ಬೆಂಗಳೂರು : ಹವಾಮಾನ ಬದಲಾವಣೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ. ಹೌದು, ದಕ್ಷಿಣ ಕರ್ನಾಟಕದ ಜಿಲ್ಲೆಗಳಿಗಿಂತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಟ ತಾಪಮಾನಗಳಲ್ಲಿ ಉಷ್ಣಾಂಶ ಕುಸಿತವಾಗಿದೆ. ಬೀದರ್ ನಲ್ಲಿ 7.2, ವಿಜಯಪುರದಲ್ಲಿ 11.4 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಗದಗ ಮತ್ತು ಹಂಪಿಯಲ್ಲಿ ಗರಿಷ್ಠ ತಾಪಮಾನ ತಲಾ 2 ಡಿಗ್ರಿ ಸೆಲ್ಸಿಯಸ್, ಕನಿಷ್ಟ ತಾಪಮಾನದಲ್ಲಿ ಬೀದರ್ 9, ವಿಜಯಪುರ 5, ರಾಯಚೂರಿನಲ್ಲಿ 3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದಲ್ಲಿ ಸತತ ಮಳೆ ಸುರಿದ ಪರಿಣಾಮ ವಾತಾವರಣದಲ್ಲಿ ತೇವಾಂಶ ಇರುವುದರಿಂದ ವಾಡಿಕೆಗಿಂದ ಮುನ್ನ ಚಳಿ ಶುರುವಾಗಿದ್ದು, ಇದೀಗ ಮತ್ತೆ ಹಲವು ಜಿಲ್ಲೆಗಳಲ್ಲಿ ಥಂಡಿ ವಾತಾವರಣ ಹೆಚ್ಚಾಗಿದೆ. https://kannadanewsnow.com/kannada/bigg-news-660-assistant-engineers-recruitment-kpsc-releases-provisional-selection-list/ https://kannadanewsnow.com/kannada/bigg-news-siddaramaiah-to-announce-his-candidature-from-kolar-today/
Author: kannadanewslive
ಬೆಂಗಳೂರು : ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ (KPSC) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 660 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಾಗರಿಕ ಸೇವೆಗಳು ಮತ್ತು ತಿದ್ದುಪಡಿ ನಿಯಮಗಳನ್ವಯ ಸಿದ್ದಪಡಿಸಲಾಗಿದ್ದು, ಅಭ್ಯರ್ಥಿಗಳ ಮಾಹಿತಿಗಾಗಿ ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಆಯ್ಕೆಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಪಟ್ಟಿ ಪ್ರಕಟಿಸಿದ ಏಳು ದಿನಗಳೊಳಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು 560001 ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕೋರಲಾಗಿದೆ. https://kannadanewsnow.com/kannada/on-camera-bjp-leader-shot-at-busy-market-in-madhya-pradesh/ https://kannadanewsnow.com/kannada/bigg-news-heres-the-key-information-for-antyodaya-bpl-ration-card-holders/
ಧಾರವಾಡ : ಪಡಿತರ ಫಲಾನುಭವಿಗಳಿಗೆ ಜನೆವರಿ-2023ನೇ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. ವಿತರಣೆಯಾಗುವ ಆಹಾರಧಾನ್ಯ ಕಡಿಮೆ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಕಾರರು ನೀಡಿದಲ್ಲಿ ಧಾರವಾಡ ಪಡಿತರ ಪ್ರದೇಶದ ಆಹಾರ ನಿರೀಕ್ಷಿಕರು 8088737170, ಧಾರವಾಡ ತಾಲ್ಲೂಕು ಆಹಾರ ಶಿರಸ್ತೇದಾರ 9845202400, 8310109795 ಹಾಗೂ ಅಳ್ನಾವರ 9448221892. ಹುಬ್ಬಳ್ಳಿ ಪಡಿತರ ಪ್ರದೇಶದ ಆಹಾರ ನಿರೀಕ್ಷಕರು 9611123128. 8310490713, 9886320360, 9482532326, ಕಲಘಟಗಿ 9741304522, ಕುಂದಗೋಳ 8618525185, ನವಲಗುಂದ 9902142458 ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಹಾರ ಶಾಖೆ 0836 2444594ಗೆ ದೂರು ಸಲ್ಲಿಸಿದಲ್ಲಿ ಅಂತವರ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದೆಂದು ಆಹಾರ,…
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಸಿ ಸಿದ್ದು ನಿಜ ಕನಸು ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಲು ಬಿಜೆಪಿ ಮುಂದಾಗಿದ್ದು, ಇಂದು ಬೆಂಗಳೂರಿನ ಪುರಭವನದಲ್ಲಿ ಪುಸ್ತಕ ಬಿಡಗುಡೆ ಕಾರ್ಯಕ್ರಮ ನಡೆಯಲಿದೆ. ಇಂದು ಬೆಂಗಳೂರಿನ ಪುರಭವನದಲ್ಲಿ ಸಿದ್ದು ನಿಜಕನಸುಗಳು ಎಂಬ ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರು ಬಿಡುಗಡೆ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ರೋಹಿತ್ ಚಕ್ರತೀರ್ತ, ಸಂತೋಷ್ ತಮ್ಮಯ್ಯ ಸೇರಿದಂತೆ ಹಲವು ಬರಹಗಾರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. https://twitter.com/drashwathcn/status/1612064782693306374?ref_src=twsrc%5Etfw%7Ctwcamp%5Etweetembed%7Ctwterm%5E1612064782693306374%7Ctwgr%5E8eab0e4189df29d1243518f4f5cf93d83dbf66f7%7Ctwcon%5Es1_&ref_url=https%3A%2F%2Ftv9kannada.com%2Fpolitics%2Fbjp-to-release-siddu-nija-kanasugalu-book-against-congress-leader-siddaramaiah-on-jan-9th-in-bengaluru-rbj-au58-497775.html
ಬೆಂಗಳೂರು : ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ ನೀಡಲಿದ್ದು, ಅಲ್ಲಿ ನಡೆಯುವ ಕಾರ್ಯಕರ್ತರ ಸಮಾವೇಶದಲ್ಲಿ ತಾವು ಕೋಲಾರದಿಂದ ಸ್ಪರ್ದಿಸುವ ಕುರಿತು ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಕೋಲಾರಕ್ಕೆ ಹೋಗಿ ಬಂದಿರುವ ಸಿದ್ದರಾಮಯ್ಯ ಇದೀಗ ಮತ್ತೆ ಕೋಲಾರಕ್ಕೆ ಹೋಗುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಜನವರಿ 9 ರ ಇಂದೇ ಕೋಲಾರದಲ್ಲಿ ಅಧಿಕೃತವಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡ್ತಾರಾ? ಎಂಬುದು ಕಾದು ನೋಡಬೇಕು. ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಇನ್ನೂ ಫೈನಲ್ ಆಗಿಲ್ಲ, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗಾಗಿ ವರುಣಾ ಕ್ಷೇತ್ರವನ್ನು ತ್ಯಾಗ ಮಾಡಿ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಇತ್ತ ಸಿದ್ದರಾಮಯ್ಯನವರು ತಮಗೆ ಕೈ ಹಿಡಿದ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ. ಸದ್ಯ ಕೋಲಾರದ ಕಡೆ ಮುಖಮಾಡಿರುವ ಸಿದ್ದರಾಮಯ್ಯ ಈ ಬಾರಿ ಅಲ್ಲಿಂದಲೇ ಸ್ಪರ್ಧೆ ಮಾಡುವುದಾಗಿ ಪರೋಕ್ಷವಾಗಿ ಹೇಳಿದ್ದಾರೆ.…
ಹಾವೇರಿ : ಹಾವೇರಿಯಲ್ಲಿ ನಡೆದ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ಅದ್ಧೂರಿ ತೆರೆ ಬಿದ್ದಿದ್ದು, ಕನ್ನಡ ಅಭಿವೃದ್ಧಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹಲವು ಮಹತ್ವದ ಘೋಷಣೆ ಮಾಡಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೆಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನದ ಸಂಶೋಧನೆಗೆ ಸಲಹೆ ನೀಡಲು ಸಾಹಿತಿಗಳ ಸಮಿತಿ ರಚನೆ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ಅನುದಾನ, ಕನ್ನಡಕ್ಕಾಗಿ ಹೋರಾಟ ಮಾಡಿದವರ ಮೇಲಿನ ಕೇಸ್ ವಾಪಸ್, ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ವಲಸೆ ಬಂದವರಿಗೆ ಕನ್ನಡ ಕಲಿಸುವ ಅಭಿಯಾನ ಸೇರಿದಂತೆ ಹಲವು ಮಹತ್ವದ ಘೋಷಣೆ ಮಾಡಿದ್ದಾರೆ. ಹಾವೇರಿ ಸಾಹಿತ್ಯ ಸಮ್ಮೇಳನದ ಪ್ರಮುಖ ನಿರ್ಣಯಗಳು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಕ್ರಮ ಕೈಗೊಳ್ಳಬೇಕು. ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ ಕೂಡಲೇ ಸುಗ್ರೀವಾಜ್ಞೆ ಮೂಲಕ ಕಾನೂನಿನ ರೂಪ ಪಡೆದು ಶಿಕ್ಷಣ, ನ್ಯಾಯಾಂಗ, ಆಡಳಿತದಲ್ಲಿ ಕನ್ನಡ…
ಚಿತ್ರದುರ್ಗ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷಕ್ಕೆ ಕೇಂದ್ರ ಸರ್ಕಾರದಿಂದ ರೂ. 6000 ಹಾಗೂ ರಾಜ್ಯ ಸರ್ಕಾರದಿಂದ ರೂ.4000/-ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದ್ದು, ಈ ಯೋಜನೆಯು ನೈಜ ಫಲಾನುಭವಿಗಳಿಗೆ ದೊರೆಯಲಿ ಎಂಬ ಉದ್ದೇಶದಿಂದ ಇ-ಕೆವೈಸಿ ಮಾಡುವುದು ಅವಶ್ಯವಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 38948 ರೈತರು ಪಿ.ಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದು, ಈಗಾಗಲೇ 28698 ರೈತರು ಇ-ಕೆವೈಸಿ ಪೂರ್ಣಗೊಳಿಸಿದ್ದು, ಈ ಬಗ್ಗೆ ಹೆಚ್ಚಿನ ಪ್ರಚಾರ ಕೈಗೊಂಡಿದ್ದರೂ 10250 ರೈತರು ಇ-ಕೆವೈಸಿ ಮಾಡಿಸಲು ಬಾಕಿ ಉಳಿದಿದ್ದು, ಇ-ಕೆವೈಸಿ ಮಾಡಿಸದ್ದಿದಲ್ಲಿ ತಮ್ಮ ಖಾತೆಗಳಿಗೆ ಮುಂದಿನ ಕಂತಿನ ಹಣ ಸ್ಥಗಿತಗೊಳಿಸಲಿದ್ದು, ಕೂಡಲೇ ಎಲ್ಲಾ ರೈತರು ಮುಂದಿನ ಕಂತು ಪಡೆಯಲು ಇ-ಕೆವೈಸಿ ಮಾಡಿಸಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಜಂಟಿ ಖಾತೆದಾರರಾಗಿದ್ದು, ಬೇರೆ ಬೇರೆ ಕುಟುಂಬದ ಸದಸ್ಯರಾಗಿದ್ದಲ್ಲಿ ಫ್ರೂಟ್ಸ್ ತಂತ್ರಾಂದಲ್ಲಿ ಖಾತೆಯನ್ನು ಸಮನಾಗಿ ಹಂಚಿಕೆ ಮಾಡಿ ಪಿ.ಎಂ ಕಿಸಾನ್ ಯೋಜನೆಯಡಿ ನೊಂದಾಯಿಸಲು ಅವಕಾಶವಿದೆ. 2019ರ ಫೆಬ್ರವರಿ…
ಮಡಿಕೇರಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಒದಗಿಸಿದ ಪೂರಕ ಆಯವ್ಯಯದ ಅನುದಾನದಲ್ಲಿ ಡಿ.ದೇರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಈ ಯೋಜನೆಯ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ರೂ. 2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಠ ಶೇ.15 ರಷ್ಟು ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಳ್ಳ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ…
ಬೆಳಗಾವಿ: ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣ ಸಂಬಂಧ ಪೊಲೀಸರು ಅಭಿಜಿತ್ ಭಾತ್ಕಂಡೆ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರವಿ ಕೋಕಿತಕರ್ ಮೇಲೆ ಫೈರಿಂಗ್ ಪ್ರಕರಣ ಸಂಬಂಧ ಅಭಿಜಿತ್ ಭಾತ್ಕಂಡೆ ಸೇರಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹಳೇ ಧ್ವೇಷ, ವೈಯಕ್ತಿಕ ವಿಚಾರಕ್ಕೆ ಆರೋಪಿಗಳು ರವಿ ಕೋಕಿತಕರ್ ಹತ್ಯೆಗೆ ಪ್ಲಾನ್ ಮಾಡಿದ್ದರು ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡ ಗಾಯಾಳು ರವಿ ಕೋಕಿತಕರ್, ಚಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಅದರಂತೆ ಆಸ್ಪತ್ರೆಗೆ ಭೇಟಿ ನೀಡಿದ ಶ್ರೀರಾಮಸೇನೆ ಸಂಸ್ಥಾಪಕ ಮುತಾಲಿಕ್ ಅವರು ಆರೋಗ್ಯ ವಿಚಾರಿಸಿದ್ದಾರೆ. ಇಂದು ಮಧ್ಯಾಹ್ನ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಸುದ್ದಿಗೋಷ್ಠಿ ನಡೆಸಿ ಹೆಚ್ಚಿನ ಮಾಹಿತಿ ನೀಡಲಿದ್ದಾರೆ. https://kannadanewsnow.com/kannada/russian-soldier-using-bow-and-arrow-during-ukraine-war-gets-mocked-online/ https://kannadanewsnow.com/kannada/jana-sahitya-sammelan-it-is-not-politicians-but-artists-and-poets-who-build-nations-dr-moodnakoodu-chinnaswamy/
ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳು 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2023ರ ಜನವರಿ 31 ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬೇಕಾದ ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್‌ಸೈಟ್ ವಿಳಾಸ http://bcwd.Karnataka.gov.in ದೂರವಾಣಿ ಸಂಖ್ಯೆ:8050770005 bcwdhelpline@gmail.co. postmetrichelpdesk@karnataka.gov.in ಅಥವಾ 080-35254757 ಸಹಾಯವಾಣಿ: 080-29787440 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/resigns-from-police-inspector-post-to-get-into-politics-bjp-ticket-aspirant-from-kollegal/