ಚಿತ್ರದುರ್ಗ : ಕೃಷಿ ಇಲಾಖೆಯಿಂದ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಂಟಿಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು 2021-22 ನೇ ಆರ್ಥಿಕ ವರ್ಷದ ಸಾಲಿನಿಂದ ಯಶಸ್ವಿಯಾಗಿ ಪೂರೈಸಿ, ಮುಂದಿನ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಹಾಗೂ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವ ವಿದ್ಯಾಲಯಗಳಲ್ಲಿ 2022-23 ಸಾಲಿನÀ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ಹೊಂದಿರುವ ಎಲ್ಲ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಕಾರ್ಯಕ್ರಮದಡಿ ಕೃಷಿ ಇಲಾಖೆಯಿಂದ 2500 ರೂ. ಗಳಿಂದ 11000 ರೂ. ಗಳವರೆಗೆ ವಾರ್ಷಿಕ ಶಿಷ್ಯವೇತನವನ್ನು ಅರ್ಹ ಮಕ್ಕಳ ಬ್ಯಾಂಕ್ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಪದ್ದತಿಯಲ್ಲಿ ಜಮೆ ಮಾಡಲಾಗುತ್ತಿದೆ. ಈ ಯೋಜನೆಯನ್ನು 2021 ರ ಡಿಸೆಂಬರ್ 31…
Author: kannadanewslive
ಶಿವಮೊಗ್ಗ : ಸಿಎಂ ಬಸವರಾಜ ಬೊಮ್ಮಾಯಿ ಅವರು ಫೆ.08 ರ ನಾಳೆ ಶಿವಮೊಗ್ಗ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಫೆ.08 ರ ಮಧ್ಯಾಹ್ನ 12.15 ಕ್ಕೆ ಬೆಂಗಳೂರಿನದ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಮಧ್ಯಾಹ್ನ 1.35 ಕ್ಕೆ ಶಿವಮೊಗ್ಗದ ಹೆಲಿಪ್ಯಾಡ್ ತಲುಪುವರು. ಮಧ್ಯಾಹ್ನ 1.45 ಕ್ಕೆ ಎನ್ಇಎಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ರಾಜೀವ್ ಗಾಂಧಿ ವಸತಿ ನಿಗಮದ ಸಹಯೋಗದೊಡನೆ ರಾಜ್ಯ ಸರ್ಕಾರದ ವಸತಿ ಯೋಜನೆಗಳ ಸಂಯೋಜನೆಯಡಿ ನಿರ್ಮಿಸುತ್ತಿರುವ 3000 ಜಿ+2 ಗುಂಪು ಮನೆಗಳಲ್ಲಿ ಪೂರ್ಣಗೊಂಡಿರುವ 288 ಮನೆಗಳ ಉದ್ಘಾಟನೆ ಮತ್ತು 700 ಫಲಾನುಭವಿಗಳಿಗೆ ಅಂತಿಮ ಹಂಚಿಕೆ ಪತ್ರ ವಿತರಣೆ. ರೂ.348 ಲಕ್ಷ ಅಂದಾಜು ಮೊತ್ತದ ಶಿವಮೊಗ್ಗ ನಗರದಲ್ಲಿ 02 ಕೆರೆಗಳ ಲೋಕಾರ್ಪಣೆ ಮತ್ತು ಉದ್ಯಾನವನಗಳಲ್ಲಿ ಅಳವಡಿಸಿರುವ ಹೊರಾಂಗಣ ಜಿಮ್ ಪ್ರಾಧಿಕಾರದ ವಾಣಿಜ್ಯ ಸಂಕೀರ್ಣದ…
ಕಲಬುರಗಿ : ನಮ್ಮ ಅಧಿಕಾರದ ಅವಧಿಯಲ್ಲಿ ಹಿಂದೂಗಳಷ್ಟೇ ಅಲ್ಲ, ಮುಸ್ಲಿಮರ ಕೊಲೆಗಳೂ ಆಗಿವೆ. ಈ ಕೊಲೆಗಳಿಗೆ ಆರ್ ಎಸ್ಎಸ್ ಮತ್ತು ಬಿಜೆಪಿಯವರೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಧಿಕಾರದ ಅವಧಿಯಲ್ಲಿ ಹಿಂದೂಗಳಷ್ಟೇ ಅಲ್ಲ, ಮುಸ್ಲಿಂರ ಕೊಲೆಗಳೂ ಆಗಿವೆ. ಈ ಎಲ್ಲಾ ಕೊಲೆಗಳಿಗೆ ಆರ್ ಎಸ್ಎಸ್, ಬಿಜೆಪಿಯವರೇ ಕಾರಣ, ಪರೇಶ್ ಮೇಸ್ತ ಕೊಲೆಯ ಬಳಿಕ ದೊಡ್ಡ ಗಲಾಟೆ ಮಾಡಿದರು. ಆಮೇಲೆ ಏನಾಯ್ತು ಎಂದು ಎಲ್ಲಾರಿಗೂ ಗೊತ್ತು. ನಾನು ಯಾವತ್ತೂ ಹಿಂದೂ ಧರ್ಮದ ವಿರೋಧ ಮಾಡಿಲ್ಲ. ಸಾಮಾರಸ್ಯವನ್ನು ಹಾಳು ಮಾಡುವುದ ಬಿಜೆಪಿ ನಾಯಕರ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಾಕ್ ನಲ್ಲಿ ಸ್ಪರ್ಧೆ ಮಾಡಿದ್ರೆ 150ಸ್ಥಾನ ಗೆಲ್ಲುತ್ತೆ ಎಂಬ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಸಿ.ಟಿ.ರವಿ ಆರ್ ಎಸ್ಎಸ್ ಗಿರಾಕಿ, ಅವರಿಗೆ ಸುಳ್ಳು ಹೇಳುವುದೇ ಕೆಲಸ. ಕರ್ನಾಟಕ ಪಾಕಿಸ್ತಾನದಲ್ಲಿ ಇದೆಯಾ? ಭಾರತದಲ್ಲಿ ಇದೆಯಾ? ಚುನಾವಣೆ ನಡೆಯುತ್ತಿರುವುದು ಪಾಕಿಸ್ತಾನದಲ್ಲಾ? ಕರ್ನಾಟಕದಲ್ಲಾ? ಪೆದ್ದು, ಪೆದ್ದಾಗಿ…
ನವದೆಹಲಿ ; ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಯಾರು ಮುಖ್ಯಮಂತ್ರಿ ಆಗ್ತಾರೆ ಅನ್ನೋದು ಅಪ್ರಸ್ತುತ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ್ ಜೋಶಿ ಅವರು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದವರು. ಹಿಂದುಳಿದ ವರ್ಗದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾರೆ. ನಮ್ಮ ಪಕ್ಷದ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಯಾರು? ಎಂದು ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಎರಡು ಬಾರಿ ಆಕಸ್ಮಿಕವಾಗಿ ಸಿಎಂ ಆದವರು. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿ ಅಧಿಕಾರವನ್ನು ಅನುಭವಿಸಿದ್ದಾರೆ. ಈಗ ಜೆಡಿಎಸ್ ಕಥೆ ಮುಗತ್ತಿಯುತ್ತಿದ್ದು, ಹತಾಶರಾಗಿದ್ದಾರೆ. ಕೆಲವೇ ದಿನಗಳಲ್ಲಿ ಜೆಡಿಎಸ್ ಪಕ್ಷ ಎರಡು ಭಾಗವಾಗಲಿದೆ. ಕುಮಾರಸ್ವಾಮಿ ಬಣ, ಭವಾನಿ ರೇಣಣ್ಣ ಬಣವಾಗಲಿದೆ. ಇದೀಗ ಜೆಡಿಎಸ್ ಪಕ್ಷ ಹೆಚ್.ಡಿ.ಕುಮಾರಸ್ವಾಮಿ ನಿಯಂತ್ರಣದಲ್ಲಿ ಇಲ್ಲ ಎಂದರು. https://kannadanewsnow.com/kannada/the-people-of-bangalore-take-note-of-it-power-outages-in-many-parts-of-the-city-till-february-9/
ಬೆಂಗಳೂರು : ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, ಮೂವರು ಐಎಎಸ್ ( IAS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ( Karnataka Government ) ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳು 1) ಫೌಜಿಯಾ ತರನುಮ್- ಪರೀಕ್ಷಾ ನಿಯಂತ್ರಕರು, KPSC 2) ಭನ್ವರ್ ಸಿಂಗ್ ಮೀನ-ಜಂಟಿ ಪರೀಕ್ಷಾ ನಿಯಂತ್ರಕರು, KPSC 3) ರಾಹುಲ್ ರತ್ಮಮ್ ಪಾಂಡೆ- ಕೊಪ್ಪಳ ಜಿ.ಪಂ ಸಿಇಒ
ಧಾರವಾಡ : ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಬಸವ ಬೆಳಗು ಮತ್ತು ವಿದೇಶ ವಿದ್ಯಾ ವಿಕಾಸ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಫಲಾಪೇಕ್ಷಿಗಳು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ನಾಗರೀಕ ಸೇವಾ ಸಿಎಸ್ಸಿ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಅಲ್ಪಾವಧಿ ಕೋರ್ಸುಗಳು: ಯುವ ಜನರಿಗೆ ಅಲ್ಪಾವಧಿ ಕೋರ್ಸ್ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ರಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಉಚಿತ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು https://bcwd.kaushalkar.com ಜಾಲತಾಣದಲ್ಲಿ ಮಾ.31 ರೊಗಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ನಿಗಮದ ವೆಬ್ಸೈಟ್ https://kvldcl.karnataka.gov.in ನಲ್ಲಿ ಹೆಚ್ಚಿ ಮಾಹಿತಿಯನ್ನು ಪಡೆಯಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ : ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ ಪಡೆದಲ್ಲಿ, ಇಲಾಖಾ ವತಿಯಿಂದ ಶೇ.30 ರಷ್ಟು ಹಾಗೂ ಗರಿಷ್ಟ ರೂ.15 ಸಾವಿರ ವರೆಗೆ ಸಹಾಯಧನ ನೀಡಲಾಗುತ್ತದೆ. ಕುಶಲ ಕರ್ಮಿಯು 18 ವರ್ಷ ವಯಸ್ಸಾಗಿರಬೇಕು ಹಾಗೂ ಇಲಾಖೆ ನಿಗಧಿಪಡಿಸಿದ ಯಾವುದಾದರೂ ಒಂದು ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್, ಪ್ರಾದೇಶಿಕ ಬ್ಯಾಂಕ್ ವತಿಯಿಂದ ಸಾಲ (ಅವಧಿ ಹಾಗೂ ದುಡಿಮೆ ಬಂಡವಾಳ) ಪಡೆಯಬೇಕು. ಅಭ್ಯರ್ಥಿಯು ನಿಗಧಿ ಪಡಿಸಿದ ಅರ್ಜಿಯ ಜೊತೆಗೆ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ, ಕುಶಲಕರ್ಮಿ ವೃತ್ತಿಯ ಬಗ್ಗೆ ಧೃಡೀಕರಣ ಪತ್ರಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಫೆಬ್ರವರಿ, 10 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಕಚೇರಿಯನ್ನು (08272-228431 / 228746)…
ಬೆಂಗಳೂರು : ನಾನು ಪ್ರಲ್ಹಾದ್ ಜೋಶಿ ವಿರೋಧಿ ಅಲ್ಲ. ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುವುದಾದರೆ ಚುನಾವಣೆಗೆ ಮೊದಲೇ ಪ್ರಹ್ಲಾದ್ ಜೋಶಿ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬ್ರಾಹ್ಮಣ ಸಮುದಾಯಕ್ಕೆ ಯಾವತ್ತೂ ಅವಹೇಳನ ಮಾಡಿಲ್ಲ. ಬ್ರಾಹ್ಮಣ ಸಮುದಾಯದ ಹಲವರು ನನ್ನ ಸ್ನೇಹಿತರಿದ್ದಾರೆ. ರಾಮಕೃಷ್ಣ ಹೆಗಡೆ ಸಿಎಂ ಆಗಲು ಹೆಚ್.ಡಿ. ದೇವೇಗೌಡರು ಕಾರಣ ಎಂದರು. ನಮ್ಮ ಭಾಗದ ಬ್ರಾಹ್ಮಣ ಸಮುದಾಯದ ಸಂಸ್ಕೃತಿ ನನಗೆ ಗೊತ್ತಿದೆ. ಬಿಜೆಪಿಯವರಿಗೆ ಅಭಿವೃದ್ಧಿ, ಶಾಂತಿ ಬೇಕಿಲ್ಲ. ಗಾಂಧೀಜಿ ಹತ್ಯೆ ಮಾಡಿದವರ ದೇವಸ್ಥಾನ ಕಟ್ಟಲು ಹೊರಟಿದ್ದಾರೆ. ರಾಜಕೀಯ ಲೆಕ್ಕಚಾರದಲ್ಲಿ ನಾನು ಹೇಳಿಕೆ ನೀಡಿಲ್ಲ. ರಾಜ್ಯ ಸಮಸ್ಯೆಗಳ ವಿಚಾರ ಮುಂದಿಟ್ಟು ಹೇಳಿಕೆ ನೀಡಿದ್ದೇನೆ. ನಾನು ಯಾವುದೇ ತಪ್ಪು ಮಾತನಾಡಿಲ್ಲ. ಈ ವಿಚಾರದಲ್ಲಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. https://kannadanewsnow.com/kannada/watch-video-heartbreaking-video-of-birds-flying-before-turkey-earthquake-goes-viral/
ಟರ್ಕಿ: ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಮೂರು ವಿನಾಶಕಾರಿ ಭೂಕಂಪಗಳ ನಂತರ ಮಂಗಳವಾರ ಮಧ್ಯ ಟರ್ಕಿ ಪ್ರದೇಶದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸಾವಿನ ಸಂಖ್ಯೆ 4,000 ಕ್ಕೆ ಏರಿಕೆಯಾಗಿದೆ. ಇನ್ನೂ ಸಾವಿರಾರು ಜನರು ಗಾಯಗೊಂಡಿದ್ದಾರೆ ಮತ್ತು ಬದುಕುಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ. ಭಾರತ ಸೇರಿದಂತೆ ಅನೇಕ ದೇಶಗಳು ಸರಬರಾಜು ಮತ್ತು ಪರಿಹಾರ ತಂಡಗಳನ್ನು ಕಳುಹಿಸುತ್ತಿವೆ. ರಕ್ಷಣಾ ತಂಡಗಳು ಅವಶೇಷಗಳ ಮೂಲಕ ಶೋಧ ನಡೆಸುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಮೊದಲ ಭೂಕಂಪದ ಕೇಂದ್ರಬಿಂದು ಸಿರಿಯಾ ಗಡಿಯ ಗಾಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ಬಳಿ ಇತ್ತು. ಇತರ ಎರಡು ಭೂಕಂಪಗಳು ಹತ್ತಿರದ ಕಹ್ರಮನ್ಮರಸ್ ಪ್ರಾಂತ್ಯದಲ್ಲಿ ಸಂಭವಿಸಿದವು. ಟರ್ಕಿಯ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದ್ದಾರೆ, ಈ ಸಮಯದಲ್ಲಿ ಟರ್ಕಿಯ ಧ್ವಜಗಳು ರಾಷ್ಟ್ರದಾದ್ಯಂತ ಮತ್ತು ಸಾಗರೋತ್ತರ ರಾಜತಾಂತ್ರಿಕ ಕಾರ್ಯಾಚರಣೆಗಳಲ್ಲಿ ಅರ್ಧ ಸಿಬ್ಬಂದಿಯಲ್ಲಿ ಹಾರಾಡಲಿವೆ.
ಚಾಮರಾಜನಗರ : ಸಂಕಷ್ಟದಲ್ಲಿರುವ ಗಡಿ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಹೆದ್ದಾರಿ ಪ್ರಾಧಿಕಾರ ನೀಡಿದ್ದ ಪರಿಹಾರದ ಹಣವನ್ನು ವಾಪಸ್ ಪಡೆದಿದೆ. ಹೆದ್ದಾರಿ ಪ್ರಾಧಿಕಾರವು ಚಾಮರಾಜನಗರ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಪರಿಹಾರ ಹಣವನ್ನು ನೀಡಿತ್ತು. ಇದೀಗ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನೀಡಿದ್ದ ಪರಿಹಾರದ ಹಣವನ್ನು ಕಿತ್ತುಕೊಂಡಿದೆ. ಚಾಮರಾಜನಗರ ತಾಲೂಕಿನ ಮಂಗಲ, ಅಟ್ಟಗುಳಿಪುರ ಸರ್ಕಾರಿ ಶಾಲೆಗಳಿಗೆ 15 ಲಕ್ಷ ರೂ. ಪರಿಹಾರ ಹಣ ನೀಡಿತ್ತು. ಆದರೆ ಶಿಕ್ಷಣ ಇಲಾಖೆ ಈ ಹಣವನ್ನು ವಾಪಸ್ ನೀಡುವಂತೆ ಹೇಳಿದೆ. https://kannadanewsnow.com/kannada/breaking-news-bike-rider-dies-on-the-spot-in-bengaluru-after-woman-hits-accelerator-instead-of-brakes/