Author: kannadanewslive

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪ್ರಯಾಣಿಕರು ಒಂದೇ ಒಂದು ಟಿಕೆಟ್ ನಲ್ಲಿ ಕುಟುಂಬ ಸಮೇತ ಪ್ರಯಾಣಿಸಬಹುದು. ಹೌದು, ಇಂದಿನ ದಿನದಲ್ಲಿ ನಮ್ಮ ಮೆಟ್ರೋದಲ್ಲಿ ಓಡಾಡುವ ಸಂಖ್ಯೆ ಹೆಚ್ಚಾಗಿದೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಿಕೊಳ್ಳುವ ಸಲುವಾಗಿ ಮೆಟ್ರೋದಲ್ಲೇ ಜನರು ಓಡಾಡುತ್ತಾರೆ. ಆದರೆ ಸದ್ಯ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಬೇಕಾದರೆ ಒಬ್ಬೊಬ್ಬರು ಒಂದೊಂದು ಟಿಕೆಟ್ ಪಡೆದು ಪ್ರಯಾಣಿಸಬೇಕು. ನೀವು ಕುಟುಂಬ ಸಹಿತ ಪ್ರಯಾಣ ಮಾಡುತ್ತಿದ್ದರೂ ಪ್ರತ್ಯೇಕ ಟಿಕೆಟ್ ಮಾಡಿ ಪ್ರಯಾಣಿಸಬೇಕು. ಇದರಿಂದಾಗಿ ಟಿಕೆಟ್ ಕೌಂಟರ್ನಲ್ಲಿ ಹೆಚ್ಚು ಹೊತ್ತು ಕಾಯಬೇಕಾಗುವ ಸ್ಥಿತಿ ಇದೆ. ಆದರೆ ಇನ್ನು ಮುಂದೆ ಇಂತಹ ಪರಿಸ್ಥಿತಿ ಇರುವುದಿಲ್ಲ. ಏಕೆಂದರೆ, ಬೆಂಗಳೂರು ನಮ್ಮ ಮೆಟ್ರೋ ನಿಗಮ , ಒಂದೇ ಟಿಕೆಟ್ನಲ್ಲಿ ಒಂದಕ್ಕಿಂತ ಹೆಚ್ಚು ಹಾಗೂ ಗರಿಷ್ಠ ಆರು ಮಂದಿ ಪ್ರಯಾಣಿಸುವ ಅವಕಾಶವನ್ನು ಶೀಘ್ರದಲ್ಲೇ ಕಲ್ಪಿಸುತ್ತಿದೆ. ಇದು ಗುಂಪಾಗಿ ಪ್ರಯಾಣಿಸುವ, ವಿಶೇಷವಾಗಿ ಕುಟುಂಬವಾಗಿ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.ಆದರೆ ಕುಟುಂಬದ 6 ಮಂದಿ ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದಾಗಿದೆ. ಜನವರಿ 15ರ ಒಳಗಾಗಿ ಈ…

Read More

ಬೆಂಗಳೂರು : ‘ಸೂರತ್ಕಲ್ ಟೋಲ್ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ಟ್ವೀಟ್ ನಲ್ಲಿ ( Congress )  ವ್ಯಂಗ್ಯವಾಡಿದೆ. ಈ ಬಗ್ಗೆ ಟ್ಚೀಟ್ ಮಾಡಿರುವ ಕಾಂಗ್ರೆಸ್ ಸೂರತ್ಕಲ್ ಟೋಲ್ ರದ್ದು ಎನ್ನುವುದು ಬಿಜೆಪಿ ಮಾಡಿದ ಶತಮಾನದ ಜೋಕ್! ಸೂರತ್ಕಲ್ನಲ್ಲಿ ಸಂಗ್ರಹಿಸುವ ಟೋಲ್ ಮೊತ್ತವನ್ನು 4 ಕಿ.ಮಿ ದೂರದ ಹೆಜಮಾಡಿ ಟೋಲ್ಗೆ ವರ್ಗಾಯಿಸಿದ್ದು ಜೋಕ್ ಅಲ್ಲದೆ ಇನ್ನೇನು ಎಂದು ಕಾಂಗ್ರೆಸ್    ಕಿಡಿಕಾರಿದೆ. ನಳೀನ್ ಕುಮಾರ್ ಕಟೀಲ್ ಅವರೇ ಕರಾವಳಿ ಜನರ ಕಿವಿ ಮೇಲೆ ಹೂವು ಇಡಲು ಹೊರಟಿರುವ ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಕಾಂಗ್ರೆಸ್  ವ್ಯಂಗ್ಯವಾಡಿದೆ. https://twitter.com/INCKarnataka/status/1596108940223340554 https://kannadanewsnow.com/kannada/mantralaya-sri-reaction-to-terrorism-in-karnataka/ https://kannadanewsnow.com/kannada/breaking-news-central-government-has-released-1915-crore-money/

Read More

ಬೆಂಗಳೂರು : ಉಗ್ರರು ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಿರುವ ಘಟನೆಗೆ ಮಂತ್ರಾಲಯ ಮಠದ ಸುಭುದೇಂದ್ರ ತೀರ್ಥ ಸ್ವಾಮೀಜಿ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆಯಿಂದ ಸೌಹಾರ್ದತೆ ನಾಶವಾಗುತ್ತಿದೆ ನಮ್ಮ ರಾಜ್ಯ ಬಹಳ ಶಾಂತಿ ಪ್ರಿಯವಾಗಿರುವ ನಾಡು, ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಲು ಸಂಚು ರೂಪಿಸಿರುವ ಘಟನೆಯನ್ನು ಖಂಡಿಸುತ್ತೇನೆ , ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಹಿಂದೂ ದೇವಾಲಯಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. https://kannadanewsnow.com/kannada/pm-modi-govt-invloved-in-voter-id-scam/ https://kannadanewsnow.com/kannada/subramanya-temple-fair-to-be-held-at-v-v-puram-in-bengaluru-on-nov-29-vhp-demands-that-non-hindu-business-should-not-be-allowed/

Read More

ಬೆಂಗಳೂರು : ಮತದಾರರ ಮಾಹಿತಿ ಕದ್ದ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಎಂದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮತದಾರರ ಮಾಹಿತಿ ಕದ್ದ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಕೇವಲ ಮತದಾರರ ಮಾಹಿತಿ ಕಳವು ಮಾತ್ರವಲ್ಲ ದೇಶ ಹಾಗೂ ರಾಜ್ಯದ ಹಣ ಲೂಟಿ ಮಾಡುತ್ತಿವೆ ವಾಗ್ಧಾಳಿ ನಡೆಸಿದರು. ಕೇಂದ್ರ ಸರ್ಕಾರದ ಸಿಟಿಜನ್ ಸರ್ವೀಸಸ್ ಸೆಂಟರ್ ನಿಂದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು, ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಅವರಿಗೂ ಪಾವತಿಯಾಗಿದೆ. ಇದರ ಹಿಂದೆ ಭಾರೀ ದೊಡ್ಡ ಹಗರಣವಿದೆ, ಜನರ ಹಣ ಲೂಟಿ ಮಾಡಿ, ಅವ್ಯವಹಾರ ನಡೆಸಲಾಗಿದೆ, ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಎಂದು ಎಂದು ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದರು. https://kannadanewsnow.com/kannada/breaking-hc-stays-sits-notice-to-bjp-national-general-secretary-b-l-santhosh/ https://kannadanewsnow.com/kannada/vijaya-devane-stmt-againt-cm-bommai/

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :  ಬೆಳಗಾವಿಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಜತ್ತ ತಾಲೂಕಿನ 40 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕು ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿರುವಂತ ಹೇಳಿಕೆಗೆ ಮರಾಠಿಗರ ಆಕ್ರೋಶ ತೀವ್ರಗೊಂಡಿದೆ. ಕಳ್ಳನೇ ತಿರುಗಿ ಬೊಬ್ಬೆ ಹೊಡೆದ ರೀತಿಯಲ್ಲಿ ಬೊಮ್ಮಾಯಿ ಬೊಬ್ಬೆ ಹೊಡೆದುಕೊಳ್ಳುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕೊಲ್ಲಾಪುರ ಶಿವಸೇನೆ ಉದ್ಧವ್ ಠಾಕ್ರೆ ಬಣದ ಜಿಲ್ಲಾಧ್ಯಕ್ಷ ವಿಜಯ ದೇವಣೆ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಳೆದ 50 ರಿಂದ 60 ವರ್ಷಗಳಿಂದ ಚಳವಳಿ ನಡೆಯುತ್ತಿದೆ, ಕರ್ನಾಟಕಕ್ಕೆ ಮಹಾರಾಷ್ಟ್ರ ಸಾರಿಗೆ ಬಸ್ಗಳ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನೆಲ್ಲ ನೋಡಿದ್ರೆ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ಕಿಡಿಕಾರಿದರು. ಬೊಮ್ಮಾಯಿ ನಡೆ ಇಡೀ ದೇಶಕ್ಕೆ ಗೊತ್ತಾಗಬೇಕೇಂದು ಶವಯಾತ್ರೆ ಮಾಡಿದ್ದೇವೆ ಎಂದು ವಿಜಯ್ ದೇವಣೆ ವಾಗ್ಧಾಳಿ ನಡೆಸಿದ್ದಾರೆ. ಬೆಳಗಾವಿಯ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಜತ್ತ ತಾಲೂಕಿನ 40…

Read More

ನವದೆಹಲಿ : ದೇಶದ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು UGC ( University Grant Commission)  ಸೂಚನೆ ನೀಡಿದೆ. ಹೌದು, ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಧ್ಯಾನ ನಡೆಸುವ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ದೇಶದಾದ್ಯಂತ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರಕ್ಕೆ UGC ಮುಂದಾಗಿದೆ. ದೇಶದ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ನೊಂದಿಗೆ “ಹರ್ ಘರ್ ಧ್ಯಾನ್” ಅಭಿಯಾನವನ್ನು ಪ್ರಾರಂಭಿಸಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿನಲ್ಲಿ ಈ ಮಹತ್ವದ ನಿರ್ಧಾರವನ್ನ ಕೇಂದ್ರ ಸರ್ಕಾರ ಕೈಗೊಂಡಿದೆ. ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್  ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯವ ಮೂಲಕ ಎಲ್ಲಾ ವಿಶ್ವವಿದ್ಯಾಲಯ, ಪದವಿ ಕಾಲೇಜುಗಳಲ್ಲಿ ಧ್ಯಾನ ನಡೆಸಲು  ಸೂಚನೆ ನೀಡಿದ್ದಾರೆ. https://kannadanewsnow.com/kannada/not-free-i-will-give-you-income-pm-modi/ https://kannadanewsnow.com/kannada/breaking-news-judicial-custody-of-three-including-muruga-sri-extended-jailed-till-december-5/

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಕಾಂತಾರ ಸಿನಿಮಾ ಹಲವು ವಿವಾದಗಳಿಗೆ ಗುರಿಯಾದ ಬೆನ್ನಲ್ಲೇ ಕಾಂತಾರ ಸಿನಿಮಾದ ಫೇಮಸ್ ಡೈಲಾಗ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದ ‘ನೀನು ಕೋರ್ಟಿಗೆ ಹೋಗ್ತಿ, ನಿನ್ನ ತೀರ್ಮಾನ ನಾ ಮೆಟ್ಟಿಲಲ್ಲಿ ನಾ ಮಾಡುವೆ’ ಎಂಬ ದೈವದ ಮಾತು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದು ಬಿಡುತ್ತಿದ್ದಾರೆ. ಕಾಂತಾರ ಸಿನಿಮಾ ವಿವಾದ ಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ನೆಟ್ಟಿಗರು ಪೋಸ್ಟ್ ಹರಿದು ಬಿಡುತ್ತಿದ್ದಾರೆ. ಇನ್ನೂ, ಸ್ಯಾಂಡಲ್ ವುಡ್ ನಲ್ಲಿ ( Sandalwood ) ಹೊಸ ಅಲೆಯನ್ನು ಸೃಷ್ಠಿಸಿ, ಕೆಜಿಎಫ್-2 ( KGF-2 ) ದಾಖಲೆಯನ್ನು ಉಡೀಸ್ ಮಾಡಿದ್ದಂತ ಕಾಂತಾರ ಚಿತ್ರದಲ್ಲಿನ ( Kantara Movie ) ವರಾಹ ರೂಪಂ ಹಾಡಿಗೆ ಕೇರಳ ಕೋರ್ಟ್ ( Kerala Court ) ತಡೆ ನೀಡಿತ್ತು. ಇದೀಗ ಮತ್ತೆ ವರಾಹ ರೂಪಂ ಹಾಡನ್ನು ( Varaha Rupam Song ) ಚಿತ್ರದಲ್ಲಿ ಬಳಕೆ…

Read More

ಶಿವಮೊಗ್ಗ : ರಾಜ್ಯ ಬಿಜೆಪಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಗುಜರಾತ್ ವಿಧಾನಸಭಾ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದ ಸರಕಾರ ರಚನೆಯಾದ ಬಳಿಕ ಈವರೆಗೆ ಒಂದು ಬಾರಿಯೂ ಸಂಪುಟ ವಿಸ್ತರಣೆಯೂ ಆಗಿಲ್ಲ, ಪುನಾರಚನೆಯೂ ಆಗಿಲ್ಲ, ಸಂಪುಟ ವಿಸ್ತರಣೆ ಈಗ ಆಗುತ್ತದೆ, ಆಗ ಆಗುತ್ತದೆ ಎಂದು ಕಾದು ಕುಳಿತ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿತ್ತು. ಇದರ ನಡುವೆ ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ತೀವ್ರ ಕೂತುಹಲಕ್ಕೆ ಕಾರಣವಾಗಿದ್ದು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ…

Read More

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷದಲ್ಲೇ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು. ಈ ಯೋಜನೆ ಮೂಲಕ ಪ್ರತಿ ಗ್ರಾಮದಲ್ಲೂ ಎರಡು ಮಹಿಳಾ ಸಂಘಗಳಿಗೆ ಈ ಯೋಜನೆಯಡಿ 5 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುತ್ತದೆ, ಇದರಿಂದ ಮಹಿಳೆಯರ ಸಬಲೀಕರಣವಾಗಲಿದೆ, ಈ ಯೋಜನೆಯನ್ನು ಈ ವರ್ಷವೇ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇನ್ನೂ, ಡಿಸೆಂಬರ್ ನಲ್ಲಿ ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದ್ಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಇದೇ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಿಳಾ ಆಯೋಗವನ್ನು ಬಲಪಡಿಸಬೇಕೆಂಬ ಬೇಡಿಕೆ ಕೇಳಿಬಂದಿದ್ದು, ನಾವು ನಿರ್ಭಯ ಕಾನೂನು ಜಾರಿಗೊಳಿಸಲು ಸಿದ್ದರಾಗಿದ್ದೇವೆ. ಕಾನೂನಿನ ಬಗ್ಗೆ ಪುರುಷರಿಗೆ…

Read More

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿಯನ್ನು ನ.28 ಕ್ಕೆ ಮುಂದೂಡಲಾಗಿದೆ. ಇಂದು ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಅಪರ ಜಿಲ್ಲಾ ನ್ಯಾಯಾಲಯ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಬಸವರಾಜನ್ ಜಾಮೀನು ಅರ್ಜಿಯನ್ನು ನ.28 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. . ಮುರುಘಾಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅವರು ಮುರುಘಶ್ರೀ ವಿರುದ್ಧ ಪಿತೂರಿ ನಡೆಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದ್ದು, ಇಂದು ಅವರ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿದ್ದು, ಈ ಹಿನ್ನೆಲೆಯಲ್ಲಿ ಬಸವರಾಜ್ ನನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಅರ್ಜಿಯನ್ನು ನ.28 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. https://kannadanewsnow.com/kannada/it-has-been-said-that-there-are-no-terrorist-activities-in-kodagu-mla-kg-bopaiah-said-explosively/ https://kannadanewsnow.com/kannada/cm-bommai-react-to-belagavi-border-controversy/

Read More


best web service company