Author: KNN IT TEAM

ಬೆಂಗಳೂರು: ‘ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ. ಕಲಬುರ್ಗಿಗೆ ಹೋಗಿ, ಅಲ್ಲಿಂದ ವಿಜಯಪುರಕ್ಕೆ ತೆರಳುತ್ತಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಮಿತ್ ಶಾ ಅವರ ರಾಜ್ಯ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ, ‘ಅಮಿತ್ ಶಾ ಅವರ ಮಾತಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಅಮಿತ್ ಶಾ ಅವರು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿರುವುದನ್ನು ನಾನು ಅಭಿನಂದಿಸುತ್ತೇನೆ. ಈ ಕಾರಣಕ್ಕೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರು ಆಗಮಿಸುತ್ತಿದ್ದು, ಇದರರ್ಥ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಸಂಪೂರ್ಣ ವೈಫಲ್ಯ ಅನುಭವಿಸಿದೆ ಎಂದು. ಹೀಗಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವವನ್ನು ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದ ವಿಚಾರಗಳೇ ಬೇರೆ. ರಾಜ್ಯದಲ್ಲಿನ ಆಡಳಿತ, ಅಭಿವೃದ್ಧಿಯ ವಿಚಾರ ಗಣನೆಗೆ ಬರುತ್ತದೆ. ಇಡೀ ವಿಶ್ವ ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದೆ. ನಾವು ಜ.11 ರಿಂದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಎಲ್ಲ ಮೂಲೆ,…

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈಗಾಗಲೇ 15 ಲಕ್ಷ ಜನರು ಬಂದು ಶ್ರೀಗಳ ದರ್ಶನ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. https://kannadanewsnow.com/kannada/11-killed-in-stampede-at-chandrababu-naidu-rally-andhra-government-bans-jatha-public-meeting/ https://kannadanewsnow.com/kannada/protest-at-government-womens-polytechnic-college-in-ramanagara-without-lecturers/

Read More

ರಾಮನಗರ: ಜಿಲ್ಲೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಪಾಠ ಮಾಡಲು ಉಪನ್ಯಾಸಕರಿಲ್ಲದೆ ಗೋಳಾಡುವಂತಾಗಿದೆ. ಇನ್ನು ವರ್ಗಾವಣೆ ಆಗಿರುವ ಉಪನ್ಯಾಸಕರ‌ ಜಾಗಕ್ಕೆ ಇವರೆಗೂ ಯಾರನ್ನು ನೇಮಕ ಮಾಡಿಲ್ಲ, ಇದರಿಂದ ಬೇಸತ್ತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. https://kannadanewsnow.com/kannada/siddheshwara-sri-astangata-nidagundi-town-closed-swamijis-heartfelt-tribute/ ಕಳೆದ ಐದಾರು‌ ತಿಂಗಳಿಂದ ಪಾಠ ಮಾಡಲು ಉಪನ್ಯಾಸಕರಿಲ್ಲ, ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗುತ್ತಿದೆ. ನಮ್ಮ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. https://kannadanewsnow.com/kannada/siddheshwara-sri-astangata-nidagundi-town-closed-swamijis-heartfelt-tribute/

Read More

ಆಂಧ್ರ ಪ್ರದೇಶ : ನಗರದಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಡೆಸಿದ್ದ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ  11 ಮಂದಿ ಬಲಿಯಾದ. ಈ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ರ‍್ಯಾಲಿ, ಸಾರ್ವಜನಿಕ ಸಭೆ ನಡೆಸದಂತೆ  ನಿಷೇಧಾಜ್ಞೆ ಜಾರಿಗೆ ತಂದಿದೆ. https://kannadanewsnow.com/kannada/pradeeps-suicide-case-mla-aravind-limbavali-should-be-arrested-and-interrogated-former-cm-siddaramaiah/ ಬಗ್ಗೆ ಸುದ್ದಿಗಾರರೊಂದಿಗೆ  ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು . ಅಧಿಕಾರಿಗಳು ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ತಿಳಿಸಿದರು. https://kannadanewsnow.com/kannada/pradeeps-suicide-case-mla-aravind-limbavali-should-be-arrested-and-interrogated-former-cm-siddaramaiah/

Read More

ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ನಿವಾಸಕ್ಕೆ ಕಾಂಗ್ರೆಸ್‌ ನಾಯಕರು ಭೇಟಿ ನೀಡಿದ್ದಾರೆ. ನಗರದ ಮಹದೇವಪುರದ ಅಂಬಲಿಪುರದಲ್ಲಿ‌ರುವ ನಿವಾಸಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. https://kannadanewsnow.com/kannada/superbug-what-is-the-symptom-treatment-here-is-the-important-information/ ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ತಾವು ನಂಬಿದ್ದ ಸ್ನೇಹಿತರಿಂದ ಹಣಕಾಸಿನ ವಿಚಾರದಲ್ಲಿ ಮೋಸಹೋಗಿ ಹಣಕಳೆದುಕೊಂಡು ಹತಾಷರಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಪ್ರದೀಪ್ ಅವರು ತಮ್ಮ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಬೇಕು ಮತ್ತು ಪ್ರದೀಪ್ ಅವರ ಪತ್ನಿಗೆ ಹಣ ವಾಪಸ್ಸು ಕೊಡಿಸಬೇಕು ಎಂದು ಹೇಳಿದ್ದಾರೆ. https://kannadanewsnow.com/kannada/bigg-news-sangolli-rayanna-utsav-to-be-celebrated-on-january-12-13/

Read More

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌  : ಕಳೆದ ಎರಡು ವರ್ಷಗಳಿಂದ ಇಡೀ ವಿಶ್ವವೇ ಕೊರೊನಾದಿಂದ ನರಳುತ್ತಿದೆ. ಒಂದೆಡೆ, ಪ್ರತಿ ವರ್ಷ ಹೊಸ ರೂಪಾಂತರದೊಂದಿಗೆ ಈ ಸಾಂಕ್ರಾಮಿಕ ರೋಗವು ಜನರನ್ನು ದೈಹಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ದುರ್ಬಲಗೊಳಿಸುತ್ತಿದೆ. ಮತ್ತೊಂದೆಡೆ, ಅಮೆರಿಕದಲ್ಲಿ ಮಾನವರಲ್ಲಿ ವೇಗವಾಗಿ ಹರಡುತ್ತಿರುವ ಸೂಪರ್‌ಬಗ್(Superbugs) ಇಡೀ ಜಗತ್ತನ್ನು ಮತ್ತೆ ಚಿಂತೆಗೀಡು ಮಾಡಿದೆ. ಈ ಬ್ಯಾಕ್ಟೀರಿಯಾದ ಸೂಪರ್‌ಬಗ್ ಕಳೆದ ಕೆಲವು ವರ್ಷಗಳಲ್ಲಿ ವೈದ್ಯಕೀಯ ವಿಜ್ಞಾನಕ್ಕೆ ಪ್ರಮುಖ ಸವಾಲಾಗಿ ಹೊರಹೊಮ್ಮಿದೆ. ಇಂತಹ ಪರಿಸ್ಥಿತಿಯಲ್ಲಿ ಕೋವಿಡ್-19 ಸೋಂಕು ಹೆಚ್ಚು ಅಪಾಯಕಾರಿಯಾಗುತ್ತಿದೆ. ವೈದ್ಯಕೀಯ ಜರ್ನಲ್ ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ಅಧ್ಯಯನವು ಈ ಸೂಪರ್‌ಬಗ್ ಈ ಪ್ರಮಾಣದಲ್ಲಿ ಹರಡುವುದನ್ನು ಮುಂದುವರೆಸಿದರೆ, ಪ್ರತಿ ವರ್ಷ 10 ಮಿಲಿಯನ್ ಜನರು ಅದರಿಂದ ಸಾಯಬಹುದು ಎಂದು ಸೂಚಿಸುತ್ತದೆ. ಪ್ರಸ್ತುತ, ಈ ಸೂಪರ್‌ಬಗ್‌ನಿಂದಾಗಿ, ಪ್ರಪಂಚದಾದ್ಯಂತ ಪ್ರತಿ ವರ್ಷ 1.3 ಮಿಲಿಯನ್ ಜನರು ಸಾಯುತ್ತಿದ್ದಾರೆ. ಲ್ಯಾನ್ಸೆಟ್‌ನ ಅಧ್ಯಯನವು ಪ್ರತಿಜೀವಕಗಳು ಮತ್ತು ಆಂಟಿಫಂಗಲ್ ಔಷಧಗಳು ಸಹ ಸೂಪರ್‌ಬಗ್‌ಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಬಹಿರಂಗಪಡಿಸಿದೆ. ಸೂಪರ್‌ಬಗ್ ಎಂದರೇನು ಸೂಪರ್‌ಬಗ್ ಬ್ಯಾಕ್ಟೀರಿಯಾದ ಒಂದು ರೂಪವಾಗಿದೆ.…

Read More

ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನ ಯೋಜನೆಯಡಿ ಪ.ಪಂ.ಕ್ಕೆ 3 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡ 18-55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/siddheshwara-sri-astangata-nidagundi-town-closed-swamijis-heartfelt-tribute/ ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರೂ. 2.00 ಲಕ್ಷ ಮೀರಿರಬಾರದು.  ಸಾಲ ಮಂಜೂರಾದ ನಂತರ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ಕಡ್ಡಾಯವಾಗಿ ನೀಡಲಾಗುವುದು. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ/ಆಧಾರ್ ಕಾರ್ಡ್, ಯೋಜನಾ ವರದಿ, ತರಬೇತಿ ಅಥವಾ ಅನುಭವ ಪತ್ರ, ವಯಸ್ಸಿನ ದೃಢೀಕರಣ ಪತ್ರ…

Read More

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನರು ಹರಿದುಬರುತ್ತಿದೆ. ಈ ನಡುವೆ ವಿವಿದೆಡೆ ಬಂದ್‌ ಮಾಡಿ ಶೋಕಾಚರಣೆ ಮಾಡಿದ್ದಾರೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಹಾಗೂ ಬಸವನಬಾಗೇವಾಡಿ ತಾಲೂಕಿನ ನಿಡಗುಂದಿ ಪಟ್ಟಣದ ಮಾರಕಟ್ಟೆಯನ್ನು ಬಂದ್‌ ಮಾಡಿ ಶೋಕಾಚರಣೆ ಮಾಡಿದ್ದಾರೆ. ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅಂತಿಮ ದರ್ಶನ ಸಲ್ಲಿಸಲಾಯಿತು. ಈಗಾಗಲೇ ಲಕ್ಷಾಂತರ ಜನರು ಬಂದು ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ವ್ಯಕ್ತಿಯೊಬ್ಬರು ತಮ್ಮ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದಿದ್ದಾರೆ. ಈ ಮೂಲಕ ವೃದ್ಧೆಗೆ ಶ್ರೀಗಳ ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ. ವಿಜಯಪುರದ ನಾಗಠಾಣ ಗ್ರಾಮದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು. https://kannadanewsnow.com/kannada/man-carrying-old-woman-on-her-shoulders-to-have-darshan-of-siddeshwara-swamiji/ ಬಬಲೇಶ್ವರ ಗ್ರಾಮದ ಶಿವಾನಂದ ಅವರು ಅಜ್ಜಿಯ ಪರದಾಟ ನೋಡಿ ಭುಜದ ಮೇಲೆ ಹೊತ್ತು ತಂದಿದ್ದಾರೆ.ಶ್ರೀಗಳ ಅಂತಿಮ ದರ್ಶನಕ್ಕೆ…

Read More

ಬೆಳಗಾವಿ : ಪ್ರತಿವರ್ಷದಂತೆ ಜನವರಿ 12 ಹಾಗೂ 13 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಅವರು ಪ್ರಕಟಿಸಿದರು. https://kannadanewsnow.com/kannada/the-person-who-carried-the-old-woman-on-his-shoulders-for-the-final-darshan-of-lord-siddeshwar/ ಸಂಗೊಳ್ಳಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮಾರಕ ಸಭಾಭವನದಲ್ಲಿ ಸೋಮವಾರ (ಜ.2) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  ಕೋವಿಡ್ ಕಾರಣಕ್ಜೆ ಎರಡು ವರ್ಷಗಳಿಂದ ಸರಳ ರೀತಿಯಲ್ಲಿ ಆಚರಿಸಲಾಗಿದೆ. ಆದರೆ ಈ ಬಾರಿ ಗ್ರಾಮಸ್ಥರ ಒಕ್ಕೊರಲಿನ ಒತ್ತಾಯದಂತೆ ಉತ್ಸವವನ್ನು ಸಡಗರದಿಂದ ಆಚರಿಸಲಾಗುವುದು. ಉತ್ಸವಕ್ಕಾಗಿ ಒಂದು ಕೋಟಿ ರೂಪಾಯಿ ಅನುದಾನ ಒದಗಿಸುವಂತೆ ಪ್ರಸ್ತಾವನೆ ಈಗಾಗಲೇ ಕಳಿಸಲಾಗಿದೆ. ಆದರೆ ಸರಕಾರದಿಂದ ಇನ್ನೂ ಯಾವುದೇ ಹಣಕಾಸು ಬಿಡುಗಡೆಯಾಗಿಲ್ಲ. ಒಂದು ಕೋಟಿ ರೂಪಾಯಿ ಬಿಡುಗಡೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಐವತ್ತು ಲಕ್ಷ ರೂಪಾಯಿ ಬಿಡುಗಡೆಗೆ ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಒಂದು ವಾರದಲ್ಲಿ ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕ ಕೌಜಲಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಗ್ರಾಮದ…

Read More

ಬೆಂಗಳೂರು: ಸಿಲಿಕಾನ್‌ ಸಿಟಿ ಜನರೇ ಎಚ್ಚರ..ಪರಿಚಿತರಿಗೆ ಮೊಬೈಲ್ ಕೊಡೋ ಮುನ್ನ ಸ್ವಲ್ಪ ಯಾಮಾರಿದ್ರೂ ನಿಮ್ಮ ಖಾತೆ ಕನ್ನ ಹಾಕಿ ಹಣ ಪೀಕುವ ಜನರು ಹೆಚ್ಚಾಗಿದ್ದಾರೆ. https://kannadanewsnow.com/kannada/the-person-who-carried-the-old-woman-on-his-shoulders-for-the-final-darshan-of-lord-siddeshwar/ ನಿಮ್ಮ ಮೊಬೈಲ್‌ನನ್ನು ಅಪ್ಪಿತಪ್ಪಿಯೂ ಯಾರು ಕೇಳಿದ್ರು ಕೊಡುವುದಕ್ಕೆ ಮುಂದಾಗಬೇಡಿ, ಯಾಕೆಂದ್ರೆ ಇಂತದ್ದೇ ಒಂದು ಬೆಂಗಳೂರಿನ ಯಶವಂತಪುರದ ಮತ್ತಿಕೆರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/the-person-who-carried-the-old-woman-on-his-shoulders-for-the-final-darshan-of-lord-siddeshwar/ ಅಪರಿಚಿತ ವ್ಯಕ್ತಿಯೊಬ್ಬ, ನನ್ನ ಮೊಬೈಲ್ ನಲ್ಲಿ ಚಾರ್ಜ್ ಇಲ್ಲ ಅರ್ಜೆಂಟ್ ಕಾಲ್ ಮಾಡಬೇಕುಎಂದುಕೊಂಡು ದೇವವ್ರಾತ್ ಸಿಂಗ್ ಎಂಬವರ ಕೈನಿಂದ ಮೊಬೈಲ್‌ ತೆಗೆದುಕೊಂಡ ಕ್ಷಣ ಮಾತ್ರದಲ್ಲಿ ಬೇರೆ ಕೈನಲ್ಲಿ ಹತ್ತಿ ಓಡಿ ಹೋಗಿದ್ದಾನೆ. ಆ ಮೊಬೈಲ್‌ನಲ್ಲಿ ದೇವವ್ರಾತ್ https://kannadanewsnow.com/kannada/the-person-who-carried-the-old-woman-on-his-shoulders-for-the-final-darshan-of-lord-siddeshwar/ ಸಿಂಗ್  ಮತ್ತು ಅವರ ಪ್ರೀಯತಮೆಯ ಫೋಟೋಗಳು ಇದ್ದವು. ಅದೇ ವಿಚಾರವನ್ನು ಇಟ್ಟುಕೊಂಡು ಹಣ ಕೊಡಿ ಇಲ್ಲವಾದ್ರೆ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹಾಕೋದಾಗಿ ಬೆದರಿಕೆ ಹಾಕಿದ್ದಾನೆ. ಲಕ್ಷ ಲಕ್ಷ ಹಣ ಕೇಳೋದಕ್ಕೆ ಶುರು ಮಾಡಿದ್ದನು ನಂತ್ರ ಆತ ಯಶವಂತಪುರ ಪೊಲೀಸರಿಗೆ ದೂರು ನೀಡಿದ್ರು. ಬಳಿಕ ವಿಚಾರಣೆ ನಡೆಸಿ  ಪವನ್, ಸೈಯದ್ ಎಂಬವರನ್ನು ಪೊಲೀಸರು…

Read More