Author: Kannada News

ಬೆಂಗಳೂರು :  ಎಫ್ಎಸ್ಎಲ್  ವರದಿ ವಿಳಂಬವಾದ ಮಾತ್ರಕ್ಕೆ ಕಡ್ಡಾಯ ಜಾಮೀನಿಲ್ಲ ಎಂದು ಮಾದಕದ್ರವ್ಯ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ನೀಡಿದೆ. ಸಿಆರ್​​ಪಿಸಿ ಸೆ.167(2) ಅಡಿ ಕಡ್ಡಾಯ ಜಾಮೀನು ಕೋರಿದ್ದ ಆರೋಪಿ ಸೈಯದ್ ಮೊಹಮ್ಮದ್ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಆರೋಪಪಟ್ಟಿ ದಾಖಲಿಸುವಾಗ ಎಫ್ಎಸ್ಎಲ್ ವರದಿ ಸಲ್ಲಿಸಿರಲಿಲ್ಲ. ಹೀಗಾಗಿ ಮೊಹಮ್ಮದ್ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಎಫ್ಎಸ್ಎಲ್ ವರದಿ ವಿಳಂಬವಾದ ಮಾತ್ರಕ್ಕೆ ಆರೋಪಪಟ್ಟಿ ಅಪೂರ್ಣವಲ್ಲ. ನಂತರ ಹೆಚ್ಚುವರಿ ಚಾರ್ಜ್ ಷೀಟ್ ನಂತೆ ಎಫ್ಎಸ್ಎಲ್ ವರದಿ ಸಲ್ಲಿಸಬಹುದು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. https://kannadanewsnow.com/kannada/kuvempu-university-2021-22/ https://kannadanewsnow.com/kannada/big-news-militant-shoot-non-local-driver-in-kashmir/

Read More

ಶಿವಮೊಗ್ಗ :  2021-22 ನೇ ಸಾಲಿನ ರಾಷ್ಟ್ರೀಯ ಶಿಕ್ಷಣ ನೀತಿ ಯೋಜನೆಯಡಿ ದಾಖಲಾದ ಕುವೆಂಪು ವಿವಿಯ ಪ್ರಥಮ ವರ್ಷದ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷಾ ಅರ್ಜಿ ಸಲ್ಲಿಸಲು  ಕುವೆಂಪು ವಿವಿ ಸೂಚನೆ ಹೊರಡಿಸಿದೆ. ಪರೀಕ್ಷೆ ತೆಗೆದುಕೊಳ್ಳಲು ನಿಯಮಾನುಸಾರ ಪ್ರಥಮ ಸೆಮಿಸ್ಟರ್ ನ ವಿದ್ಯಾರ್ಥಿಗಳು ತಮ್ಮ ಅರ್ಜಿ/ಪರೀಕ್ಷಾ ಶುಲ್ಕ ಸಲ್ಲಿಸಲು  ಸೂಚಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಏಪ್ರಿಲ್ 9 ರವರೆಗೆ ವಿಸ್ತರಿಸಲಾಗಿದೆ. ಯಾವುದೇ ದಂಡವಿಲ್ಲದೇ ಅರ್ಜಿ ಸಲ್ಲಿಸಲು 9/4/22  ಕೊನೆಯ ದಿನಾಂಕವಾಗಿದೆ, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕುವೆಂಪು ವಿವಿ ಸೂಚನೆ ಹೊರಡಿಸಿದೆ. https://kannadanewsnow.com/kannada/bigg-aleart-is-your-pan-number-abusive-test-it-like-that/ https://kannadanewsnow.com/kannada/breaking-news-maharashtra-minister-navab-malik-jail-custody-extend-april18/

Read More

ಬೆಂಗಳೂರು : ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಕೊಲೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಹಲವು ವಿವಾದಾತ್ಮಕ ಹೇಳಿಕೆಗೆ ಗ್ರಾಸವಾಗಿದೆ. ಯುವಕ ಚಂದ್ರು ಕೊಲೆ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್‌ ನಲಪಾಡ್ ದೂರು ಸಲ್ಲಿಸಿದ್ದಾರೆ.  ಕೇಂದ್ರ ವಿಭಾಗ ಡಿಸಿಪಿ ಅನುಚೇತ್ ಗೆ ದೂರು ನೀಡಿರುವ ನಲಪಾಡ್, ಜೆಜೆ ನಗರ ಚಂದ್ರು ಕೊಲೆ ಸಂಬಂಧ ಸಚಿವ ಅರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.  ಅರಗ ಜ್ಞಾನೇಂದ್ರ ಚಿಕ್ಕ ಮಗುವಲ್ಲ ಪದೇ ಪದೇ ಹೇಳಿಕೆ ಬದಲಿಸೋಕೆ. ಅರಗ ಜ್ಞಾನೇಂದ್ರ ಮೂರನೇ ಬಾರಿಗೆ ಈ ತರಹದ ಹೇಳಿಕೆ ಕೊಡ್ತಿದ್ದಾರೆ. ರಾಜ್ಯದ ಕೋಮು ಸಾಮರಸ್ಯ ಹಾಳು ಮಾಡುವ ಕೆಲಸವನ್ನ ಅರಗ ಜ್ಞಾನೇಂದ್ರ ಮಾಡಿದ್ದಾರೆ.…

Read More

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 33 ಹೊಸ ಪಾಸಿಟಿವ್ ಕೇಸ್ ದಾಖಲಾಗಿದೆ. ರಾಜ್ಯದಲ್ಲಿ ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 33 ಹೊಸ ಪಾಸಿಟಿವ್ ಕೇಸ್ ದಾಖಲಾಗಿದೆ.  ಈ ಮೂಲಕ ಸೋಂಕಿತರ ಸಂಖ್ಯೆ 39,45,760ಕ್ಕೆ ಏರಿಕೆಯಾಗಿದೆ. ಕಿಲ್ಲರ್ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 40,056 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಇಂದು 85 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,04,247ಕ್ಕೆ ಏರಿಕೆಯಾಗಿದೆ. ಇನ್ನು 1,416 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು 28 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,81,856ಕ್ಕೆ ಏರಿಕೆಯಾಗಿದೆ. https://kannadanewsnow.com/kannada/anger-over-putin-shifts-to-daughters-restrictions-on-banks-confiscation-of-assets/ https://kannadanewsnow.com/kannada/dk-shivakumar-2/

Read More

ಹಾಸನ:  ಪೆಟ್ರೋಲ್, ಡೀಸೆಲ್, ರಸಗೊಬ್ಬರದ ಬೆಲೆ ಎಲ್ಲವೂ ಏರಿಕೆ ಆಗಿದ್ದು, ಬಿಜೆಪಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ರೈತರನ್ನು ಬದುಕಿರುವಾಗಲೇ ಸಮಾಧಿ ಮಾಡಲು ಮುಂದಾಗಿದೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರದ ಬೆಲೆ ಎಲ್ಲವೂ ಏರಿಕೆ ಆಗಿದ್ದು, ಬಿಜೆಪಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಮ್ಮ ರಾಜ್ಯದವರೇ ಕೃಷಿ ಸಚಿವರಾಗಿದ್ದರೂ, ಅನ್ಯಾಯ ಮುಂದುವರಿದಿದೆ. ರೈತರು ನೆಮ್ಮದಿಯಾಗಿಲ್ಲ, ಕೈಗಾರಿಕೆಗಳಿಗೆ ಬಂಡವಾಳ ಬರುತ್ತಿಲ್ಲ. ವ್ಯಾಪಾರಸ್ಥರಿಗೂ ತೊಂದರೆ ಆಗಿದೆ. ಪ್ರತಿ ಜಿಲ್ಲೆಯಲ್ಲಿ ಕೋಮುವಾದ ಹರಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ರಸಗೊಬ್ಬರದ ಬೆಲೆ ಎಲ್ಲವೂ ಏರಿಕೆ ಆಗಿದ್ದು, ಬಿಜೆಪಿ ಜನರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/breaking-news-date-fixed-for-neet-ug-exam-on-july-17-exam-neet-ug-2022-exam/ https://kannadanewsnow.com/kannada/vijayanagara-anganavadi-recruitment-2022/

Read More

ವಿಜಯನಗರ :  ಜಿಲ್ಲೆಯ 5 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ 23-04-2022 ಕೊನೆಯ ದಿನಾಂಕವಾಗಿದ್ದು, 45 ವರ್ಷ ವಯೋಮಿತಿಯೊಳಗಿರುವವರು ಅರ್ಜಿ ಸಲ್ಲಿಸಬಹುದು. 15 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಹಾಗೂ 57 ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿದಂತೆ ಒಟ್ಟೂ 72 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 10ನೇ ತರಗತಿ ಉತ್ತೀರ್ಣ. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಟ 4ನೇ ತರಗತಿ ಉತ್ತೀರ್ಣರಾಗಿರಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಹುದ್ದೆಯ ವೆಬ್‌ಸೈಟ್‌ anganwadirecruit.kar.nic.inಗೆ ಭೇಟಿ ನೀಡಿ.ಅರ್ಜಿ ಸಲ್ಲಿಸಬಹುದಾಗಿದೆ. https://kannadanewsnow.com/kannada/bigg-news-teaching-objectionable-contents-about-hindu-deities-netizens-outrage-professor-suspended/ https://kannadanewsnow.com/kannada/bear-price-rised/

Read More

ಬೆಂಗಳೂರು : ಮದ್ಯ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಬಿಸಿ ಬೆನ್ನಲ್ಲೇ ಮದ್ಯದ ಬೆಲೆ ಕೂಡ ಹೆಚ್ಚಳವಾಗಲಿದೆ ಎಂದು ಹೇಳಲಾಗುತ್ತಿದೆ. ಹೌದು. ಪೆಟ್ರೋಲ್ , ಡೀಸೆಲ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಬಿಯರ್  ಬೆಲೆ ಕೂಡ ಏರಿಕೆಯಾಗಲಿದೆಯಂತೆ. ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಕಂಪನಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಹಿನ್ನೆಲೆ ಬಿಯರ್ ಬೆಲೆ ಏರಿಕೆಯಾಗುವ ಎಲ್ಲಾ ಸಾಧ್ಯತೆ ಇದ್ದು, ಎಲ್ಲಾ ಬ್ರಾಂಡ್ ಬಿಯರ್ ನ ಬೆಲೆ ಹೆಚ್ಚಳವಾಗಲಿದೆ.   ಬಾರ್ಲಿ ಸೇರಿದಂತೆ ಬಿಯರ್‌ ಉತ್ಪಾದನೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ, ಡೀಸೆಲ್‌ ಮತ್ತು ಪೆಟ್ರೋಲ್‌ ದರ ಹೆಚ್ಚಳದಿಂದ ಸಾಗಣೆ ದರ ಹೆಚ್ಚಳವಾಗಿರುವುದರಿಂದ ಬಿಯರ್‌ ಬೆಲೆ ಏರಿಕೆ ಮಾಡುವುದು ಅನಿವಾರ್ಯ ಎಂಬುದು ಕಂಪನಿಗಳು ಸ್ಪಷ್ಟನೆ ನೀಡಿದೆ.ಈಗಾಗಲೇ ಬಹುತೇಕ ಎಲ್ಲ ಬಿಯರ್‌ ಕಂಪನಿಗಳು ಪ್ರತಿ ಬಾಟಲ್‌ಗೆ 5 ರಿಂದ 10 ರೂ. ಏರಿಸುವ ಪ್ರಸ್ತಾಪವನ್ನು ನಿಯಮದಂತೆ ಅಬಕಾರಿ ಇಲಾಖೆಗೆ ಸಲ್ಲಿಸಿ, ಅನುಮತಿ…

Read More

ಕೊಪ್ಪಳ :   ಕೊಪ್ಪಳ ಜಿಲ್ಲಾ ನ್ಯಾಯಾಲಯವು (Koppal District Court)  ಕೊಪ್ಪಳ ಇಕೋರ್ಟ್ ನಲ್ಲಿ ಖಾಲಿ ಇರುವ ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶ ಹೊರಡಿಸಿದೆ. ಖಾಲಿ ಇರುವ 6 ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ  ಪಿಯುಸಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ತಿಂಗಳಿಗೆ ರೂ.21400-52650/- ವೇತನ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.  ಅಭ್ಯರ್ಥಿಯು 21-04-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು. ಸ್ಟೆನೋಗ್ರಾಫರ್ ರೂ.27650-52650/ ಹಾಗೂ ಟೈಪಿಸ್ಟ್ ಹುದ್ದೆಗೆ​ ರೂ.21400-42000/- ವೇತನ ನೀಡಲಾಗುತ್ತದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-04-2022 ಆಗಿದೆ. ಅರ್ಜಿ ಸಲ್ಲಿಸಲು https://recruitmenthck.kar.nic.in/district/kpl/stg/home.php,,https://recruitmenthck.kar.nic.in/district/kpl/typ/home.php ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. https://kannadanewsnow.com/kannada/bigg-news-al-qaeda-video-proves-unseen-hands-behind-hijab-controversy-araga-jnanendra/ https://kannadanewsnow.com/kannada/provisional-selection-list-released-for-village-accountant-post/

Read More

ಬೆಂಗಳೂರು:  ಬೆಂಗಳೂರಿನ ಜೆಜೆ ನಗರದಲ್ಲಿ ಯುವಕ ಚಂದ್ರು ಕೊಲೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಹಲವು ವಿವಾದಾತ್ಮಕ ಹೇಳಿಕೆಗೆ ಗ್ರಾಸವಾಗಿದೆ. ಯುವಕ ಚಂದ್ರು ಕೊಲೆ ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದ್ದು, ಕೋಮು ಸೌಹಾರ್ದತೆ ಕದಡಿರುವ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಬೈಕ್ ಡಿಕ್ಕಿಯಾಗಿದ್ದರಿಂದ ಉಂಟಾದ ಜಗಳ, ಭಾಷಾ ವಿಷಯವಾಗಿ ತಾರಕಕ್ಕೇರಿ, ಕನ್ನಡ ಬಿಟ್ಟು ಉರ್ದು ಮಾತನಾಡು ಎಂದಿದ್ದಕ್ಕೇ, ಉರ್ದು ಮಾತನಾಡೋದಕ್ಕೆ ಬರೋಲ್ಲ ಎಂದ ಯುವಕ ಚಂದ್ರವನ್ನು ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಇದನ್ನು ಸ್ವತಹ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದರು. ಹಾಗೆಯೇ ಈ ಕುರಿತಂತೆ ಇಂದು…

Read More

ಚಿಕ್ಕಮಗಳೂರು  : ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2021-22ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್‍ಎಸ್‍ಪಿ ಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಎಸ್‍ಎಸ್‍ಪಿ ಪೂರ್ಟಲ್ https://ssp.postmatric.karnataka.gov.in ಅಡಿಯಲ್ಲಿ ಅರ್ಜಿ ಸಲ್ಲಿಸುವುದು (ರಿನೀವಲ್ ಮತ್ತು ಪ್ರೆಸ್‍ರ್) ಕಡ್ಡಾಯವಾಗಿದ್ದು ಅರ್ಜಿ ಸಲ್ಲಿಸಲು ಏಪ್ರಿಲ್, 30 ಕೊನೆಯ ದಿನವಾಗಿದೆ. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಥವಾ ಆಯಾ ತಾಲೂಕು ನಿಗಮ ಸಂಪರ್ಕಿಸಬಹುದಾಗಿದೆ. ಈ ಕುರಿತು  ಆಯಾ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. https://kannadanewsnow.com/kannada/bigg-shock-to-drunkers-bear-rate/ https://kannadanewsnow.com/kannada/siddramyaya-ct-ravi-bangalore/

Read More


best web service company