Subscribe to Updates
Get the latest creative news from FooBar about art, design and business.
Author: KNN IT TEAM
ನವದೆಹಲಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನವರಿ 6-7 ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ಎರಡನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವರ್ಷ ಮುಖ್ಯ ಕಾರ್ಯದರ್ಶಿಗಳ ರಾಷ್ಟ್ರೀಯ ಸಮ್ಮೇಳನವು ಜನವರಿ 5-7 ರ ನಡುವೆ ನವದೆಹಲಿಯಲ್ಲಿ ನಡೆಯಲಿದೆ. ಮೂರು ದಿನಗಳ ಸಮ್ಮೇಳನವು ರಾಜ್ಯಗಳ ಸಹಭಾಗಿತ್ವದಲ್ಲಿ ತ್ವರಿತ ಮತ್ತು ನಿರಂತರ ಆರ್ಥಿಕ ಬೆಳವಣಿಗೆಯನ್ನು ಸಾಧಿಸುವತ್ತ ಗಮನಹರಿಸುತ್ತದೆ. ಇದು ಕೇಂದ್ರ ಸರ್ಕಾರದ ಪ್ರತಿನಿಧಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಇತರ ಹಿರಿಯ ಅಧಿಕಾರಿಗಳು ಮತ್ತು ಡೊಮೇನ್ ತಜ್ಞರನ್ನು ಒಳಗೊಂಡ 200 ಕ್ಕೂ ಹೆಚ್ಚು ಜನರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ (PMO) ಹೇಳಿಕೆ ತಿಳಿಸಿದೆ. ಮೊದಲ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನ ಜೂನ್ 2022 ರಲ್ಲಿ ಧರ್ಮಶಾಲಾದಲ್ಲಿ ನಡೆದಿತ್ತು. ಈ ವೇಳೆ ಮೋದಿ ಅವರು ಹೊಸ ಶಿಕ್ಷಣ ನೀತಿ (ಎನ್‌ಇಪಿ), ನಗರ ಆಡಳಿತ ಮತ್ತು…
ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿ ಹಿನ್ನೆಲೆ ಅರ್ಜಿ ಸಲ್ಲಿಸುವ ಅವಧಿಯನ್ನು 31:01:2023 ರವರೆಗೆ ವಿಸ್ತರಿಸಿ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಆದೇಶ ಹೊರಡಿಸಲಾಗಿದೆ. ಜ.31 ರವರೆಗೆ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. https://kannadanewsnow.com/kannada/dispersal-of-ashes-of-siddeshwar-sri-at-kudalasangam-on-7th-january/ ಮೆಟ್ರಿಕ್-ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಸಂಬಂಧಿಸಿದ…
ವಿಜಯಪುರ : ‘ನಡೆದಾಡುವ ದೇವರು’ ಎಂದೇ ಖ್ಯಾತಿ ಗಳಿದ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮ ಸಂಗ್ರಹ ಕಾರ್ಯ ಮುಗಿದಿದ್ದು, ಐದು ಮಡಿಕೆಗಳಲ್ಲಿ ಚಿತಾಭಸ್ಮ ಸಂಗ್ರಹ ಮಾಡಲಾಗಿದೆ ಎಂದು ಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಶ್ರೀ ಹೇಳಿದ್ದಾರೆ. ನಾಳೆ ಹುಣ್ಣಿಮೆ ಇರುವುದರಿಂದ ಅಸ್ಥಿ ವಿಸರ್ಜನೆ ಮಾಡಲಾಗುವುದಿಲ್ಲ, ನಾಡಿದ್ದು ಜ.7 ರಂದು ಶ್ರೀಗಳ ಆಶಯದಂತೆ ಕೂಡಲಸಂಗಮದಲ್ಲಿ ಶ್ರೀಗಳ ಅಸ್ಥಿ ವಿಸರ್ಜನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.ಶ್ರೀಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಯಾರೂ ನದಿ ಹಾಗೂ ಸಾಗರದಲ್ಲಿ ವಿಸರ್ಜನೆ ಮಾಡಲು ಇಚ್ಛೆಪಡುತ್ತಾರೋ ಅವರು ಹೆಸರು ನೋಂದಾಯಿಸುವಂತೆಯೂ ಕೂಡಾ ಹೇಳಿದ್ದರು. ಆದರೆ, ಯಾವುದೇ ಭಕ್ತರಿಗೆ ಶ್ರೀಗಳ ಚಿತಾಭಸ್ಮವನ್ನು ನೀಡುವುದಿಲ್ಲ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿ ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆಯ ವೇಳೆ ಕನ್ಹೇರಿ ಮಠದ ಸ್ವಾಮೀಜಿ ಹೇಳಿದ್ದಾರೆಂದು ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. https://kannadanewsnow.com/kannada/bigg-news-good-news-for-children-of-construction-workers-application-invited-for-tab-distribution/ https://kannadanewsnow.com/kannada/bigg-news-two-days-from-today-j-p-nadda-karnataka-tour-here-is-the-information/
ಚೆನ್ನೈ: ತೂಕ ಇಳಿಸುವ ಮಾತ್ರೆ ಸೇವಿಸಿ 21 ವರ್ಷದ ಯುವಕ ಬುಧವಾರ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಮೃತನನ್ನು ಪಿ ಸೂರ್ಯ (21) ಎಂದು ಗುರುತಿಸಲಾಗಿದ್ದು, ಕಾಂಚೀಪುರಂನ ಶ್ರೀಪೆರಂಬದೂರು ಸಮೀಪದ ಸೋಮಂಗಲಂನಲ್ಲಿ ಹಾಲಿನ ಸಂಸ್ಥೆಯೊಂದರಲ್ಲಿ ವಿತರಕರಾಗಿ ಕೆಲಸ ಮಾಡುತ್ತಿದ್ದರು. ಸ್ಥೂಲಕಾಯದಿಂದ ಬಳಲುತ್ತಿದ್ದ ಸೂರ್ಯನಿಗೆ ಕಳೆದ ತಿಂಗಳುಗಳಿಂದ ತೂಕ ಕಡಿಮೆ ಮಾಡಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಡಿಸೆಂಬರ್ 22 ರಿಂದ, ಸೂರ್ಯ ಸ್ನೇಹಿತರ ಸಲಹೆಗಳ ಆಧಾರದ ಮೇಲೆ ಮಾತ್ರೆಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದರು ಎನ್ನಲಾಗಿದೆ. ಮಾತ್ರೆಗಳ ಹೆಸರು ಅಥವಾ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಅವರು ಹೇಗೆ ಖರೀದಿಸಿದರು ಎಂಬುದು ಅವರ ಪೋಷಕರಿಗೆ ತಿಳಿದಿಲ್ಲ, ಆದರೆ ಅವರು ಔಷಧಿ ತಿಂದ ನಂತರ ಅವರು ದುರ್ಬಲ ಮತ್ತು ತೆಳ್ಳಗಾಗಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಜನವರಿ 1 ರಂದು ಸೂರ್ಯ ತನ್ನ ಮನೆಯಲ್ಲಿ ಪ್ರಜ್ಞಾಹೀನನಾಗಿ ಬಿದ್ದಿದ್ದು, ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತ್ರ, ಅವರನ್ನು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ.…
ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜನವರಿ 5 ಮತ್ತು 6ರಂದು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜ.5 ರಂದು ಮಧ್ಯಾಹ್ನ ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ಅವರು, ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಭೆಗಳಲ್ಲಿ ಭಾಗವಹಿಸಲಿದ್ದು, ಸಿದ್ದಗಂಗಾ ಮಠ ಸೇರಿದಂತೆ ಕೆಲವು ಪ್ರಮುಖ ಮಠಗಳಿಗೆ ಭೇಟಿ ನೀಡಲಿದ್ದಾರೆ. ಜ.5ರಂದು ಮಧ್ಯಾಹ್ನ ತುಮಕೂರಿನ ತುಮಕೂರು ಮತ್ತು ಮಧುಗಿರಿ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಶಕ್ತಿ ಕೇಂದ್ರ ಸಭೆಯಲ್ಲಿ ನಡ್ಡಾ ಭಾಗವಹಿಸಲಿದ್ದು, ನಂತರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಅಂದು ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ, ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪಕ್ಷದ ಎಸ್ಸಿ/ಎಸ್ಟಿ ಮತ್ತು ಒಬಿಸಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದು, ಮಾದರ ಚೆನ್ನಯ ಮತ್ತು ಸಿರಿಗೆರೆ ತರಳಬಾಳು…
ಮಡಿಕೇರಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ ಸ್ವೀಕರಿಸಲಾಗುವುದಿಲ್ಲ. ಅರ್ಜಿ ನಮೂನೆಯೊಂದಿಗೆ ನೋಂದಾಯಿತ ಕಾರ್ಮಿಕರ ಗುರುತಿನ ಚೀಟಿಯ ಪ್ರತಿ ಹಾಗೂ ನವೀಕರಣ ಗುರುತಿನ ಚೀಟಿಯ ಪ್ರತಿ, ಫಲಾನುಭವಿ ಹಾಗೂ ಮಗುವಿನ ಆಧಾರ್ ಕಾರ್ಡ್ ಪ್ರತಿ. ವಿದ್ಯಾರ್ಥಿ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಮೂಲ ವ್ಯಾಸಂಗ ಪ್ರಮಾಣ ಪತ್ರ. ಸರ್ಕಾರದ ಯಾವುದಾದರೂ ಯೋಜನೆಯಲ್ಲಿ ಇದುವರೆಗೂ ಟ್ಯಾಬ್ ಪಡೆಯದಿರುವ ಬಗ್ಗೆ ಅಫಿಡವಿಟ್ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ ಹಾಗೂ ಹಿರಿಯ…
ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಹಂಚಿಕೆಯಾಗುತ್ತಿದ್ದ 10 ಕೆಜಿ ಅಕ್ಕಿಯ ಬದಲಿಗೆ ಇನ್ಮುಂದೆ ಕೇವಲ 6 ಕೆಜಿ ಅಕ್ಕಿ ಮಾತ್ರ ಸಿಗಲಿದೆ. ಕೋವಿಡ್ ಹಿನ್ನಲೆಯಲ್ಲಿ 2020-21 ರ ಮೇ ತಿಂಗಳಿನಿಂದ 2022 ರ ಡಿಸೆಂಬರ್ 31 ರವರೆಗೆ ಕೇಂಧ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸಾರ್ವಜನಿಕ ವಿತರಣ ಪದ್ಧತಿಯಲ್ಲಿ ರಾಜ್ಯದ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ರಾಜ್ಯ ಸರ್ಕಾರವು 5 ಕೆಜಿ ಅಕ್ಕಿ ವಿತರಿಸುತ್ತಿತ್ತು. ರಾಜ್ಯ ಸರ್ಕಾರವು ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಕೇವಲ 1 ಕೆಜಿ ಅಕ್ಕಿಯನ್ನು ಮಾತ್ರ ವಿತರಿಸಲು ಆದೇಶ ಹೊರಡಿಸಿದೆ. ಹೊಸ ಆದೇಶ ಫೆಬ್ರವರಿಯಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡ್ ಗಳಿದ್ದು, 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್ ಕಾರ್ಡ್ ಗಳಿದ್ದು, ಒಟ್ಟು 3,87,79,975 ಮಂದಿ ಫಲಾನುಭವಿಗಳಿದ್ದಾರೆ. ರಾಷ್ಟ್ರೀಯ…
ನವದೆಹಲಿ: ಪ್ರಮುಖ ಇ-ಕಾಮರ್ಸ್ ದೈತ್ಯ ಸಂಸ್ಥೆಗಳಲ್ಲಿ ಒಂದಾದ ಅಮೆಜಾನ್(Amazon) 17,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ವರದಿಯಾಗಿದೆ. ಅಮೆಜಾನ್ ಈ ಮೊದಲು ಯೋಜಿಸಿದ್ದಕ್ಕಿಂತ ಶೇಕಡಾ 70 ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸುತ್ತದೆ. ವರದಿಯ ಪ್ರಕಾರ, ಕೆಲವು ಹೆಚ್ಚುವರಿ ವಜಾಗಳು ಅಮೆಜಾನ್‌ನ ಕಾರ್ಪೊರೇಟ್ ಶ್ರೇಣಿಗಳಿಂದ ಬಂದಿವೆ. ವಜಾಗೊಳಿಸುವ ಅವಧಿಯು ಸಂಸ್ಥೆಯ ಮೇಲೆ ಸಾಕಷ್ಟು ಕಠಿಣವಾಗಿದೆ. ಸಿಯಾಟಲ್ ಮೂಲದ ಕಂಪನಿಯು ನವೆಂಬರ್‌ನಲ್ಲಿ ತನ್ನ ಸಿಬ್ಬಂದಿಯನ್ನು ವಜಾಗೊಳಿಸಲು ಪ್ರಾರಂಭಿಸಿತು. ಆ ಸಮಯದಲ್ಲಿ ಅಮೆಜಾನ್ 10,000 ಉದ್ಯೋಗ ಕಡಿತಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಮೂಲವೊಂದು ತಿಳಿಸಿದೆ. ಅಮೆಜಾನ್ ಉದ್ಯೋಗ ಕಡಿತದ ವರದಿಯು ನಿಜವಾಗಿದ್ದರೆ, ಯಾವುದೇ ಇ-ಕಾಮರ್ಸ್ ದೈತ್ಯ ಇನ್ನೂ ಮಾಡಿದ ದೊಡ್ಡ ವಜಾಗೊಳಿಸುವಿಕೆಗಳಲ್ಲಿ ಒಂದಾಗಬಹುದು ಎಂದು ಅದು ಹೇಳಿದೆ. https://kannadanewsnow.com/kannada/young-men-are-not-finding-brides-because-of-unemployment-sharad-pawar/ https://kannadanewsnow.com/kannada/delivery-agent-dies-after-being-hit-by-car-he-was-dragged-for-500-meters/ https://kannadanewsnow.com/kannada/young-men-are-not-finding-brides-because-of-unemployment-sharad-pawar/ https://kannadanewsnow.com/kannada/delivery-agent-dies-after-being-hit-by-car-he-was-dragged-for-500-meters/
ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಂಬಲಿಗರ ಒತ್ತಾಸೆಯಂತೆ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜತೆಗೆ, ಬಾದಾಮಿ ಕ್ಷೇತ್ರದಿಂದಲೂ ಅಭ್ಯರ್ಥಿಯಾಗಲು ಬಯಸಿದ್ದಾರೆ ಎನ್ನಲಾಗಿದೆ. ಆದರೆ, ಎರಡು ಕಡೆ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದ್ಯಾ..? ಎಂಬುದು ಸದ್ಯಕ್ಕಿರುವ ಕುತೂಹಲ. ಹಲವು ಲೆಕ್ಕಾಚಾರ ಮಾಡಿ ಅಳೆದು ತೂಗಿ ಕೊನೆಗೆ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಂಬಲಿಗರ ಒತ್ತಾಸೆಯಂತೆ ಕೋಲಾರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗುವ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯದ ಬಡ ಜನರು ನೆಮ್ಮದಿಯಿಂದ ಊಟ…
ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಎಲ್ಲಾ ಸಿದ್ದತೆ ನಡೆಸಲಾಗಿದೆ. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ. ಧ್ವಜಾರೋಹಣ: ಜನವರಿ 6 ರಂದು ಬೆಳಿಗ್ಗೆ 7 ರಿಂದ 7-30ರವರೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಕಾರ್ಮಿಕ ಖಾತೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಅರಬೈಲ್ ಶಿವರಾಮ ಹೆಬ್ಬಾರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಅವರು ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ…