Author: KNN IT TEAM

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಹೆಚ್ಚಳದ ಆತಂಕದ ನಡುವೆಯೇ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಅಮೆರಿಕದ ಜನರನ್ನು ಕಾಡಿದ್ದ ಕೋವಿಡ್ ಒಮಿಕ್ರಾನ್ ನ ಎಕ್ಸ್ ಬಿಬಿ 1.5 ಉಪತಳಿ ಕರ್ನಾಟಕದಲ್ಲೂ ಪತ್ತೆಯಾಗಿದೆ. ಜಿನೋಮಿಕ್ ಸೀಕ್ವೇನ್ಸ್ ಪರೀಕ್ಷೆಯಲ್ಲಿ ಉಪತಳಿ ಎಕ್ಸ್ ಬಿಬಿ 1.5 ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಎಚ್ ಬಿಬಿ 1.5 ತಳಿಯ ಸೋಂಕು ಪ್ರಕರಣಗಳ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ ಒಂದು, ಗುಜರಾತ್ ನಲ್ಲಿ ಮೂವರಲ್ಲಿ ಹಾಗೂ ಕರ್ನಾಟಕದ ಒಬ್ಬರಲ್ಲಿ ಎಕ್ಸ್ ಬಿಬಿ 1.5 ಸೋಂಕು ಪತ್ತೆಯಾಗಿದೆ. ಇನ್ನು ಕೊರೊನಾ ರೂಪಾಂತರಿ ಓಮಿಕ್ರಾನ್ ಉಪತಳಿ ಬಿಎಫ್. 7 ದೇಶಕ್ಕೆ ಕಾಲಿಟ್ಟ ಬಳಿಕ ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಹೆಚ್ಚಳವಾಗಿದೆ. ಕರ್ನಾಟಕದಲ್ಲಿ ಕಳೆದ ವಾರ ಕೊರೊನಾ ಸೋಂಕಿತರ ಸಂಖ್ಯೆ 116 ರಷ್ಟಿದ್ದು, ಈವಾರ 276ಕ್ಕೆ ಏರಿಕೆಯಾಗಿದೆ. https://kannadanewsnow.com/kannada/bigg-news-four-members-of-a-family-go-missing-in-chitradurga/ https://kannadanewsnow.com/kannada/bigg-news-significant-change-in-the-recruitment-of-anganwadi-worker-helper-puc-sslc-mandatory/

Read More

ಚಿತ್ರದುರ್ಗ : ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಡಿಸೆಂಬರ್ 9ರಂದು ರಂದು ರೋಹಿತ್.ಎಂ.ಬಿ (33) ಹಾಗೂ ರೇಣುಕಶ್ಯಪ್ (34) ಮಕ್ಕಳಾದ  ಆರ್ಯನ್ (12) ರಿಷಿ (6) ಇವರನ್ನು ಶಾಲೆಯಿಂದ ಕರೆತರುವುದಾಗಿ ಹೇಳಿ ಮನೆಯಿಂದ ಹೋದವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ರೋಹಿತ್.ಎಂ.ಬಿ. ಚಹರೆ ಇಂತಿದೆ: ದುಂಡುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ಎಡಗೈ ಮೇಲೆ ಸಿಂಹದ ಮಚ್ಚೆ ಇರುತ್ತದೆ. ಸುಮಾರು 5 ಅಡಿ ಎತ್ತರವಿದ್ದು ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ.  ಕಾಣೆಯಾದ ಸಮಯದಲ್ಲಿ ನೀಲಿ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಫ್ಯಾಂಟ್ ಧರಿಸಿರುತ್ತಾರೆ. ರೇಣುಕಶ್ಯಪ್ ಚಹರೆ ಇಂತಿದೆ:   ಕೋಲುಮುಖ, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ಮೂಗಿನ ಕೆಳಗೆ ಜೋಳದಾಕಾರದ  ಮಚ್ಚೆಯಿರುತ್ತದೆ. ಸುಮಾರು 5 ಅಡಿ ಎತ್ತರವಿದ್ದು, ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದ ಸಮಯದಲ್ಲಿ ಕೆಂಪು ಬಣ್ಣದ…

Read More

ಬೆಂಗಳೂರು : ಹಾವೇರಿಯಲ್ಲಿ ಜನವರಿ 6,7 ಮತ್ತು 8 ರಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಷರತ್ತು ಬದ್ಧ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಸಂಖ್ಯೆ 100ಕ್ಕೆ ಮೀರದಂತೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ನೀಡಲಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿಗಳ ಪತ್ರದ ಅನ್ವಯ ಪ್ರತಿ ವರ್ಷವೂ ಈ ರಜೆಯನ್ನು ನೀಡಲಾಗುತ್ತದೆ. ಷರತ್ತುಗಳು ವಿಶೇಷ ಸಾಂದರ್ಭಿಕ ರಜೆಯು, ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ಅವರ ಆಸಕ್ತಿಯ ಒಂದು ಅಥವಾ ಎರಡು ದಿನಗಳ ಅವಧಿಗೆ ಮತ್ತು ಹೋಗಿಬರುವ ಪ್ರಯಾಣಕ್ಕೆ ಬೇಕಾಗುವ ಅವಧಿಗೆ ಸೀಮಿತವಾಗಿರಬೇಕು. ಕನ್ನಡ ಸಾಹಿತ್ಯದ ಜ್ಞಾನ ಮತ್ತು ಅಭಿರುಚಿ ಇದ್ದು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಮಂತ್ರಿಸಲ್ಪಟ್ಟ ಸರ್ಕಾರಿ ನೌಕರರಿಗೆ ಈ ರಜೆಯ ಸೌಲಭ್ಯ ನೀಡುವುದು. ಕನ್ನಡ ಸಾಹಿತ್ಯದ ಅಭಿರುಚಿಯುಳ್ಳ ನೌಕರರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿದ್ದರೆ ಅವರಿಗೂ ಈ ಸೌಲಭ್ಯ…

Read More

ವಾಷಿಂಗ್ಟನ್: ಲಾಸ್ ಏಂಜಲೀಸ್‌ನ ಮಾಜಿ ಮೇಯರ್ ಎರಿಕ್ ಗಾರ್ಸೆಟ್ಟಿ(Eric Garcetti) ಅವರನ್ನು ಭಾರತಕ್ಕೆ ತನ್ನ ರಾಯಭಾರಿಯಾಗಿ ಮಂಗಳವಾರ ಯುಎಸ್ ಅಧ್ಯಕ್ಷ ಜೋ ಬೈಡನ್‌(Joe Biden) ಮರುನಾಮಕರಣ ಮಾಡಿದ್ದಾರೆ. ಈ ಬಾರಿ ಅವರು ಯುನೈಟೆಡ್ ಸ್ಟೇಟ್ಸ್ ಸೆನೆಟ್‌ನಿಂದ ದೃಢೀಕರಿಸಲ್ಪಡುತ್ತಾರೆ ಎಂದು ಶ್ವೇತಭವನವು ವಿಶ್ವಾಸ ವ್ಯಕ್ತಪಡಿಸಿದೆ. “ಕ್ಯಾಲಿಫೋರ್ನಿಯಾದ ಎರಿಕ್ ಎಂ. ಗಾರ್ಸೆಟ್ಟಿ ಅವರು ರಿಪಬ್ಲಿಕ್ ಆಫ್ ಇಂಡಿಯಾಕ್ಕೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ರಾಯಭಾರಿಯಾಗಲಿದ್ದಾರೆ” ಎಂದು ಶ್ವೇತಭವನವು ಸೆನೆಟ್‌ಗೆ ನಾಮನಿರ್ದೇಶನವನ್ನು ಕಳುಹಿಸಿದ ನಂತರ ಈ ಮಾಹಿತಿ ಬಂದಿದೆ. ʻಇಂದು(ಜ. 3 ರಂದು) ಶ್ವೇತಭವನವು ಕಳೆದ ಕಾಂಗ್ರೆಸ್‌ನಲ್ಲಿ ದೃಢೀಕರಿಸದ ಅಭ್ಯರ್ಥಿಗಳನ್ನು ಮರುನಾಮಕರಣ ಮಾಡಲು ಪ್ರಾರಂಭಿಸುತ್ತದೆ ಎಂದು ಮಾಧ್ಯಮ ಹೇಳಿಕೆ ತಿಳಿಸಿದೆ. ಸೆಕ್ರೆಟರಿ (ರಾಜ್ಯ, ಟೋನಿ) ಬ್ಲಿಂಕೆನ್ ಇತ್ತೀಚೆಗೆ ಹೇಳಿದಂತೆ, ಭಾರತದೊಂದಿಗಿನ ನಮ್ಮ ಸಂಬಂಧವು ನಿರ್ಣಾಯಕವಾಗಿದೆ ಮತ್ತು ಇದು ಪರಿಣಾಮವಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ತನ್ನ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. https://kannadanewsnow.com/kannada/india-has-potential-to-become-world-leader-in-footwear-leather-piyush-goyal/ https://kannadanewsnow.com/kannada/india-has-potential-to-become-world-leader-in-footwear-leather-piyush-goyal/ https://kannadanewsnow.com/kannada/bigg-news-big-shock-to-ration-card-holders-from-state-govt-from-now-on-6-kg-rice-will-be-distributed-instead-of-10-kg/ https://kannadanewsnow.com/kannada/bigg-news-big-shock-to-ration-card-holders-from-state-govt-from-now-on-6-kg-rice-will-be-distributed-instead-of-10-kg/

Read More

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಸರ್ಕಾರ ಹೊಸ ನಿಯಮ ರೂಪಿಸಲು ಸಜ್ಜಾಗಿದ್ದು, ಇನ್ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ. ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ. ಜೊತೆಗೆ ಸರಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದ ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ, ಡಿಪ್ಲೋಮಾ ಇನ್‌ ನ್ಯೂಟ್ರೀಷಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೇಟ್‌ ಕೋರ್ಸ್‌ ಸೇರಿದಂತೆ ಇನ್ನಿತರೆ ಶೈಕ್ಷಣಿಕ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಹೊಸ ಕಾರ್ಯಕರ್ತೆಯರ ಆಯ್ಕೆ ವೇಳೆ ಅಂಗನವಾಡಿ ಚಟುವಟಿಕೆ ಸಂಬಂಧಿತ ಶೈಕ್ಷಣಿಕ ಕೋರ್ಸ್‌ ಪೂರೈಸಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಈ ಹಿಂದೆ ಕಾರ್ಯಕರ್ತೆಯರ ಹುದ್ದೆಗೆ ಎಸ್ ಎಸ್ ಎಲ್ ಸಿ, ಸಹಾಯಕಿಯರಿಗೆ 7ನೇ ತರಗತಿ ಮಾನದಂಡವಿತ್ತು. https://kannadanewsnow.com/kannada/bigg-news-parents-enrolling-their-children-in-schools-note-applications-invited-for-class-6-entrance-examination-of-residential-schools/

Read More

ಚಿತ್ರದುರ್ಗ : ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ 2023-24ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಜನವರಿ 5 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮಾರ್ಚ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಜಿಲ್ಲೆಯ ಯಾವುದೇ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೋಷಕರು ತಮಗೆ ಸಮೀಪವಿರುವ ಜಿಲ್ಲೆಯ ಯಾವುದೇ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ SATS  ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು, ಇತರೆ ಮೀಸಲಾತಿ ಅನ್ವಯವಾದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರಗಳು ಹಾಗೂ ವಿದ್ಯಾರ್ಥಿಯ ಇತ್ತೀಚಿನ ಪಾಸ್‍ಪೋರ್ಟ್ ಭಾವಚಿತ್ರ ಅವಶ್ಯಕವಾಗಿರುತ್ತವೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೇ ತಾವು ದಾಖಲಾಗಲು ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಬೇಕು. ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಪ್ರವೇಶ ಬಯಸುವ ಶಾಲೆಗಳ ಆದ್ಯತಾ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾನು ಎಂದು ಹೇಳುವಂತಹ ಈ ಒಂದು ಮಾಹಿತಿಯಲ್ಲಿ ನಿಮ್ಮ ಮನೆಯಲ್ಲಿ ಏನಾದರೂ ಚಿಕ್ಕ ಚಿಕ್ಕ ವಿಷಯಗಳಿಗೆ ಜಗಳಗಳು ಆಗುತ್ತಿದ್ದರೆ ಒಂದು ಚಿಕ್ಕ ಕೆಲಸವನ್ನು ನೀವು ಮಾಡಿದರೆ ಸಾಕು ನಿಮ್ಮ ಮನೆಯಲ್ಲಿ ಯಾವುದೇ ರೀತಿಯಾದಂತಹ ಚಿಕ್ಕ ಜಗಳಗಳು ಅಥವಾ ದೊಡ್ಡ ಜಗಳಗಳು ಇದ್ದರೆ ಆದಷ್ಟು ಬೇಗ ಅವೆಲ್ಲವೂ ಕೂಡ ಸಮಾಧಾನವಾಗಿ ನಿವಾರಣೆಯಾಗುತ್ತವೆ ಎನ್ನುವ ಮಾಹಿತಿಯನ್ನು ನಿಮಗೆ ಇಂದಿನ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಸ್ನೇಹಿತರೆ ಹೌದು ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿಯೂ ಕೂಡ ಜಗಳಗಳು ಸರ್ವೇ ಸಾಮಾನ್ಯ ಆದರೆ ಕೆಲವೊಂದು ಮನೆಗಳಲ್ಲಿ ಒಂದು ಜಗಳಗಳು ಅತಿರೇಕಕ್ಕೆ ಹೋಗಿ ಬೇರೆ ಬೇರೆ ರೀತಿಯಾದಂತಹ ರೂಪಗಳನ್ನು ತಾಳುತ್ತದೆ ಅಂತಹ ರೀತಿಯಾದಂತಹ ಜಗಳಕ್ಕೆ ಇಲ್ಲದಂತಹ ಒಂದು ಚಿಕ್ಕ ಪರಿಹಾರವನ್ನು ಮಾಡಿಕೊಳ್ಳುವುದರ ಮೂಲಕ ಈ ಒಂದು ಜಗಳವನ್ನು ಸಂಪೂರ್ಣವಾಗಿ ನಿವಾರಣೆ ಮಾಡಿಕೊಳ್ಳಬಹುದು ಸ್ನೇಹಿತರೆ ಹಾಗಾದರೆ ಬನ್ನಿ ನೋಡೋಣ ಸ್ನೇಹಿತರೆ ಯಾವ…

Read More

ನವದೆಹಲಿ: ʻಪಾದರಕ್ಷೆ ಮತ್ತು ಚರ್ಮ ಕ್ಷೇತ್ರದಲ್ಲಿ ಭಾರತ ವಿಶ್ವದಲ್ಲೇ ಅಗ್ರಸ್ಥಾನ ಪಡೆಯುವ ಸಾಮರ್ಥ್ಯ ಹೊಂದಿದೆʼ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್(Union Commerce and Industry Minister Piyush Goyal) ಮಂಗಳವಾರ ಹೇಳಿದ್ದಾರೆ. ಇಲ್ಲಿ ನಡೆದ ಕೌನ್ಸಿಲ್ ಫಾರ್ ಲೆದರ್ ಎಕ್ಸ್‌ಪೋರ್ಟ್ಸ್ ನ್ಯಾಷನಲ್ ಎಕ್ಸ್‌ಪೋರ್ಟ್ ಎಕ್ಸಲೆನ್ಸ್ ಅವಾರ್ಡ್ಸ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗೋಯಲ್, ಹೊಸ ಕಂಪನಿಗಳು, ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳು ಮತ್ತು ನವೀನ ಆಲೋಚನೆಗಳೊಂದಿಗೆ ಬರುವವರನ್ನು ಮತ್ತು ಹೊಸ ಮಾರುಕಟ್ಟೆಗಳು ಮತ್ತು ಉತ್ಪನ್ನಗಳೊಂದಿಗೆ ಗುರುತು ಹಾಕದ ಪ್ರದೇಶಕ್ಕೆ ಪ್ರವೇಶಿಸುವವರನ್ನು ಪ್ರೋತ್ಸಾಹಿಸುವ ಸಾಧ್ಯತೆಯನ್ನು ಅನ್ವೇಷಿಸಲು ಸಂಘಟಕರನ್ನು ಕೇಳಿದರು. ಸರಕು ಮತ್ತು ಸೇವೆಗಳೆರಡರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ರಫ್ತುಗಳನ್ನು ಸಾಧಿಸಲು ಉದ್ಯಮವು ಆಶಿಸುತ್ತಿದೆ ಎಂದು ಸಚಿವರು ಹೇಳಿದರು. ವಿವಿಧ ದೇಶಗಳೊಂದಿಗೆ ಭಾರತವು ಸಹಿ ಹಾಕಿರುವ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್‌ಟಿಎ) ಅಭಿವೃದ್ಧಿಗಾಗಿ ಬಳಸಿಕೊಳ್ಳುವಂತೆ ಚರ್ಮದ ಉದ್ಯಮವನ್ನು ಗೋಯಲ್ ಕೇಳಿಕೊಂಡರು. ಹೊಸ ಒಪ್ಪಂದದ ಪರಿಣಾಮವಾಗಿ ಕಳೆದ ವರ್ಷ ನವೆಂಬರ್‌ನಲ್ಲಿ ಈ ವಲಯದ ರಫ್ತು…

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಹಂಚಿಕೆಯಾಗುತ್ತಿದ್ದ 10 ಕೆಜಿ ಅಕ್ಕಿಯ ಬದಲಿಗೆ ಇನ್ಮುಂದೆ ಕೇವಲ 6 ಕೆಜಿ ಅಕ್ಕಿ ಮಾತ್ರ ಸಿಗಲಿದೆ. ಕೋವಿಡ್ ಹಿನ್ನಲೆಯಲ್ಲಿ 2020-21 ರ ಮೇ ತಿಂಗಳಿನಿಂದ 2022 ರ ಡಿಸೆಂಬರ್ 31 ರವರೆಗೆ ಕೇಂಧ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸಾರ್ವಜನಿಕ ವಿತರಣ ಪದ್ಧತಿಯಲ್ಲಿ ರಾಜ್ಯದ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು ವಿತರಿಸುತ್ತಿತ್ತು. ರಾಜ್ಯ ಸರ್ಕಾರವು 5 ಕೆಜಿ ಅಕ್ಕಿ ವಿತರಿಸುತ್ತಿತ್ತು. ರಾಜ್ಯ ಸರ್ಕಾರವು ಕೇಂದ್ರದ ಪಾಲಿನ ಜೊತೆಗೆ ಹೆಚ್ಚುವರಿಯಾಗಿ ಕೇವಲ 1 ಕೆಜಿ ಅಕ್ಕಿಯನ್ನು ಮಾತ್ರ ವಿತರಿಸಲು ಆದೇಶ ಹೊರಡಿಸಿದೆ. ಹೊಸ ಆದೇಶ ಜನವರಿ ಅಥವಾ ಫೆಬ್ರವರಿಯಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ಪ್ರಸ್ತುತ 10,91,508 ಅಂತ್ಯೋದಯ ಕಾರ್ಡ್ ಗಳಿದ್ದು, 44,83,745 ಮಂದಿ ಫಲಾನುಭವಿಗಳಿದ್ದಾರೆ. ಹಾಗೆಯೇ 1,15,93,227 ಬಿಪಿಎಲ್ ಕಾರ್ಡ್ ಗಳಿದ್ದು, ಒಟ್ಟು 3,87,79,975 ಮಂದಿ…

Read More