Author: KNN IT TEAM

ಬೆಳಗಾವಿ : ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು  ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು. 2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.  ಪ್ರಕರಣ…

Read More

ಕೆಎನ್ಎನ್ಡಿಜಿಟಲ್ ಡೆಸ್ಕ್ : 2021ರಲ್ಲಿ ದಾಖಲಾದ ಒಟ್ಟು ರಸ್ತೆ ಅಪಘಾತಗಳಲ್ಲಿ ಸುಮಾರು 40% ಆ ಸಮಯದ ಅವಧಿಯಲ್ಲಿ ಸಂಭವಿಸುತ್ತಿದ್ದು, ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ ಭಾರತೀಯ ರಸ್ತೆಗಳಲ್ಲಿ ಅತ್ಯಂತ ಅಪಾಯಕಾರಿ ಮತ್ತು ಮಾರಣಾಂತಿಕ ಎಂದು ಸಾಬೀತಾಗಿದೆ. ಸರ್ಕಾರದ ಅಂಕಿ-ಅಂಶಗಳಿಂದ ಈ ಸತ್ಯ ಬಹಿರಂಗವಾಗಿದೆ. ರಸ್ತೆಗಳಲ್ಲಿ ಬೆಳಿಗ್ಗೆ 12 ರಿಂದ ಬೆಳಿಗ್ಗೆ 6 ರವರೆಗೆ ಸುರಕ್ಷಿತ ಸಮಯ.! ಭಾರತೀಯ ರಸ್ತೆಗಳಲ್ಲಿ ಸುರಕ್ಷಿತ ಸಮಯಕ್ಕೆ ಸಂಬಂಧಿಸಿದಂತೆ, ಇದು ಬೆಳಿಗ್ಗೆ 12 ರಿಂದ 6 ರವರೆಗೆ ಮತ್ತು 10% ಕ್ಕಿಂತ ಕಡಿಮೆ ಅಪಘಾತಗಳೊಂದಿಗೆ ಡೇಟಾ ತೋರಿಸುತ್ತದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇತ್ತೀಚೆಗೆ ‘ಭಾರತದಲ್ಲಿ ರಸ್ತೆ ಅಪಘಾತಗಳು – 2021’ ವಾರ್ಷಿಕ ವರದಿಯನ್ನ ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, 2021ರಲ್ಲಿ ದಾಖಲಾದ 4.12 ಲಕ್ಷ ಅಪಘಾತಗಳಲ್ಲಿ 1.58 ಲಕ್ಷಕ್ಕೂ ಹೆಚ್ಚು ಅಪಘಾತಗಳು ಮಧ್ಯಾಹ್ನ 3 ರಿಂದ ರಾತ್ರಿ 9 ರವರೆಗೆ ವರದಿಯಾಗಿವೆ. ಸಂಜೆ 6 ರಿಂದ ರಾತ್ರಿ 9 ರವರೆಗೆ…

Read More

ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಅಪರೂಪದ ಸಂತ, ನಡೆದಾಡುವ ದೇವರು, ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಇತ್ತೀಚೆಗೆ ಏರುಪೇರಾಗಿತ್ತು , ನಂತರ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ವಿಧಿವಶರಾಗಿದ್ದಾರೆ. ಜನನ ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ವಿದ್ಯಾಭ್ಯಾಸ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ…

Read More

ಕೊಪ್ಪಳ : ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ಅರ್ಹ ಹೊಸ ಫಲಾನುಭವಿಗಳು ಈ ಯೋಜನೆಯಡಿ ಇ-ಕೆವೈಸಿ ಹಾಗೂ ನೋಂದಣಿ ಮಾಡಿಸಿಕೊಳ್ಳುವಂತೆ ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಿ.ಎಂ.ಕಿಸಾನ್ ಯೋಜನೆಯಡಿ ಲಾಭ ಪಡೆಯದೆ ವಂಚಿತರಿರುವ ನೋಂದಣಿಯಾಗದೆ ಬಾಕಿ ಉಳಿದ ಅರ್ಹ ಫಲಾನುಭವಿಗಳ ನೋಂದಣಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಜಂಟಿ ಖಾತೆದಾರರು, ಪೌತಿ ಕಾರಣದಿಂದಾಗಿ ಖಾತೆ ವರ್ಗಾವಣೆಯಾಗಿರುವ ಫಲಾನುಭವಿಗಳು, ಒಂದೇ ಕುಟುಂಬದ ಸದಸ್ಯರೆಂದು ಭೂಹಿಡುವಳಿ ಹೊಂದಿರುವ ವಯಸ್ಕ ಮಕ್ಕಳು, ಹಿರಿಯ ನಾಗರೀಕರು ಹಾಗೂ ಮಾಹಿತಿಯ ಕೊರತೆಯಿಂದ ಈ ಎಲ್ಲಾ ಅರ್ಹ ಕಾರಣಗಳಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತ ಕುಟುಂಬಗಳು ಹಾಗೂ ಇತರೆ ಬಾಕಿ ಉಳಿದಿರುವ ಅರ್ಹ ಫಲಾನುಭವಿಗಳ ನೊಂದಣಿ ಮಾಡಿಸಲು ಹಾಗೂ ಇ-ಕೆವೈಸಿ ಮಾಡಿಸುವಂತೆ ರೈತ ಬಾಂಧವರಿಗೆ ಈ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂದಿಸಿದ ರೈತ ಸಮಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪಂರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/bigg-news-train-passengers-noticed-hubballi-bengaluru-trains-to-be-disrupted-from-today/ https://kannadanewsnow.com/kannada/difficult-to-accept-widow-with-2-kids-was-raped-repeatedly-in-populated-locality-bombay-hc/

Read More

ಬೆಂಗಳೂರು : ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯು ಮಹತ್ವದ ಮಾಹಿತಿ ನೀಡಿದ್ದು, ಇಂದಿನಿಂದ ಜನವರಿ 11 ರವರೆಗೆ ಹುಬ್ಬಳ್ಳಿ-ಬೆಂಗಳೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. https://kannadanewsnow.com/kannada/difficult-to-accept-widow-with-2-kids-was-raped-repeatedly-in-populated-locality-bombay-hc/ ಹರಿಹರ-ಹುಬ್ಬಳ್ಳಿ ರೈಲು ಮಾರ್ಗದಲ್ಲಿ ಜೋಡಿ ಹಳಿ ಕಾಮಗಾರಿ ಹಿನ್ನೆಲೆಯಲ್ಲಿ ಜನವರಿ 3 ರ ಇಂದಿನಿಂದ 11 ರವರೆಗೂ ಬೆಂಗಳೂರು-ಹುಬ್ಬಳ್ಳಿ ಜನಶತಾಬ್ದಿ ರೈಲು ಸೇರಿ ವಿವಿಧ ರೈಲುಗಳ ಸಂಚಾರದಲ್ಲಿ ವ್ಯತ್ಯವಾಗಲಿದೆ. ರಾಣೆಬೆನ್ನೂರಿನ ದೇವರಗುಡ್ಡ ನಿಲ್ದಾಣದ ಬಳಿ ಜೋಡಿ ಹಳಿ ಎಂಜಿನಿಯರಿಂಗ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಚಿತ್ರದುರ್ಗ-ಹುಬ್ಬಳ್ಳಿ ಎಕ್ಸ್ ಪ್ರೆಸ್, ಅರಸೀಕೆರೆ-ಹುಬ್ಬಳ್ಳಿ ಡೈಲಿ ಎಕ್ಸ್ ಪ್ರೆಸ್ ರೈಲುಗಳು ಜನವರಿ 5 ಮತ್ತು 9 ರಿಂದ 11 ರವರೆಗೂ, ವಿಜಯಪುರ-ಮಂಗಳೂರು ಎಕ್ಸ್ ಪ್ರೆಸ್ ಜನವರಿ 9 ಮತ್ತು 10 ಕ್ಕೆ, ಮಂಗಳೂರು-ವಿಜಯಪುರ ಎಕ್ಸ್ ಪ್ರೆಸ್ ಸಂಚಾರ ಜನವರಿ 10 ಮತ್ತು 11 ರಂದು ರದ್ದಾಗಿದೆ. ಇನ್ನು ಬೆಂಗಳೂರು-ಹುಬ್ಬಳ್ಳಿ ಜನಶತಾಬ್ದಿ ರೈಲು ಜ.4,10 ಹಾಗೂ 11 ರಂದು ಬೆಂಗಳೂರು-ಹರಿಹರ ನಿಲ್ದಾಣಗಳ ನಡುವೆ, ಜನವರಿ 5…

Read More

ಮುಂಬೈ: ದಟ್ಟ ಜನನಿಬಿಡ ಪ್ರದೇಶದಲ್ಲಿ ಇಬ್ಬರು ಮಕ್ಕಳಿರುವ ವಿಧವೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗುವುದನ್ನು ಒಪ್ಪಿಕೊಳ್ಳುವುದು ಕಷ್ಟ ಎಂದು ಗಮನಿಸಿದ ಬಾಂಬೆ ಹೈಕೋರ್ಟ್‌ನ ಔರಂಗಾಬಾದ್ ಪೀಠವು ವ್ಯಕ್ತಿಯೊಬ್ಬನ ವಿರುದ್ಧದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಮತ್ತು ಅಭಯ್ ವಾಘವಾಸೆ ಅವರ ವಿಭಾಗೀಯ ಪೀಠವು ಪರ್ಭಾನಿ ನಿವಾಸಿಯ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸಿತು. ʻವಾಸ್ತವವಾಗಿ, ಅರ್ಜಿದಾರ ಮತ್ತು ಆರೋಪಿಗಳ ನಡುವೆ ದೀರ್ಘಕಾಲದ ಪರಿಚಯವಿತ್ತು. ದಟ್ಟವಾದ ಜನನಿಬಿಡ ಪ್ರದೇಶದಲ್ಲಿ ವಾಸಿಸುವ ಇಬ್ಬರು ಮಕ್ಕಳೊಂದಿಗೆ ವಿಧವೆಯೊಬ್ಬಳು ಒಮ್ಮೆ ಅಲ್ಲ, ಹಲವಾರು ಸಂದರ್ಭಗಳಲ್ಲಿ ಅತ್ಯಾಚಾರಕ್ಕೊಳಗಾಗಬಹುದು ಎಂದು ಒಪ್ಪಿಕೊಳ್ಳುವುದು ಕಷ್ಟʼ ಎಂದು ಪೀಠ ತಿಳಿಸಿದೆ. ವಿಧವೆಯೊಬ್ಬರ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪರ್ಭಾನಿಯ ನವ ಮೊಂಧಾ ಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ವ್ಯಕ್ತಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಇನ್ನೂ, ವ್ಯಕ್ತಿ ಹಾಗೂ ಅರ್ಜಿದಾರರಿಗೆ ಮೊದಲಿಂದಲೂ ಪರಿಚಯವಿತ್ತು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.…

Read More

ನವದೆಹಲಿ : ದೇಶದ ಕೋಟ್ಯಂತರ ರೈತರಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಂಬಂಧಿಸಿದಂತೆ ದೊಡ್ಡ ಅಪ್ಡೇಟ್ ಹೊರಬಿದ್ದಿದೆ. ಜನವರಿ ಮೊದಲ ವಾರದಲ್ಲಿಯೇ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಈ ಹಣ ವರ್ಗಾವಣೆಯಾಗಲಿದೆ. ಇದುವರೆಗೆ 12 ಕಂತುಗಳ ಹಣವನ್ನ ಕೇಂದ್ರ ಸರ್ಕಾರ ವರ್ಗಾಯಿಸಿದೆ. ಕೋಟಿಗಟ್ಟಲೆ ರೈತರು.! ಇಲ್ಲಿಯವರೆಗೆ 8.42 ಕೋಟಿಗೂ ಹೆಚ್ಚು ರೈತರು 12 ಕಂತುಗಳ ಲಾಭ ಪಡೆದಿದ್ದಾರೆ. ಪ್ರಸ್ತುತ, ದೇಶದಾದ್ಯಂತ 12 ಕೋಟಿಗೂ ಹೆಚ್ಚು ರೈತರು ಸರ್ಕಾರದ ಈ ಯೋಜನೆಯ ಪ್ರಯೋಜನವನ್ನ ಪಡೆಯುತ್ತಿದ್ದಾರೆ. ಕಳೆದ ವರ್ಷ ಜನವರಿ 1ರಂದು ಹಣ ವರ್ಗಾವಣೆ.! ಹಿಂದಿನ ಮಾದರಿಯನ್ನ ನೋಡಿದಾಗ, ಜನವರಿ 1, 2022 ರಂದು, ಪ್ರಧಾನಿ ಮೋದಿಯವರು ಮಧ್ಯಾಹ್ನ 12:30 ಕ್ಕೆ ರೈತರ ಖಾತೆಗೆ ಹಣವನ್ನು ವರ್ಗಾಯಿಸಿದರು. ಕಳೆದ ವರ್ಷ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಇದರ ಅಡಿಯಲ್ಲಿ ಸುಮಾರು 10 ಕೋಟಿ ರೈತರಿಗೆ 20,000 ಕೋಟಿ ರೂಪಾಯಿ ನೀಡಿದರು.…

Read More

ಬೆಂಗಳೂರು: ಜನವರಿ 23ರಿಂದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭಗೊಳ್ಳಲಿವೆ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, 2023ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಮತ್ತು ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ಜನವರಿ 23 ರಿಂದ ಫೆಬ್ರವರಿ 4ರವರೆಗೆ ನಡೆಯಲಿದೆ ಎಂದಿದೆ. ಇನ್ನೂ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಫೆಬ್ರವರಿ 6ರಿಂದ 28ರವರೆಗೆ ನಡೆಯಲಿವೆ. ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 20 ರಿಂದ ಮಾರ್ಚ್ 4ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಾಗಿ ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸೂಚಿಸಿದೆ. ಪ್ರಾಯೋಗಿ ಪರೀಕ್ಷೆಗಳನ್ನು ಪ್ರತಿದಿನ ಬೆಳಿಗ್ಗೆ 9 ರಿಂದ 11 ಗಂಟೆ, ಮಧ್ಯಾಹ್ನ 12…

Read More

ವಿಜಯಪುರ : ಅನಾರೋಗ್ಯದಿಂದ ಬಳಲುತ್ತಿದ್ದ ಅಪರೂಪದ ಸಂತ, ನಡೆದಾಡುವ ದೇವರು, ಖ್ಯಾತ ಪ್ರವಚನಕಾರ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ (82) ನಿನ್ನೆ ಸಂಜೆ 6.05 ಕ್ಕೆ ಲಿಂಗೈಕ್ಯರಾಗಿದ್ದು, ಸಿದ್ದೇಶ್ವರ ಶ್ರೀಗಳ ಆಶಯದಂತೆ ಇಂದು ಸಂಜೆ ಜ್ಞಾನಯೋಗಾಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಇತ್ತೀಚೆಗೆ ಏರುಪೇರಾಗಿತ್ತು , ನಂತರ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ವಿಧಿವಶರಾಗಿದ್ದಾರೆ. ಜನನ ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 24 ರಂದು ಜನಿಸಿದರು. ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು. ವಿದ್ಯಾಭ್ಯಾಸ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ…

Read More

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಇಂದು (ಜನವರಿ 3) 108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (Indian Science Congress-ISC) ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಪಿಎಂ ಕಚೇರಿ ತಿಳಿಸಿದೆ. 108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮವು ರಾಷ್ಟ್ರಸಂತ ತುಕಾಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯ (ಆರ್‌ಟಿಎಂಎನ್‌ಯು) ನಡೆಯಲಿದೆ. ಈ ಬಾರಿ ಮಹಿಳಾ ಸಬಲೀಕರಣದೊಂದಿಗೆ ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಕೇಂದ್ರ ವಿಷಯದ ಕುರಿತಂತೆ ಚರ್ಚೆ ನಡೆಯಲಿದೆ. ಬೋಧನೆ, ಸಂಶೋಧನೆ ಮತ್ತು ಉದ್ಯಮದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವ ಮಾರ್ಗಗಳ ಕುರಿತಂತೆ ಚರ್ಚೆಗಳು ನಡೆಯಲಿವೆ. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್, ಗಣಿತ ಕ್ಷೇತ್ರಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸುವ ಮಾರ್ಗಗಳು ಮತ್ತು ಶಿಕ್ಷಣ, ಸಂಶೋಧನಾ ಅವಕಾಶಗಳು ಹಾಗೂ ಆರ್ಥಿಕ ಭಾಗವಹಿಸುವಿಕೆಯಲ್ಲಿ ಸಮಾನ ಸ್ಥಾನಮಾನ ಕಲ್ಪಿಸುವುದು ಕಾರ್ಯಕ್ರಮದ ಉದ್ದೇಶವಾಗಿರುತ್ತದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಹಿಳೆಯರ ಕೊಡುಗೆಯನ್ನು ಪ್ರದರ್ಶಿಸುವ ವಿಶೇಷ ಕಾರ್ಯಕ್ರಮದಲ್ಲಿ…

Read More