ನವದಹೆಲಿ : ಬರೋಬ್ಬರಿ 43.2 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡುತ್ತಿದ್ದ ಖರ್ತನಾಕ್ ಮಹಿಳೆಯನ್ನು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸೂಟ್ಕೇಸ್ ನಲ್ಲಿ 43.2 ಕೋಟಿ ಮೌಲ್ಯದ ಡ್ರಗ್ಸ್ ನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸುತ್ತಿದ್ದಳು. ಈ ವೇಳೆ ಅಧಿಕಾರಿಗಳಿಗೆ ಅನುಮಾನ ಬಂದು ಆಕೆಯ ಸೂಟ್ಕೇಸ್ ಪರಿಶೀಲಿಸಿದಾಗ ಡ್ರಗ್ಸ್ ಪತ್ತೆಯಾಗಿದೆ. ಆಗ ಮಹಿಳೆಯನ್ನು ಬಂಧಿಸಲಾಗಿದೆ. ಡ್ರಗ್ಸ್ ಇರುವ ಶಂಕೆಯ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಆಕೆಯನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಮಹಿಳೆಯಿಂದ 2,880 ಗ್ರಾಂ. ತೂಕದ 43.2 ಕೋಟಿ ರೂ. ಬೆಲೆ ಬಾಳುವ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ. https://kannadanewsnow.com/kannada/ncw-pm-modi-address-national-vommission-for-women-foundation-day/ https://kannadanewsnow.com/kannada/viral-news-if-you-look-at-this-young-mans-ingenuity-to-get-a-job-youre-shahbash/
Author: Kannada News
ಬೆಂಗಳೂರು: ರಾಜ್ಯ ಜೀವನೋಪಾಯ ಇಲಾಖೆಯಡಿ ಬರುವ ಸಂಜೀವಿನಿ-ಕೆ.ಎಸ್.ಆರ್.ಎಲ್.ಪಿ.ಎಸ್ ಸಂಸ್ಥೆಯು ತನ್ನ ಪ್ರಚಾರ ರಾಯಭಾರಿಯಾಗಿದ್ದ ದಿವಂಗತ ನಟ ಪುನೀತ್ ರಾಜಕುಮಾರ್ ಸ್ಮರಣಾರ್ಥ ಸಹಸ್ರ ದೀಪಗಳನ್ನು ಬೆಳಗಿಸಿ, `ದೀಪ ನಮನ’ವನ್ನು ಸಲ್ಲಿಸಿತು. ಪುನೀತ್ ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ಶನಿವಾರ ಸಂಜೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನೆರೆದಿದ್ದ ಸಂಸ್ಥೆಯ ಸಿಬ್ಬಂದಿ ವರ್ಗ ಮತ್ತು ನೂರಾರು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯೆಯರು, “ಹೋದ ವರ್ಷದ ದೀಪಾವಳಿ ಸಂದರ್ಭದಲ್ಲಿ ನಮ್ಮ ಸಂಸ್ಥೆಯ ಮೂಲಕ ತಯಾರಿಸಿದಂತಹ ಮಣ್ಣಿನ ಹಣತೆಗಳ ವ್ಯಾಪಾರಕ್ಕೆ ದೀಪ ಸಂಜೀವಿನಿ ಎನ್ನುವ ವಿಶಿಷ್ಟ ಉಪಕ್ರಮವನ್ನು ಹಮ್ಮಿಕೊಂಡು, ಎಂಟು ಮಳಿಗೆಗಳನ್ನು ತೆರೆಯಲಾಗಿತ್ತು. ಇದಕ್ಕೆ ಉತ್ತೇಜನ ನೀಡಲು ಮುಂದೆ ಬಂದಿದ್ದ ಪುನೀತ್ ಅವರು ಪ್ರಚಾರ ರಾಯಭಾರಿಯಾಗಿ, ನಮಗೆ ಬೆಂಬಲ ಕೊಟ್ಟಿದ್ದರು’’ ಎಂದು ನೆನಪಿಸಿಕೊಂಡು, ಕಂಬನಿ ಮಿಡಿದರು. `ಪುನೀತ್ ಅವರು ಅಪಾರ ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಂಡಿದ್ದರಲ್ಲದೆ, ಯುವಜನಾಂಗಕ್ಕೆ ಸ್ಫೂರ್ತಿಯ ಸೆಲೆಯಾಗಿದ್ದರು. ಮಹಿಳೆಯರು ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಅವರು ಸದಾ ಮಿಡಿಯುತ್ತಿದ್ದರು. ಆದರೆ ಇದನ್ನೆಲ್ಲ ಅವರು ತೆರೆಯ ಮರೆಯಲ್ಲಿದ್ದುಕೊಂಡು ಮಾಡುತ್ತಿದ್ದರೇ…
ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ( ‘RBI’ ) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಮ್ಯಾನೇಜರ್, ಲೈಬ್ರರಿಯನ್, ಆರ್ಕಿಟೆಕ್ಟ್, ಕಾನೂನು ಅಧಿಕಾರಿ ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು. ಹುದ್ದೆಯ ವಿವರಗಳು ಕಾನೂನು ಅಧಿಕಾರಿ ಗ್ರೇಡ್ ಬಿ-02 ಮ್ಯಾನೇಜರ್(ಸಿವಿಲ್)-06 ಲೈಬ್ರರಿ ಪ್ರೊಫೆಶನಲ್ ಗ್ರೇಡ್ ಎ-01 ಆರ್ಕಿಟೆಕ್ಟ್-01 ಫುಲ್-ಟೈಂ ಕ್ಯುರೇಟರ್-01 ಮ್ಯಾನೇಜರ್(ಎಲೆಕ್ಟ್ರಿಕಲ್)-03 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಪದವಿ ಪೂರ್ಣಗೊಳಿಸಿರಬೇಕು. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು. https://kannadanewsnow.com/kannada/sringeri-thahasheeldar-car-driver-commited-suside/ https://kannadanewsnow.com/kannada/bigg-news-82-of-employees-dont-want-to-return-to-office-like-work-from-home-culture-study/ https://kannadanewsnow.com/kannada/good-news-govinda-karajola-karatka-state-news/
ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿ ಮತ್ತು ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಗ್ ಲಾಗ್ ಹುದ್ದೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ಶನಿವಾರ ನಡೆದ ಸಭೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಬ್ಯಾಗ್ ಲಾಗ್ ಹುದ್ದೆಗಳನ್ನು ಮುಂದಿನ ಮೂರು ದಿನಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ, ಅನುದಾನಿತ ತಾಂತ್ರಿಕ ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಸೇರಿದಂತೆ ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದ್ದು, ಒಟ್ಟಾರೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ನಿಗಮ ಮಂಡಳಿ ಮತ್ತು ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಗ್ ಲಾಗ್ ಹುದ್ದೆಗಳನ್ನು ಮುಂದಿನ ಮೂರು ತಿಂಗಳಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು…
ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿಯನ್ನ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಸಚಿವ ಆರ್. ಅಶೋಕ್ ಅಧ್ಯಕ್ಷತೆಯ ಉಪ ಸಮಿತಿ ರಚನೆ ಮಾಡಲಾಗಿದ್ದು,. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ, ಸಚಿವ ಪ್ರಭು ಚೌಹಾಣ್ ನೇಮಕ ಮಾಡಲಾಗಿದೆ. ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆಗೆ ಸಮಿತಿ ರಚನೆ ಮಾಡಲಾಗಿದೆ. ಗೋಮಾಳ, ಹುಲ್ಲು ಬನ್ನಿ, ಸೊಪ್ಪಿನ ಬೆಟ್ಟ, ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನನ್ನು ಖಾಸಗಿ ಸಂಘ ಸಂಸ್ಥೆಗಳಿಗೆ ಭೂ ಮಂಜೂರು ಮಾಡಲು ನೀತಿ ರೂಪಿಸಲು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದೆ. ನೀತಿಯನ್ನು ರೂಪಿಸಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಗೋವುಗಳನ್ನು ದತ್ತು ತೆಗೆದುಕೊಳ್ಳುವಂತೆ ಸಚಿವ ಪ್ರಭು ಚೌಹಾಣ್ ಮನವಿ ರಾಜ್ಯದಲ್ಲಿ ಗೋವುಗಳನ್ನು ಸಂರಕ್ಷಿಸಲು ಸಚಿವರುಗಳು, ಜನಪ್ರತಿನಿಧಿಗಳು, ಚಿತ್ರರಂಗದ ಕಲಾವಿದರು, ಸಂಘ-ಸಂಸ್ಥೆಗಳು ಗೋವುಗಳನ್ನು ದತ್ತು ಪಡೆದು…
ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಅಕ್ರಮ ಸಾಗುವಳಿ ಚೀಟಿ ಹಂಚಿಕೆ ಆರೋಪದ ಹಿನ್ನೆಲೆ ಶೃಂಗೇರಿ ತಹಶೀಲ್ದಾರ್ ಅಂಬುಜಾ ಮೇಲೆ ಜನವರಿ 6 ರಂದು ಎಸಿಬಿ ದಾಳಿ ನಡೆದಿತ್ತು. ಅವರು ಅಮಾಯಕರಿಗೆ ಬೋಗಸ್ ಹಕ್ಕು ಪತ್ರ ನೀಡಿ ವಂಚಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಎಸಿಬಿ ದಾಳಿ ಬಳಿಕ ತಹಶೀಲ್ದಾರ್ ಅಂಬುಜಾ ಜೈಲು ಪಾಲಾಗಿದ್ದರು. ಈ ವಿಚಾರ ತಾಲೂಕಿನಲ್ಲಿ ಇನ್ನೂ ಚರ್ಚೆಯಾಗುತ್ತಿರುವ ಬೆನ್ನಲ್ಲೇ ತಹಶೀಲ್ದಾರ್ ಅಂಬುಜಾ ಕಾರು ಚಾಲಕ ವಿಜೇತ್ (26) ಎಂಬಾತ ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ಅಡಿಕೆ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಇದೀಗ ಶೃಂಗೇರಿ ತಹಶೀಲ್ದಾರ್ ಕಾರು ಚಾಲಕನ ಸಾವಿನ ಸುತ್ತ ಹಲವಾರು ಅನುಮಾನಗಳು ಎದ್ದಿದೆ. ಶೃಂಗೇರಿ ತಹಶೀಲ್ದಾರ್ ಅಂಬುಜಾ ಜನವರಿ 6 ರಂದು ಎಸಿಬಿ (Anti Corruption Bureau – ACB) ಬಲೆಗೆ ಬಿದ್ದರು. ಈ ಹಿಂದೆಯೂ ಅಂಬುಜಾ…
ಬೆಂಗಳೂರು : ನೈರುತ್ಯ ರೈಲ್ವೆ- ಬೆಂಗಳೂರು ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 18 ಡಾಕ್ಟರ್ಸ್, ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 5ರಂದು ಸಂದರ್ಶನ ನಡೆಯಲಿದೆ. ಹುದ್ದೆಗಳ ವಿವರಗಳು ಡಾಕ್ಟರ್ಸ್(ಪಿಜಿಸಿಯನ್)- 1 ಡಾಕ್ಟರ್ಸ್(GDMO)-6 ಸ್ಟಾಫ್ ನರ್ಸ್-8 ಲ್ಯಾಬ್ ಟೆಕ್ನಿಷಿಯನ್-2 ಫಾರ್ಮಾಸಿಸ್ಟ್-1 ವಿದ್ಯಾರ್ಹತೆ ಡಾಕ್ಟರ್ಸ್(ಪಿಜಿಸಿಯನ್)- ಎಂ.ಡಿ, ಎಂಬಿಬಿಎಸ್ ಡಾಕ್ಟರ್ಸ್(GDMO)-ಎಂಬಿಬಿಎಸ್ ಲ್ಯಾಬ್ ಟೆಕ್ನಿಷಿಯನ್-ಪಿಯುಸಿ, DMLT ಫಾರ್ಮಾಸಿಸ್ಟ್-ಪಿಯುಸಿ, ಡಿಪ್ಲೋಮಾ, ಫಾರ್ಮಸಿಯಲ್ಲಿ ಪದವಿ, ಬಿ.ಫಾರ್ಮಾ ಸ್ಟಾಫ್ ನರ್ಸ್-ಬಿಎಸ್ಸಿ ನರ್ಸಿಂಗ್ ಸಂದರ್ಶನ ನಡೆಯುವ ಸ್ಥಳ ಮುಖ್ಯ ವೈದ್ಯಕೀಯ ಅಧೀಕ್ಷಕರು ರೈಲ್ವೆ ಆಸ್ಪತ್ರೆ, ಎಂಜಿ ರೈಲ್ವೇ ಕಾಲೋನಿ ಓಕಳಿಪುರಂ ಬೆಂಗಳೂರು – 560021 ಫೆಬ್ರವರಿ 5ರಂದು ಸಂದರ್ಶನ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ swr.indianrailways.gov.in ಗೆ ಭೇಟಿ ನೀಡಬಹುದು.
ಮೈಸೂರು : ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆಗೆ ಪಾಠ ಹೇಳಿಕೊಡಬೇಕಾದ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು, ಪೋಲಿ ಶಿಕ್ಷಕನ ವರ್ತನೆಗೆ ವ್ಯಾಪಕ ಅಕ್ರೋಶ ವ್ಯಕ್ತವಾಗಿತ್ತು. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಲ್ಲಿ ನಿರತನಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋವನ್ನು ಶಾಲೆಯ ಹಿರಿಯ ವಿದ್ಯಾರ್ಥಿಗಳೇ ಹರಿ ಬಿಟ್ಟಿದ್ದಾರೆ ಎನ್ನಲಾಗಿತ್ತು. ಇದೀಗ ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯ ಶಿಕ್ಷಕನನ್ನು ಸೇವೆಯಿಂದ ವಜಾ ಮಾಡಲಾಗಿದೆ. ಘಟನೆ ಸಂಬಂಧ ಶಿಕ್ಷಣಾಧಿಕಾರಿ ಅವರು ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯದ ಕುರಿತು ಮುಖ್ಯೋಪಾಧ್ಯಾಯರ ಮೇಲೆ ದೂರು ದಾಖಲಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಹೆಚ್.ಡಿ ಕೋಟೆ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರಿನನ್ವಯ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡು ಪರಿಶೀಲನೆ ನಡೆಸುತ್ತಿದ್ದು, . ಆರೋಪಿ ಶಿಕ್ಷಕನನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟಾರೆ…
ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಹಿನ್ನೆಲೆ ಶನಿವಾರ ಕೂಡ ತರಗತಿ ನಡೆಸಲು ಸೂಚಿಸಿ ಸುತ್ತೋಲೆ ಹೊರಡಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ಸೂಚನೆ ಕೊಟ್ಟಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆ ಶನಿವಾರ ಶಾಲೆ ಬಂದ್ ಮಾಡಲಾಗಿತ್ತು. ಆದರೆ, ಈಗ ಹೊಸ ಕೊರೊನಾ ಮಾರ್ಗಸೂಚಿಯಂತೆ ರಾಜ್ಯಾದ್ಯಂತ ಶನಿವಾರದಂದು ತರಗತಿ ನಡೆಸುವಂತೆ ಸುತ್ತೋಲೆ ಹೊರಡಿಸಿದೆ. ಇನ್ನೂ, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) ನೇತೃತ್ವದಲ್ಲಿ ಮಹತ್ವದ ಕೋವಿಡ್ ನಿಯಂತ್ರಣ ಸಭೆ ನಡೆಯಿತು. ಈ ಸಭೆಯಲ್ಲಿ ಜನವರಿ 31ರಿಂದ ನೈಟ್ ಕರ್ಪ್ಯೂ ( Night Curfew ) ರದ್ದು ಪಡಿಸಲಾಗಿದೆ. ಜೊತೆಗೆ ಕೋವಿಡ್ ( Covid19 ) ಕಡಿಮೆಯಾದ ಕಾರಣ ಬೆಂಗಳೂರಿನಲ್ಲಿ ಶಾಲೆಗಳ ಪುನರಾರಂಭಕ್ಕೂ ಅನುಮತಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ನೂತನ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಈ ಮಾರ್ಗಸೂಚಿಯಂತೆ ದಿನಾಂಕ 31-01-2022ರಿಂದ…
ನವದೆಹಲಿ : ಭಾರತದಲ್ಲಿ ಇದುವರೆಗೆ 165 ಕೋಟಿ ಡೋಸ್ ‘ಕೋವಿಡ್ ವ್ಯಾಕ್ಸಿನ್’ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 56 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಇದರೊಂದಿಗೆ ಶನಿವಾರದ ಹೊತ್ತಿಗೆ ಭಾರತದಲ್ಲಿ 165.04 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಕೋವಿಡ್ ವಿರುದ್ಧದ ರಾಷ್ಟ್ರದ ಸಾಮೂಹಿಕ ಹೋರಾಟದೊಂದಿಗೆ, ಭಾರತವು ಈಗ 165 ಕೋಟಿಗೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ನಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-jewellery-lovers-gold-and-silver-prices-fall-sharply-in-a-week/ https://kannadanewsnow.com/kannada/corona-bulletin-karnataka-8/ https://twitter.com/mansukhmandviya/status/1487270225053904897?ref_src=twsrc%5Etfw%7Ctwcamp%5Etweetembed%7Ctwterm%5E1487270225053904897%7Ctwgr%5E%7Ctwcon%5Es1_&ref_url=https%3A%2F%2Fpublictv.in%2F165-cr-covid-vaccines-administered-in-india%2F