ಬಳ್ಳಾರಿ : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಕುಶಲಕರ್ಮಿಗಳಿಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಲ್ಲಿ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್ ಮತ್ತು ಪ್ರಾದೇಶಿಕ ಬ್ಯಾಂಕ್‍ಗಳಿಂದ ಪ್ರತಿ ಕುಶಲಕರ್ಮಿಗಳಿಗೆ ರೂ.50 ಸಾವಿರದವÀರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಕಮ್ಮಾರಿಕೆ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), ಶ್ರೀಗಂಧದ ಕ್ರಾಫ್ಟ್, ಮೈಸೂರು ರೋಸ್‍ವುಡ್ ಕೆತ್ತನೆ, ಚನ್ನಪಟ್ಟಣ ಮೆರಗು ಅಟಿಕೆಗಳು, ಬಿದ್ರಿವೇರ್, ಕಿನ್ಹಾಳ್ ಅಟಿಕೆಗಳು, ನವಲಗುಂದ ರತ್ನಗಂಬಳಿಗಳು, ಮುಂಡಗೋಡ್ ಫೈಲ್ ಕಾರ್ಪೆಟ್‍ಗಳು, ಕಲ್ಲಿನ ಕೆತ್ತನೆ, ಮರದ ಕೆತ್ತನೆಗಳು, ಮೈಸೂರು ಸಾಂಪ್ರದಾಯಿಕ ಚಿತ್ರಕಲೆ, ಗಂಜಿಫಾ ಕಲೆ, ಕುಂಬಾರಿಕೆ, ಟೆರಕೋಟ, ಮಣ್ಣಿನ ವಿಗ್ರಹ ತಯಾರಿಕೆ, ಲೋಹದ ಕರಕುಶಲ, ಬೆತ್ತ ಮತ್ತು ಬಿದಿರು, ಸಂಡೂರು ಲಂಬಾಣಿ ಕಸೂತಿ, ಕಸೂತಿ ಕಲೆ, ಕೋಕೋನಟ್ ಶೆಲ್ ಕ್ರಾಫ್ಟ್, ಕಂಬಳಿ ನೇಯುವ ಹಾಗೂ ಪಾದರಕ್ಷೆ ಹೆಣೆಯುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ದಾಖಲೆಗಳು: ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿರಬೇಕು, ಭಾವಚಿತ್ರ, ಆಧಾರ್ ಕಾರ್ಡ್, ಕುಶಲಕರ್ಮಿಕರ ದೃಢೀಕರಣ ಪತ್ರ, ಜಾತಿ…
Author: kannadanewslive
ಬೆಂಗಳೂರು : ಚಳಿಗೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ವಿಜಯಪುರ, ಬಾಗಲಕೋಟೆ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶೀತ ಅಲೆಯ ಭೀತಿ ಎದುರಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ರಾಜ್ಯದಲ್ಲಿ ವಿಪರೀತ ಚಳಿ ವಾತವಾರಣವಿದ್ದು ಬಾಗಲಕೋಟೆ, ವಿಜಯಪುರ ಮೈಸೂರು, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆಯಲ್ಲಿ 8.2, ಮೈಸೂರು 9.4, ವಿಜಯಪುರ 9.8 ಡಿಗ್ರಿ ಸೆಲ್ಸಿಯಸ್ ಇದೆ. ಮುಂದಿನ 24 ಗಂಟೆಗಳಲ್ಲಿ ಶೀತ ಮಾರುತಗಳು ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಈಗಾಗಲೇ ಶೀತ ಅಲೆಯ ಮುನ್ನೆಚ್ಚರಿಕೆ ನೀಡಲಾಗಿತ್ತು. ಮತ್ತೆ ಎರಡು ದಿನಗಳ ಕಾಲ ಮುಂದುವರೆಸಲಾಗಿದೆ. ಬೀದರ್ ನಲ್ಲಿ ರಾಜ್ಯದ ಅತಿ ಕಡಿಮೆ 8.6 ಡಿಗ್ರಿ ಸೆಲ್ಸಿಯಸ್ ಕನಿಷ್ಟ ಉಷ್ಣಾಂಶ ದಾಖಲಾಗಿದೆ. https://kannadanewsnow.com/kannada/bigg-news-good-news-for-nomadic-communities-in-the-state-pm-modi-distributes-title-deeds-to-1-2-lakh-people-on-january-19/ https://kannadanewsnow.com/kannada/bigg-news-important-information-for-primary-high-school-students-in-the-state-learning-sadhana-survey-to-be-conducted-on-january-17-18/
ಕಲಬುರಗಿ : ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾಗಿ ರಾಜ್ಯದಾದ್ಯಂತ ಲಂಬಾಣಿ ತಾಂಡಾ, ಹಟ್ಟಿ, ಹಾಗೂ ಆಡಿಯಲ್ಲಿರುವ ಅಲೆಮಾರಿ ಜನಾಂಗದವರಿಗೆ ಖಾಯಂ ಸೂರು ಒದಗಿಸುವ ದೃಷ್ಠಿಯಿಂದ 1 ಲಕ್ಷ 2 ಸಾವಿರ ಜನರಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು. ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊದಲನೇ ಹಂತವಾಗಿ ಜನವರಿ 19ಕ್ಕೆ ಕಲಬುರಗಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ಸೇರಿ 5 ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಜಿಲ್ಲೆಯ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು. ಇದಾದ ನಂತರ ಮುಂದಿನ ತಿಂಗಳ ಎರಡನೇ ಹಂತದಲ್ಲಿ ಬಂಜಾರಾ ಸಮುದಾಯ ಆರಾದ ಧೈವ ಸಂತ ಸೇವಾಲಾಲ ಮಹಾರಾಜರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಇದೇ ರೀತಿಯಲ್ಲಿ ಹಕು ಪತ್ರ ವಿತರಣೆ ಮಾಡಲಾಗುತ್ತಿದೆ. ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿಸಿ ಮೂಲಸೌಕರ್ಯ ಒದಗಿಸುವ ಕಂದಾಯ ಇಲಾಖೆಯ ಕ್ರಾಂತಿಕಾರಿ ಹೆಜ್ಜೆ…
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ವಿದ್ಯುತ್ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಮೂಲಕ ಬಳಕೆದಾರರಿಗೆ ಶಾಕ್ ನೀಡಲಾಗಿತ್ತು. ಅಗತ್ಯ ವಸ್ತುಗಳ ದರ ಹೆಚ್ಚಳದ ನಡುವೆಯೂ ವಿದ್ಯುತ್ ದರ ಹೆಚ್ಚಳ ಜನಸಾಮಾನ್ಯರಿಗೆ ಮತ್ತೊಂದು ಹೊರೆ ನೀಡಿದಂತೆ ಆಗಿತ್ತು. ಈಗ ಮತ್ತೆ ಎಸ್ಕಾಂನಿಂದ ವಿದ್ಯುತ್ ದರ ಹೆಚ್ಚಳ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೆ ಶಾಕ್ ನೀಡಲು ಎಸ್ಕಾಂ ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಎಫ್ ಕೆ ಸಿ ಸಿ ಐ ಅಧ್ಯಕ್ಷ ಗೋಪಾಲ ರೆಡ್ಡಿಯವರು, ಎಸ್ಕಾಂ ನಿಂದ ರಾಜ್ಯ ಸರ್ಕಾರಕ್ಕೆ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ವೇಳೆ ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ರೇ, ವಿದ್ಯುತ್ ದರ ಹೆಚ್ಚಳವಾಗಲಿದೆ ಎಂದರು. ನಾವು ವಿದ್ಯುತ್ ದರ ಏರಿಕೆ ಮಾಡದಂತೆ ಸರ್ಕಾರಕ್ಕೆ ಆಗ್ರಹಿಸುತ್ತೇವೆ. ಇದು ಕೈಗಾರಿಕೆಗಳಿಗೆ ಆರ್ಥಿಕ ಹೊರೆಯನ್ನು ಉಂಟು ಮಾಡಲಿದೆ. ಅಲ್ಲದೇ ಪದೇ ಪದೇ ವಿದ್ಯುತ್ ದರ ಏರಿಕೆಯಿಂದಾಗಿ ಕೈಗಾರಿಕೆಗಳೇ ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಬಹುದು…
ಬೆಂಗಳೂರು : ರಾಜ್ಯ ಸರ್ಕಾರವು ಗುತ್ತಿಗೆ ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಲಾಗಿದ್ದು, ಬಿಬಿಎಂಪಿಯ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಅಧಿಸೂಚನೆ ಹೊರಡಿ ಸಲಾಗಿದ್ದು, ಒಟ್ಟು 3,673 ಪೌರಕಾರ್ಮಿಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಬಿಬಿಎಂಪಿಯ ವೆಬ್ ಸೈಟ್ https://bbmp.gov.in ಗೆ ಭೇಟಿ ನೀಡಿ ನೇಮಕಾತಿಯ ಅಧಿಸೂಚನೆಯನ್ನು ನೋಡಬಹುದು. ಜ.16ರಿ೦ದ 30ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಜ.16ರ ಬೆಳಗ್ಗೆ 10ರಿಂದ ಅರ್ಜಿ ವಿತರಣೆ ಮಾಡಲಾಗುತ್ತದೆ. ಜನವರಿ 30 ಸಂಜೆ 5ರ ಒಳಗೆ ಭರ್ತಿ ಮಾಡಿದ ಅರ್ಜಿ ಹಾಗೂ ಸೂಚಿಸಿದ ದಾಖಲೆಗಳೊಂದಿಗೆ ಸಲ್ಲಿಸಿ ಸ್ವೀಕೃತಿ ಪಡೆಯಲು ಸೂಚಿಸಲಾಗಿದೆ. ನೇಮಕಾತಿಗೆ ಅಧಿಸೂಚನೆ ಹೊರಡಿಸಲಾದ 3,673 ಹುದ್ದೆಗಳ ಪೈಕಿ 3,243 ಹುದ್ದೆಗಳನ್ನು ಸಾಮಾನ್ಯ ಹುದ್ದೆಗಳಾಗಿದ್ದು, ಉಳಿದ 430 ಗಳಿಗೆ ನೇಮಕಾತಿಗೆ ಹುದ್ದೆಗಳು ಕಲ್ಯಾಣ ಕರ್ನಾಟಕ ಅಭ್ಯರ್ಥಿ ಮೀಸಲಿಡಲಾಗಿದೆ. ಪೌರ ಕಾರ್ಮಿಕರನ್ನು ಕಾಯಂಗೊಳಿಸುವುದಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗಿದೆ. ಪೌರಕಾರ್ಮಿಕರಿಗೆ 217 ಸಾವಿರದಿಂದ 228,950…
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 3, 5, 8, 9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜನವರಿ 17, 18 ರಂದು ಕಲಿಕಾ ಸಾಧನಾ ಸಮೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಆಯ್ದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 3, 5, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಯಾಂಪಲ್ ಬೇಸ್ ಆಧಾರದ ಮೇಲೆ ರಾಜ್ಯ ಕಲಿಕಾ ಸಾಧನಾ ಸಮೀಕ್ಷೆ (SAS) ಯನ್ನು ದಿನಾಂಕ: 17.01.2023 ಮತ್ತು 18,01.2023 ರಂದು ನಡೆಸಲಾಗುತ್ತಿದೆ. ರಾಜ್ಯದ ಆಯ್ದ ಸರ್ಕಾರಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 3, 5, 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಸಮೀಕ್ಷೆ ನಡೆಸಲಾಗುವುದು. 3 ನೇ ತರಗತಿ ವಿದ್ಯಾರ್ಥಿಗಳಿಗೆ 2 ವಿಷಯಗಳಿಗೆ, 5 ನೇ ತರಗತಿ ವಿದ್ಯಾರ್ಥಿಗಳಿಗೆ 4 ವಿಷಯಗಳಿಗೆ ಮತ್ತು 8, 9 ಮತ್ತು 10 ನೇ ತರಗತಿಗಳ ವಿದ್ಯಾರ್ಥಿಗಳಿಗೆ 6…
ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತೀ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1000, 1500, 2000, ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಮೊದಲು ಚಾಲನೆಗೊಳಿಸಿ ಅದನ್ನು ಅನುಷ್ಠಾನ ಗೊಳಿಸಿ, ಪ್ರತಿ…
ಬಳ್ಳಾರಿ : ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಕುಶಲಕರ್ಮಿಗಳಿಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಲ್ಲಿ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್ ಮತ್ತು ಪ್ರಾದೇಶಿಕ ಬ್ಯಾಂಕ್‍ಗಳಿಂದ ಪ್ರತಿ ಕುಶಲಕರ್ಮಿಗಳಿಗೆ ರೂ.50 ಸಾವಿರದವÀರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ. ಕಮ್ಮಾರಿಕೆ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), ಶ್ರೀಗಂಧದ ಕ್ರಾಫ್ಟ್, ಮೈಸೂರು ರೋಸ್‍ವುಡ್ ಕೆತ್ತನೆ, ಚನ್ನಪಟ್ಟಣ ಮೆರಗು ಅಟಿಕೆಗಳು, ಬಿದ್ರಿವೇರ್, ಕಿನ್ಹಾಳ್ ಅಟಿಕೆಗಳು, ನವಲಗುಂದ ರತ್ನಗಂಬಳಿಗಳು, ಮುಂಡಗೋಡ್ ಫೈಲ್ ಕಾರ್ಪೆಟ್‍ಗಳು, ಕಲ್ಲಿನ ಕೆತ್ತನೆ, ಮರದ ಕೆತ್ತನೆಗಳು, ಮೈಸೂರು ಸಾಂಪ್ರದಾಯಿಕ ಚಿತ್ರಕಲೆ, ಗಂಜಿಫಾ ಕಲೆ, ಕುಂಬಾರಿಕೆ, ಟೆರಕೋಟ, ಮಣ್ಣಿನ ವಿಗ್ರಹ ತಯಾರಿಕೆ, ಲೋಹದ ಕರಕುಶಲ, ಬೆತ್ತ ಮತ್ತು ಬಿದಿರು, ಸಂಡೂರು ಲಂಬಾಣಿ ಕಸೂತಿ, ಕಸೂತಿ ಕಲೆ, ಕೋಕೋನಟ್ ಶೆಲ್ ಕ್ರಾಫ್ಟ್, ಕಂಬಳಿ ನೇಯುವ ಹಾಗೂ ಪಾದರಕ್ಷೆ ಹೆಣೆಯುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ದಾಖಲೆಗಳು: ಕನಿಷ್ಠ 18 ವರ್ಷ ಮೇಲ್ಪಟ್ಟವರಾಗಿರಬೇಕು, ಭಾವಚಿತ್ರ, ಆಧಾರ್ ಕಾರ್ಡ್, ಕುಶಲಕರ್ಮಿಕರ ದೃಢೀಕರಣ ಪತ್ರ, ಜಾತಿ…
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಬಸವಜನ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಮೀಸಲಾತಿ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿದ್ದರು. ರಾಜ್ಯ ಸರ್ಕಾರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಾವು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಿದ್ದರೆ ಅಲ್ಲೋಲ, ಕಲ್ಲೋಲ ಆಗುತ್ತಿತ್ತು. ಮೀಸಲಾತಿಗಾಗಿ 2 ವರ್ಷದಿಂದ ನಿರಂತರ ಹೋರಾಟ ಮಾಡುತ್ತಿದ್ದೇವೆ. ಹೆದ್ದಾರಿ ತಡೆದಿದ್ದೇವೆ. 2 ಲಕ್ಷ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಇಷ್ಟಾದರೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದರು. ಮೀಸಲಾತಿಗಾಗಿ ಏಕಾಂಗಿ ಹೋರಾಟ ಮಾಡಲು ನಿರ್ಧರ ಮಾಡಿದ್ದೆ, ಆದರೆ ಸಮುದಾಯದ ಜನರು ತಾವು ಪಾಲ್ಗೊಳ್ಳುತ್ತೇವೆ ಎಂದು ಹೇಳಿದ್ರು, ಜನವರಿ 16 ರಿಂದ ಪ್ರತಿದಿನ 2 ತಾಲೂಕುಗಳಿಂದ ಜನರು ಬರಲಿದ್ದಾರೆ. ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದರು. https://kannadanewsnow.com/kannada/cm-bommai-meets-cp-yogeshwar/
ಶಿವಮೊಗ್ಗ : ಮಾಜಿ ಸಿಎಂ ಸಿದ್ದರಾಮಯ್ಯ ಎರಡಲ್ಲ, 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ರೂ ಸೋಲ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎರಡಲ್ಲ, 25 ಕ್ಕೂ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ರೂ ಸೋಲ್ತಾರೆ, ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲುವ ಚಾನ್ಸೇ ಇಲ್ಲ, ಕಾಂಗ್ರೆಸ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿ ಸಿದ್ದರಾಮಯ್ಯ ಸೋಲಿಸುವುದು ನಿಶ್ಚಿತ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದಾರೆ. ಈಗ ಅದೇ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯರನ್ನು ಸೋಲಿಸ್ತಾರೆ ಎಂದರು. ಸ್ಯಾಂಟ್ರೋ ರವಿ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗದೇ ತನಿಖೆ ಮಾಡಬೇಕು.ಸ್ಯಾಂಟ್ರೋ ರವಿ ಮಾಡಿರುವ ದಂಧಗೆ ಕ್ಷಮೆ ಇಲ್ಲ, ವಿನಾಕಾರಣ ಗೃಹ ಸಚಿವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಕಷ್ಟು ಆರೋಪ ಮಾಡಬಹುದು. ಮತ್ತೊಬ್ಬರನ್ನು ಕಳ್ಳ ಅಂತ ಹೇಳಿ ತಾನು ಸಾಚಾ ಅಂತ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು…