Subscribe to Updates
Get the latest creative news from FooBar about art, design and business.
Author: KNN IT TEAM
ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇದೀಗ ಶ್ರೀಗಳ ಅಂತ್ಯಕ್ರಿಯೆಗೆ ಸಲಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವಾಮೀಜಿ ಅಂತ್ಯಕ್ರಿಯೆ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಪರಿಶೀಲನೆ ನಡೆಸಿದ್ದಾರೆ. ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ್ ರಿಂದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಸ್ವಾಮೀಜಿ ದರ್ಶನಕ್ಕಾಗಿ ಇನ್ನೂ ಅಪಾರ ಸಂಖ್ಯೆಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ನಾನಾ ಭಾಗಗಳಿಂದ ಜನರು ಆಗಮಿಸಿದ್ದು ಶ್ರೀಗಳ ದರ್ಶನ ಪಡೆದಿದ್ದಾರೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ. https://kannadanewsnow.com/kannada/he-will-be-cremated-with-full-state-honours-at-jnana-yogaashrama-at-5-pm-as-per-the-wishes-of-the-seer/
ತುಮಕೂರು : ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಲಾರಿ ಟೈರ್ ಬ್ಲಾಸ್ಟ್ ಆಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. https://kannadanewsnow.com/kannada/bigg-news-students-with-disabilities-to-take-note-applications-invited-for-scholarships-2/ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಇಂಡಿಸ್ಕೆರೆ ಗ್ರಾಮದ ಬಳಿ ಲಾರಿ ಟೈರ್ ಬ್ಲಾಸ್ಟ್ ಆಗಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಹನುಮಂತರಾಯಪ್ಪ ಸಾವನ್ನಪ್ಪಿದ ಲಾರಿ ಚಾಲಕರಾಗಿದ್ದಾರೆ. ಲಾರಿ ಟೈರ್ ಬಿಸಿಯಾಗಿದೆಯೇ ಎಂದು ನೋಡಲು ಹೋದಾಗ ಏಕಾಏಕಿ ಬ್ಲಾಸ್ ಆಗಿದ್ದು, ಈ ವೇಳೆ ಟೈರ್ ಸ್ಟೋಟದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ : 2022-23ನೇ ಸಾಲಿನ ವಿಕಲಚೇತನ ವಿದ್ಯಾರ್ಥಿಗಳು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. https://kannadanewsnow.com/kannada/he-will-be-cremated-with-full-state-honours-at-jnana-yogaashrama-at-5-pm-as-per-the-wishes-of-the-seer/ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿವೇತನವನ್ನು ಆನ್‍ಲೈನ್ ಮೂಲಕ ಶಾಲಾ/ಕಾಲೇಜುಗಳ ನೋಂದಣಿ ಸಂಖ್ಯೆ ಹಾಗೂ ಯು.ಡಿ.ಐ.ಡಿ ಸಂಖ್ಯೆಗಳ ಮೂಲಕ ಫಲಾನುಭವಿಯು ಹೊಂದಿರುವ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ನಮೂದಿಸಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ ನ್ನು ವೀಕ್ಷಿಸಬಹುದು ಎಂದು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಕೆ.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bigg-news-pro-hindu-organisations-launch-helpline-to-prevent-love-jihad/
ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಇಂದು ಉತ್ತರ ಪ್ರದೇಶ ಪ್ರವೇಶಿಸಿದೆ. ಸುಮಾರು ಒಂಬತ್ತು ದಿನಗಳ ವಿರಾಮದ ನಂತರ ಮತ್ತೆ ಈ ಯಾತ್ರೆ ಪುನಾರಂಭಗೊಂಡಿದೆ. ಈ ಯಾತ್ರೆಯು ಆರಂಭವಾಗಿ 110 ದಿನಗಳು ಕಳೆದಿದ್ದು, ಇಲ್ಲಿಯವರೆಗೆ 3,000 ಕಿ.ಮೀ. ಕ್ರಮಿಸಿದೆ. ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರ ಮತ್ತು ಹರಿಯಾಣದ ಭಾಗಗಳನ್ನು ಒಳಗೊಂಡಿದೆ. ಯಾತ್ರೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ಇದು ಭಾರತದ ಇತಿಹಾಸದಲ್ಲಿ ಯಾವುದೇ ಭಾರತೀಯ ರಾಜಕಾರಣಿ ನಡೆಸಿದ ಕಾಲ್ನಡಿಗೆಯಲ್ಲಿ ಅತಿ ಉದ್ದದ ಪಾದಯಾತ್ರೆಯಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಜನವರಿ 26 ರಂದು ಶ್ರೀನಗರದಲ್ಲಿ ಕೊನೆಗೊಳ್ಳುವ ಯಾತ್ರೆಯ ನಂತರ, ಯಾತ್ರೆಯ ಸಂದೇಶವನ್ನು ಹರಡುವ ಉದ್ದೇಶದಿಂದ ಕಾಂಗ್ರೆಸ್ ‘ಹಾಥ್ ಸೇ ಹಾಥ್ ಜೋಡೋ’ ಅಭಿಯಾನವನ್ನು ಪ್ರಾರಂಭಿಸುತ್ತದೆ. ಮೂಲಗಳ ಪ್ರಕಾರ, ಮಾಜಿ ಕಾಂಗ್ರೆಸ್ ಅಧ್ಯಕ್ಷರು ಸಹೋದರಿ ಮತ್ತು ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ…
ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಯಿಂದ ಬೇಸರಗೊಂಡ ನಗರದಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿದೆ. https://kannadanewsnow.com/kannada/blind-mentally-retarded-children-mourn-the-demise-of-siddeshwara-sri-at-hole-alur/ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶ್ರೀಗಳ ಅಗಲಿಕೆಗೆ ವಿಜಯಪುರ ನಗರಾದ್ಯಂತ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು ಬಂದ್ ಸಂತಾಪ ಸೂಚಿಸಿದ್ದಾರೆ. ಇಡೀ ವಿಜಯಪುರ ಜಿಲ್ಲೆಯೇ ನಿರಾವ ಮೌನಾಚರಣೆ ಮೂಲಕ ಅಂತಿಮನಮನ ಸಲ್ಲಿಸಿದ್ದಾರೆ. ಅಲ್ಲದೆ ಅಂತಿಮ ದರ್ಶನದಲ್ಲಿ ಭಾಗಿಯಾಗಲು 70ಕ್ಕೂ ಹೆಚ್ಚು ಅಂಧ, ಬುದ್ಧಿಮಾಂದ್ಯ ಮಕ್ಕಳು ವಿಜಯಪುರಕ್ಕೆ ಹೊರಟಿದ್ದಾರೆ. https://kannadanewsnow.com/kannada/blind-mentally-retarded-children-mourn-the-demise-of-siddeshwara-sri-at-hole-alur/ ರಾಜ್ಯ ಅಷ್ಟೇ ಅಲ್ಲದೇ ಹೊರ ರಾಜ್ಯಗಳಿಂದಲೂ ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಭಕ್ತರು ಬರುತ್ತಿದ್ದಾರೆ. ಸಿದ್ದೇಶ್ವರಶ್ರೀ ಸರ್ವಧರ್ಮ ಸಂತರಾಗಿದ್ದರು, ಯಾವತ್ತು ಜಾತಿ, ಧರ್ಮದ ಬೇಧ ಮಾಡಲಿಲ್ಲ, ಎಲ್ಲ ಮನುಷ್ಯರು ಒಂದೇ ಎನ್ನುತ್ತಿದ್ದರು. ಈ ಹಿಂದೆ ಸ್ವಾಮೀಜಿ ಪ್ರವಚನಕ್ಕೆ ಹೋಗಿದ್ದೇವು ಎಂದು ಸ್ವಾಮೀಜಿಯನ್ನ ನೆನೆಯುತ್ತಾ ಮುಸ್ಲಿಂ ದಂಪತಿಗಳು. ಕಣ್ಣೀರು ಹಾಕುತ್ತಿದ್ದಾರೆ ಇಂತಹ ಪ್ರಸಿದ್ದಿ…
ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ. ಜ್ಞಾನಯೋಗಾಶ್ರಮದ ಆವರಣದಲ್ಲಿ ಸ್ವಾಮೀಜಿಗಳ ಅಂತ್ಯಸಂಸ್ಕಾರ ನಡೆಯಲಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದ್ದು, ಸ್ವಾಮೀಜಿ ಅಪೇಕ್ಷೆಯಂತೆಯೇ ಅಂತ್ಯಕ್ರಿಯೆ ನಡೆಯಲಿದೆ.ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಜಾನೆಯಿಂದಲೇ ಸಾವಿರಾರು ಭಕ್ತರು ಆಗಮಿಸಿ ಅಂತಿಮ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. https://kannadanewsnow.com/kannada/devotees-shocked-by-siddheswara-sris-demise-nalin-kumar-kateel/ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಖ್ಯದ್ವಾರದ ಮೂಲಕ ಆಗಮಿಸಿ 2ನೇ ಗೇಟ್‌ನಲ್ಲಿ ನಿರ್ಗಮನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಸಾಗರೋಪಾದಿಯಲ್ಲಿ ಬೆಳಂಬೆಳಗ್ಗೆ ಭಕ್ತರ ದಂಡು ಹರಿದು ಬರುತ್ತಿದೆ. ನಸುಕಿನ ಜಾವವೇ ಅಂತಿಮ ದರ್ಶನಕ್ಕೆ ಭಕ್ತಾದಿಗಳು ಹಾಕಿದ ಕಾರಿಡಾರ್ ಸಂಪೂರ್ಣ ಭರ್ತಿಯಾಗಿದೆ.ಬಿಜ್ಜರಗಿ ಗ್ರಾಮದಿಂದ ಹೊರಡಲು ಬಸ್, ಕ್ರೂಸರ್ಗಳ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ…
ಮಂಗಳೂರು : ಲವ್ ಜಿಹಾದ್ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹಿಂದೂ ಸಂಘಟನೆಗಳು ಇದೀಗ ಲವ್ ಜಿಹಾದ್ ತಡೆಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಹಿಂದೂಪರ ಸಂಘಟನೆಗಳು ಹೆಲ್ಪ್‌ಲೈನ್ ಆರಂಭಿಸಿದೆ. ಕರಾವಳಿಯಲ್ಲಿ ಹೆಚ್ವುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಹಿಂದೂ ಸಂಘಟನೆಗಳು ಸಹಾಯವಾಣಿಯನ್ನು ಆರಂಭಿಸಿವೆ. ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ತಕ್ಷಣ ಸಂಪರ್ಕಿಸಿ ಎಂದು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಯುವತಿಯರು ಲವ್ ಜಿಹಾದ್‌ಗೆ ಬಲಿಯಾಗುವ ಸಾಧ್ಯತೆಗಳು ಹೆಚ್ಚಾಗಿದೆ. ಆದ್ದರಿಂದ ಲವ್ ಜಿಹಾದ್ ಪ್ರಕರಣ ಕಂಡುಬಂದಲ್ಲಿ ಹೆಲ್ಪ್ ಲೈನ್ ನಂಬರ್‌ಗೆ ಸಂಪರ್ಕಿಸಿ. ಪೋಷಕರು ಲವ್ ಜಿಹಾದ್ ಬಗ್ಗೆ ಎಚ್ಚರ ವಹಿಸಿ, ಮಕ್ಕಳ ಬಗ್ಗೆ ಸಂಶಯವಿದ್ದಲ್ಲಿ ಸಂಕೋಚ ಪಡದೆ ಸಂಪರ್ಕಿಸಬಹುದು ಹಿಂದೂಪರ ಸಂಘಟನೆಗಳು ಹೇಳಿವೆ. https://kannadanewsnow.com/kannada/replacing-battery-for-out-of-warranty-iphones-will-now-get-costlier/ https://kannadanewsnow.com/kannada/food-arrangements-have-been-made-for-the-devotees-coming-for-the-last-darshan-of-the-walking-god/
ಬೆಂಗಳೂರು : : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತರಾಗಿದ್ದಾರೆ. ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಅವರ ಅಗಲುವಿಕೆಯಿಂದ ಅತೀವ ದುಃಖವಾಗಿದೆ ಎಂದು ಸಚಿವ ಕೆ. ಗೋಪಾಲಯ್ಯ ಸಂತಾಪ ಸೂಚಿಸಿದ್ದಾರೆ https://kannadanewsnow.com/kannada/devotees-shocked-by-siddheswara-sris-demise-nalin-kumar-kateel/ ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಖನಿಜ ವಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಅವರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದರು. ಸಿದ್ದೇಶ್ವರ ಸ್ವಾಮೀಜಿ ಅವರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಿದ್ದರು . ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು. https://kannadanewsnow.com/kannada/devotees-shocked-by-siddheswara-sris-demise-nalin-kumar-kateel/ ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತು ಪ್ರವಚನ ಆಲಿಸುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರ ಭಾಷೆ,ಧಾಟಿ, ಪದಪ್ರಯೋಗ,ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದ ಅವರ ಶೈಲಿ ಜೊತೆಗೆ ಕಲ್ಲು,ಮಣ್ಣು,ಗಿಡ,ಮರ,ಹೂ,ಹಕ್ಕು,ಪಕ್ಷಿ,ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ಅವರು…
ಸ್ಯಾನ್ ಫ್ರಾನ್ಸಿಸ್ಕೋ: ಐಫೋನ್(iPhone) 14 ಗಿಂತ ಹಳೆಯದಾದ ಎಲ್ಲಾ ಮಾದರಿಗಳಿಗೆ ಖಾತರಿಯಿಲ್ಲದ ಐಫೋನ್‌ನ ಬದಲಿ ಬ್ಯಾಟರಿಗಳ ವೆಚ್ಚವನ್ನು ಹೆಚ್ಚಿಸುವುದಾಗಿ ಆಪಲ್(Apple) ಘೋಷಿಸಿದೆ. ಪ್ರಸ್ತುತ ವಾರೆಂಟಿಯ ಬ್ಯಾಟರಿ ಸೇವಾ ಶುಲ್ಕವು ಫೆಬ್ರವರಿ 2023 ರ ಅಂತ್ಯದವರೆಗೆ ಅನ್ವಯಿಸುತ್ತದೆ. ಕಂಪನಿ ಮಾಹಿತಿ ಪ್ರಕಾರ, ಮಾರ್ಚ್ 1, 2023 ರಿಂದ iPhone 14 ಗಿಂತ ಮೊದಲು ಎಲ್ಲಾ iPhone ಮಾದರಿಗಳಿಗೆ ವಾರಂಟಿ ಬ್ಯಾಟರಿ ಸೇವಾ ಶುಲ್ಕವನ್ನು $20 ರಷ್ಟು ಹೆಚ್ಚಿಸಲಾಗುತ್ತದೆ. ಪ್ರಸ್ತುತ, ಆಪಲ್ ಕಂಪನಿಯ ವೆಬ್‌ಸೈಟ್‌ನಲ್ಲಿನ ಅಂದಾಜು ಕ್ಯಾಲ್ಕುಲೇಟರ್ ಪ್ರಕಾರ, ಹೆಚ್ಚಿನ ಐಫೋನ್ ಮಾದರಿಗಳಲ್ಲಿ ಬ್ಯಾಟರಿ ಬದಲಿಗಾಗಿ $69 ಶುಲ್ಕ ವಿಧಿಸುತ್ತದೆ. ತಮ್ಮ ಸಾಧನಗಳಿಗೆ AppleCare ಅಥವಾ AppleCare+ ಯೋಜನೆಯನ್ನು ಹೊಂದಿರದ ಗ್ರಾಹಕರು ಬೆಲೆ ಏರಿಕೆಯಿಂದ ಪ್ರಭಾವಿತರಾಗುವ ಸಾಧ್ಯತೆಯಿದೆ. ಆದಾಗ್ಯೂ, AppleCare+ ಯೋಜನೆಯನ್ನು ಹೊಂದಿರುವ ಗ್ರಾಹಕರು ತಮ್ಮ ಬ್ಯಾಟರಿಯ ಕೆಪಾಸಿಟಿ ಶೇಕಡಾ 80 ಕ್ಕಿಂತ ಕಡಿಮೆಯಾದರೆ, ಬ್ಯಾಟರಿ ಬದಲಿಗಾಗಿ ಏನನ್ನೂ ಪಾವತಿಸುವಂತಿಲ್ಲ. ಏತನ್ಮಧ್ಯೆ, ಟೆಕ್ ದೈತ್ಯ 11.1-ಇಂಚಿನ ಮತ್ತು 13-ಇಂಚಿನ OLED ಐಪ್ಯಾಡ್ ಪ್ರೊ ಮಾದರಿಗಳಲ್ಲಿ…
ಮಂಗಳೂರು: ವಿಜಯಪುರ ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ಅಗಲಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ವಿಜಯಪುರದ ಜೀವಂತ ದೇವರು ಎಂದೇ ಪ್ರಸಿದ್ಧರಾದವರು. ಅವರ ಅಗಲುವಿಕೆಯು ನಾಡಿಗೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿನ ಅವರ ಅಪಾರ ಭಕ್ತಸಮೂಹಕ್ಕೆ ಆಘಾತವನ್ನು ಉಂಟು ಮಾಡಿದೆ ಎಂದರು.ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಅತ್ಯಂತ ಸರಳ ಸಜ್ಜನಿಕೆಯ ಸಾಕಾರ ಮೂರ್ತಿ, ನನ್ನದು-ತನ್ನದೆಂಬ ಮಮಕಾರ ತೊರೆದ ಮಹಾಪುರುಷರೇ ಶ್ರೀ ಸಿದ್ದೇಶ್ವರ ಸ್ವಾಮಿಗಳವರು, ಇವರು ಸಂತರಷ್ಟೇ ಅಲ್ಲ ಜ್ಞಾನೋಪಾಸಕರು ಕೂಡ ಆಗಿದ್ದರು. ಆಧ್ಯಾತ್ಮದ ಬಗ್ಗೆ ತುಂಬ ಆಳವಾದ ಅಧ್ಯಯನ ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭಾವಿಗಳೂ ಮಧುರ ಸ್ವಭಾವದವರೂ ಆಗಿದ್ದು ಕನ್ನಡ, ಸಂಸ್ಕೃತ, ಇಂಗ್ಲಿಷ್, ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ನಿಷ್ಟಾಂತರಾಗಿದ್ದರು. ಒಬ್ಬ ಜ್ಞಾನಯೋಗಿಗಳ ರೂಪದಲ್ಲಿ ಅವರು ಮುಂದೆಯೂ ನಮ್ಮೊಂದಿಗೆ ಇರುತ್ತಾರೆ ಎಂದರು. https://kannadanewsnow.com/kannada/blind-mentally-retarded-children-mourn-the-demise-of-siddeshwara-sri-at-hole-alur/