ಬೆಂಗಳೂರು : ಫೆಬ್ರವರಿಯಲ್ಲಿ ರಾಜ್ಯದಲ್ಲಿ 2 ಹೊಸ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದೆ. ಹೌದು, ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿಯಲ್ಲಿ ಹಲವು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ರಾಜ್ಯ ಪ್ರವಾಸದ ವೇಳೆ ಅವರು ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಹಾಗೂ ವಿಜಯಪುರದಲ್ಲಿ ವಿಮಾನ ನಿಲ್ದಾಣಗಳು ಆರಂಭವಾಗುತ್ತಿದ್ದು, ಈಗಾಗಲೇ ನಿಲ್ದಾಣದ ಕಾಮಗಾರಿಗಳು ಬಹುತೇಕ ಮುಗಿದಿದೆ . ಫೆಬ್ರವರಿ ವೇಳೆಗೆ ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ವಿಜಯಪುರ ನಗರದ ಹೊರವಲಯದ ಬುರಾಣಪುರದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದೆ. ಶೇ 75ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಫೆಬ್ರವರಿಯಲ್ಲಿ ಲೋಕಾರ್ಪಣೆಯಾಗಲಿದೆ. . ಕಲಬುರಗಿಗೆ ನರೇಂದ್ರ ಮೋದಿ ಭೇಟಿ ನೀಡಿದಾಗ ಉದ್ಘಾಟನೆ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನೂ, ಮಲೆನಾಡು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ. ಇದೇ ಫೆಬ್ರವರಿ 27ರಂದು ಉದ್ಘಾಟನೆಗೊಳ್ಳಲಿದೆ.ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಡಲಿದ್ದಾರೆ. ಫೆಬ್ರವರಿ 27ರಂದು ಶಿವಮೊಗ್ಗದಿಂದ ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ ನಡೆಯಲಿದೆ ಎಂದು ಕರ್ನಾಟಕ ಬಿಜೆಪಿ ಫೇಸ್ ಬುಕ್…
Author: kannadanewslive
ಮಡಿಕೇರಿ : 2022 ನೇ ವರ್ಷದಲ್ಲಿ ಪದವಿ/ ಸ್ನಾತಕೊತ್ತರ ಪದವಿ ಮತ್ತು ವೃತ್ತಿಪರ ಪದವಿ/ ವೃತ್ತಿಪರ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿದ್ದು, ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿದ ವಿದ್ಯಾರ್ಥಿಗಳು ಫೆಬ್ರವರಿ 8 ರೊಳಗಾಗಿ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಿದ್ಯಾರ್ಥಿಯು ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು. ವಿದ್ಯಾರ್ಥಿಯು ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಆಗಿದ್ದಲ್ಲಿ, ರೂ.2.50 ಲಕ್ಷ, ಪ್ರವರ್ಗ-2ಎ, 3ಎ ಮತ್ತು 3ಬಿ ಆಗಿದ್ದಲ್ಲಿ, ರೂ.1 ಲಕ್ಷ. ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ಸೈಟ್ ವಿಳಾಸ https://bcwd.karnataka.gov.in ಸಹಾಯವಾಣಿ ಸಂಖ್ಯೆ…
ಬೆಂಗಳೂರು : ನನ್ನ ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ದೊಡ್ಡ ಗೌರವ ನೀಡಿದೆ ಎಂದು ಎಸ್.ಎಂ. ( S.M Krishna ) ಕೃಷ್ಣ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಇಂದು ಬೆಳಗ್ಗೆ ಸಿಎಂ ಸದಾಶಿವನಗರದಲ್ಲಿನ ನಿವಾಸದಲ್ಲಿರುವ ಎಸ್. ಎಂ. ಕೃಷ್ಣರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್ ಮತ್ತಿತರಿದ್ದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ‘ ಎಸ್. ಎಂ. ಕೃಷ್ಣ ಕರ್ನಾಟಕದ ಹೆಮ್ಮೆ, ನಾಡು ಕಂಡ ಸೃಜನಶೀಲ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಬಣ್ಣಿಸಿದರು. ಈ ಕುರಿತು ಎಸ್ ಎಂ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ, ನನಗೆ ಬಹಳ ಸಂತೋಷವಾಗಿದೆ, ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು…
ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜೆ.ಇ.ಇ, ನೀಟ್ (JEE, NEET) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ 10 ತಿಂಗಳ ಅಥವಾ ನೀಟ್ ಪ್ರವೇಶ ಪರೀಕ್ಷೆ ಪ್ರಾರಂಭವಾಗುವವರೆಗೂ ಬೆಂಗಳೂರು ಅಥವಾ ಮಂಗಳೂರು ನಗರದಲ್ಲಿ ವಸತಿಯುತ ಜೆ.ಇ.ಇ ನೀಟ್ ಲಾಂಗ್ ಟರ್ಮ್ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಉಡುಪಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. https://kannadanewsnow.com/kannada/revenue-ministers-village-stay-scheduled-for-tomorrow-at-holalur-in-shivamogga-postponed/ https://kannadanewsnow.com/kannada/santro-ravi-hospitalised-after-falling-ill/
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ನಕಲಿ ಮಾಕ್ಸ್ ಕಾರ್ಡ್ ಜಾಲ ಬೇಧಿಸಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಗರದ ಐದು ಸಂಸ್ಥೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ನಕಲಿ ಅಂಕಪಟ್ಟಿ ತಯಾರಿಸುತ್ತಿರುವುದು ಪತ್ತೆಯಾಗಿದೆ. 15 ವಿವಿಗಳು ಹಾಗೂ ಬೋರ್ಡ್ ಗಳ ನಕಲಿ ಅಂಕಪಟ್ಟಿ ಪತ್ತೆಯಾಗಿದೆ. ಪರಿಶೀಲನೆ ವೇಳೆ ಬರೋಬ್ಬರಿ 6800 ನಕಲಿ ಮಾರ್ಕ್ಸ್ ಕಾರ್ಡ್ ಪತ್ತೆಯಾಗಿದೆ. ಕೃತ್ಯಕ್ಕೆ ಬಳಸಿದ ಟೆಕ್ಸಿಕಲ್ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯ, ಕುವೆಂಪು ವಿಶ್ವವಿದ್ಯಾಲಯ, ಜೈನ್ ವಿಹಾರ್ ಸೇರಿ 15 ವಿವಿಗಳ ನಕಲಿ ಅಂಕಪಟ್ಟಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಆರೋಪಿ ವಿಕಾಸ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ರಾಮನಗರ: ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಸರ್ಕಾರದ ನಾಮನಿರ್ದೇಶಿತ ನಿರ್ದೇಶಕ ಎಸ್ ಲಿಂಗರಾಜು ಹಾಗೂ ಬಮೂಲ್ ನಿರ್ದೇಶಕ ಜಯಮುತ್ತು ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಕುರ್ಚಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ನಂತರ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಬಮೂಲ್ ಉಪ ವ್ಯವಸ್ಥಾಪಕ ಹೇಮಂತ್ ಕುರ್ಚಿ ಮೇಲೆ ಕುಳಿತುಕೊಳ್ಳಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಜೆಡಿಎಸ್ ನ ಜಯಮುತ್ತು ಹಾಗೂ ಬೆಂಬಲಿಗರು ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. https://kannadanewsnow.com/kannada/sm-krishnas-public-life-is-an-example-for-all-of-us-cm-bommai/ https://kannadanewsnow.com/kannada/if-congress-comes-to-power-government-jobs-for-the-families-of-those-who-died-due-to-covid-dks-announcement/
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್ ಆಕ್ಸಿಜನ್ ನೀಡದೇ ಸಚಿವ ಸುಧಾಕರ್ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ. ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ ಅದು ಕೊಲೆ ಎಂದು ವಾಗ್ಧಾಳಿ ನಡೆಸಿದ್ದಾರೆ. ಇದುವರೆಗೆ ಯಾವ ಮಂತ್ರಿಯೂ ಕೂಡ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ.. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ.…
ಬೆಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಐಡಿ ವಶದಲ್ಲಿದ್ದ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಐಡಿ ವಶದಲ್ಲಿದ್ದ ‘ಸ್ಯಾಂಟ್ರೋ ರವಿ’ ಆರೋಗ್ಯದಲ್ಲಿ ಏರುಪೇರಾಗಿದ್ದು, ಆತನನ್ನು ನಿನ್ನೆ ರಾತ್ರಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಸ್ಯಾಂಟ್ರೋ ರವಿಗೆ ಚಿಕಿತ್ಸೆ ಮುಂದುವರೆದಿದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತಿದೆ ಎನ್ನಲಾಗಿದೆ. ಇನ್ನೂ, ಸಿಸಿಬಿ ಪೊಲೀಸರಿಂದ ಸ್ಯಾಂಟ್ರೋ ರವಿ ಪತ್ನಿ ವಿಚಾರಣೆ ಅಂತ್ಯವಾಗಿದೆ.ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಪ್ರಕರಣ ಸಂಬಂಧ ಸಿಸಿಬಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ವಿಚಾರಣೆ ನಡೆದಿದೆ. ವಿಚಾರಣೆ ನಂತರ ಸ್ಯಾಂಟ್ರೋ ರವಿ ಪತ್ನಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಮೊದಲು ಪೊಲೀಸರ ಮೇಲೆ ನನಗೆ ನಂಬಿಕೆ ಇರಲಿಲ್ಲ, ಹಾಗಾಗಿ ಮೈಸೂರಿನಲ್ಲಿ ಮೊದಲು ದಾಖಲೆ ನೀಡಿರಲಿಲ್ಲ, ಇದೀಗ ಸಿಐಡಿಗೆ ಕೇಸ್ ವರ್ಗಾವಣೆಯಾಗಿದೆ, ಈಗ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ ಎಂದರು. ಇದೀಗ ಸಿಐಡಿಗೆ ಕೇಸ್ ವರ್ಗಾವಣೆಯಾಗಿದೆ, ಹಾಗಾಗಿ ಸ್ಯಾಂಟ್ರೋ ರವಿಯ ಒಂದೊಂದೇ ವಿಚಾರ…
ಬೆಂಗಳೂರು : ವಿವಾಹಿತ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭಗಳಲ್ಲಿ ಅವರ ಪತ್ನಿ/ಪತಿ, ಮಗ ಮತ್ತು ಮಗಳು ಹಾಗೂ ಅವಿವಾಹಿತ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭಗಳಲ್ಲಿ ಅವರ ಸಹೋದರ/ಸಹೋದರಿ ಅನುಕಂಪದ ಆಧಾರದ ನೇಮಕಾತಿಗೆ ಅರ್ಹರಾಗಿರುತ್ತಾರೆ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ನಯ ಸೇವೆಯಲ್ಲಿರುವಾಗಲೇ ಮೃತಪಡುವ ಸರ್ಕಾರಿ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಸದರಿ ನಿಯಮಗಳ ನಿಯಮ 2 (1) (ಎ) ಮತ್ತು (ಬಿ)ರಲ್ಲಿ ‘ಮೃತ ಸರ್ಕಾರಿ ನೌಕರರ ಅವಲಂಬಿತರು’ ಹಾಗೂ ‘ಕುಟುಂಬ’ ಪದಗಳನ್ನು ವ್ಯಾಖ್ಯಾನಿಸಲಾಗಿದೆ ಹಾಗೂ ನಿಯಮ 3ರಲ್ಲಿ ನೇಮಕಾತಿಗೆ ಅರ್ಹತೆ ಕುರಿತಂತೆ ನಿರ್ಧಿಷ್ಟಪಡಿಸಲಾಗಿದೆ. ವಿವಾಹಿತ ಹಾಗೂ ಅವಿವಾಹಿತ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅನುಕಂಪದ ಆಧಾರದ ನೇಮಕಾತಿ ಪಡೆಯಲು ಅರ್ಹರಾದ ಅವಲಂಬಿತರ ಬಗ್ಗೆ ತಿಳಿಸಲಾಗಿದೆ. ಇದರನ್ವಯ, ವಿವಾಹಿತ ಸರ್ಕಾರಿ ನೌಕರರು ಮೃತಪಟ್ಟ…
ಬೆಂಗಳೂರು : ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಇಂದಿನಿಂದ 2 ದಿನಗಳ ಕಾಲ ನಡೆಯಲಿರುವ ರಾಜ್ಯ ಮಟ್ಟದ ವಿಜ್ಞಾನ ಮೇಳಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಲು ರಾಜ್ಯ ಮಟ್ಟದ ವಿಜ್ಞಾನ ಮೇಳವನ್ನು(Science Exhibition) ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳು ಪ್ರಸ್ತುತ ಪಡಿಸುವ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಸುಪ್ತಚೇತನದಲ್ಲಿರುವ ವೈಜ್ಞಾನಿಕ ಮನೋಭವಾವನೆ, ಪ್ರತಿಭೆಯನ್ನು ಪ್ರೋತ್ಸಾಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರುಗಳು, ಶಾಸಕರುಗಳು, ಸಂಸದರು ಹಾಗೂ ಇನ್ನಿತರೆ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ದಿನಗಳ ಈ ರಾಜ್ಯ ಮಟ್ಟದ ವಿಜ್ಞಾನ ಮೇಳದಲ್ಲಿ ವಿದ್ಯಾರ್ಥಿಗಳು ವಿಜ್ಞಾನ, ಗಣಿತ, ಮಾಹಿತಿ ತಂತ್ರಜ್ಞಾನ ಹಾಗೂ ಇನ್ನಿತರೆ ಕ್ಷೇತ್ರಗಳಿಗೆ ಸಂಬಂಧಿಸಿದ ನಾವಿನ್ಯಯುತ ಪ್ರಯೋಗಗಳನ್ನು ಸಿದ್ಧಪಡಿಸಿ ಪ್ರದರ್ಶಿಸಲಿದ್ದಾರೆ. ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ KREIS…