೆ ಬಳಿಕ ಸಂವಾದ ಕಾರ್ಯಕ್ರಮದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಬಹಳ ಸುಂದರವಾಗಿ ನಿರ್ಮಾಣವಾಗಿದೆ. ಎರಡೂ ನಗರಗಳ ಮಧ್ಯೆ ಪ್ರಯಾಣದ ಅವಧಿಯನ್ನು 1.20 ಗಂಟೆಗೆ ಇಳಿಕೆಯಾಗಲಿದೆ. ಜತೆಗೆ, ಈ ಬಿಜಿಯೆಸ್ಟ್ ಹೆದ್ದಾರಿಯಾಗಿರುವುದರಿಂದ ಆರ್ಥಿಕ ಮತ್ತು ಕೈಗಾರಿಕೆ ಚಟುವಟಿಕೆಗಳಿಗೆ ನೆರವು ನೀಡಲಿದೆ ಎಂದರು. ಈ ದಶಪಥ ಹೆದ್ದಾರಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರು, ಲೋಕಸಭಾ ಸದಸ್ಯರು ಒಂದಷ್ಟು ಸಲಹೆ ನೀಡಿದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು. ಹೆದ್ದಾರಿ ಪೂರ್ಣಗೊಂಡರೆ 90 ನಿಮಿಷಗಳಲ್ಲಿ ಬೆಂಗಳೂರು – ಮೈಸೂರು ನಡುವೆ ಸಂಚಾರ ಮಾಡಬಹುದು.…

Read More

ಚಿಕ್ಕಮಗಳೂರು : ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ ತಗುಲಿದ್ದು, ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್  ಆಗಿದೆ.  ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸ್ವತಃ ದತ್ತ ಹೇಳಿದ್ದಾರೆ. ಕಡೂರು ತಾಲೂಕಿನ ಯಗಟಿಯಲ್ಲಿ ಮಾತನಾಡಿದ ಅವರು ಜನವರಿ 15ರ ಬಳಿಕ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ಹೇಳಿದ್ದಾರೆ. ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಅಂದುಕೊಂಡಿದ್ದೇನೆ ಎಂದು ಭಾವುಕರಾದರು. ಜನವರಿ 15ರಂದು ಪಕ್ಷಕ್ಕೆ ಸೇರುವುದಾಗಿ ಸೂಚಿಸಿದ್ದಾರೆ. ಅಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿದರು. ಕಳೆದ 50  ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ ಎಂದರು . https://kannadanewsnow.com/kannada/rs-1000-crore-grant-from-center-for-construction-of-railway-overbridge-under-bridge-cm-bommai/ https://kannadanewsnow.com/kannada/illegal-psi-recruitment-case-conditional-bail-granted-to-26-accused-psi-recruitment-scam-2/

Read More

ಶಿವಮೊಗ್ಗ: ನಗರದ ತುಂಗಾ ನದಿ ತೀರದಲ್ಲಿ ಶಂಕಿತ ಉಗ್ರ ತಾರಿಕ್ ಸೇರಿದಂತೆ ಇತರರು ನಡೆಸಿದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ಹಿಂದೆ ಐಸಿಸ್ ಒಳಸಂಚು ಇರೋದನ್ನು ಎನ್ಐಎ ಅಧಿಕಾರಿಗಳ ತಂಡ ಪತ್ತೆ ಹಚ್ಚಿರೋದಾಗಿ ತಿಳಿದು ಬಂದಿದೆ. ಅಲ್ಲದೇ ನಿನ್ನೆ ರಾಜ್ಯದ 6 ಕಡೆಯಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ದಾಳಿ ಕೂಡ ನಡೆಸಿದೆ. ಶಿವಮೊಗ್ಗದಲ್ಲಿ ನಡೆದಿದ್ದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ಇಂದು ಚುರುಕುಗೊಳಿಸಿದ್ದಾರೆ. ಟ್ರಯಲ್ ಬ್ಲಾಸ್ಟ್ ಸಂಬಂಧ ನಿನ್ನೆ ಬೆಂಗಳೂರು, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 6 ಕಡೆಯಲ್ಲಿ ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮಂಜುನಾಥ ಬಡವಾಣೆಯಲ್ಲಿ ಉಜೇರ್ ಫರ್ಹಾನ್ ಬೇಗ್ ಹಾಗೂ ಉಡುಪಿಯ ರೇಶಾನ್ ತಾಜುದ್ದೀನ್ ಶೇಕ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತ ಈ ಇಬ್ಬರು ಐಸಿಸ್ ಜೊತೆಗೆ ಸಂಪರ್ಕ ಹೊಂದಿದ್ದಂತ ಶಂಕಿತರು ಎನ್ನಲಾಗುತ್ತಿದೆ. ಶಿವಮೊಗ್ಗದ ಮಂಜುನಾಥ ಬಡಾವಣೆಯ ಶಂಕಿತನ ಮನೆಯ ಮೇಲೆ ದಾಳಿ…

Read More

ಕಲಬುರಗಿ : ಅಕ್ರಮ ಪಿಎಸ್ಐ ನೇಮಕಾತಿ ಪರೀಕ್ಷೆ ( PSI Recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳಿಗೆ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಕಲಬುರಗಿ ಸೆಷನ್ಸ್ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದ್ದು, ಕಿಂಗ್ ಪಿನ್ ದಿವ್ಯಾ ಹಾಗರಗಿ, ಡಿವೈಎಸ್ಪಿ ಮಲ್ಲಿಕಾರ್ಜುನ ಸೇರಿದಂತೆ ಒಟ್ಟು 26 ಆರೋಪಿಗಳಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಇದುವರೆಗೆ 36 ಜನರಿಗೆ ಜಾಮೀನು ಸಿಕ್ಕಂತಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಮೃತ್ ಪಾಲ್ ಜಾಮೀನು ಅರ್ಜಿ ವಜಾ ಅಕ್ರಮ ಪಿಎಸ್ಐ ನೇಮಕಾತಿ ಪರೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಂಡಿದೆ. ಅಕ್ರಮ ಪಿಎಸ್ಐ ನೇಮಕಾತಿ ಪರೀಕ್ಷೆ ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿದ್ದಂತ ನೇಮಕಾತಿ ವಿಭಾಗದ ಹೊಣೆ ಹೊತ್ತಿದ್ದ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು. ಅವರೀಗ ಕಾನೂನು ಬಂಧನದಲ್ಲಿದ್ದಾರೆ. ಇಂತಹ ಆರೋಪಿತ ಅಧಿಕಾರಿ ಸಲ್ಲಿಸಿದ್ದಂತ…

Read More

ಬೆಂಗಳೂರು : ವಿವಿಧ ನಗರ ಪಟ್ಟಣಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹೊರತು ಪಡಿಸಿ, ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ 1,000 ಕೋಟಿ ರೂ. ಒದಗಿಸಲು ಕೇಂದ್ರ ಸಚಿವರು ಸಮ್ಮತಿಸಿದ್ದು, ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ‌ *ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ *ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ  ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯನ್ನು ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ನಲ್ಲಿ ಉದ್ಘಾಟಿಸಲಾಗುವುದು. ಎಸ್ ಟಿ ಆರ್ ಆರ್ ಅನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಹೊರ ವಲಯದಲ್ಲಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ..ಬೆಂಗಳೂರು ನಗರ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ನಗರ ಪ್ರದೇಶದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ಸೂಚಿಸಿರುವುದಾಗಿ ತಿಳಿಸಿದರು.…

Read More

ಬೆಂಗಳೂರು: ವಿಧಾನಸೌಧಕ್ಕೆ ಆಗಮಿಸಿದ್ದಂತ ಎಇ ಜಗದೀಶ್ ಎಂಬುವರ ಬಳಿಯಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ಈ ಸಂಬಂಧ ನಗದು ಜಪ್ತಿ ಮಾಡಿದ್ದಂತ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ನಿನ್ನೆ ವಿಚಾರಣೆ ವೇಳೆ ಪತ್ತೆಯಾದ ನಗದು ಹಣದ ಬಗ್ಗೆ ಸರಿಯಾದ ಮಾಹಿತಿ ನೀಡದ ಕಾರಣ, ಎಇ ಜಗದೀಶ್ ಅನ್ನು ಬಂಧಿಸಿದ್ದಾರೆ. ಎಇ ಜಗದೀಶ್ ಬಳಿಯಲ್ಲಿ ವಿಧಾನಸೌಧದಲ್ಲಿ ಪೊಲೀಸರು ತಪಾಸಣೆ ನಡೆಸುವಂತ ಸಂದರ್ಭದಲ್ಲಿ 10.5 ಲಕ್ಷ ನಗದು ಪತ್ತೆಯಾಗಿತ್ತು. ವಿಧಾನಸೌಧ ಪೊಲೀಸರು ಆ ಹಣವನ್ನು ಜಪ್ತಿ ಮಾಡಿ, ಸೂಕ್ತ ದಾಖಲೆಯೊಂದಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ನಿನ್ನೆ ವಿಧಾನಸೌಧ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಯ ಮುಂದೆ ತಮ್ಮ ವಕೀಲರೊಂದಿಗೆ ಹಾಜರಾದಂತ ಎಇ ಜಗದೀಶ್, ಪತ್ತೆಯಾದಂತ 10.5 ಲಕ್ಷ ನಗದು ಸಂಬಂಧ ಸರಿಯಾದ ಸಮರ್ಪಕ ಮಾಹಿತಿಯನ್ನು ನೀಡುವಲ್ಲಿ ವಿಫಲವಾಗಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿಯೇ ಅವರನ್ನು ವಿಧಾನಸೌಧ ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/chitradurga-hiriyur-police-perform-last-rites-of-unidentified-body/ https://kannadanewsnow.com/kannada/chitradurga-do-you-know-the-master-plan-of-a-wife-to-get-rid-of-her-husbands-drinking-habits-read-this-news/

Read More

ಹಾವೇರಿ : ಹಾವೇರಿ ನಗರದಲ್ಲಿ ಇಂದಿನಿಂದ ಮೂರು ದಿನ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಹೌದು. ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ದತೆ ನಡೆಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಸೇರಿ ಅತಿಥಿಗಳಿಗೆ ಭಾಷಣ ಮಾಡಲು ಕನ್ನಡ ಸಾಹಿತ್ಯ ಪರಿಷತ್ ಸಮಯ ನಿಗದಿಗೊಳಿಸಿದೆ. ಸಿಎಂ ಬೊಮ್ಮಾಯಿ ಸೇರಿ ಎಲ್ಲಾ ಅತಿಥಿಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಘಾಟನಾ ಭಾಷಣ ಮಾಡಲು ಮುಖ್ಯಮಂತ್ರಿಗಳಿಗೆ 30 ನಿಮಿಷ ಸಮಯ ನಿಗದಿ, ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರ ಭಾಷಣಕ್ಕೆ 45 ನಿಮಿಷ ನಿಗದಿ, ಬಿಎಸ್ವೈ, ಹೆಚ್ಡಿಕೆ ಸೇರಿ ಗಣ್ಯರಿಗೆ 10 ನಿಮಿಷ ಸಮಯ ನಿಗದಿ ಮಾಡಲಾಗಿದೆ. ಈ ಸಮಯದೊಳಗೆ ಭಾಷಣ ಮಾಡಿ ಮುಗಿಸಬೇಕೆಂಬ ನಿಯಮವನ್ನು ಕನ್ನಡ ಸಾಹಿತ್ಯ ಪರಿಷತ್ ತಂದಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ…

Read More

ಕೆಎನ್ಎನ್ಡಿಜಿಟಲ್ ಡೆಸ್ಕ್ : ಮನೆಯಲ್ಲಿ ಮಾಡಿದ ಊಟ ಕೆಲವೊಮ್ಮೆ ಉಳಿಯುತ್ತದೆ. ಆ ಸಂದರ್ಭದಲ್ಲಿ, ಅನೇಕ ಜನರು ಅದನ್ನ ಎಸೆಯಲು ಸಾಧ್ಯವಾಗದೆ ತಿನ್ನುತ್ತಾರೆ. ಆದ್ರೆ, ಉಳಿದ ಪದಾರ್ಥಗಳನ್ನ ಮತ್ತೆ ಬಿಸಿ ಮಾಡುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಇದನ್ನ ಮಾಡುವುದರಿಂದ ಹೊಟ್ಟೆಯ ಸೋಂಕುಗಳು ಮತ್ತು ಆಹಾರ ವಿಷದಂತಹ ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಆಹಾರವನ್ನ ಸರಿಯಾದ ತಾಪಮಾನದಲ್ಲಿ ಬಿಸಿ ಮಾಡಿದರೆ, ಅದು ಸೂಕ್ಷ್ಮಜೀವಿಗಳನ್ನ ಕೊಲ್ಲುತ್ತದೆ ಮಾತ್ರವಲ್ಲದೇ ಆಹಾರದ ಪೌಷ್ಟಿಕಾಂಶದ ಮೌಲ್ಯವನ್ನ ಕಳೆದುಕೊಳ್ಳದಂತೆ ನೋಡಿಕೊಳ್ಳುತ್ತದೆ. ಆಹಾರವನ್ನ ಮತ್ತೆ ಬಿಸಿ ಮಾಡುವುದರಿಂದ ಆ ಪೋಷಕಾಂಶಗಳು ನಾಶವಾಗುತ್ತವೆ. ಇದನ್ನ ತಡೆಯಲು ಕೆಲವು ಸಲಹೆಗಳನ್ನ ಅನುಸರಿಸಲು ತಜ್ಞರು ಸಲಹೆ ನೀಡುತ್ತಾರೆ. ಕೋಣೆಯ ಉಷ್ಣಾಂಶವನ್ನ ತಲುಪಿದ ಆಹಾರವನ್ನ ಗಾಳಿಯಾಡದ ಪಾತ್ರೆಗಳಲ್ಲಿ ಸಂಗ್ರಹಿಸಬೇಕು. ಕನಿಷ್ಠ 65 ಡಿಗ್ರಿಗಳಷ್ಟು ಆಂತರಿಕ ತಾಪಮಾನವನ್ನ ತಲುಪಲು ಮೈಕ್ರೊವೇವ್’ನಲ್ಲಿ ಆಹಾರವನ್ನ ಮತ್ತೆ ಬಿಸಿಮಾಡುವಾಗ ಕಾಳಜಿಯನ್ನ ತೆಗೆದುಕೊಳ್ಳಬೇಕು. ಈ ತಾಪಮಾನದಲ್ಲಿ ಆಹಾರದಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾಗಳು ಸಾಯುತ್ತವೆ. ಆಹಾರವನ್ನ ಕನಿಷ್ಠ ಎರಡು ನಿಮಿಷಗಳ ಕಾಲ ಈ ತಾಪಮಾನದಲ್ಲಿ…

Read More

ಚಿತ್ರದುರ್ಗ: ಗಂಡಿಗೆ ಚಟ ಇರಬಾರದು, ಹೆಣ್ಣಿಗೆ ಹಠ ಇರಬಾರದು ಎಂಬ ಗಾದೆ ಮಾತಿನಂತೆ ಗಂಡನ ಕುಡಿತದ ಚಟ ಬಿಡಿಸಲು ಪತ್ನಿ ಮಾಡಿದ ಪ್ರಯತ್ನಗಳು ವಿಫಲವಾದಾಗ ಪತ್ನಿ ಮಾಡಿದ್ದೇನು ಗೊತ್ತಾ.? ಆ ಬಗ್ಗೆ ಮುಂದೆ ಓದಿ. ಹೌದು ತನ್ನ ಗಂಡನ ಕುಡಿತದ ದಾಸ್ಯಕ್ಕೆ ಬಲಿಯಾಗಿದ್ದರಿಂದ ಆತನನ್ನು ಮದ್ಯಪಾನದಿಂದ ಹೊರ ತರಲು ಪತಿಗೆ ಪತ್ನಿಯೇ ಗಂಡನ ಕಾಲಿಗೆ ಸರಪಳಿಯಿಂದ ಕಂಬಕ್ಕೆ ಕಟ್ಟಿ ಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮದ ಉಮೇಶ್ ಎಂಬಾತ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ. ಪತ್ನಿ ಕುಡಿತ ಬಿಟ್ಟು ಸಂಸಾರದ ಕಡೆ ಗಮನ ಹರಿಸುವಂತೆ ಎಷ್ಟೇ ಹೇಳಿದರೂ ಗಂಡ ಮಾತ್ರ ಹೆಂಡ್ತಿ ಬಿಟ್ರೆ ಬಿಡ್ತೀನಿ ಹೆಂಡ ಮಾತ್ರ ಬಿಡಲ್ಲ ಎಂಬ ಸ್ಥಿತಿಯಲ್ಲಿದ್ದ. ಇನ್ನು ಈ ಕುಡಿದು ಬಂದು ಸುಮ್ಮನೆ ಇರಲಾರದೆ ಗಂಡ ಮನೆಯಲ್ಲಿ…

Read More

ಚಿತ್ರದುರ್ಗ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಅನಾಥ ಶವಕ್ಕೆ ಹಿರಿಯೂರು ಗ್ರಾಮಾಂತರ ಇಲಾಖೆಯ ಎಎಸ್ಐ ಪ್ರಭುಲಿಂಗಪ್ಪ ಹಾಗೂ ಕಾನ್ಸ್ಟೇಬಲ್ ಶಶಿಧರ್ ಅವರು ಹಿರಿಯೂರಿನ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಶಾಸ್ತ್ರೋಕ್ತವಾಗಿ ಮೃತರ ಅಂತ್ಯಕ್ರಿಯೆ ನೆರವೇರಿಸಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ನೆರವೇರಿಸಿರುವ ಪೋಲಿಸರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.  ಅಪಘಾತದಲ್ಲಿ ಮೃತಪಟ್ಟಿದ್ದ ಮಹಿಳೆ : ಹಿರಿಯೂರು ನಗರದ ಹೊರವಲಯದ ಚಳ್ಳಕೆರೆ ರಸ್ತೆಯ ಚಿನ್ನಯ್ಯನಹಟ್ಟಿ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅಪಘಾತವಾದ ರಭಸಕ್ಕೆ ಮಹಿಳೆಯ ದೇಹ ಗುರುತು ಸಿಗದಂತೆ ಛಿದ್ರ ಛಿದ್ರವಾ,‌ ದೇಹದ ದಂಡುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಘಟನೆ ಬುಧವಾರ ಬೆಳಗಿನ ಸಮಯದಲ್ಲಿ ನಡೆದಿತ್ತು. ಅಪಘಾತದಲ್ಲಿ ಮೃತಪಟ್ಟಿದ್ದವರನ್ನು 60 ರಿಂದ 65 ವರ್ಷದ ಮಹಿಳೆ ಎಂದು ಗುರುತಿಸಲಾಗಿತ್ತು. ದೇಹದ ಮೇಲೆ ಹಲವಾರು ವಾಹನಗಳು ಹರಿದು ಹೋಗಿರುವುದರಿಂದ ಮೃತದೇಹವು ಸಂಪೂರ್ಣ ನಜ್ಜು ಗುಜ್ಜಾಗಿರುತ್ತದೆ. 0.8 ಇಂಚು ಉದ್ದ ಇರುವ ಕಪ್ಪು ಬಿಳಿ ಮಿಶ್ರಿತ ಕೂದಲು, ಎಣ್ಣೆಗೆಂಪು ಮೈಬಣ್ಣ, ಕೆಂಪು…

Read More