Author: kanandanewslive

ಮಂಗಳೂರು : ಪದವಿ ಮುಗಿಸಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್, ನಿಮಗೆ ನವಮಂಗಳೂರು ಬಂದರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ದರೆ ಈಗಲೇ ಅರ್ಜಿ ಸಲ್ಲಿಸಬಹುದು. ನವಮಂಗಳೂರು ಬಂದರು ಟ್ರಸ್ಟ್ ನಲ್ಲಿ 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 30, 2022 ಕೊನೆಯ ದಿನವಾಗಿದ್ದು,. ಆಫ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ನವ ಮಂಗಳೂರು ಬಂದರು ಟ್ರಸ್ಟ್ ತಿಳಿಸಿದೆ, ಆಯ್ಕೆಯಾದವರಿಗೆ 40,000-1,40,000 ರೂಪಾಯಿವರೆಗೂ ಮಾಸಿಕ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವ ಮಂಗಳೂರು ಬಂದರು, ಪ್ರಾಧಿಕಾರ ಪಣಂಬೂರು ಮಂಗಳೂರು -575010 ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆ ದಿನವಾಗಿದೆ. ಲಿಖಿತ, ಸಂದರ್ಶನದ ಮೂಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ನವ ಮಂಗಳೂರು…

Read More

ಬೆಂಗಳೂರು : ಆಡಳಿತ ಯಂತ್ರಕ್ಕೆ  ಮೇಜರ್ ಸರ್ಜರಿ ನಡೆದಿದ್ದು, 5 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ( Karnataka Govt)  ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು 1) ಸುಶ್ಮಾ ಗೋಡ್ಬೋಲೆ, ಸಿಇಒ-ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2) ಜೆ. ಮಂಜುನಾಥ್, ಆಯುಕ್ತರು-ಆಯುಷ್ ಇಲಾಖೆ 3) ಆರುಂಧತಿ ಚಂದ್ರಶೇಖರ್, ಆಯುಕ್ತರು -ಖಜಾನೆ ಇಲಾಖೆ 4) ಡಾ.ಕೆ ನಂದಿನಿದೇವಿ, ಕಾರ್ಯದರ್ಶಿ- ಮಾಹಿತಿ ಆಯೋಗ 5) ಡಾ.ವೈ ನವೀನ್ ಭಟ್,  ಯೋಜನಾ ನಿರ್ದೇಶಕ- ರಾಷ್ಟ್ರೀಯ ಆರೋಗ್ಯ ಮಿಷನ್ ವರದಿ : ರಂಜಿತ್ ಶೃಂಗೇರಿ https://kannadanewsnow.com/kannada/congress-karnataka-tweet-against-bjp-3/ https://kannadanewsnow.com/kannada/mtb-nagagarj-react-to-resigning-of-bjp/

Read More

ಬೆಂಗಳೂರು : ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದರು. ರಾಯಚೂರು ತಾಲೂಕಿನ ಗಾಣದಾಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂಟಿಬಿ ನಾಗರಾಜ್ ನಾನು ಬಿಜೆಪಿ ಬಿಟ್ಟು ಹೋಗುವುದಿಲ್ಲ, ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಎಂಬುದರ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು. ಬಿಜೆಪಿ ವರಿಷ್ಠರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಹೇಳಿದರೇ ಹೊಸಕೋಟೆಯಿಂದ ಸ್ಪರ್ಧಿಸುತ್ತೇನೆ. ಮಗ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದರೆ ಮಗನನ್ನು ಚುನಾವಣೆಗೆ ಸ್ಪರ್ಧಿಸಲು ಬಿಡುತ್ತೇನೆ, ಆದರೆ ನಾನಂತೂ ಬಿಜೆಪಿ ಬಿಟ್ಟು ಹೋಗಲ್ಲ ಎಂದು ಹೇಳಿದರು. https://kannadanewsnow.com/kannada/job-fair-in-mandya-on-dec-14/ https://kannadanewsnow.com/kannada/congress-karnataka-tweet-against-bjp-3/

Read More

ಬೆಂಗಳೂರು : ಭುಗಿಲೆದ್ದಿರುವ ‘ಬೆಳಗಾವಿ ಗಡಿ’ ವಿವಾದ ‘ತ್ರಿಬಲ್ ಇಂಜಿನ್’ ಸರ್ಕಾರದ ಬೃಹನ್ನಾಟಕ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಗಡಿ ವಿವಾದದ ಕುರಿತು ಟ್ವೀಟ್ ನಲ್ಲಿ ಕಿಡಿಕಾರಿದ ಕಾಂಗ್ರೆಸ್ ಭುಗಿಲೆದ್ದಿರುವ ‘ಬೆಳಗಾವಿ ಗಡಿ’ ವಿವಾದ ‘ತ್ರಿಬಲ್ ಇಂಜಿನ್’ ಸರ್ಕಾರದ ಬೃಹನ್ನಾಟಕ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಮಹಾರಾಷ್ಟ್ರದ ಸರ್ಕಾರದೊಂದಿಗೆ ಒಳಒಪ್ಪಂದ ಮಾಡಿಕೊಂಡು ಬಿಜೆಪಿ ಸರ್ಕಾರವೇ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ. ಈಗ ಬುಗಿಲೆದ್ದಿರುವ ಗಡಿ ತಂಟೆಯು ಬಿಜೆಪಿಯ ತ್ರಿಬಲ್ ಇಂಜಿನ್ ಸರ್ಕಾರಗಳು ಪ್ರಾಯೋಜಿಸಿರುವ ಬೃಹನ್ನಾಟಕ. ಇದು ನಾಟಕ ಎನ್ನಲು ಕರ್ನಾಟಕದ ಸಚಿವರ ಮೌನವೇ ಪುಷ್ಟಿ ನೀಡುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ಕಿಡಿಕಾರಿದೆ. https://twitter.com/INCKarnataka/status/1600465647510511617 https://kannadanewsnow.com/kannada/job-fair-in-mandya-on-dec-14/ https://kannadanewsnow.com/kannada/a-stabbing-case-in-gadaga/

Read More

ಮಂಡ್ಯ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 14ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಅಂದಾಜು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು ksdc.recruitment@gmail.comಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08232-295010, 9164443223, 8152882461 ಸಂಪರ್ಕಿಸಬಹುದಾಗಿದೆ. ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. https://kannadanewsnow.com/kannada/chandru-death-due-to-current-shock-in-bangalore/ https://kannadanewsnow.com/kannada/sudhakar-speech-in-bangalore-about-health-care/

Read More

ಬೆಂಗಳೂರು : ಅಪೌಷ್ಟಿಕತೆ ಹಾಗೂ ಅನೀಮಿಯಾ ನಿವಾರಣೆಗಾಗಿ ಆರಂಭಿಕ ಹಂತದಲ್ಲೇ ಮಕ್ಕಳ ಆರೋಗ್ಯ ತಪಾಸಣೆ ಮಾಡುವುದು ಮುಖ್ಯ. ಇದಕ್ಕಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು. ನಗರದ ಖಾಸಗಿ ಹೋಟೆಲ್  ನಲ್ಲಿ ಅಪೌಷ್ಟಿಕತೆ ಮತ್ತು ಅನಿಮೀಯ ಮುಕ್ತ ಕರ್ನಾಟಕ ಕುರಿತ ಕಾರ್ಯಾಗಾರದಲ್ಲಿ ಸಚಿವರು ಮಾತನಾಡಿದರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಒಟ್ಟುಗೂಡಿಸಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಬೇಕು. ನಮ್ಮ ಇಲಾಖೆಯಿಂದ ತಪಾಸಣೆ ನಡೆಸಿ ಗುರಿಗಳನ್ನು ಮುಟ್ಟಿರುವುದನ್ನು ತೋರಿಸುತ್ತೇವೆ. ಆದರೆ ಈ ಬಗ್ಗೆ ನಿಜವಾಗಿಯೂ ಆತ್ಮಾವಲೋಕ ಮಾಡಿಕೊಂಡರೆ ನಾವು ಸಂಪೂರ್ಣವಾಗಿ ತಪಾಸಣೆ ನಡೆಸುತ್ತಿಲ್ಲ ಎಂದೇ ಹೇಳಬೇಕು. ಪಿಎಚ್ಸಿ ವ್ಯಾಪ್ತಿಯಲ್ಲಿ ವೈದ್ಯರು ಶಾಲೆಗಳಿಗೆ ಹೋಗುವುದು ಅಥವಾ ಮಕ್ಕಳೇ ಪಿಎಚ್ಸಿ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಗಂಭೀರ ಕ್ರಮ ವಹಿಸಬೇಕು ಎಂದರು.…

Read More

ಗದಗ: ಗದಗದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ಬೆಳಕಿಗೆ ಬಂದಿದ್ದು, ಹುಡ್ಕೋ ಕಾಲೋನಿಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಹುಡ್ಕೋ ಕಾಲೋನಿಯಲ್ಲಿ ಅವಿನಾಶ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಲವು ದಿನಗಳ ಹಿಂದೆ ಗದಗದಲ್ಲಿ ಮೂವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು. ಈ ಘಟನೆ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಗದಗದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. https://kannadanewsnow.com/kannada/boy-chandru-death-due-to-current-shock/ https://kannadanewsnow.com/kannada/chandru-death-due-to-current-shock-in-bangalore/

Read More

ಬೆಂಗಳೂರು : ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಚಂದ್ರು ಇದೀಗ ಮೃತಪಟ್ಟಿದ್ದಾನೆ. 3 ದಿನಗಳ ಹಿಂದೆ ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಸುಪ್ರೀತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದನು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೋರ್ವ ಬಾಲಕ ಚಂದ್ರು ಕೂಡ ಇಂದು ಮೃತಪಟ್ಟಿದ್ದಾನೆ. ಬೆಂಗಳೂರಿನ ನಂದಿನಿಲೇಔಟ್ ನಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದರು. ಕಳೆದ ಗುರುವಾರ ಸಂಜೆ 6.30 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಚಂದ್ರು (10), ಸುಪ್ರೀತ್ (12) ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಚಂದ್ರು ಹಾಗೂ ಸುಪ್ರೀತ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದನು . ಇದಾದ ಬಳಿಕ ಚಂದ್ರು ಇಂದು ಮೃತಪಟ್ಟಿದ್ದಾನೆ. https://kannadanewsnow.com/kannada/dharma-dangal-in-vijayapura/ https://kannadanewsnow.com/kannada/on-camera-girl-student-in-andhra-pradesh-stuck-between-train-and-platform/

Read More

ಬೆಂಗಳೂರು : ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಚಂದ್ರು ಇದೀಗ ಮೃತಪಟ್ಟಿದ್ದಾನೆ. 3 ದಿನಗಳ ಹಿಂದೆ ಪಾರಿವಾಳ ಹಿಡಿಯಲು ಹೋಗಿ ಬೆಂಗಳೂರಿನಲ್ಲಿ ಹೈಟೆನ್ಷನ್ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಸುಪ್ರೀತ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದನು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೋರ್ವ ಬಾಲಕ ಚಂದ್ರು ಕೂಡ ಇಂದು ಮೃತಪಟ್ಟಿದ್ದಾನೆ. ಬೆಂಗಳೂರಿನ ನಂದಿನಿಲೇಔಟ್ ನಲ್ಲಿ ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿದ್ದರು. ಕಳೆದ ಗುರುವಾರ ಸಂಜೆ 6.30 ರ ಸುಮಾರಿಗೆ ಅವಘಡ ಸಂಭವಿಸಿದ್ದು, ಚಂದ್ರು (10), ಸುಪ್ರೀತ್ (12) ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ ಚಂದ್ರು ಹಾಗೂ ಸುಪ್ರೀತ್ ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದನು . ಇದಾದ ಬಳಿಕ ಚಂದ್ರು ಇಂದು ಮೃತಪಟ್ಟಿದ್ದಾನೆ. https://kannadanewsnow.com/kannada/if-you-want-to-control-the-increasing-sugar-then-consume-dried-fenugreek-leaves-in-winter/ https://kannadanewsnow.com/kannada/dharma-dangal-in-vijayapura/

Read More

ಚಿಕ್ಕಮಗಳೂರು : ದತ್ತಜಯಂತಿ ಅಂಗವಾಗಿ ಬುಧವಾರ ನಗರದಲ್ಲಿ ಬೃಹತ್ ಶೋಭಾಯಾತ್ರೆ ಕಾರ್ಯಕ್ರಮ ನಡೆಯುತ್ತಿದ್ದು, ಸಾವಿರಾರು ಮಂದಿ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕಮಗಳೂರು ನಗರದ ಎಂಜಿ ರಸ್ತೆ, ಹನುಮಂತಪ್ಪ ಹಿಂದೂ ಶೋಭಾಯಾತ್ರೆ ನಡೆಯುತ್ತಿದ್ದು, ‘ಡಿಜೆ ಸಾಂಗ್’ ಗೆ ಜನರು ಕುಣಿದು ಕುಪ್ಪಳಿಸಿದ್ದಾರೆ. ಯಾವುದೇ ವಯಸ್ಸಿನ ಅಂತರವಿಲ್ಲದೇ ಜನರು ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿದ್ದಾರೆ. ರಸ್ತೆಯಲ್ಲಿ ಜನರು ಕಿಕ್ಕಿರಿದು ಸೇರಿದ್ದು, ಫುಟ್ ಬಾತ್ ನಲ್ಲಿ ನಿಲ್ಲುವುದಕ್ಕೆ ಜಾಗ ಇಲ್ಲದಂತಾಗಿದೆ. ಬೃಹತ್ ಶೋಭಾಯಾತ್ರೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ನೆರೆದಿದ್ದಾರೆ. ಶೋಭಾಯಾತ್ರೆ ಹಿನ್ನೆಲೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಐಜಿಪಿ ಚಂದ್ರಗುಪ್ತ ಮಂಗಳವಾರ ರಾತ್ರಿ ಚಿಕ್ಕಮಗಳೂರು ಭೇಟಿ ನೀಡಿ ಭದ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಿದ್ದರು. ಶೋಭಾಯಾತ್ರೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. https://kannadanewsnow.com/kannada/accident-in-chikkaballapura/ https://kannadanewsnow.com/kannada/dharma-dangal-in-vijayapura/

Read More


best web service company