ಬೆಂಗಳೂರು: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 41ಕ್ಕೆ ಏರಿದೆ. PSI ಅಕ್ರಮದಷ್ಟೇ ವಿಸ್ತಾರವಾಗಿರುವ ಈ ನೇಮಕಾತಿ ಹಗರಣದಲ್ಲಿ ಪ್ರಭಾವಿ ತಿಮಿಂಗಿಲಗಳನ್ನು ರಕ್ಷಿಸಿ ಕೇವಲ ಸಣ್ಣ ಮೀನುಗಳನ್ನು ಹಿಡಿಯಲಾಗುತ್ತಿದೆ ಅಷ್ಟೇ. ಎಲ್ಲಾ ಹುದ್ದೆ ಮಾರಾಟದ ಅಕ್ರಮಗಳನ್ನು ಉನ್ನತ ತನಿಖೆಗೆ ವಹಿಸದೆ ಪ್ರಭಾವಿಗಳನ್ನು ರಕ್ಷಿಸುತ್ತಿದೆ ಸರ್ಕಾರ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ. https://twitter.com/INCKarnataka/status/1610205047169888256 ಈ ಬಗ್ಗೆ ಟ್ವಿಟ್ ಮಾಡಿದ್ದು, ಪ್ರದೀಪ್ ಆತ್ಮಹತ್ಯೆಯಲ್ಲಿ ಅರವಿಂದ್ ಲಿಂಬಾವಳಿ ಅವರ ಪಾತ್ರವೇನು ಎಂಬುದರ ಕುರಿತ ತನಿಖೆಗೆ ಮುಂದಾಗುತ್ತಿಲ್ಲವೇಕೆ? ಶಾಸಕರೂ ಪ್ರದೀಪ್‌ಗೆ ವಂಚಿಸಿದವರ ಜೊತೆ ಸೇರಿ ದ್ರೋಹವೆಸಗಿದ ಗುಮಾನಿಗಳಿವೆ, ಅರವಿಂದ್ ಲಿಂಬಾವಳಿ ಪ್ರಭಾವ ಬಳಸಿ ಸಾಕ್ಷ್ಯ ನಾಶಪಡಿಸುವ ಸಾಧ್ಯತೆಗಳಿದ್ದರೂ ಬಂಧನಕ್ಕೆ ಹಿಂದೇಟು ಹಾಕುತ್ತಿರುವುದೇಕೆ? ಎಂದು ಪ್ರಶ್ನಿಸಿದೆ. https://twitter.com/INCKarnataka/status/1610193366729502720 ಆತ್ಮಹತ್ಯೆ ಮಾಡಿಕೊಂಡ ಪ್ರದೀಪ್ ಬಿಜೆಪಿ ಕಾರ್ಯಕರ್ತನೇ ಆಗಿದ್ದು, ಸಾಮಾಜಿಕ ಜಾಲತಾಣದ ಗುತ್ತಿಗೆ ವ್ಯವಹಾರದಲ್ಲಿ ಅರವಿಂದ ಲಿಂಬಾವಳಿ ಅವರಿಂದ ವಂಚನೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣ ಇಷ್ಟಕ್ಕೇ ಸೀಮಿತವಾಗಿರದೆ ಹೆಚ್ಚಿನ ಅವ್ಯವಹಾರಗಳು ನಡೆದಿರುವ ಸಂಭವವಿದೆ.…
Author: kannadanewslive
ವಿಜಯಪುರ: ಸಿದ್ಧೇಶ್ವರ ಶ್ರೀಗಳು ನಿಧನಾನಂತ್ರ ಅಗ್ನಿಸ್ಪರ್ಷದ ಮೂಲಕ ಶವಸಂಸ್ಕಾರಕ್ಕೆ ಕೋರಿಕೊಂಡಿದ್ದಾರೆ. ಇದರ ಅರ್ಥ ಅವರು ಸಾವಿನ ನಂತ್ರವೂ ಈ ಪಂಚಭೂತಗಳಲ್ಲಿ ಲೀನರಾಗಿ, ಗಾಳಿಯಲ್ಲಿ ಸಿದ್ದೇಶ್ವರ ಶ್ರೀಗಳು ಇರಲಿದ್ದಾರೆ. ಸ್ವಾಮಿ ವಿವೇಕಾನಂದ ನಂತ್ರ, ನನ್ನ ಮೇಲೆ ಪ್ರಭಾವ ಬೀರಿದ್ದು ಸಿದ್ದೇಶ್ವರ ಶ್ರೀಗಳು ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಮಾತನಾಡಿದಂತ ಅವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಂತೆ ಬದುಕಿದವರು ಮತ್ತಾರೂ ಇಲ್ಲ. ಎಲ್ಲರಿಗೂ ಮಾದರಿಯಾಗುವಂತ ನಡೆ ಅವರದ್ದಾಗಿದೆ. ಅವರು ಯಾವತ್ತೂ ಯಾವುದಕ್ಕೂ ಆಸೆ ಪಡಲಿಲ್ಲ ಎಂದರು. ಸಿದ್ದೇಶ್ವರ ಶ್ರೀಗಳು ತಮ್ಮ ನಿಧನಾನಂತ್ರ ಯಾವುದೇ ಸ್ಮಾರಕವನ್ನು ನಿರ್ಮಿಸದಂತೆ ತಿಳಿಸಿದ್ದಾರೆ. ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಷ ಮಾಡುವ ಮೂಲಕ ಅಂತ್ಯ ಸಂಸ್ಕಾರವನ್ನು ಮಾಡುವಂತೆ ಹೇಳಿದ್ದರು. ಹೀಗೆ ಮಾಡುವುದರಿಂದ ಅವರು ಈ ಗಾಳಿಯಲ್ಲಿ ಲೀನರಾಗಿ ಅದನ್ನು ಸೇವಿಸಿದಂತ ಎಲ್ಲರಲ್ಲಿಯೂ ಅವರಿರುತ್ತಾರೆ ಎಂದು ಹೇಳಿದರು. ಸಿದ್ದೇಶ್ವರ ಶ್ರೀಗಳು ಅಂತ್ಯವಾಗಿಲ್ಲ. ಎಲ್ಲಿಯವರೆಗೆ ಈ ಭೂಮಂಡಲ, ನಿಸರ್ಗ, ಈ ಸೂರ್ಯ, ಚಂದ್ರರು ಇರುತ್ತಾರೋ…
ಮಂಗಳೂರು: ಈಗಾಗಲೇ ಸುಳ್ಳು ದೂರು ನೀಡಿದ್ದ ಕಾರಣದಿಂದಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಹೀಗೆಯೇ ಮುಂದಿನ ಚುನಾವಣೆ ವೇಳೆಗೆ ಸಿದ್ಧರಾಮಯ್ಯ ( Siddaramaiah ) ಕೂಡ ಜೈಲು ಸೇರಲಿದ್ದಾರೆ. ಯಾಕೆಂದರೇ ಅವರ ಎಲ್ಲಾ ಹಗರಣಗಳನ್ನು ನಾವು ಬಯಲು ಮಾಡುತ್ತೇವೆ ನೋಡುತ್ತಾ ಇರಿ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Nalin Kumar Kateel ) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುತ್ತಿಗೆಯಲ್ಲಿ ಶೇ.40 ಪರ್ಸೆಂಟ್ ಕಮೀಷನ್ ಕೊಡಬೇಕು ಎಂಬುದಾಗಿ ಕೆಂಪಣ್ಣ ಆರೋಪಿಸಿದ್ದರು. ಅಲ್ಲದೇ ಕೇಸ್ ಕೂಡ ಹಾಕಿದರು. ಈ ಬಗ್ಗೆ ದಾಖಲೆಗಳಿದ್ದರೇ ಲೋಕಾಯುಕ್ತಕ್ಕೆ ದೂರು ಕೊಡುವಂತೆಯೂ ನಾವು ಹೇಳಿದ್ದೆವು. ಒಂದು ವೇಳೆ ದಾಖಲೆ ನೀಡಿದ್ದೇ ಆದ್ರೇ ಯಾರೇ ಪ್ರಭಾವಿ ಶಾಸಕ, ಸಚಿವನಾಗಿದ್ದರೂ ಕಿತ್ತೆಸೆಯುತ್ತೇವೆ ಎಂದು ಹೇಳಿದ್ದವೆ. ಆದ್ರೇ ಕಾಂಗ್ರೆಸ್ ನ ಡಿ.ಕೆ ಶಿವಕುಮಾರ್, ಸಿದ್ಧರಾಮಯ್ಯ ಈ ಬಗ್ಗೆ ಗಲಾಟೆ ಮಾಡಿಲ್ಲ, ಲೋಕಾಯುಕ್ತಕ್ಕೆ ದೂರು ನೀಡಿಲ್ಲ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಪಿತಾಮಹವಾಗಿದೆ.…
ನವದೆಹಲಿ: ಶ್ರೀಲಂಕಾ ಸರಣಿಗೆ ಭಾರತದ ಬಲಿಷ್ಠ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಈ ಪ್ರಕಟಿತ ತಂಡದ ಪಟ್ಟಿಯಲ್ಲಿ ಗಾಯದಿಂದ ಹೊರಗುಳಿದಿದ್ದಂತ ದ ಜಸ್ಪ್ರೀತ್ ಬುಮ್ರಾ ಕೂಡ,, ಶ್ರೀಲಂಕಾ ಸರಣಿಗೆ ಕಮ್ ಬ್ಯಾಕ್ ಆಗಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಶ್ರೀಲಂಕಾ ಸರಣಿಗಾಗಿ ಏಕದಿನ ಅಂತಾರಾಷ್ಟ್ರೀಯ (ಏಕದಿನ) ತಂಡದಲ್ಲಿ ಸೇರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ದೃಢಪಡಿಸಿದೆ. ಭಾರತದ ಅತ್ಯುನ್ನತ ಕ್ರಿಕೆಟ್ ಮಂಡಳಿ ಹಂಚಿಕೊಂಡಿರುವ ಮಾಧ್ಯಮ ಪ್ರಕಟಣೆಯ ಪ್ರಕಾರ, ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿಯು ವೇಗಿ ಬುಮ್ರಾ ಅವರನ್ನು ಮುಂಬರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತದ ಏಕದಿನ ತಂಡದಲ್ಲಿ ಸೇರಿಸಿದೆ. ಬುಮ್ರಾ ಸೆಪ್ಟೆಂಬರ್ 2022 ರಿಂದ ಕ್ರಿಕೆಟ್ ಆಟದಿಂದ ಹೊರಗುಳಿದಿದ್ದರು ಮತ್ತು ಬೆನ್ನಿನ ಗಾಯದಿಂದಾಗಿ ಐಸಿಸಿ ಪುರುಷರ ಟಿ 20 ವಿಶ್ವಕಪ್ನಿಂದ ಹೊರಗುಳಿದಿದ್ದರು. ಭಾರತೀಯ ವೇಗಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಳಿಕ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಫಿಟ್ ಎಂದು ಘೋಷಿಸಿದೆ.…
ವಿಜಯಪುರ: ಸಿದ್ಧೇಶ್ವರ ಶ್ರೀಗಳು ನಿಧನಾನಂತ್ರ ಅಗ್ನಿಸ್ಪರ್ಷದ ಮೂಲಕ ಶವಸಂಸ್ಕಾರಕ್ಕೆ ಕೋರಿಕೊಂಡಿದ್ದಾರೆ. ಇದರ ಅರ್ಥ ಅವರು ಸಾವಿನ ನಂತ್ರವೂ ಈ ಪಂಚಭೂತಗಳಲ್ಲಿ ಲೀನರಾಗಿ, ಗಾಳಿಯಲ್ಲಿ ಸಿದ್ದೇಶ್ವರ ಶ್ರೀಗಳು ಇರಲಿದ್ದಾರೆ ಎಂಬುದಾಗಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಸಿದ್ದೇಶ್ವರ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ ಮಾತನಾಡಿದಂತ ಅವರು, ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಂತೆ ಬದುಕಿದವರು ಮತ್ತಾರೂ ಇಲ್ಲ. ಎಲ್ಲರಿಗೂ ಮಾದರಿಯಾಗುವಂತ ನಡೆ ಅವರದ್ದಾಗಿದೆ. ಅವರು ಯಾವತ್ತೂ ಯಾವುದಕ್ಕೂ ಆಸೆ ಪಡಲಿಲ್ಲ ಎಂದರು. ಸಿದ್ದೇಶ್ವರ ಶ್ರೀಗಳು ತಮ್ಮ ನಿಧನಾನಂತ್ರ ಯಾವುದೇ ಸ್ಮಾರಕವನ್ನು ನಿರ್ಮಿಸದಂತೆ ತಿಳಿಸಿದ್ದಾರೆ. ಪಾರ್ಥೀವ ಶರೀರಕ್ಕೆ ಅಗ್ನಿಸ್ಪರ್ಷ ಮಾಡುವ ಮೂಲಕ ಅಂತ್ಯ ಸಂಸ್ಕಾರವನ್ನು ಮಾಡುವಂತೆ ಹೇಳಿದ್ದರು. ಹೀಗೆ ಮಾಡುವುದರಿಂದ ಅವರು ಈ ಗಾಳಿಯಲ್ಲಿ ಲೀನರಾಗಿ ಅದನ್ನು ಸೇವಿಸಿದಂತ ಎಲ್ಲರಲ್ಲಿಯೂ ಅವರಿರುತ್ತಾರೆ ಎಂದು ಹೇಳಿದರು. ಸಿದ್ದೇಶ್ವರ ಶ್ರೀಗಳು ಅಂತ್ಯವಾಗಿಲ್ಲ. ಎಲ್ಲಿಯವರೆಗೆ ಈ ಭೂಮಂಡಲ, ನಿಸರ್ಗ, ಈ ಸೂರ್ಯ, ಚಂದ್ರರು ಇರುತ್ತಾರೋ ಅಲ್ಲಿಯವರೆಗೂ ಅವರು ಈ ಭಕ್ತಸಾಗರದ ಶರೀರದಲ್ಲಿ ಇರುತ್ತಾರೆ. ಅವರನ್ನು ಪಡೆದುಕೊಳ್ಳುವ…
ನವದೆಹಲಿ: ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ( Former BCCI president Sourav Ganguly ) ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ನಿರ್ದೇಶಕರನ್ನಾಗಿ ( Delhi Capitals’s Director of Cricket ) ನೇಮಕ ಮಾಡಲು ಸಜ್ಜಾಗಿದ್ದಾರೆ ಎಂದು ಐಪಿಎಲ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. https://twitter.com/PTI_News/status/1610205156813180931 ಭಾರತದ ಮಾಜಿ ನಾಯಕ ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಳ್ಳುವ ಮೊದಲು ಐಪಿಎಲ್ 2019ರಲ್ಲಿ ಸಲಹೆಗಾರರಾಗಿ ಫ್ರಾಂಚೈಸಿಯ ಭಾಗವಾಗಿದ್ದರು. ಇಂತಹ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಕ್ರಿಕೆಟ್ ನಿರ್ದೇಶಕರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಖಚಿತ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/devotees-queuing-up-for-a-kilometre-to-pay-their-last-respects-to-siddheshwara-swamiji/ https://kannadanewsnow.com/kannada/siddheshwara-sri-astangata-nidagundi-town-closed-swamijis-heartfelt-tribute/
ವಿಜಯಪುರ: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಅಂತ್ಯಕ್ರಿಯೆಗೆ ಸಹರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇಂದು ಈ ಬಗ್ಗೆ ವಿಜಯಪುರದಲ್ಲಿ ಮಾತಾಡಿದಂತ ಅವರು, ವಿಜಯಪುರ ಜಿಲ್ಲಾಡಳಿತ, ಎಲ್ಲಾ ಜನಪ್ರತಿನಿಧಿಗಳು, ಮುಖಂಡರಾದ ಎಂ.ಬಿ.ಪಾಟೀಲ್, ಬಸನಗೌಡರು, ಶಾಸಕರು ಎಲ್ಲರೂ ಅಚ್ಚುಕಟ್ಟಾಗಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು. ಸಕಲ ಸರ್ಕಾರಿ ಗೌರವಗಳನ್ನು ಸಿದ್ದೇಶ್ವರ ಶ್ರೀಗಳಿಗೆ ಸೂರ್ಯ ಅಸ್ತವಾಗೋ ಮೊದಲೇ ಸಲ್ಲಿಸಬೇಕಾಗುತ್ತದೆ. 5.15ಕ್ಕೆ ಸರ್ಕಾರಿ ಗೌರವಗಳನ್ನು ಪ್ರಾರಂಭಿಸಲಾಗುತ್ತದೆ. ಈ ಸಕಲ ಸರ್ಕಾರಿ ಗೌರವಗಳನ್ನು ನೆರವೇರಿಸಿದ ನಂತ್ರವೂ ಭಕ್ತರಿಗೆ ಶ್ರೀಗಳ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಯಾರೂ ಆಂತಕ ಪಡುವ ಅಗತ್ಯವಿಲ್ಲ. ಶಾಂತಿಯುತವಾಗಿ ಶ್ರೀಗಳ ಅಂತಿಮ ದರ್ಶನ ಪಡೆಯುವಂತ ಮನವಿ ಮಾಡಿದರು. ಸಿದ್ದೇಶ್ವರ ಶ್ರೀಗಳು ಒಂದು ಸಂಸ್ಕೃತಿ ಯನ್ನೇ ಬಿಟ್ಟುಹೋಗಿದ್ದಾರೆ ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ…
ವಿಜಯಪುರ: ನಿನ್ನೆ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ(82) ಅನಾರೋಗ್ಯದಿಂದ ನಿಧನರಾಗಿದ್ದರು. ಅವರ ಅಂತಿಮ ದರ್ಶನಕ್ಕೆ ವಿಜಯಪುರದ ಸೈನಿಕ ಶಾಲೆ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ವಿಜಯಪುರದ ಇತಿಹಾಸದಲ್ಲೇ ಕಂಡು ಕೇಳರಿಯದ ಭಕ್ತಗಣ ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ್ದಾರೆ. ಹೀಗಾಗಿ ಕಿಲೋ ಮೀಟರ್ ಗಟ್ಟಲೇ ಭಕ್ತರು ಸರದಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ. ಹೌದು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ವಿಜಯಪುರದ ಸೈನಿಕ ಶಾಲೆ ಮೈದಾನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಗಣ ಅಂತಿಮ ದರ್ಶನ ಪಡೆಯಲು ಆಗಮಿಸಿರೋ ಕಾರಣ, ಕಿಲೋ ಮೀಟರ್ ಗಟ್ಟಲೇ ಸಾಲು ಉಂಟಾಗಿದೆ. ವಿಜಯಪುರದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಭಕ್ತಗಣ ಸಿದ್ದೇಶ್ವರ ಸ್ವಾಮೀಜಿಯ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಸರದಿ ಸಾಲಿನಲ್ಲಿ, ಸುಡುವ ಬಿಸಿಲನ್ನೂ ಲೆಕ್ಕಿಸದೇ ನಿಂತಿದೆ. ಕೆಲವೆಡೆ ಭಕ್ತರ ನೂಕು ನುಗ್ಗಲು ಉಂಟಾದಾಗ ಪೊಲೀಸರು ಲಾಠಿ ಬೀಸಿ ನಿಯಂತ್ರಿಸಿದ್ದು ಕಂಡು ಬಂದಿದೆ. ಈ ನಡುವೆ ಭಕ್ತರು ಅಂತಿಮ ದರ್ಶನಕ್ಕೆ ಕಿಲೋ ಮೀಟರ್…
ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನ ಯೋಜನೆಯಡಿ ಪ.ಪಂ.ಕ್ಕೆ 3 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡ 18-55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರೂ. 2.00 ಲಕ್ಷ ಮೀರಿರಬಾರದು. ಸಾಲ ಮಂಜೂರಾದ ನಂತರ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ಕಡ್ಡಾಯವಾಗಿ ನೀಡಲಾಗುವುದು. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ/ಆಧಾರ್ ಕಾರ್ಡ್, ಯೋಜನಾ ವರದಿ, ತರಬೇತಿ ಅಥವಾ ಅನುಭವ ಪತ್ರ, ವಯಸ್ಸಿನ ದೃಢೀಕರಣ ಪತ್ರ ಹಾಗೂ…
ಬೆಂಗಳೂರು: ‘ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರಕ್ಕೆ ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಹೋಗುತ್ತಿದ್ದೇನೆ. ಕಲಬುರ್ಗಿಗೆ ಹೋಗಿ, ಅಲ್ಲಿಂದ ವಿಜಯಪುರಕ್ಕೆ ತೆರಳುತ್ತಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಮಿತ್ ಶಾ ಅವರ ರಾಜ್ಯ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ, ‘ಅಮಿತ್ ಶಾ ಅವರ ಮಾತಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಅಮಿತ್ ಶಾ ಅವರು ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಇಲ್ಲ ಎಂದು ಒಪ್ಪಿಕೊಂಡಿರುವುದನ್ನು ನಾನು ಅಭಿನಂದಿಸುತ್ತೇನೆ. ಈ ಕಾರಣಕ್ಕೆ ರಾಜ್ಯಕ್ಕೆ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಅವರು ಆಗಮಿಸುತ್ತಿದ್ದು, ಇದರರ್ಥ ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಸಂಪೂರ್ಣ ವೈಫಲ್ಯ ಅನುಭವಿಸಿದೆ ಎಂದು. ಹೀಗಾಗಿ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವವನ್ನು ಬಳಸಿಕೊಳ್ಳಲಾಗುತ್ತಿದೆ. ಕರ್ನಾಟಕದ ವಿಚಾರಗಳೇ ಬೇರೆ. ರಾಜ್ಯದಲ್ಲಿನ ಆಡಳಿತ, ಅಭಿವೃದ್ಧಿಯ ವಿಚಾರ ಗಣನೆಗೆ ಬರುತ್ತದೆ. ಇಡೀ ವಿಶ್ವ ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದೆ. ನಾವು ಜ.11 ರಿಂದ ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, ಎಲ್ಲ ಮೂಲೆ,…