Author: Kannada News

ಶಿವಮೊಗ್ಗ :  2021-22 ನೇ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಸ್ನಾತಕ ಪದವಿಗಳ ಪ್ರವೇಶಾತಿ ದಿನಾಂಕ ವಿಸ್ತರಿಸಿ ಕುವೆಂಪು ವಿವಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2000 ರೂ ಗಳ ದಂಡ ಶುಲ್ಕದೊಂದಿಗೆ ದಿನಾಂಕ 20:11:2021 ರವರೆಗೆ ಪ್ರವೇಶಾತಿ ದಿನಾಂಕ ವಿಸ್ತರಿಸಲಾಗಿತ್ತು, ಇದೀಗ ಮುಂದುವರೆದು ರೂ 3000 ರೂಗಳ ದಂಡ ಶುಲ್ಕದೊಂದಿಗೆ ಡಿಸೆಂಬರ್ 6 ರವರೆಗೆ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಹಾಗೆಯೇ ವಿಳಂಬ ಪ್ರವೇಶ ಪಡೆದ ವಿದ್ಯಾರ್ಥಿಗಳ ಹಾಜರಾತಿಯನ್ನು ಸರಿದೂಗಿಸಲು ವಿಶೇಷ ತರಗತಿ ತೆಗೆದುಕೊಳ್ಳಲು ವಿವಿಯ ಶೈಕ್ಷಣಿಕ ವಿಭಾಗದ ಉಪಕುಲಸಚಿವರು ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/68-of-indian-ultra-processed-food-products-have-excess-salt-sugar-study/ https://kannadanewsnow.com/kannada/hd-kumarswamy-reaction-to-modhi-devegowda-meeting/

Read More

ಬೆಂಗಳೂರು: ದೇವೇಗೌಡರ ಬಗ್ಗೆ ಮೋದಿ ಅವರಿಗೆ ವಿಶೇಷ ಗೌರವವಿದೆ. ಅವರಿಬ್ಬರೂ ಭೇಟಿಯಾಗುವುದು ಹೊಸದೇನಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.  ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ಹಾಸನಕ್ಕೆ ಐಐಟಿ ತರುವ ವಿಚಾರದ ಬಗ್ಗೆ ಮೋದಿ ಅವರ ಜತೆ ಚರ್ಚೆ ನಡೆಸಲು ಹೋಗಿದ್ದಾರೆಂಬ ಮಾಹಿತಿ ಗೊತ್ತಿದೆ. . ಇದರ ಜತೆಗೆ ವಿಧಾನ ಪರಿಷತ್‌ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಿರಬಹುದು. ದೇವೇಗೌಡರು ದೆಹಲಿಯಿಂದ ವಾಪಸ್‌ ಬಂದ ಮೇಲೆ ಅವರೊಂದಿಗೆ ಚರ್ಚೆ ನಡೆಸಿ ಮಾಹಿತಿ ನೀಡುವೆ ಎಂದು ಹೇಳಿದರು.   ವಿಧಾನ ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು,  ಹೆಚ್ ಡಿ ದೇವೇಗೌಡರು ದೆಹಲಿಯಿಂದ ಬಂದ ಮೇಲೆ ವಿಧಾನ ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.   ಜೆಡಿಎಸ್‌ ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಬಹಿರಂಗವಾಗಿಯೇ ಮನವಿ…

Read More

ಬೆಂಗಳೂರು :  ಕೊರೊನಾ ಲಾಕ್ ಡೌನ್ ನ ಬಿಸಿ ಸಾರಿಗೆ ನಿಗಮಗಳಿಗೆ ಭಾರೀ ಪೆಟ್ಟು ಕೊಟ್ಟಿತ್ತು. ಜನ ಸಂಚಾರವಿಲ್ಲದೇ ಎರಡು ಮೂರು ತಿಂಗಳು ಬಸ್ ಸಂಚಾರ ಸ್ಥಗಿತವಾಗಿತ್ತು. ಲಾಕ್‌ಡೌನ್‌ನಿಂದಾಗಿ ಭಾರೀ ನಷ್ಟ ಅನುಭವಿಸಿದ ಸಾರಿಗೆ ಸಂಸ್ಥೆಗಳು ಸಿಬ್ಬಂದಿಗೆ ವೇತನವನ್ನೂ ನೀಡಲಾಗದೇ ಹರಸಾಹಸ ಪಟ್ಟಿದ್ದವು. ಇನ್ನೂ, ಲಾಕ್‌ಡೌನ್ ಮುಗಿದ  ಬಳಿಕ ಬಸ್‌ಗಳು ಓಡಾಟದ ನಂತರವೂ ಆರ್ಥಿಕ ಸ್ಥಿತಿ ಸುಧಾರಿಸಿಲ್ಲ.  ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ನಿಗಮಗಳನ್ನ ನಷ್ಟದಿಂದ ಪಾರು ಮಾಡಲು ಇದೀಗ  ರಾಜ್ಯ ಸರ್ಕಾರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ ಎಸ್ ಆದೇಶ ಹೊರಡಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ  ನಿರ್ದೇಶನ ಮೇರೆಗೆ ಎಂ ಆರ್ ಶ್ರೀನಿವಾಸಮೂರ್ತಿಯವರ ಅಧ್ಯಕ್ಷತೆಯಲ್ಲಿ ತಜ್ಞರನ್ನೊಳಗೊಂಡಂತೆ ಒಂದು ಸಮಿತಿಯನ್ನು ರಚಿಸಿ, ರಾಜ್ಯದ ಎಲ್ಲಾ ರಸ್ತೆ ಸಾರಿಗೆ ಸಂಸ್ಥೆಗಳ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಸಂಪೂರ್ಣ ಅಧ್ಯಯನ ನಡೆಸಿ ಮೂರು ತಿಂಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶ ಹೊರಡಿಸಲು ಸೂಚಿಸಿದ್ದಾರೆ. ರಾಜ್ಯದ…

Read More

ಬೆಂಗಳೂರು : ರಾಜ್ಯದಲ್ಲಿ OMICRON ಭೀತಿ ಶುರುವಾಗಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರ ಹಲವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಇದೀಗ  ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟಿಸಿದ್ದು, ಕೆಲವು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.  ಪ್ರಯಾಣಕ್ಕೂ ಮೊದಲು, ಪ್ರಯಾಣದ ವೇಳೆ, ಪ್ರಯಾಣದ ನಂತರ ಪ್ರಯಾಣಿಕರು ಅನುಸರಿಸಬೇಕಾದ ನಿಯಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬಿಬಿಎಂಪಿ ಮತ್ತು ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ತೀವ್ರ ತಪಾಸಣೆ ನಡೆಸಬೇಕು, ಗಡಿಗಳು ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದೆ. https://kannadanewsnow.com/kannada/karnataka-health-department-order-on-genome-sequencing-test/ https://kannadanewsnow.com/kannada/pakistan-issue-visa-to-indian-piligrims-to-visit-shadani-darbar/

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :   ರಾಜ್ಯ ಸರ್ಕಾರದ ನಿರ್ದೇಶನದಂತೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಸೇವಾ ಸಿಂಧು ವೆಬ್ ಪೋರ್ಟಲ್ ನಲ್ಲಿ ಕಡ್ಡಾಯವಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ ಎಂದು ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಕೂಡ ಮತ್ತೊಮ್ಮೆ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ನಿಗಮ ಸೂಚನೆ ನೀಡಿದೆ. ಈ ಹಿಂದೆ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು, ಇದೀಗ ಮುಂದುವರೆದು ವಿದ್ಯಾರ್ಥಿಗಳ ಮನವಿ ಮೇರೆಗೆ ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಆಯಾ ತಾಲೂಕು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ. https://kannadanewsnow.com/kannada/biggnews-icmr-approves-nine-new-covid-testing-systems-for-corona-detection/ https://kannadanewsnow.com/kannada/covid19-karnataka-update-today-322-new-case/

Read More

* ರಂಜಿತ್ ಶೃಂಗೇರಿ ಬೆಂಗಳೂರು :   ರಾಜ್ಯದ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿದ್ಯಾರ್ಥಿ ವೇತನಕ್ಕೆ  (SCHOLARSHIP)  ಅರ್ಜಿ ಸಲ್ಲಿಸುವ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. https://kannadanewsnow.com/kannada/ravi-poojary-murder-case/ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 30:11:2021 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು, ಇದೀಗ ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ಡಿಸೆಂಬರ್ 31 ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. https://kannadanewsnow.com/kannada/nikhil-kumarswamy-in-mandya/

Read More

ನವದೆಹಲಿ : ಸುಂದರ್ ಪಿಚೈ ಮತ್ತು ಸತ್ಯ ನಾಡೆಲ್ಲಾ ನಂತರ, ಭಾರತೀಯ ಮೂಲದ ಇನ್ನೊಬ್ಬ ವ್ಯಕ್ತಿ ಪ್ರಮುಖ ದೊಡ್ಡ ಟೆಕ್ ಕಂಪನಿಯ(twitter) ಸಿಇಒ (CEO)ಆಗಿದ್ದಾರೆ. ಟ್ವಿಟರ್‌ನ ಸಿಇಒ ಸ್ಥಾನಕ್ಕೆ ಜಾಕ್ ಡೋರ್ಸೆ ರಾಜೀನಾಮೆ ನೀಡುವುದರೊಂದಿಗೆ, ಟ್ವಿಟರ್ ಮಂಡಳಿಯು ಕಂಪನಿಯ ಸಿಟಿಒ(CEO) ಪರಾಗ್ ಅಗರವಾಲ್ (OARAG AGARWAL)ಅವರನ್ನು ಹೊಸ ಸಿಇಒ ಆಗಿ ಆಯ್ಕೆ ಮಾಡಿದೆ. ಇನ್ನೂ, ಅಂತಾರಾಷ್ಟ್ರಿಯ ಮಟ್ಟದ ಕಂಪನಿಯಾದ ಟ್ವಿಟರ್ ಪರಾಗ್‌ ಅವರ ಸಂಬಳ ಎಷ್ಟು ಕೊಡುತ್ತದೆ ಎಂಬ ಪ್ರಶ್ನೆ ಎಲ್ಲರಲಲ್ಲಿತ್ತು, ಇದೀಗ  ಈ  ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. https://kannadanewsnow.com/kannada/ravi-poojary-murder-case/ ಪರಾಗ್ ಅವರಿಗೆ ಟ್ವಿಟರ್ ವಾರ್ಷಿಕವಾಗಿ 1 ದಶಲಕ್ಷ ಡಾಲರ್‌( ಅಂದಾಜು 7.50 ಕೋಟಿ ರೂ.)ಜೊತೆಗೆ ಬೋನಸ್‌ ನೀಡುತ್ತದೆ. ಅಂದರೆ ತಿಂಗಳಿಗೆ ಅಂದಾಜು 62.56 ಲಕ್ಷ ರೂ. ಸಂಬಳ ಪರಾಗ್ ಪಡೆಯಲಿದ್ದಾರೆ. ಅಲ್ಲದೇ ಪರಾಗ್ ಅವರು 12.5 ಮಿಲಿಯನ್ ಯುಎಸ್ ಡಾಲರ್ ಮೌಲ್ಯದ ನಿಯಂತ್ರಿತ ಷೇರುಗಳನ್ನು ಕಂಪನಿ ಕಡೆಯಿಂದ ಸ್ವೀಕರಿಸಲಿದ್ದಾರೆ. ಪರಾಗ್ ಟ್ವಿಟ್ಟರ್‌ ಕಂಪನಿಯು ಯುಎಸ್ ಸೆಕ್ಯೂರಿಟೀಸ್ ಆ್ಯಂಡ್ ಎಕ್ಸೆಂಜ್‌ಗೆ…

Read More

ಮಂಡ್ಯ  : ಪಕ್ಷ ಬಯಸಿದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಟ , ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಜಿಲ್ಲೆಯ ಪಾಂಡವಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು. ಕೆ.ಆರ್. ಪೇಟೆ ಉಪ ಚುನಾವಣೆ ಬಳಿಕ ಪರಿಷತ್ ಎಲೆಕ್ಷನ್‌ ನಡೆಯುತ್ತಿದೆ. ನಾವು ವಿಧಾನಪರಿಷತ್ ಚುನಾವಣೆಯನ್ನ ಎದುರಿಸುತ್ತಿದ್ದೇವೆ. ಒತ್ತಾಯದಿಂದ ಅಪ್ಪಾಜಿಗೌಡರನ್ನ ಚುನಾವಣೆಗೆ ಕಣಕ್ಕಿಳಿಸಿಲ್ಲ, ರಾಜಕಾರಣದಲ್ಲಿ ಸೋಲು ಗೆಲುವು ಸಹಜ ಎಂದರು. https://kannadanewsnow.com/kannada/corona-bulletin-kannada-knn/  ನಾವು ಈ ಚುನಾವಣೆಯಲ್ಲಿ 1 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಬಿಜೆಪಿ ಪಕ್ಷ ಇನ್ನ ಒಂದೂವರೆ ವರ್ಷದಲ್ಲಿ ಏನಾಗುತ್ತೆ ಗೊತ್ತಿಲ್ಲ. ದೇವೇಗೌಡ್ರು, ಕುಮಾರಸ್ವಾಮಿ ಇಬ್ಬರೂ ಎರಡು ದಿನಗಳ ಕಾಲ ಚುನಾವಣಾ ಪ್ರಚಾರ ಕಾರ್ಯ ಮಾಡಲಿದ್ದಾರೆ ಎಂದರು. https://kannadanewsnow.com/kannada/ravi-poojary-murder-case/

Read More

ಮಡಿಕೇರಿ: ಹಿಂದೂ ಸಂಘಟನೆ ಕಾರ್ಯಕರ್ತ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪ್ರಕರಣದ ಒಂಬತ್ತು ಮಂದಿ ಆರೋಪಿಗಳ ಆರೋಪ ಮುಕ್ತಗೊಳಿಸಿ ಆದೇಶಿಸಿದೆ. https://kannadanewsnow.com/kannada/dl-renewal-has-your-drivers-license-expired-sit-at-home-and-update-this-way/ 2016 ಅ.14 ರಂದು ನಡೆಸಿದ್ದ ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿಗಳಾದ ತುಫೈಲ್, ನಯಾಜ್, ಮಹಮ್ಮದ್, ಮುಸ್ತಾಫ, ಇಲಿಯಾಸ. ಇರ್ಫಾನ್, ಮಝೀದ್, ಹ್ಯಾರಿಸ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶಿಸಿದೆ. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದ ಆಟೋ ಚಾಲಕ ಪ್ರವೀಣ್ ನನ್ನು 2016 ಅ.14 ರಂದು ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು, ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮದಲ್ಲಿ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಕೋರ್ಟ್ ಒಂಬತ್ತು ಮಂದಿ ಆರೋಪಿಗಳ ಆರೋಪ ಮುಕ್ತಗೊಳಿಸಿ ಆದೇಶಿಸಿದೆ. https://kannadanewsnow.com/kannada/karnataka-weather-update/ https://kannadanewsnow.com/kannada/karnataka-weather-update/

Read More

ಬೆಂಗಳೂರು : ಮಳೆಗೆ (Rain) ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ (Meteorological Department) ಮತ್ತೊಂದು ಶಾಕ್ ನೀಡಿದ್ದು, ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆ ಇರುವುದರಿಂದ ಮುಂದಿನ ಎರಡು ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ  (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/omicron-viruse-high-alrt-in-bangalore/ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಲಿದ್ದು, ಇದರೆ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಐದು ದಿನ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಯಲ್ಲಿ ಸಮುದ್ರದಲ್ಲಿ ಗಂಟೆಗೆ 40-50 ಕಿಮೀ ಸೆಲ್ಸಿಯಸ್ ದಾಖಲಾಗಿತ್ತು. ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. https://kannadanewsnow.com/kannada/omicron-viruse-high-alrt-in-bangalore/ ಇನ್ನೂ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ,…

Read More


best web service company