Author: Kannada News

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಗೆ ತೆರಳುತ್ತಿದ್ದು, ಇದಕ್ಕೂ ಮುನ್ನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು  ಭೇಟಿಯಾಗಿದ್ದಾರೆ. ಹೌದು. ದೆಹಲಿ ಭೇಟಿಗೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ ಅವರು  ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸತತ 1 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ- ಬಿ.ಎಸ್ ಯಡಿಯೂರಪ್ಪ ಭೇಟಿ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಸಿಎಂ ಬೊಮ್ಮಾಯಿ ಸೋಮವಾರ ದೆಹಲಿಗೆ ತೆರಳಲಿದ್ದು, ಬುಧವಾರದಿಂದ  ರಾಜ್ಯ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಬೊಮ್ಮಾಯಿ ದೆಹಲಿ ಭೇಟಿ ಬಗ್ಗೆ ಕುತೂಹಲ ಮೂಡಿದೆ. https://kannadanewsnow.com/kannada/sail-recruitment-2022-apply-various-posts-online/ https://kannadanewsnow.com/kannada/for-viral-video-young-woman-embracing-rhinoceros-netizens-shock/  

Read More

ಚಿಕ್ಕಬಳ್ಳಾಪುರ:  ಸಂವಿಧಾನದ ಪೀಠಿಕೆಯಲ್ಲಿ ಮೂಲಭೂತ ಹಕ್ಕುಗಳಿವೆ, ಮೊದಲು ಅದನ್ನು ಸಿದ್ದರಾಮಯ್ಯ ಓದಿಕೊಳ್ಳಲಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್  ಹೇಳಿದ್ದಾರೆ. ಹಿಜಬ್ ಮೂಲಭೂತ ಹಕ್ಕು ಎಂಬ ಮಾಜಿ ಸಿಎಂ ಹೇಳಿಕೆ ಖಂಡಸಿರುವ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸಿದ್ದರಾಮಯ್ಯನವರು ಮೂಲಭೂತ ಹಕ್ಕುಗಳನ್ನ ಓದಿಕೊಳ್ಳಲಿ ಎಂದು ವಾಗ್ಧಾಳಿ ನಡೆಸಿದ್ದಾರೆ. ಸಿದ್ದರಾಮಯ್ಯನವರು ಹಿರಿಯರು, ಮಾಜಿ ಸಿಎಂಗಳಾಗಿದ್ದವರು. ಸಂವಿಧಾನ ಬಲ್ಲವರು ಈ ರೀತಿ ಮಾತಾಡೋದು ಸರಿ ಅಲ್ಲ ಎಂದರು. ಇದು ರಾಜಕೀಯದ ವಿಷಯ ಅಲ್ಲ. ದೇಶದ ಐಕ್ಯತೆಯ ವಿಷಯ. ದೇಶದಲ್ಲಿ ಶಾಂತಿ ಭಂಗ ತರುವ ವಿಚಾರಗಳು ಆಗಬಾರದು. ಸಹಬಾಳ್ವೆಯಿಂದ ನಡೆದುಕೊಂಡು ಹೋಗಬೇಕು. ಎಲ್ಲರನ್ನೂ ಸಮನಾಗಿ ನೋಡುವುದೇ ನಮ್ಮ ಆಶಯ ಎಂದರು. https://kannadanewsnow.com/kannada/amrutha-fadnavs-stmt-troll-in-social-media/ https://kannadanewsnow.com/kannada/telangana-cm-skips-pm-modi-receotion-at-airport/

Read More

ಮುಂಬೈ :  ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೆಂದ್ರ ಫಡ್ನವೀಸ್‌ ಅವರ ಪತ್ನಿ ಅಮೃತ ಫಡ್ನವೀಸ್‌ ಇದೀಗ ರಸ್ತೆ ಗುಂಡಿ, ಟ್ರಾಫಿಕ್‌ ಸಮಸ್ಯೆಯನ್ನು ವಿವಾಹ ವಿಚ್ಚೇದನ ಜತೆ ಸಂಬಂಧ ಕಲ್ಪಿಸಿ ಮಾತನಾಡಿದ್ದಾರೆ. ಮುಂಬೈಯಲ್ಲಿ ಜರುಗುವ ಟ್ರಾಫಿಕ್ ಸಮಸ್ಯೆಯಿಂದ ಡಿವೋರ್ಸ್ ಗಳು ಆಗುತ್ತಿವೆ ಎಂದು ಅವರು ಹೇಳಿದ್ದಾರೆ.  ಮುಂಬೈ ಮಹಾ ನಗರದಲ್ಲಿ  ಮೂರು ಮದುವೆ ಮುರಿದು ಬೀಳಲು ರಸ್ತೆ ಗುಂಡಿ, ಟ್ರಾಫಿಕ್‌ ಸಮಸ್ಯೆ ಕಾರಣ ಎಂದು ಅಮೃತ ಫಡ್ನವೀಸ್‌ ಅಭಿಪ್ರಾಯಪಟ್ಟಿದ್ದಾರೆ.ನಾನು ರಾಜಕಾರಣಿಯ ಪತ್ನಿಯಾಗಿ ಈ ಅಭಿಪ್ರಾಯ ವ್ಯಕ್ತಪಡಿಸುತ್ತಿಲ್ಲ. ಬದಲಾಗಿ ಸಮಾನ್ಯ ಪ್ರಜೆಯಾಗಿ ಈ ಮಾತು ಹೇಳುತ್ತಿದ್ದೇನೆ ಎಂದು ಅಮೃತ ಫಡ್ನವೀಸ್‌ ಹೇಳಿದ್ದಾರೆ. ಟ್ರಾಫಿಕ್‌ ಸಮಸ್ಯೆಯಿಂದಾಗಿ ಜನರು ಪ್ರಯಾಣದಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಕುಟುಂಬದ ಜತೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಮದುವೆ ಮುರಿದು ಬೀಳುತ್ತಿದೆ ಎಂದು ಅಮೃತ ಫಡ್ನವೀಸ್‌ ಅಭಿಪ್ರಾಯಪಟ್ಟಿದ್ದಾರೆ. ಪತ್ನಿ ಅಮೃತ ಫಡ್ನವೀಸ್‌ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಗೆ ಕಾರಣವಾಗಿದೆ. ಕೆಲವರು ಅಮೃತಾ ಅವರನ್ನು ಲೇವಡಿ ಮಾಡುವ…

Read More

ಬೆಂಗಳೂರು : ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraja Bommai) ರಾಷ್ಟ್ರ ರಾಜಧಾನಿ ದೆಹಲಿ ಪ್ರವಾಸ(Delhi Tour) ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ ಪೂರ್ವಭಾವಿ ಸಭೆ(State Budget Preliminary Meeting) ಮುಂದೂಡಿಕೆಯಾಗಿದೆ. ಅಂದ್ಹಾಗೆ, ಇದೇ ಫೆಬ್ರವರಿ 7ರಂದು ಬಜೆಟ್‌ ಪೂರ್ವಭಾವಿ ಸಭೆ ನಿಗದಿಯಾಗಿತ್ತು. ಆದ್ರೆ, ಸಿಎಂ ದೆಹಲಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಫೆ.9 ರಿಂದ ಫೆ.25ರವರೆಗೆ ರಾಜ್ಯ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದೆ. https://kannadanewsnow.com/kannada/epfo-updates-epfo-update-dob-online-full-details-here/ https://kannadanewsnow.com/kannada/good-news-govt-giving-uppinakayi-to-childrens/

Read More

ವಿಜಯಪುರ : ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆಕಾಯಿ ಉಪ್ಪಿನಕಾಯಿ ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತು ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಮಾಹಿತಿ ನೀಡಿದ್ದು, ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ ಉಪ್ಪಿನಕಾಯಿ ನೀಡುವ ಕುರಿತು ಶಿಕ್ಷಣ ಇಲಾಖೆ ಜೊತೆ ಚರ್ಚೆ ನಡೆಸುವುದಾಗಿ ಸಚಿವರು ಹೇಳಿದ್ದಾರೆ. https://kannadanewsnow.com/kannada/breaking-news-two-let-terrorist-gunned-down-in-encounter/ https://kannadanewsnow.com/kannada/application-invite-free-training-for-beuty-parlor/ https://kannadanewsnow.com/kannada/jobs-in-anaganavdi-good-news/

Read More

ಶಿವಮೊಗ್ಗ :  ‘SSLC’ ಪಾಸಾದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್  ಇಲ್ಲಿದೆ.  ಅಂಗನವಾಡಿಯಲ್ಲಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಲಾಗಿದೆ. ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 88 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಫೆಬ್ರವರಿ 13ರ ಒಳಗೆ ಅರ್ಜಿ ಸಲ್ಲಿಸಬಹುದು.  ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ  SSLC ಉತ್ತೀರ್ಣ ಕಡ್ಡಾಯವಾಗಿದ್ದು,ಅಂಗನವಾಡಿ ಸಹಾಯಕಿ ಹುದ್ದೆಗೆ 4ನೇ ತರಗತಿ ಉತ್ತೀರ್ಣರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 13 ರ ಒಳಗೆ ಇಲಾಖೆಯ ವೆಬ್‌ಸೈಟ್‌ ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ…

Read More

ಹೈದರಾಬಾದ್:11ನೇ ಶತಮಾನದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ಹೈದರಾಬಾದ್‌ನಲ್ಲಿ 216 ಅಡಿ ಎತ್ತರದ “ಸಮಾನತೆಯ ಪ್ರತಿಮೆ” ಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ನಂತರ ಮಾತನಾಡಿದ ಪ್ರಧಾನಿ ಮೋದಿ ರಾಮಾನುಜಾಚಾರ್ಯರ ಜ್ಞಾನ ಇಡೀ ವಿಶ್ವಕ್ಕೇ ವ್ಯಾಪಿಸಲಿ. ಯುಗಯುಗಗಳವರೆಗೆ ನಾವು ಮಾನವತ್ವಕ್ಕೆ ದಿಕ್ಕನ್ನು ತೋರಿಸಿದ್ದೇವೆ. ಮಾನವೀಯತೆ ಶಕ್ತಿಗೆ ಮೂರ್ತ ರೂಪ ನೀಡಲಾಗಿದೆ. ಪ್ರತಿಮೆ ಮುಂದಿನ ಪೀಳಿಗೆಗೆ ಮಾತ್ರ ಪ್ರೇರಣೆ ನೀಡಲ್ಲ. ಭಾರತದ ಪುರಾತನ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದಿದ್ದಾರೆ. ಹೈದಾರಾಬಾದ್ ಅನ್ನು ಭಾಗ್ಯನಗರ ಎಂದು ಪ್ರಧಾನಿ ನರೇಂದ್ರ ಮೋದಿ ಕರೆದಿದ್ದು, ರಾಮಾನುಜಾಚಾರ್ಯರ ಬೋಧನೆಗಳು ಸಮಾಜಕ್ಕೆ ದಾರಿದೀಪ ಎಂದು ಹೇಳಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಕೂಡ ರಾಮಾನುಜರನ್ನು ಪ್ರಶಂಸಿಸುತ್ತಿದ್ದರು. ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಪ್ರತಿಪಾದಿಸಿದ್ದರು. ಕನಕದಾಸರು ಕನ್ನಡದಲ್ಲಿ ರಾಮಾನುಜರನ್ನು ಪ್ರಶಂಸಿಸಿದ್ದಾರೆ ಎಂದು ಮೋದಿ ಹೇಳಿದರು. ಸಂತ ಶ್ರೀ ರಾಮಾನುಜಾಚಾರ್ಯರು ನಂಬಿಕೆ, ಜಾತಿ ಮತ್ತು ಪಂಥ ಸೇರಿದಂತೆ ಜೀವನದ ಎಲ್ಲಾ ಅಂಶಗಳಲ್ಲಿ ಸಮಾನತೆಯ ಕಲ್ಪನೆಯನ್ನು ಉತ್ತೇಜಿಸಲು ಹೆಸರುವಾಸಿಯಾಗಿದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು…

Read More

ಕೊಪ್ಪ :   ರಾಜ್ಯದ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ( SCHOLARSHIP)  ಅರ್ಜಿ ಸಲ್ಲಿಸುವ ದಿನಾಂಕವನ್ನು 28:02:2022 ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಇಲಾಖೆ ಆದೇಶ ಹೊರಡಿಸಿದೆ.  ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 31:1:2022  ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ನಂತರ ವಿದ್ಯಾರ್ಥಿಗಳು, ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು 28:02:2022 (ಫೆ.28) ರವರೆಗೆ ವಿಸ್ತರಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳು https://ssp.postmatric.karnataka.gov.in/ ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…

Read More

ಗೋವಾ : ರಾಹುಲ್ ಗಾಂಧಿ ಟೂರಿಸ್ಟ್ ರಾಜಕಾರಣಿ, ಪಕ್ಷ ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಗೋವಾದ ಕಲಗುಂಟ್ ಕ್ಷೇತ್ರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಟಿ ರವಿ ರಾಹುಲ್ ಗಾಂಧಿ ಸೀರಿಯಸ್ ರಾಜಕಾರಣಿ ಅಲ್ಲ, ಪಕ್ಷ ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ, ಪಂಚರಾಜ್ಯ ಚುನಾವಣೆ ನಡೆಯುವ  ವೇಳೆ ಯಾರಾದರೂ ತಿಂಗಳುಗಟ್ಟಲೇ ರಜೆ ಹಾಕಿ ಕುಳಿತುಕೊಳ್ಳುತ್ತಾರಾ..? ಪಕ್ಷವೇ ಅವರನ್ನು ಸೀರಿಯಸ್ ಆಗಿ ತೆಗೆದುಕೊಂಡಿಲ್ಲ  ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ರಾಹುಲ್ ಗಾಂಧಿ ಡೈನಾಸ್ಟಿ ಲೀಡರ್, ಜನರ  ಲೀಡರ್ ಅಲ್ಲೇ ಅಲ್ಲ. ಅವರ ಮೇಲೆ ಯಾವ ವೋಟು ಬೀಳ್ತಾವೆ ಹೇಳಿ ಎಂದು ವ್ಯಂಗ್ಯವಾಡಿದರು. https://twitter.com/CTRavi_BJP/status/1489902372642238468?cxt=HHwWiMDR9YyUma0pAAAA https://twitter.com/CTRavi_BJP/status/1489929844066762756?ref_src=twsrc%5Etfw%7Ctwcamp%5Etweetembed%7Ctwterm%5E1489929844066762756%7Ctwgr%5E%7Ctwcon%5Es1_&ref_url=https%3A%2F%2Fnewsfirstlive.com%2F2022%2F02%2F05%2Fgoa-election-2022-ct-ravi-says-rahul-gandhi-tourist-politician%2F

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :   ಉದ್ಯೋಗ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗಡಿ ಭದ್ರತಾ ಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. BSF ಕಾನ್ಸ್‌ಟೇಬಲ್  ಪುರುಷ ಮತ್ತು ಮಹಿಳೆ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ, ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್‌ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ಉತ್ತೀರ್ಣ ಅಥವಾ ವೃತ್ತಿಪರ ಸಂಸ್ಥೆಯಿಂದ ಐಟಿಐನಲ್ಲಿ 1 ವರ್ಷದ ಡಿಪ್ಲೊಮಾ ಮುಗಿಸಿರಬೇಕು. ಈ ಹುದ್ದೆಗಳಿಗೆ 18 ರಿಂದ 23 ವರ್ಷಗಳೊಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು.   ಆಯ್ಕೆಯಾಗುವ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ.ವರೆಗೆ ವೇತನ ಸಿಗಲಿದೆ. ಅರ್ಜಿ ಸಲ್ಲಿಸಲು ಮಾರ್ಚ್ 1 ಕೊನೆಯ ದಿನಾಂಕವಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್‌ bsf.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. https://kannadanewsnow.com/kannada/as-omykron-is-spread-by-rats-a-new-study-by-chinese-scientists-china-scientists-research/ https://kannadanewsnow.com/kannada/raheem-uchil-phone-call-on-kole/ https://kannadanewsnow.com/kannada/viral-video-cisf-saves-life-of-passenger/

Read More


best web service company