Author: Kannada News

ಬೆಂಗಳೂರು: ನಾನು, ಹಿರಿಯ ಸಾಹಿತಿ ಕುಂ ವೀರಭದ್ರಪ್ಪ  ಸೇರಿದಂತೆ 61 ಜನರಿಗೆ ಸಹಿಷ್ಣು ಹಿಂದೂ ಎಂಬ ಹೆಸರಿನಲ್ಲಿ ಒಡ್ಡಲಾಗಿರುವ ಜೀವ ಬೆದರಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದರು. ಈ ಬಗ್ಗೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಇಂತಹ ಬೆದರಿಕೆ ಪತ್ರವನ್ನು ಲಘುವಾಗಿ ಪರಿಗಣಿಸಬೇಡಿ. ಕುಂ.ವೀರಭದ್ರಪ್ಪ ಸೇರಿ ಜೀವ ಬೆದರಿಕೆ ಒಡ್ಡಲಾಗಿರುವ ಎಲ್ಲ ಸಾಹಿತಿಗಳಿಗೆ ತಕ್ಷಣವೇ ಸರಕಾರವು ರಕ್ಷಣೆ ಕೊಡಬೇಕು ಎಂದು ಆಗ್ರಹಪಡಿಸಿದರು. ನನಗೆ ಈ ವಿಚಾರದಲ್ಲಿ ಅಂಜಿಕೆ ಇಲ್ಲ. ದೇವರನ್ನು ನಾನು ನಂಬಿರುವೆ. ನನ್ನ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಅಂಜಿ ಸತ್ಯವನ್ನು ಮರೆಮಾಚಲಾರೆ. ಹಣೆಯಲ್ಲಿ ಬರೆದಿರುವುದನ್ನು ತಿದ್ದಲು ಇವರಿಂದ ಆಗುವುದಿಲ್ಲ ಎಂದ ಅವರು, ನೇರವಾಗಿ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಎಂ ಎಂ ಕಲಬುರ್ಗಿ ಸೇರಿ ಕೆಲವರನ್ನು ಹತ್ಯೆ ಮಾಡಿದ ಉದಾಹರಣೆ ನಮ್ಮ ಮುಂದೆ ಇದೆ. ರಾಜ್ಯದಲ್ಲಿ ಮತ್ತೆ ಅಂಥ ಘಟನೆಗಳು ಮರುಕಳಿಸಬಾರದು ಎಂದು ಅವರು…

Read More

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಂದ ರಾಜೀನಾಮೆ ಪಡೆಯಲಿ, ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಚಂದ್ರ್ಉ ಕೊಲೆ ಪ್ರಚೋದಿಸಿದ್ದೇ ಗೃಹ ಸಚಿವರು. ಗೃಹ ಸಚಿವ ಆರಗ ಜ್ಞಾನೇಂದ್ರ  ಚುಚ್ಚಿ ಚುಚ್ಚಿ ಕೊಂದಿದ್ದಾರೆಂದಿದ್ದರು. ಆದರೆ ಬೈಕ್ ಅಪಘಾತ ವಿಚಾರದಲ್ಲಿ ಚಂದ್ರು ಕೊಲೆ ನಡೆದಿದೆ ಎಂದು ಹೇಳಿದರು. ಗೃಹ ಸಚಿವರ ಹೇಳಿಕೆ ಪ್ರಚೋದನೆ ಆಗಲ್ವಾ..? ಹಿರಿಯ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆಯಲಿ. ಆರಗ ಜ್ಞಾನೇಂದ್ರ ನಾಲಾಯಕ್ ಗೃಹ ಸಚಿವ ಎಂದು ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.

Read More

ಶಿವಮೊಗ್ಗ :  2021-22 ನೇ ಸಾಲಿನ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ದಾಖಲಾದ ಕುವೆಂಪು ವಿವಿಯ ಪ್ರಥಮ ವರ್ಷದ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷಾ ಅರ್ಜಿ ಸಲ್ಲಿಸಲು  ಕುವೆಂಪು ವಿವಿ ಸೂಚನೆ ಹೊರಡಿಸಿದೆ. ಈ ಹಿಂದೆ ಪರೀಕ್ಷೆ ತೆಗೆದುಕೊಳ್ಳಲು ನಿಯಮಾನುಸಾರ ಪ್ರಥಮ ಸೆಮಿಸ್ಟರ್ ನ ವಿದ್ಯಾರ್ಥಿಗಳು ತಮ್ಮ ಅರ್ಜಿ/ಪರೀಕ್ಷಾ ಶುಲ್ಕ ಸಲ್ಲಿಸಲು  ಸೂಚಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 9 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಏಪ್ರಿಲ್ 16 ರವರೆಗೆ ವಿಸ್ತರಿಸಲಾಗಿದೆ. ಯಾವುದೇ ದಂಡವಿಲ್ಲದೇ ಅರ್ಜಿ ಸಲ್ಲಿಸಲು 16/4/22  ಕೊನೆಯ ದಿನಾಂಕವಾಗಿದೆ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕುವೆಂಪು ವಿವಿ ಸೂಚನೆ ಹೊರಡಿಸಿದೆ. ವಿದ್ಯಾರ್ಥಿಗಳು ತಮಗೆ  ನೀಡಿರುವ ಲಾಗಿನ್ ಐಡಿ , ಪಾಸ್ ವರ್ಡ್ ಬಳಸಿಕೊಂಡು UUCMS ನಲ್ಲಿ ಲಾಗಿನ್ ಆಗಿ ತಮ್ಮ ಹೆಸರು, ಸ್ವವಿವರಗಳನ್ನು  , (SUBJECT)  ವಿಷಯಗಳನ್ನು ಖಚಿತಪಡಿಸಿಕೊಂಡು ನಂತರ ಶುಲ್ಕ ಪಾವತಿಸಬೇಕು.. ಪರೀಕ್ಷಾ ಶುಲ್ಕ ಪಾವತಿಸದೇ ಇದ್ದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು…

Read More

ರಾಯಚೂರು:ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಹಲವು ಕಡೆ  41 ಅಂಗನವಾಡಿ ಕಾರ್ಯರ್ತೆಯರು , ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 16 ಕೊನೆಯ ದಿನಾಂಕ  ಆಗಿರುತ್ತದೆ. ಅನ್‍ಲೈನ್ ವೆಬ್‍ಸೈಟ್ ವಿಳಾಸ www.anganwadirecruit.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16 ರ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ. 5 ಅಂಗನವಾಡಿ ಕಾರ್ಯಕರ್ತೆ ಮತ್ತು 36 ಅಂಗನವಾಡಿ ಸಹಾಯಕಿ ಹುದ್ದೆಗೆ SSLC ಪಾಸ್​ ಆದವರು ಮತ್ತು 04ನೇ, 10ನೇ ತರಗತಿ ಪಾಸ್​ ಆಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. 35 ವರ್ಷದೊಳಗಿನ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 17-03-2022 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-04-2022 https://kannadanewsnow.com/kannada/using-viagra-regularly-can-blind-problem-harm-your-vision/ https://kannadanewsnow.com/kannada/scholarship-2021-22-23/ https://kannadanewsnow.com/kannada/they-cant-even-pluck-my-hair-andhra-cm-jagan/

Read More

ಚಿಕ್ಕಮಗಳೂರು  : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್‍ಎಸ್‍ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್‍ಎಸ್‍ಪಿ ಪೂರ್ಟಲ್ https://ssp.postmatric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ರಿನೀವಲ್ ಮತ್ತು ಪ್ರೆಸ್‍ರ್) ಕಡ್ಡಾಯವಾಗಿದ್ದು ಅರ್ಜಿ ಸಲ್ಲಿಸಲು ಏಪ್ರಿಲ್, 30 ಕೊನೆಯ ದಿನವಾಗಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ಆಯಾ ತಾಲೂಕು ನಿಗಮ ಸಂಪರ್ಕಿಸಬಹುದಾಗಿದೆ. ಈ ಕುರಿತು  ಆಯಾ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. https://kannadanewsnow.com/kannada/breaking-news-union-cabinet-approves-distribution-of-nutritious-rice-in-all-government-schemes/ https://kannadanewsnow.com/kannada/using-viagra-regularly-can-blind-problem-harm-your-vision/

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಕಳೆದ ತಿಂಗಳು ಬಂಗಾಳದ ಭಿರ್ಭೂಮ್ ರಾಮಪುರಹತ್ ನಲ್ಲಿ ನಡೆದ ಹತ್ಯೆಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಮುಂಬೈ ನಾಲ್ವರನ್ನು ಬಂಧಿಸಿದೆ. . ಬಂಧಿತರು ಬಪ್ಪಾ ಶೇಖ್, ಸಾಬು ಶೇಖ್ ಮತ್ತು ಇತರ ಇಬ್ಬರು ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ. ಘಟನೆಯ ರಾತ್ರಿ ಅವರು ಸ್ಥಳದಲ್ಲಿದ್ದರು ಎಂದು ಹೇಳಲಾಗುತ್ತದೆ. ಈ ವೇಳೆ ಹಲವಾರು ಮನೆಗಳಿಗೆ ಬೆಂಕಿ ಹಚ್ಚಲಾಗಿದ್ದು,  ಪರಿಣಾಮವಾಗಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.  ಸಿಬಿಐ ಅಧಿಕಾರಿಗಳು ಅವರ ಮೊಬೈಲ್ ಫೋನ್ ಟವರ್ ಲೊಕೇಶನ್​​ಗಳನ್ನು ಟ್ರ್ಯಾಕ್ ಮಾಡಿ ಅವರನ್ನು ಬಂಧಿಸಿದೆ. ಹತ್ಯೆಯ ಮರುದಿನ ಮಾರ್ಚ್ 22 ರಂದು ಮುಂಬೈಗೆ ಪರಾರಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಭಾರೀ ಮುಖಭಂಗವಾಗಿದ್ದು, ಚುನಾವಣಾ ಪ್ರಸ್ತಾಪ ತಿರಸ್ಕರಿಸಿ   ಏ.9 ರಂದು ವಿಶ್ವಾಸಮತಯಾಚನೆಗೆ ಪಾಕ್ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ವಜಾಗೊಂಡಿರುವ ವಿಚಾರವನ್ನು ಪಾಕ್​ ಸುಪ್ರೀಂಕೋರ್ಟ್ ಕಳೆದ ನಾಲ್ಕು ದಿನಗಳಿಂದಲೂ ವಿಚಾರಣೆ ನಡೆಸುತ್ತಿದೆ. ಇದೊಂದು ಸಾರ್ವಜನಿಕ ಹಿತಾಸಕ್ತಿ ವಿಚಾರವೆಂದು ಪರಿಗಣಿಸಿಕೊಂಡಿದ್ದಾಗಿ ಸಿಜೆಐ ಹೇಳಿದ್ದಾರೆ. , ಈ ಪ್ರಕರಣವನ್ನು ಸಿಜೆಐ ಬಂಡಿಯಲ್ ನೇತೃತ್ವದ, ನ್ಯಾಯಮೂರ್ತಿಗಳಾದ  ಇಜಾಜುಲ್ ಅಹ್ಸಾನ್, ನ್ಯಾಯಮೂರ್ತಿ ಮಜರ್ ಆಲಂ ಮಿಯಾಂಖೇಲ್, ನ್ಯಾಯಮೂರ್ತಿ ಮುನಿಬ್ ಅಖ್ತರ್ ಮತ್ತು ನ್ಯಾಯಮೂರ್ತಿ ಮಂಡೋಖೇಲ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ. ಅವಿಶ್ವಾಸ ನಿರ್ಣಯವನ್ನು ವಜಾಗೊಳಿಸಿದ ಉಪ ಸ್ಪೀಕರ್ ಖಾಸಿಂ ಸೂರಿ ಅವರ ತೀರ್ಪನ್ನು ಪಾಕಿಸ್ತಾನದ ಸುಪ್ರೀಂಕೋರ್ಟ್ ಗುರುವಾರ ಅಸಂವಿಧಾನಿಕ ಎಂದು ಘೋಷಿಸಿದೆ. ವಿಧಾನಸಭೆಯನ್ನು ಮರುಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಏಪ್ರಿಲ್ 9 ರಂದು ಅವಿಶ್ವಾಸ ನಿರ್ಣಯದ ಮತದಾನ ನಡೆಯಲಿದ್ದು, ಅವಿಶ್ವಾಸ ಗೊತ್ತುವಳಿಯನ್ನು ವಿದೇಶಿ ಪಿತೂರಿ ಎಂದು ಆರೋಪಿಸಿರುವ ಇಮ್ರಾನ್…

Read More

ಬೆಂಗಳೂರು:   ಬೆಂಗಳೂರು, ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದಾರೆ. ಸಿಟಿಐ ಹಾಗೂ ಕಾರು ಚಾಲಕನ ಮನೆ ಮೇಲೆ ದಾಳಿ ಮಾಡಲಾಗಿದೆ. ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.  ಮೈಸೂರಿನ ಸಿಟಿ ಐ ಸಿ.ಎಂ.ಯಶವಂತ್ ಮನೆ ಮೇಲೆ ಕೂಡ ದಾಳಿ ನಡೆಸಲಾಗಿದೆ. ಕಾರು ಚಾಲಕ ಕೃಷ್ಣಮೂರ್ತಿಯ ಮಲೇಶ್ವರಂ ನಿವಾಸದ ಮೇಲೂ ಎಸಿಬಿ ದಾಳಿ ಮಾಡಿದ್ದು,  ಲಾರಿ ಚಾಲಕರನ್ನು ತಡೆದು ಬೆದರಿಸಿ ಲಂಚ ಪಡೆದ ಆರೋಪ ಇವರ ಮೇಲಿದೆ.  ಇಂದು ಸುಮಾರು ಎರಡು ಗಂಟೆಗಳ ಕಾಲ ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಬೆಂಗಳೂರಿನ ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿಯಲ್ಲಿ ಮನೆಯ ಶೋಧನೆಯಲ್ಲಿ 3,35,300 ನಗದು ಹಣ, 384 ಗ್ರಾಂ ಚಿನ್ನಾಭರಣಗಳು, 1 ಸ್ವಿಫ್ಟ್ ಕಾರು, 1 ದ್ವಿಚಕ್ರ ವಾಹನ ಪತ್ತೆ ಆಗಿದೆ. ಕಾರು ಚಾಲಕ ಪಿ. ಕೃಷ್ಣಮೂರ್ತಿ ಮನೆ ಮೇಲೆ ದಾಳಿ ವೇಳೆ ಮನೆಯ ಶೋಧನೆಯಲ್ಲಿ 2,100…

Read More

ಬೆಂಗಳೂರು : ಕೋವಿಡ್ 19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ನಿಂದ ಮೃತಪಟ್ಟ ಎಲ್ಲಾ ವ್ಯಕ್ತಿಗಳ ಕಾನೂನು ಬದ್ದ ವಾರಸುದಾರರಿಗೆ ಕೇಂದ್ರ ಮಾರ್ಗಸೂಚಿ ಅನ್ವಯ ತಲಾ,50,000 ರೂಗಳ ಪರಿಹಾರ ಧನ ನೀಡಲು ಆದೇಶಿಸಲಾಗಿರುತ್ತದೆ. ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರಿಗೆ ಪರಿಹಾರ ನೀಡಲು ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ನಿರ್ದೇಶನ ನೀಡಲಾಗಿದೆ. ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ದಿನಾಂಕ 20:03:2022 ರಿಂದ 60 ದಿನ ಕಾಲಮಿತಿ ನಿಗದಿಗೊಳಿಸಲಾಗಿದ್ದು, ದಿನಾಂಕ 20:03:2022 ರ ನಂತರ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಖಳ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮರಣ ಸಂಭವಿಸಿದ ದಿನಾಂಕದಿಂದ 90 ದಿನಗಳ ಕಾಲಮಿತಿ ನಿಗದಿಗೊಳಿಸಲಾಗಿದೆ. ಯಾವುದೇ ಅರ್ಜಿದಾರರು ಕೋವಿಡ್ 19 ಮರಣ ಪರಿಹಾರ ಪಡೆಯುವಲ್ಲಿ ನಕಲಿ ದಾಖಲೆ ನೀಡಿದಲ್ಲಿ ಅಂತಹವರ…

Read More

ಬೆಂಗಳೂರು :   ಉಗ್ರ ಸಂಘಟನೆ ಅಲ್​ ಖೈದಾ ನಾಯಕನ ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮೋಸ್ಟ್ ವಾಂಟೆಡ್  ಉಗ್ರ ಸಂಘಟನೆ ಅಲ್​ ಖೈದಾ ನಾಯಕನ ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ಅವರು ಈ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನಿನ ವಿರುದ್ಧ ಹಲವಾರು ವಿಷಯಗಳನ್ನು ಅಪಪ್ರಚಾರ ಪ್ರಾರಂಭ ಮಾಡಿ ಜನರಲ್ಲಿ ಸುಖಾಸುಮ್ಮನೆ ಗೊಂದಲವನ್ನು ಮೂಡಿಸುವ ಶಕ್ತಿ ಹಿಂದಿನಿಂದಲೂ ಕೆಲಸ ಮಾಡುತ್ತಾ ಬಂದಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅದರ ಭಾಗವಾಗಿ ಅಲ್ ಖೈದಾ ಸಂಘಟನೆಯಿಂದ ಎಂದು ಹೇಳಿಕೊಂಡು ವಿಡಿಯೋ ತುಣುಕಿನಲ್ಲಿ ಅಭಿಪ್ರಾಯವೊಂದನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. https://kannadanewsnow.com/kannada/high-court-order-for-drugs-case/ https://kannadanewsnow.com/kannada/good-news-for-aided-high-school-teachers-non-teaching-staff-who-were-waiting-for-transfer/

Read More


best web service company