Author: Kannada News

ನವದೆಹಲಿ : ಇನ್ಮುಂದೆ  ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸಬೇಕಾಗಿಲ್ಲ. ಹೌದು. ದೆಹಲಿಯಲ್ಲಿ ಮಾಸ್ಕ್ ಧರಿಸುವುದರಿಂದ ವಿನಾಯಿತಿ ನೀಡಲಾಗಿದೆ.  ದೆಹಲಿ ಹೈಕೋರ್ಟ್ ಅಭಿಪ್ರಾಯದಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿರ್ಧಾರ ಕೈಗೊಂಡಿದೆ. ದೆಹಲಿಯಲ್ಲಿ ತಮ್ಮ ಕಾರಿನಲ್ಲಿ ಒಬ್ಬರೇ  ಚಾಲನೆ ಮಾಡುವವರು ಇನ್ನು ಮುಂದೆ ಮಾಸ್ಕ್ (Mask) ಧರಿಸುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ರಾಜಧಾನಿಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಇಂದು ಕೋವಿಡ್ ನಿರ್ಬಂಧಗಳನ್ನು ಪರಿಶೀಲಿಸುವ ಸಭೆಯಲ್ಲಿ ನಿರ್ಧರಿಸಿದೆ. ವ್ಯಕ್ತಿಯೊಬ್ಬ ತನ್ನ ತಾಯಿ ಜೊತೆ ಕಾರಿನಲ್ಲಿ ಕುಳಿತು ಕಾಫಿ ಕುಡಿಯುತ್ತಿದ್ದಾಗ ಮಾಸ್ಕ್ ಧರಿಸದ ವ್ಯಕ್ತಿಯೊಬ್ಬನಿಗೆ ದಂಡ ವಿಧಿಸಿದ ಘಟನೆ ದೆಹಲಿಯಲ್ಲಿ ನಡೆದಿತ್ತು. ನಾವು ನಮ್ಮ ಸ್ವಂತ ಕಾರಿನಲ್ಲಿ ಕುಳಿತಾಗ ನಾವು ಏಕೆ ಮಾಸ್ಕ್ ಧರಿಸಬೇಕು?” ಇದು ಅಸಂಬದ್ಧವಾಗಿದೆ.  ಎಂದು ಹೈಕೋರ್ಟ್​ ನ್ಯಾಯಪೀಠ ಪ್ರಶ್ನಿಸಿತ್ತು. ಇದೀಗ ದೆಹಲಿ ಹೈಕೋರ್ಟ್ ಅಭಿಪ್ರಾಯದಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ನಿರ್ಧಾರ ಕೈಗೊಂಡಿದೆ. ಇನ್ಮುಂದೆ  ಕಾರಿನಲ್ಲಿ ಒಬ್ಬರೇ ಹೋಗುವಾಗ ಮಾಸ್ಕ್ ಧರಿಸಬೇಕಾಗಿಲ್ಲ. https://kannadanewsnow.com/kannada/elgar-parishad-case-varavararao-surrendor-till-feb-28/ https://kannadanewsnow.com/kannada/karnataka-health-department-clarification-on-job-recruitment/  

Read More

ಬೆಂಗಳೂರು :  ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 60 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಲ್ಕು  ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್​ 2 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.  ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಬಹುದಾಗಿದೆ. https://kannadanewsnow.com/kannada/murugesh-nieani-reaction-to-panchamasali-stmt/ https://kannadanewsnow.com/kannada/guest-lectures-appountement/

Read More

ನವದೆಹಲಿ: ಕೇಂದ್ರ ಸರ್ಕಾರದ ಕಚೇರಿಗಳಲ್ಲಿ(Central Government Office) ಮಾರ್ಚ್‌ 1, 2020ರಿಂದ ಸುಮಾರು 8.72 ಲಕ್ಷ ಹುದ್ದೆಗಳು(8.72 lakh posts) ಖಾಲಿ ಇವೆ ಎಂದು ರಾಜ್ಯ ಸಭೆಗೆ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್‌(Jitendra Singh) ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಗುರುವಾರ ಈ ಕುರಿತು ಮಾಹಿತಿ ಹಂಚಿಕೊಂಡ ಸಚಿವರು, “ಮಾರ್ಚ್‌ 1, 2018ರಿಂದ 6,83,823 ಹುದ್ದೆಗಳು, ಮಾರ್ಚ್‌ 1, 2019ರಿಂದ 9,10,153 ಹುದ್ದೆಗಳು ಖಾಲಿಯಿದ್ದವು” ಎಂದಿದ್ದಾರೆ. ಇನ್ನು ಮಾರ್ಚ್‌ 1, 2020ರಿಂದ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ 8,72,243 ಹುದ್ದೆಗಳು ಖಾಲಿ ಇರುವುದಾಗಿ ಉತ್ತರಿಸಿದ್ದಾರೆ. ಇನ್ನು 2018-19 ಮತ್ತು 2020-21ನೇ ಸಾಲಿನಲ್ಲಿ 2,65,468 ಮಂದಿಯನ್ನ ಮೂರು ಪ್ರಮುಖ ನೇಮಕಾತಿ ಏಜೆನ್ಸಿಗಳಾದ ಸಿಬ್ಬಂದಿ ನೇಮಕ ಆಯೋಗ(SSC), ಕೇಂದ್ರೀಯ ಲೋಕಸೇವಾ ಆಯೋಗ(UPSC) ಮತ್ತು ರೈಲ್ವೆ ನೇಮಕಾತಿ ಆಯೋಗ(RRB) ಮೂಲಕ ನೇಮಕ ಮಾಡಿಕೊಂಡಿವೆ ಎಂದು ತಿಳಿಸಿದ್ದಾರೆ. https://kannadanewsnow.com/kannada/jobs-in-post-office/ https://kannadanewsnow.com/kannada/pmc-bank-scam-absconding-former-director-arrested-in-bihar/ https://kannadanewsnow.com/kannada/us-master-plan-for-border-protection-robot-dog-to-keep-an-eye-on-enemies/

Read More

ಹಾಸನ :  ಸಚಿವ ಮುರುಗೇಶ್ ನಿರಾಣಿ ದಾನವಾಗಿ ಕೊಟ್ಟ ವಸ್ತುಗಳನ್ನು ವಾಪಸ್ ಕೊಡುತ್ತೇವೆ ಎಂಬ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.  ಸುದ್ದಿಗಾರರ ಜೊತೆ ಮಾತನಾಡಿದ ಅವರು  ನಾನು ಕೊಟ್ಟ ದಾನದ ಬಗ್ಗೆ ಯಾವತ್ತೂ ಎಲ್ಲಿಯೂ ಹೇಳಿಲ್ಲ. ಮುಂದೆಯೂ ಹೇಳುವುದಿಲ್ಲ. ಅಂಥ ಜಾಯಮಾನ ನಮ್ಮದಲ್ಲ. ನಾವು ಬಲಗೈಯಿಂದ ಕೊಟ್ಟ ದಾನವು ಎಡಗೈಗೆ ಗೊತ್ತಿರುವುದಿಲ್ಲ. ಪಂಚಮಸಾಲಿ ಶ್ರೀಗಳ ಮೇಲೆ ನನಗೆ ಪೂಜ್ಯ ಭಾವನೆ ಇದೆ.  ನಮ್ಮ ಹೆಸರು ಹಾಳು ಮಾಡಲು ಇಂಥ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು. ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಗ್ಗೆಯೂ ಸಾಕಷ್ಟು ಗೌರವ ಇದೆ. ಅವರು ನಮ್ಮ ಪೂಜ್ಯರು. ಅವರ ಬಗ್ಗೆ ನಮ್ಮ ಅಭಿಮಾನ, ಗೌರವ ಹೀಗೆಯೇ ಮುಂದುವರೆಯಲಿದೆ.  ಅದರಲ್ಲಿ ಯಾವುದೇ ಅನುಮಾನ ಬೇಡ. ಈ ವಿಚಾರಗಳು ರಂಪಾಟವಾಗದೆ ಇಲ್ಲಿಯೇ ಮುಕ್ತಾಯವಾಗಲಿ ಎಂದು ಮನವಿ ಮಾಡಿದರು. ಸ್ವಾಮೀಜಿಯವರಿಗೆ ನಮ್ಮ ಕಡೆಯಿಂದ ಕೊಟ್ಟ ದಾನದ ಬಗ್ಗೆ ಬೇರೆ ಯಾರಾದರೂ ಮಾತಾಡಿದರೆ ಅದನ್ನು…

Read More

ಬೆಂಗಳೂರು: `2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿಯಿಂದ 9,800ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನುವ ವರದಿ ವಸ್ತುಸ್ಥಿತಿಗೆ ದೂರವಾಗಿದೆ’ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹೇಳಿದ್ದಾರೆ.  ಈ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಗೆ ಗುರುವಾರ ಸ್ಪಷ್ಟನೆ ನೀಡಿರುವ ಅವರು, `ಈವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 14 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಕಾರ್ಯಭಾರ ಮತ್ತು ವೇತನ ಎರಡನ್ನೂ ಸೂಕ್ತವಾಗಿ ನಿಗದಿಪಡಿಸಿ ಇವರ ಪೈಕಿ 10,600 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ವಾಸ್ತವ ಹೀಗಿರುವಾಗ, 9,881 ಮಂದಿ ಕೆಲಸ ಕಳೆದುಕೊಳ್ಳುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ?’ ಎಂದರು. ನೇಮಕ ಪ್ರಕ್ರಿಯೆಯಲ್ಲಿ ಸೇವಾಹಿರಿತನ, ವಯಸ್ಸು ಮತ್ತು ಯುಜಿಸಿ ನಿಗದಿತ ಅರ್ಹತೆ ಮೂರನ್ನೂ ಸಮಾನವಾಗಿ ಪರಿಗಣಿಸಲಾಗಿದೆ. ನೇಮಕಾತಿಯಲ್ಲಿ ಇವರಿಗೇ ಆದ್ಯತೆ ಕೊಡಲಾಗುತ್ತಿದೆ. ಜತೆಗೆ ನಿಯಮಾನುಸಾರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ 14 ಸಾವಿರ ಮಂದಿಯ ಪೈಕಿ ಕೇವಲ 3,400 ಮಂದಿ ಮಾತ್ರ ಆಯ್ಕೆ…

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆ(India Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್​ ಕಾರು ಚಾಲಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 19,900-63,200 ವೇತನ ನೀಡಲಾಗುತ್ತದೆ. ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು,  ಮಾರ್ಚ್​ 15 ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in ಗೆ ಭೇಟಿ ನೀಡಬಹುದು. https://kannadanewsnow.com/kannada/cryptocurrency-will-never-be-a-legal-tender-finance-secretary-somanathan/ https://kannadanewsnow.com/kannada/swamijis-meet-bs-yadiyurappa/

Read More

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ :   ಜಮ್ಮು ಕಾಶ್ಮೀರದ  ಕಿಶ್ತ್ವಾರ್ ಜಿಲ್ಲೆಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಕಿಶ್ತ್ವಾರ್ ನ  ಕೇಶವಾನ್ ನಲ್ಲಿ ‘ಇಕೋ’ ವಾಹನ ಅಪಘಾತ ಸಂಭವಿಸಿದ್ದು, ಆರು ಜನರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸ್ಥಳದಲ್ಲಿ ಐದು ಮಂದಿ ಮೃತಪಟ್ಟಿದ್ದರೆ, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಗಳನ್ನು ಲಾಟಿಫ್ ರಾಥರ್, ಅಬ್ದುಲ್ ರೆಹ್ಮಾನ್ ಬಟ್, ಮೊಹಮ್ಮದ್ ಇರ್ಫಾನ್, ಗುಲಾಮ್ ಹಸನ್ ಮತ್ತು ಜುಬೇರ್ ಅಹ್ಮದ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. https://kannadanewsnow.com/kannada/sootcase-video-viral-in-socila-media-knn-desk/ https://kannadanewsnow.com/kannada/cryptocurrency-will-never-be-a-legal-tender-finance-secretary-somanathan/ https://kannadanewsnow.com/kannada/swamijis-meet-bs-yadiyurappa/

Read More

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪರನ್ನು ಇಂದು ರಾಜ್ಯದ ವಿವಿಧ ಜಿಲ್ಲೆಯ ಮಠಾಧೀಶರು ಭೇಟಿಯಾದರು. ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆ  ಹಲವು ಮಠಾಧೀಶರು ಇಂದು ಯಡಿಯೂರಪ್ಪರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಹೊಸದುರ್ಗದ ಕುಂಚಿಟಗ ಮಹಾಸಂಸ್ಥಾನ ಮಠದ ಜಗದ್ಗುರು ಶಾಂತವೀರ ಮಹಾ ಸ್ವಾಮೀಜಿ,  ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಮಹಾ ಸ್ವಾಮಿ.  ಚಿತ್ರದುರ್ಗದ ಬೋವಿ ಗುರು ಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಶಿವಾನಂದ ಸ್ವಾಮೀಜಿ ಮತ್ತಿತರಿದ್ದರು. https://kannadanewsnow.com/kannada/cryptocurrency-will-never-be-a-legal-tender-finance-secretary-somanathan/ https://kannadanewsnow.com/kannada/indian-army-recruitement-2021-22/ https://kannadanewsnow.com/kannada/sootcase-video-viral-in-socila-media-knn-desk/

Read More

ಬೆಂಗಳೂರು:  ಯುವತಿಯನ್ನು ಸೂಟ್ ಕೇಸ್ ನಲ್ಲಿ ತುಂಬಿಕೊಂಡು ಹಾಸ್ಟೆಲ್‍ಗೆ ಕರೆತಂದು ಯುವಕ ಸಿಕ್ಕಿಬಿದ್ದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ತನ್ನ ಗೆಳತಿಯನ್ನು ಹಾಸ್ಟೆಲ್‍ಗೆ ದೊಡ್ಡ ಬ್ಯಾಗ್‍ನಲ್ಲಿ ತುಂಬಿಕೊಂಡು ಹೋಗಿದ್ದಾನೆ. ಗೇಟ್‍ನಲ್ಲಿ ಸೆಕ್ಯೂರಿಟಿ ಗಾರ್ಡ್‍ಗಳು ತಪಾಸಣೆ ನಡೆಸಿದ್ದಾರೆ.  ಈ ಸಂದರ್ಭದಲ್ಲಿ  ಬ್ಯಾಗ್ ಎತ್ತಿಕೊಂಡು ಓಡಲು ಯುವಕ ಪ್ರಯತ್ನಿಸಿದ್ದಾನೆ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಸೂಟ್ ಕೇಸ್ ತೆಗೆದು ನೋಡಿದಾಗ ಯುವತಿ ಹೊರಗೆ ಬಂದಿದ್ದಾಳೆ.ಈ ವಿಡಿಯೋ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉಡುಪಿಯದ್ದಲ್ಲ ಈ ವಿಡಿಯೋ ಉಡುಪಿ ಜಿಲ್ಲೆಯ ಮಣಿಪಾಲ ವಿವಿಯ ಎಂಐಟಿ ಕ್ಯಾಂಪಸ್‍ನ ವೀಡಿಯೋ ಎಂದು ಸುದ್ದಿ ಹರಿದಾಡುತ್ತಿತ್ತು. ಆದರೆ ಇದು ಎರಡು ವರ್ಷಗಳ ಹಿಂದಿನ ಹಳೆಯ ವೀಡಿಯೋ ಆಗಿದ್ದು ಮಣಿಪಾಲದ ವೀಡಿಯೋ ಅಲ್ಲ ಎಂದು ತಿಳಿದು ಬಂದಿದೆ. ಈ ವೀಡಿಯೋ ಡೆಹ್ರಾಡೂನ್‍ನದ್ದು ಎಂದು ಹೇಳಲಾಗುತ್ತಿದ್ದು, 2019ರಲ್ಲೇ ಈ ವೀಡಿಯೋ ವೈರಲ್ ಆಗಿತ್ತು ಎನ್ನಲಾಗಿದೆ. https://kannadanewsnow.com/kannada/bigg-breaking-date-fix-for-ranji-trophy-2-stage-tournament-begins-from-february-10/ https://kannadanewsnow.com/kannada/indian-army-recruitement-2021-22/ https://twitter.com/shibubuu27/status/1488834391283744770?ref_src=twsrc%5Etfw%7Ctwcamp%5Etweetembed%7Ctwterm%5E1488834391283744770%7Ctwgr%5E%7Ctwcon%5Es1_&ref_url=https%3A%2F%2Fwww.freepressjournal.in%2Fviral%2Fwatch-video-manipal-student-gets-caught-sneaking-girl-out-of-hostel-in-suitcase-twitter-reacts

Read More

ನವದೆಹಲಿ : ‘ SSLC’, ಪಿಯುಸಿ  ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು,  (Indian army Recruitment) ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇನೆಯ ಉತ್ತರ ಕಮಾಂಡ್‌ನ 71 ಸಬ್ ಏರಿಯಾದ ಆರ್ಮಿ ಸಪ್ಲೈ ಕಾರ್ಪ್ಸ್ ಘಟಕದಲ್ಲಿ ಮೆಸೆಂಜರ್, ಸಫೈವಾಲಾ, ಕುಕ್ ಮತ್ತು ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.’ ಮೆಸೆಂಜರ್, ಸಫಾಯಿವಾಲಾ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷಗಳ ಒಳಗಿರಬೇಕು. ಇನ್ನು ಒಬಿಸಿ ಅಭ್ಯರ್ಥಿಗಳು 28 ​​ವರ್ಷಗಳು ಮತ್ತು ಎಸ್‌ಎಸ್‌ಸಿ, ಎಸ್‌ಟಿಗೆ 30 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ. ಮೆಸೆಂಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000 ರಿಂದ 56,900 ರೂ. ವೇತನ ಸಿಗಲಿದೆ. ಅಡುಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ರಿಂದ 63, 200 ರೂ. ವೇತನ ಸಿಗಲಿದೆ. ಸಫಾಯಿವಾಲಾ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000 ರಿಂದ 56, 900 ರೂ. ವೇತನ ಸಿಗಲಿದೆ. ಗುಮಾಸ್ತ ಹುದ್ದೆಗಳಿಗೆ ಆಯ್ಕೆಯಾದ…

Read More


best web service company