Author: KNN IT TEAM

ಬೆಂಗಳೂರು: ನಗರದ ಕುರುಬರಹಳ್ಳಿ ಕಾವೇರಿ ನಗರದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. https://kannadanewsnow.com/kannada/mandya-artist-dies-after-collapsing-while-performing-stage-play/ ತಡರಾತ್ರಿ ದುಷ್ಕರ್ಮಿಗಳು ಕಾರಿಗೆ ಬೆಂಕಿ ಹಚ್ಚಿದ್ದು, ಧಗ ಧಗ ಹೊತ್ತಿ ಉರಿದಿದೆ. ಸುಬ್ರಹ್ಮಣ್ಯ ಎಂಬುವರಿಗೆ ಸೇರಿದ ಕಾರು ಮತ್ತು ಬೈಕ್​ಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಕಿಡಿಗೇಡಿಗಳು ಸ್ಥಳದಿಂದ ಪಾರಾರಿಯಾಗಿದ್ದಾರೆ.ಬೆಂಕಿ ಹೊತ್ತಿ ಉರಿಯುವಾಗ ಪಕ್ಕದ ಮನೆಗಳಿಗೂ ಹಾನಿಯಾಗಿದ್ದು, ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎರಡು ಜನ ದುಷ್ಕರ್ಮಿಗಳು ಸೇರಿ ಸುಬ್ರಹ್ಮಣ್ಯ ಅವರ ಟಿಯುವಿ 300(TUV 300) ಕಾರು ಹಾಗೂ ಬೈಕ್​ಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಶುಕ್ರವಾರ ಬಿಡುಗಡೆಯಾಗಬೇಕಿದ್ದಂತ ಹೆಚ್ಚುವರಿ ಶಿಕ್ಷಕರ ಅಂತಿಮ ಕಡು ಪಟ್ಟಿಯನ್ನು ಜನವರಿ 10ರಂದು ಪ್ರಕಟಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಸಂಬಂಧ ಮಾಹಿತಿ ನೀಡಿರುವಂತ ಶಿಕ್ಷಣ ಇಲಾಖೆಯು, ತಾಂತ್ರಿಕ ಕಾರಣದಿಂದಾಗಿ ಶಿಕ್ಷಕರ ವರ್ಗಾವಣೆ ಪಟ್ಟಿಯನ್ನು ಪ್ರಕಚಿಸಲು ಸಾಧ್ಯವಾಗಿಲ್ಲ. ಡಿಸೆಂಬರ್ 12ರಂದೇ ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವುದಕ್ಕೆ ಅವಕಾಶ ನೀಡಿದೆ. ಇದೀಗ ವಿಭಾಗಿಯ ಸಹ ನಿರ್ದೇಶಕರು ಹಾಗೂ ಅಹವಾಲು ಸ್ವೀಕಾರ ಪ್ರಾಧಿಕಾರಗಳು ಅಹವಾಲು ಪರಿಶೀಲಿಸಿ, ಅಂತಿಮ ಪಟ್ಟಿ ಪ್ರಕಟಿಸಲಿದೆ. ಹೀಗಾಗಿ ತಾಂತ್ರಿಕ ಕಾರಣದಿಂದ ವಿಳಂಬವಾದಂತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯ ಹೆಚ್ಚುವರಿ ಶಿಕ್ಷಕರ ಅಂತಿಮ ಪಟ್ಟಿಯು ಜನವರಿ 10ರಂದು ಪ್ರಕಟವಾಗಲಿದೆ. https://kannadanewsnow.com/kannada/bigg-news-national-youth-festival-to-be-held-on-jan-12-cm-bommai-to-release-logo-and-mascot/ https://kannadanewsnow.com/kannada/good-news-for-women-looking-forward-to-open-university-studies-15-fee-waiver-from-ksou/ https://kannadanewsnow.com/kannada/breaking-news-next-akhila-bharatha-kannada-sahitya-sammelana-to-be-held-in-mandya-decision-taken-at-sahitya-karyakarani-samiti-meeting/

Read More

ಚಿತ್ರದುರ್ಗ : ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ ಹಿರಿಯೂರು ತಾಲ್ಲೂಕು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 2023-24ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ. 31 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು  https://navodaya.gov.in ಮತ್ತು  https://cbseitms.rcil.gov.in/nvs  ವೆಬ್ ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು, 2022-23ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 2011 ರ ಮೇ. 01 ರಿಂದ 2013 ರ ಏಪ್ರಿಲ್ 30 ರ ನಡುವೆ ಜನಿಸಿರಬೇಕು.  ಪ್ರವೇಶ ಪರೀಕ್ಷೆಯು 2023 ರ ಏಪ್ರಿಲ್ 29 ರಂದು ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುವಳ್ಳಿ ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/breaking-news-next-akhila-bharatha-kannada-sahitya-sammelana-to-be-held-in-mandya-decision-taken-at-sahitya-karyakarani-samiti-meeting/

Read More

ಹಾವೇರಿ : ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ಡನ ಸಾಹಿತ್ಯ ಸಮ್ಮೇಳನದ ಸಮಾರೋಪ ನಡೆಯಲಿದ್ದು,  87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಮಂಡ್ಯದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಹಾವೇರಿಯಲ್ಲಿ ನಡೆಯುತ್ತಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಇಂದು ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಭಾಗಿಯಾಗಲಿದ್ದಾರೆ. ಈ ನಡುವೆ ಇಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರಣಿ ಸಮಿತಿ ಸಭೆ ನಡೆದಿದ್ದು, ಸಭೆಯಲ್ಲಿ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೆಳನ ನಡೆಸಲು ಮನವಿ ಮಾಡಿದ್ದರು.ಆದರೆ ಕನ್ನಡ ಸಾಹಿತ್ಯ ಪರಿಷತ್  ಕಾರ್ಯಕಾರಣಿ ಸಭೆಯಲ್ಲಿ ಹೆಚ್ಚು ಜನರು ಮಂಡ್ಯದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ ನಡೆಸಲು ಬೆಂಬಲ ನೀಡಿದ್ದಾರೆ. ಹೀಗಾಗಿ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. https://kannadanewsnow.com/kannada/health-tips-can-diabetic-patients-eat-paneer-what-did-health-experts-say-read-here/

Read More

ಮಂಡ್ಯ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕ ವೇಳೆ ಕಲಾವಿದರೊಬ್ಬರು ಕುಸಿದು ಬಿದ್ದಿದ್ದು, ಮೃತಪಟ್ಟಿದ್ದಾರೆ. 46 ವರ್ಷದ ಕಲಾವಿದ ನಂಜಯ್ಯ ರಂಗಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ನಿಲ್ಲಿಸಿದ್ದಾರೆ. https://kannadanewsnow.com/kannada/kochi-pro-kannada-outfits-taluk-president-hacked-to-death-with-deadly-weapons/ ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು ಸೇರಿಕೊಂಡು ಪೌರಾಣಿಕ ನಾಟಕ ಆಯೋಜಿಸಿದ್ದರು. ಡ್ರಾಮಾ‌ಸೀನ್ಸ್ ಸೆಟ್​​ನಲ್ಲಿ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕದಲ್ಲಿ ಸೈಂಧವ ಮತ್ತು ಸಾರ್ಥಕಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿ ನಟನೆ ಮಾಡುವ ವೇಳೆ ವೇದಿಕೆಯಲ್ಲೇ ಹೃದಯಾಘಾತ ಸಂಭವಿಸಿ ಕಲಾವಿದ ನಂಜಯ್ಯ ಪ್ರಾಣ ಬಿಟ್ಟಿದ್ದಾರೆ.

Read More

ನವದೆಹಲಿ: ಆಧಾರ್ ಕಾರ್ಡ್‌, ಪಾಸ್‌ಪೋರ್ಟ್‌ ಮತ್ತು ಪಾನ್ ಕಾರ್ಡ್‌ಗಳಂತಹ ಗುರುತಿನ ದಾಖಲೆಗಳನ್ನು ಬಳಸುವಾಗ ಅತ್ಯಂತ ಜಾಗರೂಕರಾಗಿರಿ ಎಂದು ಭಾರತ ಸರ್ಕಾರ ನಾಗರಿಕರಿಗೆ ಎಚ್ಚರಿಕೆ ನೀಡಿದೆ. ಪ್ರಯೋಜನಗಳು ಮತ್ತು ಸೇವೆಗಳನ್ನು ಪಡೆದುಕೊಳ್ಳಲು, ಬ್ಯಾಂಕ್ ಖಾತೆ, ಪ್ಯಾನ್ ಅಥವಾ ಪಾಸ್‌ಪೋರ್ಟ್‌ನಂತಹ ಆಧಾರ್ ಮತ್ತು ಇತರ ಗುರುತಿನ ದಾಖಲೆಗಳನ್ನು ವಿಶ್ವಾಸದಿಂದ ಬಳಸಬೇಕೆಂದು ಶಿಫಾರಸು ಮಾಡಲಾಗಿದೆ. UIDAI ಹೇಳಿಕೆಯ ಪ್ರಕಾರ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ ಅಥವಾ ಪಾಸ್‌ಪೋರ್ಟ್, ವೋಟರ್ ಐಡಿ, ಪ್ಯಾನ್, ರೇಷನ್ ಕಾರ್ಡ್ ಮುಂತಾದ ಯಾವುದೇ ಗುರುತಿನ ದಾಖಲೆಗಳನ್ನು ಹಂಚಿಕೊಳ್ಳುವಾಗ ಯಾವುದೇ ವಿಶ್ವಾಸಾರ್ಹ ಘಟಕದೊಂದಿಗೆ ಆಧಾರ್ ಹಂಚಿಕೊಳ್ಳುವಾಗ ಎಚ್ಚರಿಕೆಯನ್ನು ವಹಿಸಬೇಕು ಎಂದಿದೆ. ಆಧಾರ್ ನಿವಾಸಿಗಳಿಗೆ ಡಿಜಿಟಲ್ ಐಡಿ ಮತ್ತು ದೇಶಾದ್ಯಂತ ನಿವಾಸಿಗಳಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಗುರುತಿನ ಪರಿಶೀಲನೆಯ ಏಕೈಕ ಮೂಲವಾಗಿದೆ. ನಿವಾಸಿಗಳು ತಮ್ಮ ಗುರುತಿನ ರುಜುವಾತುಗಳನ್ನು ಎಲೆಕ್ಟ್ರಾನಿಕ್ ಅಥವಾ ಹಸ್ತಚಾಲಿತವಾಗಿ ಪರಿಶೀಲಿಸಲು ಮತ್ತು ಮೌಲ್ಯೀಕರಿಸಲು ತಮ್ಮ ಆಧಾರ್ ಸಂಖ್ಯೆಯನ್ನು ಬಳಸಬಹುದು. ಪತ್ರಿಕಾ ಪ್ರಕಟಣೆಯ ಪ್ರಕಾರ, ನಿವಾಸಿಯು ತನ್ನ ಆಧಾರ್ ಸಂಖ್ಯೆಯನ್ನು ಹಂಚಿಕೊಳ್ಳಲು…

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ :  ಮಧುಮೇಹವನ್ನು ಶಾಶ್ವತವಾಗಿ ತಡೆಗಟ್ಟಲು ಸಾಧ್ಯವಿಲ್ಲ ಆದರೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಆರೋಗ್ಯಕರ ಜೀವನಶೈಲಿಯ ಜೊತೆಗೆ, ಆರೋಗ್ಯಕರ ಆಹಾರವನ್ನು ಸೇವಿಸುವುದು, ದೈಹಿಕ ಚಟುವಟಿಕೆ, ವ್ಯಾಯಾಮ ಮುಂತಾದ ಅಭ್ಯಾಸಗಳೊಂದಿಗೆ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೀವು ನಿಯಂತ್ರಣದಲ್ಲಿಡಬಹುದು. ಇದಕ್ಕಾಗಿ, ಕಾರ್ಬೋಹೈಡ್ರೇಟ್ಗಳಲ್ಲಿ ಕಡಿಮೆ ಇರುವ ಆಹಾರವನ್ನೇ ಹೆಚ್ಚಾಗಿ ಸೇವಿಸಬೇಕೆಂದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. https://kannadanewsnow.com/kannada/koppal-gavisiddheshwara-grand-jatra-mahotsava-kkrtc-extra-buses-to-run/ ಅವುಗಳಲ್ಲಿ ಪನೀರ್ ಕೂಡ ಒಂದು. ಪನ್ನೀರ್ ನಲ್ಲಿ ಪ್ರೋಟೀನ್ ಅಧಿಕವಾಗಿದೆ. ಕಡಿಮೆ ಕಾರ್ಬೋಹೈಡ್ರೇಟ್ ಗಳೂ ಇವೆ. ಇದನ್ನು ಸೇವಿಸುವುದು ದೇಹಕ್ಕೆ ಅನೇಕ ರೀತಿಯಲ್ಲಿ ಒಳ್ಳೆಯದು. ಪನೀರ್ ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಮಧುಮೇಹ ರೋಗಿಗಳು ಹಗಲು ಅಥವಾ ರಾತ್ರಿ ಊಟದ ಸಮಯದಲ್ಲಿ ಪನೀರ್ ಸೇವಿಸಬಹುದು. ಟೋನ್ಡ್ ಹಾಲಿನಿಂದ ತಯಾರಿಸಿದ ಪನೀರ್ ರಕ್ತದ ಸಕ್ಕರೆ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಸಕ್ಕರೆ ರೋಗಿಗಳಿಗೆ, ದಿನಕ್ಕೆ 80 ರಿಂದ 100 ಗ್ರಾಂ ಪನ್ನೀರ್ ತೆಗೆದುಕೊಂಡರೆ ಸಾಕು. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದರ ಜೊತೆಗೆ ಮಧುಮೇಹವನ್ನು ನಿಯಂತ್ರಿಸಲು…

Read More

ಕೊಪ್ಪಳ : ಜಿಲ್ಲೆಯ  ಗವಿಸಿದ್ಧೇಶ್ವರ ಜಾತ್ರಾಮಹೋತ್ಸವಕ್ಕೆ ಲಕ್ಷಾಂತರ ಭಕ್ತರ ಆಗಮನ ಹಿನ್ನಲೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದಿಂದ ಹೆಚ್ಚುವರಿ ಸಾರಿಗೆ ಸೌಲಭ್ಯ ಒದಗಿಸಲಾಗಿದೆ. https://kannadanewsnow.com/kannada/watch-diver-rescues-fish-stuck-in-plastic-bag-in-sea-shocking-video-goes-viral/ ಜನವರಿ 8, 9 ಮತ್ತು 10ರಂದು ಗವಿಸಿದ್ದೇಶ್ವರ ಜಾತ್ರೆ ನಡೆಯಲಿದ್ದು, ನಾನಾ ಜಿಲ್ಲೆಗಳಿಂದ ಭಕ್ತ ಆಗಮನ ಹೆಚ್ಚಾಗುವ ಹಿನ್ನೆಲೆ ಹೆಚ್ಚುವರಿ ಬಸ್ ಓಡಾಟ ವ್ಯವಸ್ಥೆ ಮಾಡಲಾಗಿದೆ.  ಹೆಚ್ಚುವರಿ ಬಸ್‌ಗಳು ಗದಗ, ಯಲಬುರ್ಗಾ, ಕುಕನೂರ ಕಡೆಗೆ ಮತ್ತು ಅಳವಂಡಿ, ಮುಂಡರಗಿ ಕಡೆಗೆ ಕೊಪ್ಪಳ ಕೇಂದ್ರೀಯ ಬಸ್‌ನಿಲ್ದಾಣದಿಂದ ಹೊರಡಲಿವೆ. ಹೊಸಪೇಟೆ, ಗಂಗಾವತಿ ಮಾರ್ಗಗಳಿಗೆ ನಗರದ ಹೊಸಪೇಟೆ ರಸ್ತೆಯ ಮಾತಾ ಹೋಟೆಲ್ ಹತ್ತಿರ ಬಸ್ ಹೊರಡುವ ವ್ಯವಸ್ಥೆ ಮಾಡಲಾಗಿದೆ. https://kannadanewsnow.com/kannada/watch-diver-rescues-fish-stuck-in-plastic-bag-in-sea-shocking-video-goes-viral/ ಕುಷ್ಟಗಿ ಮಾರ್ಗಕ್ಕೆ ನಗರದ ಕಾಳಿದಾಸ ನಗರದ ಹತ್ತಿರದಲ್ಲಿ ಬಸ್ ಹೊರಡಲಿದೆ. ಅಲ್ಲದೇ ಹ್ಯಾಟಿ, ಗೊಂಡಬಾಳ, ಕರ್ಕಿಹಳ್ಳಿ ಕಡೆಗೆ ಹೋಗುವ ಮಾರ್ಗಗಳಿಗೆ ನಗರದ ಗಡಿಯಾರ ಕಂಬದ ಹತ್ತಿರದಲ್ಲಿ ವ್ಯವಸ್ಥೆ ಇದೆ.   ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ನಿಮಿತ್ತ ಈ ಹಿಂದೆಯೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ…

Read More

ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನನ್ನು ದುಷ್ಕರ್ಮಿಗಳು ಕೊಲೆ ಮಾಡಿರವ ಘಟನೆ ನಡೆದಿದೆ. 30 ವರ್ಷದ ಗೌರಿಪುರ ಗ್ರಾಮದ ರಾಮಕೃಷ್ಣ ಮೃತಪಟ್ಟಿದ್ದಾರೆ. ಅರ್ಜುನ್ ಮತ್ತು ಪ್ರಶಾಂತ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಜಗಳೂರು ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆಯ ತಾಲೂಧ್ಯಕ್ಷರಾಗಿದ್ದ ರಾಮಕೃಷ್ಣ, ಇತ್ತೀಚಿಗೆ ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. https://kannadanewsnow.com/kannada/fire-breaks-out-in-bike-parked-in-hassan-as-soon-as-you-look-at-it-youre-on-fire/

Read More

ಧಾರವಾಡ : ವಿದೇಶದಲ್ಲಿ ಉದ್ಯೋಗ ಮಾಡುವುದು ಈಗಿನ ಯುವಜನತೆಯ ಕನಸಾಗಿದೆ. ಆದರೆ ಹಲವು ಬಾರಿ ವಿದೇಶದಲ್ಲಿ ಉದ್ಯೋಗ ಬಯಸಿ ಹೋದವರು ತೊಂದರೆಗೆ ಉಂಟಾಗುವುದು ಎಲ್ಲರಿಗು ತಿಳಿದ ವಿಷಯವಾಗಿದೆ. ಇಂತಹ ತೊಂದರೆಗಳನ್ನು ನಿವಾರಿಸಿ ಸಾಮಾನ್ಯ ಜನರಿಗೆ ವಿದೇಶದಲ್ಲಿ ಸುರಕ್ಷಿತವಾದ ಉದ್ಯೋಗವನ್ನು ಪಡೆಯಲು ಉಪಯುಕ್ತವಾಗಲೆಂದು ಸರಕಾರ ನೂತನವಾಗಿ ಅಂತಾರಾಷ್ಟ್ರೀಯ ವಲಸೆ ಕೇಂದ್ರಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಸ್ಥಾಪಿಸಿದೆ. ಧಾರವಾಡ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯ ಅಂಗವಾಗಿ ಪ್ರಾದೇಶಿಕ ಅಂತಾರಾಷ್ಟ್ರೀಯ ವಲಸೆ ಕೇಂದ್ರವನ್ನು ಧಾರವಾಡದಲ್ಲಿ ತರೆಲಾಗಿದೆ. ಜಿಲ್ಲೆಯ ಯುವಜನತೆ ವಿದೇಶದಲ್ಲಿ ಉದ್ಯೋಗ ಬಯಸಿದಲ್ಲಿ ಸರಕಾರದ ಸುವ್ಯವಸ್ಥೆಯಲ್ಲಿ, ಕಾನೂನುಬದ್ಧ ಮತ್ತು ಮಾನವೀಯ ವಲಸೆಗೆ ಪ್ರಾಮುಖ್ಯತೆಯನ್ನು ನೀಡಲಾಗುವುದು. ಈ ಕೇಂದ್ರವು ಮಧ್ಯವರ್ತಿಗಳ ಹಾವಳಿಯಿಂದ ಜನರನ್ನು ಕಾಪಾಡುವಲ್ಲಿ ಸರಕಾರದ ಒಂದು ಯೋಜನೆಯಾಗಿದೆ. ಈ ಕೇಂದ್ರಗಳ ಮೂಲಕ ಕರ್ನಾಟಕದ ಯುವಜನತೆಗೆ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಕರ್ನಾಟಕವನ್ನು ಜಾಗತಿಕ ಮಾರುಕಟ್ಟೆಯಲ್ಲಿ ನುರಿತ ತರಬೇತಿ ಪಡೆದ ಹಾಗೂ ಪ್ರಮಾಣೀಕೃತ ಕಾರ್ಮಿಕರ ಕೇಂದ್ರವಾಗಿಸುವ ಗುರಿಯನ್ನು ಹೊಂದಿದೆ. ವಿದೇಶದಲ್ಲಿ…

Read More