Author: kannadanewslive

ನವದೆಹಲಿ: ಒಡಿಶಾ ರೈಲು ಅಪಘಾತ ಸಂಬಂಧ ಮೃತಪಟ್ಟವರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಈವರೆಗೆ 280 ಮಂದಿ ಸಾವನ್ನಪ್ಪಿ, 900 ಜನರು ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ಒಡಿಶಾದ ಬಾಲಸೂರ್ ನ ಬಹನಗಾದಲ್ಲಿ ನಿನ್ನೆ ರಾತ್ರಿ ಎರಡು ರೈಲು, ಒಂದು ಗೂಡ್ಸ್ ರೈಲು ಸೇರಿದಂತೆ ಮೂರು ಅಪಘಾತಕ್ಕೆ ಈಡಾಗಿದ್ದವು. ಈ ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ಕರೆದಿದ್ದಾರೆ ಎಂದು ಭಾರತ ಸರ್ಕಾರದ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಈ ಬೆನ್ನಲ್ಲೇ ರೈಲ್ವೆ ಇಲಾಖೆಯಿಂದ ಮೃತರ ಬಗ್ಗೆ ಮಾಹಿತಿ ನೀಡುವ ಸಂಬಂಧ, ಕುಟುಂಬಸ್ಥರು ಸಂಪರ್ಕಿಸಲು ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಿದೆ. ಹೀಗಿವೆ ಸಹಾಯವಾಣಿ ಸಂಖ್ಯೆಗಳು ಭದ್ರಾಕ್: 8455889900 ಜಜ್ಪುರ್ ಕಿಯೋನಿಹಾರ್ ರಸ್ತೆ: 8455889906 ಕಟಕ್: 8455889917 ಭುವನೇಶ್ವರ: 8455889922 ಖುರ್ದಾ ರಸ್ತೆ: 6370108046 ಬ್ರಹ್ಮಪುರ: 89173887241 ಬಾಲಗಾಂವ್: 9937732169 ಪಲಾಸ: 8978881006 ಹೌರಾ ಸಹಾಯವಾಣಿ ಸಂಖ್ಯೆ: 033-26382217…

Read More

ಒಡಿಶಾ: ಒಡಿಶಾದ ಬಾಲಸೋರ್ನಲ್ಲಿ ಮೂರು ರೈಲುಗಳು ಡಿಕ್ಕಿ ( Odisha Train Accident ) ಹೊಡೆದ ಪರಿಣಾಮ 280 ಜನರು ಮೃತಪಟ್ಟು, ಸುಮಾರು 900 ಜನರು ಗಾಯಗೊಂಡ ನಂತರ ಘಟನೆ ಸಂಬಂಧ ಮಾಹಿತಿಯನ್ನು ಪಡೆಯಲು ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಉನ್ನತ ಮಟ್ಟದ ಸಭೆಯನ್ನು ಕರೆದಿರುವುದಾಗಿ ಹೇಳಲಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಬಾಲಸೋರ್ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು 280 ಜನರು ಸಾವನ್ನಪ್ಪಿದ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡ ಸ್ಥಳಕ್ಕೆ ಭೇಟಿ ನೀಡಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ತಲುಪಿ ವಿವರವಾದ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಮತ್ತು ರೈಲ್ವೆ ಸುರಕ್ಷತಾ ಆಯುಕ್ತರು ಸಹ ಸ್ವತಂತ್ರ ತನಿಖೆ ನಡೆಸಲಿದ್ದಾರೆ ಎಂದು ಹೇಳಿದ ನಂತರ ಅವರು ಆಗಮಿಸಿದರು. ಅವರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಮತ್ತು ಸರ್ಕಾರದ ಗಮನವು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲಿದೆ…

Read More

ಬಾಲಸೋರ್ : ಒಡಿಶಾದ ಬಾಲಸೋರ್ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 233 ಜನರು ಮೃತಪಟ್ಟು, ಸುಮಾರು 900 ಜನರು ಗಾಯಗೊಂಡ ನಂತರ ಹಲವಾರು ರೈಲುಗಳನ್ನು ರದ್ದುಪಡಿಸಲಾಗಿದೆ ಮತ್ತು ಅನೇಕ ರೈಲುಗಳನ್ನು ಬೇರೆಡೆಗೆ ತಿರುಗಿಸಲಾಗಿದೆ. ರದ್ದಾದ ರೈಲುಗಳ ಪಟ್ಟಿ ಇಲ್ಲಿದೆ 18044 ಭದ್ರಾಕ್ ನಿಂದ ಭದ್ರಾಕ್ -ಹೌರಾ ಎಕ್ಸ್ ಪ್ರೆಸ್, ತಿರುಪತಿಯಿಂದ 20890 ತಿರುಪತಿ-ಹೌರಾ ಎಕ್ಸ್ ಪ್ರೆಸ್, ಬೆಂಗಳೂರಿನಿಂದ 12551 ಬೆಂಗಳೂರು – ಕಾಮಾಖ್ಯ ಎಸಿ ಎಸ್ ಎಫ್ ಎಕ್ಸ್ ಪ್ರೆಸ್, ಬೆಂಗಳೂರಿನಿಂದ 12864 ಬೆಂಗಳೂರು – ಹೌರಾ ಎಕ್ಸ್ ಪ್ರೆಸ್, 12253 ಬೆಂಗಳೂರು – ಭಾಗಲ್ಪುರ್ ಅಂಗ ಎಕ್ಸ್ ಪ್ರೆಸ್, 08411 ಬಾಲಸೋರ್ ನಿಂದ ಬಾಲಸೋರ್ – ಭುವನೇಶ್ವರ ವಿಶೇಷ ರೈಲು, 08415/ ಪುರಿ- ಪುರಿಯಿಂದ 08415/ 08416. ಮಾರ್ಗ ಬದಲಿಸಿದ ರೈಲುಗಳ ಪಟ್ಟಿ ಇಲ್ಲಿದೆ ಜೂನ್ 2, 2023 ರಂದು ಬೆಂಗಳೂರಿನಿಂದ 12246 ಬೆಂಗಳೂರು- ಹೌರಾ ಎಕ್ಸ್ಪ್ರೆಸ್, ಜೂನ್ 2, 2023 ರಂದು ಬೆಂಗಳೂರಿನಿಂದ 12503 ಬೆಂಗಳೂರು-ಅಗರ್ತಲಾ ಎಕ್ಸ್ಪ್ರೆಸ್,…

Read More

ಬೆಂಗಳೂರು: ಒಡಿಶಾದಲ್ಲಿ ನಿನ್ನೆ ಒಂದು ಎಕ್ಸ್ ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿಯಾಗಿ ಅಪಘಾತ ಉಂಟಾಗಿತ್ತು. ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ಗೆ ಸೇರಿದ ಸುಮಾರು 10 ರಿಂದ 12 ಬೋಗಿಗಳು ಬಾಲಸೋರ್ ಬಳಿ ಪಲ್ಟಿಯಾಗಿ ಪಕ್ಕದ ರೈಲ್ವೆ ಹಳಿಯ ಮೇಲೆ ಬಿದ್ದಿದ್ದವು. ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ರೈಲು ಪಲ್ಟಿಯಾದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ ಮೂರರಿಂದ ನಾಲ್ಕು ಬೋಗಿಗಳು ಹಳಿ ತಪ್ಪಿತ್ತು. ಈ ರೈಲು ಅಪಘಾತದಲ್ಲಿ ಕರ್ನಾಟಕದ ಪ್ರಯಾಣಿಕರು ಸುರಕ್ಷಿತವಾಗಿರುವುದಾಗಿ ರೈಲ್ವೆ ಡಿಐಜಿ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ದೇವರ ದಯೆಯಿಂದ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ಒಡಿಯಾದಲ್ಲಿನ ಮೂರು ರೈಲು ಅಪಘಾತ ಸ್ಥಳಕ್ಕೆ ರಾಜ್ಯದ ಅಧಿಕಾರಿಗಳ ತಂಡ ತೆರಳಿದ್ದಾರೆ. ಒಡಿಶಾಗೆ ತೆರಳಿ ಮಾಹಿತಿಯನ್ನು ರಾಜ್ಯಕ್ಕೆ ನೀಡಿಲಿದ್ದಾರೆ. ಆ ಬಳಿಕ ಸ್ಪಷಅಟವಾದ ಮಾಹಿತಿ ತಿಳಿದು ಬರಲಿದೆ ಎಂಬುದಾಗಿ ಹೇಳಿದರು. ಅಂದಹಾಗೆ ಒಡಿಶಾ ರೈಲು ಅಪಘಾತದ ನಂತರ…

Read More

ಒಡಿಶಾ: ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಬಾಲಸೋರ್ನಲ್ಲಿ ಮೂರು ರೈಲುಗಳು ಡಿಕ್ಕಿ ಹೊಡೆದು 280 ಜನರು ಸಾವನ್ನಪ್ಪಿದ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡ ಸ್ಥಳಕ್ಕೆ ಭೇಟಿ ನೀಡಿದರು. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಸ್ಥಳಕ್ಕೆ ತಲುಪಿ ವಿವರವಾದ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಮತ್ತು ರೈಲ್ವೆ ಸುರಕ್ಷತಾ ಆಯುಕ್ತರು ಸಹ ಸ್ವತಂತ್ರ ತನಿಖೆ ನಡೆಸಲಿದ್ದಾರೆ ಎಂದು ಹೇಳಿದ ನಂತರ ಅವರು ಆಗಮಿಸಿದರು. ಅವರು ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು ಮತ್ತು ಸರ್ಕಾರದ ಗಮನವು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲಿದೆ ಎಂದು ಹೇಳಿದರು. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವೀಡಿಯೊದಲ್ಲಿ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿರುವುದು ಕಂಡುಬಂದಿದೆ. https://twitter.com/ANI/status/1664832453402304512 “ಇದೊಂದು ದೊಡ್ಡ ದುರಂತ ಅಪಘಾತ. ರೈಲ್ವೆ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ಮತ್ತು ರಾಜ್ಯ ಸರ್ಕಾರ ರಕ್ಷಣಾ ಕಾರ್ಯಾಚರಣೆ…

Read More

ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ 10 ಲಕ್ಷ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿದಂತ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಣ್ಣಪುಟ್ಟ ಗಾಯಗೊಂಡವರಿಗೆ 50,000 ರೂ ಪರಿಹಾರ ನೀಡಲಾಗುವುದು ಎಂದು ಘೋಷಿದರು. https://twitter.com/ANI/status/1664677827264802816 ಒಡಿಶಾ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತ : 50 ಜನರ ಸಾವು, 179 ಮಂದಿಗೆ ಗಾಯ ಒಡಿಶಾದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಡಿಕ್ಕಿ ಹೊಡೆದಿವೆ. ಡಿಕ್ಕಿ ಎಷ್ಟು ತೀವ್ರವಾಗಿತ್ತೆಂದರೆ, ಪ್ರಯಾಣಿಕರನ್ನ ಕರೆದೊಯ್ಯುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ನ (12841) 7 ಬೋಗಿಗಳು ಹಳಿ ತಪ್ಪಿವೆ. ಮೂಲಗಳ ಪ್ರಕಾರ, ಅಪಘಾತದಲ್ಲಿ ಇದುವರೆಗೆ 179 ಜನರು ಗಾಯಗೊಂಡಿದ್ದಾರೆ ಮತ್ತು 50 ಜನರು ಸಾವನ್ನಪ್ಪಿದ್ದಾರೆ.

Read More

ಒಡಿಶಾ: ಬಾಲಸೋರ್ ನ ಬಹನಾಗ ನಿಲ್ದಾಣದ ಬಳಿ ಶಾಲಿಮಾರ್-ಚೈನ್ನೈ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಗೂಡ್ಸ್ ಗಾಡಿಗೆ ಡಿಕ್ಕಿಯಾಗಿ ಹಳಿತಪ್ಪಿದ ಬೆನ್ನಲ್ಲೇ, ಬೆಂಗಳೂರು-ಹೌರಾ ರೈಲು ಕೂಡ ಹಳಿತಪ್ಪಿ 3-4 ಬೋಗಿಗಳು ಜಖಂಗೊಂಡಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯಿಂದ ಸಹಾಯವಾಣಿ ಸಂಖ್ಯೆಯನ್ನು ಕೂಡ ಆರಂಭಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಅವರು, ಒಡಿಶಾದ ಬಾಲಸೋರ್ ನ ಬಹನಾಗದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ 10-12 ಬೋಗಿಗಳು ಬಾಲೇಶ್ವರ್ ಬಳಿ ಹಳಿ ತಪ್ಪಿ ವಿರುದ್ಧ ಹಳಿಗೆ ಬಿದ್ದಿವೆ ಎಂದಿದ್ದಾರೆ. ಇನ್ನೂ ಈ ರೈಲಿನ ಸ್ವಲ್ಪ ಸಮಯದ ನಂತರ ಯಶವಂತಪುರದಿಂದ ಹೌರಾಗೆ ತೆರಳುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿಸಿದ್ದಾರೆ. ರೈಲು ಸಂಖ್ಯೆ 12841 ಯುಪಿ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 12864 ಡಿಎನ್ ಬೆಂಗಳೂರು-ಹೌರಾ ಒಡಿಶಾದ…

Read More

ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದಾರೆ. ಇದೇ ವೇಳೆ ಈ ಅಪಘಾತದಲ್ಲಿ ಸಾವನ್ನಪ್ಪಿದಂತವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದಾಗಿ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ, ದುಃಖಿತ ಕುಟುಂಬಗಳೊಂದಿಗೆ ನಾನು ಇದ್ದೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ. ಈ ಘಟನೆ ಸಂಬಂಧ ರೈಲ್ವೆ ಸಚಿವರೊಂದಿಗೆ ಮಾತನಾಡಿದ್ದೇನೆ. ಅಶ್ವಿನಿ ವೈಷ್ಣವ್ ಅವರಿಂದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/narendramodi/status/1664665463450918913  ಒಡಿಶಾ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತ : 50 ಜನರ ಸಾವು, 179 ಮಂದಿಗೆ ಗಾಯ ಭುವನೇಶ್ವರ : ಒಡಿಶಾದಲ್ಲಿ ಭೀಕರ…

Read More

ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಲಭ್ಯವಿರುವ ಇತ್ತೀಚಿನ ಮಾಹಿತಿಯ ಪ್ರಕಾರ, 12841 ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ನ ಎಂಟು ಬೋಗಿಗಳು ಬಹನಾಗ ನಿಲ್ದಾಣದ ಬಳಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ ಹಳಿ ತಪ್ಪಿವೆ. ಈ ಅಪಘಾತದಲ್ಲಿ 132 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬುದಾಗಿ ಒಡಿಶಾದ ಮುಖ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಅವರು, ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ 132 ಜನರು ಗಾಯಗೊಂಡಿದ್ದಾರೆ. ಅವರನ್ನು ಸೊರೊ ಸಿಎಚ್ ಸಿ, ಗೋಪಾಲ್ಪುರ ಸಿಎಚ್ ಸಿ ಮತ್ತು ಖಂಡಪಾಡಾ ಪಿಎಚ್ ಸಿಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. https://twitter.com/ANI/status/1664656720365252616 ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾದ ಸ್ಳಕ್ಕೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳು ತೆರಳಿವೆ. ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮತ್ತು ರಾಜ್ಯ…

Read More

ಒಡಿಶಾ: ಕೋರಮಂಡಲ್ ಎಕ್ಸ್ಪ್ರೆಸ್ ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ನ ಬಹನಾಗ ನಿಲ್ದಾಣದ ಬಳಿ ಹಳಿ ತಪ್ಪಿತ್ತು. ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದಿದ್ದರಿಂದ ಹೈಸ್ಪೀಡ್ ರೈಲು ಹಳಿ ತಪ್ಪಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿತ್ತು. ಈ ಬೆನ್ನಲ್ಲೇ ಕೋರಮಂಡಲ್ ಬಳಿಯೇ ಮತ್ತೊಂದು ಪ್ಯಾಸೆಂಜರ್ ರೈಲು ಹಳಿ ತಪ್ಪಿರುವುದಾಗಿ ತಿಳಿದು ಬಂದಿದೆ.  ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ರೈಲ್ವೆ ನಿಲ್ದಾಣದ ಬಳಿ ಎಕ್ಸ್ಪ್ರೆಸ್ ರೈಲು ಅಪಘಾತಕ್ಕೀಡಾಗಿದೆ. ಈಗ ರಕ್ಷಣಾ ಸಿಬ್ಬಂದಿಗಳು ರೈಲಿನಲ್ಲಿ ಸಿಲುಕಿದಂತ ಪ್ರಯಾಣಿಕರ ರಕ್ಷಣೆಯಲ್ಲಿ ತೊಡಗಿದ್ದಾರೆ. ಸಾವು ನೋವಿನ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಇದೇ ವೇಳೆಯಲ್ಲಿ  ಕೋರಮಂಡಲ್ ಎಕ್ಸ್ಪ್ರೆಸ್ ಅಪಘಾತದ ಸ್ಥಳದ ಬಳಿ ಮತ್ತೊಂದು ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ. ಹೀಗಾಗಿ ಮತ್ತಷ್ಟು ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಅಂದಹಾಗೇ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ 132 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸೊರೊ…

Read More