Subscribe to Updates
Get the latest creative news from FooBar about art, design and business.
Author: KNN IT TEAM
ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನಕ್ಕಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ. https://kannadanewsnow.com/kannada/bigg-news-here-is-the-list-of-state-general-holidays-for-the-year-2023-holiday-list-2023/ ಆಸಕ್ತ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಂದ ಅಥವಾ ಸೊರಬ ತೋಟಗಾರಿಕೆ ಇಲಾಖೆಯಿಂದ ಜ.02 ರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜ.25ರೊಳಗಾಗಿ ಸಲ್ಲಿಸುವಂತೆ ಸೊರಬ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/5-dead-2-injured-after-speeding-car-collides-with-tree-in-haryanas-sirsa/
ಬೆಂಗಳೂರು : 2023 ರ ಹೊಸ ವರ್ಷ ಆರಂಭವಾಗಿದ್ದು, 2023 ರ ಸಾಲಿನಲ್ಲಿ ಈಗಾಗಲೇ ರಾಜ್ಯ ಸರ್ಕಾರದಿಂದ ( Karnataka Government ) 2023ನೇ ಸಾಲಿಗೆ ಮಂಜೂರು ಮಾಡಬಹುದಾದಂತ ಸಾರ್ವತ್ರಿಕ ರಜಾ ದಿನಗಳ ( Public Holiday ) ಪಟ್ಟಿ, ಪರಿಮಿತ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದಲ್ಲದೇ 2023ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತ ಪರಿಮಿತ ರಜಾ ದಿನಗಳ ಪಟ್ಟಿಯನ್ನು ಕೂಡ ಪ್ರಕಟಿಸಲಾಗಿದೆ. 2023ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಈ ಕೆಳಗಿನಂತಿದೆ. ಸಾರ್ವತ್ರಿಕ ರಜಾ ದಿನಗಳ ಪಟ್ಟಿ ದಿನಾಂಕ 26-01-2023 – ಗುರುವಾರ, ಗಣರಾಜ್ಯೋತ್ಸವ ದಿನಾಂಕ 18-02-2023 – ಶನಿವಾರ, ಮಹಾ ಶಿವರಾತ್ರಿ ದಿನಾಂಕ 22-03-2023- ಬುಧವಾರ, ಯುಗಾದಿ ಹಬ್ಬ ದಿನಾಂಕ 03-04-2023- ಸೋಮವಾರ, ಮಹಾವೀರ ಜಯಂತಿ ದಿನಾಂಕ 07-04-2023- ಶುಕ್ರವಾರ, ಗುಡ್ ಪ್ರೈಡೆ ದಿನಾಂಕ 14-04-2023- ಶುಕ್ರವಾರ – ಡಾ.ಬಿಆರ್ ಅಂಬೇಡ್ಕರ್ ಜಯಂತಿ ದಿನಾಂಕ 01-05-2023 – ಸೋಮವಾರ, ಕಾರ್ಮಿಕ ದಿನಾಚರಣೆ…
ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಅನುಷ್ಠಾನಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ರಾಜ್ಯ ಸರ್ಕಾರ ಹೊಸ ನಿಯಮ ರೂಪಿಸಲು ಸಜ್ಜಾಗಿದ್ದು, ಇನ್ಮುಂದೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ. ಮಕ್ಕಳ ಪ್ರಾಥಮಿಕ ಹಂತದ ಕಲಿಕೆಗೆ ಗುಣಮಟ್ಟ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅರ್ಹತೆ ನಿಗದಿಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರ ಹುದ್ದೆಗಳಿಗೆ ಪಿಯುಸಿ, ಎಸ್ ಎಸ್ ಎಲ್ ಸಿ ಕಡ್ಡಾಯಗೊಳಿಸುತ್ತಿದೆ. ಜೊತೆಗೆ ಸರಕಾರದ ಅಂಗೀಕೃತ ಸಂಸ್ಥೆಗಳಲ್ಲಿ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದ ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ, ಡಿಪ್ಲೋಮಾ ಇನ್ ನ್ಯೂಟ್ರೀಷಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್ ಸೇರಿದಂತೆ ಇನ್ನಿತರೆ ಶೈಕ್ಷಣಿಕ ತರಬೇತಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಹೊಸ ಕಾರ್ಯಕರ್ತೆಯರ ಆಯ್ಕೆ ವೇಳೆ ಅಂಗನವಾಡಿ ಚಟುವಟಿಕೆ ಸಂಬಂಧಿತ ಶೈಕ್ಷಣಿಕ ಕೋರ್ಸ್ ಪೂರೈಸಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಈ ಹಿಂದೆ ಕಾರ್ಯಕರ್ತೆಯರ ಹುದ್ದೆಗೆ ಎಸ್ ಎಸ್ ಎಲ್ ಸಿ, ಸಹಾಯಕಿಯರಿಗೆ 7ನೇ ತರಗತಿ ಮಾನದಂಡವಿತ್ತು. https://kannadanewsnow.com/kannada/5-dead-2-injured-after-speeding-car-collides-with-tree-in-haryanas-sirsa/
BIG NEWS: ಹರಿಯಾಣದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ಸಾವು | 5 dead in car accident
ಹರಿಯಾಣ: ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ ಏಳು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಚಾಲಕ ಸೇರಿ 2 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ. ಸಂತ್ರಸ್ತರು ಸಿರ್ಸಾದ ಖರಿಯನ್ ಹಳ್ಳಿಯಲ್ಲಿರುವ ಡೇರಾ ಬಾಬಾ ಮುಂಗಾನಾಥ್‌ಗೆ ಭೇಟಿ ನೀಡಿದ ನಂತರ ಮೆಹ್ನಾ ಖೇರಾಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರ್ಸಾ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳು ಸಹ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಬ್ ಇನ್ಸ್‌ಪೆಕ್ಟರ್ ಕಿಶೋರಿ ಲಾಲ್ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದೆ. https://kannadanewsnow.com/kannada/siddheshwar-swami-of-jnanayogashrama-dies-pm-modi-others-condole-death-of-seer/ https://kannadanewsnow.com/kannada/job-alert-nrega-scheme-applications-invited-for-various-posts/ https://kannadanewsnow.com/kannada/siddheshwar-swami-of-jnanayogashrama-dies-pm-modi-others-condole-death-of-seer/ https://kannadanewsnow.com/kannada/job-alert-nrega-scheme-applications-invited-for-various-posts/
ಕೊಪ್ಪಳ : ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ನೆರವು ನೀಡಲು ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಹೊರ ಗುತ್ತಿಗೆ ಅಧಾರದಲ್ಲಿ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸೇವೆಯನ್ನು ಪಡೆಯಲು ತಾಂತ್ರಿಕ ಸಹಾಯಕರು ಹುದ್ದೆಗಳಾದ ಕೃಷಿ-05 ಅರಣ್ಯ 07 ಮತ್ತು ರೇಷ್ಮೆ 01 ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಎನ್‌ಐಸಿ ಜಿಲ್ಲಾ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು 2023ರ ಜನವರಿ 09 ಕೊನೆಯ ದಿನವಾಗಿದ್ದು, ಹುದ್ದೆಗಳ ವಿವರ ವಿದ್ಯಾರ್ಹತ ಹಾಗೂ ಅನುಭವ, ವಯೋಮಿತಿ, ಮಾಸಿಕ ಸಂಭಾವನ, ಹೆಚ್ಚಿನ ವಿವರಗಳಿಗಾಗಿ ಎನ್‌ಐಸಿ ಜಿಲ್ಲಾ ವೆಬ್‌ಸೈಟ್ www.koppal.nic.in ನ್ನು ಅಥವಾ ಜಿ.ಪಂ. ಕಾರ್ಯಾಲಯಕ್ಕೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗೆ…
ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಅಪರೂಪದ ಸಂತ, ನಡೆದಾಡುವ ದೇವರು, ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಸಿದ್ಧೇಶ್ವರ ಸ್ವಾಮೀಜಿಗಳು ಆಪ್ತರೊಂದಿಗೆ ಚರ್ಚೆ ನಡೆಸಿ ವಿಲ್ ಬರೆದಿಟ್ಟಿದ್ದಾರೆ. ಕಾಯವನ್ನು ಮಣ್ಣು ಮಾಡುವಂತಿಲ್ಲ, ಅಗ್ನಿ ಸ್ಪರ್ಶ ಮಾಡಬೇಕು. ಚಿತಾಭಸ್ಮವನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜಿಸಿ ಬೇಕು. ಶ್ರಾದ್ಧ ಕರ್ಮ ಕರ್ಮಗಳನ್ನು ಮಾಡುವಂತಿಲ್ಲ. ಯಾವುದೇ ರೀತಿಯ ಸ್ಮಾರಕಗಳನ್ನು ನಿರ್ಮಿಸಬೇಡಿ ಅಂತ ವಿಲ್ ನಲ್ಲಿ ತಿಳಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ `ಅಂತಿಮ ಅಭಿವಂದನ ಪತ್ರ’
ನವದೆಹಲಿ: ಪಾಂಡಿತ್ಯಪೂರ್ಣ ಪ್ರವಚನ ಮತ್ತು ಶಕ್ತಿಯುತ ವಾಗ್ಮಿಗಳಿಗೆ ಹೆಸರಾಗಿದ್ದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿಗಳು ವಿಜಯಪುರದಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ. “ನಡೆದಾಡುವ ದೇವರು” ಎಂದು ಕರೆಯಲ್ಪಡುತ್ತಿದ್ದ ಸಿದ್ಧೇಶ್ವರ ಶ್ರೀಗಳು ಕೆಲವು ಸಮಯದಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಿರಿಯ ನಾಯಕರು ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ, ʻಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು. ಅವರು ಇತರರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿʼ ಎಂದು ಅವರು ಟ್ವೀಟ್ ಮಾಡಿದ್ದಾರೆ. Paramapujya Sri Siddheshwara Swami Ji will be remembered for his outstanding service to society. He worked tirelessly for the betterment of others and was also respected…
ನವದೆಹಲಿ: ಶಿರಾಡಿ ಘಾಟ್‌ನಲ್ಲಿ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಸಂಸದ ನಳೀನ್ ಕುಮಾರ್ ಕಟೀಲ್ ಟ್ವಿಟ್ ಮಾಡಿದ್ದು ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾರನಹಳ್ಳಿ-ಅಡ್ಡಹೊಳೆ(ಶಿರಾಡಿ ಘಾಟ್) ಭಾಗದ ಚತುಷ್ಪತ ರಸ್ತೆ ಕಾಮಗಾರಿಗೆ 1976 ಕೋಟಿ ರೂ. ಮೊತ್ತದ ಬಿಡ್ ಆಹ್ವಾನಿಸಿದೆ. ಶಿರಾಡಿ ಘಾಟ್‌ನಲ್ಲಿ 15,000 ಕೋಟಿ ಮೊತ್ತದ 23 ಕಿ.ಮೀ ಸುರಂಗ ಮಾರ್ಗದ ವಿಸ್ತೃತ ಯೋಜನಾ ವರದಿಗೆ ಆದೇಶಿಸಿದೆ ಅಂತ ಹೇಳಿದ್ದಾರೆ. ಇದೇ ವೇಳೇ ಅವರು ಇದರ ಜತೆಗೆ, ಬೆಂಗಳೂರು-ಮಂಗಳೂರು ಹೆದ್ದಾರಿ ಭಾಗವಾದ ಸಕಲೇಶಪುರದಿಂದ ಮಾರನಹಳ್ಳಿವರೆಗಿನ ರಸ್ತೆ ಭಾಗದ ದುರಸ್ತಿಗೂ ನಿತಿನ್ ಗಡ್ಕರಿ ಅವರು ಆದೇಶಿಸಿದ್ದಾರೆ. ಈ ಎಲ್ಲ ಕಾಮಗಾರಿಗಳಿಂದ ಬೆಂಗಳೂರು-ಮಂಗಳೂರು ರಸ್ತೆ ಸಂಚಾರ ಆರಾಮದಾಯಕವಾಗಲಿದೆ ಅಂತ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚಾರದ ಅವಧಿ ಕಡಿಮೆಯಾಗಿ, ಪ್ರಯಾಣ ಸುಗಮವಾಗಲಿದೆ. ಇದಕ್ಕೆ ಅನುವು ಮಾಡಿಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ.…
ಬೆಂಗಳೂರು : ಪೌರ ಸಂಸ್ಥೆಗಳಾಗಿ ಮೇಲ್ದರ್ಜೇಗಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವು ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳು ಪೂರ್ವದಲ್ಲಿ ತೆರೆದಿರುವ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಹಾಗೂ ಸ್ಥಳೀಯ ಯೋಜನಾ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ತರುವಾಯ ಈ ಹಿಂದ ಗ್ರಾಮ ಪಂಚಾಯಿತಿಗಳು, ಇ-ಸ್ವತ್ತು ತಂತ್ರಾಂಶದಡಿಯಲ್ಲಿ ನಿರ್ವಹಿಸಿದ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ದಾಖಲಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ (ಬಿ.ಬಿ.ಎಂ.ಪಿ. ಹೊರತುಪಡಿಸಿ) ನಿರ್ದೇಶನ ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇ-ಸ್ವತ್ತು ಮತ್ತು ನಗರ ಪ್ರದೇಶಗಳಲ್ಲಿ ಇ-ಖಾತಾ ನೀಡುವ ಕುರಿತು ಪರಾಮರ್ಶಿಸಲು ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿಯ ಸಭೆಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಉಲ್ಲೇಖ (3) ರ ಸರ್ಕಾರದ ದಿನಾಂಕ 22.03.2017 ರ ಸುತ್ತೋಲೆ ಹೊರಡಿಸುವ ಪೂರ್ವದಲ್ಲಿ ತೆರೆದಿರುವ ಖಾತಾಗಳನ್ನು ಇ-ಆಸ್ತಿ ತಂತ್ರಾಂಶದಡಿ…
ಜೈಪುರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಜಸ್ಥಾನದ ರಾಜಭವನದಲ್ಲಿ ಹೊಸದಾಗಿ ನಿರ್ಮಿಸಲಾದ ಸಂವಿಧಾನ ಉದ್ಯಾನ (Constitution Garden) ಮತ್ತು ಅದಕ್ಕೆ ಸಂಬಂಧಿಸಿದ ಸೌಂದರ್ಯೀಕರಣ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಇದೇ ಸಂರ್ಭದಲ್ಲಿ ಮುರ್ಮು ಅವರು ಕಥೋಡಿ ಮತ್ತು ಸಹರಿಯಾ ಬುಡಕಟ್ಟು ಜನಾಂಗದವರೊಂದಿಗೆ ಸಂವಾದ ನಡೆಸಲಿದ್ದಾರೆ. ಸಂವಿಧಾನ ಉದ್ಯಾನವನವನ್ನು ಉದ್ಘಾಟಿಸುವ ಮುನ್ನ ಮುರ್ಮು ಅವರು ಇಂದು ಬೆಳಗ್ಗೆ 11.20ಕ್ಕೆ ರಾಜಭವನದಲ್ಲಿ ಸ್ಥಾಪಿಸಲಾಗಿರುವ ಕುದುರೆ ಚೇತಕ್‌ನೊಂದಿಗೆ ಮಯೂರ್ ಸ್ತಂಭ, ಧ್ವಜ ಸ್ತಂಭ, ಗಾಂಧಿ ಪ್ರತಿಮೆ ಮತ್ತು ವಿಶ್ರಾಂತಿ ಭಂಗಿಯಲ್ಲಿರುವ ಮಹಾರಾಣಾ ಪ್ರತಾಪ್ ಅವರ ಪ್ರತಿಮೆಯನ್ನು ವೀಕ್ಷಿಸಲಿದ್ದಾರೆ. ಇದಾದ ಬಳಿಕ ಸಂವಿಧಾನ ಉದ್ಯಾನವನವನ್ನು ಉದ್ಘಾಟಿಸಲಿದ್ದಾರೆ. ಈ ಉದ್ಯಾನವನವು ರಾಜಭವನದಲ್ಲಿ ನಿರ್ಮಿಸಲಾದ ದೇಶದ ಏಕೈಕ ಸಂವಿಧಾನ ಉದ್ಯಾನವನವಾಗಿದೆ. ಉದ್ಯಾನದ ವಿಶೇಷತೆ? ರಾಜಸ್ಥಾನದ ರಾಜಭವನದಲ್ಲಿ 9 ಕೋಟಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಸಂವಿಧಾನ ಉದ್ಯಾನವನ ನಿರ್ಮಿಸಲಾಗಿದೆ. ಸಂವಿಧಾನ ರಚನೆಗೆ ಕಾರಣಕರ್ತರಾದ ವ್ಯಕ್ತಿಗಳ ಪ್ರತಿಮೆಗಳನ್ನು ಇಲ್ಲಿ ಸ್ಥಾಪಿಸಲಾಗಿದೆ. ಇವುಗಳಲ್ಲಿ ಅವರ ಕೊಡುಗೆ, ರಚನೆ ಮತ್ತು ಸಂವಿಧಾನದ ಮೌಲ್ಯಗಳನ್ನು ಬಂಡೆಗಳ ಮೇಲೆ…