ಮಂಗಳೂರು : ನಗರದ ಮರೋಳಿ ಬಳಿಯಲ್ಲಿ ಆಯೋಜಿಸಿದ್ದ ಪಾರ್ಟಿ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ, ದಾಂಧಲೆ ನಡೆಸಿದ್ದರು. ಹೇಳಲಾಗುತ್ತಿತ್ತು. ಈ ಘಟನೆ ಸಂಬಂಧ ದಾಂಧಲೆ ನಡೆಸಿದವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ( Alok Kumar ) ಸ್ಪಷ್ಟ ಪಡಿಸಿದ್ದಾರೆ. ಈ ಇಂದು ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಮಂಗಳೂರಿನ ಮರೋಳಿಯಲ್ಲಿ ನಡೆದಿರುವಂತ ಘಟನೆ ಸಂಬಂಧ ಬಜರಂಗದಳದ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಅಲ್ಲದೇ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. https://twitter.com/alokkumar6994/status/1639966954785243136 ಅಂದಹಾಗೇ ಇಂದು ಮಂಗಳೂರಿನ ಮರೋಳಿ ಬಳಿಯಲ್ಲಿ ಆಯೋಜಿಸಿದ್ದಂತ ಹೋಳಿ ಹಬ್ಬದ ಪ್ರಯುಕ್ತ ರಂಗ್ ದೇ ಬರ್ಸಾ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು, ಡಿಜೆ ಪಾರ್ಟಿ ಮಾಡುತ್ತಾ ಹೋಳಿ ಎರಚಿ ಸಂಭ್ರಮಿಸುತ್ತಿದ್ದರು. ಈ ಸಂದರ್ಭದಲ್ಲಿ ಅಶ್ಲೀಲ ವರ್ತನೆ ನಡೆಯುತ್ತಿದೆ ಎಂದು ಆರೋಪಿಸಿ ಬಜರಂಗದಳ ಆರೋಪಿಸಿ ದಾಳಿ ನಡೆಸಿದೆ. ಈ ಕಾರ್ಯಕ್ರಮ…
Author: kannadanewslive
ಶ್ರಾದ್ಧ ಕ್ರಿಯೆಯು ದೈವಿಕವಾಗಿದ್ದರೂ ವೈಜ್ಞಾನಿಕತೆಗೆ ಎಟುಕಲಾರದ ವಿಷಯವಲ್ಲ. ಪಂಚಭೂತಗಳಿಂದ ಭೌತಿಕ ಶರೀರ ಉಂಟಾಗಿದೆ. ಮರಣಾನಂತರ ಇದು ನಾಶವಾದರೂ, ತೇಜಸ್ಸು, ಪಂಚವಾಯು ಮತ್ತು ಆಕಾಶ ತತ್ವಗಳು ಮನೋಮಯ ಕೋಶದೊಡನೆ ಕರ್ಮಾನುಸಾರ ಶರೀರಾಂತರವನ್ನು ಸೇರುವುದು. ತಂದೆಯ ಸೂಕ್ಷ್ಮ ಶರೀರಕ್ಕೂ ಪುತ್ರನ ಸೂಕ್ಷ್ಮ ಶರೀರಕ್ಕೂ ಪರಸ್ಪರ ಆಕರ್ಷಣೆಯ ಋಣಾನುಬಂಧವಿದೆ. ಪಿತೃವಿನ ಮರಣಾನಂತರವೂ ಈ ಸಂಬಂಧವು ತೊಲಗಲಾರದು. ಆದಕಾರಣ ಪುತ್ರಕೃತ ಸಂಸ್ಕಾರಗಳು ಪಿತೃಗಳ ಸದ್ಗತಿಗೆ ಸಾಧಕಗಳಾಗುವುದು. ಇದು ಶಾಸ್ತ್ರಸಿದ್ಧ ಮೃತ ವ್ಯಕ್ತಿಯ ಸೂಕ್ಷ್ಮ ಶರೀರವು ಯಾವ ಅಜ್ಞಾತ ಯೋನಿಯಲ್ಲಿದ್ದರೂ (ಆಕಾಶದ ಶಬ್ದ, ವಾಯುವಿನ ಸ್ಪರ್ಶ, ತೇಜಸ್ಸಿನ ತರಂಗಗಳು ಇಲ್ಲಿಂದಲ್ಲಿಗೆ ಸದಾ ಪ್ರವಹಿಸುತ್ತಿರುವ ಕಾರಣ) ಮಾಡುವ ಶ್ರಾದ್ಧದಲ್ಲಿ ಕ್ರಿಯಾಶಕ್ತಿ, ಮಂತ್ರಶಕ್ತಿ, ದ್ರವ್ಯಶಕ್ತಿಗಳು ಸಮ್ಮಿಳಿತವಾಗಿ ಲೋಕಾಂತರದಲ್ಲಿರುವ ಪಿತೃಗಳಿಗೆ (ಪಿಂಡ ತಿಲತರ್ಪಣಗಳು) ರೂಪಾಂತರ ಹೊಂದಿ ಆಹಾರವಾಗಿ ಪರಿಣಮಿಸುತ್ತದೆ. ಮಾನವನ ಸೀಮಿತ ದೃಷ್ಟಿಗೆ ಇದು ಗೋಚರಿಸದಿದ್ದರೂ “ಶ್ರಾದ್ಧೇ ಯೋಗಃ ಪ್ರವರ್ತತೇ’ ಎಂದು ಋಷಿಗಳು ಈ ಸೂಕ್ಮ ರಹಸ್ಯವನ್ನು ಮನಗಂಡಿದ್ದಾರೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ…
ಬೆಂಗಳೂರು: ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಪ್ರಕಟಿಸಿತ್ತು. ಅಲ್ಲದೇ 2ಬಿ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಈ ಮೀಸಲಾತಿಯನ್ನು ರದ್ದಿನ ವಿರುದ್ಧ ಎಎಬಿ ಸಿಡಿದೆದ್ದಿದೆ. ಇದೀಗ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಸಜ್ಜಾಗಿದೆ. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಫರೀದುದ್ದೀನ್ ಷರೀಫ್, ಮುಸ್ಲಿಮರಿಗೆ 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿದ ರಾಜ್ಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಾರ್ಟಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್ ಷರೀಫ್ ಖಂಡಿಸಿದ್ದಾರೆ. “ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ಯಾರೂ ಕೂಡ ಪ್ರಶ್ನಿಸಿರಲಿಲ್ಲ. ಇದನ್ನು ರದ್ದು ಪಡಿಸಬೇಕೆಂದು ನ್ಯಾಯಾಲಯದ ಆದೇಶ ಕೂಡ ಇಲ್ಲ. ಆದರೂ ರಾಜ್ಯ ಬಿಜೆಪಿ ಸರ್ಕಾರವು ಯಾವುದೇ ಮುನ್ಸೂಚನೇ ನೀಡದೇ, ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಮೀಸಲಾತಿ ರದ್ದು ನಿರ್ಣಯವನ್ನು ಘೋಷಿಸಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ, ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರ ನಡೆಸಿರುವುದು ಕಂಡುಬರುತ್ತಿದೆ. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಸಮಾಜವನ್ನು ಅಶಾಂತಿ ಸೃಷ್ಟಿಸಲು ಬಿಜೆಪಿ ಸರ್ಕಾರ ಯತ್ನಿಸುತ್ತಿದೆ” ಎಂದು ಆರೋಪಿಸಿದರು. “ಶೈಕ್ಷಣಿಕ ಹಾಗೂ…
ಹಾವೇರಿ : ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಸ್ಪಷ್ಟ ಪಡಿಸಿದ್ದಾರೆ. ಅವರು ಇಂದು ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯ ಭವನ ಉದ್ಘಾಟನಾ ಹಾಗೂ ಹರಧ್ಯಾನ ಮಂದಿರ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಮಾತನಾಡಿ, ನ್ಯಾಯ ನೀಡುವಾಗ ಇತರರಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ. ಶ್ರೀ ವಚನಾನಂದ ಸ್ವಾಮೀಜಿಗಳು ಸೈದ್ಧಾಂತಿಕವಾಗಿ ಮಾರ್ಗದರ್ಶನ ಮಾಡಿದ್ದಾರೆ. ಭಿನ್ನಮತ ವ್ಯಕ್ತವಾದಾಗ, ಎಲ್ಲರಿಗೂ ಮನವರಿಕೆ, ಮಾರ್ಗದರ್ಶನ ಮಾಡಿದ್ದಾರೆ. ಸರಿಯಾದ ಸಂದರ್ಭದಲ್ಲಿ ಸರಿಯಾದ ತೀರ್ಮಾನ ಮಾಡಲಾಗಿದೆ. ಮುತ್ಸದ್ದಿ ತನದ ಮಾರ್ಗದರ್ಶನವನ್ನು ನಿರೀಕ್ಷೆಗೆ ಮೀರಿ ನೀಡಿದ್ದಾರೆ ಎಂದರು. ಜಯ ಮೃತ್ಯುಂಜಯ ಸ್ವಾಮೀಜಿಗಳ ದಿಟ್ಟ ಹೋರಾಟದಿಂದ ಸಮಾಜ ಹಾಗೂ ಸರ್ಕಾರದ ಜಾಗೃತಿ ಮೂಡಿಸಲು ಸಾಧ್ಯವಾಯಿತು ಎಂದರು. ಯಾರಿಗೂ ಹೆದರುವುದಿಲ್ಲ ಗುರುಗಳು ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಸ್ವಂತ ಚಿಂತನೆ ಬದ್ಧತೆ ಅವರಿಗಿದೆ. ನಮ್ಮ ಸ್ವಂತ ಚಿಂತನೆಯಿಂದ ಈ ಕೆಲಸ ಮಾಡಲಾಗಿದೆ. ಯಾವುದೇ ರೋಲ್ ಕಾಲ್ ಅಥವಾ ಒತ್ತಡದಿಂದ ಈ ಕೆಲಸ ಮಾಡಿಲ್ಲ.…
ಬೆಂಗಳೂರು: 420 ಬೊಮ್ಮಾಯಿ ಸರ್ಕಾರದಿಂದ ಮೀಸಲಾತಿ ವಿಚಾರದಲ್ಲಿ ರಾಜ್ಯದ ಜನರಿಗೆ ವಂಚನೆ ಮಾಡಿದೆ. ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆಯಾಗಿದೆ. ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಡಗು ಸೋಲಿನ ಸುಳಿಗೆ ಸಿಲುಕಲಿರುವುದನ್ನು ಅರಿತ ಬಿಜೆಪಿ ಸರ್ಕಾರ ಈಗ ರಾಜ್ಯದ ಬಹುತೇಕ ಸಮುದಾಯಗಳಿಗೆ ಮೀಸಲಾತಿ ಹೆಸರಲ್ಲಿ ದ್ರೋಹ, ವಂಚನೆ, ಮೋಸ ಮಾಡುವ ರಣನೀತಿ ರೂಪಿಸಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, 75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದಿಗೂ ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮಿಸಲಾತಿ ವರ್ಗೀಕರಣವನ್ನು ಮೂರು ಬಾರಿ ಬದಲಾವಣೆ ಮಾಡಿರಲಿಲ್ಲ. ಆ ಮೂಲಕ ಬಿಜೆಪಿ ಸರ್ಕಾರ ಎಲ್ಲರನ್ನು ವಂಚಿಸಿ, ಎಲ್ಲರನ್ನು ಒಡೆದು, ಎಲ್ಲ ಸಮುದಾಯಗಳನ್ನು ಪರಸ್ಪರ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ. ಈ ರೀತಿ ಮಾಡಿದಾಗ ಮೀಸಲಾತಿ ಬೇಡಿಕೆ ವಿಚಾರವಾಗಿ ಕೂಗು ಹೆಚ್ಚಾಗಿ…
ಬೆಂಗಳೂರು: ಮುಖ್ಯ ರಸ್ತೆಯನ್ನು ವಿಸ್ತರಣೆ ಮಾಡಲು ನ್ಯಾಯಾಲಯ ತಡೆ ನೀಡಿತ್ತು. ಈ ತಡೆಯನ್ನು ಮೀರಿ ಮನೆಗಳ ತೆರವು ಕಾರ್ಯಾಚರಣೆ ನಡೆಸಿದಂತ ತಹಶೀಲ್ದಾರ್ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಕೋರ್ಟ್ 2 ತಿಂಗಳು ಶಿಕ್ಷೆ ಹಾಗೂ 2 ಸಾವಿರ ದಂಡವನ್ನು ಹೈಕೋರ್ಟ್ ವಿಧಿಸಿದೆ. ಹುಲಿಯೂರು ದುರ್ಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ವಿಸ್ತರಣೆಗಾಗಿ ಮನೆಗಳನ್ನು ತೆರವು ಮಾಡಲು ಸರ್ಕಾರ ಮುಂದಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ 2011ರಲ್ಲಿ ಅರ್ಜಿದಾರರು ಹೈಕೋರ್ಟ್ ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಪೀಠವು ತೆರವು ಕಾರ್ಯಾಚರಣೆಗೂ ಮುನ್ನ ಸೂಕ್ತ ಕಾನೂನು ಪ್ರಕ್ರಿಯೆ ಪಾಲನೆ ಮಾಡಬೇಕು. ಒತ್ತುವರಿದಾರರಿಗೆ ನೋಟಿಸ್ ನೀಡಿ, ಪರಿಶೀಲನೆ ನಡೆಸಬೇಕು ಎಂಬುದಾಗಿ ಜೂನ್ 22, 2012ರಲ್ಲಿ ಆದೇಶಿಸಿತ್ತು. ಆದ್ರೇ ಈ ಆದೇಶಕ್ಕೂ ಡೋಂಟ್ ಕೇರ್ ಎನ್ನುವಂತೆ ಕುಣಿಗಲ್ ತಹಶೀಲ್ದಾರ್ ಹಾಗೂ ಹುಲಿಯೂರು ದುರ್ಗ ಪಿಡಿಓ 2017ರಲ್ಲಿ ಹುಲಿಯೂರು ದುರ್ಗದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ಮಾರ್ಗದಲ್ಲಿನ ಕೆಲ ಮನೆಗಳನ್ನು ತೆರವುಗೊಳಿಸಿದ್ದರು. ಈ ಹಿನ್ನಲೆಯಲ್ಲಿ…
ಬೆಂಗಳೂರು: ‘ಸಿ.ಟಿ ರವಿ ಅವರಿಗೆ ಸೋಲಿನ ಭೀತಿ ಎದುರಾಗಿದೆ. ಹೀಗಾಗಿ ಅವರು ಮತಿಭ್ರಮಣೆಯಾಗಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರನ್ನು ನಿಮ್ಹಾನ್ಸ್ ಅಥವಾ ಬೇರೆ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕಿದೆ’ ಎಂದು ಡಿ.ಕೆ. ಶಿವಕುಮಾರ್ ಅವರು ಕಿಡಿ ಕಾರಿದ್ದಾರೆ. ನಗರದಲ್ಲಿ ಇಂದು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಟಿ ರವಿ ಅವರು ಶಿವಕುಮಾರ್ ಮತ್ತು ಅವರ ಸಹೋದರ ಡಿ ಕೆ ಸುರೇಶ್ ಅವರ ಕುರಿತು ನೀಡಿರುವ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಬಿಜೆಪಿ ನಾಯಕರು ಕೂಡಲೇ ರವಿ ಅವರನ್ನು ಆಸ್ಪತ್ರೆಗೆ ಸೇರಿಸಲಿ ಎಂದು ಸಲಹೆ ನೀಡುತ್ತೇನೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ಹೂಡುವ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಈ ಹಿಂದೆ ಬಿಜೆಪಿಯ ಮತ್ತೊಬ್ಬ ಮೆಂಟಲ್ ಗಿರಾಕಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಆದರ ವಿಚಾರಣೆ ನಡೆಯುತ್ತಿದೆ. ಆದರೆ ಬೇರೆ ಪ್ರಕರಣಗಳಲ್ಲಿ ಆತುರವಾಗಿ ಶಿಕ್ಷೆ ಪ್ರಕಟವಾಗುತ್ತದೆ. ಹೀಗಾಗಿ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಮುಂದಿನ ತೀರ್ಮಾನ…
ಬೆಂಗಳೂರು: ಕೆಲಸಕ್ಕೆ ಸೇರಿದ ಅನೇಕರಿಗೆ ಪಿಎಫ್ ನೀಡಲಾಗುತ್ತದೆ. ಉದ್ಯೋಗದಾತರಿಂದ ನೀಡುವಂತ ಪಿಎಫ್ ಕೆಲಸ ಬಿಟ್ಟನಂತ್ರ ಉದ್ಯೋಗಿಗಳು ಹಿಂತೆಗೆದುಕೊಳ್ಳಬಹುದು, ಇಲ್ಲವೇ ಮತ್ತೊಂದು ಕಂಪನಿಗೆ ಸೇರಿದ ನಂತ್ರ ಅದೇ ಖಾತೆಯನ್ನು ಮುಂದುವರೆಸಬಹುದು. ಹೀಗೆ EPFOಗೆ ಸಂಬಂಧಿಸಿದಂತ ನಿಮ್ಮ ಯಾವುದೇ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ನಾಳೆ ಪ್ರಾದೇಶಿಕ ಆಯುಕ್ತರ ಕಚೇರಿಗಳಲ್ಲಿ ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಬೆಂಗಳೂರಿನ ಕೆ ಆರ್ ಪುರಂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ( Regional Provident Fund Office – EPFO ) ಮಾಹಿತಿ ಹಂಚಿಕೊಳ್ಳಲಾಗಿದ್ದು, ಪ್ರತಿ ತಿಂಗಳ 27ರಂದು ಕೇಂದ್ರ ಕಚೇರಿಯ ಸೂಚನೆಯ ಮೇರೆಗೆ ನಿಧಿ ಆಪ್ಕೆ ನಿಕಾತ್ 2.0 ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅದರಂತೆ ಮಾರ್ಚ್ 27ರ ನಾಳೆ ಕೆ ಆರ್ ಪುರಂ ಪ್ರಾದೇಶಿಕ ಕಚೇರಿ ಸೇರಿದಂತೆ ರಾಜ್ಯ, ದೇಶಾದ್ಯಂತ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ವ್ಯಾಪ್ತಿಯಲ್ಲಿ ನಡೆಯುತ್ತಿದೆ ಎಂಬುದಾಗಿ ಹೇಳಿದೆ. ಉದ್ಯೋಗದಾತರು, ಉದ್ಯೋಗಿಗಳ ಈ ಸಮಸ್ಯೆಗಳಿಗೆ ಪರಿಹಾರ…
ಇಸ್ಲಮಾಬಾದ್: ಪಾಕಿಸ್ತಾನ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್ (Pakistan Bureau of Statistics – PBS) ಅಂಕಿಅಂಶಗಳ ಪ್ರಕಾರ, ಬಿಕ್ಕಟ್ಟಿನ ಪೀಡಿತ ಪಾಕಿಸ್ತಾನವು ಸೂಕ್ಷ್ಮ ಬೆಲೆ ಸೂಚಕ (sensitive price indicator – SPI) ಆಧಾರದ ಮೇಲೆ ಹಣದುಬ್ಬರದಲ್ಲಿ ಹೊಸ ಗರಿಷ್ಠವನ್ನು ದಾಖಲಿಸಿದೆ, ಏಕೆಂದರೆ ಇದು ಮಾರ್ಚ್ 22, 2023 ಕ್ಕೆ ಕೊನೆಗೊಂಡ ವಾರದಲ್ಲಿ ಸುಮಾರು 47% ಕ್ಕೆ ತಲುಪಿದೆ. ಅಗತ್ಯ ವಸ್ತುಗಳ ಬೆಲೆಗಳಲ್ಲಿ ನಿರಂತರ ಏರಿಕೆಯ ನಂತರ ಇದು ಬಂದಿದೆ. ಟ್ರ್ಯಾಕ್ ಮಾಡಲಾದ 51 ವಸ್ತುಗಳಲ್ಲಿ, 26 ವಸ್ತುಗಳ ಬೆಲೆ ಹೆಚ್ಚಾಗಿದೆ, 13 ವಸ್ತುಗಳ ಬೆಲೆಗಳು ಕಡಿಮೆಯಾಗಿವೆ, ಆದರೆ 13 ವಸ್ತುಗಳ ಬೆಲೆಗಳು ಬದಲಾಗಿಲ್ಲ. ಈರುಳ್ಳಿ (228.28%), ಸಿಗರೇಟುಗಳು (165.88%), ಗೋಧಿ ಹಿಟ್ಟು (120.66%), ಮೊದಲ ತ್ರೈಮಾಸಿಕಕ್ಕೆ ಅನಿಲ ಶುಲ್ಕ (108.38%), ಡೀಸೆಲ್ (102.84%), ಚಹಾ ಲಿಪ್ಟನ್ (94.60%), ಬಾಳೆಹಣ್ಣುಗಳು (89.84%), ಅಕ್ಕಿ ಬಾಸ್ಮತಿ (7%), ಅಕ್ಕಿ ಬಾಸ್ಮತಿ (81) ಆಗಿದೆ. ಮಾರ್ಚ್ 17, 2023 ಕ್ಕೆ ಕೊನೆಗೊಂಡ ವಾರದ ವೇಳೆಗೆ…
ನವದೆಹಲಿ: ಭಾರತವು ( Government of India ) ಇತ್ತೀಚೆಗೆ ಕೆನಡಾದ ಹೈಕಮಿಷನರ್ ( Canadian high commissioner ) ಅವರನ್ನು ಕರೆಸಿಕೊಂಡಿದೆ ಮತ್ತು ಕೆನಡಾದಲ್ಲಿನ ತನ್ನ ರಾಜತಾಂತ್ರಿಕ ಕಾರ್ಯಾಚರಣೆ ಮತ್ತು ಕಾನ್ಸುಲೇಟ್ಗಳ ವಿರುದ್ಧ ಪ್ರತ್ಯೇಕತಾವಾದಿ ಮತ್ತು ಉಗ್ರಗಾಮಿ ಶಕ್ತಿಗಳ ಕ್ರಮಗಳ ಬಗ್ಗೆ ಬಲವಾದ ಕಳವಳವನ್ನು ವ್ಯಕ್ತಪಡಿಸಿದೆ. ತನ್ನ ರಾಜತಾಂತ್ರಿಕ ಕಾರ್ಯಾಚರಣೆ ಮತ್ತು ದೂತಾವಾಸಗಳ ಭದ್ರತೆಯನ್ನು ಉಲ್ಲಂಘಿಸಲು ಪೊಲೀಸರ ಸಮ್ಮುಖದಲ್ಲಿ ಅಂತಹ ಶಕ್ತಿಗಳಿಗೆ ಹೇಗೆ ಅವಕಾಶ ನೀಡಲಾಯಿತು ಎಂಬ ಬಗ್ಗೆ ಭಾರತ ಸರ್ಕಾರ ಶನಿವಾರ ವಿವರಣೆ ಕೋರಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ವಿಯೆನ್ನಾ ಕನ್ವೆನ್ಷನ್ ಅಡಿಯಲ್ಲಿ ಕೆನಡಾಕ್ಕೆ ತನ್ನ ಬಾಧ್ಯತೆಗಳನ್ನು ನೆನಪಿಸಲಾಯಿತು ಮತ್ತು ಅಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಂದು ಈಗಾಗಲೇ ಗುರುತಿಸಲ್ಪಟ್ಟ ವ್ಯಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸುವಂತೆ ಕೇಳಲಾಯಿತು ಎಂದು ಅದು ಹೇಳಿದೆ. ಕೆನಡಾ ಸರ್ಕಾರವು ತನ್ನ ರಾಜತಾಂತ್ರಿಕರ ಸುರಕ್ಷತೆ ಮತ್ತು ರಾಜತಾಂತ್ರಿಕ ಆವರಣದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ಆಶಿಸಿದೆ. ಇದರಿಂದ…