Author: KNN IT TEAM

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ನಿಟ್ಟಿನಲ್ಲಿ, ಹಿರಿಯ ಐಎಎಸ್ ಮೇಜರ್ ಮಣಿವಣ್ಣನ್ ಸೇರಿದಂತೆ ಮೂವರನ್ನು ವರ್ಗಾವಣೆಗೊಳಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿ, ಅಲ್ವ ಸಂಖ್ಯಾತ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ. ಬೆಂಗಳೂರಿನ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಇನ್ನೂ ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕೆಆರ್ ಐಡಿಎಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ. https://kannadanewsnow.com/kannada/2nd-phase-of-jds-pancharatna-rath-yatra-starts-from-bidar-district-from-today/

Read More

ನವದೆಹಲಿ: ರೈಲಿನ ಬಾಗಿಲ ಬಳಿ ಕುಳಿತು ಪ್ರಯಾಣಿಸಿರುವ ಬಾಲಿವುಡ್ ನಟ ಸೋನು ಸೂದ್(actor Sonu Sood) ಅವರನ್ನು ಉತ್ತರ ರೈಲ್ವೆ ಬುಧವಾರ ‘ಅಪಾಯಕಾರಿ’ ಎಂದು ಟೀಕಿಸಿದೆ. ಸೋನು ಸೂದ್ ಅವರನ್ನು ಭಾರತದ ಜನರಿಗೆ ಮಾದರಿ ಎಂದು ಕರೆದಿರುವ ಉತ್ತರ ರೈಲ್ವೆ, ಅವರ ವೀಡಿಯೊ ರಾಷ್ಟ್ರಕ್ಕೆ ತಪ್ಪು ಸಂದೇಶವನ್ನು ನೀಡುತ್ತದೆ ಎಂದು ಹೇಳಿದೆ. “ಆತ್ಮೀಯ ಸೋನುಸೂದ್, ನೀವು ದೇಶ ಮತ್ತು ಪ್ರಪಂಚದ ಲಕ್ಷಾಂತರ ಜನರಿಗೆ ಮಾದರಿಯಾಗಿದ್ದೀರಿ. ನೀವು ರೈಲು ಮೆಟ್ಟಿಲುಗಳ ಮೇಲೆ ಪ್ರಯಾಣಿಸುವುದು ಅಪಾಯಕಾರಿ ಮತ್ತು ಈ ರೀತಿಯ ವೀಡಿಯೊ ನಿಮ್ಮ ಅಭಿಮಾನಿಗಳಿಗೆ ತಪ್ಪು ಸಂದೇಶವನ್ನು ಕಳುಹಿಸಬಹುದು. ದಯವಿಟ್ಟು ಈ ಇನ್ಮುಂದೆ ಕೆಲಸ ಮಾಡಬೇಡಿ! ಸುಗಮ ಮತ್ತು ಸುರಕ್ಷಿತ ಪ್ರಯಾಣವನ್ನು ಆನಂದಿಸಿ” ಎಂದು ಉತ್ತರ ರೈಲ್ವೆ ಟ್ವೀಟ್ ಮಾಡಿದೆ. प्रिय, @SonuSood देश और दुनिया के लाखों लोगों के लिए आप एक आदर्श हैं। ट्रेन के पायदान पर बैठकर यात्रा करना खतरनाक है, इस…

Read More

ಬೆಂಗಳೂರು: ಎರಡನೇ ಹಂತದ ಪಂಚರತ್ನ ರಥಯಾತ್ರೆ ಇಂದು ಗುರುವಾರ ಬೀದರ್ ಜಿಲ್ಲೆಯಿಂದ ಪ್ರಾರಂಭ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer Chief Minister HD Kumaraswamy ) ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರ್ಗಿಯಲ್ಲಿ ರಥಯಾತ್ರೆ ಜನವರಿ 13ನೇ ತಾರೀಕಿನವರೆಗೆ ನಡೆಯಲಿದೆ ಎಂದರು. ಬೀದರ್ ಜಿಲ್ಲೆಯಲ್ಲಿ 4 ದಿನ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ 5 ದಿನ ರಥಯಾತ್ರೆ ನಡೆಯಲಿದ್ದು, ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 14,15, 16ರಂದು ವಿರಾಮ ಇರಲಿದೆ. ಜನವರಿ 17ರಿಂದ ಇಂಡಿ ವಿಧಾನಸಭೆ ಕ್ಷೇತ್ರದಿಂದ ಮತ್ತೆ ರಥಯಾತ್ರೆ ಶುರು ಆಗಲಿದೆ. ಅದು ಕ್ರಮವಾಗಿ ರಾಯಚೂರು, ಕೊಪ್ಪಳ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಡೆಯಲಿದೆ. ಆ ಕುರಿತ ವೇಳಾಪಟ್ಟಿಯನ್ನು ತಿಳಿಸಲಾಗುವುದು ಎಂದರು. ಅಮಿತ್ ಶಾಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಹಳೆ ಮೈಸೂರು ಕರ್ನಾಟಕದಲ್ಲಿ ಬಿಟ್ಟರೆ ಉತ್ತರ ಕರ್ನಾಟಕದಲ್ಲಿ ಶಕ್ತಿ ಇಲ್ಲ ಅಂತಾರೆ…

Read More

ಬೆಂಗಳೂರು: ಅಕ್ರಮ ಪಿಎಸ್ಐ ನೇಮಕಾತಿ ಪರೀಕ್ಷೆ ( PSI Recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಂಡಿದೆ. ಅಕ್ರಮ ಪಿಎಸ್ಐ ನೇಮಕಾತಿ ಪರೀಕ್ಷೆ ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿದ್ದಂತ ನೇಮಕಾತಿ ವಿಭಾಗದ ಹೊಣೆ ಹೊತ್ತಿದ್ದ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು. ಅವರೀಗ ಕಾನೂನು ಬಂಧನದಲ್ಲಿದ್ದಾರೆ. ಇಂತಹ ಆರೋಪಿತ ಅಧಿಕಾರಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.  ಪಿಎಸ್ಐ ನೇಮಕಾತಿ ಅಕ್ರಮ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ಬೆಂಗಳೂರಿನ 24ನೇ ಸಿಸಿ ಹೆಚ್ ಕೋರ್ಟ್, ಜಾಮೀನು ಅರ್ಜಿಯನ್ನು ಮತ್ತೆ ವಜಾಗೊಳಿಸಿದೆ. ತನಿಖೆ ಸಂಪೂರ್ಣವಾಗಿಲ್ಲ, ಕೆಲ ಆಯಾಮಗಳ ತನಿಖೆ ಮಾತ್ರ ಮುಂದುವರೆದಿದೆ, ಜಾಮೀನು ನೀಡದಂತೆ ವಕೀಲ ಪ್ರಸನ್ನ ಕುಮಾರ್ ಭಟ್ ವಾದ ಮಂಡಿಸಿದ್ದರು. ಈ ಹಿನ್ನೆಲೆ ಜಾಮೀನು ಅರ್ಜಿಯನ್ನು…

Read More

ಬೆಂಗಳೂರು : ಕಳೆದ ಮೂರು ತಿಂಗಳಿನಿಂದ ಜಿಎಸ್ಟಿ ಸಂಗ್ರಹವು 10 ಸಾವಿರ ಕೋಟಿ ರು. ದಾಟಿದ್ದು, ಇದು ರಾಜ್ಯಕ್ಕೆ ಉತ್ತಮ ಬೆಳವಣಿಗೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬೊಮ್ಮಾಯಿ ಕರ್ನಾಟಕದ ಮಾಸಿಕ ಜಿಎಸ್ಟಿ ಸಂಗ್ರಹವು ಸತತ 3 ತಿಂಗಳುಗಳಿಂದ 10 ಸಾವಿರ ಕೋಟಿ ರೂ.ಗಳನ್ನು ದಾಟಿದೆ, ಇದು ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿ ಕರ್ನಾಟಕ ಇದೆ. ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ನಾವು ಉತ್ತಮ ಬೆಳವಣಿಗೆಯ ಪಥದಲ್ಲಿದ್ದೇವೆ. ಕೋವಿಡ್ ನಿಂದ ಯಾವುದೇ ಪರಿಣಾಮ ಬೀರಿಲ್ಲ, ರಾಷ್ಟ್ರೀಯ ಆರ್ಥಿಕತೆಯನ್ನು ಉತ್ತೇಜಿಸಲು ಹೆಮ್ಮೆಪಡುತ್ತೇನೆ ಎಂದು ತಿಳಿಸಿದ್ದಾರೆ. ಡಿಸೆಂಬರ್ನಲ್ಲಿ ದೇಶಾದ್ಯಂತ ಒಟ್ಟು 1.49 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿದ್ದು, ಕರ್ನಾಟಕ 10,061 ಕೋಟಿ ರೂ ಕಲೆಕ್ಷನ್ ಮಾಡಿದೆ. ಮೊದಲ ಸ್ಥಾನದಲ್ಲಿರುವ ಮಹಾರಾಷ್ಟ್ರ 23,598 ಕೋಟಿ ರು. ಜಿಎಸ್ಟಿ ಸಂಗ್ರಹ ಮಾಡಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/5-service-charge-for-ola-uber-auto-service-high-court-interim-stay-on-state-governments-order/ https://kannadanewsnow.com/kannada/bigg-news-great-good-news-for-women-candidates-state-government-is-thinking-of-giving-25-reservation-in-police-recruitment/

Read More

ನವದೆಹಲಿ: ‘ಪರೀಕ್ಷಾ ಪೇ ಚರ್ಚಾ-2023’ ದಿನಾಂಕಗಳ ಘೋಷಣೆಯೊಂದಿಗೆ, ಸಂವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಎಲ್ಲರಿಗೂ ಕರೆ ನೀಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂಬರುವ ಜನವರಿ 27 ರಂದು ‘ಪರೀಕ್ಷಾ ಪರ್ ಚರ್ಚಾ’ 6 ನೇ ಆವೃತ್ತಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದಾರೆ. ಈ ಕಾರ್ಯಕ್ರಮವು ನವದೆಹಲಿಯ ಟಾಲ್ಕಟೋರಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. “ಪರೀಕ್ಷಾ ಪೇ ಚರ್ಚಾ ಅತ್ಯಂತ ರೋಮಾಂಚಕಾರಿ ಕಾರ್ಯಕ್ರಮಗಳಲ್ಲಿ ಒಂದಾಗಿದೆ, ಪರೀಕ್ಷೆಗಳನ್ನು ಒತ್ತಡ ರಹಿತವಾಗಿಸಲು ಮತ್ತು ನಮ್ಮ ಪರೀಕ್ಷಾ ಯೋಧರನ್ನು ಬೆಂಬಲಿಸುವ ಮಾರ್ಗಗಳನ್ನು ಚರ್ಚಿಸಲು ಅವಕಾಶವನ್ನು ನೀಡುತ್ತದೆ. ನಾನು ಈ ತಿಂಗಳ 27 ರಂದು ಕಾರ್ಯಕ್ರಮವನ್ನು ಎದುರು ನೋಡುತ್ತಿದ್ದೇನೆ ಮತ್ತು ಇದರಲ್ಲಿ ಭಾಗವಹಿಸಲು ನಿಮ್ಮೆಲ್ಲರನ್ನು ಕೋರುತ್ತೇನೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ‘ಪರೀಕ್ಷಾ ಪೇ ಚರ್ಚಾ’ದ 6ನೇ ಆವೃತ್ತಿಯ ನೋಂದಣಿ ನವೆಂಬರ್ 25 ರಂದು ಪ್ರಾರಂಭವಾಯಿತು ಮತ್ತು ಡಿಸೆಂಬರ್ 30 ರಂದು ಮುಕ್ತಾಯವಾಯಿತು. ‘ಪರೀಕ್ಷಾ ಪೇ ಚರ್ಚಾ’ ಶಿಕ್ಷಣ…

Read More

ಶಿವಮೊಗ್ಗ : ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಬುಧವಾರ ನಿನ್ನೆ ಶಿವಮೊಗ್ಗದಲ್ಲಿ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು. ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದಿಂದ 650 ಕೋಟಿ ರೂಪಾಯಿ ಮೀಸಲಿಡಲಾಗಿದೆ. ನಗರ ವ್ಯಾಪ್ತಿಯಲ್ಲಿ 3,000 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಶಾಸಕ ಅರವಿಂದ ಲಿಂಬಾವಳಿಯನ್ನು ತನಿಖೆಗೆ ಒಳಪಡಿಸಲಾಗುತ್ತದೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ .ಇದೀಗ ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ…

Read More

ಬೆಂಗಳೂರು : ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಓಲಾ, ಊಬರ್ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಓಲಾ, ಉಬರ್ ಕ್ಯಾಬ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ನ.25 ರಂದು ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮವನ್ನು ಓಲಾ, ಊಬರ್ , ಆಟೋ ಚಾಲಕರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.25 ರಂದು ಓಲಾ, ಉಬರ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಮಿನಿಮಮ್ ಚಾರ್ಜ್ 30,40, 60 ರೂ. ಇದ್ದರೆ ಶೇ. 5 ರಷ್ಟು ಹೆಚ್ಚಿಸುವುದರ ಜೊತೆಗೆ ಶೇ. 5 ರಷ್ಟು ಜಿಎಸ್ ಟಿ ಸೇರಿಸಲು…

Read More

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರ ಆಸ್ತಿ ಜಪ್ತಿ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅನುಮತಿಗಾಗಿ ಸಿಬಿಐ ಕೋರಿತ್ತು. ಆದ್ರೇ ಸರ್ಕಾರ ಮಾತ್ರ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿದೆ. ಈ ಸಂಬಂಧ ಸಿಬಿಐ ಈಗ ಹೈಕೋರ್ಟ್ ಮೆಟ್ಟಿಲೇರಿ, ಈ ವಿಚಾರವನ್ನು ಪ್ರಶ್ನಿಸಿದೆ. ಹೀಗಾಗಿ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮಾಜಿ ಸಚಿವ ಜನಾರ್ಧನ ರೆಡ್ಡಿಯವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ಸ್ಥಾಪಿಸಿದ್ದರು. ಪ್ರತಿ ಜಿಲ್ಲೆಯಲ್ಲೂ ತಮ್ಮ ಪಕ್ಷದ ಅಭ್ಯರ್ಥಿಯನ್ನು ಮುಂಬರುವ ಚುನಾವಣೆಯಲ್ಲಿ ಕಣಕ್ಕೆ ಇಳಿಸೋದಾಗಿಯೂ ಘೋಷಿಸಿದ್ದರು. ಇಂತಹ ಅವರ ಆಸ್ತಿ ಜಪ್ತಿಗೆ ಸಿಬಿಐ ಕರ್ನಾಟಕ ಸರ್ಕಾರದ ಅನುಮತಿ ಕೋರಿತ್ತು. ಸಿಬಿಐ ರಾಜ್ಯ ಸರ್ಕಾರಕ್ಕೆ ಜನಾರ್ಧನ ರೆಡ್ಡಿಗೆ ಸಂಬಂಧಿಸಿದಂತ ಆಸ್ತಿ ಜಪ್ತಿ ಮಾಡೋದಕ್ಕೆ ಮಾತ್ರ ಕಳೆದ ಆಗಸ್ಟ್ 30, 2022ರಂದು ಅನುಮತಿ ಕೋರಿತ್ತು. ಆದ್ರೇ ಈವರೆಗೆ ಅನುಮತಿಯನ್ನು ನೀಡದೇ ಮೀನಾಮೇಷವನ್ನು ಎಣಿಸುತ್ತಿದೆಯಂತೆ. ಹೀಗಾಗಿ ಹೈಕೋರ್ಟ್ ನಲ್ಲಿ…

Read More

ಶಿವಮೊಗ್ಗ : ಮಹಿಳಾ ಅಭ್ಯರ್ಥಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಿಹಿಸುದ್ದಿ ನೀಡಿದ್ದು, ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಬುಧವಾರ ನಿನ್ನೆ ಶಿವಮೊಗ್ಗದಲ್ಲಿ ಜಿಲ್ಲಾ ಒಕ್ಕಲಿಗ ಮಹಿಳಾ ವೇದಿಕೆ ಆಯೋಜಿಸಿದ್ದ ಮಲೆನಾಡು ಮೇಳವನ್ನು ಉದ್ಘಾಟಿಸಿ ನಂತರ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿದರು. ಮಹಿಳಾ ಸಬಲೀಕರಣದ ಉದ್ದೇಶದಿಂದ ಮಹಿಳಾ ಅಭ್ಯರ್ಥಿಗಳಿಗೆ ಪೊಲೀಸ್ ನೇಮಕಾತಿಯಲ್ಲಿ ಶೇ.25ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.ಇದೇ ವೇಳೆ ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕೇಂದ್ರದಿಂದ 650 ಕೋಟಿ ರೂಪಾಯಿ ಮೀಸಲಿಡಲಾಗಿದೆ. ನಗರ ವ್ಯಾಪ್ತಿಯಲ್ಲಿ 3,000 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಶಾಸಕ ಅರವಿಂದ ಲಿಂಬಾವಳಿಯನ್ನು ತನಿಖೆಗೆ ಒಳಪಡಿಸಲಾಗುತ್ತದೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ನಾಯಕರು ಪಟ್ಟು ಹಿಡಿದಿದ್ದಾರೆ .ಇದೀಗ ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ…

Read More