Author: KNN IT TEAM

ಬೆಂಗಳೂರು : ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಸಂಬಂಧ ಚರ್ಚೆ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು  ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ಜನವರಿ 9 ರಂದು ಸಮಾಜದ ಎಲ್ಲ ಧರ್ಮಗಳು, ಮಠಾಧೀಶರು, ಮುಖಂಡರ ಸಭೆ ಕರೆಯಲಾಗಿದೆ. https://kannadanewsnow.com/kannada/cm-bommai-will-be-like-a-puppy-in-front-of-pm-modi-sudhakar-on-siddaramaiahs-statement/ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಗೆ ಆದಿಚುಂಚನಗಿರಿ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿ ಎಲ್ಲ ಧರ್ಮಗಳ ಪ್ರಮುಖ ಧರ್ಮ ಗುರುಗಳು, ಮುಖಂಡರಿಗೆ ಆಹ್ವಾನ ಕಳಿಸಲಾಗಿದೆ. ಶಾಲಾ ಮಕ್ಕಳಿಗೆ ನೈತಿಕ ಶಿಕ್ಷಣ ಆರಂಭಿಸುವುದಾಗಿ ಶಿಕ್ಷಣ ಇಲಾಖೆ ಕೆಲ ತಿಂಗಳ ಹಿಂದೆಯೇ ಘೋಷಣೆ ಮಾಡಿತ್ತು. ಹೀಗಾಗಿ ಈ ಸಂಬಂಧ ಸಮಾಜದ ಧರ್ಮಗುರುಗಳು, ಮಠಾಧೀಶರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸಭೆ ಆಯೋಜಿಸಲಾಗಿದೆ.

Read More

ಚಿಕ್ಕಬಳ್ಳಾಪುರ : ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಸುಧಾಕರ್ ಟಾಂಗ್ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸುಧಾಕರ್, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವನಾಯಕ, ಹಾಲಿ ಸ್ಥಾನಮಾನದಲ್ಲಿರುವವರು, ಪ್ರಧಾನಿ ಮೋದಿ ಬಳಿ ವಿನಯದಿಂದ ಸಿಎಂ ಬೊಮ್ಮಾಯಿ ಇರ್ತಾರೆ, ಆದರೆ ರಾಹುಲ್ ಗಾಂಧಿಗೆ ಯಾವ ಸ್ಥಾನಮಾನ, ನಾಯಕತ್ವ ಇಲ್ಲ, ರಾಹುಲ್ ಗಾಂಧಿ ಬಂದರೆ ಸಿದ್ದರಾಮಯ್ಯ ಓಡೋಡಿ ಹೋಗ್ತಾರೆ, ನಿಮಗೆ ಸ್ವಾಭಿಮಾನ ಇಲ್ಲಾ? ಎಂದು ಪ್ರಶ್ನಿಸಿದ್ದಾರೆ. ಸಿಎಂ ಆಗಿದ್ದವರು ಸಣ್ಣತನದ ಹೇಳಿಕೆ ನೀಡಬಾರದು. ಸಿದ್ದರಾಮಯ್ಯ ನಡವಳಿಕೆ ನಮ್ಮಂಥವರಿಗೆ ಮಾರ್ಗದರ್ಶಿ, ಅದನ್ನು ಬಿಟ್ಟು ಸಣ್ಣತನದ ಹೇಳಿಕೆ ನೀಡಬಾರದು. ಅಭಿವೃದ್ಧಿ ಬಗ್ಗೆ ಚರ್ಚಿಸಲು ಸಿಎಂ ಯಾಕೆ ನಾವೇ ಬರ್ತಿವಿ ಎಂದು ಹೇಳಿದ್ದಾರೆ. https://kannadanewsnow.com/kannada/viral-video-of-young-woman-stabbed-by-crazy-lover-in-adarsh-nagar-delhi-watch/

Read More

ನವದೆಹಲಿ: ಎಲ್ಲಾ ಧಾರ್ಮಿಕ ಮತಾಂತರಗಳು “ಕಾನೂನುಬಾಹಿರವಲ್ಲ” ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಪ್ರದೇಶ ಸರ್ಕಾರಕ್ಕೆ ತಿಳಿಸಿದೆ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ತಿಳಿಸದೆ ವಿವಾಹವಾಗುವ ಅಂತರ್‌ಧರ್ಮೀಯ ಜೋಡಿಗಳ ವಿರುದ್ಧ ಕಾನೂನು ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರವನ್ನು ನಿರ್ಬಂಧಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ. ಕಳೆದ ವರ್ಷ ನವೆಂಬರ್ 14 ರಂದು ಹೈಕೋರ್ಟ್ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರ ಪೀಠ, “ಎಲ್ಲಾ ಮತಾಂತರಗಳು ಕಾನೂನುಬಾಹಿರವಾಗಿರಲು ಸಾಧ್ಯವಿಲ್ಲ” ಎಂದು ಹೇಳಿತು. ಇದೀಗ ಫೆಬ್ರವರಿ 7 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಹೈಕೋರ್ಟ್ ಆದೇಶಕ್ಕೆ ತಡೆ ಕೋರಿದರು. ಆದರೆ, ಸುಪ್ರೀಂ ಕೋರ್ಟ್ ಆ ನಿಟ್ಟಿನಲ್ಲಿ ಯಾವುದೇ ನಿರ್ದೇಶನ ನೀಡಲು ನಿರಾಕರಿಸಿತು. “ಸಮಾಜದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಾವು ಕಣ್ಣು ಮುಚ್ಚಿ ಕೂರಲು ಸಾಧ್ಯವಿಲ್ಲ. ಮದುವೆಗಳನ್ನು ಮತಾಂತರಕ್ಕೆ ಬಳಸಲಾಗುತ್ತಿದೆ. ಮದುವೆ ಅಥವಾ ಮತಾಂತರದ ವಿರುದ್ಧ ಯಾವುದೇ ನಿಷೇಧವಿಲ್ಲ.…

Read More

ಕೊಪ್ಪಳ : ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ಅರ್ಹ ಹೊಸ ಫಲಾನುಭವಿಗಳು ಈ ಯೋಜನೆಯಡಿ ಇ-ಕೆವೈಸಿ ಹಾಗೂ ನೋಂದಣಿ ಮಾಡಿಸಿಕೊಳ್ಳುವಂತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ನೋಂದಣಿಯಾಗದೆ ಬಾಕಿ ಉಳಿದ ಅರ್ಹ ಫಲಾನುಭವಿಗಳ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಜಂಟಿ ಖಾತೆದಾರರು, ಪೌತಿ ಕಾರಣದಿಂದಾಗಿ ಖಾತೆ ವರ್ಗಾವಣೆಯಾಗಿರುವ ಫಲಾನುಭವಿಗಳು, ಒಂದೇ ಕುಟುಂಬದ ಸದಸ್ಯರೆಂದು ಭೂಹಿಡುವಳಿ ಹೊಂದಿರುವ ವಯಸ್ಕ ಮಕ್ಕಳು, ಹಿರಿಯ ನಾಗರೀಕರು ಹಾಗೂ ಮಾಹಿತಿಯ ಕೊರತೆಯಿಂದ ಈ ಎಲ್ಲಾ ಅರ್ಹ ಕಾರಣಗಳಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತ ಕುಟುಂಬಗಳು ಹಾಗೂ ಇತರೆ ಬಾಕಿ ಉಳಿದಿರುವ ಅರ್ಹ ಫಲಾನುಭವಿಗಳ ನೊಂದಣಿ ಮಾಡಿಸಲು ಹಾಗೂ ಇ-ಕೆವೈಸಿ ಮಾಡಿಸುವಂತೆ ರೈತ ಬಾಂಧವರಿಗೆ ಈ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂದಿಸಿದ ರೈತ ಸಮಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪಂರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ದೆಹಲಿ : ಆದರ್ಶ್ ನಗರ ಪ್ರದೇಶದಲ್ಲಿ 22 ವರ್ಷದ ಯುವತಿಗೆ ಪಾಗಲ್‌ ಪ್ರೇಮಿಯೇ ಚೂರಿ ಇರಿದ ಮತ್ತೊಂದು ಭಯಾನಕ ಘಟನೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ಈ ಘಟನೆಯ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ವರದಿಯಾಗಿದೆ.  https://kannadanewsnow.com/kannada/help-in-lifting-an-accident-car-in-shimoga-araga-gyanendra-a-humanitarian/ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ಓದುತ್ತಿದ್ದ ಯುವತಿ ಸಿಮ್ರಾಜಿತ್ , ಯುವಕ ಸುಖವಿಂದರ್ ಎಂಬ ಇಬ್ಬರು ವಿದ್ಯಾರ್ಥಿಗಳ  ನಡುವೆ  ಕಳೆದ 5 ವರ್ಷಗಳಿಂದ ಸ್ನೇಹವಿತ್ತು. ಸ್ನೇಹ ಬೆಳೆಸಿದ ಇಬ್ಬರು ಪ್ರೀತಿ ಮಾಡುತ್ತಿದ್ದರು.  ಇವರು  ಇಬ್ಬರು ಹಾಸ್ಟೆಲ್‌ ಪ್ರದೇಶದಲ್ಲಿ ಕಿರಿದಾದ ಏಕಾಂಗಿ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಗಲಾಟೆ ಮಾಡಿಕೊಂಡಿದ್ದಾರೆ.  ಕೆಲವು ನಿಮಿಷಗಳ ನಂತರ ಆತನು ಆಕೆಯ ಮೇಲೆ ಚೂರಿ ಇರಿದಿದ್ದಾನೆ. https://kannadanewsnow.com/kannada/help-in-lifting-an-accident-car-in-shimoga-araga-gyanendra-a-humanitarian/ ಬಾಲಕಿಯ ಕುತ್ತಿಗೆ, ಹೊಟ್ಟೆ ಮತ್ತು ಕೈಗಳಿಗೆ ಹಲವು ಗಾಯಗಳಾಗಿವೆ. ಗಾಯಗೊಂಡ ಯುವತಿಯನ್ನು ಸ್ಥಳೀಯರು ಕೂಡಲೇ  ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೂರಿ ಇರಿದ ಬಳಿಕ ಬಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸೋಮವಾರ (ಜ.2)ಮಧ್ಯಾಹ್ನ ಈ ಘಟನೆ ನಡೆದಿದೆ ಕಾರಣವೇನೆಂದು ಇನ್ನು ತಿಳಿದುಬಂದಿಲ್ಲ. ಕ್ರೂರ ದಾಳಿಯ ದೃಶ್ಯ…

Read More

ಡೆಹ್ರಾಡೂನ್ (ಉತ್ತರಾಖಂಡ) : ಭಾರತದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬುಧವಾರ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. “ನಾನು ಅವರ ತಾಯಿಯೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಹೆಚ್ಚಿನ ಚಿಕಿತ್ಸೆಗಾಗಿ ನಾವು ಅವರನ್ನು ಮುಂಬೈಗೆ ಸ್ಥಳಾಂತರಿಸುತ್ತೇವೆ” ಎಂದು DDCA ನಿರ್ದೇಶಕ ಶ್ಯಾಮ್ ಶರ್ಮಾ ತಿಳಿಸಿದ್ದಾರೆ. Cricketer Rishabh pant will be shifted to Mumbai today for further treatment: Shyam Sharma, Director DDCA to ANI (in file pic) Rishabh Pant is currently undergoing treatment at a private hospital in Dehradun following a car accident on December 30th pic.twitter.com/d2TpTYlou8 — ANI (@ANI) January 4, 2023 ಡಿಸೆಂಬರ್ 30 ರಂದು ನಡೆದ ಕಾರು ಅಪಘಾತದ ನಂತರ ರಿಷಬ್ ಪಂತ್ ಪ್ರಸ್ತುತ…

Read More

ಮಂಗಳೂರು :  ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್‌‌ ಬಗ್ಗೆ ಯೋಜಿಸಿ, ಲವ್ ಜಿಹಾದ್‌‌ ತಡೆಯೋದಕ್ಕೆ ಮುಖ್ಯವಾಗಿ  ಭಾರತಿಯ ಜನತಾ ಪಕ್ಷ ಬೇಕು ‘  ಎಂದು ನಳಿನ್ ಕುಮಾರ್‌ ಕಟೀಲ್‌ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ. ಈ ಕುರಿತು ಟ್ವೀಟರ್ ನಲ್ಲಿ ಕಿಡಿಕಾರಿರುವ ಕಾಂಗ್ರೆಸ್, “ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ” ಇದು ಚುನಾವಣೆಗೆ ಬಿಜೆಪಿಯ ಘೋಷವಾಕ್ಯ ಹಾಗೂ ಕಾರ್ಯಕರ್ತರಿಗೆ ಕಾರ್ಯಸೂಚಿ. ಧರ್ಮ, ದ್ವೇಷಗಳ ಮೊರೆ ಹೋಗಲು ತೀರ್ಮಾನಿಸಿದ ಬಿಜೆಪಿ ತಮ್ಮ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದೆ, ಹೇಳಿಕೊಳ್ಳಲು ಯಾವ ಸಾಧನೆಯನ್ನೂ ಮಾಡಿಲ್ಲ ಎಂಬುದನ್ನು ಘಂಟಾಘೋಷವಾಗಿ ಒಪ್ಪಿಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. https://twitter.com/INCKarnataka/status/1610510179707256835?cxt=HHwWhoDQibie19ksAAAA ರಸ್ತೆ, ಚರಂಡಿ, ರಸ್ತೆಗುಂಡಿಗಳ ಸಣ್ಣ ವಿಚಾರ, ರಸ್ತೆ ಗುಂಡಿಗಳಿಂದ ಜನ ಸತ್ತಿದ್ದೂ ಸಣ್ಣ ವಿಚಾರ, ಭ್ರಷ್ಟಾಚಾರ, ಕಮಿಷನ್ ಸಣ್ಣ ವಿಚಾರ, ಗುತ್ತಿಗೆದಾರರು ಸತ್ತಿದ್ದೂ ಸಣ್ಣ ವಿಚಾರ, 54 ಸಾವಿರ PSI ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದ್ದೂ ಸಣ್ಣ ವಿಚಾರ. ಯುವಕರ ನಿರುದ್ಯೋಗವೂ ಸಣ್ಣ ವಿಚಾರ. ರಾಜ್ಯ ಬಿಜೆಪಿಗೆ ದೊಡ್ಡ ವಿಚಾರ…

Read More

ಚೆನ್ನೈ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ 22 ವರ್ಷದ ಟೆಕ್ಕಿಯ ಮೇಲೆ ಟ್ರಕ್ ಹರಿದಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಮೃತಳನ್ನು ಶೋಭನಾ ಎಂದು ಗುರುತಿಸಲಾಗಿದ್ದು, ಈಕೆ ಖಾಸಗಿ ಟೆಕ್ ಕಂಪನಿ ಝೋಹೋದಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಶೋಭನಾ ತನ್ನ ಸಹೋದರನನ್ನು ನೀಟ್ ಕೋಚಿಂಗ್ ತರಗತಿ ಸಂಸ್ಥೆಗೆ ಬಿಡಲು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ತಮ್ಮನ ಕಣ್ಣೆದುರೇ ಶೋಭನಾ ಕೊನೆಯುಸಿರೆಳೆದಿದ್ದಾಳೆ. ಅಪಘಾತದಿಂದ ಸಹೋದರನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶೋಭನಾ ಹಾಗೂ ಆಕೆಯ ಸಹೋದರ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ಸ್ಥಳದಿಂದ ಪರಾರಿಯಾಗಿದ್ದ ಚಾಲಕನನ್ನು ಮೋಹನ್ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. https://kannadanewsnow.com/kannada/youth-held-for-stabbing-hotel-owner-for-serving-tea-with-less-sugar/ https://kannadanewsnow.com/kannada/twitter-files-us-govt-demanded-suspension-of-250000-accounts-says-elon-musk/ https://kannadanewsnow.com/kannada/youth-held-for-stabbing-hotel-owner-for-serving-tea-with-less-sugar/ https://kannadanewsnow.com/kannada/twitter-files-us-govt-demanded-suspension-of-250000-accounts-says-elon-musk/

Read More

ಬೆಂಗಳೂರು : ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಕಾವೇರಿ ನದಿಯ ಹೆಸರು ನಾಮಕರಣ ಮಾಡಬೇಕೆಂದು ಸಂಸದ ಪ್ರತಾಪ್ ಸಿಂಹ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಬೇಕೆಂದು ವಿಧಾನಪರಿಷತ್ ಸದಸ್ಯ  ದಿನೇಶ್ ಗೂಳಿಗೌಡ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಶಾಸಕರಾದ ಮಧು ಜಿ. ಮಾದೇಗೌಡ ಅವರು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ. ಕಾವೇರಿ ನದಿ, ಒಡೆಯರ್ ಹೆಸರಿಗೆ ಪ್ರತ್ಯೇಕ ಶಿಫಾರಸ್ಸು. ಕಾವೇರಿ ನದಿ ಹೆಸರಿಡಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿರುವ ಸಂಸದ ಪ್ರತಾಪ್ ಸಿಂಹ. ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದಾರೆ.

Read More

ಶಿವಮೊಗ್ಗ:   ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗಿಗೆ ಕಾರು ಇಳಿದ್ದನ್ನು ಕಂಡ  ಗೃಹ ಸಚಿವ ಕೂಡಲೇ  ತಮ್ಮ ಕಾರನ್ನು ನಿಲ್ಲಿಸಿದ  ಅಪಘಾತಗೊಂಡ ಕಾರನ್ನು ಮೇಲೆತ್ತುವಲ್ಲಿ ನೆರವಿಗೆ ನಿಂತು  ಮಾನವೀಯತೆ ಮೆರೆದರು . https://kannadanewsnow.com/kannada/breaking-news-big-twist-to-pocso-case-against-murugashree-medical-report-reveals-explosive-information/ ಗೃಹ ಸಚಿವರು ಶಿವಮೊಗ್ಗಕ್ಕೆ ಬರುತ್ತಿದ್ದಾಗ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದ ಬಳಿ ಶಿವಮೊಗ್ಗದಿಂದ ಕಾರ್ಕಳಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗಿಗೆ ಇಳಿದಿತ್ತು. ಈ ಸಂದರ್ಬದಲ್ಲಿ ಕಾರನ್ನು ಮೇಲೆ ಎತ್ತೋದಕ್ಕೆ ಚಾಲಕ ಹರಸಾಹಸ ಪಡುತ್ತಿದ್ದನ್ನು ಈ ಘಟನೆಯನ್ನು ಕಂಡ ಗೃಹ ಸಚಿವ ಕೂಡಲೇ ತಮ್ಮ ಕಾರನ್ನು ರಸ್ತೆ ಬದಿಯಲ್ಲೇ ನಿಲ್ಲಿಸಿ ಸಹಾಯಕ್ಕೆ ಮುಂದಾಗಿದ್ದಾರೆ. https://kannadanewsnow.com/kannada/breaking-news-big-twist-to-pocso-case-against-murugashree-medical-report-reveals-explosive-information/ ಅಪಘಾತಗೊಂಡ ಕಾರಿನಲ್ಲಿದ್ದವರಿಗೆ ಗಾಯ ಸಂಭವಿಸಿಲ್ಲ. ಶಿವಮೊಗ್ಗದ ವಿದ್ಯಾರ್ಥಿ ಪರೀಕ್ಷೆ ಬರೆಯಲು ಕಾರ್ಕಳಕ್ಕೆ ಹೊರಟಿದ್ದರು. ಈ ಸಂರ್ಭದಲ್ಲಿ ಈ ಘಟನೆ ನಡೆದಿದೆ ವಿಚಾರ ತಿಳಿದು ಅರಗ ಜ್ಙಾನೇಂದ್ರ ಅವರು ವಿದ್ಯಾರ್ಥಿಯೊಂದಿಗೆ ಮಾತನಾಡಿ, ಅಶುಭ ಎಂದು ಹೇಳುತ್ತ ಮಾತನಾಡಿ ಮುಂದೆ ಸಂಚಾರ ಮಾಡಿದರು.

Read More