Author: kannadanewslive

ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕಾರಣದಿಂದ ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ರದ್ದುಗೊಳಿಸಿತ್ತು. ಈಗ ನೂತನ ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಕೈಗೊಂಡು, ಹೊಸ ನೇಮಕಾತಿಗೆ ಆದೇಶ ಹೊರಡಿಸುವಂತ ಸುಳಿವು ನೀಡಿದೆ. ಈ ಮೂಲಕ ಪಿಎಸ್ಐ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ತನಿಖೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆ ಬಳಿಕ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು. ಪಿಎಸ್ಐ ನೇಮಕಾತಿ ಅಕ್ರಮ ವಿಚಾರ ಹೈಕೋರ್ಟ್ ನಲ್ಲಿದೆ. ನೇಮಕಾತಿಗೂ ಹೈಕೋರ್ಟ್ ತಡೆ ಇದೆ. ಈ ಸಂಬಂಧ ತಾರ್ಕಿಕ ಮತ್ತು ಕಾನೂನಾತ್ಮಕ ಅವಕಾಶಗಳ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತ ರೀತಿಯಲ್ಲಿ ಪಿಎಸ್ಐ ನೇಮಕಾತಿ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಅಂದಹಾಗೇ ಹೈಕೋರ್ಟ್ ನಲ್ಲಿ ಪಿಎಸ್ಐ ಹಗರಣದ ತನಿಖೆಗೆ ತಡೆಯಾಜ್ಞೆಯಿದೆ. ಆ ತಡೆಯಾಜ್ಞೆ…

Read More

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಇಲಾಖೆಯು ಸಿಹಿಸುದ್ದಿ ನೀಡಿದ್ದು, ರಾಜ್ಯದ ಪ್ರೌಢಶಾಲೆಗಳಿಗೆ 6 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 27 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶಿಸಿದ ಬೆನ್ನಲ್ಲೇ ಇದೀಗ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 6 ಸಾವಿರ ಅತಿಥಿ ಶಿಕ್ಷಕರ ನೇಮಿಸಿಕೊಳ್ಳಲು ಶಿಕ್ಷಣ ಇಲಾಖೆಯು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 6 ಸಾವಿರ ಅತಿಥಿ ಶಿಕ್ಷಕರನ್ನು ಶಾಲಾ ಆರಂಭದ ದಿನವೇ ನೇಮಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. https://kannadanewsnow.com/kannada/bigg-news-major-surgery-from-state-government-to-administrative-machinery-transfer-of-four-ias-officers-ordered/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ  ಅಧಿಸೂಚನೆ ಹೊರಡಿಸಿದ್ದು, ಆರ್ಟಿಕಲ್ಚರ್ ಮತ್ತು ಸಿರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ರಾಜೇಂದ್ರ ಕುಮಾರ್ ಕಠಾರಿಯ ಅವರನ್ನು ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. 2000 ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಎಂಸ್ಎಂಇ ಮತ್ತು ಮೈನ್ಸ್ ಕಾರ್ಯದರ್ಶಿಯ ಹುದ್ದೆಯಿಂದ ವರ್ಗಾವಣೆ ಮಾಡಿ, ಕೆಪಿಟಿಸಿಎಲ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ. ಕೆಪಿಟಿಸಿಎಲ್ ಎಂಡಿಯಾಗಿದ್ದಂತ ಡಾ.ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವಜನ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಕೃಷಿ ಇಲಾಖೆಯ ಕಮೀಷನರ್ ಆಗಿದ್ದಂತ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ, ಕರ್ನಾಟಕ ಅರ್ಬನ್ ವಾಟರ್ ಸಪ್ಲೈ ಮತ್ತು ಡ್ರೈನೇಜ್ ಬೋರ್ಡ್…

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬಳ್ಳಾರಿ,  ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ. https://kannadanewsnow.com/kannada/bigg-news-moral-policing-in-mangaluru-6-students-attacked/ https://kannadanewsnow.com/kannada/breaking-news-rss-activist-arrested-for-derogatory-remarks-against-muslim-women-in-raichur/

Read More

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಸೋಮೇಶ್ವರ ಬೀಚ್ ನಲ್ಲಿ ಸಮುದ್ರದಲ್ಲಿ ವಿಹಾರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರ ಮೇಲೆ ತಂಡವೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಬಂದಿದ್ದ ವೇಳೆ ಮೂವರು ವಿದ್ಯಾರ್ಥಿಗಳು ಅನ್ಯಕೋಮಿಗೆ ಸೇರಿದ್ದಾರೆ ಎಂದು ಗಮನಿಸಿ, ತಂಡವೊಂದು ಇವರನ್ನು ಹಿಂಬಾಲಿಸಿದೆ. ಬಳಿಕ ಸೋಮೇಶ್ವರ ಬೀಚ್ ನಲ್ಲಿ ವಿಹಾರ ನಡೆಸುತ್ತಿದ್ದ ಸಂದರ್ಭದಲ್ಲಿ  ದಾಳಿ ನಡೆಸಿದೆ. ದಾಳಿಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಮೂವರು ವಿದ್ಯಾರ್ಥಿನಿಯರು ಊರಿಗೆ ವಾಪಸ್ ತೆರಳಿದ್ದಾರೆ ಎಂದು ಸ್ಥಳಿಯರು ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧ ಉಳ್ಳಾಲ ಪೊಲೀಸರು ಆರೋಪಿಗಳ ಪತ್ತೆಗಾಗಿ ಎರಡು ತಂಡಗಳನ್ನು ರಚಿಸಿದ್ದು, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/breaking-news-rss-activist-arrested-for-derogatory-remarks-against-muslim-women-in-raichur/

Read More

ರಾಯಚೂರು : ವಾಟ್ಸಪ್ ನಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿರುವ ಘಟನೆ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ನಿನ್ನೆ ವಾಟ್ಸಪ್ ಸ್ಟೇಟಸ್ ನಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಬರೆದುಕೊಂಡಿದ್ದ ಆರ್ ಎಸ್ಎಸ್ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ತಡರಾತ್ರಿ ಮುಸ್ಲಿಂ ಸಮುದಾಯದ ನೂರಾರು ಜನರು ಪ್ರತಿಭಟನೆ ನಡೆಸಿದ್ದರು. ಪ್ರಕರಣವನ್ನು ದಾಖಲಿಸಿಕೊಂಡ ಲಿಂಗಸುಗೂರು ಪಟ್ಟಣ ಠಾಣೆ ಪೊಲೀಸರು ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಆರೋಪಿ ರಾಜುನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. https://kannadanewsnow.com/kannada/tcs-reliance-jio-top-best-indian-brands-2023-ranking/

Read More

ಬೆಂಗೂಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ಶೇ. 5 ರಷ್ಟು ರಿಯಾಯಿತಿ ನೀಡುವ ಕುರಿತು ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಆದೇಶದ ಮೇರೆಗೆ ಇದೇ ತಿಂಗಳ ಜೂನ್ ಅಂತ್ಯದ ಅವಧಿವರೆಗೆ ಪಾವತಿಸುವ ಆಸ್ತಿ ತೆರಿಗೆದಾರರಿಗೆ ಶೇ. 5 ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಿಸಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀಸಾಗರ್ ಎನ್.ಕೆ ಅಧಿಸೂಚನೆ ಹೊರಡಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಪಾಲಿಕೆಯ ಆರ್ಥಿಕ ಹಿತದೃಷ್ಠಿಯಿಂದ 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ದಿನಾಂಕ 30-06-2023ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. ಅಂದಹಾಗೆ ಬಿಬಿಎಂಪಿ ಚುನಾವಣೆ ಸಂಬಂಧ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಮಾಜಿ ಮೇಯರ್ ಗಳ ಸಭೆ ನಡೆಸಿದ್ದರು. ಈ ಬಳಿಕ ಮಾತನಾಡಿದ್ದಂತ ಅವರು,ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ನಗರದ ಮಾಜಿ ಮೇಯರ್ ಗಳ ಜತೆ ಸಭೆ ಮಾಡಿ ಅವರ ಅಭಿಪ್ರಾಯ, ಸಲಹೆಗಳನ್ನು ಪಡೆದಿದ್ದೇನೆ ಎಂದಿದ್ದರು.…

Read More

ಬೆಂಗಳೂರು : ರಾಜ್ಯದ ಎಲ್ಲ ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಆದೇಶ ಹೊರಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದ ಎಲ್ಲಾ ಶಾಲೆ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಹೇಳಿಸುವುದಕ್ಕೆ ಪೂರಕ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಕೆಯಲ್ಲಿ ವಿಳಂಬ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. https://kannadanewsnow.com/kannada/argentinas-celeseo-saulo-is-first-female-secretary-general-of-world-meteorological-organisation/

Read More

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559.…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಬೀರುವನ್ನು ಲಕ್ಷ್ಮೀದೇವಿಗೆ ಹೋಲಿಸುತ್ತೇವೆ. ಯಾಕೆಂದರೆ ಬೀರುವಿನಲ್ಲಿ ಸಾಮಾನ್ಯವಾಗಿ ಎಲ್ಲರೂ ಇಡುವುದು ಹಣವನ್ನು, ಬಂಗಾರವನ್ನು, ಮುಖ್ಯವಾದ ದಾಖಲೆಗಳನ್ನು ಮತ್ತು ಬೆಳೆಬಾಳುವ ವಸ್ತುಗಳನ್ನು ಆದ್ದರಿಂದ ಬೀರುವನ್ನು ಲಕ್ಷ್ಮಿದೇವಿಗೆ ಹೋಲಿಸಲಾಗುತ್ತದೆ. ಲಕ್ಷ್ಮಿಗೆ ತುಂಬಾ ಪ್ರಿಯವಾದ ವಸ್ತುಗಳೆಂದರೆ ಗೋಮತಿ ಚಕ್ರ, ಕಮಲದ ಬೀಜ, ಸುಗಂಧದ್ರವ್ಯ ಆದ್ದರಿಂದ ಈ ವಸ್ತುಗಳನ್ನು ಬೀರುವಿನಲ್ಲಿ ಇಟ್ಟರೆ ತುಂಬಾ ಒಳ್ಳೆಯದು. ಹಾಗೆಯೇ ಪಚ್ಚ ಕರ್ಪೂರವನ್ನು ಶುಚಿಯಾದ ವಸ್ತ್ರದ ಒಳಗೆ ಇಟ್ಟು ಅದನ್ನು ಸುತ್ತಿ ಬೀರುವಿನ ಒಂದು ಮೂಲೆಯಲ್ಲಿ ಇಟ್ಟರೆ ತುಂಬಾ ಒಳ್ಳೆಯದು. ಇದರಿಂದ ಲಕ್ಷ್ಮೀದೇವಿಯು ಬೀರುವಿನಲ್ಲಿ ವಾಸಿಸುತ್ತಾಳೆ ಎಂಬ ಭಾವನೆ ಬರುತ್ತದೆ. ಬೀರುವಿನ ಕೆಳ ಭಾಗದಲ್ಲಿ ಒಂದು ಗಾಜಿನ ಬಟ್ಟಲಿನಲ್ಲಿ ಕಲ್ಲುಪ್ಪನ್ನು ಹಾಕಿ ಅದರ ಮೇಲೆ ಒಂದು ಬಿಳಿ ಸ್ಪಟಿಕವನ್ನು ಇಡಬೇಕು. ನಂತರ ಆ ಗಾಜಿನ ಬಟ್ಟಲನ್ನು ತೆಗೆದುಕೊಂಡು ದೇವರಕೋಣೆಯಲ್ಲಿ ದೇವರಮುಂದೆ ಇಟ್ಟು ಮಂಗಳವಾರ, ಗುರುವಾರ ಹಾಗೂ ಶುಕ್ರವಾರ ಪೂಜೆಯನ್ನು ಮಾಡಿ ಪ್ರಾರ್ಥನೆಯನ್ನು…

Read More